Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಅಜ್ಜರಕಾಡು ಕ್ರೀಡಾಂಗ ಣದಲ್ಲಿ ಮಾರ್ಚ್ 17ರಿಂದ ನಡೆಯುವ ಭಾರತೀಯ ಸೇನಾ ನೇಮಕಾತಿ ರ‍್ಯಾಲಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಕಚೇರಿಯಲ್ಲಿ ಸೇನಾ ನೇಮಕಾತಿ ರ್ಯಾಲಿ ಕುರಿತು ಸೇನಾ ನೇಮಕಾತಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವ ಅಭ್ಯರ್ಥಿಗಳಿಗೆ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆಯನ್ನು ನಗರಸಭೆ ನೋಡಿಕೊಳ್ಳುತ್ತಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕ್ರೀಡಾಂಗಣದಲ್ಲಿ ತುರ್ತು ಚಿಕಿತ್ಸೆಗೆ ಆಂಬುಲೆನ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿ ಹಾಗೂ ಅಂಕಪಟ್ಟಿಗಳ ಪರಿಶೀಲನೆಗೆ ಶಿಕ್ಷಣ ಇಲಾಖೆಯ 20 ಸಿಬ್ಬಂದಿ ನಿಯೋಜಿಸಲಾಗಿದೆ. ಅಗತ್ಯವಿದ್ದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು. ರ‍್ಯಾಲಿಯಲ್ಲಿ ಪ್ರತಿದಿನ 3,000 ಅಭ್ಯರ್ಥಿಗಳು ಬರಲಿದ್ದು, ನೂಕು ನುಗ್ಗಲು ತಪ್ಪಿಸಲು, ರ‍್ಯಾಲಿ ಸುಗಮವಾಗಿ ನಡೆಯಲು ಸೂಕ್ತ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು. ಕ್ರೀಡಾಂಗಣಕ್ಕೆ ನಿರಂತರ ವಿದ್ಯುತ್ ಮತ್ತು ವೇಗದ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು ಎಂದು ಡಿಸಿ ಹೇಳಿದರು. ಜಿಲ್ಲೆಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಭಂಡಾ‌ರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಕ್ರಿಕೆಟ್(ಲೆದರ್ ಬಾಲ್) ಪಂದ್ಯಾಟದಲ್ಲಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಸೆಮಿಫೈನಲ್‌ನಲ್ಲಿ ಡಾ. ಬಿ.ಬಿ.ಹೆಗ್ಡೆ ಕಾಲೇಜನ್ನು ಸೋಲಿಸಿ ಫೈನಲ್ ಪ್ರವೇಶಿಸಿದ ತಂಡ ಫೈನಲ್‌ನಲ್ಲಿ ಭಂಡಾ‌ರ್ಕಾರ್ಸ್ ಕಾಲೇಜಿನ ವಿರುದ್ದ ಜಯ ಸಾಧಿಸಿ ಪ್ರಥಮ ಸ್ಥಾನಿಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ತೃತೀಯ ಬಿ.ಕಾಂ ನ ಮಹಮ್ಮದ್ ಹಯಾಝ್ ಪಂದ್ಯಶ್ರೇಷ್ಠನಾಗಿ ಆಯ್ಕೆಯಾದರು, ಸಂಸ್ಥೆಯ ಅಧ್ಯಕ್ಷರಾದ ಕೆ.