ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ, ಉದ್ಯೋಗದ ಹಕ್ಕಿಗಾಗಿ ಡಿವೈಎಫ್ಐ ರಾಜ್ಯ ಸಮಿತಿಯ ಕರೆಯ ಮೇರೆಗೆ ರಾಜ್ಯಾದ್ಯಂತ ಜರಗಿದ ಯುವಜನರ ಪ್ರತಿಭಟನೆಯ ಭಾಗವಾಗಿ ಬೈಂದೂರು ತಾಲೂಕು ಡಿವೈಎಫ್ಐ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು. ಡಿವೈಎಫ್ಐ ಬೈಂದೂರು ತಾಲೂಕು ಸಮಿತಿ ಮುಖಂಡರಾದ ವಿಜಯ. ಬಿ. ಕಿರಿಮಂಜೇಶ್ವರ, ಜೊಕಿಮ್ ಗ್ರಾಸ್, ಯಡ್ತರೆ,ಹರೀಶ್ ಬೈಂದೂರು, ಚಾಕೊ ಥೋಮಸ್ ಬೈಂದೂರು, ಉದಯ ಗಾಣಿಗ ಮೊಗೇರಿ, ರೋನಿ ಶಿರೂರು, ನಾಗರತ್ನ ಪಡುವರಿ, ಭವಾನಿ ಹೇನಬೇರು, ಪಡುವರಿ, ರತ್ನಿ ಪಡುವರಿ, ಲಕ್ಷ್ಮಿ ಯಡ್ತರೆ, ಬಾಬು ಕೆ ದೇವಾಡಿಗ, ಉಪ್ಪುಂದ, ರವೀಂದ್ರ ಮರಾಠಿ ಯಳಜೀತ್ ಮೊದಲಾದವರು ಹೋರಾಟದ ನೇತೃತ್ವ ವಹಿಸಿದ್ದರು. ಕಾಮಿ೯ಕ ಮುಖಂಡರಾದ ಗಣೇಶ ತೊಂಡೆಮಕ್ಕಿ, ರೊನಾಲ್ಡ್ ರಾಜೇಶ್ ಕ್ವಾಡ್ರಸ್, ಗಣೇಶ ಮೊಗವೀರ ಬೈಂದೂರು, ವೆಂಕಟೇಶ್ ಕೋಣಿ, ಸಾವಿತ್ರಿ ಹೆಮ್ಮಾಡಿ, ಸರಸ್ವತಿ ಬೈಂದೂರು, ಲಕ್ಷ್ಮಿ ಯಡ್ತರೆ, ಡಾ. ಬಿ. ವಿ. ಬೇಬಿ ಹಾಲ್ಕಲ್ ಮೊದಲಾದವರು ಇದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮರವಂತೆಯ ಸೇವಾ ಸಾಂಸ್ಕೃತಿಕ ವೇದಿಕೆ ಸಾಧನಾ ಮತ್ತು ಸಾಧನಾ ಜನಾರ್ದನ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಭಾನುವಾರ ಸಾಧನಾ ಸಮುದಾಯ ಭವನದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ನಡೆಯಿತು. ಸಾಧನಾ ಅಧ್ಯಕ್ಷ ಚಂದ್ರ ಬಿಲ್ಲವ ರಾಷ್ಟ್ರಧ್ವಜ ಅರಳಿಸಿ, ಬಳಿಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ದೇಶ ವಿದೇಶಗಳಲ್ಲಿ ನಡೆದ ಯೋಗ ಸ್ಪರ್ಧೆಗಳಲ್ಲಿ ಉತ್ಕೃಷ್ಟತೆ ಮೆರೆದು ಚಿನ್ನ ಬೆಳ್ಳಿ ಗೆದ್ದುಕೊಂಡಿರುವುದಲ್ಲದೆ ಈಚೆಗೆ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ದಾಖಲೆಯಾದ ಮತ್ತು ಫ್ರೈಡ್ ಆಫ್ ಇಂಡಿಯ ಪ್ರಶಸ್ತಿ ಪಡೆದ ಬಾಲಕಿ ಧನ್ವಿ ಮರವಂತೆ ಅವರನ್ನು ಸನ್ಮಾನಿಸಲಾಯಿತು. ಜತೀಂದ್ರ ಮರವಂತೆ ಧನ್ವಿಯನ್ನು ಪರಿಚಯಿಸಿದರು. ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಮರವಂತೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅನುರಾಗ್ ಆರ್. ಕೆ, ಅಂಕಿತಾ ಪೂಜಾರಿ, ಪ್ರಥ್ವಿ ಪೂಜಾರಿ ಅವರನ್ನು ಪುರಸ್ಕರಿಸಲಾಯಿತು. ಸಾಧನಾ ಸ್ಥಾಪಕಾಧ್ಯಕ್ಷ ಎಸ್. ಜನಾರ್ದನ ಮರವಂತೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕೋಶಾಧಿಕಾರಿ ಕೃಷ್ಣಯ್ಯ ಆಚಾರ್ಯ, ಸದಸ್ಯರು, ವಿದ್ಯಾರ್ಥಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರಿಯ ಯಕ್ಷಗಾನ ಕಲಾವಿದರಾದ ಚಿತ್ತೂರು ನಾರಾಯಣ ದೇವಾಡಿಗ (70) ಬೈಂದೂರಿನ ಅವರ ಪುತ್ರಿಯ ಮನೆಯಲ್ಲಿ ನಿಧನರಾದರು. ಕುಂದಾಪುರ ತಾಲೂಕಿನ ಹಳ್ನಾಡಿನ ದೇವಾಡಿಗರು ತನ್ನ ಹದಿನಾಲ್ಕನೇ ವಯಸ್ಸಿನಲ್ಲಿ ಗೆಜ್ಜೆ ಕಟ್ಟಿ, ಉಡುಪಿ ಯಕ್ಷಗಾನ ಕೇಂದ್ರದಲ್ಲಿ ಗುರು ವೀರಭದ್ರ ನಾಯಕ, ನೀಲಾವರ ರಾಮಕೃಷ್ಣಯ್ಯ, ಹಿರಿಯಡ್ಕ ಗೋಪಾಲರಾಯರ ಗರಡಿಯಲ್ಲಿ ಪಳಗಿ ಸ್ತ್ರೀವೇಷಧಾರಿಯಾಗಿ ಮೇಳ ಸೇರಿದ ಅವರು ಕಮಲಶಿಲೆ, ಸಾಲಿಗ್ರಾಮ, ಹಳವಾಡಿ, ಗೋಳಿಗರಡಿ, ಮಾರಣಕಟ್ಟೆ, ಸೌಕೂರು, ಮಡಾಮಕ್ಕಿ, ಪೆರ್ಡೂರು ಹಾಗು ಹಾಲಾಡಿ ಮೇಳಗಳಲ್ಲಿ ಸುದೀರ್ಘ ಐದು ದಶಕಗಳ ಕಲಾಸೇವೆ ಗೈದಿರುತ್ತಾರೆ. ಕಳೆದೆರಡು ವರ್ಷಗಳಲ್ಲಿ ಅಸೌಖ್ಯದಿಂದಾಗಿ ಮನೆಯಲ್ಲಿದ್ದು ಅದರ ಪೂರ್ವದಲ್ಲಿ ಮಾರಣಕಟ್ಟೆ ಮೇಳದಲ್ಲಿ ಕಲಾಸೇವೆ ಮಾಡಿದ್ದರು. ಅಂಬೆ, ಮೀನಾಕ್ಷಿ, ದ್ರೌಪದಿ, ದಮಯಂತಿ, ಚಿತ್ರಾಂಗದೆ ಮೊದಲಾದ ಪೌರಾಣಿಕ ಸ್ತ್ರೀಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿದ್ದಾರೆ. ಕೃಷ್ಣ, ಭೀಷ್ಮ, ರಾಮ, ರಾವಣ, ಈಶ್ವರ, ಅರ್ಜುನ ಮೊದಲಾದ ಪುರುಷ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿದ ಇವರ ಕಲಾಸಾಧನೆಗೆ ಹಲವು ಪುರಸ್ಕಾರಗಳು ಅರಸಿ ಬಂದಿವೆ. ನಾಲ್ಕು ವರ್ಷಗಳ ಹಿಂದೆ ಸಂಸ್ಥೆಯು ಶಿರಿಯಾರ ಮಂಜು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೊಸಾಡು ಭಗತ್ ನಗರದಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಶ್ರೀ ವರಲಕ್ಷ್ಮೀ ನಿಲಯ’ ನೂತನ ಗೃಹದ ಹಸ್ತಾಂತರ ಸಮಾರಂಭ ಭಾನುವಾರ ಜರುಗಿತು. ಉದ್ಯಮಿ ಹಾಗೂ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರ ತಂದೆ ತಾಯಿ ಬಾಬು ಪೂಜಾರಿ ಹಾಗೂ ಮಂಜಮ್ಮ ದಂಪತಿಗಳು ನೂತನ ಗೃಹವನ್ನು ಉದ್ಘಾಟಿಸಿದರು. ಗೋವಿಂದ ಬಾಬು ಪೂಜಾರಿ ಅವರು ಪುಷ್ಪಾ ಉಲ್ಲಾಸ್ ದಂಪತಿಗಳಿಗೆ ಮನೆಯ ಬಿಗದ ಕೈ ಹಸ್ತಾಂತರಿಸಿದರು. ಶ್ರೀ ವರಲಕ್ಷ್ಮೀ ಈ ಸಂದರ್ಭ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಟ್ರಸ್ಟೀ ಮೂಲಕ ನಿರ್ಮಿಸಲಾಗಿರುವ ನಾಲ್ಕನೇ ಮನೆ ಇದಾಗಿದ್ದು, ಇನ್ನು ಒಂದು ಮನೆಗಳು ನಿರ್ಮಾಣ ಹಂತದಲ್ಲಿದೆ. ಆರೋಗ್ಯ ಸೇವೆ, ಅಗತ್ಯವುಳ್ಳವರಿಗೆ ನೆರವು, ಪುಡ್ ಕಿಟ್ ವಿತರಣೆ ಸೇರಿದಂತೆ ಹತ್ತಾರು ಸಾಮಾಜಿಕ ಕಾರ್ಯಗಳನ್ನು ಟ್ರಸ್ಟ್ ಮೂಲಕ ಮಾಡಲಾಗುತ್ತಿದೆ ಎಂದರು. ಗೋವಿಂದ ಬಾಬು ಪೂಜಾರಿ ಅವರನ್ನು ಪುಷ್ಪಾ ಉಲ್ಲಾಸ್ ದಂಪತಿಗಳು ಹಾಗೂ ಸೇವಾ ಸಂಕಲ್ಪ ತಂಡದಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ/ಬೈಂದೂರು: ಕುಂದಾಪುರ ಹಾಗೂ ಬೈಂದೂರು ತಾಲೂಕು ಆಡಳಿತದ ವತಿಯಿಂದ ತಾಲೂಕು ಕೇಂದ್ರಗಳಲ್ಲಿ ಭಾನುವಾರ 75ನೇ ಸ್ವಾತಂತ್ರ್ಯೋತ್ಸವ ಆಚರಿಸಿಲಾಯಿತು. ಕುಂದಾಪುರ ಗಾಂಧಿ ಮೈದಾನದಲ್ಲಿ ಉಪ ವಿಭಾಗಾಧಿಕಾರಿ ರಾಜು ಅವರು ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿ ಹೋರಾಟದ ಉತ್ಸಾಹ, ತ್ಯಾಗ ಭಾವನೆಗಳ ಮೂಲಕ ಹುತಾತ್ಮರನ್ನು ನೆನೆಯುತ್ತ, ಸವಾಲುಗಳನ್ನೆದುರಿಸುವ ಅಗತ್ಯತೆ ಹಿಂದೆಂದಿಗಿಂತಲೂ ಈಗ ಅಗತ್ಯವಾಗಿದೆ. ಪ್ರಧಾನಿಯವರ ಆಶಯದಂತೆ, 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯು 75 ರ ಯೋಜನೆಗಳು, 75ರ ಸಾಧನೆಗಳು, 75ರ ಕ್ರಿಯೆಗಳು ಹಾಗೂ 75ರ ಪರಿಹಾರ ಎನ್ನುವ ಐದು ಅಂಶಗಳತ್ತ ನಮ್ಮ ಮುಂದಿನ ರೂಪುರೇಶೆಯಾಗಿರುತ್ತದೆ. ಸ್ವಾತಂತ್ರ್ಯದ ಆಶಯವನ್ನು