Author: ನ್ಯೂಸ್ ಬ್ಯೂರೋ

ಸಂದರ್ಶನಕ್ಕೆ ಹೋಗೋದು ಅಂದರೆ ಸುಲಭವಲ್ಲ. ಅದಕ್ಕೆ ಪೂರ್ಣ ಪ್ರಮಾಣದ ತಯಾರಿ ನಡೆದಿರಬೇಕು. ಆದರೆ ಆ ಬಗ್ಗೆ ಅತಿಯಾದ ಆತ್ಮವಿಶ್ವಾಸ ಇದ್ದರೆ ಮಾತ್ರ ಒಳ್ಳೇದಲ್ಲ. ನನಗೆಲ್ಲಾ ಗೊತ್ತಿದೆ, ಏನೇ ಪ್ರಶ್ನೆಗೆ ಉತ್ತರ ನೀಡಬಹುದು ಎಂದು ವಿಶ್ವಾಸ ಇದ್ದರೆ ನೀವು ಎಡವಬಹುದು. ಇದರಿಂದ ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ. ಸಂದರ್ಶನಕ್ಕೆ ಹೊರಡುವ ಸಮಯದಲ್ಲಿ ಹೇಗೆ ಸಂದರ್ಶನ ಎದುರಿಸುವುದು, ಹೇಗೆ ಪ್ರಶ್ನೆಗಳನ್ನು ಅರ್ಥ ಮಾಡಿಕೊಂಡು ಅದಕ್ಕೆ ಸರಿಯಾಗಿ ಉತ್ತರ ನೀಡುವುದು ಹೀಗೆ ಹಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಇಷ್ಟು ಮಾತ್ರವಲ್ಲ ಅದಕ್ಕೂ ಮಿಗಿಲಾಗಿ ಇನ್ನಷ್ಟು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಸಂದರ್ಶನಕ್ಕೆ ತಡವಾಗಿ ಹೊರಡೋದು:ಸಂದರ್ಶನಕ್ಕೆ ಯಾವತ್ತೂ ತಡವಾಗಿ ಹೋಗಲೇಬೇಡಿ. ಅರ್ಧ ಗಂಟೆ ಮೊದಲೇ ಅಲ್ಲಿ ಇದ್ದರೆ ಉತ್ತಮ. ಸಮಯದ ಮಹತ್ವ ಕೂಡ ಇಂಟರ್ವ್ಯೂ ಸಮಯದಲ್ಲಿ ಮುಖ್ಯ ನಡವಳಿಕೆ:ಹೌದು ನೀವು ಮಾತನಾಡಲು ಬಳಕೆ ಮಾಡುವ ಪದಗಳು ಗೌರವಯುತವಾಗಿರಲಿ. ಕಠೋರವಾಗಿ ಅಥವಾ ಅತ್ಯಂತ ಸಲುಗೆಯಿಂದ ಮಾತನಾಡಬೇಡಿ. ಮೊಬೈಲ್ ಬಳಸಬೇಡಿ:ಇಂಟರ್ವ್ಯೂ ಭವಿಷ್ಯವನ್ನು ರೂಪಿಸುತ್ತದೆ. ಆದುದರಿಂದ ಇಂಟರ್ವ್ಯೂಗೆ ಹೋಗುವ ಮುನ್ನ ಮೊಬೈಲ್ ಸ್ವಿಚ್ಆಫ್ ಅಥವಾ ಸೈಲೆಂಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ತಾಲೂಕಿನಲ್ಲಿ ಖಾಯಂ ಆಗಿ ಆರಂಭಗೊಂಡ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ಉದ್ಘಾಟನಾ ಸಮಾರಂಭವು ಉಡುಪಿ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಮತ್ತು ಬೈಂದೂರು ವಕೀಲ ಸಂಘದ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜರುಗಿತು. ಬೈಂದೂರು ನೂತನ ನ್ಯಾಯಾಲಯವನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್, ಪ್ರಸನ್ನ ಬಿ. ವರಾಲೆ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಗೌರವಾನ್ವಿತ ನ್ಯಾಯಮೂರ್ತಿ ಎಸ್. ಜ. ಪಂಡಿತ್, ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಪ್ರದೀಪ್ ಸಿಂಗ್ ಯೆರೂರ್, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ, ನ್ಯಾಯಮೂರ್ತಿ ಸಿ.