ಎಮ್ ಅಬ್ದುಲ್ ರೆಹಮಾನ್ , ನಿರ್ದೇಶಕರಾದ ದೋಮ ಚಂದ್ರಶೇಖರ್ ಹಾಗೂ ಪ್ರಾಂಶುಪಾಲರಾದ ಡಾ. ಶಮೀರ್ ಉಪಸ್ಥಿತರಿದ್ದರು. ಮಹಮ್ಮದ್ ಇಲಿಯಾಸ್ ಹಾಗೂ ವೀಣಾ ಅಗೇರ್ ತಂಡವನ್ನು ತರಬೇತುಗೊಳಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರಮಟ್ಟದಲ್ಲಿ ಜರುಗಿದ 2021ನೇ ಸಾಲಿನ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಾದ ಕಶಿಶ್ ಕೆ.ಸಿ., ತಿಲಕ್ ಚಂದ್ರ ಶಾಸ್ತ್ರೀ, ಸಂಧ್ಯಾ, ನಿಧಿ, ಶ್ರೇಯಾ, ಶ್ರೀವತ್ಸ ಕಾಮತ್, ಸ್ವಸ್ತಿಕ್ ಎಂ. ಭಂಡಾರಿ, ರಶ್ಮಿ, ರಕ್ಷಿತಾ, ಸತ್ವಿಕ್ ಎ ಶೆಟ್ಟಿ, ಶಶಾಂಕ್ ಎ. ಶೇಟ್, ಮಂಜುಶಾ ಭಾಸ್ಕರ್ ಶೆಟ್ಟಿ, ಸಿಂಚನ ಎಸ್., ಅಚಿಂತ್ಯ ಉಪಾಧ್ಯಾಯ, ಶ್ರೀನಿಧಿ ಉಡುಪಾ ಇವರುಗಳು ಕಾಲೇಜಿನಲ್ಲಿ ಲಭ್ಯವಿರುವ ಜೆಇಇ ಕೋಚಿಂಗ್ ನ ಸದುಪಯೋಗವನ್ನು ಪಡೆದುಕೊಂಡು ಉತ್ತೀರ್ಣರಾಗಿದ್ದಾರೆ. ಉತ್ತಮ ಫಲಿತಾಂಶ ಪಡೆದಿರುವ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕವೃಂದ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ದೇವಾಡಿಗರ ಸಮಾಜ ಸೇವಾ ಸಂಘ ಇದರ ಕಛೇರಿ ಕಟ್ಟಡಕ್ಕೆ ಶಿಲಾನ್ಯಾಸ ಇತ್ತೀಚೆಗೆ ನಡೆಯಿತು. ಮುಂಬೈ ಉದ್ಯಮಿ ಸುರೇಶ ಡಿ ಪಡುಕೋಣೆ ಶಿಲಾನ್ಯಾಸ ನೆರವೇರಿಸಿದರು ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ಸಾಪ್ಟ್‌ವೇರ್ ಇಂಜಿನಿಯರ್ ಗಣೇಶ ದೇವಾಡಿಗ, ಸಂಸ್ಥೆಯ ಅಧ್ಯಕ್ಷರಾದ ನಾಗರಾಜ ರಾಯಪ್ಪನ ಮಠ, ಗೌರವಾಧ್ಯಕ್ಷರಾದ ಚಂದ್ರಶೇಖರ ದೇವಾಡಿಗ, ಉಪಾಧ್ಯಕ್ಷರಾದ ರಾಜಾ ದೇವಾಡಿಗ, ಕರುಣಾಕರ ಬಳ್ಕೂರು, ಕಾರ್ಯದರ್ಶಿ ಉದಯ ಹೇರಿಕೇರಿ, ಕೋಶಾಧಿಕಾರಿ ಆನಂದ ಕೆ ಎನ್, ಮಾಜಿ ಅಧ್ಯಕ್ಷರಾದ ದತ್ತಾತ್ರೇಯ ದೇವಾಡಿಗ, ನಾರಾಯಣ ದೇವಾಡಿಗ, ದಿನೇಶ ದೇವಾಡಿಗ ಪ್ರಮುಖರಾದ ನಿತ್ಯಾನಂದ ಸುರಭಿ, ಕೃಷ್ಣ ಭಟ್ರಹಾಡಿ, ಗಿರಿಜ, ರಾಮ ದೇವಾಡಿಗ, ಕೃಷ್ಣ ದೇವಾಡಿಗ, ಜಯರಾಮ ದೇವಾಡಿಗ ಮುಂತಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದರೆ: ಆಳ್ವಾಸ್ ಕಾಲೇಜಿನ ವುಮೆನ್ ಡೆವಲಪ್‌ಮೆಂಟ್ ಸೆಲ್ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ‘ಮಹಿ-2021’ ಮಹಿಳಾ ಸಪ್ತಾಹದಲ್ಲಿ ಮಹಿಳಾ ಆರೋಗ್ಯದ ಕುರಿತು ಅತಿಥಿ ಉಪನ್ಯಾಸ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಆಳ್ವಾಸ್ ನ್ಯಾಚುರೋಪತಿ ಕಾಲೇಜಿನ ಉಪನ್ಯಾಸಕಿ ಡಾ.ಸ್ವಾತಿ ಪಿ.