ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗ್ರಾಮ ಪಂಚಾಯತ್ನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ 2020-21ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಮತ್ತು 14ನೇ ಹಣಕಾಸು ಆಯೋಗದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭನದಲ್ಲಿ ನಡೆಯಿತು. ಕುಂದಾಪುರ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕ ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ಪಂಚಾಯತ್ನ ಸಾಮಾಜಿಕ ಪರಿಶೋಧನೆಯ ತಾಲೂಕು ಸಂಯೋಜಕ ಸುಕುಮಾರ ಬಿ. ಮಾಹಿತಿ ನೀಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಜಿಪಂ ಸದಸ್ಯೆ ಶೋಭಾ ಜಿ.ಪುತ್ರನ್, ಗಂಗೊಳ್ಳಿ ಗ್ರಾಪಂ ಸದಸ್ಯರು, ಯೋಜನೆಯ ಫಲಾನುಭವಿಗಳು ಮತ್ತಿತರರು ಉಪಸ್ಥಿತರಿದ್ದರು. ಪಿಡಿಒ ಚಂದ್ರಶೇಖರ ಸ್ವಾಗತಿಸಿದರು. ಕಾರ್ಯದರ್ಶಿ ದಿನೇಶ ಶೇರುಗಾರ್ ವಂದಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಕುಂದಾಪುರ ಮತ್ತು ಕರ್ನಾಟಕ ಪಬ್ಲಿಕ್ ಶಾಲೆ ಕೋಟೇಶ್ವರ ವಿದ್ಯಾರ್ಥಿಗಳ ಸಹಭಾಗಿತ್ವದೊಂದಿಗೆ ಗುಲಾಬಿ ಆಂದೋಲನ ಜಾಥಾ ಕಾರ್ಯಕ್ರಮವು ಶುಕ್ರವಾರ ಕೋಟೇಶ್ವರದಲ್ಲಿ ನಡೆಯಿತು. ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿದರು. ಜಾಥಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳಿಂದ ಒಂದು ಗುಲಾಬಿ ಹೂ ನೀಡುವುದರ ಮೂಲಕ ಪ್ರತಿ ಅಂಗಡಿಯ ಮಾಲೀಕರಿಗೆ ತಂಬಾಕು ತ್ಯಜಿಸಿ, ಜೀವನವನ್ನು ಆಯ್ದಕೊಳ್ಳಿ ಮತ್ತು ತಂಬಾಕು ಮುಕ್ತ ನಾಡನ್ನು ನಿರ್ಮಿಸೋಣ ಎಂಬ ಘೋಷಣೆಯೊಂದಿಗೆ ಅರಿವು ಮೂಡಿಸಲಾಯಿತು. ಸಭಾ ಕಾರ್ಯಕ್ರಮವನ್ನು ಕೋಟೇಶ್ವರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಯಿತು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಪ್ರಾಸ್ತವಿಕವಾಗಿ ಮಾತನಾಡಿ, ತಂಬಾಕು ಸೇವನೆಯು ಜೀವನಕ್ಕೆ ಮಾರಕವಾಗಿದ್ದು, ಅದರಿಂದ ವಿವಿಧ ರೀತಿಯ ಕಾಯಿಲೆಗಳು ಬರುವ ಸಾಧ್ಯತೆ ಇದ್ದು, ಪ್ರಸ್ತುತ ಕೋವಿಡ್ -19 ಕೂಡ ಅತೀ ವೇಗವಾಗಿ ಹರಡಲು ಕಾರಣವಾಗಿದೆ ಎಂದರು. ತಾಲೂಕು…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಇಲ್ಲಿನ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಶಾಖೆಯ ಆಶ್ರಯದಲ್ಲಿ ಜಿ.