ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಂಚಮ ಪುಣ್ಯತಿಥಿ ಆರಾಧನಾ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಬೆಳಿಗ್ಗೆ ಸ್ತೋತ್ರ ಪಠಣ, ಮಧ್ಯಾಹ್ನ ಶ್ರೀದೇವರಿಗೆ ಮಹಾಮಂಗಳಾರತಿ, ಗುರುಪೂಜೆ, ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪ ಅರ್ಚನೆ, ಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ದೇವಳದ ತಾಂತ್ರಿಕ ಜಿ.ರಾಘವೇಂದ್ರ ಎನ್.ಆಚಾರ್ಯ ಮತ್ತು ದೇವಳದ ಆಡಳಿತ ಮಂಡಳಿ ಸದಸ್ಯ ಡಾ.ಕಾಶೀನಾಥ ಪೈ ಶ್ರೀಗಳ ಗುಣಗಾನ ಮಾಡಿ ನುಡಿನಮನ ಸಲ್ಲಿಸಿದರು. ದೇವಳದ ಪ್ರಧಾನ ಅರ್ಚಕ ಜಿ.ಮೋಹನದಾಸ ಭಟ್ ಮತ್ತು ಜಿ.ಪ್ರದೀಪ ಭಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿತು. ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಭಜಕರು ಶ್ರೀಗಳ ಆರಾಧಾನ ಮಹೋತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದೇಶಗಳಲ್ಲಿ ಈಗ ಕೊರೊನಾದ ಎರಡನೇ ಅಲೆ ಕಾಡುತ್ತಿದೆ. ನಮ್ಮಲ್ಲಿ ಅದರ ವಿರುದ್ಧ ಲಸಿಕೆ ನೀಡುವ ಕಾರ್ಯ ಆರಂಭವಾಗಿದೆ. ಹಾಗೆಂದು ಯಾರೂ ಮೈಮರೆಯಬಾರದು’ ಎಂದು ಕೋವಿಡ್ ನೋಡಲ್ ಅಧಿಕಾರಿ ಡಾ. ಪ್ರೇಮಾನಂದ ಮನವಿ ಮಾಡಿದರು. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಕೋವಿಡ್-19 ಪ್ರಥಮ ಹಂತದ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಲಸಿಕೆಯ ಮೊದಲ ಡೋಸ್ ಪಡೆದ ಅವರು ಕೋವಿಡ್ ಲಸಿಕೆ ಪಡೆಯುವುದು ಒಂದು ಒಳ್ಳೆಯ ಅನುಭವ. ವದಂತಿಗಳಿಗೆ ಕಿವಿಗೊಡದೆ, ದೇಶಿ ಲಸಿಕೆ ಮೇಲೆ ವಿಶ್ವಾಸವಿರಿಸಿ, ಪ್ರತಿಯೊಬ್ಬರೂ ಲಸಿಕೆ ಪಡೆದುಕೊಂಡು ಕೋವಿಡ್ ನಿಂದ ರಕ್ಷಣೆ ಪಡೆಯಬೇಕು. 28 ದಿನಗಳ ಅಂತರದಲ್ಲಿ ಎರಡನೆಯ ಡೋಸ್ ಪಡೆಯುವುದು ಕಡ್ಡಾಯ ಎಂದರು. 50 ಆರೋಗ್ಯ ಸಿಬ್ಬಂದಿ ಪ್ರಥಮ ಹಂತದ ಲಸಿಕೆ ಪಡೆದರು. ಎಲ್ಲರ ಆರೋಗ್ಯ ತಪಾಸಣೆ ನಡೆಸಲಾಯಿತು. ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ನಂದಿನಿ, ಶಸ್ತ್ರಚಿಕಿತ್ಸಕ ಡಾ. ಮಹೇಂದ್ರಕುಮಾರ್ ಶೆಟ್ಟಿ, ಸಹಾಯಕ ವೈದ್ಯಾಧಿಕಾರಿ ಡಾ. ಗೌತಮ್, ಆಯುಷ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಕುಂದಾಪುರ ಪೊಲೀಸ್ ಠಾಣೆಯವರ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹದ ಅಂಗವಾಗಿ ಮಾಹಿತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕುಂದಾಪುರ ಪೊಲೀಸ್ ಠಾಣೆಯ ಸ್ಟೇಷನ್ ರೈಟರ್ ನವೀನ ಕುಮಾರ ಎಸ್. ಮಾತನಾಡಿ, ವೇಗದ ಮಿತಿಯ ಅರಿವು ಮತ್ತು ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಹಾಕಿರುವ ಅನೇಕ ಸೈನ್ ಬೋರ್ಡ್ ಗಳ ನಿಖರವಾದ ಮಾಹಿತಿ ಪಡೆದು ವಾಹನ ಚಲಾಯಿಸಬೇಕು. ಅಪಘಾತಗಳನ್ನು ತಪ್ಪಿಸುವಲ್ಲಿ ವಾಹನ ಸಂಚಾರದ ಮೂಲದಾಖಲಾತಿಯಿಲ್ಲದೇ ನಿಯಮಗಳನ್ನು ಉಲ್ಲಂಘಿಸುವುದರಿಂದ ಉಂಟಾಗುವ ಗಂಭೀರ ದುಷ್ಪರಿಣಾಮಗಳನ್ನು ನಿವಾರಿಸುವಲ್ಲಿ ಯವಜನತೆ ಪ್ರಮುಖ ಪಾತ್ರ ವಹಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷರಾದ ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ್ ಶೆಟ್ಟಿಯವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ರಸ್ತೆ ಸಂಚಾರ ನಿಯಮಗಳನ್ನು ಕೇವಲ ಭಯದಿಂದ ಪಾಲಿಸುವಂತಾಗದೇ, ವಾಹನ ಚಲಾಯಿಸುವವರ ಮತ್ತು ಅನ್ಯ ವ್ಯಕ್ತಿಗಳ ಸುರಕ್ಷತೆಯ ಬಗ್ಗೆ ನಿಗಾ ವಹಿಸಿ ವಾಹನಗಳನ್ನು ಬಳಸಬೇಕೆಂದು ತಿಳಿಸಿದರು. ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಹರಾ ಪ್ರೆಂಡ್ಸ್ ಮಯ್ಯಾಡಿ ಇವರ ಆಶ್ರಯದಲ್ಲಿ 30 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟವು ಫೆ.೦6ರ ಶನಿವಾರ ಮತ್ತು ಫೆ.೦7ರ ಭಾನುವಾರ ಮಯ್ಯಾಡಿ ಮಹಾಸತಿ ದೇವಸ್ಥಾನದ ಹತ್ತಿರ ನಡೆಯಲಿದೆ. ಪ್ರಥಮ ಬಹುಮಾನ 15,001 ದ್ವಿತೀಯ ಬಹುಮಾನ 8,001 ಮತ್ತು ಶಾಶ್ವತ ಫಲಕದೊಂದಿಗೆ ನೀಡಲಾಗುವುದು. ಕ್ರಿಕೆಟ್ ಪಂದ್ಯಾಟದಲ್ಲಿ ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿರುತ್ತದೆ, ಪಂದ್ಯಾಟದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು ರಾಡಿ ಏಸತಕ್ಕೆ ಅವಕಾಶವಿರುದಿಲ್ಲ. ರೂ. 1,000 ಪ್ರವೇಶ ಶುಲ್ಕದೊಂದಿಗೆ ಫೆ.