ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ದಿ ಕನ್ಸರ‍್ನ್ಡ್ ಫಾರ್ ವರ್ಕಿಂಗ್ ಚಿಲ್ಡ್ರನ್ ಸಂಸ್ಥೆಯ ಪ್ರಾದೇಶಿಕ ಸಂಪನ್ಮೂಲ ಕೇಂದ್ರ ನಮ್ಮಭೂಮಿ ಇಲ್ಲಿನ ವೃತ್ತಿ ತರಬೇತಿಯ ಮಕ್ಕಳು ಅವರ ಪಠ್ಯಕ್ರಮದ ಒಂದು ಭಾಗವಾಗಿ ಸಮೀಪದ ಹಟ್ಟಿಯಂಗಡಿಯ ಕರ್ನಾಟಕ ಬ್ಯಾಂಕ್‌ಗೆ ಕ್ಷೇತ್ರ ಭೇಟಿಯನ್ನು ಹಮ್ಮಿಕೊಂಡಿದ್ದರು. ಕರ್ನಾಟಕ ಬ್ಯಾಂಕ್‌ನ ಪ್ರಬಂಧಕರಾದ ವಿನಾಯಕ ಅವರೊಂದಿಗೆ ಸಂದರ್ಶನ ನಡೆಸಿದರು. ಬ್ಯಾಂಕ್‌ನಲ್ಲಿ ಖಾತೆ ತೆರೆಯುವುದು ಹೇಗೆ, ಖಾತೆಗಳ ವಿಧಗಳು, ವಿವಿಧ ಉಳಿತಾಯ ಯೋಜನೆಗಳು ಸಾಲ ನೀಡುವ ವ್ಯವಸ್ಥೆ, ಭದ್ರತಾ ಕೋಣೆ, ಬ್ಯಾಂಕ್‌ನಲ್ಲಿನ ಫೈರಿಂಗ್ ವ್ಯವಸ್ಥೆ ಹಾಗೂ ಭದ್ರತಾ ವ್ಯವಸ್ಥೆ, ಸಿಸಿ ಕ್ಯಾಮರಾ ಆಳವಡಿಕೆ ಮತ್ತು ತುರ್ತು ಸಂದರ್ಭಗಳಲ್ಲಿ ಕಾರ್ಯನಿರ್ವಹಿಸುವ ಅಲಾರ್ಮ್ ವ್ಯವಸ್ಥೆ ಮುಂತಾದವುಗಳ ಬಗ್ಗೆ ಸವಿವರವಾದ ಮಾಹಿತಿಯನ್ನು ಮಕ್ಕಳು ಪಡೆದುಕೊಂಡರು. ಈ ಕ್ಷೇತ್ರ ಭೇಟಿಯಲ್ಲಿ ವಿವಿಧ ವೃತ್ತಿ ತರಬೇತಿಯ 44 ಮಕ್ಕಳು ಮತ್ತು ನಮ್ಮಭೂಮಿಯ ಕಾರ್ಯಕರ್ತರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ, ಕೈಗೊಳ್ಳುವ ವಿವಿಧ ಕಾಮಗಾರಿಗಳನ್ನು, ಪ್ರವಾಸಿಗರನ್ನು ಆಕರ್ಷಿಸುವಂತೆ, ನೂತನ ರೀತಿಯಲ್ಲಿ, ವಿಭಿನ್ನ ವಿನ್ಯಾಸದಲ್ಲಿ ಯೋಜನೆ ಸಿದ್ದಪಡಿಸಲು ವಾಸ್ತುಶಿಲ್ಪಿಯೊಬ್ಬರನ್ನು ಜಿಲ್ಲಾ ಸಮಿತಿಯಲ್ಲಿ ನೇಮಿಸಿಕೊಂಡು ಅವರ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳು ರಾಜ್ಯ, ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುವಂತೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಬೀಚ್‌ಗಳು ಮತ್ತು ಪ್ರವಾಸೋದ್ಯಮ ಇಲಾಖೆಯ ಕಾಮಗಾರಿಗಳು ಏಕ ರೂಪದಲ್ಲಿ ನಿರ್ಮಾಣಗೊಂಡರೆ ಪ್ರವಾಸಿಗರಿಗೆ ಅಕರ್ಷಕವಾಗಿರುವುದಿಲ್ಲ. ಆದ್ದರಿಂದ ಹೊಸ ಅಭಿವೃದ್ದಿ ಕಾಮಗಾರಿಗಳನ್ನು ಸಿದ್ದಪಡಿಸುವುವಾಗ ವಾಸ್ತು ಶಿಲ್ಪಿಗಳ ಸಲಹೆಯಂತೆ ವಿನೂತನ ರೀತಿಯಲ್ಲಿ ಆಕರ್ಷಕವಾಗಿ ಕಾಮಗಾರಿ ಅನುಷ್ಠಾನಗೊಳಿಸುವಂತೆ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿಯಲ್ಲಿ ವಾಸ್ತುಶಿಲ್ಪಿಯೊಬ್ಬರನ್ನು ನೇಮಿಸುವಂತೆ ಹಾಗೂ ಜಿಲ್ಲೆಯಲ್ಲಿನ ಎಲ್ಲಾ ಬೀಚ್‌ಗಳಿಗೆ ಬ್ಲೂ ಫ್ಲ್ಯಾಗ್ ಸರ್ಟಿಫಿಕೇಶನ್ ದೊರೆಯುವ ನಿಟ್ಟಿನಲ್ಲಿ ಕೈಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ಮಾರ್ಚ್ 31 ರೊಳಗೆ ಮುಕ್ತಾಯಗೊಳಿಸುವಂತೆ ಜಿಲ್ಲಾಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಶೇಂಗಾದ ಮಾರುಕಟ್ಟೆ ಧಾರಣೆಯು ಕುಸಿತವಾಗಿರುವುದರಿಂದ, ಜಿಲ್ಲೆಯ ರೈತರಿಂದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಶೇಂಗಾ ಖರೀದಿಸುವ ಬಗ್ಗೆ ಸರಕಾರಕ್ಕೆ ಕೂಡಲೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ, ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಮಾರುಕಟ್ಟೆಯಲ್ಲಿ ಶೇಂಗಾ ದರವು ಕ್ವಿಂಟಾಲ್‌ಗೆ ರೂ.4500 ರಿಂದ 4800 ಇದ್ದು, ಕೇಂದ್ರ ಸರ್ಕಾರವು 2019-20 ನೇ ಮುಂಗಾರು ಹಂಗಾಮಿಗೆ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾಕ್ಕೆ ಕ್ವಿಂ.1ಕ್ಕೆ ರೂ. 5,090 ಎಂದು ನಿಗದಿಪಡಿಸಲಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಶೇಂಗಾ ಖರೀದಿ ತೆರೆಯುವುದರಿಂದ ಜಿಲ್ಲೆಯ ರೈತರಿಗೆ ಸಹಾಯಕವಾಗಲಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಸಭೆಯಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರ ಶೇಖರ್ ನಾಯಕ್ ಮತ್ತು ಕೃಷಿ ಮಾರಾಟ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಮಾ.19: ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನದ ಹೊತ್ತಿಗೆ ಚಿಕಿತ್ಸೆಗಾಗಿ ತೆರಳಿದ್ದ ಕರೋನಾ ಶಂಕಿತ ವ್ಯಕ್ತಿಯೋರ್ವ ಐಸೋಲೆಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನಿರಾಕರಿಸಿ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದು, ಪೊಲೀಸರ ನೆರವಿನಿಂದ ಆತನನ್ನು ಮರಳಿ ಕರೆತಂದು ಚಿಕಿತ್ಸೆ ಒಳಪಡಿಸಿದ ಘಟನೆ ನಡೆದಿದೆ. ಕರೋನಾ ಶಂಕಿತ ವ್ಯಕ್ತಿ ವಿದೇಶದಿಂದ ಮರಳಿದ್ದು, ಜ್ವರ ಹಾಗೂ ತಲೆನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ವ್ಯಕ್ತಿಯನ್ನು ಐಸೋಲೇಷನ್ ವಾರ್ಡ್‌ಗೆ ತೆರಳಲು ವೈದ್ಯರು ಸೂಚಿಸಿದಾಗ ಅದನ್ನು ನಿರಾಕರಿಸಿ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈ ಬಗ್ಗೆ ಆಸ್ಪತ್ರೆಯ ಶಸ್ತ್ರಚಿಕಿತ್ಸಕರು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಪರಾರಿಯಾಗಿದ್ದ ವ್ಯಕ್ತಿಯನ್ನು ಮರಳಿ ಆಸ್ಪತ್ರೆಗೆ ಕರೆತಂದು ಆತನಿಗೆ ಕಡ್ಡಾಯ ಹೋಂ ಕ್ವಾರಟೈನ್ ವಿಧಿಸಲಾಗಿದೆ. ಕುಂದಾಪ್ರ ಡಾಟ್ ಕಾಂ. ಇಬ್ಬರಿಗೆ ಮನೆಯಲ್ಲಿಯೇ ನಿಗಾ, ಓರ್ವನಿಗೆ ಚಿಕಿತ್ಸೆ: ಕರೋನಾ ಶಂಕಿತ ಬೈಂದೂರು ತಾಲೂಕಿನ ಶಿರೂರು ಹಾಗೂ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮ ಇಬ್ಬರ ಮನೆಯಲ್ಲಿ ನಿಗಾದಲ್ಲಿದ್ದು, ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಪೊಲೀಸ್ ಉಪವಿಭಾಗ ಕಚೇರಿಗೆ ಪಶ್ಚಿಮ ವಲಯ ನೂತನ ಐಜಿಪಿ ದೇವಜ್ಯೋತಿ ರಾಯ್ ಬುಧವಾರ ಭೇಟಿ ನೀಡಿದರು. ಈ ವೇಳೆ ಮಾತನಾಡಿ ಅಕ್ರಮ ಯಾವುದೇ ಇರಲಿ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿ, ಸಾರ್ವಜನಿಕರು ಯಾವುದೇ ಅಕ್ರಮಗಳ ಕುರಿತು ನಿರ್ಭೀತಿಯಿಂದ ನೇರ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬಹುದು. ಉಡುಪಿ ಜಿಲ್ಲೆಯಾದ್ಯಂತ ಆನ್‌ಲೈನ್ ಮೂಲಕ ನಡೆಯುವ ಕ್ರಿಕೆಟ್ ಬೆಟ್ಟಿಂಗ್, ಗಾಂಜಾ ಅವ್ಯವಹಾರ, ಅಕ್ರಮ ಮರಳುಗಾರಿಕೆ, ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ವಿರುದ್ಧ ಪೊಲೀಸರು ಸೂಕ್ತ ಗಮನ ಹರಿಸಲಿದ್ದಾರೆ. ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುವ ಕಿಂಗ್‌ಫಿನ್ ಪತ್ತೆಹಚ್ಚಿ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದರು. ಕುಂದಾಪ್ರ ಡಾಟ್ ಕಾಂ . ಪೊಲೀಸ್ ಠಾಣೆಗಳಲ್ಲಿ ಸಿಬ್ಬಂಧಿಗಳ ಕೊರತೆಯಿದ್ದು ಇದರಿಂದ ಕೊಂಚ ಸಮಸ್ಯೆಯಾಗುತ್ತಿದ್ದು ಇರುವ ವ್ಯವಸ್ಥೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಾಗುತ್ತಿದೆ ಎಂದ ಅವರು, ಅಧಿಕಾರ ವಹಿಸಿಕೊಂಡು ಮೂರು ದಿನಗಳಷ್ಟೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ -19 (ಕರೋನಾ ವೈರಾಣು ಕಾಯಿಲೆ 2019) ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತಿರುವ ಹೊರತಾಗಿಯೂ, ಸೊಂಕು ಹರಡುವ ಸಾಧ್ಯತೆ ಹೆಚ್ಚಿರುವ ಕಾರ್ಯಕ್ರಮಗಳನ್ನು ನಿಯಂತ್ರಿಸುವ ಸಲುವಾಗಿ ಉಡುಪಿ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಮಾಚ್ 18ರಿಂದ ಜಾರಿಗೆ ಬರುವಂತೆ ಸೆಕ್ಷನ್ 144 ಜಾರಿಗೊಳಿಸಿ, ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಈ ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ: 1. ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ನಡೆಯುವ ಉತ್ಸವ/ಜಾತ್ರೆಗಳಲ್ಲಿ ಕೇವಲ ಅಲ್ಲಿನ ಸಿಬ್ಬಂದಿ ಮಾತ್ರ ಭಾಗವಹಿಸಬೇಕು ಮತ್ತು ಉತ್ಸವಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. 2. ಭಕ್ತರಿಗೆ ದೇವರ ದರ್ಶನಕ್ಕಷ್ಟೇ ಅವಕಾಶ ನೀಡಿ ಉಳಿದೆಲ್ಲ ಸೇವೆಗಳನ್ನು ರದ್ದುಪಡಿಸಲಾಗಿದೆ. ದೇವಸ್ಥಾನಗಳಿಗೆ ಬರುವ ಸಾರ್ವಜನಿಕರಿಗೆ ತಂಗಲು ಅವಕಾಶ ಇರುವುದಿಲ್ಲ. 3. ದೇವಸ್ಥಾನ, ಮಸೀದಿ, ಚರ್ಚ್ ಒಳಗೊಂಡಂತೆ ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ಗುಂಪು ಗುಂಪಾಗಿ ಸಾರ್ವಜನಿಕರು ಪ್ರವೇಶಿಸಬಾರದೆಂದು ಸೂಚಿಸಲಾಗಿದೆ. 4. ಬೇಸಗೆ ಶಿಬಿರ, ಸಮಾರಂಭಗಳು, ವಿಚಾರ ಸಂಕಿರಣಗಳು ಮತ್ತಿತರ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಬಾರದು 5. ವಾರದ…
ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಸುಮಾರು ಎಂಟು ನೂರು ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿರುವ ಬೈಂದೂರು ತಾಲೂಕು ತಗ್ಗರ್ಸೆ ಗ್ರಾಮದ ಯತ್ತಾಬೇರು ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನ, ಭಕ್ತರ ಪಾಲಿನ ವನದುರ್ಗಾ ಮಾತೆ ಸನ್ನಿಧಿಯಲ್ಲಿ ಜೀರ್ಣೋದ್ಧಾರ ಕಾರ್ಯ ನಡೆಸಲು ಸಂಕಲ್ಪಿಸಲಾಗಿದ್ದು, ಈ ಸಂಬಂಧ ಭಕ್ತರು ಹಾಗೂ ಊರಿನವರ ಸಭೆ ಕರೆಯಲಾಗಿದೆ. ಜೈನರ ಕಾಲದ ದೇವಸ್ಥಾನ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನವು ಜೈನರ ಕಾಲದಲ್ಲಿ ಪ್ರತಿಷ್ಟಾಪನೆಗೊಂಡಿರುವುದು ಎಂಬುದಕ್ಕೆ ಸಾಕ್ಷಿಯಾಗಿ ಈ ಅಮ್ಮನವರನ್ನು ಬಹಳ ಹಿಂದೆ ಜೈನರ ಆರಾಧ್ಯ ದೇವಿಯಾದ ಪದ್ಮಾವತಿ ಅಮ್ಮನವರು ಎಂದು ಕರೆಯುತ್ತಿದ್ದರಂತೆ ಮತ್ತು ಇಲ್ಲಿ ಪರಿವಾರ ದೈವಗಳಾಗಿ ಜೈನ ಜಟ್ಟಿಗೇಶ್ವರ ಮತ್ತು ಜೈನ ಯಕ್ಷಿ ಗುಡಿಯು ಸ್ಥಾಪಿತಗೊಂಡಿತ್ತು. ದೇವಸ್ಥಾನ ಆಸುಪಾಸಿನ ಪರಿಸರದಲ್ಲಿ ವಾಸವಿದ್ದ ಬುಡಕಟ್ಟು ಜನಾಂಗದವರು ಈ ಅಮ್ಮನವರನ್ನು “ವನದುರ್ಗೆ” ಎಂದು ಕರೆಯುತ್ತಿದ್ದರಂತೆ. ಅಲ್ಲದೇ ಪಶ್ಚಿಮ ಘಟ್ಟಗಳ ದಟ್ಟ ಕಾಡಿನ ಮಧ್ಯೆ ಇರುವ ಈ ಪುಣ್ಯ ಸಾನಿಧ್ಯವು ಪರಮ ಪಾವನ ಶಕ್ತಿ ಸನ್ನಿಧಾನಗಳಲ್ಲಿ ಒಂದಾಗಿದೆ. ಈ ದೇವಸ್ಥಾನವು ಯಡ್ತರೆ ಶೆಟ್ಟರ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವ ಮಂಗಳವಾರ ವೈಭವದಿಂದ ಸಂಪನ್ನಗೊಂಡಿತು. ಶ್ರೀದೇವಿಯ ವಿಜೃಂಭಣೆಯ ಉತ್ಸವಕ್ಕೆ ಆಸುಪಾಸಿನ ಗ್ರಾಮಗಳಿಂದ ಬಂದಿದ್ದ ದೊಡ್ಡ ಸಂಖ್ಯೆಯ ಭಕ್ತರು ಸಾಕ್ಷಿಯಾದರು. ರಥೋತ್ಸವ ಆಚರಣೆಯ ಪ್ರಮುಖ ವಿಧಿಗಳನ್ನು ಪೂರೈಸುವ ತಂತ್ರಿ ನಿತ್ಯಾನಂದ ಅಡಿಗರು ದೇವಸ್ಥಾನಕ್ಕೆ ಬರುವ ವೇಳೆ ದೇಗುಲದ ಧ್ವಜಸ್ತಂಭದ ಬಳಿಯಲ್ಲಿ ಅಶುದ್ಧವಾಯಿತು ಎನ್ನುವ ಕಾರಣಕ್ಕಾಗಿ ಮತ್ತೆ ಮನೆಗೆ ಹಿಂತಿರುಗಿ, ಸ್ನಾನಾದಿಗಳನ್ನು ಪೂರೈಸಿ ದೇವಸ್ಥಾನಕ್ಕೆ ಬಂದು ಪ್ರಾಯಶ್ಚಿತ್ತ ವಿಧಿಗಳನ್ನು ಪೂರೈಸಿದ ಬಳಿಕ, ರಥೋತ್ಸವದ ಧಾರ್ಮಿಕ ವಿಧಿಗಳನ್ನು ಪ್ರಾರಂಭಿಸಲಾಯಿತು. ಇದರಿಂದಾಗಿ ಬೆಳಿಗ್ಗೆ 9.30ಕ್ಕೆ ಪ್ರಾರಂಭವಾಗಬೇಕಾಗಿದ್ದ ರಥೋತ್ಸವದ ಆರೋಹಣ 11.35ಕ್ಕೆ ಆರಂಭಗೊಂಡಿತು. ಮುಹೂರ್ತ ಬಲಿ, ಕ್ಷಿಪ್ರ ಬಲಿ ಹಾಗೂ ರಥ ಬಲಿಯ ಬಳಿಕ 1.05ಕ್ಕೆ ಕೊಲ್ಲೂರಿನ ರಥೋತ್ಸವದ ಪರಂಪರೆಯಂತೆ ಜೋಡಿ (ಎರಡು) ಉತ್ಸವ ಮೂರ್ತಿಗಳನ್ನು ಬ್ರಹ್ಮರಥದಲ್ಲಿ ಕುಳ್ಳಿರಿಸಿ ರಥೋತ್ಸವ ನಡೆಸಲಾಯಿತು. ರಾಜ್ಯದಲ್ಲಿ ಹರಡುತ್ತಿರುವ ಕೊರನಾ ವೈರಸ್ ತಡೆಗಾಗಿ ಸರ್ಕಾರ ಉತ್ಸವ ಆಚರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿತ್ತು.…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ದಿ ಕನ್ಸರ‍್ನ್ಡ್ ಫಾರ್ ವರ್ಕಿಂಗ್ ಚಿಲ್ಡ್ರನ್ ಸಂಸ್ಥೆಯ ಪ್ರಾದೇಶಿಕ ಸಂಪನ್ಮೂಲ ಕೇಂದ್ರ ನಮ್ಮಭೂಮಿ ಇಲ್ಲಿನ ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ವೃತ್ತಿ ತರಬೇತಿಯ ಮಕ್ಕಳು