ನಾರಾಯಣ ಆಚಾರ್ಯ ಅವರ ನಿವಾಸದಲ್ಲಿ ‘ಜನರ ಬಳಿಗೆ ಎಸ್ಸಿಡಿಸಿಸಿ ಬ್ಯಾಂಕ್’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಚಾಲನೆ ನೀಡಿ ಮಾತನಾಡಿದ ಎಸ್ಸಿಡಿಸಿಸಿ ಬ್ಯಾಂಕಿನ ಗಂಗೊಳ್ಳಿ ಶಾಖಾ ಪ್ರಬಂಧಕ ರಾಘವೇಂದ್ರ ಉಡುಪ, ಜನರ ಬಳಿ ತೆರಳಿ ಬ್ಯಾಂಕಿನ ಅಗತ್ಯತೆಗಳನ್ನು ತಿಳಿಸಿ ಜನರಲ್ಲಿ ಆರ್ಥಿಕ ಶಕ್ತಿಯ ವಿಶ್ವಾಸವನ್ನು ಮೂಡಿಸುವ ಉದ್ದೇಶದಿಂದ, ಆರ್ಥಿಕ ಸಂಕಷ್ಟದ ಕಾಲದಲ್ಲಿ ಜನರಿಗೆ ಆರ್ಥಿಕ ಚೈತನ್ಯ ತುಂಬುವ ನಿಟ್ಟಿನಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಉಳಿತಾಯ ಖಾತೆ, ಠೇವಣಿ ಸಂಗ್ರಹ, ಸಾಲ ನೀಡಿಕೆ ಮುಂತಾದ ವಿಚಾರಗಳನ್ನು ಜನರಿಗೆ ತಲುಪಿಸುವ ‘ಜನರ ಬಳಿಗೆ ಎಸ್ಸಿಡಿಸಿಸಿ ಬ್ಯಾಂಕ್’ ಪ್ರಾರಂಭಿಸಲಾಗಿದೆ ಎಂದು ಹೇಳಿದರು. ಬ್ಯಾಂಕಿನ ಆಫೀಸರ ಗಣೇಶ ಭಟ್, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಜಿ.ವಿಶ್ವನಾಥ ಆಚಾರ್ಯ, ಪುರೋಹಿತ ಜಿ.ರಾಘವೇಂದ್ರ ಆಚಾರ್ಯ, ಪತ್ರಕರ್ತ ಬಿ.ರಾಘವೇಂದ್ರ ಪೈ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಕಂಪ್ಯೂಟರ್ ಸೊಸೈಟಿ ಆಫ್ ಇಂಡಿಯಾ ಸಹಭಾಗಿತ್ವದಲ್ಲಿ ನಡೆದ ಅಂತರ ವಿಭಾಗ ಮಟ್ಟದ 2 ದಿನಗಳ ಟೆಕ್ ಸ್ಪರ್ಧೆ ‘ವಾರ್ಟೆಕ್ಸೊ’ ಕಾರ್ಯಕ್ರಮ ನಡೆಯಿತು. ಉದ್ಘಾಟಿಸಿ ಮಾತನಾಡಿದ ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವೀಸ್ನ ನಿರ್ದೇಶಕ ಶ್ರೀವತ್ಸ ನಾಗರಾಜಯ್ಯ, ಕಾಲೇಜು ವಾತಾವರಣದಲ್ಲಿ ಕಲಿತಂತಹ ವಿಚಾರಗಳನ್ನು ಪ್ರಾಯೋಗಿಕವಾಗಿ ಅಳವಡಿಸಿಕೊಳ್ಳದೇ ಹೋದರೆ ಕಲಿತ ವಿಷಯಗಳ ಸದ್ಬಳಕೆ ಸಾಧ್ಯವಿಲ್ಲ. ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಇತರರಿಂದ ಹೇಗೆ ಭಿನ್ನವಾಗಿ ಕಾಣುತ್ತೇವೆ ಎನ್ನುವುದರ ಅರಿವಾಗುತ್ತದೆ ಎಂದು ಹೇಳಿದರು. ಯುದ್ಧದ ಮೊದಲು ಶಸ್ತ್ರಾಸ್ತ್ರಗಳ ಅಭ್ಯಾಸ ಎಷ್ಟು ಅಗತ್ಯವೋ, ಹಾಗೆಯೇ ಯಾವುದೇ ಕೆಲಸದ ಫಲಿತಾಂಶ ಉತ್ತಮವಾಗಬೇಕಾದರೆ ಅದಕ್ಕೆ ಪೂರಕವಾದ ತಯಾರಿ ಮುಖ್ಯವಾಗುತ್ತದೆ. ಕಲಿತ ವಿಷಯಗಳನ್ನು ಜ್ಞಾನವನ್ನಾಗಿ ಪರಿವರ್ತಿಸುವುದು ನಮ್ಮ ಕೈಯಲ್ಲೇ ಇದೆ. ಆದ್ದರಿಂದ ಪ್ರತಿಯೊಬ್ಬರು ವಿಭಿನ್ನ ಯೋಚನೆಗಳಿಂದ ಸದಾ ಕ್ರಿಯಾಶೀಲರಾಗಿರಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಮ್ಯಾನೆಜ್ಮೆಂಟ್ ಟ್ರಸ್ಟಿ ವಿವೇಕ ಆಳ್ವ ಮಾತನಾಡಿ, ಕೊರೊನಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲೆಯಲ್ಲಿCOTPA 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ಕೋಟೇಶ್ವರ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 17 ಪ್ರಕರಣ ದಾಖಲಿಸಿ ರೂ. 1700/- ದಂಡ ವಸೂಲಿ ಮಾಡಲಾಯಿತು. ಅದರಂತೆ ಸೆಕ್ಷನ್ 4, 6 (ಎ) ಮತ್ತು 6(ಬಿ) ನಾಮಫಲಕಗಳನ್ನು ಸದರಿ ದಾಳಿಯಲ್ಲಿ ವಿತರಿಸಲಾಯಿತು. ದಾಳಿಯಲ್ಲಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ, ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಉಮೇಶ್ ನಾಯಕ್, ಕುಂದಾಪುರ ತಾಲೂಕು ಕಾರ್ಮಿಕ ನಿರೀಕ್ಷಕ ಪ್ರಸನ್ನ, ಹಿರಿಯ ಆರೋಗ್ಯಸಹಾಯಕ ರಮೇಶ್ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ದತ್ತಾತ್ರೇಯ, ಜಿಲ್ಲಾ ರಾಷ್ಟೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ, ಎನ್.ಟಿ.ಸಿ.ಪಿ. ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜಕಾರ್ಯಕರ್ತೆ ಶೈಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಯಾವುದೇ ರೀತಿಯ ಪಕ್ಷಿಗಳಲ್ಲಿ ಇದುವರೆಗೆ ಹಕ್ಕಿಜ್ವರದ ಸೋಂಕು ಕಂಡು ಬಂದಿರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಹಕ್ಕಿಜ್ವರದ ಕುರಿತು ಆತಂಕ ಪಡುವ ಅಗತ್ಯವಿಲ್ಲ. ಆದರೆ ಹಕ್ಕಿ ಜ್ವರ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಕ್ಕಿ ಜ್ವರದ ಕುರಿತು ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಯಲ್ಲಿ ಮಾತನಾಡಿದರು. ಹಕ್ಕಿ ಜ್ವರವು ಕೇರಳ, ಗುಜರಾತ್ ಮುಂತಾದ ರಾಜ್ಯಗಳಲ್ಲಿ ಕಂಡುಬಂದಿದೆ ಎಂದು ವರದಿಯಾದ ಹಿನ್ನಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಬೇಕು. ಪಶುಪಾಲನೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಕೋಳಿ ಫಾರಂಗಳಿಗೆ ಭೇಟಿ ನೀಡಿ ಕೋಳಿಗಳ ಆರೋಗ್ಯದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಡಿಸಿ ಸೂಚಿಸಿದರು. ಹಕ್ಕಿ ಜ್ವರವು ವೈರಾಣುವಿನಿಂದ ಕಾಣಿಸಿಕೊಳ್ಳಲಿದ್ದು, ಈ ಸೋಂಕುಗಳಿಗೆ ಮಕ್ಕಳು ಹಾಗೂ ವಯಸ್ಕರು ಹೆಚ್ಚಾಗಿ ಒಳಗಾಗುತ್ತಾರೆ. ಸೋಂಕಿನಿಂದ ಜ್ವರ, ಶೀತ, ತಲೆನೋವು, ಮೈಕೈನೋವು, ಗಂಟಲು ನೋವು, ಕೆಮ್ಮು, ಉಸಿರಾಟದ ತೊಂದರೆಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ವಿಧಾನಪರಿಷತ್ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಹಿರಿಯ ಸಹೋದರ ನಿವೃತ್ತ ವಿಜಯಾ ಬ್ಯಾಂಕ್ ಡಿಜಿಎಂ ಕೆ. ಸುಧಾಕರ ಶೆಟ್ಟಿ (81) ಅಲ್ಪಕಾಲದ ಅಸೌಖ್ಯದಿಂದಾಗಿ ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶುಕ್ರವಾರ ರಾತ್ರಿ ಹೈಕಾಡಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಿತು. ಮೃತರು ಪತ್ನಿ ಸುಜಯಾ ಎಸ್.ಶೆಟ್ಟಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಗತಿಪರ ಕೃಷಿಕ ಉದ್ಯಮಿ ಅಮಾಸೆಬೈಲು ಕಿರಣ್ ಕೊಡ್ಗಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷಗಾಗಿ ನೇಮಕಗೊಂಡಿದ್ದಾರೆ. ರಾಜ್ಯ ಮೂರನೇ ಹಣಕಾಸು ಅನುಷ್ಠಾನ ಸಮಿತಿ ಮಾಜಿ ಅಧ್ಯಕ್ಷ ಎ.ಜಿ.