Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಕೊಪ್ಪರಿಗೆಬೆಟ್ಟುವಿನಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಶ್ರೀ ವರಲಕ್ಷ್ಮೀ ನಿಲಯ’ ನೂತನ ಗೃಹದ ಹಸ್ತಾಂತರ ಸಮಾರಂಭ ಜ.7ರ ಶುಕ್ರವಾರ ಜರುಗಿತು. ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ನೂತನ ಗೃಹವನ್ನು ಉದ್ಘಾಟಿಸಿ ಆಶೀರ್ವದಿಸಿ, ಮನುಷ್ಯನಲ್ಲಿ ಉತ್ತಮ ಗುಣದೊಂದಿಗೆ ಸಂಸ್ಕಾರವೂ ಅತೀ ಅಗತ್ಯವಾಗಿದೆ. ಧರ್ಮ, ಸಂಸ್ಕೃತಿ, ಸಂಸ್ಕಾರದಿಂದಾಗಿ ಮನುಷ್ಯನ ಉನ್ನತಿ ಹಾಗೂ ರಾಮರಾಜ್ಯದ ಕಲ್ಪನೆ ಸಾಕಾರಗೊಳ್ಳಲು ಸಾಧ್ಯವಿದೆ. ಆ ನಿಟ್ಟಿನಲ್ಲಿ ನಾರಿ ಜಾಗೃತಿಯ ಅಗತ್ಯವಿದೆ. ಹೆಣ್ಣು ಮಕ್ಕಳಿಗೆ ಇದರ ಅರಿವು ಮೂಡಿದರೆ ಕುಟುಂಬ ಹಾಗೂ ಸಮಾಜವನ್ನು ಸರಿದಾರಿಯಲ್ಲಿ ಕೊಂಡೊಯ್ಯಲು ಸಾಧ್ಯವಿದೆ ಎಂದರು. ಗೋವಿಂದ ಬಾಬು ಪೂಜಾರಿ ಅವರು ಸಣ್ಣ ಪ್ರಾಯದಲ್ಲಿಯೇ ದೊಡ್ಡ ಪ್ರಮಾಣದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಈ ಭಾಗದಲ್ಲಿ ಆ ಮಟ್ಟದಲ್ಲಿ ಸೇವೆಯಲ್ಲಿ ತೊಡಗಿಕೊಂಡಿರುವವರು ಕಡಿಮೆ. ಅವರಿಗೆ ದೇವರ ಆಶೀರ್ವಾದ ಸದಾ ಇರಲಿ ಎಂದರು. ಮ್ಯಾನೇಜಿಂಗ್ ಟ್ರಸ್ಟೀ ಡಾ. ಗೋವಿಂದ ಬಾಬು ಪೂಜಾರಿ…

Read More

ಸಹಕಾರಿ ಸಂಘಗಳು ಜನರ ಜೀವನಾಡಿಯಾಗಿ ಬೆಳೆದಿದೆ: ಡಾ. ಎಂ. ಎನ್. ರಾಜೇಂದ್ರ ಕುಮಾರ್ ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮರವಂತೆ ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಶಾಖೆಯ ಆವರಣದಲ್ಲಿ ಶುಕ್ರವಾರ ಸರಳವಾಗಿ ಜರುಗಿತು. ದ.ಕ ಜಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಯಾವುದೇ ಸೌಲಭ್ಯಗಳಿದ್ದರೂ ನೇರವಾಗಿ ಫಲಾನುಭವಿಯನ್ನು ತಲುಪುತ್ತದೆ. ಸೇವಾಧರ್ಮದಿಂದಾಗಿ ಸಹಕಾರ ಕ್ಷೇತ್ರವಿಂದು ಜನರ ಬ್ಯಾಂಕುಗಳಾಗಿ ಪರಿವರ್ತನೆಗೊಂಡಿದೆ. ಗ್ರಾಮೀಣ ಪ್ರದೇಶದ ಕಟ್ಟಕಡೆಯ ಜನರನ್ನೂ ತಲುಪುವ ಕೊಂಡಿಯಾಗಿ, ಸದಸ್ಯರ ನೋವು-ನಲಿವುಗಳಲ್ಲಿ ಸ್ಪಂದಿಸುವ ಸ್ವಾತಂತ್ರ್ಯದಿಂದ ಸಹಕಾರಿ ಸಂಘಗಳು ಜನರ ಜೀವನಾಡಿಯಾಗಿ ಬೆಳೆದಿದೆ ಎಂದರು. ಅವಿಭಜಿತ ದ.ಕ ಜಿಲ್ಲೆಯಲ್ಲಿ ಕೃಷಿಪತ್ತಿನ ಸಹಕಾರ ಸಂಘಗಳು ಲಾಭದಲ್ಲಿ ಮುನ್ನೆಡೆಯುತ್ತಿದೆ. 