ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಪದ್ಮಶಾಲಿ ಸಮಾಜ ಸಂಘ ಇದರ 39ನೇ ವಾರ್ಷಿಕ ಮಹಾಸಭೆ ಮತ್ತು 19ನೇ ಸಾಮೂಹಿಕ ಸತ್ಯನಾರಾಯಣ ಪೂಜೆ ಕಾರ್ಯಕ್ರಮವು ಕೋಟೇಶ್ವರದ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಆದಿತ್ಯವಾರ ನಡೆಯಿತು. ಕಾರ್ಯಕ್ರಮಕ್ಕೆ ಗೌರವಾನ್ವಿತರಾಗಿ ಆಗಮಿಸಿದ ಉಡುಪಿ ಮತ್ತು ಚಿಕ್ಕಮಂಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, “ಪ್ರತಿಯೊಂದು ಸಮಾಜದವರು ಶೈಕ್ಷಣಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜಕ್ಕೆ ಕಂಟಕರಾಗದೆ ಜನಾನುರಾಗಿ ಸಾಮಾನ್ಯ ಜನರನ್ನು ಪ್ರೀತಿಸುವ ಗುಣ ಇರಬೇಕು. ಈ ನಿಟ್ಟಿನಲ್ಲಿ ಪದ್ಮಶಾಲಿ ಜನಾಂಗದವರಲ್ಲಿ ಪ್ರಾಮಾಣಿಕತೆ. ಶ್ರದ್ಧೆ, ನಿಷ್ಠೆ, ಸರಳ ಸಜ್ಜನಿಕೆಯಿಂದ ಬಾಳುತ್ತಿದ್ದಾರೆ. ಕೋಟೇಶ್ವರ ವಲಯ ಪದ್ಮಶಾಲಿ ಸಮಾಜ ಸಂಘದ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯವನ್ನು ನಿರ್ಮಾಣ ಮಾಡುತ್ತಿರುವುದು ಉತ್ಕೃಷ್ಟವಾದ ಕೆಲಸವಾಗಿದೆ ಎಂದು ಶುಭ ಹಾರೈಸಿದರು. ಬೆಂಗಳೂರಿನ ಜಯದೇವ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ನಾಗರಾಜ್ ಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಡಾ. ಚಂದ್ರಶೇಖರ್ ವಿ. ಎಸ್. ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಹಂದಟ್ಟು ಗೆಳೆಯರ ಬಳಗ ಯುವಕ ಸಂಘ ದಾನಗುಂದು ಇವರ ವತಿಯಿಂದ 25ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಹಂದಟ್ಟು ಚೌತಿ ಸಾಮರಸ್ಯದ ಸಮಾಗಮ ವೈಭವದಿಂದ ಐದು ದಿನಗಳ ಕಾಲ ನಡೆಯುತ್ತಿದ್ದು ಶನಿವಾರ ದಾನಗುಂದು ಬಳಗದ ಸಭಾಂಗಣದಲ್ಲಿ ಸಹಸ್ರ ನಾರಿಕೇಳ ಗಣಯಾಗ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಂಪನ್ನಗೊಂಡಿತು. ಪೌರೋಹಿತ್ಯರಾದ ಅಕ್ಷಯ ಹಂದೆ ಪಡುಕರೆ ನೇತೃತ್ವದಲ್ಲಿ ನಡೆದ ಹೋಮಾಧಿ ಕಾರ್ಯಕ್ರಮಗಳು ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಸಮ್ಮುಖದಲ್ಲಿ ಪೂರ್ಣಾಹುತಿಗೊಂಡಿತು. ಅಪರಾಹ್ನ ಮಹಾಗಣಪನಿಗೆ ಮಹಾಪೂಜೆ,ಮಹಾಅನ್ನಸಂತರ್ಪಣೆ, ಶ್ರೀ ಭಗವತ್ ಭಜನಾ ಮಂಡಳಿ ಪಡುಕರೆ, ಪಂಚವರ್ಣ ಮಹಿಳಾ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಸಂಜೆ ಕಲಾಧರ ಯಕ್ಷಬಳಗ ಜಲವಳ್ಳಿ ಅವರಿಂದ ಅಮೃತ ಕಲಶ ಶ್ರೀ ಕೃಷ್ಣ ಪಾರಿಜಾತ ಸಂಪನ್ನಗೊಂಡಿತು. ಗೆಳೆಯರ ಬಳಗದ ಅಧ್ಯಕ್ಷ ಪ್ರಕಾಶ್ ಹಂದಟ್ಟು, ಪ್ರಧಾನ ಕಾರ್ಯದರ್ಶಿ ನಿತೇಶ್, ಸುದರ್ಶನ್, ಕೋಶಾಧಿಕಾರಿ ಅಭಿಷೇಕ ಶ್ರೀಯಾನ್, ಪ್ರಮುಖರಾದ ಗೋವಿಂದ ಪೂಜಾರಿ, ಜಯಪ್ರಕಾಶ್, ಮಂಜುನಾಥ್ ಪೂಜಾರಿ, ರಾಜು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಐಎಸ್ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರ ಸ್ಪರ್ಧೆಗಳ ಅಂಗವಾಗಿ ಮೂರು ದಿನಗಳ ತನಕ, ಗೋಬಿಂದ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್, ಬಹದೂರ್, ಪಂಜಾಬ್ನಲ್ಲಿ ನಡೆದ ರಾಷ್ಟ್ರೀಯ ಕಬಡ್ಡಿ ಸ್ಪರ್ಧೆಗಳಲ್ಲಿ ಕೆಎಜಿಒ ಕರ್ನಾಟಕ ತಂಡದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ರಾಜ್ಯಕ್ಕೆ ಹೆಮ್ಮೆಯನ್ನುಂಟು ಮಾಡಿದ್ದಾರೆ. ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳಾದ ಭವ್ಯಶ್ರೀ ಎಸ್ ಎಸ್, ವಿಜಯಲಕ್ಷ್ಮೀ ಎಚ್ ಎಚ್, ಮಾಣಿಕ್ಯ ಎ ಡಿ, ದೀಕ್ಷಾ ಕೆ ಸಿ, ತನಿಷ್ಕಾ ವಿ ಎಮ್ ಭಾಗವಹಿಸಿದ್ದರು. ತಂಡದ ನಿರ್ವಾಹಣೆಯನ್ನು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾದ ಲತಾ ಗೌಡ ಅವರು ನಡೆಸಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣ ಹುಲ್ಲಾಳ ನೇತೃತ್ವದಲ್ಲಿ ಶಾಲೆಯ ಕಬಡ್ಡಿ ತರಬೇತುದಾರರಾದ ಕೇಶವ, ಬೈಂದೂರು ಅವರು ವಿದ್ಯಾರ್ಥಿಗಳಿಗೆ ಸೂಕ್ತವಾದ ಮಾರ್ಗದರ್ಶನ ಗೈದಿದ್ದರು. ಇವರಲ್ಲಿ ಮಾಣಿಕ್ಯ ಎಡಿ ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ಆಟಗಾರ್ತಿಯಾಗಿ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಇವರೆಲ್ಲರನ್ನೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ಇವರು ಜಂಟಿಯಾಗಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಪಿ.ಯು. ಅಂತರ್ ಕಾಲೇಜು ಬಾಲಕ -ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಸಾಚಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ, ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ರಂಜನ್ ಶೆಟ್ಟಿ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರ ಬೈಂದೂರು ಇಲ್ಲಿ ಅಳವಡಿಸಲಾದ ಉಚಿತ ಡಯಾಲಿಸಿಸ್ ಯಂತ್ರಗಳ ಟ್ರಯಲ್ ರನ್ ನಡೆಯಿತು. ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಪೂಜಾ ವಿಧಿ ವಿಧಾನ ನೆರವೇರಿಸಿ ಡಯಾಲಿಸಿಸ್ ಯಂತ್ರಗಳ ಪರೀಕ್ಷಾರ್ಥ ಪ್ರಯೋಗಕ್ಕೆ ಚಾಲನೆ ನೀಡಿ ಮಾತನಾಡಿ, ಬೈಂದೂರಿನ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನೊಂದ ಬಡ ಜನರ ಬೇಡಿಕೆಯಂತೆ ಬೈಂದೂರಿನ ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಕೇಂದ್ರಕ್ಕೆ ಪೂಜಾ ಕಾರ್ಯಕ್ರಮ ನೆರವೇರಿಸಿ ದೇವತಾನುಗೃಹ ವನ್ನು ಕೋರಿದ್ದೇವೆ. ಬೈಂದೂರಿನ ಆರೋಗ್ಯ ಕ್ಷೇತ್ರದಲ್ಲಿ ಹಲವು ಕನಸುಗಳನ್ನು ಕಟ್ಟಿ ಕೊಂಡಿದ್ದೇವೆ ಹಾಗೂ ಅದಕ್ಕಾಗಿ ಪೂರಕ ವಾತಾವರಣ ನಿರ್ಮಾಣಕ್ಕಾಗಿ ಪ್ರಯತ್ನಿಸಲಾಗುತ್ತಿದೆ. ಈ ಹಿಂದೆ ಮಣಿಪಾಲ ಆಸ್ಪತ್ರೆಯ ನೆರವಿನೊಂದಿಗೆ ಪಿ.ಪಿ.ಪಿ ಮಾದರಿಯಲ್ಲಿ ಡಯಾಲಿಸಿಸ್ ಸೇವೆ ಒದಗಿಸಲು ಪ್ರಯತ್ನ ಆಗಿತ್ತಾದರೂ ಸರಕಾರ ಅದಕ್ಕೆ ಅನುಮತಿಯನ್ನು ನೀಡದ ಕಾರಣ ಬೈಂದೂರಿನ ಅಂಜಲಿ ಆಸ್ಪತ್ರೆಯಲ್ಲಿ ಮಣಿಪಾಲ ಆಸ್ಪತ್ರೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯ ಕುರಿತು ಆಸಕ್ತಿ ಮೂಡುವಂತೆ ಮಾಡಲು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಫಿಕಾಡ್ ಹೇಳಿದರು. ಅವರು ಆಳ್ವಾಸ್ ಕಾಲೇಜಿನ (ಸ್ವಾಯತ್ತ) ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ಶನಿವಾರ ಕಾಲೇಜಿನಲ್ಲಿ ನಡೆದ ’ಡಿಜಿಟಲ್ ಲೋಕುಡ್ ತುಳು’ಒಂದು ದಿನದ ಬರವಣಿಗೆ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಲ್ಲಿ ನಡೆದ ವಿದ್ಯಾರ್ಥಿ ಸಮ್ಮೇಳನ, ತುಳು ಐಸಿರ, ಒಂಜಿ ದಿನ ಬಲೆ ಓದುಗ ಕೂಟ, ಮಕ್ಕಳ ರಂಗತರಬೇತಿ ಶಿಬಿರ, ತುಳುನಾಡ ಸಿರಿ ಮದಿಪು, ತುಳುಭಾಷ ಬದ್ಕ್ ಗೇನದ ಪೊಲಬು ಮುಂತಾದ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ತುಳುವಿನ ಕುರಿತು ಆಸಕ್ತಿ ಮೂಡಿಸಲು ಸಹಕಾರಿಯಾಗಿವೆ. ತುಳು ಭಾಷೆಯ ಸಮೃದ್ಧತೆಯನ್ನು ಯುವ ಸಮುದಾಯಕ್ಕೆ ಪರಿಚಯಿಸುವ ಇನ್ನೂ ಅನೇಕ ಕಾರ್ಯಕ್ರಮಗಳು ನಡೆಯಬೇಕು. ತುಳು ಸಾಹಿತ್ಯ ಓದುವ ಅಭಿರುಚಿಯನ್ನು ಯುವಜನತೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಸೌರ್ಪಣಿಕಾ ನದಿಯಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಮಹಿಳೆ ವಸುಧಾ ಚಕ್ರವರ್ತಿ (46) ಅವರ ಮೃತದೇಹ ಮಾನಿನಕಾರು ಬಳಿ ಹೊಳೆಯಲ್ಲಿ ಪತ್ತೆಯಾಗಿದೆ. ಬೆಂಗಳೂರು ತ್ಯಾಗರಾಜನಗರ ನಿವಾಸಿಯಾದ ವಸುಧಾ ಅವರು ಆಗಾಗ್ಗೆ ಕೊಲ್ಲೂರು ದೇವಳಕ್ಕೆ ಬರುತ್ತಿದ್ದು, ಆ.27ರಂದು ದೇವಸ್ಥಾನಕ್ಕೆ ಆಗಮಿಸಿದ್ದ ಸಂದರ್ಭ, ಅಕಸ್ಮಿಕವಾಗಿ ಸೌರ್ಪಣಿಕ ನದಿಯಲ್ಲಿ ಕಾಲು ಜಾರಿ ಬಿದ್ದು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದರು ಎನ್ನಲಾಗಿದೆ. ನಾಪತ್ತೆಯಾದ ಮಹಿಳೆಗಾಗಿ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಹಾಗೂ ಅಗ್ನಿಶಾಮಕದಳ ಹುಡುಕಾಟ ನಡೆಸಿತ್ತು. ನೀರಿನ ರಭಸ ತೀವ್ರವಾಗಿರುವುದರಿಂದ ಹುಡುಕಾಟಕ್ಕೆ ಅಡ್ಡಿಯಾಗಿತ್ತು. ಆದರೂ, ಕಳೆದ ಎರಡು ದಿನಗಳಿಂದ ಈ ತಂಡ ಹುಡುಕಾಟ ನಡೆಸುತ್ತಿದ್ದು ಯಾವುದೇ ಸುಳಿವು ಲಭ್ಯವಾಗಿರಲಿಲ್ಲ. ಅಂತಿಮವಾಗಿ ಇಂದು ಮಾವಿನಕಾರು ಬಳಿ ಮೃತದೇಹ ಪತ್ತೆಯಾಗಿದೆ. ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳೊಂದಿಗೆ ಈಶ್ವರ ಮಲ್ಪೆ ಹಾಗೂ ಸ್ಥಳೀಯ ಪ್ರದೀಪ್ ಭಟ್ ಸಂಪ್ರೆ ಮೊದಲಾದವರು ಹುಡುಕಾಟದಲ್ಲಿ ತೊಡಗಿಕೊಂಡಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಾರ್ಕೂರು ರಂಗನಕೇರಿ ಶೆಟ್ಟಿಗಾರ್ ಇಂಡಸ್ಟ್ರೀಸ್ 20ನೇ ಸಾರ್ವಜನಿಕ ಗಣೇಶೋತ್ಸವ ಆ. 27ರಿಂದ ಆರಂಭಗೊಂಡು 29ರವರೆಗೆ ವಿಜೃಂಭಣೆಯಿಂದ ನಡೆಯಿತು. ಅಗಸ್ಟ್ 28ರಂದು ರಾತ್ರಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಸಿ. ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಾತಿ ಮತ ಪಂಥಗಳ ಭೇದವಿಲ್ಲದೆ ಧಾರ್ಮಿಕ ಪ್ರಜ್ಞೆ ಮೂಡಿಸಿ ನಾವೆಲ್ಲರೂ ಒಂದೇ ಎನ್ನುವ ಭಾವದಿಂದ ಆಚರಿಸುವ ಗಣೇಶೋತ್ಸವದಲ್ಲಿ ಕಲೆ, ಸಂಸ್ಕೃತಿ ಮತ್ತು ಸಮಾಜದ ಒಗ್ಗಟ್ಟಿಗೆ ಸಹಕಾರಿಯಾಗಿದೆ. ಈ ಮೂಲಕ ದೇವರಲ್ಲಿ ಶೃದ್ಧೆ ಭಕ್ತಿಯಿಂದ ನಂಬಿಕೆ ಇಟ್ಟಾಗ ನಮ್ಮ ಇಷ್ಟಾರ್ಥ ನೆರವೇರುತ್ತದೆ ಎಂದರು. ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಬಿ.ಉಮೇಶ್ ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಾರಕೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಉತ್ಸವ ಸಮಿತಿಯ ಅಧ್ಯಕ್ಷ ಬಿ ಶಾಂತರಾಮ್ ಶೆಟ್ಟಿ, ದ.ಕ ಜಿಲ್ಲಾ ಪದ್ಮಶಾಲಿ ಮಹಾಸಭಾ (ರಿ) ಇದರ ಅಧ್ಯಕ್ಷರಾದ ರವಿ ಶೆಟ್ಟಿಗಾರ್ ಕಾರ್ಕಳ, ಮಂದಾರ್ತಿ ನಮಸ್ತೆ ಭಾರತ ಟ್ರಸ್ಟ್ ನ ಪ್ರಮೋದ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವರ್ಷಂಪ್ರತಿ ನಡೆಯುವಂತೆ ಈ ಬಾರಿಯೂ ಗಣೇಶ ಚತುರ್ಥಿ ಹಬ್ಬವನ್ನು ಅತ್ಯಂತ ಸಂತಸ-ಸಡಗರದಿಂದ ಆಚರಿಸಲಾಯಿತು. ಪ್ರಾತಃಕಾಲದಲ್ಲೇ ಶಾಲೆಯ ಹಟ್ಟಿಯಂಗಡಿ ಶಾಂತಾರಾಮ ವೇದಿಕೆಯಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಸಕಲ ಧಾರ್ಮಿಕ ವಿಧಿ-ವಿಧಾನಗಳನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ಶ್ರೀ ಗಣೇಶನಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಿ, ಗಣೇಶನ ಮಹಿಮೆಯನ್ನು ಸಾರುವ ಭಕ್ತಿಗೀತೆಗಳನ್ನು ಹಾಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಕೃತ ಶಿಕ್ಷಕರಾದ ರಾಮಕೃಷ್ಣ ಉಡುಪ ವಿದಾರ್ಥಿಗಳನ್ನುದ್ದೇಶಿಸಿ ಗಣೇಶನು ದೇವತಾ ಸಮೂಹಕ್ಕೇ ನಾಯಕನಾಗಿದ್ದು, ವಿಘ್ನಗಳನ್ನು ತರುವ, ದೂರಮಾಡುವ ದೇವನಾಗಿದ್ದಾನೆ. ಆದಿಪೂಜ್ಯನಾಗಿದ್ದು, ಎಲ್ಲಾ ವಿಘ್ನಗಳನ್ನು ನಿವಾರಿಸಿ ನಮ್ಮ ಕಾರ್ಯಗಳಲ್ಲಿ ಯಶಸ್ಸನ್ನು ತಂದು ಕೊಡುವನು. ಅವನಲ್ಲಿ ನಮ್ಮ ವಿದ್ಯಾರ್ಜನೆಯು ಸಾಂಗವಾಗಿ ನಡೆದು, ಜೀವನ ಫಲಪ್ರದವಾಗುವಂತೆ ಪ್ರಾರ್ಥಿಸೋಣ ಎಂದು ಪ್ರಾರ್ಥಿಸಿದರು. ತದನಂತರ ವಿದ್ಯಾರ್ಥಿಗಳಿಗಾಗಿ ಮೆಹಂದಿ ಸ್ಪರ್ಧೆ, ರಂಗೋಲಿ ಸ್ಪರ್ಧೆ ಮತ್ತು ವಿವಿಧ ಮೋಜಿನ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ವಿತರಿಸಲಾಯಿತು. ಧಾರ್ಮಿಕ ಕ್ರಿಯಾ ವಿಧಾನಗಳ ನಂತರ ಅಪರಾಹ್ನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಸಂಜಯ ಗಾಂಧಿ ಪ್ರೌಢ ಶಾಲೆಯಲ್ಲಿ ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಮತ್ತು ವಾಣಿಜ್ಯ ವಿಭಾಗದ ಜಂಟಿ ಆಶ್ರಯದಲ್ಲಿ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಹಾಗೂ ಸಂಜಯ ಗಾಂಧಿ ಪ್ರೌಢ ಶಾಲೆಯ ಇವರ ಸಹಯೋಗದೊಂದಿಗೆ “ಹಸಿರು ಹೊನ್ನು” ಶೀರ್ಷಿಕೆಯಡಿಯಲ್ಲಿ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಹಣ್ಣಿನ ಗಿಡ ನೆಡುವ ಮೂಲಕ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ನ ಅಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ ಹೇರಿಕುದ್ರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಅಂಪಾರು ಗ್ರಾಮ ಪಂಚಾಯತ್ ಸದಸ್ಯ ಕಿರಣ್ ಹೆಗ್ಡೆ, ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಸಂಜಯ ಗಾಂಧಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಉದಯ್ ಕುಮಾರ್ ಬಿ., ರೋಟರಿ ಕ್ಲಬ್ ಮಿಡ್ ಟೌನ್ ಕಾರ್ಯದರ್ಶಿ ಸುಕುಮಾರ್ ಶೆಟ್ಟಿ ಬೆಳ್ಳಾಲ, ನಿಕಟಪೂರ್ವ ಅಧ್ಯಕ್ಷ ಶೇಖರ್ ಶೆಟ್ಟಿ, ಮಾಜಿ ಅಧ್ಯಕ್ಷ ಶಂಕರ್…
