Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಇಂದುಶ್ರೀ ಮಹಿಳಾ ಸಂಘದ ಆಶ್ರಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶಿವ ಪಾರ್ವತಿ ಕಲ್ಯಾಣೋತ್ಸವ ಬುಧವಾರ ಸಂಜೆ ಸುಮೂಹರ್ತದಲ್ಲಿ ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಪಾಂಡುರಂಗ, ಶಿವಾನಂದ ಚಂದ್ರ ಭಟ್ ಇವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿತು. ಶಿವ-ಪಾರ್ವತಿ ವಿಗ್ರಹವನ್ನು ವಾದ್ಯ ಘೋಷದೊಂದಿಗೆ ಅದ್ದೂರಿಯಾಗಿ ದೇವಸ್ಥಾನದ ಸಭಾಂಗಣಕ್ಕೆ ತರಲಾಯಿತು. ವಧು ನಿರೀಕ್ಷಣೆ, ಅರಸಿನ ಕುಂಕುಮ ಸಮರ್ಪಣೆ, ದಾರೆ ಮಣಿ ಕಟ್ಟುವಿಕೆ, ಮಾಲಾಧಾರಣೆ, ಕಂಕಣ ಮಾಂಗಲ್ಯ ಸೂತ್ರಧಾರಣೆ, ಚಿನ್ನಾಭರಣ ಕಪ್ಪಕಾಣಿಕೆ ಸಮರ್ಪಣೆ, ಪ್ರಸನ್ನ ಪೂಜೆ, ಹೋಮ ಸೇವೆಗಳ ಮೂಲಕ ಕಲ್ಯಾಣೋತ್ಸವ ಕಾರ್ಯಕ್ರಮ ಸಂಪನ್ನಗೊಂಡಿತು. ಮಹಿಳಾ ಸಂಘದ ಅಧ್ಯಕ್ಷೆ ಸುಶೀಲಾ, ಗೌರವಾಧ್ಯಕ್ಷೆ ಸರೋಜ, ಜಯಂತಿ ಜಿ.ಟಿ., ನೇತ್ರಾವತಿ, ನಾಗಿಣಿ, ಪಾರ್ವತಿ, ಗಂಗಾ ಜಿ.ಟಿ., ವಸಂತಿ ಪಿ., ರುದ್ರಮ್ಮ, ಕುಸುಮಾ, ಗಿರಿಜಾ, ಮಹಿಳಾ ಮಂಡಲದ ಸದಸ್ಯರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಭಜಕರು ಮತ್ತಿತರರು ಉಪಸ್ಥಿತರಿದ್ದರು.

Read More

ನೊಂದವರು, ದೀನ ದಲಿತರ ಸೇವೆಯೇ ನಿಜವಾದ ಭಗತಂತನ ಆರಾಧನೆ – ಮಂತ್ರಾಲಯ ಶ್ರೀ ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ,ಫೆ.26: ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು, ದೀನ ದಲಿತರಿಗೆ ಸಹಕಾರ ನೀಡುವುದೇ ನಿಜವಾದ ಭಗವಂತನ ಆರಾಧನೆಯಾಗಿದ್ದು, ಇದರಿಂದಾಗಿ ದೇವರು ಸಂತೃಪ್ತಿಯನ್ನು ಹೊಂದುತ್ತಾನೆ ಎಂದು ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾ?ಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು. ಅವರು ಕೋಟ ಮೂಡುಗಿಳಿಯಾರಿನ ಜನಸೇವಾ ಟ್ರಸ್ಟ್ ವತಿಯಿಂದ ಮೂಡುಗಿಳಿಯಾರಿನ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ನಡೆದ ಅಭಿಮತ ಸಂಭ್ರಮ ಕಾರ್ಯಕ್ರಮದಲ್ಲಿ ಆಶೀವರ್ಚನ ನೀಡಿ ಮಾತನಾಡಿ ಭಕ್ತಿ ಹಾಗೂ ಸೇವೆಯಿಂದ ಎಲ್ಲವನ್ನೂ ಗೆಲ್ಲಲು ಸಾಧ್ಯವಿದೆ. ಜನಸೇವಾ ಟ್ರಸ್ಟ್ ಕೈಗೊಳ್ಳುತ್ತಿರುವ ಭಕ್ತಿಪೂರ್ವಕ ಸಾಮಾಜಿಕ ಸೇವೆ ಎಲ್ಲರಿಗೂ ಮಾದರಿಯಾದದ್ದು ಎಂದರು. ಈ ಸಂದರ್ಭ ಬಸ್ರೂರು ಬಳಕೆದಾರರ ವೇದಿಕೆ ಮತ್ತು ಉಡುಪಿ ಮಾನವ ಹಕ್ಕುಗಳ ಪ್ರತಿಷ್ಟಾನದ ಸಂಚಾಲಕ ಡಾ| ರವೀಂದ್ರನಾಥ ಶಾನುಭಾಗ್ ಅವರಿಗೆ ಕೀರ್ತಿ ಕಲಶ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ರವೀಂದ್ರನಾಥ ಶ್ಯಾನುಭಾಗ್ ಅವರು, ನಾನು ಇದುವರೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಒಡಿಶಾದ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಸಂಸ್ಥೆಯಲ್ಲಿ, ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಸಹಭಾಗಿತ್ವದಲ್ಲಿ ಫೆ. 21ರಿಂದ 24ರವರೆಗೆ ನಡೆದ 81ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಹಿಳಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮಂಗಳೂರು ವಿವಿಯ ಮಹಿಳಾ ತಂಡವು ರಾಷ್ಟ್ರೀಯ ಮಟ್ಟದಲ್ಲಿ ಸತತ 5ನೇ ಬಾರಿಗೆ ಚಾಂಪಿಯನ್‍ಶಿಪ್ ಪಟ್ಟ ಮುಡಿಗೇರಿಸಿಕೊಂಡಿದೆ. ಕ್ರೀಡಾಕೂಟದಲ್ಲಿ 51 ಅಂಕ ಪಡೆದ ಮಂಗಳೂರು ವಿವಿ ಅಗ್ರಸ್ಥಾನ ಪಡೆದಿದ್ದು, ಒಟ್ಟು 3 ಚಿನ್ನ, 1 ಬೆಳ್ಳಿ ಹಾಗೂ 3 ಕಂಚಿನ ಪದಕ ಸೇರಿದಂತೆ ಒಟ್ಟು 7 ಪದಕ ಪಡೆದ ಸಾಧನೆ ಮಾಡಿದೆ. ಪದಕ ವಿಜೇತ ಕ್ರೀಡಾರ್ಥಿಗಳೆಲ್ಲರೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಎಂಬುದು ಇಲ್ಲಿ ಉಲ್ಲೇಖಾರ್ಹ. ಜಾವೆಲಿನ್ ಥ್ರೋನಲ್ಲಿ ಕರಿಷ್ಮಾ ಸನಿಲ್ (ಪ್ರಥಮ), ಹಾಫ್ ಮ್ಯಾರಥಾನ್‍ನಲ್ಲಿ ಕೆ. ಎಂ ಲಕ್ಷ್ಮೀ (ಪ್ರಥಮ), 10,000ಮೀ ಓಟದಲ್ಲಿ ಕೆ. ಎಂ ಲಕ್ಷ್ಮೀ (ತೃತೀಯ), ಶಾಟ್‍ಪುಟ್‍ನಲ್ಲಿ ರೇಖಾ (ತೃತೀಯ), ಲಾಂಗ್ ಜಂಪ್‍ನಲ್ಲಿ ಶೃತಿಲಕ್ಷ್ಮೀ (ದ್ವಿತೀಯ), ಶಾಲಿನಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ24: ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ ಕಾರ್ಯಕ್ರಮದಡಿ ರೂಪಿಸಲಾದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಘಟಕಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲೆಯಲ್ಲಿ ಸಾಗರೋತ್ಪನ್ನವನ್ನು ಒಂದು ಜಿಲ್ಲೆ ಒಂದು ಉತ್ಪನ್ನವಾಗಿ ಆಯ್ಕೆ ಮಾಡಲಾಗಿದೆ. ಸದ್ರಿ ಯೋಜನೆಯಡಿ ಅಸಂಘಟಿತ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಉನ್ನತಿಕರಣಕ್ಕಾಗಿ ಈ ಹಿಂದೆ ನೀಡಲಾಗುತ್ತಿದ್ದ ಕೇಂದ್ರ ಸರ್ಕಾರದ ಶೇ.35 ರ ಸಹಾಯಧನದೊಂದಿಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದ ಶೇ.15 ರ ಸಹಾಯಧನ ಪ್ರಸ್ತುತ ಒದಗಿಸಲಾಗುತ್ತಿದ್ದು, ಯೋಜನೆಯಡಿ ದೊರೆಯುವ ಸಹಾಯಧನವನ್ನು ಶೇ. 50ಕ್ಕೆ ಹೆಚ್ಚಳ ಮಾಡಲಾಗಿದೆ. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಮೀನು, ತೆಂಗು, ಹಾಲಿನ ಉತ್ಪನ್ನ, ಪಶು ಆಹಾರ, ಮಾಂಸದ ಉತ್ಪನ್ನ ಮತ್ತು ಇತರೆ ಆಹಾರ ಸಂಸ್ಕರಣೆ ಘಟಕ ಮೇಲ್ದರ್ಜೆಗೇರಿಸಲು ಆದ್ಯತೆ ಮೇರೆಗೆ ಸಹಾಯಧನವನ್ನು ನೀಡಲಾಗುತ್ತಿದೆ. ಆಸಕ್ತ ಫಲಾನುಭವಿಗಳು ಸ್ವಂತ ಉದ್ಯಮವನ್ನು ಸ್ಥಾಪಿಸಲು ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸೂರಜ್ ಶೆಟ್ಟ, ಮೊ: 9019075051/7204192914 ಅಥವಾ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೃಷಿ ಇಲಾಖೆ, ರಜತಾದ್ರಿ ಮಣಿಪಾಲ ಕಚೇರಿಯನ್ನು…

Read More

ತಗ್ಗರ್ಸೆ ಶಾಲೆಯ ಸ್ಮಾರ್ಟ್ ಕ್ಲಾಸ್, ಪೀಠೋಪಕರಣ ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೀವನದಲ್ಲಿ ಕನಸು ಕಂಡರಷ್ಟೇ ಸಾಲದು. ಅದನ್ನು ನನಸಾಗಿಸಿಕೊಳ್ಳುವ ತನಕ ಛಲ ಹಾಗೂ ಗುರಿ ಮುಟ್ಟುವ ಭರವಸೆ ಇರಬೇಕು. ಶ್ರದ್ಧೆಯಿಂದ ನಾವು ಯಾವುದೇ ಕಾರ್ಯ ಮಾಡಿದರೂ ಯಶಸ್ಸು ಗಳಿಸಲು ಸಾಧ್ಯವಿದೆ ಎಂದು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟೀ, ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ ಹೇಳಿದರು. ಶುಕ್ರವಾರ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅವರು ಕೊಡುಗೆಯಾಗಿ ನೀಡಿದ ಸ್ಮಾರ್ಟ್ ಕ್ಲಾಸ್ ಹಾಗೂ ಪೀಠೋಪಕರಣಗಳನ್ನು ಉದ್ಘಾಟಿಸಿ ಮಾತನಾಡಿದರು. ನಾವು ಉದ್ಯೋಗ ವ್ಯವಹಾರಕ್ಕಾಗಿ ಯಾವುದೇ ಊರಿನಲ್ಲಿದ್ದರೂ ಹುಟ್ಟೂರಿನ ನೆನಪು ಬಿಡಬಾರದು. ಈ ನಿಟ್ಟಿನಲ್ಲಿ ಬೈಂದೂರು ತಾಲೂಕಿನಲ್ಲಿ ಟ್ರಸ್ಟ್ ಮೂಲಕ ಹೆಚ್ಚಿನ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಈ ಭಾಗದಲ್ಲಿ ಉದ್ಯಮ ಸ್ಥಾಪಿಸಿ ಯುವಕರಿಗೆ ಉದ್ಯೋಗ ಕಲ್ಪಿಸಿಕೊಡುವುದು ನನ್ನ ಕನಸಾಗಿದ್ದು ಅದಕ್ಕಾಗಿ ಶ್ರಮಿಸಲಾಗುತ್ತಿದೆ. ಉಚಿತ ಮನೆ ನಿರ್ಮಾಣ, ಯುವಕರಿಗೆ ಸೈನ್ಯದ ತರಬೇತಿ ಮೊದಲಾದ ಕಾರ್ಯಗಳನ್ನು ಕೈಗೊಳ್ಳುತ್ತಿರುವ ಬಗ್ಗೆ ಖುಷಿಯಿದೆ ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ, ಫೆ 24: ಹಿಂದೂ ಸಮಾಜಕ್ಕೆ ಸವಾಲು ಹಾಕುವ ಉದ್ದೇಶದಿಂದ ಹರ್ಷನನ್ನು ಬಲಿಪಶು ಮಾಡಲಾಗಿದೆ. ಒಂದು ಹರ್ಷನ ಹತ್ಯೆಯಿಂದ ಹಿಂದೂಗಳು ದೃತಿಗೆಡಲಾರರು. ಪ್ರತಿ ಗ್ರಾಮದಲ್ಲಿ ಹರ್ಷ ಹುಟ್ಟುತ್ತಾರೆ, ಹಿಂದೂ ಕಾರ್ಯಕರ್ತ ಹುಟ್ಟುತ್ತಾರೆ. ನಮ್ಮ ಧರ್ಮರಕ್ಷಣೆಯ ಕಾರ್ಯವನ್ನು ಇನ್ನಷ್ಟು ಹೆಚ್ಚಿಸುತ್ತೇವೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ ಶೆಟ್ಟಿ ಹೇಳಿದರು. ಅವರು ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಖಂಡಿಸಿ ಆಯೋಜಿಸಲಾದ ಸಭೆಯನ್ನುದ್ದೇಶಿಸಿ ಮಾತನಾಡಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವ ಪ್ರಯತ್ನ ನಡೆದರೆ ಅದಕ್ಕೆ ತಕ್ಕ ಉತ್ತರ ನೀಡಲು ನಾವೂ ಸಿದ್ಧರಿದ್ದೇವೆ. ಹರ್ಷನ ಕೊಲೆಗೈದ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗುವ ತನಕ ಬಿಜೆಪಿ ವಕೀಲರ ವೇದಿಕೆ ವಿರಮಿಸುವುದಿಲ್ಲ ಎಂದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಮಾತನಾಡಿದರು. ಮೃತ ಹರ್ಷ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ದ.ಕ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ರಾಜ್ಯ ಹಿಂದೂಳಿದ ವರ್ಗಗಳ ಕಾರ್ಯದರ್ಶಿ ವಿಠ್ಠಲ ಪೂಜಾರಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.23: ಮೀನುಗಾರಿಕೆ ಇಲಾಖೆಯ ವತಿಯಿಂದ ಡೀಸೆಲ್ ಮಾರಾಟ ತೆರಿಗೆ ಮರುಪಾವತಿ, ಕೇಂದ್ರ ಪುರಸ್ಕೃತ ಉಳಿತಾಯ ಪರಿಹಾರ ಯೋಜನೆ ಹಾಗೂ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೋವಿಡ್ ಪರಿಹಾರವನ್ನು ಡಿ.