26 ವರ್ಷಗಳಿಂದ ದೇಶದಲ್ಲಿಯೇ ಕೃಷಿ ಸಾಲ ಸಮರ್ಪಕವಾಗಿ ಮರುಪಾವತಿಯಲ್ಲಿ ನಮ್ಮ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಇಂಥಹ ಸಹಕಾರ ಸಂಘಗಳು ಸದೃಢವಾಗಿ ಬೆಳೆದರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.6: ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಮರಳಿನ ದಾಸ್ತಾನಿದ್ದು, ಸಾರ್ವಜನಿಕರು ಸ್ಯಾಂಡ್ ಆಪ್ ಮೂಲಕ ಬೇಡಿಕೆಗಳನ್ನು ಸಲ್ಲಿಸುವುದರೊಂದಿಗೆ ಅಗತ್ಯವಿರುವ ಮರಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ಮರಳು ವಿತರಣೆ ಕುರಿತು ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿ ಸೇರಿದಂತೆ ಅಭಿವೃಧ್ದಿ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಮರಳನ್ನು ಸಾರ್ವಜನಿಕರಿಗೆ ಪಾರದರ್ಶಕವಾಗಿ ವಿತರಿಸಲು ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿಯು ಸ್ಯಾಂಡ್ ಆಪ್ ಗಳಲ್ಲಿನ ಬೇಡಿಕೆಗನುಗುಣವಾಗಿ ವಿತರಿಸಲು ಮುಂದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು. ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಮಾರಾಟವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು, ಮರಳು ಸಾಗಾಣಿಕೆ ವಾಹನ ಹಾಗೂ ದೋಣಿಗಳಲ್ಲಿ ಅಳವಡಿಸಿರುವ ಜಿಪಿಎಸ್ ನ ಪರಿಶೀಲಿಸುವುದರೊಂದಿಗೆ ಚಲನ ವಲನಗಳ ಬಗ್ಗೆ ನಿಗಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.5: ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಜನವರಿ 10 ಕೊನೆಯ ದಿನವಾಗಿದ್ದು, ಇ-ಕೆವೈಸಿ ಆಗದೆ ಇರುವ ಪಡಿತರ ಚೀಟಿಯ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ತಮ್ಮ ಬೆರಳಚ್ಚು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ, ಅನಿಲ ಸಂಪರ್ಕ ಹೊಂದಿರುವ ಪಡಿತರ ಚೀಟಿದಾರರು ಅನಿಲ ಸಂಪರ್ಕದ ಮಾಹಿತಿ ಮತ್ತು ಮೊಬೈಲ್ ದೂರವಾಣಿ ಸಂಖ್ಯೆಯ ಮಾಹಿತಿಯನ್ನು ಇ-ಕೆವೈಸಿ ಮಾಡಲು ನ್ಯಾಯಬೆಲೆ ಅಂಗಡಿಗೆ ಬರುವಾಗ ಕಡ್ಡಾಯವಾಗಿ ತರಬೇಕು. ಜನವರಿ 10 ರ ಒಳಗೆ ಇ-ಕೆವೈಸಿ ಮಾಡದೇ ಇರುವ ಪಡಿತರ ಚೀಟಿ ಮತ್ತು ಸದಸ್ಯರನ್ನು ಸರ್ಕಾರದ ನಿರ್ದೇಶನದಂತೆ ಅಮಾನತುಗೊಳಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ವತಿಯಿಂದ ಗಂಗೊಳ್ಳಿಯ ಸ.