Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಪಿಎಂಈಜಿಪಿ ಹಾಗೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ದುರಸ್ಥಿ ಮತ್ತು ಸೇವೆ ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಬ್ರಹ್ಮಾವರ ಮಯೂರ ಫೋಟೋಗ್ರಫಿ ಸ್ಟುಡಿಯೋ ಮಾಲಕಿ, ಛಾಯಾಕಿರಣ ರಾಜ್ಯ ಪ್ರಶಸ್ತಿ ಪುರಸ್ಕೃತೆ ಹಾಗೂ ಗ್ರಾಮೀಣ ಮಟ್ಟದಲ್ಲಿ ಮೊದಲ ಮಹಿಳಾ ಫೋಟೋಗ್ರಫರ್ ಪ್ರಶಸ್ತಿಗೆ ಭಾಜನರಾದ ಸುಜಾತಾ ಅಂದ್ರಾದೇ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟಿಸಿ, ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ತಾನು ಶಿಬಿರಾರ್ಥಿಯಾಗಿದ್ದಾಗ ತರಬೇತಿಯ ಬಗೆಗೆ ಅವರಿಗಿದ್ದ ಕಲ್ಪನೆ ಹಾಗೂ ತರಬೇತಿಯ ಅವಧಿಯಲ್ಲಿ ಅವರು ಪಡೆದುಕೊಂಡ ಅನುಭವವನ್ನು ಹಂಚಿಕೊಂಡರು. ಜೊತೆಗೆ ಅವರು ಪಟ್ಟಂತಹ ಕಠಿಣ ಪರಿಶ್ರಮ, ಕೆಲಸದ ಮೇಲೆ ಅವರಿಗಿದ್ದ ಆಸಕ್ತಿ, ಆತ್ಮವಿಶ್ವಾಸ,  ಶ್ರದ್ಧೆಯಿಂದಾಗಿ ಇವತ್ತು ಯಶಸ್ಸಿನ ಹಂತವನ್ನು ತಲುಪಿದ್ದೇನೆ ಎಂದರು. ಫೋಟೋಗ್ರಫಿ ಕ್ಷೇತ್ರದಲ್ಲಿ ಮಹಿಳಾ ಉದ್ಯಮಿಯಾಗಿ ಹೊರಬಂದಾಗ, ತಾನು ಎದುರಿಸಿದ ಟೀಕೆಗಳನ್ನು ಮೆಟ್ಟಿ ನಿಂತು ಹೇಗೆ ಆತ್ಮಸ್ಥೈರ್ಯದಿಂದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಪಡೆಯಲು ಧನಾತ್ಮಕ ಮನೋಭಾವ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ. ಪ್ರತಿಯೊಬ್ಬರೂ ದೊಡ್ಡ ಕನಸುಗಳನ್ನು ಕಾಣಬೇಕು ಮತ್ತು ಅವುಗಳನ್ನು ನನಸಾಗಿಸುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಚರಿತ್ರೆಯಲ್ಲಿ ನೂರಕ್ಕೆ ನೂರು ಶೇಖಡಾ ಸಾಧನೆಗಳು ಸಾಧ್ಯವಾದದ್ದು ಪ್ರೇರಣೆ ಹಾಗೂ ಪ್ರೋತ್ಸಾಹದಿಂದ” ಎಂದು ರಾಷ್ಟ್ರ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರ ರಾಜೇಂದ್ರ ಭಟ್ ಹೇಳಿದರು. ಅವರು ಇಲ್ಲಿನ ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್‌ ಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ “ಹದಿಹರೆಯದವರ ಮನಸ್ಸುಗಳ ಸಬಲೀಕರಣ” (ಎಂಪವರಿಂಗ್ ಯಂಗ್ ಮೈಂಡ್ಸ್) ಎಂಬ ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಅವರು ಮಾತನಾಡಿ, “ವಿದ್ಯಾರ್ಥಿಗಳಿಗೆ ಕೇವಲ ಪಠ್ಯ ಶಿಕ್ಷಣ ನೀಡಿದರೆ ಸಾಲದು. ಆಧುನಿಕ ಜೀವನದ ಸವಾಲುಗಳನ್ನು ಎದುರಿಸಲು ಮೌಲ್ಯಾಧಾರಿತ ಶಿಕ್ಷಣದ ಅಗತ್ಯವಿದೆ. ಇಂತಹ ಕಾರ್ಯಾಗಾರಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟದ ಮಹಿಳಾ ಮಂಡಲಕ್ಕೆ ತನ್ನದೆ ಆದ ವಿಶಿಷ್ಟ ಕಾರ್ಯಕ್ರಮಗಳಿಂದ ಈ ಸಮಾಜದಲ್ಲಿ ಗುರುತಿಸಿಕೊಂಡಿದೆ. ಈ ಸಂಸ್ಥೆ ನಮ್ಮೂರಿನ ಅತಿ ಹಿರಿಯ ಸಂಸ್ಥೆ ಎಂಬ ಹೆಗ್ಗಳಿಕೆ ಇದೆ ಎಂದು ಕೋಟದ ಧರ್ಮರತ್ನಾಕರ ಆನಂದ್ ಸಿ. ಕುಂದರ್ ಹೇಳಿದರು ಅವರು ಕೋಟದ ಅಮೃತೇಶ್ವರೀ ದೇಗುಲದ ಸಮೀಪ ಕೋಟ ಮಹಿಳಾಮಂಡಲ ಇದರ 61ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಅಶಕ್ತರಿಗೆ, ವಿದ್ಯಾರ್ಥಿಗಳಿಗೆ ಸಹಾಯಹಸ್ತದ ಜೊತೆ ಹಿರಿಯ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವ ಈ ಸಂಸ್ಥೆ ಕ್ರಿಯಾಶೀಲ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದರು. ಕುಂದಾಪುರದ ಪ್ರಸಿದ್ಧ ಲೆಕ್ಕಪರಿಶೋಧಕರಾದ ಟಿ.ಎನ್. ಪ್ರಭು ಹಿಂದೂ ಸಂಪ್ರದಾಯದಲ್ಲಿ ಮಹಿಳೆಯರ ಸ್ಥಾನಮಾನ ಈ ಸಮಾಜದಲ್ಲಿ ಮಹಿಳೆಯನ್ನು ಯಾವ ರೀತಿಯಲ್ಲಿ ಗೌರವಿಸಲಾಗುತ್ತದೆ, ಭಗವದ್ಗೀತೆಯ ಕೆಲ ಮೂಲ ಸಾರಾಂಶವನ್ನು ಸಭೆಯಲ್ಲಿ ಮುಂದಿಟ್ಟರು. ಮಹಿಳಾ ಮಂಡಲದ ಅಧ್ಯಕ್ಷೆ ಗೀತಾ ಎ. ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಮಹಿಳಾ ಮಂಡಲದ ಸದಸ್ಯೆ ಸುಶೀಲ ನಾಗೇಶ್ ಅವರನ್ನು ಸಾಧಕ ಮಹಿಳಾ ಗೌರವ ನೀಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಂಡಿರುವ ಎರಡನೇ ಹಂತದ ಕಚ್ಚಾತೈಲ ಸಂಗ್ರಹಣೆ ಕಾಮಗಾರಿಯನ್ನು ಕೈಗೊಳ್ಳುವಾಗ ಸ್ಥಳೀಯ ಜನಸಾಮಾನ್ಯರಿಗೆ ತೊಂದರೆ ಉಂಟಾಗದಂತೆ ಅಗತ್ಯವಿರುವ ಎಲ್ಲಾ ರೀತಿಯ ಮುಂಜಾಗ್ರತೆಯನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮದಲ್ಲಿ ಕಚ್ಚಾತೈಲ ಸಂಗ್ರಹಣೆ ಘಟಕದ ಎರಡನೇ ಹಂತದ ಕಾಮಗಾರಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಚ್ಚಾತೈಲ ಸಂಗ್ರಹಣಾ ಘಟಕದ ಅಭಿವೃದ್ಧಿಗೆ ಅಗತ್ಯವಿರುವ ಭೂಮಿಯನ್ನು ಸಾರ್ವಜನಿಕರಿಂದ ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆದರೆ ಕೆಲವರಿಗೆ ಪರಿಹಾರದ ಹಣವನ್ನು ನೀಡಿರುವುದಿಲ್ಲ ಎಂದು ಕೇಳಿ ಬರುತ್ತಿದೆ. ಈ ಘಟಕಕ್ಕೆ ಭೂಮಿ ನೀಡಿರುವ ಭೂ ಮಾಲೀಕರಿಗೆ ಪರಿಹಾರದ ಹಣವನ್ನು ಶೀಘ್ರದಲ್ಲಿಯೇ ನೀಡಬೇಕೆಂದು ಕೆ.