ಎಸ್., ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಪಿಸಿಒಸ್ (ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್) ಬಗ್ಗೆ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು. ಹುಡುಗಿಯರು ತಮ್ಮ ದೇಹದ ಆರೋಗ್ಯ ಹಾಗೂ ಋತುಚಕ್ರದ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು. ಪಿಸಿಒಎಸ್ ಸಮಸ್ಯೆ ಇರುವ ಮಹಿಳೆಯರ ಹಾರ್ಮೋನ್ ಸ್ರವಿಕೆಯಲ್ಲಿ ಏರಿಳಿತಗಳಿದ್ದು ಅದು ಸಮಸ್ಯೆಗಳನ್ನು ಸೃಷ್ಟಿಸಬಹುದು. ಇಂತಹ ಸಂದರ್ಭಗಳಲ್ಲಿ ಹುಡುಗಿಯರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದ ಅವರು ಪಿಸಿಒಎಸ್‌ನ ಲಕ್ಷಣಗಳನ್ನು ವಿವರಿಸಿದರು. ಪಿಸಿಒಎಸ್‌ನಂತಹ ಸಮಸ್ಯೆಗಳುಂಟಾದಾಗ ವಹಿಸಬೇಕಾದ ಎಚ್ಚರಿಕೆಯ ಕ್ರಮಗಳ ಬಗ್ಗೆ ಹೇಳಿದ ಅವರು ಮಹಿಳಾ ಆರೋಗ್ಯದ ಪಂಚತಂತ್ರಗಳನ್ನು ವಿವರಿಸಿದರು. ದಿನನಿತ್ಯ ಯೋಗ-ವ್ಯಾಯಾಮ-ಧ್ಯಾನ, ಪ್ರಾರ್ಥನೆ, ನಿಯಮಿತ ನೀರು ಸೇವನೆ, ನಿಗದಿತ ಆಹಾರ ಹಾಗೂ ವಾರದಲ್ಲೊಂದು ದಿನ ಉಪವಾಸ ದೇಹಾರೋಗ್ಯವನ್ನು ಸರಿಯಾಗಿಡಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಹೇರಂಜಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ತಾಯಂದಿರ ಪಾದ ಪೂಜೆ ನೆರವೇರಿಸುವ ಮೂಲಕ ವಿಶಿಷ್ಠವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಮಹಾಬಲೇಶ್ವರ ಐತಾಳ್, ಗ್ರಾ.ಪಂ. ಸದಸ್ಯೆ ಜಲಜಾಕ್ಷಿ ಗಾಣಿಗ, ಎಸ್ ಡಿಎಂಸಿ ಅಧ್ಯಕ್ಷ ಅರುಣ್ ಕುಮಾರ ಹೆಬ್ಬಾರ್, ಶಾಲಾ ಮುಖ್ಯ ಶಿಕ್ಷಕ ಜಯಾನಂದ ಪಟಗಾರ್, ಶಿಕ್ಷಕಿ ಗೀತಾ, ಗೌರವ ಶಿಕ್ಷಕಿಯರಾದ ಸುಮನಾ, ಚೈತನ್ಯ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವೇದಿಕೆ ಆಶ್ರಯದಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನ – ತರಂಗ 2k21’ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಣಿಪಾಲ ರೋಟರಿ, ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್3182 RC ಅಸಿಸ್‌ಟೆಂಟ್ ಗವರ್ನರ್ ಡಾ. ಬಾಲಕೃಷ್ಣ ಮದ್ದೋಡಿ, ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವವನ್ನು ವಿವರಿಸಿದರು, ಜೊತೆಗೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ದಶರಥರಾಜ್ ಕೆ. ಶೆಟ್ಟಿ, ಅಸೋಸಿಯೇಟ್ ಪ್ರೊಫೆಸರ್, ಎಂ.