ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪುರುಷ ಪ್ರಧಾನ ವ್ಯವಸ್ಥೆ ಬದಲಾಗಿದೆ. ಸಾಮಾಜಿಕವಾಗಿ ಮಹಿಳೆ ಬಹುಮುಖಿ ನೆಲೆಯಲ್ಲಿ ತನ್ನನ್ನು ತೊಡಗಿಸಿಕೊಳ್ಳುವುದರ ಜತೆಗೆ ಯಶಸ್ಸನ್ನು ಕಂಡಿದ್ದಾಳೆ. ಮಹಿಳೆ ಹಠವಾದಿ ಮಾತ್ರವಲ್ಲ ಛಲವಾದಿ ಎಂದು ಜೇಸಿಐ 15 ವಲಯಾಧ್ಯಕ್ಷ ಕೆ. ಕಾರ್ತಿಕೇಯ ಮಧ್ಯಸ್ಥ ಹೇಳಿದರು . ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ವೇದಿಕೆ ಹಾಗೂ ಕುಂದಾಪುರ ಸಿಟಿ ಜೇಸಿಐ ಅವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಯ ‘ಸಮ್ಮಿಲನ’ ಕಾರ್ಯಕ್ರಮದಲ್ಲಿ ಮಾತನಾಡಿದರು . ಇದೇ ಸಂದರ್ಭದಲ್ಲಿ ಸಾರ್ವಜನಿಕ ಸೇವಾ ಕ್ಷೇತ್ರದ ಸಾಧನೆಗಾಗಿ ಕುಂದಾಪುರದ ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಇಂದಿರಾ, ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಡಾ| ಅಮ್ಮಾಜಿ, ಕಾಲೇಜಿನ ಕ್ರೀಡಾ ಪ್ರತಿಭೆ ತೃತೀಯ ಬಿ.ಕಾಂ. ಬಿ ವಿಭಾಗದ ರೂಪಾ ಶೆಟ್ಟಿ, ರಂಗಭೂಮಿ ಪ್ರತಿಭೆ ತೃತೀಯ ಬಿ.ಬಿ.ಎ. ಪೌರ್ಣಮಿ, ಶೈಕ್ಷಣಿಕ ಪ್ರತಿಭೆ ದ್ವಿತೀಯ ಬಿ.ಸಿ.ಎ. ಕಾವ್ಯ ದೇವಾಡಿಗ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಡಾ| ಅಮ್ಮಾಜಿ ಅವರು ಮಾತನಾಡಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಮೇಲ್‌ಗಂಗೊಳ್ಳಿಯ ಸರಕಾರಿ ಕಿರಿಯ ಹಾಗೂ ಪೂರ್ವ ಪ್ರಾಥಮಿಕ (ಹವೇ) ಶಾಲೆ ವತಿಯಿಂದ ದಾಖಲಾತಿ ಆಂದೋಲನ-ವಿಚಾರ ಸಂಕೀರ್ಣ ಡಾ.ಅಂಬೇಡ್ಕರ್ ಸಭಾಭವನದಲ್ಲಿ ವಠಾರದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ರಮೇಶ ಮಹಾಲೆ, ಕನ್ನಡ ಶಾಲೆ ಉಳಿಸಿ ಎಂಬ ಅಭಿಯಾನದಲ್ಲಿ ಪ್ರತಿ ಮನೆ ಮನೆಗೂ ಭೇಟಿ ನೀಡಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಪ್ರಯತ್ನ ಈ ಕಾರ್ಯಕ್ರಮದ ಮೂಲಕ ನಡೆಯಲಿದೆ. ಪ್ರತಿಯೊಬ್ಬರೂ ಕನ್ನಡ ಶಾಲೆ ಉಳಿಸಿ ಅಭಿಯಾನದಲ್ಲಿ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿ.