ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೈಲ್ವೆ ಪ್ರಯಾಣಿಕರ ಹಿತರಕ್ಷಣಾ ಸಮಿತಿ ಕುಂದಾಪುರ, ಕ್ಲೀನ್ ಕುಂದಾಪುರ ಪ್ರಾಜೆಕ್ಟ್, ಕೊಂಕಣ ರೈಲ್ವೆ ಕಾರ್ಪೊರೇಷನ್, ಗ್ರಾಮಪಂಚಾಯತ್ ಕಂದಾವರ, ಎಂಐಟಿ ಕಾಲೇಜು ಕುಂದಾಪುರ (ಎನ್ಎಸ್ಎಸ್), ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರ ಮತ್ತು ಚಂದನ ಯುವಕ ಮಂಡಲ ಬೀಜಾಡಿ-ಗೋಪಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಪತ್ತು ನಿರ್ವಹಣೆ, ರಾಷ್ಟ್ರ ಸೇವಿಕಾ ಕುಂದಾಪುರ, ಅರಣ್ಯ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ರೈಲು ನಿಲ್ದಾಣ ಪರಿಸರದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಭಾನುವಾರ ನಡೆಯಿತು. ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್ ಮಾತನಾಡಿ, ರೈಲು ನಿಲ್ದಾಣದ ಸ್ಬಚ್ಚತೆ, ರೈಲು ನಿಲುಗಡೆ, ಸೇವೆಗಳ ಬಗ್ಗೆ ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಅದರ ಭಾಗವಾಗಿ ವಿವಿಧ ಸಂಘಸಂಸ್ಥೆಗಳ ಒಗ್ಗೂಡುವಿಕೆಯಲ್ಲಿ ರೈಲು ನಿಲ್ದಾಣದ ಪರಿಸರವನ್ನು ಸ್ವಚ್ಛಗೊಳಿಸುವ ಹಾಗೂ ಪರಿಸರದಲ್ಲಿ ಗಿಡ ನೆಡುವ ಕಾರ್ಯಕೈಗೊಳ್ಳಲಾಗಿದೆ. ಇಲ್ಲಿನ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ನಿರಂತರವಾಗಿ ಇಂತಹ ಕಾರ್ಯಕ್ರಮ ನಡೆಸಲಾಗುತ್ತದೆ ಎಂದರು. ಇದೇ ಸಂದರ್ಭ ಕುಂದಾಪುರ ರೈಲು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಫೆ.06: ಕೇಂದ್ರ ಸರ್ಕಾರದ ಜನ ವಿರೋಧಿ ಬಜೆಟ್ ವಿರುದ್ದ ಕುಂದಾಪುರ ಶಾಸ್ತ್ರಿ ವೃತ್ತದಲ್ಲಿ ಸಿಐಟಿಯು ಸಂಚಲನ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸಿಐಟಿಯು ಸಂಚಾಲಕ ಎಚ್. ನರಸಿಂಹ ಮಾತನಾಡಿ, ಏಷ್ಯಾದ ಮೂರನೇ ದೊಡ್ಡ ಬಜೆಟ್ ಎಂದು ಬಣ್ಣಿಸಿ ಜನ ಸಾಮಾನ್ಯರಿಗೆ ಕೊಡಮಾಡುವ ಎಲ್ಲಾ ಹಣಕಾಸು ಕಡಿತ ಮಾಡಲಾಗಿದೆ. ಬಂಡವಾಳ ಹೂಡಿಕೆ ನೆಪದಲ್ಲಿ ದೇಶದ ಜನರ ಆಸ್ತಿ ಮಾರಾಟ ಮಾಡಿ ಕಾರ್ಪೋರೇಟ್ ಲೂಟಿಗೆ ಬಜೆಟ್ ಮಂಡಿಸಿರುವುದು ಸ್ಪಷ್ಟವಾಗಿದೆ. ರಸಗೊಬ್ಬರ, ಆಹಾರ, ಉದ್ಯೋಗ ಖಾತ್ರಿ, ಕೃಷಿಗೆ ಸಂಬಂಧಿಸಿದಂತೆ ಇರುವ ಎಲ್ಲಾ ಹಣ ಕಡಿತ ಮಾಡಿದ ಜನ ದ್ರೋಹಿ ಬಜೆಟ್ ಎಂದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಸಿಐಟಿಯು ಜಿಲ್ಲಾಧ್ಯಕ್ಷ ಕೆ.ಶಂಕರ್, ಮಹಾಬಲ ವಡೇರಹೋಬಳಿ,ಬಲ್ಕೀಸ್, ಪ್ರಕಾಶ್ ಕೋಣಿ,ಲಕ್ಷ್ಮಣ ನೇತೃತ್ವವ ವಹಿಸಿದ್ದರು. ಚಂದ್ರಶೇಖರ ವಿ. ಸ್ವಾಗತಿಸಿದರು. ರಾಜು ದೇವಾಡಿಗ ವಂದಿಸಿದರು. ಬಜೆಟ್ ವಿರೋಧಿಸಿ ಕೃಷಿಕೂಲಿಕಾರರ ಪ್ರತಿಭಟನೆ:ಬೈಂದೂರು: ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ,ಕನಿಷ್ಟ ನೂರು ದಿನ ಉದ್ಯೋಗ ನೀಡಲು ರೂಪಾಯಿ 2.64…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕುಂಭಾಶಿಯ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರದಲ್ಲಿ ಅಯೋಧ್ಯೆ ರಾಮ ಮಂದಿರದ ‘ಶ್ರೀ ರಾಮ ದಿವ್ಯ ಬ್ರಹ್ಮರಥ’ ನಿರ್ಮಾಣಕ್ಕೆ ದಾರು ಮುಹೂರ್ತದ ಮೂಲಕ ಶನಿವಾರ ಚಾಲನೆ ನೀಡಲಾಯಿತು. ರಥ ಶಿಲ್ಪಿ ಲಕ್ಚ್ಮೀನಾರಾಯಣ ಆಚಾರ್ಯರು ಕಚ್ಚು ಹಾಕುವ ಮೂಲಕ ಚಾಲನೆ ನೀಡಿದರು. ಹನುಮದ್ ಜನ್ಮಭೂಮಿ ಕಿಷ್ಕಿಂಧಾ ಕ್ಷೇತ್ರದ ಶ್ರೀ ಗೋವಿಂದಾನಂದ ಸರಸ್ವತೀ ಸ್ವಾಮೀಜಿ, ಆನೆಗುಂದಿ ಮಠ ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ ರಥ ನಿರ್ಮಾಣ ಕಾರ್ಯದಲ್ಲಿ ಉಪಸ್ಥಿತರಿದ್ದು ಆಶೀರ್ವಚಿಸಿದರು. ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ರಥ ಶಿಲ್ಪಿ ರಾಜಗೋಪಾಲ ಆಚಾರ್ಯ, ಹೈಕೋರ್ಟ್ ನಿವೃತ್ತ ನ್ಯಾಯಾದೀಶ ಕುಮಾರ್, ಕೋಟೇಶ್ವರ ದೇವಸ್ಥಾನ ಜೀರ್ಣೋದ್ದಾರ ಸಮಿತಿ ಕೋಣಿ ಕೃಷ್ಣಾನಂದ ಕಾರಂತ ಇದ್ದರು. ಶ್ರೀ ರಾಮ ದಿವ್ಯ ಬ್ರಹ್ಮರಥ ಬೃಹತ್ ಸಾಗುವಾನಿ ಮರ:ಶ್ರೀ ರಾಮ ಮಂದಿರಕ್ಕಾಗಿ ನಿರ್ಮಿಸಲು ಉದ್ದೇಶಿಸಿರುವ 84 ಅಡಿ ಎತ್ತರದ “ಶ್ರೀ ರಾಮ ದಿವ್ಯ ಬ್ರಹ್ಮರಥ” ನಿರ್ಮಾಣಕ್ಕಾಗಿ ಬೃಹತ್ ಸಾಗುವಾನಿ ಮರದ ಬೊಡ್ಡೆಗಳನ್ನು ಹೊತ್ತ ವಾಹನ ಆಂಧ್ರಪ್ರದೇಶದ ವಾರಂಗಲ್ ನಿಂದ ಬುಧವಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಚಕ್ರ ನದಿಗೆ ಕಟ್ಟು-ತೊಪ್ಲು ನಡುವೆ ನಿರ್ಮಿಸಲಾದ ವೆಂಟೆಡ್ ಡ್ಯಾಂ ಸಮರ್ಪಕ ನಿರ್ವಹಣೆ ಇಲ್ಲದೇ ಕೃಷಿಕರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ರೈತರ ಸಮಸ್ಯೆ ಅರಿತು ವಾರದೊಳಗೆ ಡ್ಯಾಂಗೆ ಹಲಗೆ ಅಳವಡಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಇಲಾಖೆಯ ಎದುರು ಪ್ರತಿಭಟನೆ ನಡೆಸುವುದಾಗಿ ಉಡುಪಿ ಜಿಲ್ಲಾ ರೈತ ಸಂಘದ ತ್ರಾಸಿ ವಲಯ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಎಚ್ಚರಿಸಿದ್ದಾರೆ. ಹೆಮ್ಮಾಡಿ, ಕಟ್ಬೇಲ್ತೂರು, ಹಕ್ಲಾಡಿ ಪಂಚಾಯತ್ ನಡುವಿನ ಚಕ್ರ ನದಿಗೆ ಕಟ್ಟು ತೊಪ್ಲು ಭಾಗದಲ್ಲಿ ನಿರ್ಮಿಸಲಾಗಿರುವ ಡ್ಯಾಂ ಅಸಮರ್ಪಕ ನಿರ್ವಹಣೆ ಹಿನ್ನೆಲೆಯಲ್ಲಿ ಸ್ಥಳೀಯ ಮುಖಂಡರೊಂದಿಗೆ ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಶನಿವಾರ ಇಲ್ಲಿನ ಡ್ಯಾಂ ಬಳಿ ನಡೆದ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು. ವೆಂಟೆಡ್ ಡ್ಯಾಂನಿಂದಾಗಿ ಹಕ್ಲಾಡಿ, ಕುಂದಬಾರಂದಾಡಿ, ನೂಜಾಡಿ, ವಂಡ್ಸೆ, ಕರ್ಕುಂಜೆ, ದೇವಲ್ಕುಂದ, ಕಟ್ಬೇಲ್ತೂರು ಮತ್ತು ಹೆಮ್ಮಾಡಿ ಗ್ರಾಮಗಳಿಗೆ ಕೃಷಿ ನೀರಿನ ಉಪಯೋಗದೊಂದಿಗೆ ಕುಡಿಯುವ ನೀರು ಮತ್ತು ಅಂತರ್ಜಲ ಅಭಿವೃದ್ದಿಗಾಗಿ ಯೋಜನೆ ರೂಪಿಸಲಾಗಿದ್ದು, ಇಲಾಖೆಯ ಅಸಮರ್ಪಕ ನಿರ್ವಹಣೆಯಿಂದಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ವೈದ್ಯಕೀಯ ಸಂಘ ಕುಂದಾಪುರ ಶಾಖೆಯ ಆಶ್ರಯದಲ್ಲಿ ಹೋಟೆಲ್ ಶೇರೋನ್ ಸಭಾಂಗಣದಲ್ಲಿ ‘ಶೇರು ಮಾರುಕಟ್ಟೆಯಲ್ಲಿ ಹೂಡಿಕೆಯ ಮಹತ್ವ ಮತ್ತು ಸಂಪತ್ತು ಕ್ರೋಡೀಕರಣ’ದ ಬಗ್ಗೆ ಆನಂದ್ ರಾಥಿ ಯ ಜಗದೀಶ್ ಅವರು ಉಪನ್ಯಾಸ ನೀಡಿದರು. ಐಎಂಎ ಕುಂದಾಪುರ ಶಾಖೆ ಅಧ್ಯಕ್ಷ, ಎಲುಬು ಕೀಲು ತಜ್ಞ ಡಾ ಸಂದೀಪ್ ನಾವಡ ಅಧ್ಯಕ್ಷತೆ ವಹಿಸಿದ್ದರು. ಡಾ ವಿನೋದ್ ಕುಮಾರ್ ಅಥಿತಿಗೆ ಸ್ಮರಣಿಕೆ ನೀಡಿದರು. ಆನಂದ್ ರಾಥಿಯ ವಾಸುದೇವ್ ಕಾಮತ್ ಉಪಸ್ಥಿತರಿದ್ದರು. ಭಾರತೀಯ ವೈದ್ಯಕೀಯ ಸಂಘ ಕುಂದಾಪುರ ಶಾಖೆಯ ಸದಸ್ಯರು ಭಾಗವಹಿಸಿದ್ದರು. ಕಾರ್ಯದರ್ಶಿ ಡಾ ರವೀಂದ್ರ ಮುನೊಲಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅರವತ್ತೇಳು ವರ್ಷಗಳ ನಂತರ ಬಂದಿರುವ ಇದು ನಮ್ಮೆಲ್ಲರ ಜೀವಮಾನದಲ್ಲೊಮ್ಮೆ ಸೇವೆಗೆ ಸಿಕ್ಕಿರುವ ಅಪೂರ್ವ ಅವಕಾಶ. ಇಲ್ಲಿ ಸಂಭಾವನೆ, ಲಾಭ – ನಷ್ಟಗಳು ನಗಣ್ಯ. ನಮ್ಮ ಶರೀರ ಇರುವವರೆಗೆ ನಮಗೆ ಇನ್ನೊಬ್ಬರು ಏನಾದರೂ ಕೊಡಬಹುದು. ಆದರೆ ಶರೀರ ತೊರೆದ ಮೇಲೆಯೂ ನಮಗೆ ಕೊಡುವವನು ಆ ಕೋಟಿಲಿಂಗೇಶ್ವರ ಮಾತ್ರ. ಆದ್ದರಿಂದ ಕೋಟೇಶ್ವರ ಮತ್ತಿತರ ಎಲ್ಲ ಮಾಗಣೆಗಳವರೂ ಜಾತಿ, ಮತ ಬೇಧ ಮರೆತು ಈ ಮಹಾನ್ ಕಾರ್ಯಗಳಲ್ಲಿ ತೊಡಗಿಸಿಕೊಂಡು ಯೋಜಿತ ಉತ್ಸವಗಳನ್ನು ಯಶಸ್ವಿಗೊಳಿಸಬೇಕು” – ಎಂದು ಕೋಟೇಶ್ವರದ ಮಹತೊಬಾರ ಶ್ರೀ ಕೋಟಿಲಿಂಗೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಗೋಪಾಡಿ ಶ್ರೀನಿವಾಸ ರಾವ್ ಮನವಿ ಮಾಡಿದರು. ಕ್ಷೇತ್ರದಲ್ಲಿ ಫೆ. 7 ರಿಂದ 17 ರವರೆಗೆ ಆಯೋಜಿಸಲಾದ ಶ್ರೀ ಕೋಟಿಲಿಂಗೇಶ್ವರ ದೇವಾಲಯದ ನೂತನ ಧ್ವಜಸ್ತಂಭ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ ಮತ್ತು ಶ್ರೀಮನ್ಮಹಾರಥೋತ್ಸವಗಳ ಚಪ್ಪರ ಮುಹೂರ್ತವನ್ನು ಶುಕ್ರವಾರ ಬೆಳಿಗ್ಗೆ ನೆರವೇರಿಸಿ ಅವರು ಮಾತನಾಡಿದರು. ಧರ್ಮಪತ್ನಿ ರುಕ್ಮಿಣೀ ಸಹಿತವಾಗಿ ಅವರು ಅಲಂಕೃತ ಚಪ್ಪರದ ಕಂಬಕ್ಕೆ, ತಂತ್ರಿ ಪ್ರಸನ್ನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎದುರು ರಸ್ತೆಯಲ್ಲಿ ಶುಕ್ರವಾರ ಹಿಜಾಬ್ ಹಾಗೂ ಕೇಸರಿ ಶಾಲು ಧಾರಣೆಯ ವಿಚಾರದಲ್ಲಿ ಪ್ರತಿಭಟನೆ, ಚರ್ಚೆ ನಡೆಯುತ್ತಿರುವಾಗ ಮಾರಕಾಯುಧಗಳೊಂದಿಗೆ ಬಂದಿದ್ದ ಐವರು ಆರೋಪಿಗಳ ಪೈಕಿ ಇಬ್ಬರನ್ನು ಕುಂದಾಪುರ ಪಿಎಸ್ಐ ಸದಾಶಿವ ಗವರೋಜಿ ಹಾಗೂ ಸಿಬ್ಬಂದಿಗಳ ತಂಡ ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಪ್ರತಿಭಟನೆ ನಡೆಯುತ್ತಿದ್ದ ಸ್ಥಳದಲ್ಲಿ ಒಂದು ಗುಂಪಿನ ವಿದ್ಯಾರ್ಥಿಗಳ ಪರವಾಗಿ 5-6 ವ್ಯಕ್ತಿಗಳು ಮಾರಕಾಯುಧಗಳೊಂದಿಗೆ ಆಗಮಿಸಿದ್ದು, ಯಾವುದೇ ಸಮಯದಲ್ಲಾದರೂ, ಸಾರ್ವಜನಿಕರ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುವ ಮಾಹಿತಿ ಪಡೆದುಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಗಂಗೊಳ್ಳಿಯ ಅಬ್ದುಲ್ ಮಜೀದ್ (32) ಹಾಗೂ ರಜಬ್ (41) ಎಂದು ಗುರುತಿಸಲಾಗಿದೆ . ಖಲೀಲ್, ರಿಜ್ವಾನ್ ಹಾಗೂ ಇಫ್ತೀಕರ್ ಬಂಧನಕ್ಕೆ ಬಲೆ ಬೀಸಲಾಗಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕರ್ನಾಟಕದಲ್ಲಿ ಹಿಜಾಬ್- ಕೇಸರಿ ಶಾಲಿನ ವಿವಾದ ಭುಗಿಲೆದ್ದ ಬೆನ್ನಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿ ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಬೇಕಾದುದುದ ಕಡ್ಡಾಯವಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿ ಮೇಲ್ವಿಚಾರಣಾ ಸಮಿತಿ ನಿರ್ಧರಿಸುವ ಸಮವಸ್ತ್ರ ಧರಿಸಬೇಕು. ಒಂದುವೇಳೆ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದೆ ಇದ್ದರೆ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಿರುವ ಉಡುಪು ಧರಿಸಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ದೇಶಾದ್ಯಂತ ಕರ್ನಾಟಕದ ಹಿಜಾಬ್ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರಸಂಹಿತೆ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್. ಪದ್ಮಿನಿ ಇಂದು ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದ ಕಾರಣಕ್ಕೆ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನ ಪ್ರಾಂಶುಪಾಲರು ಕಾಲೇಜು ಗೇಟಿನ ಒಳಗಡೆ ಬಿಡದೆ ತಡೆದಿದ್ದು ಅಮಾನವೀಯ ನಡೆಯಾಗಿದೆ. ಪ್ರಾಂಶುಪಾಲರು ತಮ್ಮ ಹುದ್ದೆಯ ಘನತೆಯನ್ನು ಗಾಳಿಗೆ ತೂರಿ ಸರ್ಕಾರದ ಕೈಗೊಂಬೆಯಂತೆ ವರ್ತಿಸಿ ಆ ಹುದ್ದೆಗೂ ಅಗೌರವ ತೋರಿದ್ದಾರೆ. ಪ್ರಾಂಶುಪಾಲರ ಈ ನಡೆಯನ್ನು ಖಂಡಿಸುವುದಾಗಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ತಬ್ರೇಜ್ ನಾಗೂರು