ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಈಗಾಗಲೇ ಆದ್ಯತಾ (ಬಿಪಿಎಲ್) ಮತ್ತು ಆದ್ಯತೇತರ (ಎಪಿಎಲ್) ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ, ವಿಲೇವಾರಿಗೆ ಬಾಕಿ ಇರುವ ಅರ್ಜಿದಾರರು, ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರವನ್ನು ಪಡೆಯಬಹುದಾಗಿದೆ. ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ಅರ್ಜಿಗೆ 10 ಕೆಜಿ ಯಂತೆ ಅಕ್ಕಿಯನ್ನು ಉಚಿತವಾಗಿ ಮತ್ತು ಎಪಿಎಲ್ ಪಡಿತರ ಚೀಟಿ ಅರ್ಜಿದಾರರಿಗೆ ಪ್ರತಿ ಅರ್ಜಿಗೆ 15 ರೂ ದರದಲ್ಲಿ 10 ಕೆಜಿ ಅಕ್ಕಿಯನ್ನು ಪಡೆಯಬಹುದಾಗಿದೆ. ಅರ್ಜಿದಾರರು ಅರ್ಜಿ ಸಲ್ಲಿಸಿದ ಬಗ್ಗೆ ತಮ್ಮಲ್ಲಿ ಇರುವ ಅರ್ಜಿಯ ಪ್ರತಿಯನ್ನು ಹಾಗೂ ಆಧಾರ್ ಕಾರ್ಡ್ನ್ನು ನ್ಯಾಯಬೆಲೆ ಅಂಗಡಿಗೆ ಹಾಜರುಪಡಿಸಿ ಅಕ್ಕಿಯನ್ನು ಪಡೆಯಬಹುದಾಗಿದೆ. ಒಂದು ವೇಳೆ ಹಾಜರುಪಡಿಸಿದ ಅರ್ಜಿದಾರರ ಆಧಾರ್ ಸಂಖ್ಯೆ , ಬೇರೆ ಯಾವುದೇ ಚಾಲ್ತಿ ಪಡಿತರ ಚೀಟಿಯಲ್ಲಿ ಜೋಡಣೆಯಾಗಿದ್ದಲ್ಲಿ ಅಂತಹ ಅರ್ಜಿಗಳಿಗೆ ಪಡಿತರವನ್ನು ವಿತರಿಸಲು ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಏಪ್ರಿಲ್ 27 ರೊಳಗೆ ಪಡಿತರ ಪಡೆಯಿರಿ ನ್ಯಾಯಬೆಲೆ ಅಂಗಡಿಗಳಲ್ಲಿ ಮೇ 2020ರ ಮಾಹೆಯಲ್ಲಿ, ಪ್ರಧಾನ ಮಂತ್ರಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೈಂದೂರು ತಾಲೂಕು ಘಟಕದ ನೇತೃತ್ವದಲ್ಲಿ, ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮಂಗಳವಾರ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆಯಿತು. ರಕ್ತದಾನ ಶಿಬಿರವನ್ನು ಬೈಂದೂರು ಪೊಲೀಸ್ ಉಪನಿರೀಕ್ಷಕಿ ಸಂಗೀತಾ ರಕ್ತದಾನ ಮಾಡುವ ಮೂಲಕ ಉದ್ಘಾಟಿಸಿದರು. ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೈಂದೂರು ತಾಲೂಕು ಘಟಕದ ಅಧ್ಯಕ್ಷ ಬೈಂದೂರು ತಹಶೀಲ್ದಾರ ಬಸಪ್ಪ ಪೂಜಾರ್, ಬೈಂದೂರು ರೆಡ್ ಕ್ರಾಸ್ ಸೊಸೈಟಿಯ ಸಭಾಪತಿ ನಿತೀನ್ ಕುಮಾರ್ ಶೆಟ್ಟಿ, ಖಂಜಾಚಿ ಸಂತೋಷ್ ಶೆಟ್ಟಿ, ಸದಸ್ಯರಾದ ಯು. ಸಂದೇಶ ಭಟ್, ಗುರುರಾಜ್ ಶೆಟ್ಟಿ, ಅನಿಲ್ ದೇವಾಡಿಗ, ದಿವಾಕರ್ ಶೆಟ್ಟಿ ನೆಲ್ಯಾಡಿ, ರಮೇಶ್ ಜೋಗಿ ಹಳಗೇರಿ, ಪ್ರಸಾದ್ ಶೆಟ್ಟಿ, ಸುಬ್ರಹ್ಮಣ್ಯ ಬಾಡ ಮೊದಲಾದವರು. ಇದ್ದರು. ಶಿಬಿರದಲ್ಲಿ ಸುಮಾರು ೧೨೦ ಯುನಿಟ್ ರಕ್ತ ಸಂಗ್ರಹವಾಯಿತು. ಬದುಕಿನ ಹೋರಾಟದಲ್ಲಿ ರಕ್ತದಾನದಂತಹ ಶ್ರೇಷ್ಠ ಕಾರ್ಯವನ್ನು ಕರ್ತವ್ಯವೆಂಬಂತೆ ಮಾಡಬೇಕು. ರಕ್ತದಾನದಿಂದ ಅದೆಷ್ಟೋ ಮಂದಿಯ ಬದುಕು ಬೆಳಗುತ್ತದೆ. ಯುವಕರು ಇಂತಹ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ಸಂಗಮ್ ಜಂಕ್ಷನ್ ಬಳಿ ಮೀನು ಮಾರಾಟ ಮಾಡುವ ಸಂದರ್ಭ ಸಾರ್ವಜನಿಕರು ಅಂತರ ಕಾಯ್ದುಕೊಳ್ಳದೆ ಗುಂಪಾಗಿ ಸೇರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸೋಮವಾರ ತಡರಾತ್ರಿ ಮೀನು ಖರೀದಿ ಮಾಡುವ ಸ್ಥಳದಲ್ಲಿ ವಿಂಗಡನೆಗೆ ಬ್ಯಾಂಡ್ ಹಾಕಿ, ಪ್ರತ್ಯೇಕ ವೃತ್ತ ಬರೆದು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಿದ್ದಾರೆ. ಪುರಸಭೆ ಹಿಂಭಾಗದಲ್ಲಿ ಕಾರ್ಯಚರಿಸುತ್ತಿದ್ದ ಮೀನು ಮಾರುಕಟ್ಟೆಯು ಲಾಕ್ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿತ್ತು. ಆ ಬಳಿಕ ತಾತ್ಕಾಲಿಕವಾಗಿ ಸಂಗಮ್ ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿಯೇ ಬೆಳಿಗ್ಗೆ ೭ ಗಂಟೆಯಿಂದ ೧೧ ಗಂಟೆಯವರೆಗೆ ಮೀನು ಮಾರಾಟ ಮಾಡಲಾಗುತ್ತಿದೆ. ಕೆಲ ದಿನಗಳಿಂದ ಇಲ್ಲಿ ಜನರು ಗುಂಪುಗುಂಪಾಗಿ ಸೇರುವುದು ಹಾಗೂ ರಾಷ್ಟ್ರೀಯ ಹೆದ್ದಾರಿಯ ಬದಿಗಳಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವುದು ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು, ಎಎಸ್ಪಿ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಕುಂದಾಪುರ ಪಿಎಸ್ಐ ಹರೀಶ್ ಆರ್. ನಾಯ್ಕ್, ಪುರಸಭೆ ಸದಸ್ಯ ಶ್ರೀಧರ್ ಶೇರುಗಾರ್ ಹಾಗೂ ಪೊಲೀಸ್ ಇಲಾಖಾ ಸಿಬ್ಬಂಧಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆಲವು ತುರ್ತು ಚಿಕಿತ್ಸೆಯ ಸಂದರ್ಭ ರಕ್ತದ ಕೊರತೆಯಿಂದ ಸಾವು ಸಂಭವಿಸುವ ಸಾಧ್ಯತೆ ಇರುತ್ತದೆ. ಅದನ್ನು ತಡೆಗಟ್ಟಿದ ಪುಣ್ಯ ರಕ್ತದಾನಿಗೆ ಸಲ್ಲುತ್ತದೆ. ಹಾಗಾಗಿ ರಕ್ತದಾನವನ್ನು ಜೀವದಾನ ಎಂದು ಪರಿಗಣಿಸಲಾಗುತ್ತದೆ ಎಂದು ನಾವುಂದ ಮೊಯಿದ್ದೀನ್ ಜುಮ್ಮಾ ಮಸೀದಿಯ ಖತೀಬ್ ಅಬ್ದುಲ್ ಲತೀಫ್ ಹೇಳಿದರು. ನಾವುಂದ ಫ್ರೆಂಡ್ಸ್, ಹಾಗೂ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ರಿ. ಆಶ್ರಯದಲ್ಲಿ ಇಂಡಿಯನ್ ರೆಡ್ಕ್ರಾಸ್ ರಕ್ತನಿಧಿಯ ಸಹಯೋಗದಲ್ಲಿ ಸೋಮವಾರ ಅಲ್ಲಿನ ಶಾದಿ ಮಹಲ್ನಲ್ಲಿ ನಡೆಸಿದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿನೆ ಮಾತನಾಡಿದರು. ಬ್ಲಡ್ ಹೆಲ್ಪ್ ಕೇರ್ ಕರ್ನಾಟಕದ ಫಯಾಜ್ ಅಲಿ ಮಾತನಾಡಿ ಕುಂದಾಪುರ, ಬೈಂದೂರು ಮತ್ತಿತರ ಕಡೆಗಳಿಂದ ಪ್ರತಿದಿನ ಪ್ರತಿದಿನ 5 ರಿಂದ 6 ಯೂನಿಟ್ ರಕ್ತಕ್ಕೆ ಬೇಡಿಕೆ ಬರುತ್ತಿದೆ. ಲಾಕ್ಡೌನ್ ನಿರ್ಬಂಧದ ಕಾರಣ ಕುಂದಾಪುರಕ್ಕೆ ಹೋಗಿ ರಕ್ತದಾನ ಮಾಡಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದು ರೆಡ್ಕ್ರಾಸ್ ನೆರವಿನಿಂದ ಇಲ್ಲಿಯೇ ಶಿಬಿರ ಏರ್ಪಡಿಸಲಾಗಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಕ್ತದಾನಿಗಳಿಗೆ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ವತಿಯಿಂದ ಬಿಜೂರು ಗ್ರಾಮದ ೩ ಹಾಗೂ ೪ನೇ ವಾರ್ಡಿನ ಗ್ರಾಮಸ್ಥರಿಗೆ ಮುಂದಿನ ಒಂದು ತಿಂಗಳ ಅವಧಿಯಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಗೆ ಸೋಮವಾರ ಚಾಲನೆ ನೀಡಲಾಯಿತು ಹಾಗೂ ಅಗತ್ಯವುಳ್ಳವರಿಗೆ ಆಹಾರ ಸಾಮಾಗ್ರಿ ಕಿಟ್ಗಳನ್ನು ವಿತರಿಸಲಾಯಿತು. ಬೈಂದೂರು ಪೊಲೀಸ್ ಉಪನಿರೀಕ್ಷಕಿ ಸಂಗೀತಾ ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಎಲ್ಲರೂ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು. ಈ ಸಂದರ್ಭ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ, ಬ್ಯಾಂಕ್ ಉದ್ಯೋಗಿ ಗುರುರಾಜ ಪೂಜಾರಿ ಬಿಜೂರು ಇದ್ದರು./ಕುಂದಾಪ್ರ ಡಾಟ್ ಕಾಂ/