ಕೊಡ್ಗಿ ಪುತ್ರರಾಗಿದ್ದು, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಶಿಪಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಿರಣ್ ಕೊಡ್ಗಿ ಅವರನ್ನು ನೇಮಕ ಮಾಡಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ಲಸಿಕೆಯನ್ನು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕಿದ್ದು, ಈ ಕುರಿತಂತೆ ಜಿಲ್ಲೆಯಲ್ಲಿ ಸಂಪೂರ್ಣ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು ಶುಕ್ರವಾರ ಉಡುಪಿಯ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪ÷ತ್ರೆಯಲ್ಲಿ ನಡೆದ ಕೋವಿಡ್-19 ಲಸಿಕಾ ಕಾರ್ಯಕ್ರಮದ ಡ್ರೈರನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೋವಿಡ್ ಲಸಿಕೆಯನ್ನು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ನೀಢಬೇಕಿದ್ದು, ಇದಕ್ಕಾಗಿ ಜಿಲ್ಲೆಯ 105 ಸರಕಾರಿ ಮತ್ತು 762 ಖಾಸಗಿ ಆರೋಗ್ಯ ಸಂಸ್ಥೆಗಳ, 5688 ಸರಕಾರಿ ಮತ್ತು 13874 ಖಾಸಗಿ ಆರೋಗ್ಯ ಸಿಬ್ಬಂದಿ ಸೇರಿದಂತೆ ಒಟ್ಟು 19562 ಫಲಾನುಭವಿಗಳನ್ನು ನೊಂದಣಿ ಮಾಡಿದ್ದು, ಇವರಿಗೆ ಲಸಿಕೆ ನೀಡಲು ಸಂಪೂರ್ಣ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಲಸಿಕೆ ನೀಡುವ ಸಿಬ್ಬಂದಿಗಳಿಗೆ ತರಬೇತಿ ಹಾಗೂ ಅಗತ್ಯ ಕೊಠಡಿಗಳ ನಿರ್ಮಾಣ ಮಾಡಿಕೊಂಡಿದ್ದು, ಲಸಿಕೆ ಸಾಗಾಟ, ವಿತರಣೆಗೆ ಅಗತ್ಯ ಯೋಜನೆಗಳನ್ನೂ ಸಹ ರೂಪಿಸಲಾಗಿದೆ ಎಂದು ಜಿ.ಜಗದೀಶ್ ಹೇಳಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಫೈವ್ ಕರ್ನಾಟಕ ಎನ್ಸಿಸಿ ನೇವಲ್ ಯುನಿಟ್ ಮಂಗಳೂರು ಹಾಗೂ ಆಳ್ವಾಸ್ ಕಾಲೇಜಿನ ಎನ್ಸಿಸಿ ನೇವಲ್ ವಿಂಗ್ನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಐದು ದಿನದ ಕೆಡೆಟ್ ಕ್ಯಾಂಪ್ನ ಸಮಾರೋಪ ಸಮಾರಂಭ ಜರುಗಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಶಿಸ್ತಿನ ವಾತಾವರಣ ಕಠಿಣ ಸನ್ನಿವೇಶವೆಂದು ಭಾವಿಸದೆ, ಅದು ನಮ್ಮ ಭವಿಷ್ಯವನ್ನು ಸತ್ಪತದಲ್ಲಿ ಕೊಂಡೊಯ್ಯಲು ಇರುವ ಉತ್ತಮ ಮಾರ್ಗವೆಂದು ತಿಳಿಯಿರಿ ಎಂದು ತಿಳಿಸಿದರು. ಸಾವಧಾನ್ ಎನ್ನುವ ಪೇರೆಡ್ ಕಾಷನ್ ಅಲ್ಪಕಾಲಿಕವಾಗಿರಬಾರದು. ಅದು ದೀರ್ಘ ಕಾಲದವರೆಗೆ ನಮ್ಮ ಮನದಲ್ಲಿರಬೇಕು. ಜೀವನದಲ್ಲಿ ಯಾವುದನ್ನು ಕಡೆಗಣಿಸದೆ, ಸಿಕ್ಕಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದರು. ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಬಾಲಕೃಷ್ಣ ಮಾತನಾಡಿ ವಿದ್ಯಾರ್ಥಿಗಳು ನಮ್ಮ ದೇಶದ ಆಸ್ತಿ ನಿಮ್ಮ ವಿಚಾರಗಳನ್ನ ಇನ್ನು ಎತ್ತರಕ್ಕೆ ಬೆಳೆಸಿಕೊಳ್ಳುವಂತರಾಗಿ. ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎನ್ಸಿಸಿ ನೇವಲ್ ವಿಂಗ್ನ ವಾರ್ಷಿಕ ನಿಯತಕಾಲಿಕೆ ನಾವಿಕ 2020ಬಿಡುಗಡೆ ಮಾಡಲಾಯಿತು. ಎನ್ಸಿಸಿ ನೇವಲ್ ವಿಂಗ್ನಲ್ಲಿ ಉತ್ತಮ ಕಾರ್ಯಕ್ಷಮತೆ…