ಸರ್ವರಿಗೂ ತಲುಪಿಸುವ ನಿಟ್ಟಿನಲ್ಲಿ ಇನ್ನಷ್ಟು ದೃಢತೆಯ ಹೆಜ್ಜೆಗಳನ್ನಿಡುವ, ಸಂಕಲ್ಪ ತೊಡುವ ದಿನ ಇದಾಗಿದೆ ಎಂದವರು ಹೇಳಿದರು. ಗಾಂಧೀಜಿ- ನೇತಾಜಿ, ಪಟೇಲ್- ಸಾವರ್ಕರ್ ರಂತಹ ಮಹಾನ್ ನಾಯಕರ ಮುಂದಾಳ್ವತದಲ್ಲಿ ಕರಾವಳಿಯು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಉಮಾಬಾಯಿ ಅವರು ಮಹತ್ವದ ಪಾತ್ರ ವಹಿಸಿದ್ದರು. ತಿಲಕ್ರಿಂದ ಪ್ರೇರಿತರಾಗಿ, ಸೇವಾದಳದ ಮುಖ್ಯಸ್ಥರಾಗಿ, ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಮಾಜಿಕ ಕೆಲಸಗಳು ಆಗಬೇಕೆಂದರೆ ದಾನಿಗಳ ಸಹಕಾರ ಅತ್ಯಗತ್ಯ ಮುಳ್ಳಿಕಟ್ಟೆ ಸರ್ಕಲ್ ಎನ್ನುವುದು ಅಪಾಯಕಾರಿ ಜಂಕ್ಷನ್ ಆಗಿದೆ ಸಾರ್ವಜನಿಕರು ಮತ್ತು ವಾಹನ ಸವಾರರ ಹಿತ ದೃಷ್ಟಿಯಿಂದ ಬ್ಯಾರೆಕೇಡ್ ವ್ಯವಸ್ಥೆ ಮಾಡಿರುವುದು ತುಂಬಾ ಉತ್ತಮವಾದ ಕೆಲಸವಾಗಿದೆ ಎಂದು ಹೆಮ್ಮಾಡಿ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುಮಾರ ಶೆಟ್ಟಿ ಹಕ್ಲಾಡಿ ಹೇಳಿದರು. ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಶನಿವಾರ ನಡೆದ ಬ್ಯಾರಿಕೇಡ್ ವಿತರಣೆ ಮತ್ತು ಸನ್ಮಾನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ನಿ, ಹೆಮ್ಮಾಡಿ (ಹೊಸಾಡು ಶಾಖೆ), ಗ್ರಾಮ ಪಂಚಾಯತ್ ಹೊಸಾಡು, ನಗು ಗ್ರೂಪ್ಸ್ ಮುಳ್ಳಿಕಟ್ಟೆ, ಹೇರಿಯ. ಪಿ ನಾಯ್ಕ್ ಮತ್ತು ಮಕ್ಕಳು ಮುಳ್ಳಿಕಟ್ಟೆ, ಪ್ರಮೋದ ಆಚಾರ್ಯ ಕಾಳಮ್ಮ ವೆಲ್ಡಿಂಗ್ ವರ್ಕ್ಸ್ ಮುಳ್ಳಿಕಟ್ಟೆ, ಸತೀಶ ಶೆಟ್ಟಿ ಮೂಕಾಂಬಿಕಾ ಆಲೂರು, ಸುಪ್ರಭಾ ಫ್ಯುಯೆಲ್ಸ್ ಮತ್ತು ಸರ್ವಿಸ್ ಮುಳ್ಳಿಕಟ್ಟೆ ಅವರು ಕೊಡಮಾಡಿದ ಏಳು ಬ್ಯಾರಿಕೇಡ್ಗಳನ್ನು ಗೋವಿಂದ ಬಾಬು ಪೂಜಾರಿ ಅವರು ಗಂಗೊಳ್ಳಿ ಪೊಲೀಸ್ ಠಾಣೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬ್ಲ್ಯಾಕ್ ಫಂಗಸ್ಗೆ ಔಷಧಿಯನ್ನು ಸಂಶೋಧಿಸಿ ಸಮಾಜಕ್ಕೆ ಸಮರ್ಪಿಸಿದ ಗಂಗೊಳ್ಳಿ ಮೂಲದ ಬಿ.