ಐ.ಎ.ಡಿ.ಬಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಎರಡನೇ ಹಂತದ ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಸುತ್ತಮುತ್ತ ಪ್ರದೇಶಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ಕಾಲೇಜಿನ ವಿದ್ಯಾರ್ಥಿನಿ ಗೀತಾಂಜಲಿ ಶಿವಗೊಂಡ ಚೌಗಲಾ ಅವರು ಮಲೇಷ್ಯಾದ ಕೌಲಾಲಂಪುರ್ ನಗರದಲ್ಲಿ ಅದ್ಧೂರಿಯಾಗಿ ನಡೆದ ಅತಿ ದೊಡ್ಡ ಯುವ ನಾಯಕತ್ವ ಸಮ್ಮೇಳನಗಳಲ್ಲಿ ಒಂದಾದ AYIMUN–2025 ನಲ್ಲಿ ಭಾರತವನ್ನು ಪ್ರತಿನಿಧಿಸಿದರು.ಈ ಸಮ್ಮೇಳನಕ್ಕೆ ಭಾರತದಿಂದ ಕೇವಲ ಏಳು ವಿದ್ಯಾರ್ಥಿಗಳು ಮಾತ್ರ ಆಯ್ಕೆಗೊಂಡಿದ್ದು, ಅವರಲ್ಲಿ ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ ಎಂಬ ಗೌರವ ಗೀತಾಂಜಲಿಗೆ ದೊರಕಿದೆ. ಅವರ ಆಯ್ಕೆ ಶೈಕ್ಷಣಿಕ ಸಾಮರ್ಥ್ಯ ಹಾಗೂ ಸಂಶೋಧನಾ ಲೇಖನ  ಆಧಾರದ ಮೇಲೆ ನಡೆಯಿತು. ಸಮ್ಮೇಳನದ ವೇಳೆ ಅವರು  ಚುರುಕಿನ ಪಾತ್ರವಹಿಸಿ, ಜಾಗತಿಕ ಆರ್ಥಿಕತೆ, ತಾಂತ್ರಿಕ ಅಭಿವೃದ್ಧಿ ಹಾಗೂ ವಿಜ್ಞಾನ–ಆಧಾರಿತ ಸಂಶೋಧನೆಯ ಪ್ರಾಮುಖ್ಯತೆ ಕುರಿತ ವಿಚಾರಗಳನ್ನು ವಿಶ್ಲೇಷಣೆಮಾಡಿ ಮಂಡಿಸಿದರು. ಈ ಮಂಡಳಿಯ ಚರ್ಚೆಯಲ್ಲಿ ಅತ್ಯುತ್ತಮ ಪ್ರಸ್ತುತಿ ಹಾಗೂ ವಾದ–ವಿವಾದದ ಕೌಶಲ್ಯ ಪ್ರದರ್ಶಿಸಿದಕ್ಕಾಗಿ ಅವರಿಗೆ “ಬೆಸ್ಟ್ ಡೆಲಿಗೇಟ್” ಪ್ರಶಸ್ತಿ ಪ್ರದಾನ ಮಾಡಲಾಯಿತು. ಅವರ ವಿಜ್ಞಾನಾಧಾರಿತ ಚಿಂತನೆ, ತಾರ್ಕಿಕ ವಿಶ್ಲೇಷಣೆ ಮತ್ತು ನವೀನ ಆವಿಷ್ಕಾರಗಳತ್ತ ಇರುವ ಆಸಕ್ತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾಡಳಿತ ಮತ್ತು ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ನಡೆಸಿದ ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟದಲ್ಲಿ (45ರ ವಿಭಾಗದಲ್ಲಿ) ಸಶಸ್ತ್ರ ಮೀಸಲು ಪಡೆಯ ಎ.ಆರ್.ಎಸ್.