ಬಿ.ಟಿ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ತಂತ್ರಾಂಶದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ ಪಾವತಿಸಲು ಕ್ರಮವಹಿಸಲಾಗಿರುತ್ತದೆ. ಈ ಮೇಲ್ಕಂಡ ಯೋಜನೆಗಳಲ್ಲಿ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆಗೆ ಜೋಡಣೆಯಾಗದೇ, ಸಹಾಯಧನ ಪಡೆಯಲು ಬಾಕಿಯಿರುವ ಫಲಾನುಭವಿಗಳು ವಾರಾಂತ್ಯದೊಳಗೆ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಲು ಶೀಘ್ರವಾಗಿ ಕ್ರಮವಹಿಸಬೇಕು. ಆಧಾರ್ ಸಂಖ್ಯೆ ಜೋಡಣೆಯಾಗದೇ ಸಹಾಯಧನ ಪಾವತಿಯಾಗದಿದ್ದರೆ ಇಲಾಖೆ ಜವಾಬ್ದಾರರಾಗಿರುವುದಿಲ್ಲ ಎಂದು ಮೀನುಗಾರಿಕೆಯ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪ್ರತಿವರ್ಷ ಪಾದಯಾತ್ರೆ ಮೂಲಕ ರಕ್ತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಾ, ನಿರಂತರವಾಗಿ ರಕ್ತದಾನ ಮಾಡುವ ಮೂಲಕ ಗಂಗೊಳ್ಳಿಯ ಯಕ್ಷಾಭಿಮಾನಿ ರಕ್ತದಾನಿಗಳ ಬಳಗ ಸಮಾಜಮುಖಿ ಚಟುವಟಿಕೆಗಳನ್ನು ನಡೆಸುತ್ತಿದೆ. ಅಂಧತ್ವವನ್ನು ನಿವಾರಿಸಲು ನೇತ್ರದಾನದ ಮಹಾಸಂಕಲ್ಪಕ್ಕೆ ಮುಂದಾಗುವ ಮೂಲಕ ’ಜೀತೆ ಜೀತೆ ರಕ್ತದಾನ್, ಜಾತೆ ಜಾತೆ ನೇತ್ರದಾನ್’ ಎಂಬ ಘೋಷ ವಾಕ್ಯದೊಂದಿಗೆ ನೇತ್ರದಾನದ ಒಂದು ಪುಣ್ಯದ ಕೆಲಸ ನಡೆಸುತ್ತಿರುವುದು ಶ್ಲಾಘನೀಯ ಎಂದು ಮಣಿಪಾಲದ ಅಭಯಹಸ್ತ ಹೆಲ್ಫ್‌ಲೈನ್ ಸಂಸ್ಥೆಯ ಅಧ್ಯಕ್ಷ ಸತೀಶ ಸಾಲಿಯಾನ್ ಮಣಿಪಾಲ ಹೇಳಿದರು. ಗಂಗೊಳ್ಳಿ ಮ್ಯಾಂಗನೀಸ್ ವಾರ್ಫ್‌ನಲ್ಲಿ ಮಂಗಳವಾರ ಜರಗಿದ ಗಂಗೊಳ್ಳಿಯ ಯಕ್ಷಾಭಿಮಾನಿ ರಕ್ತದಾನಿಗಳ ಬಳಗ ಇದರ ೮ನೇ ವರ್ಷದ ಯಕ್ಷಾಗನ ಸೇವೆ ಹಾಗೂ ಕುಟುಂಬ ನೇತ್ರದಾನ ಅಭಿಯಾನಕ್ಕೆ ಚಾಲನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಕುಂದಾಪುರದ ಹೆಲ್ಫಿಂಗ್ ಹ್ಯಾಂಡ್ ಸಂಸ್ಥೆಯ ಅಧ್ಯಕ್ಷ ಪ್ರದೀಪ ಮೊಗವೀರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುರೋಹಿತರಾದ ಮಂಜುನಾಥ ಕಾರಂತ್ ಕಾರ್ಯಕ್ರಮ ಉದ್ಘಾಟಿಸಿ ಕುಟುಂಬ ನೇತ್ರದಾನ ಅಭಿಯಾನಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುದ್ದಿ ಕಿರಣ ಟಿವಿ ವಾಹಿನಿಯಿಂದ ಕೊಡಮಾಡುವ ‘ಭಾರತ ಸೇವಾ ರತ್ನ ಪ್ರಶಸ್ತಿ’ಗೆ ಚಂದ್ರಶೇಖರ ಬಸ್ರೂರು ಭಾಜನರಾಗಿದ್ದಾರೆ. ಇತ್ತಿಚಿಗೆ ಬೆಂಗಳೂರು ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು. ರಂಗಭೂಮಿ ಹಾಗೂ ಹಿರಿತೆರೆಯ ಕಲಾವಿದರಾಗಿ ಸೇವೆ ಸಲ್ಲಿಸುತ್ತಿರುವ ಚಂದ್ರಶೇಖರ ಅವರು ನಾಟಕ ರಚನೆ ಹಾಗೂ ನಿದೇ೯ಶಕರು, ಸಿನಿಮಾ ನಟನೆ, ನಿಮಾ೯ಣ ಹಾಗೂ ಸಾವ೯ಜನಿಕ ಹೋರಾಟಗಳಲ್ಲಿ ತೊಡಗಿಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ, ಫೆ 24: ಪದವಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ, ಇಲ್ಲಿನ ಖಾಸಗಿ ಕಾಲೇಜೊಂದರ ಸಾರ್ವಜನಿಕ ಸಂಪರ್ಕಾಧಿಕಾರಿಯನ್ನು(ಪಿಆರ್‌ಓ) ವಜಾಗೊಳಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಇಲ್ಲಿನ ಸಂಗಮ್‌ನ ಕಾಲೇಜು ವಠಾರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದ ಘಟನೆ ವರದಿಯಾಗಿದೆ. ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿ, ವಿದ್ಯಾರ್ಥಿನಿಯರಿಗೆ ರಾತ್ರಿ ಅಶ್ಲೀಲ ಸಂದೇಶ ಕಳಿಸುತ್ತಿರುವ ಆರೋಪಿಸಲಾಗಿತ್ತು. ಈ ಬಗ್ಗೆ ಪ್ರಾಂಶುಪಾಲರಿಗೆ ದೂರು ನೀಡಿದರೂ, ಆಡಳಿತ ಮಂಡಳಿ ಶಿಸ್ತು ಕ್ರಮ ಜರುಗಿಸದೇ ಸುಮ್ಮನುಳಿದ ಕಾರಣ ಕಾಲೇಜು ಮುಂಭಾಗದಲ್ಲಿಯೇ ವಿದ್ಯಾರ್ಥಿಗಳು ಧರಣಿ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿ ಕಾಲೇಜು ಪ್ರಾಂಶುಪಾಲರು ಶಿಸ್ತುಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ. ಆದರೆ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರನ್ನು ಸ್ಥಳಕ್ಕೆ ಕರೆಸಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಸ್ಥಳಕ್ಕೆ ಆಗಮಿಸಿದ ಪೋಲಿಸರಿಂದ ಪ್ರತಿಭಟನೆ ತಣಿಸುವ ಪ್ರಯತ್ನ ನಡೆಸಿದರೂ ಫಲಪ್ರದವಾಗಲಿಲ್ಲ. ಅಂತಿಮವಾಗಿ ಕಾಲೇಜು ಆಡಳಿತ ಮಂಡಳಿ ಆದೇಶದಂತೆ ದಿ.24-02-2022ರಂದು ಸಾರ್ವಜನಿಕ ಸಂಪರ್ಕಾಧಿಕಾರಿಯನ್ನು ಹುದ್ದೆಯಿಂದ…

Read More