೦2ರ ಒಳಗೆ ತಂಡದ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿಧಾನಸಭಾ ಕ್ಷೇತ್ರದ ಎರಡು ಅವಧಿಯ ಶಾಸಕರಾಗಿ, ಕುಂದಾಪುರ ಪುರಸಭೆಯಲ್ಲಿ ಸುಧೀರ್ಘ ಅವಧಿಗೆ ಪುರಸಭೆಯ ಅಧ್ಯಕ್ಷರು ಹಾಗೂ ಸದಸ್ಯರಾಗಿ ಸೇವೆ ಸಲ್ಲಿಸಿದ ದಿ. ವಿನ್ನಿಫ್ರೆಡ್ ಫೆರ್ನಾಂಡಿಸ್ ಅವರ ಹೆಸರನ್ನು ಕುಂದಾಪುರದ ಮುಖ್ಯರಸ್ತೆಗೆ ನಾಮಕರಣ ಮಾಡುವಂತೆ ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ. ಕುಂದಾಪುರ ಪುರಸಭೆಯ ಸರ್ವಾಂಗೀಣ ಬೆಳವಣಿಗೆಗೆ ತನ್ನದೇ ಆದ ವಿಶೇಷ ಸೇವೆ ಸಲ್ಲಿಸಿದ ಮಾಜಿ ಶಾಸಕಿ ದಿ. ವಿನ್ನಿಫ್ರೆಡ್ ಫೆರ್ನಾಂಡಿಸ್ ಅವರ ಹೆಸರು ಜನಮಾನಸದಲ್ಲಿ ಉಳಿಯುವಂತೆ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಕ್ಕಳಿಗೆ ಮನೆಯಲ್ಲಿ ಉತ್ತಮ ನಡವಳಿಕೆ ಕಲಿಸಬೇಕು. ಅವರ ಶೈಕ್ಷಣಿಕ ಬೆಳವಣಿಗೆ ಬಗ್ಗೆ ಪೋಷಕರು ನಿರಂತರ ಗಮನಹರಿಸಬೇಕು’ ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಕಾಲ್ತೋಡು ಮೆಟ್ಟಿನಹೊಳೆ ಜೈನಜಟ್ಟಿಗೇಶ್ವರ ಸಪರಿವಾರ ದೈವಸ್ಥಾನದ ವಾರ್ಷಿಕ ಹಾಲುಹಬ್ಬದ ಪ್ರಯುಕ್ತ ಕೋಟೇಶ್ವರ ರೋಟರಿ ಕ್ಲಬ್ ಆಶ್ರಯದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು. ದೈವಸ್ಥಾನದ ಆಡಳಿತ ಮಂಡಳಿಯ ಎನ್. ಕರುಣಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಎಂ. ಮುಂದಿನಮನಿ, ಜಿಲ್ಲಾ ಪಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ, ವಲಯ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಸಹಕಾರ್ಯದರ್ಶಿ ಮಂಜುನಾಥ ದೇವಾಡಿಗ, ಬೋಳಂಬಳ್ಳಿ ದೇಗುಲದ ಆಡಳಿತ ಧರ್ಮದರ್ಶಿ ಧನಂಜಯ ಜೈನ್, ಬೈಂದೂರು ಅಡಿಗಳಹಿತ್ಲು ಮರ್ಲಿ ದೇವಾಡಿಗ, ಶೇಖರ ಶೆಟ್ಟಿ ಅಲ್ಸಾಡಿ, ಜಗನ್ನಾಥ ಕುಲಾಲ್, ಶಾರದಾ ಕುಲಾಲ್, ದರ್ಶನ ಪಾತ್ರಿ ಸುಬ್ಬಯ್ಯ ದೇವಾಡಿಗ, ಪಿಎಸ್ಐ ಪ್ರವೀಣ ಶೆಟ್ಟಿ ನೆಲ್ಯಾಡಿ, ಇವರನ್ನು ಗೌರವಿಸಲಾಯಿತು. ಎಸ್ಎಸ್ಎಲ್ಸಿ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗ್ರಾಮ ಪಂಚಾಯತ್‌ನಲ್ಲಿ ನಡೆಯುತ್ತಿರುವ ಮಕ್ಕಳ ಸ್ನೇಹಿ ಅಭಿಯಾನ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಉಡುಪಿ ಜಿಲ್ಲಾ ಕಾನೂನು ಪ್ರಾಧಿಕಾರದ ಅಧ್ಯಕ್ಷೆ ಕಾವೇರಿ ಭೇಟಿ ನೀಡಿದರು. ಮಕ್ಕಳಿಗೆ ಶೈಕ್ಷಣಿಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೂಕ್ತ ಕಾನೂನು ಮಾರ್ಗದರ್ಶನ, ಸಲಹೆ ಸೂಚನೆಗಳನ್ನು ನೀಡಿದ ಅವರು ಮಕ್ಕಳ ಚಟುವಟಿಕೆಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಮಕ್ಕಳ ಸ್ನೇಹಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಶುಭ ಹಾರೈಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ, ಮಕ್ಕಳ ಮಿತ್ರ ಬಿ.ಲಕ್ಷ್ಮೀಕಾಂತ ಮಡಿವಾಳ, ಎಸ್.ವಿ.ಶಾಲೆಗಳ ಸಂಚಾಲಕ ಎನ್.ಸದಾಶಿವ ನಾಯಕ್, ಸ.ವಿ.ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಉಮೇಶ ಕರ್ಣಿಕ್, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಉಪಾಧ್ಯಕ್ಷೆ ತಿಲೋತ್ತಮ ನಾಯಕ್, ವಿದ್ಯಾರ್ಥಿ ಶ್ರೀಶ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಉಡುಪಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ಅವರನ್ನು ಗೌರವಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಲ ಜೀವನ್ ಮಿಷನ್ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಕುರಿತಂತೆ ಸ್ಥಳೀಯ ಜನಪ್ರತಿನಿಧಿಗಳಿಗೆ ಹಾಗೂ ಗ್ರಾಮದ ಜನತೆಯೊಂದಿಗೆ ಚರ್ಚಿಸಿ ಕಾಮಗಾರಿಗಳನ್ನು ಕೈಗೊಳ್ಳಿ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮಗಳಲ್ಲಿನ ಸ್ಥಳೀಯ ಜಲ ಮೂಲಗಳನ್ನು ಗುರುತಿಸಲು ಗ್ರಾಮಸ್ಥರ ಮತ್ತು ಜನಪ್ರತಿನಿಧಿಗಳ ನೆರವು ಅಗತ್ಯವಿದ್ದು, ಯಾವ ಕಾಮಗಾರಿಗಳು ತುರ್ತು ಅತ್ಯಗತ್ಯವಾಗಿವೆ ಎಂಬುದನ್ನು ತಿಳಿದು ಅಂತಹ ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಳ್ಳುವಂತೆ ಸೂಚಿಸಿದ ಅಧ್ಯಕ್ಷ ದಿನಕರ ಬಾಬು, ಕಾಮಗಾರಿ ಆರಂಭಕ್ಕೆ ಮುನ್ನ ಸ್ಥಳೀಯವಾಗಿ ಸಭೆ ಕರೆದು ಅಭಿಪ್ರಾಯಗಳನ್ನು ಸಂಗ್ರಹಿಸಿ, ಯೋಜನೆಯನ್ನು ಅತ್ಯಂತ ಪಾರದರ್ಶಕವಾಗಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಗಳಿಗೆ ಸೂಚನೆ ನೀಡಿದರು. ಗ್ರಾಮೀಣ ಪ್ರದೇಶದಲ್ಲಿ ವಿವಿಧ ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಮಾನದಂಡದಲ್ಲಿ ಆದಾಯಮಿತಿಯನ್ನು ವಸತಿ ನಿಗಮದಿಂದ ರೂ.32000 ಕ್ಕೆ ನಿಗಧಿಪಡಿಸಿದ್ದು, ಇದರಿಂದ ಬಿ.ಪಿಎಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕು ವ್ಯಾಪ್ತಿಯ 15 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕ್ರಿಯೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಇಂದು ಬೈಂದೂರು ಯಡ್ತರೆಯ ಜೆಎನ್‌ಆರ್ ಕಲಾಮಂದಿರದಲ್ಲಿ ನಡೆಯಿತು. ತಾಲೂಕು ವ್ಯಾಪ್ತಿಯ ಎಲ್ಲಾ ಪಂಚಾಯತ್ ಗಳ ನೂತನ ಸದಸ್ಯರು ಆಯ್ಕೆ ಪ್ರಕ್ರಿಯೆ ಸಂದರ್ಭ ಭಾಗವಹಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಬೈಂದೂರು ತಹಶೀಲ್ದಾರ್ ಕಿರಣ್ ಗೋರಯ್ಯ ಹಾಗೂ ಜಿಲ್ಲಾ ತಂತ್ರಜ್ಞಾನ ಇಲಾಖೆಯ ತಾಂತ್ರಿಕ ನಿರ್ದೇಶಕ ಮಂಜುನಾಥ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಬೈಂದೂರು ತಾಲೂಕಿನ 15 ಪಂಚಾಯತಿಗಳಿಗೆ ಆಯ್ಕೆಯಾದವರ ವಿವರ ಈ ಕೆಳಗಿನಂತಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ವಿ-ಶೈನ್ ಕೋಚಿಂಗ್ ಸೆಂಟರ್ ವತಿಯಿಂದ ನಡೆದ ಎಫ್.ಡಿ.ಎ ಮತ್ತು ಎಸ್.ಡಿ.ಎ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಅಣುಕು ಪರೀಕ್ಷೆ ಕಾರ್ಯಗಾರ ನಡೆಯಿತು. ದ.ಕ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಯಾವುದೇ ಭಯಪಡದೆ ಧೈರ್ಯವಾಗಿ ಎದುರಿಸಿದಾಗ ಗೆಲ್ಲಲು ಸಾಧ್ಯ, ವಿ-ಶೈನ್ ನಂತಹ ಕೋಚಿಂಗ್ ಸೆಂಟರ್‌ಗಳು ವಿದ್ಯಾರ್ಥಿಗಳಿಗೆ, ಪರೀಕ್ಷಾರ್ಥಿಗಳಿಗೆ ಒಂದು ಭರವಸೆಯಾಗಿ ಕೆಲಸ ನಿರ್ವಹಿಸುತ್ತವೆ. ಬದುಕಿನಲ್ಲಿ ಪ್ರಯತ್ನ ಪಡದೇ ಯಾವುದೂ ಕೂಡಾ ಸಾಧ್ಯವಿಲ್ಲ, ಪ್ರಯತ್ನಗಳು ನಿರಂತರವಾಗಿದ್ದಾಗ ಮಾತ್ರ ಏನಾದರೂ ಸಾಧನೆ ಮಾಡಲು ಸಾಧ್ಯ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆದಷ್ಟು ನಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ. ಕುಂದರ್ ಮಾತನಾಡಿ, ವಿ-ಶೈನ್ ಸೆಂಟರ್ ವಿದ್ಯಾರ್ಥಿಗಳಿಗೆ, ಒಂದು ದಾರಿ ದೀಪವಾಗಿ ಕೆಲಸ ನಿರ್ವಹಿಸುತ್ತಿದೆ ಅಲ್ಲದೇ ಕಳೆದ ಸಾಲಿನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪರೀಕ್ಷೆಯಲ್ಲಿ ಹನ್ನೆರಡಕ್ಕೂ ಹೆಚ್ಚಿನ ಮಂದಿ ಆಯ್ಕೆಯಾಗಿ ಉದ್ಯೋಗ ಪಡೆದುಕೊಂಡದು ಸಂತಸದ ವಿಷಯ…
