ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜೂನ್ 19 ರಂದು ಎಸ್. ಎಸ್. ಎಲ್. ಸಿ. ಯಲ್ಲಿ ಉತ್ತಮ ಅಂಕ ಪಡೆದ ಅರ್ಹ ವಿದ್ಯಾರ್ಥಿಗಳಿಗೆ ಧನಸಹಾಯ ವಿತರಣೆ ಮಾಡಲಾಗುತ್ತದೆ. ಎಸ್. ಎಸ್. ಎಲ್. ಸಿ. ಯಲ್ಲಿ ಉತ್ತಮ ಅಂಕ ಪಡೆದ ಮುಂದಿನ ಶಿಕ್ಷಣಕ್ಕೆ ದಾಖಲಾದ 600ಕ್ಕೂ ಹೆಚ್ಚು ಅಂಕ ಗಳಿಸಿದ ಕುಂದಾಪುರ ಹಾಗೂ ಬೈಂದೂರು ತಾಲ್ಲೂಕಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಫಾರಂಗಳನ್ನು “ಕುಂದಪ್ರಭ”, ನಾರಾಯಣ ಗುರು ಕಾಂಪ್ಲೆಕ್ಸ್, ವೆಸ್ಟ್ ಬ್ಲಾಕ್ ರೋಡ್, ಕುಂದಾಪುರ ಇಲ್ಲಿ ಪಡೆದು ಅಂಕ ಪಟ್ಟಿ, ಪದವಿ ಪೂರ್ವ ಶಾಲೆಯ ಸೇರ್ಪಡೆ ದಾಖಲೆ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ 10 ಜೂನ್, 2022. ಹೆಚ್ಚಿನ ವಿವರಗಳಿಗೆ ಯು. ಎಸ್. ಶೆಣೈ (9448120765), ಕಾರ್ಯದರ್ಶಿ, ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಟ್ರಸ್ಟ್ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇತ್ತೀಚಿಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ೬೨೩ ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ರ್ಯಾಂಕ್ ಪಡೆದ ಗಂಗೊಳ್ಳಿ ಸ.ವಿ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನೇಹಾ ಅವರನ್ನು ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಮತ್ತು ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಇವರ ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಬುಧವಾರ ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಬಿ.ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಶಾಲೆಯ ಮುಖ್ಯೋಪಾಧ್ಯಾಯ ಜಿ.ವಿಶ್ವನಾಥ ಭಟ್ ಅವರು ನೇಹಾ ಅವರನ್ನು ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಮತ್ತು ಇಂದುಶ್ರೀ ಮಹಿಳಾ ಸಂಘದ ಪರವಾಗಿ ಸನ್ಮಾನಿಸಿ ಗೌರವಿಸಿದರು. ದೇವಸ್ಥಾನದ ಅಧ್ಯಕ್ಷ ಶಶಿಧರ ಜಿ.ಟಿ., ಮಹಿಳಾ ಸಂಘದ ಅಧ್ಯಕ್ಷೆ ನೇತ್ರಾವತಿ, ದೇವಸ್ಥಾನದ ಮೊಕ್ತೇಸರ ಸಂಜೀವ ಜಿ.ಟಿ., ಮರವಂತೆ ಶಾಲೆಯ ಮುಖ್ಯೋಪಾಧ್ಯಾಯ ಸತ್ಯನಾ ಕೊಡೇರಿ, ಗುಜ್ಜಾಡಿ ಶಾಲೆಯ ಶಿಕ್ಷಕಿ ಆಶಾ, ಮಹಿಳಾ ಸಂಘದ ಜಯಂತಿ ಜಿ.ಟಿ., ಸುಮಿತ್ರಾ ಜಿ.