ಶ್ರೀಕಾಂತ ಪೈ ಮುಂಬೈ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ಪರವಾಗಿ ಗೌರವಿಸಿ ಅಭಿನಂದಿಸಲಾಯಿತು. ಗಂಗೊಳ್ಳಿಯ ಸ್ವಗೃಹದಲ್ಲಿ ಬಿ. ಶ್ರೀಕಾಂತ ಪೈ ಅವರನ್ನು ಭೇಟಿ ಮಾಡಿದ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ., ಕಾರ್ಯದರ್ಶಿ ನಾರಾಯಣ ಇ.ನಾಯ್ಕ್ ಹಾಗೂ ಜೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್ ಹಾಗೂ ರೋಟರಿ ಸದಸ್ಯರು ಸನ್ಮಾನಿಸಿ ಗೌರವಿಸಿದರು. ಗಂಗೊಳ್ಳಿ ರೋಟರಿ ಕ್ಲಬ್ನ ಮಾಜಿ ಅಧ್ಯಕ್ಷರಾದ ಉಮೇಸ ಮೇಸ್ತ, ಜನಾರ್ಧನ ಪೂಜಾರಿ, ಪ್ರದೀಪ ಡಿ.ಕೆ., ಬಿ.ಲಕ್ಷ್ಮೀಕಾಂತ ಮಡಿವಾಳ, ವಾಸುದೇವ ಶೇರುಗಾರ್, ನಿಯೋಜಿತ ಅಧ್ಯಕ್ಷೆ ಸುಗುಣಾ ಆರ್.ಕೆ., ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ರೋಟರಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.35 ರಷ್ಟು ಅಂಕಗಳನ್ನು ಪಡೆದಿರುವ ಅರ್ಹ ಆಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಸರ್ಕಾರಿ ಪಾಲಿಟೆಕ್ನಿಕ್ ಉಡುಪಿಯಲ್ಲಿ ಪ್ರಥಮ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಆಫ್ಲೈನ್ ಪ್ರಕಾರ ಆಗಸ್ಟ್ 12 ರಿಂದ ಆಗಸ್ಟ್ 31ರ ತನಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2570244 ನ್ನು ಸಂಪರ್ಕಿಸಬಹುದಾಗಿದೆಂದು ಸರ್ಕಾರಿ ಪಾಲಿಟೆಕ್ನಿಕ್ ಉಡುಪಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿವಿದ ತೋಟಗಾರಿಕೆ ಬೆಳೆಗಳ ಸಂಸ್ಕರಣಾ ಘಟಕಗಳ ಸ್ಥಾಪನೆ, ಉನ್ನತೀಕರಣಕ್ಕೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಬಹುದಾಗಿದ್ದು, ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ವೈಯಕ್ತಿಕ ಕಿರು ಆಹಾರ ಸಂಸ್ಕರಣಾ ಘಟಕಗಳ ಉನ್ನತೀಕರಣಕ್ಕೆ ಒಟ್ಟು ವೆಚ್ಚದ ಶೇ. 35 ರಂತೆ ಗರಿಷ್ಟ ರೂ. 10 ಲಕ್ಷ ಸಹಾಯಧನ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೊಸದಾಗಿ ನಿರ್ಮಾಣ ಮಾಡುವ ತೋಟಗಾರಿಕೆ ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕಗಳಿಗೆ ಒಟ್ಟು ವೆಚ್ಚದ ಶೇ. 