ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಕೊಂಕಣಿ ಖಾರ್ವಿ ಸಮಾಜದ ಅಭಿವೃದ್ಧಿ ದೃಷ್ಟಿಯಿಂದ ಹುಟ್ಟಿದ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ಸುಧೀರ್ಘ ಇತಿಹಾಸ ಹೊಂದಿದೆ. ಸರಕಾರದ ಸೌಲಭ್ಯಗಳನ್ನು ಕಟ್ಟಕಡೆಯ ಮೀನುಗಾರ ಕುಟುಂಬಗಳಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಉತ್ತಮ ದಕ್ಷ, ಪಾರದಕ್ಷಕ ಆಡಳಿತದ ಮೂಲಕ ಸಂಸ್ಥೆಯನ್ನು ಸದೃಢವಾಗಿ ಬೆಳೆಸಲಾಗುವುದು. ಮೀನುಗಾರರ ಏಳಿಗೆ ಹಾಗೂ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ನೂತನ ಅಧ್ಯಕ್ಷ ಸದಾಶಿವ ಖಾರ್ವಿ ಹೇಳಿದರು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ಕಛೇರಿಯಲ್ಲಿ ಬುಧವಾರ ಜರಗಿದ ಅಭಿನಂದನಾ ಸಭೆಯಲ್ಲಿ ಅವರು ಮಾತನಾಡಿದರು. ಸಂಘದ ಸದಸ್ಯರಿಗೆ ಚಿನ್ನಾಭರಣ ಸಾಲ ಹಾಗೂ ಮುಚ್ಚಿರುವ ಡೀಸೆಲ್ ಬಂಕ್ ಪುನರಾರಂಭಕ್ಕೆ ಆದ್ಯತೆ ನೀಡಲಾಗುವುದು. ಇತರ ಆರ್ಥಿಕ ಸಂಸ್ಥೆಗಳ ಪೈಪೋಟಿ ನಡುವೆಯೂ ಸಂಘದ ಅಭಿವೃದ್ಧಿಗೆ ಪೂರಕವಾದ ಯೋಜನೆ ರೂಪಿಸಿ, ಸಂಘದ ಸದಸ್ಯರ ನಂಬಿಕೆ, ವಿಶ್ವಾಸಕ್ಕೆ ಯಾವುದೇ ಚ್ಯುತಿ ಬಾರದಂತೆ ಎಲ್ಲಾ ಹಿರಿಯ ಸಹಕಾರಿಗಳ ಮಾರ್ಗದರ್ಶ ಪಡೆದು ಕಾರ್ಯನಿರ್ವಹಿಸುವುದಾಗಿ ಅವರು ಭರವಸೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ವಿದ್ಯಾರ್ಥಿಗಳಿಗೆ ತಮ್ಮ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಉಪಯೋಗವಾಗುವಂತಹ ವೇದ ಗಣಿತದ ಸೂತ್ರಗಳಾದ ಎಕಾಧಿಕೇನ, ಪೂರ್ವೇಣ, ಏಕನ್ಯೂನೇನ ಪೂರ್ವೇಣ, ಯುವಧನಂ, ನಿಖಿಲಂ, ನವತಾಶ್ಚರ್‌ಮಾಮ್ ದಶತಾಹ್‌ವನ್ನು ಹಾಗೂ ವೇದಗಣಿತದ ಮಹತ್ವದ ಬಗ್ಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೊಟೇಶ್ವರದ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀಮತಿ ಅಡಿಗರವರು ವಿವರಿಸಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರಿನ ಗಣಿತಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಮತ್ತು ಭರವಶಾ ಕೋಶ ಏರ್ಪಡಿಸಿದ ವೇದಗಣಿತ ತರಬೇತಿ ಕಾರ್ಯಗಾರ ಉದ್ದೇಶಿಸಿ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ.ಅಶ್ವತ್ಥ ದೇವರಾಯ ನಾಯ್ಕ ಉಪಸ್ಥಿತರಿದ್ದರು. ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ಕು. ಪ್ರೀಯಾ ಜೋಸೆಫ್‌ರವರು ಸ್ವಾಗತಿಸಿದರು. ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿನಿಯಾದ ಮೈತ್ರಿಯವರು ಕಾರ್ಯಕ್ರಮ ನಿರೂಪಿಸಿದರು. ಗಣಿತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಕು. ಸಂಗೀತಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಉತ್ತಮ ಬರಹಗಾರನಾಗಲು ತಾಳ್ಮೆ ಅತೀ ಅಗತ್ಯ. ಪ್ರತಿಯೊಂದು ವಿಷಯದ ಕುರಿತು ಕೂಲಂಕುಷವಾಗಿ ಚಿಂತನೆ ನಡೆಸಿ, ತದನಂತರದಲ್ಲಿ ಆ ವಿಚಾರವನ್ನು ಬರಹದ ರೂಪದಲ್ಲಿ ಮಂಡಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಎ.ಎಂ. ಖಾನ್ ಹೇಳಿದರು. ಇವರು ಆಳ್ವಾಸ್ ಕಾಲೇಜಿನಲ್ಲಿ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ( ಮಾಮ್) ವತಿಯಿಂದ ನಡೆದ ೨೦೧೮-೧೯ನೇ ಸಾಲಿನ ಮಾಮ್ ಇನ್‌ಸ್ಪೈರ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು. ರಚನಾತ್ಮಕ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರ ಕೊಡುಗೆ ಅತ್ಯಗತ್ಯ. ಆದರೆ ಆಧುನಿಕತೆಯ ಭರದಲ್ಲಿ ಸಾಗುತ್ತಿರುವ ಇಂದಿನ ಜಗತ್ತಿನಲ್ಲಿ ಯುವಜನಾಂಗ ಎಲ್ಲೋ ಹಳಿ ತಪ್ಪಿ ನಡೆಯುತ್ತಿದೆ. ಇಂತಹವರನ್ನು ಸರಿಯಾದ ದಾರಿಯಲ್ಲಿ ನಡೆಸಿ ಉತ್ತಮ ಸಮಾಜ ನಿರ್ಮಾಣ ಮಾಡುವುದು ಮಾಧ್ಯಮದ ಜವಬ್ದಾರಿ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಮೋಹನ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಸಂಕುಚಿತ ಮನೋಭಾವನೆಯಿಂದ ದೂರವಿರಬೇಕು. ಆಗ ಮಾತ್ರ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಯಶಸ್ಸು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ ಸಂಸ್ಥೆಯ ಸಹಯೋಗದೊಂದಿಗೆ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿಎ,ಸಿಎಸ್ ಫೌಂಡೇಶನ್ ತರಬೇತಿ ತರಗತಿಗಳ ಉದ್ಘಾಟನೆ ನೆರವೇರಿತು. ತರಗತಿಗಳು ಮಾರ್ಚ್ 23 ರಿಂದ ಆರಂಭಗೊಳ್ಳಲಿವೆ. ಈ ಸಂದರ್ಭದಲ್ಲಿ ಅಖಿಲ ಭಾರತ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅದ್ಯಕ್ಷತೆಯನ್ನು ವಹಿಸಿದ್ದ ಶ್ರೀ ವೆಂಕಟರಮಣ ದೇವ ಶೈಕಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಕಾರ್ಯದರ್ಶಿಗಳಾದ ಕೆ ರಾಧಾಕೃಷ್ಣ ಶೆಣೈ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಎಂ.ಐ.