ಈಶ್ವರ, ದಿಲ್‌ಶಾದ್, ಪಲ್ಲವಿ, ಮೀನಾಕ್ಷಿ, ದೀಪಾ ಖಾರ್ವಿ, ನೇತ್ರಾವತಿ, ಆಶಾ ಖಾರ್ವಿ, ಅನಿತಾ ಖಾರ್ವಿ, ಲಕ್ಷ್ಮೀ, ತುಳಸಿ, ನಟರಾಜ್, ಸುಮಿತ್, ಶಾರದಾ ಮೊದಲಾದವರು ಉಪಸ್ಥಿತರಿದ್ದರು. ಗೌರವ ಶಿಕ್ಷಕಿ ಸುನೀತಾ ದಿನೇಶ್ ಸ್ವಾಗತಿಸಿದರು. ಸಹಶಿಕ್ಷಕಿ ಲಲಿತಾ ಟೀಚರ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ, ಕುಂದಾಪುರ ಇವರ ಸಂಯೋಜನೆಯ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣ ಹಾಗೂ ಸಂಪೂರ್ಣ ಸಾಕ್ಷರತಾ ಅಭಿಯಾನ – 2020. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಿಂದ 10 ತಂಡದ ಭೋಧಕ/ಭೋಧಕೇತರ ಸಿಬ್ಬಂದಿಗಳನ್ನೊಳಗೊಂಡು ಊರ ಗಣ್ಯರ ಸಮಕ್ಷಮದಲ್ಲಿ, ಶ್ರೀ. ಕ್ಷೇತ್ರ ಚಕ್ರೇಶ್ವರಿ ಕೋಡಿ ಇಲ್ಲಿ ವಿದ್ಯುಕ್ತವಾಗಿ ಚಾಲನೆಗೊಂಡಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು, ಕೋಡಿ ಕುಂದಾಪುರ ಇವರ ಆಡಳಿತ ನಿರ್ದೇಶಕರಾದ ದೋಮ ಚಂದ್ರಶೇಖರ್ ಇವರು ಮಾದಕ ವ್ಯಸನದಿಂದ ಮುಕ್ತ ಕೋಡಿ ನಿರ್ಮಾಣ ಆಗುವುದರೊಂದಿಗೆ ಬ್ಯಾರೀಸ್‌ನ ಶಿಕ್ಷಣದ ಫಲ ಸರ್ವರಿಗೂ ತಲುಪುವುದರ ಮೂಲಕ ಯಶಸ್ಸನ್ನು ಕಾಣಬೇಕಾದದ್ದು ಈ ಅಭಿಯಾನದ ಗುರಿ ಎಂದು ಪ್ರಾಸ್ತಾವಿಕವಾಗಿ ನುಡಿದರು. ಕುಂದಾಪುರ ಪುರಸಭಾ ಸದಸ್ಯೆ ಲಕ್ಷ್ಮೀಭಾಯಿ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣ ಹಾಗೂ ಜನಜಾಗೃತಿ ಆಂದೋಲನದ ಸ್ಟಿಕ್ಕರ್ ಬಿಡುಗಡೆಗೊಳಿಸಿ ಅಭಿಯಾನಕ್ಕೆ ಶುಭ ಹಾರೈಸಿದರು. ಶ್ರೀ.ಕ್ಷೇತ್ರ ಚಕ್ರೇಶ್ವರಿಯ ಟ್ರಸ್ಟೀ ಸಂಜೀವ ಪೂಜಾರಿ ಇವರು ಬ್ಯಾರೀಸ್ ಸಮೂಹ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಅತ್ಯಂತ ಹಿಂದುಳಿದ ಮೀನುಗಾರಿಕಾ ಬಂದರು ಪ್ರದೇಶವಾಗಿರುವ ಗಂಗೊಳ್ಳಿಯ ಅಭಿವೃದ್ಧಿಗೆ ಸರಕಾರ ಬದ್ಧವಾಗಿದ್ದು, ವಿವಿಧ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಸರಕಾರದ ಅನುದಾನ ಒದಗಿಸುವ ಪ್ರಯತ್ನ ನಡೆಸಲಾಗುತ್ತಿದೆ. ಗಂಗೊಳ್ಳಿ ಮುಖ್ಯರಸ್ತೆ ಕಾಂಕ್ರೀಟಿಕರಣಕ್ಕೆ 1.47 ಕೋಟಿ ರೂ. ಮಂಜೂರಾಗಿದ್ದು, ಅತೀ ಶೀಘ್ರ ಕಾಮಗಾರಿ ಪ್ರಾರಂಭವಾಗಲಿದೆ. ಈ ಭಾಗದಲ್ಲಿ ರಿಂಗ್ ರೋಡ್ ನಿರ್ಮಾಣಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಇದರ ಬಗ್ಗೆ ಗಂಭೀರ ಪ್ರಯತ್ನ ನಡೆಸಲಾಗುವುದು. ಮಳೆಗಾಲದ ನೀರು ಹರಿದು ಹೋಗುವ ಗೋಧಿ ತೋಡು ಅಭಿವೃದ್ಧಿಗೆ ಸರಕಾರದಿಂದ ಅನುದಾನ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಗಂಗೊಳ್ಳಿ ಗ್ರಾಮದ ಶ್ರೀ ವೀರೇಶ್ವರ ದೇವಸ್ಥಾನದ ಬಳಿಯಿಂದ ಗುಡ್ಡೆಕೇರಿ ಸಂಪರ್ಕ ರಸ್ತೆಯ ಸುಮಾರು 35 ಲಕ್ಷ ರೂ. ವೆಚ್ಚದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕತಾರ್: ಸತತವಾಗಿ 20 ವರ್ಷಗಳಿಂದ ಸೇವೆ, ಸಂಸ್ಕೃತಿಗಳ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ‘ಕರ್ನಾಟಕ ಸಂಘ ಕತಾರ್‌ನ 2020-2021 ಸಾಲಿನ ನೂತನ ಆಡಳಿತ ಸಮಿತಿಯನ್ನು ರಚಿಸಲಾಗಿದ್ದು, ಅಧ್ಯಕ್ಷರಾಗಿ ಮೈರ್ಪಾಡಿ ನಾಗೇಶ್ ರಾವ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಸಮಿತಿ 2020-2021 ಮೈರ್ಪಾಡಿ ನಾಗೇಶ್ ರಾವ್ – ಅಧ್ಯಕ್ಷರು ಅನೀಲ್ ಕುಮಾರ್ ಬೋಲೂರ್ – ಉಪಾಧ್ಯಕ್ಷರು ಮುರಳಿಧರ್ ರಮನಾಥ್ ರಾವ್ – ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಲಕ್ಕೇಗೌಡ – ಖಜಾಂಚಿ ಅಕ್ಷಯ ಶೆಟ್ಟಿ – ಸಾಂಸ್ಕೃತಿಕ ಕಾರ್ಯದರ್ಶಿ ಸಂಜಯ್ ಕುದರಿ – ಕ್ರೀಡಾ ಕಾರ್ಯದರ್ಶಿ ಕಿಶೋರ್.ವಿ – ಜಂಟಿ ಕಾರ್ಯದರ್ಶಿ ಮತ್ತು ಕನ್ನಡ ಸಂಬಂಧಿತ ಸಂಚಾಲಕರು ಕುಮಾರಸ್ವಾಮಿ. ಸಿ.ಅರ್ – ಪರಿಸರ ಮತ್ತು ಮಾಹಿತಿ ತಂತ್ರಜ್ಞಾನ ಸಂಚಾಲಕರು ಸುಶೀಲ ಸುನೀಲ್ – ಮಹಿಳಾ ಸಂಚಾಲಕರು ರಶ್ಮಿ ಜಯರಾಮ – ಮಕ್ಕಳ ಮತ್ತು ವಿಷೇಶ ಅವಶ್ಯಕತೆಗಳ ಸಂಚಾಲಕರು ನೂರ್ ಅಹ್ಮದ್ – ಸದಸ್ಯತ್ವ ಮತ್ತು ನಿರ್ದೇಶಾಂಕ ಸಂಚಾಲಕರು ಅಧ್ಯಕ್ಷರ ಕಿರು ಪರಿಚಯ ನಾಗೇಶ ರಾಯರು…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿ ಬಂದರು ಬೇಲಿಕೇರಿ ಜನರ ಹಲವು ದಶಕಗಳ ಪ್ರಾಮಾಣಿಕ ಹೋರಾಟದ ಫಲವಾಗಿ ಬೇಲಿಕೇರಿ ರಸ್ತೆ ಕಾಂಕ್ರೀಟಕರಣಕ್ಕೆ ವಾರಾಹಿ ನೀರಾವರಿ ನಿಗಮದ ಮೂಲಕ ಅನುದಾನ ಮಂಜೂರಾಗಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಪ್ರಾರಂಭಗೊಳ್ಳಲಿದೆ. ಗಂಗೊಳ್ಳಿಯ ಮಲ್ಯರಬೆಟ್ಟು ಮತ್ತು ರಥಬೀದಿ ಅಡ್ಡರಸ್ತೆ ಹಾಗೂ ಮುಖ್ಯರಸ್ತೆ ಅಭಿವೃದ್ಧಿಗೆ ಅನುದಾನ ಮಂಜೂರಾಗಿದ್ದು, ಕಾಮಗಾರಿಯನ್ನು ಅತಿ ಶೀಘ್ರ ಪ್ರಾರಂಭಿಸಲು ಸೂಚನೆ ನೀಡಲಾಗುವುದು ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಗಂಗೊಳ್ಳಿ ಗ್ರಾಮದ ಬಂದರು ಬೇಲಿಕೇರಿ ರಸ್ತೆಯ ಸುಮಾರು 25 ಲಕ್ಷ ರೂ. ವೆಚ್ಚದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಗಂಗೊಳ್ಳಿಯ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಿರುವ ಅನುದಾನ ನೀಡಲು ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುವುದು. ಈ ಭಾಗದ ಜನರಿಗೆ ನೀಡಿದ ಆಶ್ವಾಸನೆಯನ್ನು ಈಡೇರಿಸಲು ಶಕ್ತಿಮೀರಿ ಪ್ರಯತ್ನ ನಡೆಸುವುದಾಗಿ ಅವರು ಭರವಸೆ ನೀಡಿದರು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಎಎಸ್ಪಿ ಹರಿರಾಮ್ ಶಂಕರ್ ಅವರು ಭೇಟಿ ನೀಡಿ ಕಾರಂತರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ರಂಗ ಮಂದಿರ, ಆರ್ಟ್ ಗ್ಯಾಲರಿ, ಗ್ರಂಥಾಲಯ ವನ್ನು ವೀಕ್ಷಿಸಿದರು. ಗ್ರಂಥಾಲಯದಲ್ಲಿರುವ ಪುಸ್ತಕದ ಭಂಡಾರ, ಸ್ಪರ್ಧಾತ್ಮಕ ಪುಸ್ತಕದ ಸಂಗ್ರಹದ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು. ಗ್ರಾಮ ಪಂಚಾಯತ್ ಗ್ರಂಥಾಲಯವಾದರೂ ಜಿಲ್ಲಾ ಗ್ರಂಥಾಲಯದಷ್ಟು ಅಭಿವೃದ್ಧಿ ಹೊಂದಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ದ.ಕ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಹರೀಶ್ ಕುಮಾರ್ ಶೆಟ್ಟಿ, ಕಾರಂತ ಪ್ರತಿಷ್ಠಾನದ ಟ್ರಸ್ಟಿಗಳಾದ ಸತೀಶ್ ವಡ್ಡರ್ಸೆ, ರಾಜಶೇಖರ್ ಕೋಟ, ಉಡುಪಿ ಶಾಸಕರ ಆಪ್ತ ಸಹಾಯಕರಾದ ಗಿರೀಶ್ ಕುಮಾರ್ ಶೆಟ್ಟಿ, ಕಾರಂತ ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಹೋಳಿ ಹಬ್ಬದ ಆಚರಣೆ ಶಾಂತಿಯುತವಾಗಿರಬೇಕು. ಮೋಜು ಮಸ್ತಿ ಅಬ್ಬರದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು. ಮೆರವಣಿಗೆಯಲ್ಲಿ ಬಣ್ಣ ಎರಚುವಾಗ ಕೇವಲ ಔಪಚಾರಿಕವಾಗಿ ಮಾತ್ರ ಬಣ್ಣ ಹಾಕಬೇಕು. ಬಲಾತ್ಕಾರವಾಗಿ, ಹಿಂಸಾತ್ಮವಾಗಿ ಬಣ್ಣ ಎರಚಬಾರದು. ಅನ್ಯ ಧರ್ಮದವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಹೋಳಿ ಆಚರಣೆ ಮಾಡಬೇಕು. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ ನಾಯ್ಕ್ ಹೇಳಿದರು. ಹೋಳಿ ಹಬ್ಬದ ಪೂರ್ವಭಾವಿಯಾಗಿ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಜರಗಿದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಮದ್ಯಪಾನ ಸೇವಿಸಿ ಮೆರವಣಿಗೆಯಲ್ಲಿ ಭಾಗವಹಿಸುವುದನ್ನು ತಡೆಯಬೇಕು. ನಿಗದಿತ ವೇಳೆಯಲ್ಲಿ ಮೆರವಣಿಗೆಯನ್ನು ನಡೆಸಿ ಇಲಾಖೆಯೊಂದಿಗೆ ಸಹಕರಿಸಬೇಕು. ಏನೇ ತೊಂದರೆ ಆದರೂ ಇಲಾಖೆಯ ಗಮನಕ್ಕೆ ತರಬೇಕು. ಕಾನೂನು ಕೈಗೆತ್ತಿಕೊಳ್ಳುವ ಕೆಲಸಕ್ಕೆ ಯಾರೂ ಮುಂದಾಗಬಾರದು ಎಂದು ಅವರು ಕರೆ ನೀಡಿದರು. ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಭೀಮಾಶಂಕರ್ ಸಲಹೆ ಸೂಚನೆ ನೀಡಿ ಶಾಂತಿ ಸೌಹಾರ್ದತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಸಮಾನತೆಗಾಗಿ ಮಹಿಳೆಯರು ಹೋರಾಟ ನಡೆಸಿದರೆ ಅದು ಮುರ್ಖತನವಾಗುತ್ತದೆ ಏಕೆಂದರೆ ಮಹಿಳೆಯರು ಎಲ್ಲರಿಂಗಿಂತ ಶ್ರೇಷ್ಠರು, ಅವರ ಸಾಮರ್ಥ್ಯದ ಅರಿವು ಅವರಿಗಿದ್ದರೆ ಯಾವುದೇ ಹೋರಾಟದ ಅಗತ್ಯ ಅವರಿಗಿಲ್ಲ ಎಂದು ಮಂಗಳೂರಿನ ಆಸರೆ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷೆ ಡಾ| ಆಶಾ ಜ್ಯೋತಿ ರೈ ಹೇಳಿದರು. ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಆಳ್ವಾಸ್ ಕಾಲೇಜಿನ ಮಹಿಳಾ ಅಭಿವೃದ್ಧಿ ಕೋಶ ಮತ್ತು ಸೊಸೈಟಿ ಫಾರ್ ವುಮೆನ್ ರಿರ್ಸೋಸ್ ಡೆವಲಪ್‌ಮೆಂಟ್ ಜತೆಗೂಡಿ ಮಿಜಾರು ಅಡಿಟೋರಿಯಮ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ತಮ್ಮ ಶಕ್ತಿ ಹಾಗೂ ಕರ್ತವ್ಯಗಳ ಕುರಿತು ಚಿಂತಿಸಬೇಕಿದೆ. ತಮಗಿರುವ ಅನೇಕ ಸೌಲಭ್ಯಗಳು ಹಾಗೂ ಸವಲತ್ತುಗಳನ್ನ ಸದುಪಯೋಗ ಪಡಿಸಿಕೊಳ್ಳುವಲ್ಲಿ ಮಹಿಳೆಯರು ತಮ್ಮ ಜವಾಬ್ದಾರಿ ಮೆರೆಯಬೇಕಿದೆ ಎಂದರು. ಕಳೆದ ಹಲವಾರು ದಶಕಗಳಿಂದ ಮಹಿಳೆಯರ ಉನ್ನತಿ ಸಾಧ್ಯವಾಗಿದ್ದರೂ, ಶೇಕಡಾ ಏಳುರಷ್ಟು ಮಹಿಳೆಯರು ಮಾತ್ರ ಉನ್ನತ ಸ್ಥಾನದಲ್ಲಿದಲ್ಲಿರುವುದು ವಿಷಾದಕರ ಎಂದರು. ಇಂದಿಗೂ ನಮ್ಮ ಸಮಾಜದಲ್ಲಿ ಕೆಲ ವರ್ಗದ ಗಂಡಸರು ಮಹಿಳೆಯರನ್ನು ಪ್ರಾಣಿಗಳಿಗಿಂತ ಕೀಳಾಗಿ ನಡೆಸಿಕೊಳ್ಳುತ್ತಿದ್ದು ಅವರನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಸ್ತ್ರೀ ಎಂಬ ಪದಕ್ಕೆ ಬೆಲೆ ಕಟ್ಟಲಾಗದ ಅನಂತವಾದ ಭಾವನೆ ಶಕ್ತಿ ಇದೆ. ಮಹಿಳೆ ಒಂದೇ ಕ್ಷೇತ್ರಕ್ಕೆ ಮೀಸಲಿರದೆ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ತಮ್ಮದೇ ಛಾಪು ಮೂಡಿಸಿ ಸಾಧನೆ ಮಾಡುತ್ತಿದ್ದಾಳೆ. ನಾಲ್ಕು ಗೋಡೆಗಳ ಮಧ್ಯ ಕಾಲ ಕಳೆಯುತ್ತಿದ್ದ ಮಹಿಳೆ ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾಳೆ. ಮಹಿಳೆಯರಿಗೆ ತಮ್ಮ ಪ್ರತಿಭೆ ತೋರಿಸಲು ಅವಕಾಶಗಳು ದೊರೆಯುತ್ತಿದೆ. ಮಹಿಳೆಯರಿಗೆ ಜೀವನದ ಪ್ರತಿರಂಗದಲ್ಲಿ ಪುರುಷರಿಗೆ ಸಮಾನವಾದ ಸ್ಥಾನ ಪಡೆಯವ ಹಕ್ಕು ಸಿಗುತ್ತಿದೆ. ಮಹಿಳೆ ಎಲ್ಲಾ ರಂಗದಲ್ಲಿ ಇನ್ನು ಹೆಚ್ಚು ಸಕ್ರೀಯವಾಗಿ ಅಭಿವೃದ್ಧಿ ಪಥದತ್ತ ಮುನ್ನಡೆದರೆ ಮಾತ್ರ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಸಾರ್ಥಕತೆಯನ್ನು ಪಡೆಯುತ್ತದೆ ಎಂದು ಯುಜಿಸಿ-ಎನ್‌ಇಟಿ ರಾಷ್ಟ್ರೀಯ ಪರೀಕ್ಷೆಯಲ್ಲಿ ರ‍್ಯಾಂಕ್ ವಿಜೇತೆ ಯು.ಸಂಗೀತಾ ಶೆಣೈ ಹೇಳಿದರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಇವರ ಆಶ್ರಯದಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಬೈಲೂರು ಮಂಜುನಾಥ ಶೆಣೈ ಸಭಾಭವನದಲ್ಲಿ ಆದಿತ್ಯವಾದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಸನ್ಮಾನ…