40 ರಂತೆ ಗರಿಷ್ಟ ರೂ. 10 ಲಕ್ಷ ಸಹಾಯಧನ. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ದ್ವಿತಿಯ ಹಂತದ ಸಂಸ್ಕರಣೆಗಳನ್ನು ಕೈಗೊಳ್ಳುವ ರೂ. 50 ಲಕ್ಷಕ್ಕಿಂತ ಅಧಿಕ ಬಂಡವಾಳವನ್ನು ತೊಡಗಿಸಿರುವ ಸಂಸ್ಕರಣಾ ಘಟಕಗಳಿಗೆ ಒಟ್ಟು ವೆಚ್ಚದ ಶೇ. 25 ರಂತೆ ಗರಿಷ್ಟ ರೂ. 50 ಲಕ್ಷ ಸಹಾಯಧನ ಕೃಷಿ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಧಿಯಡಿ ಪ್ರಾಥಮಿಕ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಮದ್ಯಮಾವದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಒಂದೂವರೆ ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ಆಕ್ಸಿಜನ್ ಸಿಲಿಂಡರ್ ಅಳವಡಿಸಿ ಉಸಿರಾಡುತ್ತಿರುವ ಇಲ್ಲಿನ ಹಟ್ಟಿಯಂಗಡಿ ಹನೆಮನೆ ಬಚ್ಚಿ ಎನ್ನುವರಿಗೆ ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದು, ಸಹೃದಯಿ ದಾನಿಗಳ ಸಹಕಾರದ ಅಗತ್ಯವಿದೆ. ಬಚ್ಚಿ ಅವರನ್ನು ಪರಿಶೀಲಿಸಿದ ವೈದ್ಯರು ಶ್ವಾಸಕೋಶದಲ್ಲಿ ನೀರು ನಿಲ್ಲುತ್ತಿದ್ದು, ಸಂಪೂರ್ಣ ವಿಫಲವಾಗಿದ್ದರಿಂದ ಉಸಿರಾಟದ ಸಮಸ್ಯೆ ಉಂಟಾಗಿದೆ. ಉಸಿರಾಟ ಸಮಸ್ಯೆ ಹೃದಯಕ್ಕೆ ಒತ್ತಡ ಹಾಕುತ್ತಿದೆ. ಬ್ರೈನ್ ಟೂಮರ್ ಇದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಹೋಗಲು ಸೂಚಿಸಿದ್ದಾರೆ. ನೆರವಿಗೆ ಮನವಿ: ಚಿಕ್ಕ ಕುಟುಂಬದಲ್ಲಿ ನಾಲ್ಕು ಜನ ಸದಸ್ಯರಿದ್ದು, ಮಗಳ ಕೂಲಿಯೇ ಮನೆಯ ಜೀವನಾಧಾರವಾಗಿದ್ದು, ಬಚ್ಚಿ ಪತಿ ಕೂಡಾ ಅಡಕೆ ಮರದಿಂದ ಬಿದ್ದು ಕಾಲು ಆಪರೇಶನ್ ಆಗಿದ್ದರಿಂದ ಕೆಲಸ ಮಾಡಲು ಆಗುತ್ತಿಲ್ಲ. ಪ್ರಸ್ತುತ ಹೆಚ್ಚಿನ ಚಿಕಿತ್ಸೆ ಕೊಡಿಸಲು ಹಣಕಾಸಿನ ತೊಂದರೆಯಿಂದ ಪ್ರಸಕ್ತ ಬಚ್ಚಿ ಅವರಿಗೆ ಮನೆಯಲ್ಲಿಯೇ ಆರೈಕೆ ಮಾಡಲಾಗುತ್ತಿದೆ, ಮನೆಯಲ್ಲಿಯೇ ಆಕ್ಸಿಜನ್ ನಿರಂತರ 24 ಗಂಟೆ ನೀಡಲು ವೈದ್ಯರು ಕಡ್ಡಾಯ ಸೂಚಿಸಿದ್ದಾರೆ. ಆಕ್ಸಿಜನ್ ಪೂರೈಕೆಗೆ…
