ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019 ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು, ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರು ಕನಿಷ್ಠ 18 ರಿಂದ 35 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ ಕನಿಷ್ಠ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯು ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ ಇತ್ಯಾದಿ ಸಂಗತಿಗಳಿಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವು ಮಂಗಳವಾರ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಪೂರ್ಣಪ್ರಜ್ಞಾ ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ. ಬಿ. ಜಗದೀಶ ಶೆಟ್ಟಿ, ತುಳುನಾಡಿನ ಶಾಸನಗಳ ಮಹತ್ವ ಎಂಬ ಶೀರ್ಷಿಕೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ತುಳುನಾಡಿನ ಇತಿಹಾಸ, ಇಲ್ಲಿನ ರಾಜವಂಶಗಳು, ಅವರ ಕಾಲದಲ್ಲಿ ರಚಿತವಾದ ಶಾಸನಗಳ ಕುರಿತ ವಿಚಾರಗಳನ್ನು ತಿಳಿಸುವುದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಐತಿಹಾಸಿಕ ಸ್ಮಾರಕಗಳು ಹಾಗೂ ಶಾಸನಗಳ ರಕ್ಷಣೆ ವಿದ್ಯಾರ್ಥಿಗಳ ಹೊಣೆಯಾಗಿರಬೇಕೆಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ರಘು ನಾಯ್ಕ, ಪ್ರಾಧ್ಯಾಪಕರಾದ ಡಾ. ಅಶ್ವತ್ಥ ನಾಯ್ಕ, ಶಿವಕುಮಾರ್, ನಾಗರಾಜ ಶೆಟ್ಟಿ, ಲತಾ ಪೂಜಾರಿ ಹಾಗೂ ಶಿವಯ್ಯ ಗೌಡ ಉಪಸ್ಥಿತರಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥ ಮೋಹನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ವಿದ್ಯಾರ್ಥಿನಿ ಮೇಘನ ನಿರೂಪಿಸಿದರು. ಅನುಷಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಪತ್ರಿಕೋದ್ಯಮ ವಿದ್ಯಾರ್ಥಿಗಳು ತಮ್ಮಜ್ಞಾನದ ಪರಿಧಿಯನ್ನು ಒಂದೇ ವಿಷಯಕ್ಕೆ ಸೀಮಿತವಾಗಿಸದೇ ಎಲ್ಲ ವಿಚಾರಗಳನ್ನು ಅರಿಯುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಮೈಸೂರಿನ ಪ್ರಜಾವಾಣಿ ಪತ್ರಿಕೆಯ ಹಿರಿಯ ಉಪಸಂಪಾದಕ ಡಾ. ಗಣೇಶ್ ಅಮೀನ್‌ಗಡ ಹೇಳಿದರು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದಿಂದ ಅಲಂಗಾರಿನ ಪಂಡಿತ್ ರೆಸಾರ್ಟ್‌ನಲ್ಲಿ ಆಯೋಜಿಸಲಾದ ಒಂದು ದಿನದ ಬರಹ ಕೌಶಲ ಕಾರ್ಯಗಾರದಲ್ಲಿ ಮಾತನಾಡಿದರು. ಸತತ ಓದು ಹಾಗೂ ಜಿಜ್ಞಾಸೆಯ ಮನೋಭಾವದಿಂದ ಬರವಣಿಗೆ ಸಾಧ್ಯ. ಪ್ರತಿಯೊಬ್ಬರೂ ತಮ್ಮದೇ ಶೈಲಿಯ ಬರವಣಿಗೆ ಬೆಳೆಸಿಕೊಳ್ಳಬೇಕು. ವಿವಿಧ ಪತ್ರಿಕೆಯ ಅಂಕಣಗಳಿಗೆ ತಮ್ಮ ಬರಹಗಳನ್ನು ಕಳುಹಿಸಬೇಕು. ಆಗ ಮಾತ್ರ ಪತ್ರಿಕೋದ್ಯಮದಲ್ಲಿ ತಮ್ಮ ಛಾಪನ್ನು ಮೂಡಿಸಬಹುದು. ಓದುಗನನ್ನು ಓದಿಸಿಕೊಂಡು ಹೋಗುವಂತಹ ಬರವಣಿಗೆ ರೂಢಿಸಿಕೊಂಡಾಗ ಮಾತ್ರ ಉತ್ತಮ ಬರಹಗಾರನಾಗಲು ಸಾಧ್ಯ ಎಂದರು. ರೆಸಾರ್ಟ್‌ನ ಸುತ್ತಮುತ್ತಲಿರುವ ಪರಿಸರದಲ್ಲಿರುವ ವಿಷಯಗಳ ಕುರಿತು ತಮ್ಮದೇ ಶೈಲಿಯಲ್ಲಿ ಬರೆಯುವ ಪ್ರಾಯೋಗಿಕ ಚಟುವಟಿಕೆ ನಡೆಸಲಾಯಿತು. ಆರ್ಗನ್ ಡೊನೇಶನ್ ಇಂಡಿಯಾ ಫೌಂಡೇಶನ್‌ನ ಅಧ್ಯಕ್ಷ ಲಾಲ್‌ಗೋಯಲ್ ವಿದ್ಯಾರ್ಥಿಗಳಿಗೆ ಅಂಗದಾನದ ಮಹತ್ವ ತಿಳಿಸಿದರು. ಪತ್ರಿಕೋದ್ಯಮ ವಿದ್ಯಾರ್ಥಿಗಳು ಅಂಗದಾನದ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಪರಿಸರ ಸಂರಕ್ಷಣೆಯ ಉದ್ದೇಶದಿಂದ ಪರಿಸರ ಮಾಲಿನ್ಯ ಕಡಿಮೆಗೊಳಿಸಲು ಏಪ್ರಿಲ್ 1 ರಿಂದ ಭಾರತ್ ಸ್ಟೇಜ್-6 (ಬಿಎಸ್-6) ವಾಹನಗಳನ್ನು ಮಾತ್ರ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ನೋಂದಣಿ ಮಾಡಲಾಗುವುದು. ಸರ್ವೋಚ್ಚ ನ್ಯಾಯಾಲಯ ಹಾಗೂ ಸಾರಿಗೆ ಆಯುಕ್ತರ ಆದೇಶದನ್ವಯ ಏಪ್ರಿಲ್ 1 ರಿಂದ ಭಾರತ್ ಸ್ಟೇಜ್-4 (ಬಿಎಸ್-4) ಮಾಪನದ ವಾಹನ ಮಾರಾಟ ಹಾಗೂ ನೋಂದಣಿ ಮಾಡುವಂತಿಲ್ಲ. ಬಿಎಸ್-4 ಮಾಪನದ ವಾಹನಗಳನ್ನು ಖರೀದಿಸಿ, ಇದುವರೆಗೂ ನೋಂದಣಿ ಮಾಡಿಸಿಕೊಳ್ಳದೇ ಇರುವವರು, ವಾಹನಗಳ ದಾಖಲೆಗಳನ್ನು ಸಲ್ಲಿಸಿ ಮಾರ್ಚ್ 31 ರ ಒಳಗಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ಜಿಲ್ಲೆಯ ಹಲವು ಜೆಸಿಬಿ ಎಕ್ಸವೇಟರ್, ಕ್ರೇನ್ ಹಾಗೂ ಇನ್ನಿತರ ಸಾರಿಗೆ / ಖಾಸಗಿ ವಾಹನಗಳು ಇದುವರೆಗೂ ನೋಂದಾಯಿಸದೇ ಇರುವುದು ಗಮನಕ್ಕೆ ಬಂದಿದ್ದು, ಅಂತಹ ವಾಹನಗಳ ಮಾಲೀಕರು, ತಮ್ಮ ವಾಹನಗಳ ದಾಖಲಾತಿ ಸಲ್ಲಿಸಿ, ಮಾರ್ಚ್ 31 ರ ಒಳಗೆ ನೋಂದಾಯಿಸಿಕೊಳ್ಳಬೇಕು. ಏಪ್ರಿಲ್ 1 ರಿಂದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭಾರತ್ ಸ್ಟೇಜ್-6 (ಬಿಎಸ್-6) ವಾಹನಗಳನ್ನು ಮಾತ್ರ ನೋಂದಣಿ ಮಾಡಲಾಗುವುದು.…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 9 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿ 13028 ರೆಗ್ಯೂಲರ್, 484 ರೆಗ್ಯೂಲರ್ ಪುನರಾವರ್ತಿತ ವಿದ್ಯಾರ್ಥಿಗಳು, 376 ಖಾಸಗಿ ಮತ್ತು 146 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಒಟ್ಟು 14034 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ದತೆಗಳ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಗಾಗಿ ಜಿಲ್ಲೆಯಲ್ಲಿ 20 ಕ್ಲಸ್ಟರ್ ಸಹಿತ, 29 ಕ್ಲಸ್ಟರ್ ರಹಿತ ಮತ್ತು 2 ಖಾಸಗಿ ಪರೀಕ್ಷಾ ಕೇಂದ್ರ ಸೇರಿದಂತೆ ಒಟ್ಟು 