ಟಿ. ಮಣಿಪಾಲ ಇದರ ಸಹನಿರ್ದೇಶಕರಾದ ಕೆ ನಾರಾಯಣ ಶೆಣೈ ಮುಖ್ಯ ಅತಿಥಿಗಳಾಗಿದ್ದು, ಶಿಕ್ಷಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ ಸಂಸ್ಥೆಯ ಮುಖ್ಯಸ್ಥರಾದ ಭರತ್ ಶೆಟ್ಟಿ, ಶ್ರೀ ವೆಂಕಟರಮಣ ದೇವ ಶೈಕಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಖಜಾಂಚಿ ಕೆ. ಲಕ್ಷ್ಮಿನಾರಾಯಣ ಶೆಣೈ, ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ, ಪ್ರೌಢಶಾಲಾ ಮುಖ್ಯಸ್ಥರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ಹೊಸ ತಾಲೂಕು ರಚನೆಯಿಂದಾಗಿ ಹಳ್ಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ, ಕಮಲಶಿಲೆ ಗ್ರಾಮವನ್ನು, ಕುಂದಾಪುರ ತಾಲೂಕಿನ ಆರ್ಜಿ ಗ್ರಾಮ ಪಂಚಾಯತ್‌ಗೆ ಸೇರ್ಪಡೆಗೊಳಿಸುವ ಬಗ್ಗೆ ಸರ್ಕಾರದ ಪತ್ರದಲ್ಲಿ ಅನುಮೋದನೆ ನೀಡಲಾಗಿರುತ್ತದೆ. ಅದರಂತೆ ಕಮಲಶಿಲೆ ಗ್ರಾಮವನ್ನು ಆರ್ಜಿ ಗ್ರಾಮ ಪಂಚಾಯತ್‌ಗೆ ಸೇರ್ಪಡೆಗೊಳಿಸುವ ಬಗ್ಗೆ ಕರಡು ಅಧಿಸೂಚನೆಯನ್ನು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 4 ರಂತೆ ಹೊರಡಿಸಲಾಗಿದ್ದು, ಈ ಅಧಿಸೂಚನೆ ಪ್ರಕಟಿಸಿದ 30 ದಿನಗಳ ಒಳಗೆ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ಕಚೇರಿಗೆ ಆಕ್ಷೇಪಣೆ ಸಲ್ಲಿಸುವಂತೆ, ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಲೇಖನ. ಗ್ರಾಮ ಸರ್ಕಾರವನ್ನು ಸ್ಥಳೀಯ ಸ್ವಯಂ ಸರ್ಕಾರವಾಗಿ ರೂಪಿಸುವ ಮೂಲಕ ಗ್ರಾಮ ಸ್ವರಾಜ್ಯದ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವ ಬದಲು ಗ್ರಾಮ ಪಂಚಾಯತ್ ಮತ್ತು ಗ್ರಾಮಸಭೆಯ ಅಧಿಕಾರವನ್ನು ಕಿತ್ತುಕೊಂಡು ಇಡೀ ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಹೊರಟಿರುವ ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ನಡೆಗಳನ್ನು ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನವು ತೀವ್ರವಾಗಿ ಖಂಡಿಸುತ್ತದೆ. ಈ ನಿಟ್ಟಿನಲ್ಲಿ ಸರ್ಕಾರವು ಕೆಲವು ಮುಖ್ಯ ತೀರ್ಮಾನಗಳನ್ನು ತೆಗೆದುಕೊಳ್ಳಲು ಮುಂದಾಗಿದೆ ಎಂದು ಕಳೆದ ಕೆಲವು ದಿನಗಳಿಂದ ಪತ್ರಿಕೆಯಲ್ಲಿ ವರದಿಯಾಗಿದೆ. ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯದೆ 1993ಕ್ಕೆ ತಿದ್ದುಪಡಿ ತರಲು ಬುಧುವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿರುವುದಾಗಿ ವರದಿಯಾಗಿದೆ. ತಿದ್ದುಪಡಿ ತರಬೇಕಾದ ಸುಮಾರು 20 ಅಂಶಗಳ ಬಗ್ಗೆ ಪಂಚಾಯತ್ ರಾಜ್ ಇಲಾಖೆ ಪ್ರಸ್ಥಾವನೆ ಸಿದ್ಧಪಡಿಸಿ ಕಾನೂನು ಇಲಾಖೆಗೆ ಅಭಿಪ್ರಾಯ ನೀಡುವಂತೆ ಸೂಚಿಸಿದ್ದು, ಸಂಪುಟದ ಸೂಚನೆಯ ಮೇರೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಅಧ್ಯಕ್ಷತೆಯಲ್ಲಿ ನಡೆದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿಯ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘಕ್ಕೆ ಮುಂದಿನ ಐದು ವರ್ಷ ಅವಧಿಗೆ ಅಧ್ಯಕ್ಷರಾಗಿ ಸದಾಶಿವ ಖಾರ್ವಿ ಕಂಚುಗೋಡು ಮತ್ತು ಉಪಾಧ್ಯಕ್ಷರಾಗಿ ಸೂರಜ್ ಖಾರ್ವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಸಭಾಂಗಣದಲ್ಲಿ ಬುಧವಾರ ಬೆಳಿಗ್ಗೆ ಜರಗಿದ ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸಂದರ್ಭ ಅಧ್ಯಕ್ಷ ಸ್ಥಾನಕ್ಕೆ ಸದಾಶಿವ ಖಾರ್ವಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೂರಜ್ ಖಾರ್ವಿ ನಾಮಪತ್ರ ಸಲ್ಲಿಸಿದ್ದರಿಂದ ಇವರಿಬ್ಬರು ಕ್ರಮವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಸಹಕಾರ ಸಂಘಗಳ ಹಿರಿಯ ನಿರೀಕ್ಷಕ ಸುನೀಲ್ ಕುಮಾರ್ ಸಿ.ಎಂ. ಘೋಷಿಸಿದರು. ಮಾ.1ರಂದು ನಡೆದಿದ್ದ ಸಂಘದ ಮುಂದಿನ ಐದು ವರ್ಷ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಸದಾಶಿವ ಖಾರ್ವಿ ಸಾಮಾನ್ಯ ಕ್ಷೇತ್ರದಿಂದ ಚುನಾಯಿತರಾಗಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿರುವ ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಡಲ ಕಾರ್ಯವಾಹರಾಗಿ, ಬಿಜೆಪಿ ತ್ರಾಸಿ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಬಿಜೆಪಿ ಬೈಂದೂರು ಮಂಡಲದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: 2018 & 2019 ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಪದಕ ಪಡೆದ ಹಾಗೂ ಭಾರತವನ್ನು ಅಧಿಕೃತವಾಗಿ ಪ್ರತಿನಿಧಿಸಿ ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿದ ಕರ್ನಾಟಕದ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲಾಗುತ್ತಿದೆ. ಒಲಂಪಿಕ್ ಗೇಮ್ಸ್, ಏಷಿಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್ ಮತ್ತು ವರ್ಲ್ಡ್ ಕಪ್/ ವರ್ಲ್ಡ್ ಚಾಂಪಿಯನ್‌ಶಿಪ್‌ಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ಹಾಗೂ ನ್ಯಾಷನಲ್ ಗೇಮ್ಸ್, ನ್ಯಾಷನಲ್ ಚಾಂಪಿಯನ್‌ಶಿಪ್, ಜೂನಿಯರ್ ನ್ಯಾಷನಲ್ಸ್ ಹಾಗೂ ಸಬ್ ಜೂನಿಯರ್ ನ್ಯಾಷನಲ್ಸ್‌ಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಪದಕ ಪಡೆದ ಕ್ರೀಡಾಪಟುಗಳು ಸದರಿ ನಗದು ಬಹುಮಾನಕ್ಕೆ ಅರ್ಹರಾಗಿರುತ್ತಾರೆ. ಅರ್ಹ ಕ್ರೀಡಾಪಟುಗಳು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ (ದೂರವಾಣಿ ಸಂಖ್ಯೆ: 