ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೈಲಾರೇಶ್ವರ ಯುವಕ ಮಂಡಲದ ವಾರ್ಷಿಕ ಮಹಾ ಸಭೆಯು ಯುವಕ ಮಂಡಲದ ಕಛೇರಿಯಲ್ಲಿ ನೆಡೆಯಿತು. ಸಭೆಯಲ್ಲಿ ಯುವಕ ಮಂಡಲದ ಅಧ್ಯಕ್ಷ ಅರುಣ ಕುಮಾರ್ ಬಾಣ, ಗೌರವ ಅಧ್ಯಕ್ಷ ಕೆ ಆರ್ ಪ್ರದೀಪ್ ಹಿರಿಯ ಸದಸ್ಯ ರಮೇಶ ಬಿಲ್ಲವ, ನಾಗರಾಜ ರಾಯಪ್ಪನ ಮಠ, ಕಾರ್ಯದರ್ಶಿ ಸುಧೀರ್ ಕೃಷ್ಣ ಹಾಜರಿದ್ದರು. 2020-21 ಸಾಲಿನ ನೂತನ ಅಧ್ಯಕ್ಷರಾಗಿ ನಾಗರಾಜ ದಫೇದಾರ್ ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಡಿ ನಾಯಕ್ ಆಯ್ಕೆಯಾದರು. ಇದೇ ಸಂದರ್ಭದಲ್ಲಿ 2019-20ರ ಸಾಲಿನ ಲೆಕ್ಕಪತ್ರವನ್ನು ಮಂಡಿಸಲಾಯಿತು. ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿ ಡಿ.ಕೆ ಪ್ರಭಾಕರ್ ಕಾರ್ಯಕ್ರಮವನ್ನು ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದಲ್ಲಿ ಪ್ರಸಿದ್ದಿ ಪಡೆದಿದ್ದ ರಾಮಕೃಷ್ಣ ಆಸ್ಪತ್ರೆಯು ಆಯುಷ್ ಧಾಮ ಆರ್ಥೋ ನ್ಯೂರೋ ಆಸ್ಪತ್ರೆಯಾಗಿ ಡಿ.9ರ ಬುಧವಾರ ಲೋಕಾರ್ಪಣೆಗೊಳ್ಳಲಿದೆ. ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಪದವಿ ಪಡೆದು ಎರಡು ದಶಕಕ್ಕೂ ಹೆಚ್ಚು ಅನುಭವವಿರುವ ಮತ್ತು ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ, ಮುಖ್ಯ ವೈದ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಮತ್ತು ಪ್ರಸ್ತುತ ಬ್ರಹ್ಮಾವರದ ಕ್ಷೇಮಧಾಮ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಬಿ.ವಿನಯಚಂದ್ರ ಶೆಟ್ಟಿ ತನ್ನ ಅನುಭವಿ ವೈದ್ಯ ತಂಡದೊಂದಿಗೆ ಈ ಆಸ್ವತ್ರೆಯನ್ನು ಮುನ್ನಡೆಸಲಿದ್ದಾರೆ. ಕರ್ನಾಟಕದ ಹೆಸರಾಂತ ವೈದ್ಯರ ಜೊತೆ ಕೇರಳ, ತಮಿಳುನಾಡು, ಪುಣೆ, ಆಂಧ್ರಪ್ರದೇಶದಂತಹ ರಾಜ್ಯಗಳ ಸಂದರ್ಶಕರು ನಿಯಮಿತವಾಗಿ ಸಂದರ್ಶನ ಮತ್ತು ಸಮಾಲೋಚನೆಗೆ ಲಭ್ಯವಿರಲಿದ್ದಾರೆ. ಕೇವಲ ಒಂದು ಪದ್ದತಿಯ ಚಿಕಿತ್ಸೆ ಪರಿಣಾಮಕಾರಿಯಾದ ಫಲಿತಾಂಶ ನೀಡುವಲ್ಲಿ ವಿಫಲವಾಗುತ್ತಿರುವಾಗ ಆಯುರ್ವೇದ, ಯೋಗ ಮತ್ತು ಬೇರೆ ಪಾರಂಪರಿಕ ಚಿಕಿತ್ಸಾ ಪದ್ದತಿಗಳ ಸಂಯೋಜನಾ ಚಿಕಿತ್ಸಾ ಪರಿಕ್ರಮ ನಿರೀಕ್ಷಿತ ಫಲಿತಾಂಶ ತೋರಿಸುತ್ತದೆ. ಆ ಸಂಯೋಜನಾ ಚಿಕಿತ್ಸಾ ಪದ್ದತಿ ಇಲ್ಲಿ ಅಳವಡಿಸಿಕೊಂಡು ಗುಣಾತ್ಮಕ ಫಲಿತಾಂಶ ನೀಡಲು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀ ದೇವರ ಕಾರ್ತಿಕ ದೀಪೋತ್ಸವ ಜರಗಿತು. ಬೆಳಿಗ್ಗೆ ಪ್ರಾರ್ಥನೆಯೊಂದಿಗೆ ದೀಪೋತ್ಸವದ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿತು. ಧಾತ್ರಿ ಹವನ, ವನಭೋಜನ, ದೀಪೋತ್ಸವ, ಮಹಾಪೂಜೆ ಮತ್ತಿತರ ಧಾರ್ಮಿಕ ಅನುಷ್ಠಾನಗಳು ದೇವಳದ ಪ್ರಧಾನ ಅರ್ಚಕ ಜಿ.ಮೋಹನದಾಸ ಭಟ್ ಮತ್ತು ಜಿ.ಪ್ರದೀಪ ಭಟ್ ನೇತೃತ್ವದಲ್ಲಿ ಜರಗಿತು. ದೇವಳದ ತಾಂತ್ರಿಕ ಜಿ.ರಾಘವೇಂದ್ರ ಆಚಾರ್ಯ, ದೇವಳದ ಮೊಕ್ತೇಸರ ಗುಜ್ಜಾಡಿ ನರಸಿಂಹ ನಾಯಕ್, ಆಡಳಿತ ಮಂಡಳಿ ಸದಸ್ಯರಾದ ಡಾ.ಕಾಶೀನಾಥ ಪೈ, ಸುದನೇಶ ಶ್ಯಾನುಭಾಗ್, ಸುರೇಶ ಪೈ, ಪುರೋಹಿತರಾದ ಜಿ.ವಸಂತ ಭಟ್, ಅಜಿತ್ ಭಟ್, ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಭಜಕರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಡಿ.22 ಮತ್ತು ರಂದು ಎರಡು ಹಂತಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬoಧಿಸಿದoತೆ ಚುನಾವಣೆ ನೀತಿ ಸಂಹಿತೆ ಅವಧಿಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಜಿಲ್ಲಾ ಮಟ್ಟದಲ್ಲ “ಅಬಕಾರಿ ಉಪ ಆಯುಕ್ತರ ಕಛೇರಿ, ಅಬಕಾರಿ ಭವನ, ಅಜ್ಜರಕಾಡು, ಉಡುಪಿ ಜಿಲ್ಲೆ” ಇಲ್ಲಿ ನಿಯಂತ್ರಣ ಕೊಠಡಿಯನ್ನು ತೆರೆಯಲಾಗಿದೆ. ಸದರಿ ನಿಯಂತ್ರಣ ಕೊಠಡಿಯು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ : 0820-2532732 ಆಗಿರುತ್ತದೆ. ಗ್ರಾಮ ಪಂಚಾಯತ್ ಚುನಾವಣೆ ನೀತಿ ಸಂಹಿತೆಯ ಅವಧಿಯಲ್ಲಿ , ಯಾವುದೇ ರೀತಿಯ ಅಬಕರಿ ಅಕ್ರಮಗಳು ಕಂಡು ಬಂದಲ್ಲಿ ಮೇಲ್ಕಂಡ ದೂರವಾಣಿ ಸಂಖ್ಯೆಗೆ ಅಥವಾ ಅಬಕಾರಿ ಇಲಾಖೆಯ ಟೋಲ್ ಫ್ರೀಸಂಖ್ಯೆ: 1800 4252 550 ಕರೆ ಮಾಡಿ ಮಾಹಿತಿ ನೀಡುವಂತೆ ಅಬಕಾರಿ ಇಲಾಖೆ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರಾದ ರಾಜೀವ ಶ್ರೀಯಾನ್ ಮತ್ತು ಮನೋಹರ ಡಿಸೋಜ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಳಿಕ ಮಾತನಾಡಿದ ಶಾಸಕ ಸುಕುಮಾರ್ ಶೆಟ್ಟಿ, ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಕಾರ್ಯಕ್ರಮ ಹಾಗೂ ಯೋಜನೆಗಳನ್ನು ಮೆಚ್ಚಿ ಬೇರೆ ಬೇರೆ ಪಕ್ಷಗಳ ಮುಖಂಡರು, ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಗುಜ್ಜಾಡಿ ಗ್ರಾಮದಲ್ಲಿ ಇಬ್ಬರು ಪ್ರಭಾವಿ ಕಾಂಗ್ರೆಸ್ ಮುಖಂಡರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿರುವುದರಿಂದ ಪಕ್ಷ ಇನ್ನಷ್ಟು ಬಲಿಷ್ಠವಾಗಿದೆ ಎಂದು ಹೇಳಿದರು. ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ನಾರಾಯಣ ಕೆ. ಗುಜ್ಜಾಡಿ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ರವಿ ಗಾಣಿಗ ಕೆಂಚನೂರು, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹರೀಶ ಮೇಸ್ತ, ಬಿಜೆಪಿ ಬೈಂದೂರು ಮಂಡಲ ಉಪಾಧ್ಯಕ್ಷ ವಿನೋದ ಭಂಡಾರಿ, ತ್ರಾಸಿ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರವಿ ಶೆಟ್ಟಿಗಾರ್, ಪಕ್ಷದ ಮುಖಂಡರಾದ ಉಮೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ದೇವರ ಕಾರ್ತಿಕ ದೀಪೋತ್ಸವ ಸರಳವಾಗಿ ಜರುಗಿತು ಬೆಳಿಗ್ಗೆ ಪ್ರಾರ್ಥನೆಯೊಂದಿಗೆ ದೀಪೋತ್ಸವದ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿತು. ಧಾತ್ರಿ ಹವನ, ವನಭೋಜನ, ದೀಪೋತ್ಸವ, ಮಹಾಪೂಜೆ ಮತ್ತಿತರ ಧಾರ್ಮಿಕ ಅನುಷ್ಠಾನಗಳು ದೇವಳದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಜರುಗಿತು ದೇವಳದ ತಾಂತ್ರಿಕ ಜಿ.ವಸಂತ ಭಟ್, ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಆಡಳಿತ ಮಂಡಳಿ ಸದಸ್ಯರು, ಭಜಕರು ಮತ್ತಿತರರು ಉಪಸ್ಥಿತರಿದ್ದರು. ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಆಜ್ಞಾನುಸಾರ ದೀಪೋತ್ಸವವನ್ನು ರಥಬೀದಿ ವಠಾರದಲ್ಲಿ ಅತ್ಯಂತ ಸರಳವಾಗಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ತಾಲೂಕು ಪಂಚಾಯಿತಿ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತು ಶನಿವಾರ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಸಭೆ ನಡೆಸಿದರು. ಈ ಸಂದರ್ಭ ಅವರು ಮಾತನಾಡಿ, ಆಯಾ ಇಲಾಖೆಯಲ್ಲಿ ಸಮಸ್ಯೆ ಏನಿದೆ ಎನ್ನುವದರ ಮಾಹಿತಿ ಕೊಡಿ, ಮುಂದೆ ಅದಿಲ್ಲ ಇದಿಲ್ಲ ಉತ್ತರ ಬೇಡ. ಡೀಮ್ಡ್ ಫಾರೆಸ್ಟ್ ಯಾರದ್ದೋ ತಪ್ಪಿಗೆ ಡೀಮ್ಡ್ ಫಾರೆಸ್ಟ್ ಆಗಿದೆ. 94ಸಿಯಲ್ಲಿ ಅರ್ಜಿ ಬಂದಿರುವುದ ಬಾಕಿ ಇಡುವುದು ಸರಿಯಲ್ಲ. ತಾಲೂಕು ಮಟ್ಟದಿಂದ ಸೇರಿಸಿ ಎಲ್ಲಾ ಲೆಕ್ಕಕೊಡಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸೋಣ ಎಂದರು. ಕುಂದಗನ್ನಡ ಪೀಠದ ಬಗ್ಗೆ ಮಂಗಳೂರು ವಿವಿಗೆ ಪತ್ರ ಬರೆದಿದ್ದು, ಅವರಿಂದ ಉತ್ತರ ಬಂದಿದೆ. ಕುಂದಗನ್ನಡ ಪೀಠ ಸ್ಥಾಪನೆಯಾದರೆ ಅಧ್ಯಯನಕ್ಕೆ ಅನುಕೂಲವಾಗುತ್ತದೆ. ಕೊಂಕಣಿ ಅಕಾಡೆಮೆ, ಬ್ಯಾರಿ ಅಕಾಡೆಮಿ ರೀತಿಯಲ್ಲಿ ಕುಂದಗನ್ನಡ ಅಕಾಡೆಮಿ ಆದರೆ ಒಳ್ಳೆಯದು. ಕುಂದಗನ್ನಡ ಜಿಲ್ಲೆ ಬಗ್ಗೆ ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟಿದ್ದು ಎಂದರು. ಎಲ್ಲಾ ಹಾಸ್ಟೆಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಿಎಸ್ಸೆಸ್ಟಿಇ ಯೋಜನೆಯಡಿಯಲ್ಲಿ ಫಿಟ್ ಇಂಡಿಯಾ, ಖೇಲೋ ಇಂಡಿಯಾ ಹಾಗೂ ಒತ್ತಡ ನಿರ್ವಹಣೆ ಬಗ್ಗೆ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಒಂದು ದಿನದ ಮಾಹಿತಿ ಕಾರ್ಯಾಗಾರ ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಸಂಸ್ಥೆ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಉದ್ಘಾಟಿಸಿದರು. ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲ ಅಶೋಕ್ ಕಾಮತ್ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಅಜಾದ್ ಅಹಮದ್, ಸುಧಾಕರ ಶೆಟ್ಟಿ, ಸತ್ಯಾನಂದ ಸಾಲಿನ್ಸ್ ಹಾಗೂ ಅರುಣಕುಮಾರ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸ್ವಾಗತಿಸಿದರು. ಸಂಗೀತ ಶಿಕ್ಷಕಿಯರಾದ ರಮಣಿ ಹಾಗೂ ಉಷಾ ಪ್ರಾರ್ಥಿಸಿದರು. ಶಿಕ್ಷಕ ರವೀಂದ್ರ ಪೂಜಾರಿ ನಿರೂಪಿಸಿ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣ ವಂದಿಸಿದರು. ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ಉಪನ್ಯಾಸಕಿ ಶೋಭಾ ಶೆಟ್ಟಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಸದಾನಂದ ಬೈಂದೂರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳರೂರು ವಿದ್ಯುತ್ ಸರಬರಾಜು ಕಂಪೆನಿ ವಿಭಾಗದ ನಿರ್ದೇಶಕರಾಗಿ ಕಮಲಶಿಲೆ ಬಾಲಚಂದ್ರ ಭಟ್ ಅವರನ್ನು ಕರ್ನಾಟಕ ಸರಕಾರ ನೇಮಕಗೊಳಿಸಿದೆ. ಬಾಲಚಂದ್ರ ಭಟ್ ಅವರು ಪ್ರಸ್ತುತ ಉಡುಪಿ ಜಿಲ್ಲಾ ಬಿಜೆಪಿಯ ಕಾರ್ಯದರ್ಶಿಯಾಗಿ ಮತ್ತು ಕುಂದಾಪುರ ವಿದಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ, ಕುಂದಾಪುರ ಹಾಗೂ ಆರೋಗ್ಯ ರಕ್ಷಾ ಸಮಿತಿ ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಹದಿಹರೆಯದ ಹೆಣ್ಣುಮಕ್ಕಳಿಗೆ ಆರೋಗ್ಯ ಮತ್ತು ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಅಬ್ದುಲ್ ರೆಹಮಾನ್ ವಹಿಸಿದ್ದರು. ಡಾ. ಉಮೇಶ್ ನಾಯಕ್ ವೈದ್ಯಾಧಿಕಾರಿ, ಕೋಡಿ ಕುಂದಾಪುರ ಕಾರ್ಯಕ್ರಮದ ಕುರಿತಾಗಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾಲಕ್ಷ್ಮಿ ಕಿರಿಯ ಆರೋಗ್ಯ ಸಹಾಯಕಿ, ಹೆಣ್ಣುಮಕ್ಕಳ ಆರೋಗ್ಯ ಮತ್ತು ಶುಚಿತ್ವವನ್ನು ಹೇಗೆ ಕಾಪಾಡಿಕೊಳ್ಳಬೇಕು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ಹಾಗೆಯೇ ಹಿರಿಯ ಆರೋಗ್ಯ ಸಹಾಯಕಿ ಚಂದ್ರಾವತಿ ಹದಿಹರೆಯದ ಹೆಣ್ಣುಮಕ್ಕಳ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಪ್ರಾಂಶುಪಾಲರಾದ ಡಾ. ಶಮೀರ್ ವಿದ್ಯಾರ್ಥಿನಿಯರಿಗೆ ಹಿತನುಡಿಯನ್ನಾಡಿ ಕಾರ್ಯಕ್ರಮದ ಉದ್ದೇಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಸಾಧು ಮತ್ತು ಆರೋಗ್ಯ ಕೇಂದ್ರದ ಸಿಬ್ಬಂಧಿ ಉಪಸ್ಥಿತರಿದ್ದರು ಹರ್ಷಿತಾ ಗಣಕ ವಿಭಾಗದ ಉಪನ್ಯಾಸಕಿ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು.…