ಎಂ. ಜೋಶಿ, ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ವಿಲೇಖನಾಧಿಕಾರಿ ಮುರಳಿಧರ್ ಪೈ.ಬಿ. ಲೋಕೋಪಯೋಗಿ ಇಲಾಖೆ ಕೇಂದ್ರ ವಲಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಥ ಪಂಥದ ಸಂಪ್ರದಾಯದಂತೆ ಹಳಗೇರಿಯ ಜೋಗಿ ಸಮುದಾಯದಿಂದ ಪೂಜಿಸಲ್ಪಡುತ್ತಿರುವ ಅಪರೂಪದ ದೇಗುಲಗಳಲ್ಲಿ ತೆಂಕಬೆಟ್ಟು ಶ್ರೀ ಕಾಲಭೈರವ ದೇವಸ್ಥಾನವೂ ಒಂದಾಗಿದೆ. ದೇವಸ್ಥಾನ ನವೀಕರಣಗೊಳ್ಳುವುದರೊಂದಿಗೆ ದೈನಂದಿನ ಧಾರ್ಮಿಕ ವಿಧಿ ವಿಧಾನಗಳನ್ನು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳುವುದು ಭಕ್ತವರ್ಗದ ಕರ್ತವ್ಯವಾಗಿದೆ ಎಂದು ಯಡಮೊಗೆಯ ಶ್ರೀ ಕ್ಷೇತ್ರ ಸಿದ್ಧಪೀಠ ಕೊಡಚಾದ್ರಿ ಹಲವರಿ ಮಠದ ಪೀಠಾಧ್ಯಕ್ಷರಾದ ಶ್ರೀ ಫೀರ್ ಯೋಗಿ ಜಗದೀಶನಾಥ್ಜೀ ಹೇಳಿದರು. ಯಡಮೋಗೆಯ ಶ್ರೀ ಕ್ಷೇತ್ರ ಸಿದ್ಧಪೀಠ ಕೊಡಚಾದ್ರಿ ಹಲವರಿ ಮಠದ ಆವರಣದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ತೆಂಕಬೆಟ್ಟುವಿನ ಶ್ರೀ ಕಾಲಭೈರವ ದೇವಸ್ಥಾನದಲ್ಲಿ ಜನವರಿ 26ರಿಂದ 30ರ ತನಕ ಜರುಗಲಿರುವ ‘ನವೀಕೃತ ಶಿಲಾದೇಗುಲ ಲೋಕಾರ್ಪಣೆ – ಪುನರ್ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ’ ಮೊದಲಾದ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಆಶೀರ್ವದಿಸಿದ ಸ್ವಾಮೀಜಿಯವರು, ಬಳಿಕ ಮಾತನಾಡಿ, ತೆಂಕಬೆಟ್ಟುವಿನ ದೇವಾಲಯ ನಿರ್ಮಾಣಕ್ಕೆ ಸಾಕಷ್ಟು ಶ್ರಮವಹಿಸಿರುವ ಬಗ್ಗೆ ತಿಳಿದಿದ್ದು, ದೇವಸ್ಥಾನ ಉತ್ತಮವಾಗಿ ನಿರ್ಮಾಣಗೊಂಡಿದೆ. ಶ್ರೀ ಕಾಲಭೈರವ ದೇವರ ಹಾಗೂ ಗುರೂಜಿಯ ಆಶೀರ್ವಾದ…

Read More

ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ಮಿತ ಕುಂದಾಪುರ – ವಜ್ರಮಹೋತ್ಸವ ಮತ್ತು ಸಂಘದ ಸ್ಥಾಪಕರಾದ ಯಡ್ತರೆ ಮಂಜಯ್ಯ ಶೆಟ್ಟಿ ವಿಚಾರಗೋಷ್ಠಿ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.28: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮಾನ್ಯ ಮುಖ್ಯ ಮಂತ್ರಿಗಳು ಘೋಷಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಮೀನುಗಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. 