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆ ನಡೆಯಲಿರುವ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಅಳವಡಿಸಲಾಗಿದ್ದು, ಜಿಲ್ಲಾ ಖಜಾನೆಯಿಂದ ಬಿಗಿಭದ್ರತೆಯಲ್ಲಿ, ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆ ಪತ್ರಿಕೆ ವಿತರಿಸಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು. ಪರೀಕ್ಷಾ ಸಿದ್ದತೆಗಳನ್ನು ಗಂಭೀರವಾಗಿ ತೆಗೆದುಕೊಂಡು, ಯಾವುದೇ ಲೋಪಗಳಿಲ್ಲದಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಲ್ಲೂರಿನ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೇಂಜರ್ಸ್ ಘಟಕದ ಆಶ್ರಯದಲ್ಲಿ ಒಂದು ದಿನದ ಹೊರಾಂಗಣ ಕಾರ್ಯಕ್ರಮ ನಡೆಯಿತು. ರೇಂಜರ್ಸ್ ಘಟಕದ ಸುಮಾರು 28 ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಸಿಗಳನ್ನು ನೆಡುವುದರ ಮೂಲಕ ಶಾಲಾ ಕೈತೋಟ ನಿರ್ಮಾಣ, ಶಾಲಾ ಪರಿಸರದ ಸ್ವಚ್ಛತೆ ಮುಂತಾದ ಕಾರ್ಯಕ್ರಮಗಳಲ್ಲಿ ಶ್ರಮದಾನ ಮಾಡಿದರು ಹಾಗೂ ಅಲ್ಲಿನ ವಿಶೇಷ ಮಕ್ಕಳ ಕುರಿತಾದ ಮಾಹಿತಿಯನ್ನು ಪಡೆದರು. ಶಾಲೆಯ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು, ಗೌರವ ಶಿಕ್ಷಕಿ ಮನೋರಮ, ರೇಂಜರ್ಸ್ ಘಟಕದ ಲೀಡರ್ ಹಾಗೂ ಕಾರ್ಯಕ್ರಮದ ಸಂಯೋಜಕಿ ಜ್ಯೋತಿ ಪ್ರಸನ್ನ ಹಾಗೂ ಶಾಲೆಯ ಇತರ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕಾಲೇಜಿನ ವಾಣಿಜ್ಯ – ನಿರ್ವಹಣಾ ಸಂಘ ಮತ್ತು ಉದ್ಯಮಶೀಲತೆ ಕೇಂದ್ರದ ವತಿಯಿಂದ ಕೈಗಾರಿಕಾ ಭೇಟಿ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಕೋಟೇಶ್ವರ ಸಮೀಪದ ಕಾಳಾವರದಲ್ಲಿ ಇರುವ ಏಸ್ ಬಾಂಡ್ ಕಂಪೆನಿಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದರು. ಅದೇ ವೇಳೆಯಲ್ಲಿ ಏಸ್ ಬಾಂಡ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಸಂದೀಪ್ ಅವರು ಕಂಪೆನಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ಸಂಯೋಜಕರಾದ ವೀಣಾ ಭಟ್ ಮತ್ತು ಸ್ವಸ್ತಿ ಆರ್. ಶೆಟ್ಟಿ, ಉದ್ಯಮಶೀಲತೆ ಕೇಂದ್ರದ ಸಂಯೋಜಕರಾದ ಯೋಗೀಶ್ ಶಾನುಭೋಗ್ ಮತ್ತು ಧನಶ್ರೀ ಎಮ್. ಕಿಣಿ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ರಾಜೇಶ್ ಶೆಟ್ಟಿ ವಕ್ವಾಡಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವದ ಅಂಗವಾಗಿ ಗ್ರೀಷ್ಮಾ ಕಿಣಿ ಮಂಗಳೂರು ಇವರಿಂದ ಭಜನ ಗಂಗಾ ಭಜನೆ ಕಾರ್ಯಕ್ರಮ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ವಿದ್ಯಾಧಿರಾಜ ಸಭಾಭವನದಲ್ಲಿ ಜರಗಿತು. ಹಾರ‍್ಮೋನಿಯಂನಲ್ಲಿ ಎಂ.