ಐ ಶಂಕರ್‌ ಅವರು ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ. ಇವರನ್ನು ಮಾನ್ಯ ಪೊಲೀಸ್ ಅಧೀಕ್ಷಕರಾದ ಹರಿರಾಂ‌ ಶಂಕರ್ ಅವರು ಅಭಿನಂದಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ವಿಶ್ವಶತೀರ್ಥ ಸೇವಾ ಸಂಘ  ಹುಬ್ಬಳ್ಳಿ, ಭವಾನಿ ನಗರ ರಾಯರ ಮಠ ಹಾಗೂ ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಯತಿಕುಲ ಚಕ್ರವರ್ತಿ ಪದ್ಮವಿಭೂಷಣ ಡಾ. ಶ್ರೀ ವಿಶ್ವಶತೀರ್ಥರ ಆರನೇ ಪಾದುಕಾ ಸಮಾರಾಧನೆ ಅಂಗವಾಗಿ ಉಡುಪಿ ಪೆರಂಪಳ್ಳಿ ಸುಬ್ರಮಣ್ಯ ಹೆಬ್ಬಾರ್ ಅವರಿಗೆ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು “ವಿಶ್ವೇಶ ಸೇವಾ ಪ್ರಶಸ್ತಿ” ನೀಡಿ ಗೌರವಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜೆಸಿಐ ಹಾಲಾಡಿ ವಾರಾಹಿ ಇದರ ವತಿಯಿಂದ ಸ್ವಾಮಿ ವಿವೇಕಾನಂದರ ದಿನಾಚರಣೆ ಅಂಗವಾಗಿ ಯುವ ದಿನಾಚರಣೆ ಕಾರ್ಯಕ್ರಮ ಹಾಲಾಡಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಿತು. ಮಂಜುಳಾ ಶೆಟ್ಟಿ ಅವರು ಜೆಸಿ ವಾಣಿಯನ್ನು ವಾಚಿಸುವುದರೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಜೆಸಿ ಹಾಲಾಡಿ ವಾರಾಹಿ ಘಟಕದ ಅಧ್ಯಕ್ಷರಾದ ಜೆಸಿ ಪ್ರದೀಪ್ ಹಾಲಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರು ನಾರಾಯಣ ಕುಲಾಲ್ ಮುಖ್ಯ ಅತಿಥಿ ನೆಲೆಯಲ್ಲಿ ಉಪಸ್ಥಿತರಿದ್ದು ಸ್ವಾಮಿ ವಿವೇಕಾನಂದರ ಜೀವನವನ್ನು ವಿವರಿಸಿದರು. ಬ್ರೈಟ್ ಪರ್ಲ್ ಶಾಲಾ ಶಿಕ್ಷಕಿ ಆಶಾ ರಾಜೀವ್ ಕುಲಾಲ್ ವಿವೇಕಾನಂದರ ಶಿಸ್ತು ಹಾಗೂ ಸಾಧನೆಯ ಬಗ್ಗೆ ಮಕ್ಕಳಿಗೆ ಅರ್ಥೈಸಿದರು. ವಿವೇಕಾನಂದರ ಜೀವನ ಚರಿತ್ರೆ ಬಗ್ಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಿ ಉತ್ತಮ ಭಾಷಣ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು ಹಾಗೂ ಎಲ್ಲಾ ಮಕ್ಕಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಜೆಸಿಐ ಶಂಕರನಾರಾಯಣ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇಗುಲದ ಜ್ಞಾನ ಮಂದಿರದಲ್ಲಿ ಜ.16ರಂದು ವಾರ್ಷಿಕ ಬ್ರಹ್ಮ ರಥೋತ್ಸವಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಿದ್ಧತಾ ಸಭೆಯನ್ನು ಅಧ್ಯಕ್ಷ ಡಾ. ಕೆ.