8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬಂಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿಂದ ಮಾಹಿತಿ ಪಡೆದು, ಶೀಘ್ರವಾಗಿ ಪ್ರೂಟ್ಸ್ ಐಡಿಯನ್ನು ಸೃಜನೆ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.28: ಜಿಲ್ಲೆಯ ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದರ ಜೊತೆಗೆ ಕೋವಿಡ್ ಲಸಿಕೆ ಬೂಸ್ಟರ್ ಡೋಸ್ ತಪ್ಪದೇ ಪಡೆಯಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸಲಹೆ ನೀಡಿದರು. ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಕೋವಿಡ್ ಮುನ್ನೆಚ್ಚರಿಕೆ ಮತ್ತು ತಾಂತ್ರಿಕ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಾಮಾನ್ಯರು ಕೋವಿಡ್ ಸಾಂಕ್ರಾಮಿಕ ರೋಗದ ಬಗ್ಗೆ ಆತಂಕ ಪಡದೇ ಸರಳ ಮುನ್ನೆಚ್ಚರಿಕಾ ಕ್ರಮಗಳಾದ ಸಾಮಾಜಿಕ ಅಂತರ ಕಾಪಾಡುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು, ಮಾಸ್ಕ್ಗಳನ್ನು ಧರಿಸುವುದು ಸೇರಿದಂತೆ ಮತ್ತಿತರ ಕ್ರಮಗಳನ್ನು ತಪ್ಪದೇ ಪಾಲಿಸಬೇಕು ಈಗಾಗಲೇ 2 ಡೋಸ್ ಕೋವಿಡ್ ಲಸಿಕೆ ಪಡೆದಿರುವವರು ಬೂಸ್ಟರ್ ಡೋಸ್ ಅನ್ನು ಪಡೆಯಬೇಕು ಎಂದರು. ನಮ್ಮ ನೆರೆಯ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಮಿತಿಮೀರಿದ್ದು, ನಮ್ಮ ದೇಶದಲ್ಲಿಯೂ ಹರಡುವ ಸಾಧ್ಯತೆ ಇರುವ ಹಿನ್ನಲೆ, ಅಗತ್ಯ ಕೋವಿಡ್ ನಿಯಂತ್ರಣ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದ್ದು, ಸರ್ಕಾರ ಮಾರ್ಗಸೂಚಿಗಳನ್ನು ಸಹ ಹೊರಡಿಸಿದ್ದು, ಅವುಗಳನ್ನು ಎಲ್ಲರೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನಲ್ಲಿ ಪ್ರಸ್ತುತ ವಾರದ ಎರಡು ದಿನಗಳ ಸಂಚಾರಿ ನ್ಯಾಯಾಲಯದ ಬದಲಿಗೆ ಖಾಯಂ ಆಗಿ ಸಿವಿಲ್ ನ್ಯಾಯಾಧೀಶರು & ಜೆ.ಎಂ.ಎಫ್.ಸಿ ನ್ಯಾಯಾಲಯ ಕಾರ್ಯಾಚರಿಸಲಿದೆ. ರಾಜ್ಯ ಉಚ್ಛ ನ್ಯಾಯಾಲಯದ ರಿಜಿಸ್ಟಾರ್ ಜನರಲ್ ಪ್ರಸ್ತಾವನೆಗೆ ಡಿ.28ರಂದು ಸರಕಾರದ ಮಂಜೂರಾತಿ ದೊರೆತಿದೆ. ಕಾರ್ಕಳದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು & ಜೆ.ಎಂ.