ಮುಕುಂದ ಪೈ ಗಂಗೊಳ್ಳಿ, ಕೆ.ಕಾರ್ತಿಕ ಕಾಮತ್ ಕೋಟೇಶ್ವರ ತಬಲಾದಲ್ಲಿ ಮತ್ತು ಎನ್.ಅಜಿತ್ ನಾಯಕ್ ತಾಳದಲ್ಲಿ ಸಹಕರಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಜಿ.ವೇದವ್ಯಾಸ ಕೆ.ಆಚಾರ್ಯ, ಎಚ್.ಸುನೀಲ್ ನಾಯಕ್, ಟಿ.ರತ್ನಾಕರ ಶೆಣೈ, ಗಣೇಶ ಕಿಣಿ ಕಾರ್ಯಕ್ರಮ ಉದ್ಘಾಟಿಸಿದರು. ಸುಧಾ ವಿ.ಪೈ ಹಾಗೂ ಎಂ.ರಾಮಕೃಷ್ಣ ಪೈ ಕಲಾವಿದರನ್ನು ಗೌರವಿಸಿದರು. ನಿನಾದ ಸಂಸ್ಥೆಯ ಅಧ್ಯಕ್ಷ ಎಂ.ಮುಕುಂದ ಪೈ, ಸಂಸ್ಥೆಯ ಸದಸ್ಯರು, ಸಮಾಜಬಾಂದವರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕುಂದಾಪುರ ತಾಲೂಕು ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ ಗ್ರಾಮದಲ್ಲಿ ಕೊಂಕಣ ಖಾರ್ವಿ ಸಮಾಜದವರು ಮಾ. 8 ರಿಂದ 10 ರ ವರೆಗೆ ಹೋಳಿ ಹಬ್ಬವನ್ನು ಆಚರಿಸಲಿದ್ದು, ಮಾರ್ಚ್ 10 ರಂದು ಹೋಳಿ ಮೆರವಣಿಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ, ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ, ಗುಜ್ಜಾಡಿ, ಹೊಸಾಡು, ತ್ರಾಸಿ ಗ್ರಾಮಗಳ ವ್ಯಾಪ್ತಿಯಲ್ಲಿ ಮಾರ್ಚ್ 10 ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯ ವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಗಂಗೊಳ್ಳಿ, ಗುಜ್ಜಾಡಿ, ಹೊಸಾಡು, ತ್ರಾಸಿ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಹರಿ ಓಂ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಜರಗಿದ ಗಂಗೊಳ್ಳಿ ಜಿಎಸ್‌ಬಿ ಪ್ರೀಮಿಯರ್ ಲೀಗ್ ಪಂದ್ಯಾಟದಲ್ಲಿ ಗಂಗೊಳ್ಳಿಯ ವಿ.ಕೆ. ಪೊವಾಸ್ ತಂಡ ಪ್ರಥಮ ಸ್ಥಾನ ಗಳಿಸಿ ಹರಿಓಂ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಭಾನುವಾರ ಸಂಜೆ ನಡೆದ ಫೈನಲ್ ಪಂದ್ಯಾಟದಲ್ಲಿ ವಿ.ಕೆ. ಪೊವಾಸ್ ತಂಡ ಗಂಗೊಳ್ಳಿಯ ಕಾರ್ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಲೀಗ್ ಮಾದರಿಯಲ್ಲಿ ನಡೆದ ಪಂದ್ಯಾಟದಲ್ಲಿ ವಿ.ಕೆ. ಪೊವಾಸ್ ತಂಡ ತಾನಾಡಿದ ಎಲ್ಲಾ ಲೀಗ್ ಹಂತದ ಪಂದ್ಯಗಳನ್ನು ಗೆದ್ದು ನೇರವಾಗಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದರೆ, ಕಾರ್ ಸೂಪರ್ ಕಿಂಗ್ಸ್ ತಂಡವು ವಿ.ವಿ. ಫೈಟರ‍್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತ್ತು. ಕಾರ್ ಸೂಪರ್ ಕಿಂಗ್ಸ್ ತಂಡದ ವಿಜೇತ ಪಡಿಯಾರ್ ಉತ್ತಮ ದಾಂಡಿಗ, ವಿ.ಕೆ. ಪೊವಾಸ್ ತಂಡದ ಪ್ರದೀಪ ಭಟ್ ಉತ್ತಮ ಎಸೆತಗಾರ ಮತ್ತು ವಿ.ಕೆ. ಪೊವಾಸ್ ತಂಡದ ಶ್ರೇಯಸ್ ಶೆಣೈ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು…
