Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮಾತೃಭೂಮಿ ಮಹಿಳಾ ಸಹಕಾರ ಸಂಘ ನಿ. ಇದರ ವಾರ್ಷಿಕ ಸರ್ವ ಸದಸ್ಯರ ಸಭೆಯು ಇಲ್ಲಿನ ರೋಟರಿ ಕ್ಲಬ್‌ನಲ್ಲಿ ಬುಧವಾರ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಅನಸೂಯ ಶೇಟ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಆಶಾ, ನಿರ್ದೇಶಕರಾದ ಸರಳಾ ಶೆಟ್ಟಿ,, ಗೀತಾ ಎಸ್., ಸಾವಿತ್ರಿ, ಗಿರಿಜಾ, ನೇತ್ರಾವತಿ, ಪ್ರೇಮಾ, ಲಕ್ಷ್ಮೀ ಬೈಂದೂರು, ಅಂಬಿಕಾ, ಅಲಿಯಾನಾಜ್, ಶ್ಯಾಮಲಾ, ಮಾಲತಿ, ಸಿಬ್ಬಂದಿ ಪೂರ್ಣಿಮಾ ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೆಹನಾ ಸುಲ್ತಾನಾ ವಾರ್ಷಿಕ ವರದಿ ಹಾಗೂ ಆಡಿಟ್ ವರದಿ ಮಂಡಿಸಿದರು. ಕಛೇರಿ ಸಿಬ್ಬಂದಿ ನಾಗರಾಜ್ ಸ್ವಾಗತಿಸಿದರು. ಪತ್ರಕರ್ತ ಅಂದುಕಾ ಎ. ಎಸ್. ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕಾರ್ಕಳದ ಕಾಬೆಟ್ಟುವಿನಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ(ಕೆ.ಜಿ.ಟಿ.ಟಿ.ಐ) ಯಲ್ಲಿ  ಡಿಪ್ಲೋಮಾ/ಪದವಿ ಪೂರೈಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹಾಗೂ ಯುವನಿಧಿ ಫಲಾನುಭವಿಗಳಿಗೆ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆ.ಜಿ.ಟಿ.ಟಿ.ಐ, ಕಾರ್ಕಳ ದೂ.ಸಂ: 08258-200451 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೆಜಿಟಿಟಿಐ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವಿಶ್ವಕರ್ಮ ಸಮುದಾಯ ಎಲ್ಲಾ ಸಮುದಾಯಗಳಿಂದ ಅತಿ ಸಣ್ಣ ಸಮುದಾಯ ಆದರೆ ಆ ಸಮುದಾಯ ಎಲ್ಲರಿಗೂ ಮಾದರಿಯಾಗಿದೆ ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು. ಅವರು ಮಂಗಳವಾರ ಸಾಲಿಗ್ರಾಮದ ಚೇಂಪಿ ವಿಶ್ವಕರ್ಮ ಸಭಾಂಗಣದಲ್ಲಿ ಕೋಟ ವಿರಾಡ್ವಿಶ್ವ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗದ ಆಶ್ರಯದಲ್ಲಿ ವಿಶ್ವಕರ್ಮ ಯಜ್ಞ ಮಹೋತ್ಸವ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಅವರ ಕಾರ್ಯ ವೈಕರಿ, ವಿದ್ವತ್ ಬಹು ಎತ್ತರಕ್ಕಿದೆ, ಇಂದು ಜಾತಿ ಆಧಾರಿತ ವೃತ್ತಿ ಕುಸಿಯುತ್ತಿದೆ. ಆಧುನಿಕತೆಯ ಮೂಲಕ ಬೇರೆ ಬೇರೆ ಕ್ಷೇತ್ರಗಳನ್ನು ಸಮುದಾಯದ ಆಕರ್ಷಿಸುತ್ತಿದೆ, ಈ ಹಿನ್ನಲ್ಲೆಯಲ್ಲಿ ಕೇಂದ್ರ ಸರಕಾರ ಮೂಲ ವೃತ್ತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವಿಶ್ವಕರ್ಮ ಯೋಜನೆಗಯನ್ನು ಜಾರಿಗೊಳಿಸಿ ಸಾಕಷ್ಟು ವೃತ್ತಿನಿರತರಿಗೆ ಅನುಕೂಲಕ ವಾತಾವರ ಸೃಷ್ಠಿಸಿದ್ದಾರೆ ಎಂದರಲ್ಲದೆ ವಿಶ್ವಕರ್ಮ ಯಜ್ಞ ಮಹೋತ್ಸವ ಧಾರ್ಮಿಕ ಪರಂಪರೆಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದರು. ಸಭೆಯಲ್ಲಿ ಒಎನ್ ಜಿಸಿ ಮುಂಬೈ ಇದರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ತಾಲೂಕಿನ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಇವರ ಆಶ್ರಯದಲ್ಲಿ ಮಹಿಳಾ ಟೈಲರಿಂಗ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಹಾಗೂ ಉದ್ಯಮ ಶೀಲತಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ದೆಹಲಿ ಗ್ರಾಮೀಣಾಭಿವೃದ್ಧಿ ಹಣಕಾಸು ಸಚಿವಾಲಯ ನಿರ್ದೇಶಕರಾದ ಶೈಲೇಶ್ ಕುಮಾರ್ ಅವರು  ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತರಬೇತಿಯು ನಮ್ಮನ್ನು ಸದೃಢರನ್ನಾಗಿಸಲು ಸಹಕಾರಿಯಾಗಿದೆ. ಮಹಿಳೆಯರು ಜೀವನೋಪಾಯಕ್ಕಾಗಿ ಸ್ವ ಉದ್ಯೋಗವನ್ನು ಕೈಗೊಂಡು ಸ್ವಾವಲಂಬನೆಯ ಜೀವನವನ್ನು ನಡೆಸಲು ಇಂತಹ ತರಬೇತಿಗಳನ್ನು ಸದ್ಬಳಕೆ ಮಾಡಿಕೊಂಡಲ್ಲಿ ಸಾಧ್ಯ. ಮನೆಯ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸುವಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತಿರೋ ಅದೇ ರೀತಿ ಸ್ವಂತ ಉದ್ಯಮವನ್ನು ಕೈಗೊಂಡು ಸ್ವಾವಲಂಬನೆಯ ಬದುಕು ಸಾಗಿಸುವುದು ಮಹಿಳೆಯರಿಗೆ ಕಷ್ಟವೇನಲ್ಲ. ನಾವು ಸ್ವತಂತ್ರರಾದಷ್ಟು, ಮಕ್ಕಳಿಗೂ ಶಿಸ್ತುಬದ್ಧ ಜೀವನ ನಡೆಸುವಂತೆ ತಿಳಿಸಲು ಸಾಧ್ಯವಾಗುತ್ತದೆ. ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ, ಸರಕಾರದಿಂದ ಮತ್ತು ಬ್ಯಾಂಕುಗಳಿಂದ ಸಿಗುವ ಸವಲತ್ತುಗಳನ್ನು ಉಪಯೋಗಿಸಿಕೊಂಡು ಸಮಾಜದಲ್ಲಿ ಒಬ್ಬ ಯಶಸ್ವಿ ಉದ್ಯಮಿಗಳಾಗಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಪ್ರಮಾಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಬೆಂಗಳೂರು ಮಹಾ ನಗರ ಪಾಲಿಕೆ, ಮೈ ಭಾರತ ದಕ್ಷಿಣ ಕನ್ನಡ  ಜಿಲ್ಲಾ ಯುವ ಜನ ಒಕ್ಕೂಟ ರಿ. ಹಾಗೂ ವಿವಿಧ ಸಂಘ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ  ದಸರಾ ಕ್ರೀಡಾಕೂಟದ ಕುಸ್ತಿ ಪಂದ್ಯಾಟದಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸನ್ವಿತ್ ಜಿ. ಖಾರ್ವಿ ಕಂಚಿನ ಪದಕ ಪಡೆದು ಸಾಧನೆ ಮೆರೆದಿದ್ದಾನೆ.  ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋದಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಎನ್.ಎಂ.ಎ.ಎಂ.ಐ.ಟಿ. ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ಹ್ಯಾನ್ಸೆಲ್ ಇಮ್ಯಾನುಯೆಲ್ ಮುಂಬರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಪ್ರಥಮ ವರ್ಷದ ಮೊದಲ ಬ್ಯಾಚ್ ವಿದ್ಯಾರ್ಥಿಗಳಿಗೆ ಒರಿಯಂಟೇಶನ್ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಕೋಡ್ ಜಿಂಗ್ ಇದರ ಸಿಇಓ ಆಗಿರುವ ಶ್ರೀನಿವಾಸ ಪ್ರಭು ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅವರು ತಮ್ಮ ಆರಂಭಿಕ ಶೈಕ್ಷಣಿಕ ಜೀವನದಲ್ಲಿ ತಾವು ಎದುರಿಸಿದ ಸವಾಲುಗಳ ಬಗ್ಗೆ ವಿವರಿಸುತ್ತ, ನಿರಂತರ ಪ್ರಯತ್ನ, ಸ್ವಯಂ ಶಿಸ್ತು ಮತ್ತು ತಮ್ಮ ಇಚ್ಛಾಶಕ್ತಿಯಿಂದ ಅವರು ಕ್ರಮೇಣ ಈ ಅಡೆತಡೆಗಳನ್ನು ನಿವಾರಿಸಿಕೊಂಡರು ಎಂಬುದಾಗಿ ಹೇಳಿದರು. ಕಠಿಣ ಪರಿಶ್ರಮ ಮತ್ತು ದೃಢ ಸಂಕಲ್ಪದಿಂದ ಮಿತಿಗಳನ್ನು ಸಾಮರ್ಥ್ಯಗಳಾಗಿ ಪರಿವರ್ತಿಸಬಹುದು ಎಂಬುದನ್ನು ಸಭಿಕರ ಮನಮುಟ್ಟುವಂತೆ ಹೇಳಿದರು. ಉಪ ಪ್ರಾಂಶುಪಾಲರಾದ ಡಾ. ಮೆಲ್ವಿನ್ ಡಿಸೋಜ ಅವರು ವಿದ್ಯಾರ್ಥಿಯ ಶೈಕ್ಷಣಿಕ ಪಯಣದಲ್ಲಿ, ಕಾಲೇಜು ಸೇರಿದ ನಂತರವೂ ಪೋಷಕರು ವಹಿಸುವ ನಿರ್ಣಾಯಕ ಪಾತ್ರವನ್ನು ಒತ್ತಿ ಹೇಳಿದರು. ವಿವಿಧ ವಿಭಾಗದ ಡೀನ್ ಅವರು ಮಾತನಾಡಿ, ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳು , ಪ್ಲೇಸ್ಮೆಂಟ್ ವಿಭಾಗದ ತರಭೇತಿ ಇನ್ನಿತರ ವಿಷಯಗಳ ಬಗ್ಗೆ ವಿವರಣೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಬ್ರಹ್ಮಾವರದ ಎಸ್‌ಎಮ್‌ಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಫ್‌ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ಸತತ 21ನೇ ವರ್ಷ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಪುರುಷರ ವಿಭಾಗದಲ್ಲಿ ಮೊದಲ 5 ಸ್ಥಾನಗಳನ್ನು ಆಳ್ವಾಸ್ ಕಾಲೇಜಿನ ಓಟಗಾರರು ಪಡೆದುಕೊಂಡಿದ್ದಾರೆ. ಆಳ್ವಾಸ್ ಕಾಲೇಜಿನ ಮೋಹಿತ್ (ಪ್ರಥಮ), ಆದೇಶ್ ಕುಮಾರ್ (ದ್ವಿತೀಯ), ಶುಭಂ(ತೃತೀಯ), ರೋಹಿತ್(4ನೇ ಸ್ಥಾನ), ಹರೇಂದ್ರ(5ನೇ ಸ್ಥಾನ) ಪಡೆದು ಸತತ 21ನೇ ವರ್ಷ ಕುರುಂಜಿ ವಿಶ್ವನಾಥ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡರು. ಮಹಿಳೆಯರ ವಿಭಾಗದಲ್ಲಿ ಮೊದಲ 6 ಸ್ಥಾನಗಳನ್ನು ಆಳ್ವಾಸ್ ಕಾಲೇಜು ಓಟಗಾರರು ಪಡೆದುಕೊಂಡರು. ಆಳ್ವಾಸ್‌ನ ತಮಿಶಿ (ಪ್ರಥಮ), ನಿರ್ಮಲಾ(ದ್ವಿತೀಯ), ಭಾಗೀರಥಿ(ತೃತೀಯ), ಯಶಿ(4ನೇ ಸ್ಥಾನ), ಜ್ಯೋತಿ (5ನೇ ಸ್ಥಾನ), ಮನೀಷಾ(6ನೇ ಸ್ಥಾನ) ಪಡೆದು ಸತತ 21ನೇ ವರ್ಷ ಕೈಕುರೆ ಶ್ರೀ ರಾಮಣ್ಣ ಗೌಡ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡರು. ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ಗಂಟಿಹೊಳೆ ನಿವಾಸಿ ಕೃಷ್ಣ ಶೆಟ್ಟಿ (42) ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತಲೆಗೆ ಏಟು ತಗುಲಿತ್ತು. ಸೋಮವಾರ ಬೆಳಗ್ಗೆ ನೋವು ಕಾಣಿಸಿದ್ದು, ಕೂಡಲೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಪರೀಕ್ಷಿಸಿ ಬೇರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ ಮೇರೆಗೆ ಮರಳಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂಜೆ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪದೆಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕುಂಭಾಸಿಯ ಆನೆಗುಡ್ಡೆ ಸ್ವಾಗತಗೋಪುರ ಬಳಿ ಮಂಗಳವಾರ ರಾತ್ರಿ ಕುಂದಾಪುರದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನ್ಸುಲೇಟರ್ ಲಾರಿಯೊಂದು ಉಡುಪಿಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಬುಲೆಟ್ ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ. ಸವಾರರಾದ ಮಾರಣಕಟ್ಟೆಯ ಗಣೇಶ್ ಪೂಜಾರಿ ಮತ್ತು ಪ್ರದೀಪ್ ಗೌಡ ಎಂದು ಗುರುತಿಸಲಾಗಿದೆ. ಕುಂಭಾಸಿಯಿಂದ ಕೊರವಡಿಗೆ ವಿರುದ್ಧ ದಿಕ್ಕಿನಲ್ಲಿ ಹೋದ ಇನ್ಸುಲೇಟರ್ ಲಾರಿಯೊಂದು ಬುಲೆಟ್ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಇನ್ಸುಲೇಟರ್‌ನ ಕೆಳಭಾಗದಲ್ಲಿ ಬೈಕ್ ಸಿಲುಕಿ ಜಖಂಗೊಂಡಿದೆ. ಬುಲೆಟ್‌ನ್ನು ಸ್ಥಳೀಯರ ಸಹಕಾರದಿಂದ ಎಳೆದು ಹೊರ ತೆಗೆಯಲಾಗಿದೆ. ಇಬ್ಬರು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂದರ್ಭ ಕುಂದಾಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Read More