ಎಫ್‌ಸಿ ನ್ಯಾಯಾಲಯವನ್ನು ಹಾಲಿ ಇರುವ ಹುದ್ದೆಗಳೊಂದಿಗೆ ಬೈಂದೂರಿಗೆ ಸ್ಥಳಾಂತರಿಸಿ, ಸಿವಿಲ್ ನ್ಯಾಯಾಧೀಶರು & ಜೆ.ಎಂ.ಎಫ್.ಸಿ ನ್ಯಾಯಾಲಯ ಬೈಂದೂರು, ಉಡುಪಿ ಎಂದು ಮರುಪದನಾಮೀಕರಣಗೊಳಿಸಲು ಸೂಚಿಸಲಾಗಿದೆ. ಜನವರಿ ಮೊದಲ ವಾರದಿಂದಲೇ ಖಾಯಂ ನ್ಯಾಯಾಲಯ ಆರಂಭಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ► ಬೈಂದೂರು ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಉದ್ಘಾಟನೆ – https://kundapraa.com/?p=57565 . ಬೈಂದೂರು ತಾಲೂಕಿಗೆ ಆರಂಭದಲ್ಲಿ ಸಂಚಾರಿ ನ್ಯಾಯಾಲಯ ಹಾಗೂ ಇದೀಗ ಖಾಯಂ ನ್ಯಾಯಾಲಯವನ್ನು ತರವಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದ ಸಂಸದ ಬಿ. ವೈ. ರಾಘವೇಂದ್ರ ಹಾಗೂ ಸಹಕರಿಸಿದ ಸಿಎಂ ಕಛೇರಿ, ಉಡುಪಿ ನ್ಯಾಯಾಂಗ ಇಲಾಖೆ, ರಾಜ್ಯ ಕಾನೂನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರ ಷಷ್ಠಿ ಮಹೋತ್ಸವವು ಜರುಗಿತು. ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾ ಪೂಜೆ, ಪಂಚಾಮೃತ, ಮಡಿ ಪ್ರದಕ್ಷಿಣೆ, ಶುದ್ಧ ಕಲಶ, ಈಶ್ವರನಿಗೆ ರುದ್ರಾಭಿಶೇಕ, ಉರುಳು ಸೇವೆ, ಮಡೆಸ್ನಾನ, ತುಲಾಭಾರ, ಆಶ್ಲೇಷ ಬಲಿ, ನಾಗಮಂಡಲ, ಹೂ-ಕಾಯಿ ಅರ್ಪಣೆ, ನಾಗಸಂಸ್ಕಾರ ಮುಂತಾದ ಸೇವೆಗಳು ನಡೆದವು. ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಸಂದರ್ಭದಲ್ಲಿ ಮಡೆಸ್ನಾನ ಹರಕೆ ಪದ್ಧತಿಯಿದ್ದು ಸೌಪರ್ಣಿಕ ನದಿಯಲ್ಲಿ ಸ್ನಾನ ಮಾಡಿ ಬಂದ ಸಹಸ್ರಾರು ಭಕ್ತರು ಶ್ರೀ ದೇವರ ಪೌಳಿಯಲ್ಲಿ ಉರುಳು ಸೇವೆ ಮಾಡಿ ಹರಕೆ ಸಮರ್ಪಿಸಿದರು. ಭಕ್ತರು ಬೆಳ್ಳಿ ಹರಕೆ ಸೇವೆಯನ್ನು ಸಲ್ಲಿಸಲು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದರು. ದೇವಳದ ಉತ್ಸವ ಸಮಿತಿ ಆಡಳಿತ ಮೊಕೆಸ್ತರ ಬಿ. ಅರುಣ್ ಕುಮಾರ ಶೆಟ್ಟಿ ಹಾಗೂ ಸ್ವಯಂಸೇವಕರುಗಳು ಭಕ್ತರಿಗೆ ಸಕಲ ವ್ಯವಸ್ಥೆ ಕಲ್ಪಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.28: ವಿವಿಧ ಸರಕಾರಿ ಯೋಜನೆಗಳ ಸಾಲ ಪಡೆಯಲು ಫಲಾನುಭವಿಗಳು ಬ್ಯಾಂಕ್ಗಳಿಗೆ ಸಲ್ಲಿಸುವ ಸಾಲದ ಅರ್ಜಿಗಳನ್ನು ಆದ್ಯತೆಯ ಮೇಲೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಂಜೂರು ಮಾಡುವಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್ಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಸೂಚನೆ ನೀಡಿದರು. ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಾಲ ಮತ್ತು ಠೇವಣಿ ಪ್ರಮಾಣ ರಾಜ್ಯಕ್ಕೆ ಹೋಲಿಸಿದ್ದಲ್ಲಿ ಕಡಿಮೆ ಇದ್ದು, ಇದನ್ನು ಸರಿದೂಗಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಾಲ ವಿತರಿಸುವ ಅಗತ್ಯವಿದ್ದು, ಸರ್ಕಾರದ ವಿವಿಧ ಯೋಜನೆಗಳಲ್ಲಿ ಸಾಲ ಪಡೆಯಲು ವಿವಿಧ ಇಲಾಖೆಗಳ ಮೂಲಕ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಶೀಘ್ರದಲ್ಲಿ ಸಾಲ ವಿತರಿಸುವ ಮೂಲಕ ಈ ಪ್ರಮಾಣವನ್ನು ಸರಿದೂಗಿಸುವ ಜೊತೆಗೆ ಜಿಲ್ಲೆಯಲ್ಲಿ ಸರಕಾರಿ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನ ಹಾಗೂ ಸಾರ್ವಜನಿಕರ ಆರ್ಥಿಕ ಮಟ್ಟವನ್ನು ಉತ್ತಮ ಪಡಿಸಲು ಸಾಧ್ಯವಾಗಲಿದೆ ಎಂದರು. ಕೃಷಿ ಮತ್ತು ತೋಟಗಾರಿಕಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಜೆಸಿಐ ಉಪ್ಪುಂದ 2023ನೇ ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಕಾರ್ಯದರ್ಶಿಯಾಗಿ ಪುರಂದರ ಉಪ್ಪುಂದ ಆಯ್ಕೆಯಾಗಿದ್ದಾರೆ. ಜನವರಿ 1ರಂದು ನೂತನ ಸಮಿತಿಯ ಪದಗ್ರಹಣ ಸಮಾರಂಭ ಜರುಗಲಿದೆ. ನೂತನ ಕಮಿಟಿಯಲ್ಲಿ ನಿಕಟಪೂರ್ವ ಅಧ್ಯಕ್ಷ ನಾಗರಾಜ ಪೂಜಾರಿ ಉಬ್ಜೇರಿ, ಉಪಾಧ್ಯಕ್ಷರಾಗಿ ಮಂಜುನಾಥ ದೇವಾಡಿಗ, ಶರತ್ ಶೆಟ್ಟಿ, ಅನುಷ್, ಸಂತೋಷ್, ಅನೂಪ್, ಖಜಾಂಚಿಯಾಗಿ ರಾಮಕೃಷ್ಣ ಖಾರ್ವಿ, ಲೇಡಿ ಜೆಸಿ ಕೋ-ಆರ್ಡಿನೇಟರಾಗಿ ರೇಖಾ, ಜೆಜೆಸಿ ವಿಂಗ್ ಅಧ್ಯಕ್ಷರಾಗಿ ನಿಶಾ ಸಂತೋಷ್ ಶೆಟ್ಟಿ, ಜಂಟಿ ಕಾರ್ಯದರ್ಶಿಯಾಗಿ ವಿಜಯ ಶೆಟ್ಟಿ, ಜೆಸಿರೇಟ್ ಕೋ-ಆರ್ಡಿನೇಟರ್ ಆಗಿ ನರಸಿಂಹ ದೇವಾಡಿಗ, ಜೆಜೆಸಿ ಕೋ-ಆರ್ಡಿನೇಟರ್ ಜಯರಾಜ ಖಾರ್ವಿ, ಬುಲೇಟಿನ್ ಎಡಿಟರ್ ಆಗಿ ಜಗದೀಶ್ ದೇವಾಡಿಗ, ಅವಿನಾಶ್, ಇವೆಂಟ್ ಅಂಬಾಸಿಡರ್ ಆಗಿ ಪ್ರಕಾಶ್ ಭಟ್, ಮೀಡಿಯಾ ಕವರೇಜ್ ಅಭಿಷೇಕ್, ಎಂಪವರಿಂಗ್ ಯುಥ್ ನಿತೀನ್ ಶೆಟ್ಟಿ, ಕಲ್ಚರಲ್ ಕೋ-ಆರ್ಡಿನೇಟರ್ ಶ್ರೀಲತಾ, ಸುಪರ್ಣ, ಜಿ&ಡಿ ಕೋ-ಆರ್ಡಿನೇಟರ್ ಪುರಂದರ ಖಾರ್ವಿ ಉಪ್ಪುಂದ, ಸ್ಪೋರ್ಟ್ಸ್ ಕೋ-ಆರ್ಡಿನೇಟರ್ ಗೌರೀಶ್ ಹುದಾರ್, ರಂಜಿತ್ ಉಪ್ಪುಂದ, ಪೋಗ್ರಾಂ ಕೋ-ಆರ್ಡಿನೇಟರ್ ಆಗಿ…

Read More