ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019 ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಲೇಖಕರ ವಯೋಮಿತಿಯನ್ನು 18 ರಿಂದ 40 ವರ್ಷಕ್ಕೆ ಹೆಚ್ಚಿಸಲಾಗಿದೆ. ಅರ್ಜಿಗಳನ್ನು ಏಪ್ರಿಲ್ 15 ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು, ಇವರಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು, ದೂರವಾಣಿ ಸಂಖ್ಯೆ: 080-22484516 / 22017704 ನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕೊರೊನಾ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಮುಂಜಾಗೃತ ಕ್ರಮವಾಗಿ ಸರಕಾರದ ಆದೇಶದಂತೆ ಉಡುಪಿ ಜಿಲ್ಲೆಯಲ್ಲಿ ಎಪ್ರಿಲ್ 4 ರಿಂದ 14 ರ ವರೆಗೆ ಹಮ್ಮಿಕೊಳ್ಳಲಾಗಿದ್ದ ಸೇನಾ ನೇಮಕಾತಿ ರ‍್ಯಾಲಿಯನ್ನು ರದ್ದುಗೊಳಿಸಿ, ಜನವರಿ 2021 ಕ್ಕೆ ಮುಂದೂಡಲಾಗಿದೆ. ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಅರ್ಜಿಯನ್ನು ಜನವರಿ 2021 ರ ಸೇನಾ ರ‍್ಯಾಲಿಯಲ್ಲಿ ಪರಿಗಣಿಸಲಾಗುತ್ತದೆ ಹಾಗೂ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಯ ಅರ್ಹತಾ ಮಾನದಂಡಗಳಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ, ಅಭ್ಯರ್ಥಿಗಳಲ್ಲಿ ಯಾವುದೇ ಗೊಂದಲ ಬೇಡ ಎಂದು ಮಂಗಳೂರು ಸೇನಾ ನೇಮಕಾತಿಯ ನಿರ್ದೇಶಕ ಕರ್ನಲ್ ಎಫ್.ಪಿ ದುಬಾಶ್ ಮಾಹಿತಿ ನೀಡಿದರು. ಅವರು ಸೋಮವಾರ ಡಾ| ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಸೇನಾ ನೇಮಕಾತಿ ರ‍್ಯಾಲಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿ, ಸೇನಾ ರ‍್ಯಾಲಿಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬಿಲ್ಲವ ಅಸೋಸಿಯೇಶನ್ ಬೆಂಗಳೂರು ರಿ. ನೇತೃತ್ವದಲ್ಲಿ ಬೈಂದೂರು ತಾಲೂಕು ಬಿಲ್ಲವರ ಸಂಘದ ಸಹಯೋಗದೊಂದಿಗೆ ಎ.19ರ ಭಾನುವಾರ ನಾಗೂರಿನ ಸಾಗರ ಸಭಾ ಭವನದಲ್ಲಿ ವಧು-ವರ ಅನ್ವೇಷಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸೋಮವಾರ ಬೈಂದೂರು ಪ್ರೆಸ್‌ಕ್ಲಬ್‌ನಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ಎಂ. ವೇದಕುಮಾರ್ ಮಾತನಾಡಿ, ಬೆಂಗಳೂರಿನಲ್ಲಿ ಪ್ರತಿವಾರ ವಧುವರ ಅನ್ವೆಷಣೆ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ದೂರದ ಊರುಗಳಿಂದ ಬರುವ ವಧು-ವರರು ಮತ್ತು ಅವರ ಹೆತ್ತವರಿಗೆ ತಂಗಲು ಸರಿಯಾದ ವ್ಯವಸ್ಥೆಯಿಲ್ಲದೆ ಆಗುತ್ತಿರುವ ಅನಾನುಕೂಲ ಹಾಗೂ ಆರ್ಥಿಕ ತೊಂದರೆಯನ್ನು ಗಮನಿಸಿ ಮಂಗಳೂರು, ಕಾಸರಗೋಡು, ಶಿವಮೊಗ್ಗ, ಉಡುಪಿ, ಕುಂದಾಪುರ ಮೊದಲಾದೆಡೆ ಪ್ರತ್ಯೇಕವಾಗಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಮೊದಲ ಭಾರಿಗೆ ಬೈಂದೂರು ತಾಲೂಕಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಸರಳ ಮದುವೆ, ದುಂದುವೆಚ್ಚ ಕಡಿತ, ವಧು-ವರರಲ್ಲಿ ಸಮನ್ವಯತೆಯ ಕೊರತೆ ನಿವಾರಿಸುವುದು ಮೊದಲಾದ ಸದುದ್ದೇಶಗಳೊಂದಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಬಿಲ್ಲವ ಸಮಾಜದ ವಧು ವರರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಶನ್‌ನ…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಬದುಕಿಗೆ ವಿಮುಖವಾಗಿ ಕಾರಂತರು ಇದ್ದವರಲ್ಲ. ಕಾರಂತರನ್ನು ಚಿರಸ್ಥಾಯಿಯನ್ನಾಗಿ ಉಳಿಸಿಕೊಳ್ಳುವುದಕ್ಕೆ ಸಂಘ ಸಂಸ್ಥೆಗಳನ್ನು ಕಟ್ಟುವ ಅಗತ್ಯವಿಲ್ಲ. ಅವರ ಸಾಹಿತ್ಯ ಕೃತಿಗಳೇ ಅವರನ್ನು ಚಿರಾಯುವಾಗಿ ಉಳಿಸುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಮ್ ಮೋಹನ್ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಶಿವರಾಮ ಕಾರಂತ ಪ್ರತಿಷ್ಠಾನ, ಮೂಡುಬಿದಿರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವರಾಮ ಕಾರಂತ ಪ್ರಶಸ್ತಿ, ಶಿವರಾಮ ಕಾರಂತ ಪುರಸ್ಕಾರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಕೋಟ ಶಿವರಾಮ ಕಾರಂತರು ಸಾಹಿತ್ಯ ಕ್ಷೇತ್ರದಲ್ಲಿ ಪ್ರಭಾವಿಸಿದ ಪರಿ ದೊಡ್ಡದು. ವಿಚಾರ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದವರು ಕಾರಂತರು. ಅವರದ್ದು ಅಂಕುಶವಿಲ್ಲದ ವೈಚಾರಿಕ ಪ್ರಜ್ಞೆ. ಎಂದಿಗೂ ಜಾತಿ, ಧರ್ಮವನ್ನು ಭಿನ್ನತೆಯನ್ನು ಬೆಂಬಲಿಸಿದವರಲ್ಲ. ಕಾರಂತರ ಚಿಂತನೆ, ಸಾಹಿತ್ಯ ಎಂದಿಗೂ ಪ್ರಸ್ತುತ. ಅವರ ಜೀವನಾದರ್ಶವೇ ನಮ್ಮ ಬದುಕಿಗೆ ಪಾಠ ಎಂದರು. ಶಿವರಾಮ ಕಾರಂತ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಹಿರಿಯ ಸಾಹಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಬ್ಯಾಂಕಿಂಗ್ ಫೌಂಡೇಶನ್ ಕೋರ್ಸ್ ತರಬೇತಿ ಕಾರ್ಯಕ್ರಮ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾದ ರಾಧೇಶ್ ಕಾಮತ್ ಅಸಿಸ್ಟೆಂಟ್ ಬ್ಯಾಂಕ್ ಮ್ಯಾನೇಜರ್ ಬಾಗಲಕೋಟೆ ಇವರು ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಪರೀಕ್ಷೆಗಳ ಕುರಿತು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ, ಪ್ರೌಢಶಾಲಾ ಮುಖ್ಯಸ್ಥರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಹೆಣ್ಣು ಮಕ್ಕಳು ವಿದ್ಯಾರ್ಥಿ ದೆಸೆಯಲ್ಲಿಯೇ ವಿವಿಧ ನೆಲೆಯಲ್ಲಿ ಸಾಮಾಜಿಕವಾಗಿ ತನ್ನನ್ನು ತೊಡಗಿಸಿಕೊಳ್ಳಬೇಕು. ಪುರುಷ ಪ್ರಧಾನ ವ್ಯವಸ್ಥೆ, ಸಾಮಾಜಿಕವಾಗಿ ಮಹಿಳೆ ಬಹುಮುಖಿ ನೆಲೆಯಲ್ಲಿ ತನ್ನನ್ನು ಗುರುತಿಸಿಕೊಂಡು ಆದರ್ಶ ನಾರಿಯಾಗಿ ಬಾಳಬೇಕು ಎಂದು ಸ.ವಿ.ಹಿರಿಯ ಪ್ರಾಥಮಿಕ ಶಾಲೆಯ ಗೌರವ ಶಿಕ್ಷಕಿ ರೇಣುಕಾ ಆರ್.ನಾಯಕ್ ಹೇಳಿದರು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಇವರ ಆಶ್ರಯದಲ್ಲಿ ಜರಗಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ.ವಿ.ಹಿರಿಯ ಪ್ರಾಥಮಿಕ ಶಾಲೆಯ ಗೌರವ ಶಿಕ್ಷಕಿಯರಾದ ಲಕ್ಷ್ಮೀ ಖಾರ್ವಿ, ಮಾಲಾಶ್ರೀ ಖಾರ್ವಿ, ರೇಖಾ ಖಾರ್ವಿ, ಭೂದೇವಿ ಶುಭ ಹಾರೈಸಿದರು. ಸಾರ್ವಜನಿಕ ಸೇವಾ ಕ್ಷೇತ್ರದ ಸಾಧನೆಗಾಗಿ ಗಂಗೊಳ್ಳಿ ಮಲ್ಯರಬೆಟ್ಟು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ರೇಖಾ ಕೆ.ಖಾರ್ವಿ ಅವರನ್ನು ಸನ್ಮಾನಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಜಿ.ವಿಶ್ವನಾಥ ಭಟ್, ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿ, ಸಹಶಿಕ್ಷಕ ನಾರಾಯಣ ಉಪಾಧ್ಯಾಯ, ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್, , ಜಿ.ಈಶ್ವರ,…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ, ಹೊರ ರಾಜ್ಯ ಹಾಗೂ ದೇಶ-ವಿದೇಶಗಳಿಂದ ಭಕ್ತಾದಿಗಳು ಆಗಮಿಸಿ ಶ್ರೀ ದೇವಿಯ ದರ್ಶನವನ್ನು ಪಡೆಯುತ್ತಿದ್ದು, ಪ್ರಸ್ತುತ ಕೊರೋನಾ ವೈರಸ್ ಸೋಂಕು ದೇಶ ವಿದೇಶದಲ್ಲಿ ಹರಡುತ್ತಿರುವುದಲ್ಲದೇ ಇದೀಗ ರಾಜ್ಯ ಹಾಗೂ ಜಿಲ್ಲೆಯಲ್ಲಿಯೂ ಸಹ ಹರಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕ್ಷೇತ್ರಕ್ಕೆ ಭೇಟಿ ನೀಡಲು ಇಚ್ಚಿಸಿರುವ ಭಕ್ತರು ತಮ್ಮ ಪ್ರವಾಸವನ್ನು ಒಂದು ವಾರದ ಕಾಲ ಮುಂದೂಡಿ ಸಹಕರಿಸುವಂತೆ ಕೊಲ್ಲೂರು ದೇವಳದ ಪ್ರಕಟಣೆಯಲ್ಲಿ ಕೋರಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಭಾರತೀಯ ರೆಡ್‌ಕ್ರಾಸ್ ಸೊಸೈಟಿ, ಕುಂದಾಪುರ ಘಟಕ, ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ ಹಾಗೂ ರೆಡ್ ರಿಬ್ಬನ್ ಕ್ಲಬ್ ವತಿಯಿಂದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ತರಬೇತುದಾರರಾದ ಡಾ| ಸೋನಿ, ಡಾ| ಕೀರ್ತಿಪಾಲನ್ ಹಾಗೂ ಅಲ್ಡ್ರಿನ್‌ರವರು ಪ್ರಥಮ ಚಿಕಿತ್ಸೆ ಕುರಿತು ಪ್ರಾಯೋಗಿಕವಾಗಿ ತರಬೇತಿ ನೀಡಿದರು. ಮುಖ್ಯ ಅತಿಥಿ, ಕುಂದಾಪುರ ಭಾರತೀಯ ರೆಡ್‌ಕ್ರಾಸ್ ಘಟಕದ ಅಧ್ಯಕ್ಷರಾದ ಜಯಕರ್ ಶೆಟ್ಟಿ ಮಾತನಾಡಿ, ಯಾವ ಸಂದರ್ಭದಲ್ಲಿ ಯಾವ ರೀತಿಯ ಪ್ರಥಮ ಚಿಕಿತ್ಸೆಯ ಅಗತ್ಯವಿದೆ ಎನ್ನುವುದರ ಕುರಿತಾದ ತಿಳುವಳಿಕೆ ಅವಶ್ಯಕ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಭಾರತೀಯ ರೆಡ್‌ಕ್ರಾಸ್ ಘಟಕದ ಖಜಾಂಚಿ ಶಿವರಾಮ್ ಶೆಟ್ಟಿ ಹಾಗೂ ಕಾರ್ಯಕ್ರಮ ಅಧಿಕಾರಿ ಮುತ್ತಯ್ಯ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಶಿವರಾಜ್ ಸಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸ್ವಚ್ಛತೆಯನ್ನು ನಮ್ಮದಾಗಿಸಿಕೊಳ್ಳಬೇಕು ಹಾಗೂ ಅದನ್ನು ಕಾಪಾಡಿಕೊಳ್ಳಲು ಸರಿಯಾದ ಕ್ರಮ ತೆಗೆದುಕೊಳ್ಳುವುದು ಅಗತ್ಯ ಎಂದು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಅಡಿಶ್‌ನಲ್ ಪ್ರಾಧ್ಯಾಪಕರಾದ ಡಾ| ಅಶ್ವಿನಿ ಕುಮಾರ್ ಹೇಳಿದರು. ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ರಾಧಾಬಾಯಿ ಸಭಾಂಗಣದಲ್ಲಿ ಕಾಲೇಜಿನ ಯುತ್ ರೆಡ್‌ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರಸಾಯನಶಾಸ್ತ್ರ ವಿಭಾಗಗಳ ಸಹಯೋಗದಲ್ಲಿ ಕೋವಿಡ್-19 ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಮಾಂಸಹಾರ ತಿನ್ನುವುದರಿಂದ ಯಾವುದೇ ಕಾಯಿಲೆ ಅಥವಾ ಕೊರೊನಾ ವೈರಸ್ ಬರುವ ಸಾಧ್ಯತೆ ಇಲ್ಲ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದಲ್ಲದೇ ದೇಶದ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ| ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥರಾದ ನಿಶಾ, ಯುಥ್ ರೆಡ್‌ಕ್ರಾಸ್ ವಿಂಗ್ ಅಧಿಕಾರಿ ಪ್ರೊ.ಸತ್ಯನಾರಾಯಣ, ಮತ್ತು ಮತ್ತು ಎನ್.ಎಸ್.ಎಸ್ ಅಧಿಕಾರಿ ಅರುಣ ಎ.ಎಸ್.ಉಪಸ್ಥಿತರಿದ್ದರು. ಯುಥ್ ರೆಡ್‌ಕ್ರಾಸ್ ವಿಂಗ್ ಅಧಿಕಾರಿಣಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಸೇವಾ ಸಂಗಮ ಶಿಶುಮಂದಿರದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಬೈಂದೂರು ಮತ್ತು ಸೇವಾ ಸಂಗಮ ಶಿಶುಮಂದಿರದ ಮಾತೃ ಮಂಡಳಿಯ ಸಹಯೋಗದಲ್ಲಿ ಇನ್ನರ್ ವ್ಹಿಲ್ ಕ್ಲಬ್‌ನ ಹಿರಿಯ ಸದಸ್ಯರಾದ ಸೀತಾ ಶ್ರೀನಿವಾಸ್ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಸನ್ಮಾನಗೊಂಡ ಸೀತಾ ಶ್ರೀನಿವಾಸ್ ಮಾತನಾಡಿ ಮಹಿಳೆಯರಿಗೆ ವಿದ್ಯಾಭ್ಯಾಸದ ಅಗತ್ಯತೆಯ ಬಗ್ಗೆ ತಿಳಿಸಿದರು. ಇನ್ನರ್ ವ್ಹಿಲ್ ಕ್ಲಬ್‌ನ ಅಧ್ಯಕ್ಷೆ ನಾಗರತ್ನ ಮಂಜುನಾಥ್ ಶೆಟ್ಟಿ ಸ್ವಾಗತಿಸಿ, ಮಹಿಳೆಯರಿಗೆ ಪ್ರಶಕ್ತ ಸಮಾಜದಲ್ಲಿ ತಮ್ಮ ಹಕ್ಕು ಭಾದ್ಯತೆಗಳನ್ನು ಪಡೆದುಕೊಳ್ಳುವ ಬಗ್ಗೆ ಜಾಗ್ರತೆ ಮೂಡಿಸಿದರು. ಸ್ಥಾಪಕಾಧ್ಯಕ್ಷೆ ಚಂದ್ರಕಲಾ ಶೆಟ್ಟಿಯವರು ನಮ್ಮ ಸಂಸ್ಕ್ರತಿ, ಸಂಸ್ಕಾರವನ್ನು ಉಳಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಸೇವಾಸಂಗಮದ ಮಾತಾಜೀ ಸುಮನ, ಆಶಾ ಮತು ಭಾನುಮತಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಲತಿಕಾ ನಂಬಿಯಾರ್‌ರವರು ಕಾರ್ಯಕ್ರಮ ನಿರೂಪಿಸಿದರು. . I. S. O. ಉಷಾ ಹೆಗ್ಡೆಯವರು ಧನ್ಯವಾದ ಸಮರ್ಪಣೆ ಮಾಡಿದರು.