ಐ.ಟಿ., ಮಣಿಪಾಲ ಇವರು ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ, ಸಿ.ವಿ. ರಾಮನ್ ಕುರಿತು ಹಲವಾರು ವಿಚಾರಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆಗೆ ಶುಭಹಾರೈಸಿ, ಅನ್ವೇಷಣೆ ಬಗ್ಗೆ ವಿವರಿಸಿದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮದ ಸಂಯೋಜಕರಾದ ವನಿತಾ ಜಿ., ಉಪಸ್ಥಿತರಿದ್ದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಚೈತ್ರಾ ಸ್ವಾಗತಿಸಿ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಈಚಿನ ದಿನಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳಲ್ಲಿ ಯುವಜನರು ಮತ್ತು ಅಪ್ರಾಪ್ತ ವಯಸ್ಸಿನವರು ಸಾವುನೋವಿಗೆ ಒಳಗಾಗುತ್ತಿದ್ದಾರೆ. ನಿಯಂತ್ರಣ ಮೀರಿದ ವೇಗ ಮತ್ತು ನಿಯಮ ಮೀರಿದ ಚಾಲನೆ ಇದಕ್ಕೆ ಕಾರಣ. ಪೋಷಕರು ಈ ನಿಟ್ಟಿನಲ್ಲಿ ತಮ್ಮ ಮಕ್ಕಳನ್ನು ನಿಯಂತ್ರಿಸಬೇಕು ಎಂದು ಬೈಂದೂರು ಎಸ್‌ಐ ಸಂಗೀತಾ ಹೇಳಿದರು. ಬೈಂದೂರು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ನಾವುಂದ ಶಾಖೆಯಲ್ಲಿ ಈಚೆಗೆ ಆಯೋಜಿಸಿದ್ದ ಮಾಹಿತಿ ಶಿಬಿರದಲ್ಲಿ ಅವರು ರಸ್ತೆ ಅಪಘಾತ ತಡೆಗೆ ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು. ಕೆಲವು ಅಪಘಾತಗಳನ್ನು ಉದಾಹರಿಸಿದ ಅವರು, ಹೆಚ್ಚು ಅಪಘಾತಗಳಲ್ಲಿ ದ್ವಿಚಕ್ರ ವಾಹನ ಚಾಲಕರು ಅಪಾಯಕ್ಕೀಡಾಗಿದ್ದಾರೆ. ಚಾಲನೆ ಪರವಾನಿಗೆ ಪಡೆಯಲು ಅನರ್ಹರಾದ ಅಪ್ರಾಪ್ತ ವಯೋಮಾನದವರೂ ಇದರಲ್ಲಿ ಸೇರಿರುವುದಕ್ಕೆ ಪೋಷಕರ ನಿರ್ಲಕ್ಷ್ಯವೇ ಕಾರಣ. ಇದಕ್ಕೆ ಕಡಿವಾಣ ಹಾಕಬೇಕು ಎಂದರು. ಆರೋಗ್ಯ ಮಾಹಿತಿ ನೀಡಿದ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಜ್ವರ ಕಾಣಿಸಿಕೊಂಡಾಗ ವಹಿಸಬೇಕಾದ ಎಚ್ಚರ, ಕೋವಿಡ್ ನಿಯಂತ್ರಕ ಲಸಿಕೆ ಪಡೆಯುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯ ಟೈಲರ್ಸ್ ಅಸೋಸಿಯೇಷನ್ ಬೈಂದೂರು ವಲಯದಿಂದ ‘ಟೈಲರ್ಸ್ ದಿನಾಚರಣೆ’ ಕಾರ್ಯಕ್ರಮವು ಇಲ್ಲಿನ ಸೇವಾ ಸಂಗಮ ಶಿಶು ಮಂದಿರದಲ್ಲಿ ನಡೆಯಿತು. ರಾಜ್ಯ ಟೈಲರ್ಸ್ ಅಸೋಸಿಯೇಷನ್ ಬೈಂದೂರು ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ನವೀನ್ ಟೈಲರ್ ಕೊಲ್ಲೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಶು ಮಂದಿರದ ಅಧ್ಯಕ್ಷರಾದ ಮಂಜುನಾಥ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ನಾವು ಜೀವನದಲ್ಲಿ ಕ್ರೀಯಾಶೀಲರಾಗಿರಬೇಕಾದರೆ ಇಂತಹ ಸಂಘ ಸಂಸ್ಥೆಗಳನ್ನು ಸೇರಿಕೊಂಡು ನಮ್ಮ ಪ್ರತಿಭೆಯನ್ನು ಮತ್ತು ಪರಿಶ್ರಮವನ್ನು ಪ್ರಾಮಾಣಿಕವಾಗಿ ತೋರಿಸಿಕೊಂಡಾಗ ಸಂಘ ಬೆಳೆಯುವುದರೊಂದಿಗೆ ನಾವು ಸಾಮಾಜಿಕವಾಗಿ ಬೆಳೆದು ಪ್ರಜ್ಞಾವಂತ ಪ್ರಜೆಯಾಗುವುದಕ್ಕೆ ಆಗುತ್ತದೆ. ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಒಂದು ಸಂಘಟನೆ ಬೇಕು. ಅದುವೇ ನಮ್ಮ ಶಕ್ತಿ ಎಂದು ಹೇಳಿದರು. ಹಾಗೂ ಆರ್ಥಿಕವಾಗಿ ಕಷ್ಟದಲ್ಲಿರುವವರಿಗೆ ಒಂದು ಹೊಲಿಗೆ ಯಂತ್ರವನ್ನು ಕೊಡುವುದಾಗಿ ಹೇಳಿದರು. ಕ್ಷೇತ್ರದ ಕಾರ್ಯದರ್ಶಿ ಲಕ್ಷ್ಮೀ ರಾಘವೇಂದ್ರ ಬಂಕೇಶ್ವರ ಒಂದು ಹೊಲಿಗೆ ಯಂತ್ರ ಕೊಡುವುದಾಗಿ ಹೇಳಿದರು. ಕೋಶಾಧಿಕಾರಿ ಆಶಾ ದಿನೇಶ ಪ್ರಾಸ್ತಾವಿಕ ಮಾತನಾಡಿದರು. ಬೈಂದೂರು ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಮಹಾಬಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿರುವ 45 ರಿಂದ 59 ವರ್ಷದೊಳಗಿನವರಿಗೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ಹಾಕಲಾಗುವುದು. ನೋಂದಾಯಿತ 14 ಖಾಸಗಿ ಆಸ್ಪತ್ರೆಗಳಲ್ಲಿ ನಿಗದಿತ ದರ ಪಾವತಿಸಿ ಲಸಿಕೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಸಂಪೂರ್ಣ ಉಚಿತವಾಗಿದೆ. ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ಡೋಸ್ಗೆ ₹250 ನೀಡಬೇಕು. ಫಲಾನುಭವಿಗಳು ಲಸಿಕೆ ಪಡೆಯಲು ಆನ್‌ಲೈನ್ ಮೂಲಕ ದಿನಾಂಕ ಆಯ್ಕೆಮಾಡಿಕೊಳ್ಳಬಹುದು. ಲಸಿಕೆ ಪಡೆಯಲು ವಬ್‌ಸೈಟ್: https://selfregistration.cowin.gov.in ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದರು. ನೆಟ್ವರ್ಕ್ ಸಮಸ್ಯೆ ಇರುವ ಗ್ರಾಮೀಣ ಭಾಗಗಳಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿ ತೋರಿಸಿ ಲಸಿಕಾ ಕೆಂದ್ರಕ್ಕೆ ಬಂದು ನೋಂದಣಿ ಮಾಡಿಸಿಕೊಂಡು ಅದೇ ದಿನ ಲಸಿಕೆ ಪಡೆಯಬಹುದು. ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟ ಹಾಗೂ 45 ರಿಂದ 59 ವಯಸ್ಸಿನ 1,51,557 ಮಂದಿಗೆ ಲಸಿಕೆ ಹಾಕುವ ಗುರಿ…

Read More