ಉಡುಪಿ ಜಿಲ್ಲೆಯ ಹೊಸಂಗಡಿಯಲ್ಲಿರುವ ವಾರಾಹಿ ಅಂಡರ್ ಗ್ರೌಂಡ್ ಪವರ್ ಹೌಸ್‌ಗೆ ಅಧ್ಯಯನ ಪ್ರವಾಸವನ್ನು ಕೈಗೊಂಡಿದ್ದರು. ಈ ಸಂದರ್ಭದಲ್ಲಿ ವಾರಾಹಿ ಪವರ್ ಹೌಸ್‌ನ ಕಿರಿಯ ಅಭಿಯಂತರರಾದ ಸಂತೋಷರವರೊಂದಿಗೆ ಸಂವಾದ ನಡೆಸಿದರು. ಇವರು ವಾರಾಹಿ ಜಲ ವಿದ್ಯುತ್ ಯೋಜನೆಯನ್ನು ಮಕ್ಕಳಿಗೆ ಪರಿಚಯಿಸಿ, ಮಕ್ಕಳು ಕೇಳುವ ಪ್ರಶ್ನೆಗಳಿಗೆ ಸರಳವಾದ ಉತ್ತರಗಳನ್ನು ನೀಡುತ್ತಾ, ವೀಕ್ಷಣೆಯ ಸಂದರ್ಭದಲ್ಲಿ ವಾರಾಹಿ ಜಲ ವಿದ್ಯುತ್ ಯೋಜನೆಯು 1989ರಲ್ಲಿ ಪ್ರಾರಂಭವಾದ ಬಗ್ಗೆ ಮತ್ತು ಈ ಯೋಜನೆಯಲ್ಲಿರುವ ಘಟಕಗಳು ಹಾಗೂ ಅವುಗಳ ವಿದ್ಯುತ್ ಉತ್ಪಾದನಾ ಸಾಮರ್ಥ್ಯಗಳ ಕುರಿತಾಗಿ ಮಾಹಿತಿಯನ್ನು ಹಂಚಿಕೊಂಡರು. ಅದರಲ್ಲೂ ಇತ್ತೀಚಿನ ಯುಗದಲ್ಲಿ ಸೋಲಾರ್ ಶಕ್ತಿಗೆ ಪ್ರಮುಖ್ಯತೆಯನ್ನು ನೀಡುತ್ತಿದ್ದರೂ ಸಹ ಜಲವಿದ್ಯುತ್ ಶಕ್ತಿಗೆ ಇರುವ ಬೇಡಿಕೆಯ ಕುರಿತು ಹಾಗೂ ಪರಿಸರ ಸಂರಕ್ಷಣೆಯ ಕಾಳಜಿಯಲ್ಲಿ ಈ ಯೋಜನೆಗೆ ನೀಡಿರುವ ಮಹತ್ವದ ಕುರಿತಾಗಿ ಚರ್ಚಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ ಪ್ರದೇಶದ (CRZ) ಪಾಪನಾಶಿನಿ ನದಿ ಪಾತ್ರದ 01, ಸ್ವರ್ಣಾ ನದಿ ಪಾತ್ರದ 06, ಸೀತಾ ನದಿ ಪಾತ್ರದ 03 ಮರಳು ದಿಬ್ಬಗಳಲ್ಲಿ ಒಟ್ಟು 7,13,090 ಮೆ.ಟನ್ ಮರಳನ್ನು ತೆರವುಗೊಳಿಸಲು ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರದಿಂದ (KSCZMA) ಕರಾವಳಿ ನಿಯಂತ್ರಣ ವಲಯ ನಿರಾಕ್ಷೇಪಣಾ ಪತ್ರ (CRZ Clearence) ದೊರೆತಿರುತ್ತದೆ. ಈ ಸಂಬಂಧ ಮಾ. 16 ರ ಸೋಮವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ 07 ಸದಸ್ಯರ ಸಮಿತಿ ಸಭೆಯಲ್ಲಿ ಸಾಂಪ್ರದಾಯಿಕ ಮರಳು ಪರವಾನಿಗೆದಾರರಿಗೆ ಸದರಿ ಮರಳು ದಿಬ್ಬಗಳನ್ನು ತೆರವುಗೊಳಿಸಲು ತಾತ್ಕಾಲಿಕ ಪರವಾನಿಗೆಯನ್ನು ನೀಡಲು ತೀರ್ಮಾನಿಸಲಾಗಿರುತ್ತದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಕಟಣಾ ಫಲಕದಲ್ಲಿ ಮರಳು ದಿಬ್ಬಗಳ ವಿವರಗಳನ್ನು ಈಗಾಗಲೇ ಪ್ರಕಟಿಸಿದ್ದು,2019 ರ ಸೆಪ್ಟಂಬರ್ 17 ಮತ್ತು 30 ರಂದು ನಡೆದ ಜಿಲ್ಲಾ 07 ಸದಸ್ಯರ ಸಮಿತಿ ಸಭೆಗಳಲ್ಲಿ ನಿರ್ಣಯಿಸಿದಂತೆ, ಅರ್ಹ ಸಾಂಪ್ರದಾಯಿಕ ಮರಳು ಪರವಾನಿಗೆದಾರರು ಮರಳು…