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೊರೋನಾ ವೈರಾಣು ಸಾಂಕ್ರಾಮಿಕವಾಗಿ ಹರಡುತ್ತಿರುವುದನ್ನು ತಡೆಗಟ್ಟಲು ಕೆಲವೊಂದು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ನಡುವೆ ಆಹಾರ ಸಂಸ್ಕರಣೆ ಘಟಕಗಳಿಗೆ ಕಾರ್ಯಾಚರಣೆ ಮಾಡಲು ಕೇಂದ್ರ ಸರ್ಕಾರವು ಅನುಮತಿ ನೀಡಿದೆ. ಈಗ ಮಾರುಕಟ್ಟೆಗೆ ಆಗಮಿಸುತ್ತಿರುವ ಸ್ಥಳೀಯ ಗೇರು ಬೀಜ ಕೃಷಿಕರಿಗೆ ಉತ್ತಮ ಧಾರಣೆ ಒಗದಿಸಿಕೊಟ್ಟು, ಪ್ರೋತ್ಸಾಹಿಸುವ ನಿಟ್ಟಿನಲ್ಲಿ, ಗೇರು ಬೀಜ ಸಂಸ್ಕರಣಾ ಘಟಕಗಳನ್ನು ಕೆಲವೊಂದು ಷರತ್ತು ವಿಧಿಸಿ ಕಾರ್ಯಚರಿಸಲು ಜಿಲ್ಲಾಧಿಕಾರಿ ಜಿ.ಜಗದೀಶ್ ಅನುಮತಿ ನೀಡಿದ್ದಾರೆ. ಸಂಸ್ಕರಣಾ ಘಟಕದ ಒಟ್ಟು ಕಾರ್ಮಿಕರ 25% ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಂಡು. ಸಂಸ್ಕರಣೆಯನ್ನು ಆರಂಭಿಸುವುದು, ಘಟಕ ಆರಂಬಿಸುವ ಮುನ್ನ ಕಾರ್ಮಿಕರ ಆರೋಗ್ಯ ಪರೀಕ್ಷೆಯನ್ನು ಸ್ಥಳೀಯ ಸರ್ಕಾರಿ ಆರೋಗ್ಯ ಕೇಂದ್ರದ ವತಿಯಿಂದ ಕೈಗೊಳ್ಳುವುದು, ಆರೋಗ್ಯಕರ ಕಾಮಿಕರನ್ನು ಮಾತ್ರ ಕೆಲಸಕ್ಕೆ ನಿಯೋಜಿಸುವುದು. ಸಂಸ್ಕರಣಾ ಘಟಕದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದಯಕೊಳ್ಳುವಂತೆ ನೋಡಿಕೊಳ್ಳುವುದು, ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ಸ್ಯಾನಿಟೈಜರ್, ಮಾಸ್ಕ್ ಹಾಗೂ ಗ್ಲೌಸ್ ಗಳನ್ನು ಕಡ್ಡಾಯವಾಗಿ ಒದಗಿಸಬೇಕು, ಸ್ಥಳೀಯ ಕಾರ್ಮಿಕರನ್ನು ಹೆಚ್ಚಾಗಿ ನಿಯೋಜಿಸುವುದು, ಕಾರ್ಮಿಕರನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಎಲ್ಲೆಡೆಯೂ ಕೊರೊನಾ ಭೀತಿಯಿರುವ ಹಿನ್ನಲೆಯಲ್ಲಿ ವಿವಿಧ ಆಸ್ಪತ್ರೆಗಳ ರಕ್ತನಿಧಿ ಕೇಂದ್ರಗಳಲ್ಲಿ ರಕ್ತ ಸಂಗ್ರಹಣೆಯಲ್ಲೂ ತೀವ್ರ ಇಳಿಮುಖವಾಗುತ್ತಿದೆ. ರಕ್ತದಾನಿಗಳು ಸ್ವಯಂಪ್ರೇರಿತರಾಗಿ ರಕ್ತನಿಧಿ ಕೇಂದ್ರಗಳಿಗೆ ಬಂದು ರಕ್ತದಾನ ಮಾಡಿ ರಕ್ತದ ಅಭಾವವನ್ನು ಕಡಿಮೆ ಮಾಡಲು ಸಹಕಾರ ನೀಡಬೇಕೆಂಬ ಸರಕಾರದ ಮನವಿಗೆ ಓಗೊಟ್ಟು, ಗಂಗೊಳ್ಳಿಯ ರಕ್ತದಾನಿಗಳು, ರಕ್ತದಾನಿಗಳ ಸಂಘವು ರಕ್ತದಾನ ಶಿಬಿರದ ಆಯೋಜಿಸುವ ಮೂಲಕ ಸಾಮಾಜಿಕ ಬದ್ಧತೆಯನ್ನು ಎತ್ತಿಹಿಡಿದಿದೆ. ಕರಾವಳಿ ಸ್ವಯಂಪ್ರೇರಿತ ರಕ್ತದಾನಿಗಳ ಸಂಘದ ಮುಂದಾಳತ್ವ: ಜಿಲ್ಲೆಯ ರಕ್ತನಿಧಿ ಕೇಂದ್ರದಲ್ಲಿ ಇನ್ನೆರೆಡು ದಿನಗಳಲ್ಲಿ ಸಂಗ್ರಹವಾಗಿರುವ ರಕ್ತ ಕಡಿಮೆಯಾಗಿ ರಕ್ತದ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ. ಲಾಕ್ ಡೌನ್ ಅವಧಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಿ ರಕ್ತವನ್ನು ಸಂಗ್ರಹಿಸಿ ರಕ್ತನಿಧಿ ಕೇಂದ್ರಕ್ಕೆ ನೀಡುವುದು ಸವಾಲಿನ ಸಂಗತಿಯಾಗಿದ್ದರೂ, ರಕ್ತದ ಅಭಾವವನ್ನು ನೀಗಿಸುವ ಸಲುವಾಗಿ ಗಂಗೊಳ್ಳಿಯ ಕರಾವಳಿ ಸ್ವಯಂಪ್ರೇರಿತ ರಕ್ತದಾನಿಗಳ ಸಂಘವು ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತದ ಅನುಮತಿ ಪಡೆದು ಬುಧವಾರ ರಕ್ತದಾನ ಶಿಬಿರ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಾಲ್ಲೂಕು ಪಂಚಾಯಿತಿಯಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 129 ನೇ ಜಯಂತಿ ಆಚರಣೆಯನ್ನು ನಡೆಸಲಾಯಿತು. ಕುಂದಾಪುರ: ‘ದೇಶದ ಇಂದಿನ ಕಠಿಣ ಪರಿಸ್ಥಿತಿಯಲ್ಲಿ ಸಂವಿಧಾನದ ಆಶಯಗಳನ್ನು ನಾವೆಲ್ಲ ಪಾಲಿಸಬೇಕು’ ಎಂದು ಕುಂದಾಪುರದ ಉಪ ವಿಭಾಗಾಧಿಕಾರಿ ಕೆ.ರಾಜು ಹೇಳಿದರು. ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ದೀಪ ಬೆಳಗಿಸಿ ಅವರು ಮಾತನಾಡಿದರು. ಕುಂದಾಪುರ ಎಎಸ್ಪಿ ಹರಿರಾಂ ಶಂಕರ್ ಮಾತನಾಡಿ, ದೇಶದ ಶೋಷಿತ ವರ್ಗಗಳ ರಕ್ಷಣೆಗಾಗಿ ಸಂವಿಧಾನದಲ್ಲಿ ಹೇಳಿರುವ ಅಂಶಗಳು ಹಾಗೂ ಕಾನೂನು ಗಳ ಬಗ್ಗೆ ಹೆಮ್ಮೆ ಇದೆ. ಅಂಬೇಡ್ಕರ್ ಅವರ ಕನಸುಗಳನ್ನು ನನಸು ಮಾಡುವ ಪ್ರಯತ್ನಗಳು ಆಗಬೇಕು ಎಂದರು. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೇಶವ ಶೆಟ್ಟಿಗಾರ್, ಬೈಂದೂರು ಕಾರ್ಯನಿರ್ವಹಣಾಧಿಕಾರಿ ಭಾರತಿ, ತಹಶೀಲ್ದಾರ್ ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಸಹಾ ಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್, ಪುರಸಭೆಯ ಪರಿಸರ ಎಂಜಿನಿಯರ್ ರಾಘವೇಂದ್ರ, ತಾಲ್ಲೂಕು ಪಶು ವೈದ್ಯಾಧಿಕಾರಿ ಡಾ. ಸೂರ್ಯ ನಾರಾಯಣ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕೊರೊನಾ ವೈರಸ್ ನಿಯಂತ್ರಣದಲ್ಲಿ ಶ್ರಮಿಸುತ್ತಿರುವ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರ ನೆರವಿಗೆ ಧಾವಿಸಿರುವ ಅಲ್ಪೈನ್ ಅಸೋಸಿಯೇಟ್ಸ್ ಮಂಗಳೂರು-ಗಂಗೊಳ್ಳಿ ಸಂಸ್ಥೆಯು ಗಂಗೊಳ್ಳಿ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರಿಗೆ ಸರ್ಜಿಕಲ್ ಮಾಸ್ಕ್ ಮತ್ತು ಗ್ಲೌವ್ಸ್ಗಳನ್ನು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ವಿತರಿಸಿದೆ. ಅಲ್ಪೈನ್ ಅಸೋಸಿಯೇಟ್ಸ್ನಿಂದ ಇತ್ತಿಚಿಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಪಿಪಿಇ ಕಿಟ್, ಶಿರೂರು, ಬೈಂದೂರು ಹಾಗೂ ಗಂಗೊಳ್ಳಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಸಿಬ್ಬಂಧಿಗಳಿಗೆ ಎರಡು ದಿನದ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದ್ದರು. ಸರ್ಜಿಕಲ್ ಮಾಸ್ಕ್ ಮತ್ತು ಗ್ಲೌವ್ಸ್ಗಳನ್ನು ವಿತರಿಸುವ ವೇಳೆ ಅಲ್ಪೈನ್ ಅಸೋಸಿಯೇಟ್ಸ್ ಸಂಸ್ಥೆಯ ಮಹಮ್ಮದ್ ಜಹೀರ್, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ. ಶಬನಾಜ್, ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಪ್ರಜ್ಞಾವಂತ ನಾಗರೀಕರ ಸಹಕಾರದೊಂದಿಗೆ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವುದರಲ್ಲಿ ಆದಷ್ಟು ಮಟ್ಟಿಗೆ ಪ್ರಗತಿಯನ್ನು ಕಂಡಿದ್ದೇವೆ. ಆದರೆ ಕೆಲವು ಜನ ಅನಗತ್ಯವಾಗಿ ಹೊರಗಡೆ ತಿರುಗಾಡುವುದು, ಲಾಕ್ ಡೌನ್ ಮೂಲ ಉದ್ದೇಶವನ್ನು ಅರಿತುಕೊಳ್ಳದೇ ಅದನ್ನು ಧಿಕ್ಕರಿಸುವುದು ಕಂಡು ಬಂದಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಂಡು ಈಗಾಗಲೇ 413 ಕ್ಕೂ ಹೆಚ್ಚು ವಾಹನಗಳನ್ನು ಮುಟ್ಟುಗೋಳು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ತಿಳಿಸಿದ್ದಾರೆ. ಗಡಿಗಳು ಬಂದ್: ಉಡುಪಿ ಜಿಲ್ಲೆಯ ಗಡಿಗಳನ್ನು ಈಗಾಗಲೇ ಬಂದ್ ಮಾಡಿ, ಬೇರೆ ಜಿಲ್ಲೆಗಳನ್ನು ಸಂಪರ್ಕಿಸುವ ಚೆಕ್ ಪೋಸ್ಟ್ ಗಳಲ್ಲಿ ದಿನದ ೨೪ ಗಂಟೆ ಬಂದೋಬಸ್ತ್ ಮಾಡಲಾಗಿದೆ. ತೀರ ತುರ್ತು ವೈದ್ಯಕೀಯ ಅಗತ್ಯದ ವಾಹನ ಹಾಗೂ ಅಗತ್ಯ ವಸ್ತುಗಳ ಸಾಗಾಟ ವಾಹನಗಳನ್ನು ಮಾತ್ರ ಬಿಡಲಾಗುತ್ತಿದೆ. ಆದರೆ ಮುಂಬೈ, ಬೆಂಗಳೂರು, ಭಟ್ಕಳ, ಹೈದ್ರಾಬಾದ್, ಮೈಸೂರು ಮುಂತಾದ ಕಡೆಗಳಿಂದ ಈ ಚೆಕ್ ಪೋಸ್ಟ್ ಗಳನ್ನು ತಪ್ಪಿಸಿ, ಜನರು ಒಳ ಬರುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಅಂತಹವರನ್ನು ಗುರುತಿಸಿ…
