ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗಿರಿಜನ ಮಹಿಳಾ ವಿಕಲಚೇತನರ ಸರಕಾರಿ ಯೋಜನೆಗಳ ಜಿಲ್ಲಾ ಮಟ್ಟದ ಮಾಹಿತಿ ಕಾರ್ಯಾಗಾರವು ಇತ್ತೀಚೆಗೆ ಜಿಲ್ಲಾ ಪಂಚಾಯತ್ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆ ಮತ್ತು ವಾಣಿಜ್ಯ ವಿಭಾಗ, ಮಣಿಪಾಲ ಎಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಉದ್ಘಾಟಿಸಿದರು. ಮಾಹೆಯ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ಸಂದೀಪ್ ಎಸ್ ಶೆಣೈ ಅತಿಥಿ ಭಾಷಣವನ್ನು ಮಾಡಿದರು. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಸಮನ್ವಯಾಧಿಕಾರಿ ದೂದ್ಪೀರ್ ಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್ ಶೇಷಪ್ಪ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಯತೀಶ್ ತಮ್ಮ ಇಲಾಖೆಗಳಿಗೆ ಸಂಬಂಧಪಟ್ಟ ಯೋಜನೆಗಳ ಕುರಿತು ಮಾಹಿತಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತ ಚುನಾವಣಾ ಆಯೋಗವು ಜನವರಿ 1 2022ನ್ನು ಅರ್ಹತಾ ದಿನವಾಗಿಟ್ಟುಕೊಂಡು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಮಾಡಲಾಗುತ್ತಿದ್ದು, ನವೆಂಬರ್ 8 ರಂದು ಕರಡು ಮತದಾರರ ಪಟ್ಟಿ ಪ್ರಕಟ, ನವೆಂಬರ್ 8 ರಿಂದ ಡಿಸೆಂಬರ್ 8 ರ ವರೆಗೆ ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದ್ದು, ನವೆಂಬರ್ 7, 14,21 ಮತ್ತು 28ರಂದು ವಿಶೇಷ ನೊಂದಣಿ ಕಾರ್ಯಕ್ರಮ, ಡಿಸೆಂಬರ್ 27ರಂದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಹಾಗೂ 13-1-2022 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಅರ್ಹ ಭಾರತೀಯ ನಾಗರಿಕರು ಮತದಾರರರ ಪಟ್ಟಿಗೆ ಹೆಸರುಗಳನ್ನು ಸೇರಿಸಲು ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 01.01.2022ಕ್ಕೆ 18 ವರ್ಷ ಪೂರ್ಣಗೊಳ್ಳಲಿರುವವರು ಈ ಕೆಳಗೆ ತಿಳಿಸಿರುವ ಯಾವುದಾದರೊಂದು ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ. ವಯಸ್ಸಿನ ಬಗ್ಗೆ ಸಲ್ಲಿಸಬೇಕಾದ ದಾಖಲೆಗಳು: ಶಾಲಾ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಆಧಾರ ಕಾರ್ಡ್, ಎಸ್.ಎಸ್.ಎಲ್.ಸಿ/ಪಿ.ಯು.ಸಿ.ಅಂಕಪಟ್ಟಿಗಳು, ಪಾನ್ ಕಾರ್ಡು ಹಾಗೂ ವೈದ್ಯಕೀಯ ಪ್ರಮಾಣ ಪತ್ರ. ವಾಸ್ತವ್ಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೇಸಿಐ ಭಾರತ ವಲಯ 15ರ ವ್ಯವಹಾರ ಸಮ್ಮೇಳನ ‘ಉನ್ನತಿ’ ಇಲ್ಲಿನ ಸಹನಾ ಕನ್ವೆಕ್ಷನ್ ಹಾಲ್‌ನಲ್ಲಿ ಜರುಗಿತು. ಈ ಸಂದರ್ಭ ಜೇಸಿಐ ಪೂವ೯ ವಲಯ ಉಪಾಧ್ಯಕ್ಷೆ , ಪತ್ರಕರ್ತೆ ಅಕ್ಷತಾ ಗಿರೀಶ್ ಅವರಿಗೆ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರು, ಜೇಸಿ ಕುಂದಾಪುರದ ಪೂರ್ವ ಅಧ್ಯಕ್ಷರಾಗಿ, ಕೋಟೇಶ್ವರ ರೋಟರಿ ಕ್ಲಬ್‌ನ ಆನ್ಸ್ ಘಟಕದ ಅಧ್ಯಕ್ಷರಾಗಿ ಪ್ರಧಾನಮಂತ್ರಿ ಪ್ರಚಾರ ಪ್ರಸಾರ ಸಮಿತಿಯ ಜಿಲ್ಲಾ ಮಹಿಳಾ ಅಧ್ಯಕ್ಷರಾಗಿ, ಅನೇಕ ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ, ತರಬೇತುದಾರರಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷರಾದ ಜೆಸಿ ಸದಾನಂದ ನಾವಡ, ವಲಯ ಅಧ್ಯಕ್ಷೆ ಸೌಜನ್ಯ ಹೆಗ್ಡೆ, ಸಂಯೋಜಕರಾದ ಸಮದ್ ಖಾನ್, ಉಪಾಧ್ಯಕ್ಷರಾದ ಜೆಸಿ ಗಿರೀಶ್ ಎಸ್ ಪಿ, ಜೆಸಿ ದರ್ಶಿತ್ ಶೆಟ್ಟಿ, ಜೆಸಿ ಶರತ್ ಕುಮಾರ್, ಜೆಸಿಐ ಕುಂದಾಪುರ ಅಧ್ಯಕ್ಷರಾದ ವಿಜಯ ನರಸಿಂಹ ಐತಾಳ್, ಪೂರ್ವಾಧ್ಯಕ್ಷರಾದ ವಿಷ್ಣು ಕೆ ಬಿ., ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾಹಿತಿ ಹಕ್ಕು ಕಾಯಿದೆಯನ್ನು ದುರುಪಯೋಗಪಡಿಸಿಕೊಂಡು ತಾಲೂಕಿನ ಕೆ. ವೆಂಕಟೇಶ ಕಾರಂತ ಎನ್ನುವ ವ್ಯಕ್ತಿಯು ಬೈಂದೂರು ಭಾಗದ ಉದ್ಯಮಿಗಳು, ಅಧಿಕಾರಿಗಳು, ನೌಕರರುಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆಪಾದಿಸಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿ ಹಾಗೂ ಬೈಂದೂರು ಕ್ಷೇತ್ರ ಅಭಿವೃದ್ಧಿ ಸಮಿತಿ ಸಂಚಾಲಕ ಕೃಷ್ಣಪ್ರಸಾದ್ ಅಡ್ಯಂತಾಯ ಅವರು ರಾಜ್ಯಪಾಲರು, ಮುಖ್ಯಮಂತ್ರಿಗಳಿಂದ ಹಿಡಿದು ಗೃಹ ಇಲಾಖೆ, ಜನಪ್ರತಿನಿಧಿಗಳಿಗೆ ದೂರು ಸಲ್ಲಿಸಿದ್ದಾರೆ. ದೂರಿನ ವಿವರ:ಯಡ್ತರೆ ಗ್ರಾಮದ ಕೆರೆಕಟ್ಟೆ ಸಮೀಪದ ನಿವಾಸಿಯಾದ ವೆಂಕಟೇಶ ಕಾರಂತ ಎನ್ನುವ ವ್ಯಕ್ತಿ ಕೇಂದ್ರ ಸರ್ಕಾರದ ನಿವೃತ್ತ ಉದ್ಯೋಗಿ. ನಿವೃತ್ತಿಯ ನಂತರ ತನ್ನ ಉಪಕಸುಬಾಗಿ ಮಾಹಿತಿ ಹಕ್ಕು ಕಾಯಿದೆಯನ್ನು ದುರುಪಯೋಗಪಡಿಸಿಕೊಂಡು ಬೈಂದೂರು ತಾಲೂಕಿನಾದ್ಯಂತ ಉದ್ಯಮಿಗಳಿಗೆ, ಅಧಿಕಾರಿ, ನೌಕರರುಗಳಿಗೆ ಸಾಮಾಜಿಕ ಕಾರ್ಯಕರ್ತನ ಹೆಸರಿನಲ್ಲಿ ಕಿರುಕುಳ ನೀಡಿ, ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡಿ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದು, ಅನಗತ್ಯ ಕಿರಿ ಕಿರಿಯಿಂದ ವ್ಯವಹಾರ ಮಾಡಲು ಹಿಂದೇಟು ಹಾಕುತಿದ್ದಾರೆ. ಇದು ಬೈಂದೂರಿನ ಬೆಳವಣಿಗೆಗೆ ಮಾರಕವಾಗಿದೆ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ನ.14ರಂದು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಬಹುಮುಖ ಪ್ರತಿಭೆ ರೋಶನ್ ಗಿಳಿಯಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ವಿವೇಕ ಪದವಿ ಪೂರ್ವ ಕಾಲೇಜಿನ ಫ್ರೌಡಶಾಲಾ ವಿಭಾಗದ ಎಂಟನೇ ತರಗತಿಯ ವಿದ್ಯಾರ್ಥಿ ಆಗಿರುವ ರೋಶನ್ ಗಿಳಿಯಾರ್ ಯಕ್ಷಗಾನ, ಸಂಗೀತ, ಚಿತ್ರಕಲೆ, ಏಕಪಾತ್ರಾಭಿನಯ, ಸಿನಿಮಾ ಕ್ಷೇತ್ರ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವುದಲ್ಲದೇ, ಸಾಮಾಜಿಕ ಜಾಲತಾಣದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಕೂಡಾ ಹೊಂದಿದ್ದಾರೆ. ನ.14ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ಕಾರ್ಯಕ್ರಮ ನಡೆಯಲಿದ್ದು ಮಕ್ಕಳ ಕವಿಗೋಷ್ಠಿ, ಬಹುವಿಧ ಗೋಷ್ಠಿ ಕಥಾ ವಾಚನ, ಸಾಂಸ್ಕೃತಿಕ ಕಾರ್ಯಕ್ರಮ, ಕನ್ನಡ ಗಾನ ನಮನ, ಕೋಶಿಕಾ ಚೇರ್ಕಾಡಿ ತಂಡದವರಿಂದ ಬೇಂದ್ರೆ ವಿರಚಿತ ಸಾಯೋ ಆಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತೀಚಿಗೆ ಕರ್ನಾಟಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಬಿ .ರಾಮ ಟೈಲರ್ ಅವರನ್ನು ಯಡ್ತರೆ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು . ಈ ಸಂದರ್ಭ ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಬಿಲ್ಲವ ಮುಖಂಡರಾದ ಎಸ್. ರಾಜು ಪೂಜಾರಿ, ವೆಂಕಟ ಪೂಜಾರಿ, ಮುತ್ತಯ್ಯ ಪೂಜಾರಿ ಇತರರು ಉಪಸ್ಥಿತರಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವಂಡ್ಸೆ ಒಕ್ಕೂಟ ವ್ಯಾಪ್ತಿಯ ಸವಿನಯ ಸ್ವಸಹಾಯ ಸಂಘದ 16ನೇ ವರ್ಷದ ವಾರ್ಷಿಕೋತ್ಸವ ವಂಡ್ಸೆ ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನಡೆಯಿತು. ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ವಿ.ಕೆ ಶಿವರಾಮ ಶೆಟ್ಟಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಜಿ.ಶ್ರೀಧರ್ ಶೆಟ್ಟಿ, ಅರ್ಚಕರಾದ ಗೋಪಾಲಕೃಷ್ಣ ಉಪಾಧ್ಯಾ, ರಾಜಶೇಖರ ಉಪಾಧ್ಯಾ, ಹಕ್ಲಾಡಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಚಂದ್ರ ಬಿಲ್ಲವ ಹಟ್ಟಿಮನೆ, ಶ್ರೀ ಕ್ಷೇ.ಧ.ಗ್ರಾ ಯೋಜನೆಯ ವಂಡ್ಸೆ ವಲಯ ಮೇಲ್ವಿಚಾರಕಿ ಪಾರ್ವತಿ, ಸೇವಾ ಪ್ರತಿನಿಧಿ ಶರ್ಮಿಳಾ, ಒಕ್ಕೂಟದ ಅಧ್ಯಕ್ಷ ಗಿರೀಶ್ ಎನ್.ನಾಯ್ಕ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಂಡ್ಸೆ ಒಕ್ಕೂಟದ ಹಾಲಿ, ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಯವರನ್ನು ಗೌರವಿಸಲಾಯಿತು. ಸಂಘದ ಸದಸ್ಯರಾದ ಗುರುರಾಜ ಗಾಣಿಗ, ರಾಘವೇಂದ್ರ, ಸುಧಾಕರ, ಹರೀಶ ನಾಯ್ಕ್, ದಯಾನಂದ, ಕೃಷ್ಣ ಉಪಸ್ಥಿತರಿದ್ದರು. ಸಂಘದ ಸದಸ್ಯರಾದ ದಿವಾಕರ ಸುಜಿ ಸ್ವಾಗತಿಸಿದರು. ಅನಂದ ನಾಯ್ಕ್ ವರದಿ ವಾಚಿಸಿದರು. ಶಂಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ಕಳ ತಾಲೂಕು ಅಜೆಕಾರುವಿನ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಕೊಡಮಾಡುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021 ಪ್ರಶಸ್ತಿಗೆ ಕುಂದಾಪುರದ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಾಲಪ್ರತಿಭೆ ಸಂಜಿತ್ ಎಮ್ ದೇವಾಡಿಗ ಆಯ್ಕೆಯಾಗಿದ್ದಾರೆ. ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಕಲಿಯುತ್ತಿರುವ ಸಂಜಿತ್ ಎಮ್ ದೇವಾಡಿಗ ಗಂಗೊಳ್ಳಿಯ ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಚಿತ್ರಕಲಾ ಶಿಕ್ಷಕ ಮಾಧವ ದೇವಾಡಿಗ ಮತ್ತು ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಉಪನ್ಯಾಸಕಿಯಾಗಿರುವ ಸಾವಿತ್ರಿ ದೇವಾಡಿಗ ಅವರ ಪುತ್ರ. ನವೆಂಬರ್ 14ರಂದು ಮಧ್ಯಾಹ್ನ ಅಜೆಕಾರಿನಲ್ಲಿ ಒಟ್ಟು 30 ಪ್ರತಿಭಾನ್ವಿತ ಮಕ್ಕಳಿಗೆ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಉಪಸ್ಥಿತಿಯಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಗುವುದು ಎಂದು ಮಕ್ಕಳ ವಿಭಾಗದ ಸಂಚಾಲಕರಾದ ಡಾ.ಶೇಖರ ಅಜೆಕಾರು ಅವರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಬಿಸಿ ಟ್ರಸ್ಟ್‌ನ ವಂಡ್ಸೆ ಕಾರ್ಯಕ್ಷೇತ್ರ ವ್ಯಾಪ್ತಿಯ ಗ್ರಾಹಕ ಸೇವಾ ಕೇಂದ್ರ ಇತೀಚೆಗೆ ಶುಭಾರಂಭಗೊಂಡಿತು. ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಜಿ. ಶ್ರೀಧರ್ ಶೆಟ್ಟಿ ಸೇವಾ ಕೇಂದ್ರವನ್ನು ಉದ್ಘಾಟಿಸಿದರು. ಜ್ಞಾನವಿಕಾಸ ಕಾರ್ಯಕ್ರಮದ ಸಮನ್ವಯಾಧಿಕಾರಿ ಗೀತಾ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವಂಡ್ಸೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗೀತಾ ಅವಿನಾಶ್, ತಿರುಮಲ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಮೊಕ್ತೇಸರ ವಿ.ಕೆ ಶಿವರಾಮ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಗೋವರ್ದನ್ ಜೋಗಿ, ಸುಬ್ಬು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಂಕರ ಆಚಾರ್ಯ, ವೆಂಕಟೇಶ್ ಶೆಟ್ಟಿ, ಪ್ರಭಾಕರ ಶೆಟ್ಟಿ, ವಂಡ್ಸೆ ಒಕ್ಕೂಟದ ಅಧ್ಯಕ್ಷ ಗಿರೀಶ್ ಎನ್ ನಾಯ್ಕ್, ಜಯಂತಿ ಪಿ.ಶೆಟ್ಟಿ, ವಲಯದ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಶರ್ಮಿಳಾ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ಪಾರ್ವತಿ ಪ್ರಸ್ತಾವಿಕ ಮಾತುಗಳನ್ನಾಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ರಿಕ್ಷಾ ನಿಲ್ದಾಣದ ರಿಕ್ಷಾ ಚಾಲಕರ ಸಂಘದ ನೂತನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಮಂಜುನಾಥ ಮೊಗವೀರ, ಗೌರವ ಸಲಹೆಗಾರರಾಗಿ ಜೇಮ್ಸ್ ರೆಬೆರೋ, ಉಪಾಧ್ಯಕ್ಷರಾಗಿ ಸುಕುಮಾರ್ ಪೂಜಾರಿ, ಕಾರ್ಯದರ್ಶಿಯಾಗಿ ಅರುಣ್ ಎಲ್ ಮೊಗವೀರ, ಖಜಾಂಚಿಯಾಗಿ ಸಂತೋಷ್ ಎನ್ . ದೇವಾಡಿಗ ಅವರು ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷರಾದ ಮಂಜುನಾಥ ಮೊಗವೀರ ಅವರು ನೂತನ ಅಧ್ಯಕ್ಷ ಪ್ರವೀಣ್ ದೇವಾಡಿಗ ಅವರಿಗೆ ಸಂಘದ ಪುಸ್ತಕವನ್ನು ಹಸ್ತಾಂತರಿಸಿದರು. ಈ ಸಂದರ್ಭ ಹೆಮ್ಮಾಡಿ ಗ್ರಾ.ಪಂ ಅಧ್ಯಕ್ಷರಾದ ಯು ಸತ್ಯನಾರಾಯಣ್ ಶೇರುಗಾರ್, ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ ಕಾಳೂರ ಮನೆ, ಸ್ಥಳೀಯ ಮುಖಂಡರಾದ ಕೃಷ್ಣಮೂರ್ತಿ (ಪಾಂಡು) ರಾವ್ ಮೊದಲಾದವರು ಉಪಸ್ಥಿತರಿದ್ದರು. ರಿಕ್ಷಾ ಚಾಲಕ ಸಂಘದ ರವಿ.ಕೆ ಸ್ವಾಗತಿಸಿ, ನಿರೂಪಿಸಿದರು.