ಟಿ., ಶಾಲೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.4: ಉಡುಪಿ ಜಿಲ್ಲೆಯ ಎಲ್ಲಾ ಕಡಲತೀರಗಳನ್ನು ಪ್ರತಿನಿತ್ಯ ಸ್ವಚ್ಛ ಮತ್ತು ಸುಂದರವಾಗಿ ಇರುವಂತೆ ಮಾಡಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳು ಶಾಶ್ವತ ವ್ಯವಸ್ಥೆಯನ್ನು ರೂಪಿಸುವಂತೆ ಕಡಲತೀರ ಮತ್ತು ನದಿ ತೀರ ವ್ಯಾಪ್ತಿಯ ಪಂಚಾಯತ್ ಅಭಿವೃಧ್ದಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಸೂಚಿಸಿದರು. ಅವರು ಇಂದು ಜಿ.ಪಂ. ಸಭಾಂಗಣದಲ್ಲಿ, ಜಿಲ್ಲೆಯ ಕಡಲತೀರಗಳಲ್ಲಿ ತ್ಯಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಕುರಿತಂತೆ ಪಂಚಾಯತ್ ಅಭಿವೃಧ್ದಿ ಅಧಿಕಾರಿಗಳಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಡಿದರು. ಉಡುಪಿ ಜಿಲ್ಲೆಯಲ್ಲಿ ಒಟ್ಟು 80 ಕಿಮೀ ಕಡಲತೀರ ಪ್ರದೇಶವಿದ್ದು, ಈ ಕಡಲತೀರಗಳ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳ ಮೂಲಕ ಬೀಚ್ ನಲ್ಲಿ ಪ್ರತಿನಿತ್ಯ ಶಾಶ್ವತ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು, ಈ ಬಗ್ಗೆ ಶಾಶ್ವತ ವ್ಯವಸ್ಥೆಗಳನ್ನು ರೂಪಿಸಲು , ಜಿಲ್ಲಾ ಪಂಚಾಯತ್ ನಿಂದ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲಾಗುವುದು ಎಂದರು. ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಲತೀರಗಳ ಸ್ವಚ್ಚತೆಯನ್ನು ಸ್ಥಳೀಯ ಸಂಜೀವನಿ ಸ್ವಸಹಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.04: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಎನ್.ಯು.ಎಲ್.ಎಮ್/ ಎನ್.ಆರ್.ಎಲ್.ಎಮ್, ಉದ್ಯೋಗ ವಿನಿಮಯ ಕಛೇರಿ ಉಡುಪಿ ಮತ್ತು ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ ಇವರ ಸಹಯೋಗದೊಂದಿಗೆ ಉದ್ಯೋಗ ಮೇಳ ಕಾರ್ಯಕ್ರಮವು ಜೂನ್ 25 ರಂದು ಬೆಳಗ್ಗೆ 9:30ರಿಂದ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯಲಿದೆ. ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ, ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ, ಡಿಪ್ಲೋಮಾ, ಐಟಿಐ, ಸ್ನಾತ್ತಕೋತ್ತರ ಪದವಿ ಹಾಗೂ ವಿವಿಧ ವಲಯಕ್ಕೆ ಸಂಬಂಧಿಸಿದ ಅಭ್ಯರ್ಥಿಗಳು https://udupi.nic.in/ ನಲ್ಲಿ ನೋಂದಣಿ ಮಾಡಿಕೊಂಡು, ವಿದ್ಯಾರ್ಹತೆಯ ಅಂಕಪಟ್ಟಿ, 3 ರೆಸ್ಯೂಮ್ (ಸ್ವ-ವಿವರ) ಹಾಗೂ ಆಧಾರ್ ಕಾರ್ಡ್ ಪ್ರತಿ ಇತ್ಯಾದಿ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9945856670, 9901481729, 9483772449, 9449943882, 9739691294, 9443409355 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುವೈತ್: ಕುವೈತ್ ಕನ್ನಡ ಕೂಟ, ಕುವೈತ್ನಲ್ಲಿರುವ ಕರ್ನಾಟಕದ ಜನರ ಸಾಮಾಜಿಕ-ಸಾಂಸ್ಕೃತಿಕ ಸಂಘವು ಸ್ಥಾಪನೆಯಾಗಿ ಪ್ರಸ್ತುತ 38 ನೆಯ ವರ್ಷಕ್ಕೆ ಪಾದಾರ್ಪಣೆಗೈಯುತ್ತಿದ್ದು, ಕೂಟವು ತನ್ನ ವಾರ್ಷಿಕ ಕಾರ್ಯಕ್ರಮ ದಾಸೋತ್ಸವ -2022, ’ಭಕ್ತಿ-ಭಾವ ಸಂಗಮ’ ವನ್ನು ಇತ್ತೀಚೆಗೆ ಆಚರಿಸಲಾಯಿತು. ಈ ಕಾರ್ಯಕ್ರಮವು ಕರ್ನಾಟಕದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ರಾಜ್ಯದ ಸಂತರ, ಶರಣರ, ದಾಸರುಗಳ ಸ್ಮರಣಾರ್ಥವಾಗಿತ್ತು. ಕುವೈತ್ ಕನ್ನಡ ಕೂಟದ ಪ್ರತಿ ವರ್ಷದ ಮೊದಲ ಕಾರ್ಯಕ್ರಮ ದಾಸೋತ್ಸವವು ದಾಸರು, ಶರಣರುಗಳ ನೆನಪಿಗಾಗಿ ಹಾಗೂ ಅವರುಗಳ ಆರಾಧನೆಯನ್ನು ಅವರ ಕೀರ್ತನೆ, ಕೃತಿಗಳನ್ನು ಹಾಡಿ, ಅಭಿನಯಿಸುವುದರ ಮೂಲಕ ನಮ್ಮ ಕರ್ನಾಟಕದ ದಾಸ ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ನವಪೀಳಿಗೆಯವರಿಗೆ ಹಾಗೂ ಕೂಟದ ಮಕ್ಕಳಿಗೆ ತಿಳಿಸಿಕೊಡುವುದರಲ್ಲಿ ಯಶಸ್ವಿಯಾಯಿತು. ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಹಾಗೂ ಜನರ ಗುಂಪುಗೂಡುವಿಕೆಯ ಮೇಲಿನ ನಿರ್ಬಂಧಗಳ ನಡುವೆ ವರ್ಚುವಲ್ ಪ್ಲಾಟ್ಫಾರ್ಮ್ ಮೂಲಕ ಕಾರ್ಯಕ್ರಮವನ್ನು ನಡೆಸಿ ಪ್ರಸಾರ ಮಾಡಲಾಯಿತು. ಸಾರ್ವಜನಿಕ ಸಂಪರ್ಕ ಸಮಿತಿಯ ಸದಸ್ಯರು ವಿಭಿನ್ನವಾದ ಜನಾಕರ್ಷಣೆಯ ವಿಡಿಯೋ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಮಾನವಿಕ ವಿಭಾಗದ ಸಹಯೋಗದಲ್ಲಿ ”ಸೈಬರ್ ಸೆಕುರಿಟಿ ಆಂಡ್ ಸೆಲ್ಪ್ ಡಿಫೇನ್ಸ್” ಕುರಿತು ಒಂದು ದಿನದ ಶಿಕ್ಷಕ ಪುನಶ್ಚೇತನ ಕಾರ್ಯಕ್ರಮ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಟೀಚರ್ ಟೈನರ್ ರುಕ್ಸಾನ್ ಹಸನ್ “ಸೈಬರ್ ಭದ್ರತೆ ಎನ್ನುವುದು ಈಗ ಜಾಗತಿಕ ಅಗತ್ಯ. ಅಪರಾಧಗಳ ಸ್ವರೂಪ ಬದಲಾದಂತೆಲ್ಲ ಈ ಭದ್ರತೆಯ ಅಗತ್ಯವೂ ಹೆಚ್ಚಾಗುತ್ತಿದೆ. ಸಮಾಜದ ಪ್ರತಿ ಹಂತದಲ್ಲೂ ಈಗ ಡಿಜಿಟಲ್ ವ್ಯವಹಾರ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸೈಬರ್ ಭದ್ರತೆಗೆ ಹೆಚ್ಚಿನ ಒತ್ತು ಕೊಡಬೇಕಿದೆ” ಎಂದರು. ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿದ ಭಾರತದ ಮೊದಲ ಮಹಿಳಾ ಬಾಡಿಗಾರ್ಡ್ ಹಾಗೂ ಟೆಡ್ಎಕ್ಸ್ ಸ್ಪೀಕರ್ ವೀನಾ ಗುಪ್ತಾ, ಪ್ರಜ್ಞಾವಂತರೇ ಹೆಚ್ಚಾಗಿ ಸಿಲುಕುತ್ತಿರುವ ಸೈಬರ್ ಅಪರಾಧಗಳ ಬಗ್ಗೆ ಇಂದು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಡಿಜಿಟಲ್ ಜಗತ್ತಿನತ್ತ ನಾವು ಸಾಗಿದಂತೆ ಅಪಾಯವು ಹೆಚ್ಚಾಗುತ್ತಿದೆ. ಕ್ಯೂಆರ್ ಕೋಡ್ ಹಗರಣ, ಡೇಟಿಂಗ್ ಅಪ್ಲಿಕೇಶನ್, ಒಟಿಪಿ, ಕ್ರೆಡಿಟ್ ಕಾರ್ಡ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಡೆಂಗ್ಯೂ ಜ್ವರ ವೈರಸ್ನಿಂದ ಉಂಟಾಗುವ ಖಾಯಿಲೆಯಾಗಿದ್ದು, ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸೊಳ್ಳೆಗಳ ನಿಯಂತ್ರಣ ಕ್ರಮದಿಂದದಿಂದ ಡೆಂಗಿ ಜ್ವರ, ಮಲೇರಿಯಾ, ಫೈಲೇರಿಯಾ, ಚಿಕನ್ಗುನ್ಯ, ಮೆದುಳು ಜ್ವರ ಮತ್ತು ಕಾಲರಾ ರೋಗವನ್ನು ನಿಯಂತ್ರಿಸಬಹುದಾಗಿದೆ ಎಂದು ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ಹೇಳಿದರು. ಡೆಂಗ್ಯೂ ಜ್ವರ ನಿಯಂತ್ರಣದ ಬಗ್ಗೆ ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಂದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಆರೋಗ್ಯ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ಮನೆಯ ಪರಿಸರವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು. ನಮ್ಮ ಮನೆಯ ಸುತ್ತಮುತ್ತ ಎಲ್ಲಿಯೂ ನೀರು ನಿಲ್ಲದಂತೆ ಡೆಂಗ್ಯೂ ಜ್ವರ ನಿಯಂತ್ರಣ ಎಲ್ಲರ ಜವಾಬ್ದಾರಿಯಾಗಿದ್ದು ಸೊಳ್ಳೆಗಳು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಡ್ರಮ್, ಬ್ಯಾರೆಲ್, ಮಣ್ಣಿನ ಮಡಿಕೆ, ಉಪಯೋಗಿಸದ ಒರಳುಕಲ್ಲು ಮುಂತಾದ ಕಡೆ ಶೇಖರವಾಗುವ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ ಈ ರೀತಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದ ಅವರು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಶತಮಾನೋತ್ಸವ ಸಮಿತಿ ವತಿಯಿಂದ ಶಾಲೆಗೆ ಶಾಲಾ ವಾಹನ ಹಸ್ತಾಂತರಿಸಲಾಗಿದ್ದು, ಈ ಮೂಲಕ ಎರಡು ಸ್ವಂತ ಶಾಲಾ ವಾಹನವನ್ನು ಹೊಂದಿರುವ ಬೈಂದೂರು ವಲಯದ ಪ್ರಥಪ್ರಥಮ ಶಾಲೆ ಎಂಬ ಹೆಗ್ಗಳಿಕೆಗೆ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾತ್ರವಾಗಿದೆ. ಶಾಲೆಯ ವಠಾರದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಾರಾಯಣ ಟಿ.ಪೂಜಾರಿ ಅವರು ಶತಮಾನೋತ್ಸವ ಸಮಿತಿ ವತಿಯಿಂದ ಶಾಲಾ ವಾಹನವನ್ನು ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ನಾರಾಯಣ ಕೆ.ಗುಜ್ಜಾಡಿ ಮತ್ತು ಶಾಲೆಯ ಮುಖ್ಯ ಶಿಕ್ಷಕ ಆನಂದ ಜಿ. ಅವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು. ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಮುನಾ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಎಲ್.