0820-2521324, 9480886467) ಇವರಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ದೃಡೀಕೃತ ದಾಖಲೆಗಳೊಂದಿಗೆ ಏಪ್ರಿಲ್ 15 ರ ಒಳಗೆ ಹಿಂತಿರುಗಿಸಬೇಕು. ನಂತರ ಬಮರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಇಲಾಖೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ನಾಕಟ್ಟೆ ಶ್ರೀ ಕೋಟಿ ಚೆನ್ನಯ ಪಂಜುರ್ಲಿ ಗರಡಿ ನೂತನ ಶಿಲಾಮಯ ದೇಗುಲ ಸಮರ್ಪಣೆ – ಬ್ರಹ್ಮಕಲಶೋತ್ಸವ ಮೊದಲಾದ ಕಾರ್ಯಕ್ರಮಗಳು ಎಪ್ರಿಲ್ 5ರಿಂದ 13ರ ತನಕ ಜರುಗಲಿದ್ದು, ಶುಕ್ರವಾರ ಆಮಂತ್ರಣ ಪತ್ರಿಕೆಯನ್ನು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭ ಕೊಲ್ಲೂರು ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ರಮೇಶ್ ಗಾಣಿಗ ಕೊಲ್ಲೂರು, ಉದ್ಯಮಿ ರಘುರಾಮ ಶೆಟ್ಟಿ ಬಿಜೂರು, ಮದನಕುಮಾರ್ ಉಪ್ಪುಂದ, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ, ಶಿರೂರು ಬಿಲ್ಲವ ಸಂಘದ ಅಧ್ಯಕ್ಷ ಚಿಕ್ಕು ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ನಾಗರಾಜ ಶೆಟ್ಟಿ, ಆನಂದ ಶೆಟ್ಟಿ ನಾಕಟ್ಟೆ, ನಾಗರಾಜ ಗಾಣಿಗ ಬಂಕೇಶ್ವರ, ಮಂಜಯ್ಯ ಪೂಜಾರಿ ಏಳಜಿತ, ರಘುರಾಮ ಪೂಜಾರಿ ಶಿರೂರು, ಶೇಖರ ಪೂಜಾರಿ ಉಪ್ಪುಂದ, ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಯಡ್ತರೆ ನಾಕಟ್ಟೆ ಶ್ರೀ ಕೋಟಿ ಚೆನ್ನಯ ಪಂಜುರ್ಲಿ ಗರಡಿಯಲ್ಲಿ ಪರಿವಾರ ಶಕ್ತಿಗಳ ನೂತನ ಶಿಲಾಮಯ ದೇಗುಲ ಸಮರ್ಪಣೆ – ಬ್ರಹ್ಮಕಲಶೋತ್ಸವ ಮೊದಲಾದ ಕಾರ್ಯಕ್ರಮಗಳು ಎಪ್ರಿಲ್ 5ರಿಂದ 13ರ ತನಕ ಜರುಗಲಿದ್ದು, ಪೂರ್ವಭಾವಿಯಾಗಿ, ಚಪ್ಪರ ಮುಹೂರ್ತ ಕಾರ್ಯಕ್ರಮ ಆಗಮ ಪಂಡಿತರಾದ ಕೇಂಜ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕೊಲ್ಲೂರು ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ರಮೇಶ್ ಗಾಣಿಗ ಕೊಲ್ಲೂರು, ಉದ್ಯಮಿ ರಘುರಾಮ ಶೆಟ್ಟಿ ಬಿಜೂರು, ಮದನಕುಮಾರ್ ಉಪ್ಪುಂದ, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ, ಶಿರೂರು ಬಿಲ್ಲವ ಸಂಘದ ಅಧ್ಯಕ್ಷ ಚಿಕ್ಕು ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಕಾರ್ಯದರ್ಶಿ ಕಿಶೋರ್ ಕುಮಾರ್ ಸಸಿಹಿತ್ಲು, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ನಾಗರಾಜ ಶೆಟ್ಟಿ, ಆನಂದ ಶೆಟ್ಟಿ ನಾಕಟ್ಟೆ, ನಾಗರಾಜ ಗಾಣಿಗ ಬಂಕೇಶ್ವರ, ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ…