ಎಸ್. ಕಾರಂತರ ಅಧ್ಯಕ್ಷತೆಯಲ್ಲಿ ಜರುಗಿತು. ದೇಗುಲದ ಅಧ್ಯಕ್ಷರು ಹಬ್ಬದ ಸಿದ್ಧತೆಗೆ ಸಂಬಂಧಿಸಿದಂತೆ ಸ್ಥಳೀಯಾಡಳಿತೆಯವರ ಸಭೆಯಲ್ಲಿ ಭಾಗವಹಿಸಿದ್ದರ ಕುರಿತಂತೆ ವಿಸ್ತೃತ ಮಾಹಿತಿಯನ್ನು ಸಭೆಯ ಮುಂದಿರಿಸಿ ಕಳೆದ ನಾಲ್ಕು ವರ್ಷಗಳಲ್ಲಿ ಹಬ್ಬಕ್ಕೆ ಮುಂಚಿತವಾಗಿ ನಡೆಸುತ್ತಿರುವ ಸಿದ್ಧತಾ ಸಭೆ ಮತ್ತು ಹಬ್ಬದ ನಂತರದ ಅವಲೋಕನಾ ಸಭೆಗಳ ಉದ್ದೇಶವು ಸಾರ್ವಜನಿಕ ಸಹಕಾರದ ಮತ್ತು ಸಹಭಾಗಿತ್ವವಾಗಿದ್ದು, ವರ್ಷದಿಂದ ವರ್ಷಕ್ಕೆ ಭಕ್ತ ಸಮುದಾಯ ಮತ್ತು ವಿವಿಧ ಇಲಾಖೆ ಹಾಗು ಸಂಘ ಸಂಸ್ಥೆಗಳ ಸ್ಪಂದನೆಯ ಫಲಶ್ರುತಿಯೋ ಎಂಬಂತೆ ಇತ್ತೀಚಿನ ದಿನಗಳಲ್ಲಿ ಸಾಲಿಗ್ರಾಮ ಹಬ್ಬವು ಸ್ಥಳೀಯ ದಸರೆಯ ರೂಪವನ್ನು ಪಡೆದಿರುವುದು ಜಗದೊಡೆಯ ನರಸಿಂಹನ ಅನುಗ್ರಹವೆಂದರು. ವೇದಿಕೆಯಲ್ಲಿ ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ, ಕೂಟ ಮಹಾ ಜಗತ್ತಿನ ಕೇಂದ್ರ ಸಂಸ್ಥೆಯ ಅಧ್ಯಕ್ಷ ಸತೀಶ ಹಂದೆ, ಪಟ್ಟಣ ಪಂಚಾಯತಿಯ ಪ್ರಾತಿನಿಧಿಕ ಅಧಿಕಾರಿ ಚಂದ್ರಶೇಖರ ಸೋಮಯಾಜಿ ಉಪಸ್ಥಿತರಿದ್ದರು. ಸಲಹೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಹಮ್ಮಿಕೊಂಡ ಐದು ದಿನಗಳ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಫ್ 2025-26’ ಸೋಮವಾರ ಅಚ್ಚುಕಟ್ಟಾದ ಮೂಲಸೌಕರ್ಯ, ತಾಂತ್ರಿಕ ನಿಖರತೆ, ಸಮಯ ನಿರ್ವಹಣೆ, ಆತಿಥ್ಯ ವ್ಯವಸ್ಥೆಗಳ, ಶಿಸ್ತುಬದ್ಧತೆ, ಅದ್ಧೂರಿ ಮೆರವಣಿಗೆಗಳ ಜೊತೆ ಆರಂಭಗೊಂಡಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆತಿಥ್ಯದಲ್ಲಿ 6ನೇ ಬಾರಿಗೆ (72, 75, 80, 79 ಹಾಗೂ 81) ನಡೆಯುತ್ತಿರುವ 85ನೇ ಕ್ರೀಡಾಕೂಟವನ್ನು ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಫರೀದ್ ಉದ್ಘಾಟಿಸಿ ಮಾತನಾಡಿ, ‘ಆಳ್ವಾಸ್‌ನಲ್ಲಿ ನಡೆಯುವ ಕ್ರೀಡಾಕೂಟವು ಜಾಗತಿಕ ಕೂಟದ ಮಾದರಿ. ದೇಶದ ಎಲ್ಲ ಕ್ರೀಡಾಕೂಟಗಳಿಗೂ ಹೆಗ್ಗುರುತು’ ಎಂದು ಶ್ಲಾಘಿಸಿದರು. ‘ವಿಶ್ವದ ಸಂಸ್ಕೃತಿಗಳ ಸಾರ ಭಾರತದ ಸಂಸ್ಕೃತಿಗಳ, ಭಾರತದ ಸಂಸ್ಕೃತಿ ಸಾರ ಕರ್ನಾಟಕ, ಕರ್ನಾಟಕದ ಸಂಸ್ಕೃತಿಗಳ ಸಾರ ದಕ್ಷಿಣ ಕನ್ನಡ, ದಕ್ಷಿಣ ಕನ್ನಡದ ಸಂಸ್ಕೃತಿಯ ಸಾರ ಆಳ್ವಾಸ್ ನಲ್ಲಿ’ ಎಂದು ಬಣ್ಣಿಸಿದರು. ಸತ್ಪಪ್ರಜೆಗಳ ನಿರ್ಮಿಸುವ ಹಾಗೂ ಬಲಿಷ್ಠ…

Read More