ಮೇಸ್ತ, ಶಿವಮೊಗ್ಗದ ಉದ್ಯಮಿ ವಿನೋದ ಭಂಡಾರಿ, ಪ್ರಕಾಶ ಪೂಜಾರಿ, ಶತಮಾನೋತ್ಸವ ಸಮಿತಿ ಕಾರ್ಯದರ್ಶಿ ರಾಜೀವ ಶ್ರೀಯಾನ್, ಗ್ರಾಪಂ ಉಪಾಧ್ಯಕ್ಷ ರಾಜು ಪೂಜಾರಿ, ಗ್ರಾಪಂ ಸದಸ್ಯರಾದ ಹರೀಶ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ‘ಬಾಲವನದ ಜಾದೂಗಾರ’ ಎಂಬ ಕಿರುಚಿತ್ರದ ಚಿತ್ರೀಕರಣಕ್ಕೆ ಕರ್ನಾಟಕದ ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಚಾಲನೆ ನೀಡಿದರು. ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಂತ ಥೀಂ ಪಾರ್ಕ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು “ಕಾರಂತರು ವಿವಿಧ ಕ್ಷೇತ್ರಗಳಲ್ಲಿ ಪರಿಣಾಮಕಾರಿಯಾಗಿ ಸಾಧನೆ ಮಾಡಿದವರು. ಮಕ್ಕಳಿಗಾಗಿಯೂ ಹಲವು ಕೃತಿಗಳನ್ನು ರಚಿಸಿದ್ದಾರೆ. ಅವರ ಚಿಂತನೆಯ ಮೂಲಕ ಮಕ್ಕಳಲ್ಲಿ ಉತ್ತಮ ಪ್ರಭಾವ ಉಂಟಾಗುವುದಾದರೆ ಅದು ಹೆಮ್ಮೆಯ ವಿಷಯ. “ಬಾಲವನದ ಜಾದೂಗಾರ” ಚಿತ್ರದಲ್ಲಿ ತುಂಟ ವಿದ್ಯಾರ್ಥಿಯೊಬ್ಬ ಕಾರಂತರ ಪ್ರಭಾವದಿಂದಲೇ ಉತ್ತಮ ವಿದ್ಯಾರ್ಥಿಯಾಗಿ ಪರಿವರ್ತನೆ ಹೊಂದುವ ಕತೆ ಇದೆ. ಈ ಚಿತ್ರ ಕನ್ನಡದಲ್ಲಿ ನಿರ್ಮಾಣಗೊಂಡು ಬೇರೆ ಭಾಷೆಗಳಿಗೂ ಭಾಷಾಂತರಗೊಂಡು ಯಶಸ್ಸು ಗಳಿಸುವಷ್ಟು ಚೆನ್ನಾಗಿ ಬರಲಿ ಎಂದು ಆಶಿಸುತ್ತೇವೆ. ಸರಕಾರದಿಂದ ಸಿಗಬಹುದಾದ ನೆರವಿನ ಬಗ್ಗೆ ನಾನು ಪ್ರಯತ್ನಿಸುತ್ತೇನೆ” ಎಂದು ಶುಭ ಹಾರೈಸಿದರು. ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ. ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲವ್ ಜಿಹಾದ್ ತಡೆಗೆ ಪ್ರತಿ ಗ್ರಾಮ ಮಟ್ಟದಲ್ಲಿ ಬಜರಂಗದಳ, ವಿಶ್ವಹಿಂದೂ ಪರಿಷತ್ ಹಾಗೂ ದುರ್ಗಾವಾಹಿನಿ ಮೂಲಕ ಟಾಸ್ಕ್ಪೋರ್ಸ್ ರಚಿಸಿ, ಲವ್ ಜಿಹಾದ್ ವಿರುದ್ದ ಹೋರಾಟ ನಡೆಸಲಾಗುತ್ತದೆ. ಹಿಂದೂ ಹೆಣ್ಣು ಮಕ್ಕಳು ಎಚ್ಚರಿಕೆಯಿಂದ ಇರುವಂತೆ ಎಂದು ಬಜರಂಗದಳ ಪ್ರಾಂತ್ಯ ಸಂಚಾಲಕ ಸುನೀಲ್ ಕೆ. ಆರ್. ಎಚ್ಚರಿಸಿದರು. ಇತ್ತಿಚಿಗೆ ಆತ್ಮಹತ್ಯೆ ಮಾಡಿಕೊಂಡ ಉಪ್ಪಿನಕುದ್ರು ಶಿಲ್ವಾ ದೇವಾಡಿಗ ಸಾವಿಗೆ ನ್ಯಾಯ ಹಾಗೂ ಜನಜಾಗೃತಿಗಾಗಿ ಮಂಗಳವಾರ ಕುಂದಾಪುರ ಶಾಸ್ತ್ರಿ ವೃತ್ತದ ಬಳಿ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಕುಂದಾಪುರ ಪ್ರಖಂಡದಿಂದ ಹಮ್ಮಿಕೊಂಡ ಪ್ರತಿಭಟನಾ ಮೆರವಣಿಗೆ ಸಭೆಯಲ್ಲಿ ಮಾತನಾಡಿ, ಇಸ್ಲಾಂ ಧರ್ಮಕ್ಕೆ ಮತಾಂತರ ಪ್ರಚೋದನೆಯೇ ಶಿಲ್ವಾ ಆತ್ಮಹತ್ಯೆಗೆ ಕಾರಣವಾಗಿದ್ದು, ಇದೊಂದು ವ್ಯವಸ್ಥಿತ ಕೊಲೆ ಎಂದು ಅಭಿಪ್ರಾಯಪಟ್ಟರು. ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮಾತನಾಡಿ, ಕರಾವಳಿ ಪ್ರದೇಶದ ಸಾಕಷ್ಟು ಕುಟುಂಬಗಳು ಲವ್ ಜಿಹಾದ್ ಕಾರಣದಿಂದ ಕಣ್ಣೀರು ಸುರಿಸುತ್ತಿವೆ. ಈವತ್ತು ಅದಕ್ಕೆ ಕುಂದಾಪುರವೂ ಸೇರಿಕೊಂಡಿದೆ. ಇನ್ಗ್ರಾಮ್, ಫೇಸ್ಬುಕ್ ವಾಟ್ಸ್ಅಪ್ನಿಂದ ಆದಷ್ಟು ಅಂತರ…