ಹೇಳಿದ್ದಾರೆ. ಪ್ರಾಂಶುಪಾಲರು ವಿದ್ಯಾರ್ಥಿನಿಯರನ್ನು ತಡೆದ ಸಂದರ್ಭದಲ್ಲಿ ಪದೇ ಪದೇ ಶಾಸಕರಿಂದ ಅನುಮತಿ ಇಲ್ಲ ಎಂದು ಹೇಳುತ್ತಿದ್ದುದು ಏನನ್ನು ಸೂಚಿಸುತ್ತದೆ? ಪ್ರಾಂಶುಪಾಲರು ಬಿಜೆಪಿಯ ಏಜೆಂಟ್ ಹಾಗೆ ಏಕೆ ವರ್ತಿಸುತ್ತಿದ್ದಾರೆ? ವಿದ್ಯಾರ್ಥಿಗಳು ವಿದ್ಯೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕಾದುದು ಪ್ರಾಂಶುಪಾಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿ. ಆದರೆ ಕುಂದಾಪುರದ ಜೂನಿಯರ್ ಕಾಲೇಜಿನ ಪ್ರಾಂಶುಪಾಲರು ಖುದ್ದು ಮುಸ್ಲಿಂ ವಿದ್ಯಾರ್ಥಿನಿಯರು ವಿದ್ಯೆಯಿಂದ ವಂಚಿತರಾಗುವ ಹಾಗೆ, ಮುಸ್ಲಿಂ ವಿದ್ಯಾರ್ಥಿನಿಯರು ಗೇಟಿನ ಒಳಗಡೆ ಬಾರದಂತೆ ಕಾವಲು ಕಾಯುತ್ತಿದ್ದಾರೆ. “ನೀವು ಹಾಕುವ ತಲೆವಸ್ತ್ರದ ಕಾರಣ ನಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ಕುಂದಾಪುರದಲ್ಲಿ 4ನೇ ದಿನಕ್ಕೆ ಕಾಲಿರಿಸಿದ್ದು, ಶನಿವಾರ ಖಾಸಗಿ ಕಾಲೇಜುಗಳಲ್ಲಿ ಕೆಲ ಕಾಲ ಬಿಗುವಿನ ವಾತವರಣ ನಿರ್ಮಾಣವಾಗಿದ್ದು, ಮುಖ್ಯರಸ್ತೆಯಲ್ಲಿ ಕೇಸರಿ ಶಾಲು ಧರಿಸಿ ಮೆರವಣಿಗೆ ಸಾಗಿದ ಘಟನೆ ನಡೆದಿದೆ. ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿ ಪ್ರವೇಶಕ್ಕೆ ಅವಕಾಶ ನೀಡಿದ ಬಗ್ಗೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಿಸಲಾಯಿತು. ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕುಂದಾಪುರ ಶಾಸ್ತ್ರೀವೃತ್ತದ ತನಕ ಘೋಷಣೆ ಕೂಗುತ್ತಾ ತೆರಳಿದರು. ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕುಂದೇಶ್ವರ ದೇವಸ್ಥಾನದಿಂದ ಜೈ ಶ್ರೀರಾಮ್, ಜೈ ಶಿವಾಜಿ ಎಂದು ಘೋಷಣೆ ಕೂಗುತ್ತಾ ಕಾಲೇಜಿನತ್ತ ಹೆಜ್ಜೆ ಹಾಕಿದರು. ಯಾವುದೇ ವಿದ್ಯಾರ್ಥಿಕೇಸರಿ ಶಾಲು, ಹಿಜಾಬ್ ಧರಿಸಿ ಕಾಲೇಜು ಆವರಣ ಪ್ರವೇಶ ಮಾಡಬಾರದೆಂದು ಕಾಲೇಜು ಆಡಳಿತದ ಸೂಚನೆ ಹಿನ್ನೆಲೆಯಲ್ಲಿ ಪ್ರತಿಯೊಂದು ವಿದ್ಯಾರ್ಥಿಯನ್ನು ಕಾಲೇಜು ಸಿಬ್ಬಂದಿಗಳು ಗೇಟ್ ಹತ್ತಿರ ತಪಾಸಣೆ ಮಾಡಿಯೇ ಕಾಲೇಜು ಒಳಬಿಟ್ಟರು.…
