ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋಳಿ ಶೀತ ಜ್ವರ ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಕೋಳಿ ಶೀತ ಜ್ವರದ ಕಣ್ಗಾವಲಿನ ಕ್ರಮ ಕೈಗೊಳ್ಳುವ ಸರ್ವೇಕ್ಷಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋಳಿಶೀತ ಜ್ವರವು ಈಗಾಗಲೇ ಮೈಸೂರು ಮತ್ತು ದಾವಣಗೆರೆಯಲ್ಲಿ ಕಂಡು ಬಂದಿದ್ದು, ಜಿಲ್ಲೆಯ ಕೋಳಿ ಮಾರಾಟಗಾರರು, ಈ ಜಿಲ್ಲೆಗಳಿಂದ ಕೋಳಿಗಳನ್ನು ತರಿಸದಂತೆ ಸೂಚನೆಯನ್ನು ನೀಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಕೋಳಿ ಸಾಕಾಣಿಕ ಕೇಂದ್ರಗಳು, ಕೋಳಿ ಮಾಂಸ ಮಾರಾಟ ಕೇಂದ್ರಗಳು ಹಾಗೂ ಕೋಳಿ ಸಾಗಾಣಿಕೆ ವಾಹನಗಳ ಚಲನ-ವಲನಗಳ ಮೇಲೆ ನಿಗಾವಹಿಸಲಾಗುತ್ತಿದೆ, ಫಾರಂ ಮಾಲೀಕರು ಕೋಳಿ ಸಾಕಾಣಿಕೆ ಸ್ಥಳದ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು, ಫಾರಂಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಅಗತ್ಯ ಸುರಕ್ಷಾ ವಸ್ತ್ರಗಳನ್ನು ಧರಿಸುವಂತೆ ಸೂಚಿಸಿದರು. ಕೋಳಿ ಸಾಕಾಣಿದಾರರಿಗೆ, ಫಾರಂ ಮಾಲೀಕರಿಗೆ, ಕೆಲಸಗಾರರಿಗೆ, ಪಕ್ಷಿಧಾಮಗಳ ಹತ್ತಿರವಿರುವ ಸಾರ್ವಜನಿಕರಿಗೆ ಹಾಗೂ ರೈತರಿಗೆ ಹಕ್ಕಿ ಜ್ವರದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ರೆಡ್ ಕ್ರಾಸ್ ಘಟಕ, ಕಮಲಶಿಲೆ ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್, ರಿವರ್ ಸೈಡ್ ರೋಟರಿ ಆಶ್ರಯದಲ್ಲಿ ಕುಂದಾಪುರ ಮಿನಿ ವಿಧಾನ ಸೌಧ ಎದುರು ಮಂಗಳವಾರ ನಡೆದ ಕರೋನಾ, ಹೆಚ್1 ಎನ್1, ಹಕ್ಕಿ ಜ್ವರ, ಮಂಗನ ಕಾಯಿಲೆ ಜಾಗೃತಿ ರಥಕ್ಕೆ ಚಾಲನೆ ನೀಡಲಾಯಿತು. ಚಾಲನೆ ನೀಡಿದ ಕುಂದಾಪುರ ಉಪ ವಿಭಾಗಾಧಿಕಾರಿ ಕೆ. ರಾಜು ಮಾತನಾಡಿ ಕರೋನಾ ಬಗ್ಗೆ ಪ್ರಸಕ್ತ ಮಾಧ್ಯಮ ಯಾವ ರೀತಿ ಕೆಲಸ ಮಾಡುತ್ತಿದೆ ಎನ್ನುವುದನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಸತ್ಯ ಸುಳ್ಳುಗಳು ಜನರ ನಡುವೆ ಹರಿದಾಡುವಂತಾಗಿದೆ. ಯಾರೂ ದೈರ್ಯ ಕಳೆದುಕೊಳ್ಳಬಾರದು. ಕರೋನಾ ಬಗ್ಗೆ ಜಾಗೃತಿ ಬೇಕು, ಭಯ ಬೇಡ. ಎಲ್ಲರೂ ಒಟ್ಟಾಗಿ ಕರೋನ ವಿರುದ್ಧ ಹೋರಾಡುವ ಮೂಲಕ ಹಿಮ್ಮೆಟ್ಟಿಸೋಣ ಎಂದರು. ಜಾಗೃತಿ ರಥ ಎಲ್ಲಾ ಕಡೆ ಸಂಚರಿಸಿ ಮಾಹಿತಿ ನೀಡಲಿದೆ. ತಾಲೂಕು ಆರೋಗ್ಯ ಅಧಿಕಾರಿ ನೇತೃತ್ವದಲ್ಲಿ ಜಾಗೃತಿ ರಥಕ್ಕೆ ಚಾಲನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಯಡ್ತರೆ ನೇತಾಜಿ ಯುವಕ ಮಂಡಲದ ಟೀ-ಶರ್ಟ್ ಅನ್ನು ಯುವಕ ಮಂಡಲದ ಗೌರವ ಅಧ್ಯಕ್ಷ ಹೇರಿಯ ದೇವಾಡಿಗ ಹಾಗೂ ಸಂಘ ಅಧ್ಯಕ್ಷ ರಾಘವೇಂದ್ರ ಪೂಜಾರಿ ಸಂಘದ ಕಛೇರಿ ಆವರಣದಲ್ಲಿ ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ವಿಶ್ವನಾಥ ದೇವಾಡಿಗ, ವೀರೇಂದ್ರ ಪೂಜಾರಿ, ಅರುಣ್ ಕುಮಾರ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಸೂಚನೆಯಂತೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲೆಯ ಯಾವುದೇ ಅಧಿಕಾರಿ/ಸಿಬ್ಬಂದಿಗಳಿಗೆ ಈ ಅವಧಿಯಲ್ಲಿ ರಜೆ ಮಂಜೂರು ಮಾಡದಂತೆ ಮತ್ತು ಜಿಲ್ಲಾಧಿಕಾರಿ, ಎಸ್.ಪಿ.ಸಿಇಓ ಇವರ ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಟ್ಟು ತೆರಳದಂತೆ ಹಾಗೂ ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೊರೋನ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಲಾಡ್ಜ್‌ಗಳಲ್ಲಿರುವ ಪ್ರವಾಸಿಗರ ವಿವರಗಳನ್ನು ಪಡೆಯುವಂತೆ ಮತ್ತು ಪ್ಲಾಟ್‌ಗಳಿಗೆ ಹೊಸದಾಗಿ ಬರುವವರ ಮಾಹಿತಿ ಪಡೆದು ಅವರ ಸ್ವ-ಹೇಳಿಕೆ ಪಡೆಯುವಂತೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಜಿಲ್ಲೆಯಲ್ಲಿ ಮಾಸ್ಕ್‌ಗಳ ಕೊರತೆ ಸೃಷ್ಠಿಸುವುದು ಮತ್ತು ಅವುಗಳನ್ನು ಹೆಚ್ಚು ಬೆಲೆಗೆ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: 2020-21 ನೇ ಸಾಲಿನಲ್ಲಿ ಡಾ| ಬಾಬು ಜಗಜೀವನ ರಾಮ ರವರ 113 ನೇ ಹಾಗೂ ಡಾ| ಬಿ.ಆರ್ ಅಂಬೇಡ್ಕರ್ ರವರ 129 ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡುವ ಬಗ್ಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೊತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ, 2020-21 ರ ಸಾಲಿನ ಡಾ| ಬಾಬು ಜಗಜೀವನ ರಾಮ ಹಾಗೂ ಡಾ| ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿರುತ್ತದೆ. ಜಿಲ್ಲೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳು ತಮ್ಮ ಸವಿವರವುಳ್ಳ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆಯಿಂದ ಪಡೆದು ಭರ್ತಿ ಮಾಡಿ, ಮಾರ್ಚ್ 19 ರ ಒಳಗೆ ಉಪನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು. ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಮಾರ್ಚ್ 19 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಬೈಂದೂರು ತಾಲೂಕು ಕಚೇರಿ, ಮಾರ್ಚ್ 20 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕಾಪು ತಾಲೂಕು ಕಚೇರಿ, ಮಾರ್ಚ್ 21 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕುಂದಾಪುರ ಪ್ರವಾಸಿ ಮಂದಿರ, ಮಾರ್ಚ್ 23 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಕಾರ್ಕಳ ಪ್ರವಾಸಿ ಮಂದಿರ, ಮಾರ್ಚ್ 24 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಹೆಬ್ರಿ ತಾಲೂಕು ಕಚೇರಿ, ಮಾರ್ಚ್ 26 ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ಬ್ರಹ್ಮಾವರ ತಾಲೂಕು ಕಚೇರಿ, ಮಾರ್ಚ್ 30 ರಂದು ಬೆಳಿಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: 2019-20 ನೇ ಸಾಲಿನ ಸ್ವಯಂ ಉದ್ಯೋಗ, ಸಮೃದ್ಧಿ, ಉನ್ನತಿ, ಐರಾವತ, ಪ್ರೇರಣಾ, ಸ್ಪೂರ್ತಿ, ಭೂ ಒಡೆತನ, ಗಂಗಾ ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದಂತೆ, ಅರ್ಹ ಸಫಾಯಿ ಕರ್ಮಚಾರಿ / ಮ್ಯಾನುವಲ್ ಸ್ಕಾವೆಂಜರ‍್ಸ್ ಹಾಗೂ ಅವರ ಅವಲಂಬಿತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ನಿಗಮದ ವೆಬ್‌ಸೈಟ್ www.ksskdc.kar.nic.in ಮುಖಪುಟ ಮೆನುವಿನಲ್ಲಿ ಆನ್‌ಲೈನ್ ಮೂಲಕ ಏಪ್ರಿಲ್ ೩೦ ರ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ಇವರನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಆಶ್ರಯದಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಜಯಾ ಕಾಲೇಜು, ಮೂಲ್ಕಿ ಇಲ್ಲಿನ ಪ್ರಾಧ್ಯಾಪಕರಾದ ಅಶ್ವಿನ್ ಎಂ ಅವರು ಮಾತನಾಡಿ ಸಂಸ್ಕೃತ ಭಾಷೆಯ ಹಾಗೂ ಸಂಸ್ಕೃತಿಯ ರಕ್ಷಕರಾಗೋಣ. ಸಂಸ್ಕೃತ ಭಾಷೆಯು ಭಾರತೀಯತೆಯನ್ನು ಉಳಿಸುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಸಂಸ್ಕೃತ ವಿಭಾಗ ಮುಖ್ಯಸ್ಥೆ ಡಾ.ಯಶವಂತಿ ಸ್ವಾಗತಿಸಿದರು. ಉಪನ್ಯಾಸಕಿ ಗಾಯತ್ರಿ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಕೃತೋತ್ಸವ ಪ್ರಯುಕ್ತ ನಡೆದ ವಿವಿಧ ಸ್ಪರ್ಧಾ ವಿಜೇತರರಾದ ಮತ್ತು ಚಟುವಟಿಕೆಗಳಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿನಿ ಮೇಘನಾ ಪ್ರಭು ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಗ್ರಾಮ ಸರ್ಕಾರವನ್ನು ಸ್ಥಳೀಯ ಸ್ವಯಂ ಸರ್ಕಾರವಾಗಿ ರೂಪಿಸುವ ಮೂಲಕ ಗ್ರಾಮ ಸ್ವರಾಜ್ಯದ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವ ಬದಲು ಗ್ರಾಮ ಪಂಚಾಯತ್ ಮತ್ತು ಗ್ರಾಮಸಭೆಯ ಅಧಿಕಾರವನ್ನು ಕಿತ್ತುಕೊಂಡು ಇಡೀ ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಹೊರಟಿರುವ ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ನಡೆಗಳನ್ನು ಕುಂದಾಪುರ ತಾಲೂಕು ಪಂಚಾಯತ್ ರಾಜ್ ಒಕ್ಕೂಟವು ತೀವ್ರವಾಗಿ ಖಂಡಿಸುತ್ತದೆ ಎಂದು ಪಂಚಾಯತ್ ರಾಜ್ ಒಕ್ಕೂಟದ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಹೇಳಿದರು. ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಸರ್ಕಾರದ ನಡೆಯ ಕುರಿತು ಚರ್ಚಿಸಲು ಕುಂದಾಪುರ ತಾಲೂಕು ಪಂಚಾಯತ್ ರಾಜ್ ಒಕ್ಕೂಟವು ಸೋಮವಾರ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಿತು. ಈಗ ಇರುವ ಗ್ರಾಮ ಸ್ವರಾಜ್ ಕಾಯ್ದೆಯು ಉತ್ತಮವಾದ ಕಾಯ್ದೆಯಾಗಿದ್ದು ಗ್ರಾಮ ಸ್ವರಾಜ್ ಸ್ಥಾಪನೆಗೆ ಪೂರಕವಾದ ಎಲ್ಲಾ ಅಂಶಗಳನ್ನು ಒಳಗೊಂಡಿದೆ. ಈ ಕಾಯ್ದೆಯ ತಿದ್ದುಪಡಿ ಸಮಯದಲ್ಲಿ ಕುಂದಾಪುರ ಪಂಚಾಯತ್ ರಾಜ್ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನವು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಯಶಸ್ಸು ಸುಲಭಕ್ಕೆ ಸಿಗುವುದಿಲ್ಲ. ಅದರ ಹಿಂದೆ ತುಂಬಾ ಪರಿಶ್ರಮವಿದೆ. ಎಂದು ಪತ್ರಕರ್ತರಾದ ಲಕ್ಷ್ಮಿ ಮಚ್ಚಿನ ಅವರು ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಇಂಗ್ಲೀಷ್, ಮನಃಶಾಸ್ತ್ರ ಮತ್ತು ಪತ್ರಿಕೋದ್ಯಮ ವಿಭಾಗಗಳ ಸಹಯೋಗದಲ್ಲಿ ನಡೆದ ಸಂವೇದನಾ- ೨೦೨೦ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸತತ ಪರಿಶ್ರಮ ಮತ್ತು ಕಾಯುವಿಕೆಯಲ್ಲಿ ಸಿಗುವಂತಹ ಅಪ್ಯಾಯಮಾನ ಖುಷಿ ಪರಿಪೂರ್ಣ ಯಶಸ್ಸಾಗಿದೆ. ಜೀವನದಲ್ಲಿ ಅವಕಾಶಗಳು ನಮಗೆ ಸಿಕ್ಕಾಗ ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಮತ್ತೆ ಆ ಅವಕಾಶಗಳು ನಮಗೆ ಒದಗಿ ಬರುವುದಿಲ್ಲ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ| ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಇಂಗ್ಲೀಷ್ ವಿಭಾಗ ಮುಖ್ಯಸ್ಥರಾದ ಮೀನಾಕ್ಷಿ ಎನ್,ಎಸ್ ಸ್ವಾಗತಿಸಿದರು. ಪತ್ರಿಕೋದ್ಯಮ ವಿಭಾಗದ ಸುಮಲತಾ ಪ್ರಾಸ್ರಾವಿಕವಾಗಿ ಮಾತನಾಡಿದರು. ಮನಃಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸವಿತಾ ಕೆ ವಂದಿಸಿದರು. ವಿದ್ಯಾರ್ಥಿನಿಯರಾದ ಕೀರ್ತಿ ಎಸ್, ಮೇಘನಾ ಪ್ರಭು ಮತ್ತು ಗೌತಮಿ ಗಾಣಿಗ ಅನಿಸಿಕೆ ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ಪ್ರಿಯಾ ಮಂಜ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.…