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದಲ್ಲಿ ಕುಂಭಾಶಿಯ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಹೊಸ್ಮನೆ ದೇವರಾಯ ಶೇರುಗಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿಯ ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಎಸ್‌ವಿಎಸ್ ಅಸೋಸಿಯೇಶನ್ ಕಾರ್ಯದರ್ಶಿ ಎಚ್.ಗಣೇಶ ಕಾಮತ್, ಕಾಲೇಜಿನ ಸಂಚಾಲಕ ಎನ್.ಸದಾಶಿವ ನಾಯಕ್, ಪ್ರಾಂಶುಪಾಲೆ ಕವಿತಾ ಎಂ.ಸಿ. ಉಪಸ್ಥಿತರಿದ್ದರು. ಶಾಲಾ ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು, ಪೋಷಕರು, ವಿದ್ಯಾರ್ಥಿಗಳು, ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಕನ್ನಡದ ‘ನಿನ್ನೆ ರಾತ್ರಿ ನಾ ಎಣ್ಣಿ ಕುಡ್ದಿದೆ’ ಮ್ಯೂಸಿಕಲ್ ವಿಡಿಯೋವನ್ನು ಕನ್ನಡದ ಖ್ಯಾತ ಸಿನೆಮಾ ನಟ ಪ್ರಮೋದ್ ಶೆಟ್ಟಿ ಅವರು ಬುಧವಾರ ಬಿಡುಗಡೆಗೊಳಿಸಿದರು. ಬಳಿಕ ಅವರು ಮಾತನಾಡಿ, ‘ನಿನ್ನೆ ರಾತ್ರಿ ನಾ ಎಣ್ಣಿ ಕುಡ್ದಿದೆ’ ಎನ್ನುವ ಅದ್ಭುತ ಆಲ್ಬಮ್ ಸಾಂಗ್ ಉತ್ತಮವಾಗಿ ಮೂಡಿಬಂದಿದೆ. ಕುಂದಾಪುರ ಭಾಗದ ಪ್ರತಿಭೆಗಳು ತಮ್ಮ ಮೊದಲ ಪ್ರಯತ್ನದಲ್ಲಿಯೇ ಉತ್ತಮ ಸಾಂಗ್ ನೀಡಿದ್ದಾರೆ. ಇದು ಅವರ ಭವಿಷ್ಯದ ಬಗ್ಗೆಯೂ ಭರವಸೆ ಮೂಡಿಸುವಂತಿದೆ. ಕುಂದಾಪ್ರ ಕನ್ನಡದಲ್ಲಿ ಹೆಚ್ಚೆಚು ಸಂಗೀತ, ಸಿನೆಮಾಗಳು ಮೂಡಿ ಬರಲಿ. ಯುವ ತಂಡಗಳ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಸಹಕಾರವಿರಲಿ ಎಂದರು. ಈ ಸಂದರ್ಭದಲ್ಲಿ ಕನ್ನಡ ಆಲ್ಬಮ್ ಗೀತೆ ನಿರ್ಮಾಪಕರಾದ ರಮೇಶ್ ಆಚಾರ್ಯ ಅರಾಟೆ, ಗಾಯತ್ರಿ ರಮೇಶ್ ಆಚಾರ್ಯ, ನಿರ್ದೇಶಕದ ಪ್ರಹ್ಲಾದ್ ಆಚಾರ್ಯ, ಸಹ ನಿರ್ದೇಶಕ ಹರೀಶ್ ಎಂ.ಖಾರ್ವಿ, ಸಂಗೀತ ನಿರ್ದೇಶಕ ಗೌತಮ್ ಕೆ., ಕ್ಯಾಮರಾ ವರ್ಕ್ ಮಾಡಿದ್ದ ಪ್ರವೀಣ್ ನಾಡ, ಜಯರಾಮ ಆಲೂರು, ಪೋಸ್ಟರ್ ವಿನ್ಯಾಸಕಾರ ತಕ್ಷಕ್ , ಕಲಾವಿದರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.5: ಕೋವಿಡ್ ಮಾರ್ಗಸೂಚಿಗಳನ್ನು ಗ್ರಾಹಕರು ಪಾಲಿಸುವಂತೆ ಅಂಗಡಿ ಮುಂಗಟ್ಟುಗಳ ಮುಖ್ಯಸ್ಥರು ಎಚ್ಚರಿಸುವುದರೊಂದಿಗೆ ವ್ಯವಹರಿಸಬೇಕು ತಪ್ಪಿದಲ್ಲಿ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ, ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಎಚ್ಚರಿಕೆಯನ್ನು ನೀಡಿದರು. ಅವರು ಇಂದು ಮಣಿಪಾಲದ ಟೈಗರ್ ಸರ್ಕಲ್, ಬಸ್ ಸ್ಟ್ಯಾಂಡ್, ರಸ್ತೆ ಬದಿಯ ಅಂಗಡಿ ಮುಂಗಟ್ಟು ಸೇರಿದಂತೆ ಮಾಲ್ ಗಳಿಗೆ ಭೇಟಿ ನೀಡಿ, ಅಲ್ಲಿನ ವ್ಯಾಪಾರಿಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಎಚ್ಚರಿಕೆ ನೀಡುವುದರ ಜೊತೆಗೆ , ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟು ಮಾಡುವವರಿಗೆ ದಂಢ ವಿಧಿಸಲು ನಗರಸಭಾ ಸಿಬ್ಬಂದಿ ವರ್ಗದವರಿಗೆ ಸೂಚನೆ ನೀಡಿದರು. ಅಂಗಡಿ ಮಾಲೀಕರುಗಳು ತಮ್ಮ ಅಂಗಡಿ ಮುಂಭಾಗ ಗ್ರಾಹಕರು ಸಾಮಾಜಿಕ ಅಂತರ ಕಾಯ್ದಕೊಳ್ಳುವಂತೆ ಸೂಕ್ತ ಮಾರ್ಕಿಂಗ್ ಮಾಡುವುದರೊಂದಿಗೆ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನಿಗಾ ವಹಿಸಬೇಕು , ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಿಬೇಕು ಎಂಬ ನಾಮಫಲಕಗಳನ್ನು ಅಳವಡಿಸಬೇಕು, ಒಂದೊಮ್ಮೆ ಕೋವಿಡ್ ಮಾರ್ಗಸೂಚಿ ಪಾಲಿಸಿದ್ದಿದ್ದಲ್ಲಿ ಅವರೊಂದಿಗೆ ವ್ಯವಹರಿಸಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರೀಯ ಸೈಬರ್ ಭದ್ರತಾ ದಿನಾಚರಣೆ ಅಂಗವಾಗಿ ಮೂಡ್ಲಕಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಸೇಫ್ ಕ್ಯಾಂಪಸ್ ಎಂಬ ವಿಷಯದ ಮೇಲೆ ಇತ್ತಿಚಿಗೆ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಕರ್ನಾಟಕ ನ್ಯಾಯಾಂಗ ಅಕಾಡೆಮಿ ಹಾಗೂ ಕರ್ನಾಟಕ ಪೊಲೀಸ್ ಅಕಾಡೆಮಿಯ ಸೈಬರ್ ಕಾನೂನು ಹಾಗೂ ಸೈಬರ್ ಭದ್ರತೆ ತರಬೇತುದಾರಾದ ಡಾ. ಅನಂತ್ ಪ್ರಭು ಜಿ. ಅವರು ಮಾತನಾಡಿ ವಿವಿಧ ಬಗೆಯ ಸೈಬರ್ ಕ್ರೈಮ್ ವಿವರ ತಿಳಿಸಿ ಅವುಗಳಿಂದ ಹೇಗೆ ಜಾಗರೂಕರಾಗಿರಬೇಕು ಎಂಬುದನ್ನ ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಅದರಲ್ಲೂ ಪ್ರಮುಖವಾಗಿ ಹೆಣ್ಣುಮಕ್ಕಳು ಯಾವ ರೀತಿಯಲ್ಲಿ ಅಂತರ್ಜಾಲಕ್ಕೆ ಸಂಭಂದಿಸಿದಂತೆ ಸೈಬರ್ ಅಪರಾಧಿಗಳ ಕೃತ್ಯದಿಂದ ಮೋಸಕ್ಕೆ ಒಳಗಾಗಿ ತೊಂದರೆ ಅನುಭವಿಸುತ್ತಿದ್ದಾರೆ ಎಂಬುದನ್ನು ವಿವರಿಸಿ, ಜೊತೆಗೆ ವಿವಿಧ ರೀತಿಯ ಹ್ಯಾಕಿಂಗ್ ಗಳಿಂದ ತಮ್ಮ ಮೊಬೈಲ್ ಹಾಗೂ ಕಂಪ್ಯೂಟರನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆ, ಉಪ ಪ್ರಾಂಶುಪಾಲರಾದ ಪ್ರೊ. ಮೆಲ್ವಿನ್ ಡಿಸೋಜ, ಕಾಲೇಜಿನ ಡೀನ್,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ರೋಟರ್ಯಾಕ್ಟ್ ಕ್ಲಬ್ ಗಂಗೊಳ್ಳಿ ವತಿಯಿಂದ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಾಲಪ್ರತಿಭೆ ಸಂಜಿತ್ ಎಂ. ದೇವಾಡಿಗನನ್ನು ಗಂಗೊಳ್ಳಿಯ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್ ಎಂ. ಜಿ, ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ಅರ್ಚಕರಾದ ರಘುನಾಥ ಪೂಜಾರಿ ಕಳಿಹಿತ್ಲು, ರೋಟರಾಕ್ಟ್ ಕ್ಲಬ್ ಅಧ್ಯಕ್ಷೆ ಅಮೀಕ್ಷಾ ಡಿ ನಾಯ್ಕ್,ಸದಸ್ಯರಾದ ದೀಕ್ಷಾ, ಶ್ರೇಯಾ, ತ್ರಿಷಾ, ಪೂಜಾ, ಸುಷ್ಮಾ, ಸಾಯಿರಾಜ್, ಅಭಿಷೇಕ್, ಆದಿತ್ಯ, ಹರೀಶ, ಸುಮಂತ, ಪ್ರಥ್ವಿಜಾ, ಸರಸ್ವತಿ ವಿದ್ಯಾಲಯದ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ, ಸಂಜಿತ್ ದೇವಾಡಿಗನ ತಂದೆ ತಾಯಿ ಮಾಧವ ದೇವಾಡಿಗ ಮತ್ತು ಸಾವಿತ್ರಿ ಎಸ್ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಧಾನಮಂತ್ರಿಗಳಿಗೆ ಪಂಜಾಬ್ ಕಾಂಗ್ರೆಸ್ ಸರ್ಕಾರದಿಂದ ಕ್ಷಮಿಸಲಾಗದ ದೊಡ್ಡ ಭದ್ರತಾ ಲೋಪವಾಗಿದೆ. ಇಡೀ ದೇಶ ಪ್ರಜೆಗಳು ಇಂತಹ ದುರಂತ ಘಟನೆಯನ್ನು ಖಂಡಿಸುತ್ತಾರೆ. ಪ್ರಧಾನಿಗಳ ಭದ್ರತೆಯ ಬಗ್ಗೆ ನಿರ್ಲಕ್ಷ್ಯ ತೋರಿದರೆ ಹೇಗೆ ಎಂಬುದು ಇಡೀ ದೇಶ ಪ್ರಜೆಗಳಿಗೆ ಪ್ರಶ್ನೆಯಾಗಿದೆ. ಈ ನಾಚಿಕೆಗೇಡಿನ ಘಟನೆಯ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕೆಂದು ನಾನು ಈ ಮೂಲಕ ಒತ್ತಾಯಿಸುತ್ತೇನೆ. ಪಂಜಾಬ್ ಕಾಂಗ್ರೆಸ್ ಸರ್ಕಾರ ಇಡೀ ದೇಶದ ಜನತೆಗೆ, ಪ್ರಧಾನಿಗಳಿಗೆ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ. ಪಂಜಾಬಿನಲ್ಲಿ ನಡೆದ ಬೃಹತ್ ಪ್ರತಿಭಟನೆಯಿಂದಾಗಿ 20 ನಿಮಿಷಗಳ ಕಾಲ ಸಮಯ ಕಳೆದು ಪ್ರಧಾನಮಂತ್ರಿಗಳು ಬದುಕಿ ಬಂದಿರುವುದು ಹೆಚ್ಚು. ಇಂತಹ ವಿಚಿತ್ರ ಘಟನೆಯನ್ನು ನೋಡಿಕೊಂಡು ಪಂಜಾಬ್ ಕಾಂಗ್ರೆಸ್ ಸರ್ಕಾರ ದೇಶದ ಪ್ರಧಾನಿಗಳಿಗೆ ರಕ್ಷಣೆ ನೀಡದೇ ಇರುವುದು ದೊಡ್ಡ ದುರಂತವಾಗಿದೆ. ಇದನ್ನು ಯಾರು ಕೂಡ ಕ್ಷಮಿಸುವುದಿಲ್ಲ. ಪ್ರಧಾನಮಂತ್ರಿಗಳ ವಿರುದ್ಧ ಷಡ್ಯಂತ್ರ ನಡೆಸಿದವರ ವಿರುದ್ಧ ಮತ್ತು ತಪ್ಪಿತಸ್ಥರನ್ನು ತಕ್ಷಣವೇ ಹುಡುಕಿ ಕಾನೂನು…

Read More