ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ.ಜ04: ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಮೀನುಗಾರರು ರಕ್ಷಿಸಿದ ಘಟನೆ ಮಧ್ಯಾಹ್ನ ಹೇರಿಕುದ್ರು ಸೇತುವೆ ಬಳಿ ನಡೆದಿದೆ. ಮಂಗಳೂರು ಮೂಲದ ಯುವಕನೋರ್ವ ಮಂಗಳವಾರ ಮಧ್ಯಾಹ್ನ 12ರ ಸಮಯದಲ್ಲಿ ಕುಂದಾಪುರದ ಕಡೆಯಿಂದ ನಡೆದುಬಂದ ಹೇರಿಕುದ್ರು ಸೇತುವೆ ಮೇಲೆ ಬಂದು ತುಸು ಸಮಯ ಆಚೀಚೆ ಅಡ್ಡಾಡಿದ್ದಾನೆ. ನಂತರ ಕೆಲವರು ನೋಡ ನೋಡುತ್ತಲೇ ಏಕಾಏಕಿ ಸೇತುವೆಯಿಂದ ಪಂಚಗಂಗಾವಳಿ ನದಿಗೆ ಹಾರಿದ್ದಾನೆ. ಅಷ್ಟರಲ್ಲಿ ಇದನ್ನು ಗಮನಿಸಿದ ದೂರದ ನದಿಯ ದಡದಲ್ಲಿದ್ದ ಖಾರ್ವಿ ಸಮಾಜದ ಮೀನುಗಾರ ಯುವಕರು ಕೂಡಲೇ ದೋಣಿ ಮೂಲಕ ಸಾಗಿ ನೀರಿನಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಕೊಸರಾಡುತ್ತಿದ್ದವನ್ನು ಎತ್ತಿ ದಡಕ್ಕೆ ತಲುಪಿಸಿದ್ದಾರೆ. ಯುವಕನನ್ನು ರಕ್ಷಿಸಿ ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಯುವಕನ ಬಗ್ಗೆ ಹೆಚ್ಚಿನ ವಿವರ, ಆತ್ಮಹತ್ಯೆಯ ಕಾರಣ ತಿಳಿದು ಬಂದಿಲ್ಲ
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ನೇತ್ರತ್ವದಲ್ಲಿ ಕೋವಿಡ್ ಟಾಸ್ಕ್ ಪೋರ್ಸ್ ಹಾಗೂ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗಿದ್ದು, ಮೊದಲ ಹಂತದಲ್ಲಿ ಬೆಂಗಳೂರು ನಗರದಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಆಫ್ಲೈನ್ ತರಗತಿ ಬಂದ್ ಮಾಡಿ ಶಾಲಾ ಕಾಲೇಜುಗಳು ಆನ್ಲೈನ್ ವಿಧಾನದಲ್ಲಿ ನಡೆಸಲು ಸೂಚಿಸಲಾಗಿದೆ. 6ನೇ ತಾರೀಖಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ. ಆಹಾರ ವಸ್ತು, ಹೊಟೆಲ್ಗಳಲ್ಲಿ ಪಾರ್ಸೆಲ್, ಅತ್ಯಗತ್ಯ ಸೇವೆಗಳು ಮಾತ್ರ ಇರಲಿದೆ. ಶಾಲಾ ಕಾಲೇಜು ನಿಯಮ ಹೊರತುಪಡಿಸಿ ಉಳಿದೆಲ್ಲಾ ನಿಯಮಗಳು ರಾಜ್ಯಕ್ಕೆ ಅನ್ವಯವಾಗಲಿದೆ. ಮುಖ್ಯಮಂತ್ರಿಗಳ ಗೃಹಕಛೇರಿಯಲ್ಲಿ ನಡೆದ ಸಭೆ ಬಳಿಕ ಸಚಿವರಾದ ಆರ್. ಅಶೋಕ್, ಡಾ.ಕೆ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. ಚಿತ್ರಮಂದಿರ, ಮಾಲ್, ಬಾರ್, ಪಬ್ಗಳ ಒಟ್ಟು ಸಾಮರ್ಥ್ಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿ?ನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ಸ್ವರಾಜ್ ಮೈದಾನದಲ್ಲಿ ಆರಂಭಗೊಂಡಿರುವ 81ನೇ ಅಖಿಲ ಭಾರತ ಅಂತರ್ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ ಚಾಂಪಿಯನ್ಶಿಪ್’ಗೆ ಚಾಲನೆ ನೀಡಲಾಯಿತು. ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಸರಕಾರ ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ನಾರಾಯಣ ಗೌಡ, ತಮ್ಮ ಅಧಿಕಾರಾವಧಿಯಲ್ಲಿ ಇಂದು ದೊಡ್ಡ ಪ್ರಮಾಣದ ಕ್ರೀಡಾ ಕಾರ್ಯಕ್ರಮ ಮೊದಲ ಬಾರಿಗೆ ವೀಕ್ಷಿಸುತ್ತಿರುವುದು ಖುಷಿ ತಂದುಕೊಟ್ಟಿದೆ. ಕ್ರೀಡಾ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ಸರ್ಕಾರ, ಮುಂಚೂಣಿಯಲ್ಲಿದೆ. ರಾಜ್ಯಾದ್ಯಂತ 75 ಕ್ರೀಡಾರ್ಥಿಗಳನ್ನು ದತ್ತು ಪಡೆದು ತರಬೇತಿ ನೀಡಿ ಒಲಿಂಪಿಕ್ ಕ್ತೀಡಾಕೂಟಕ್ಕೆ ಸಜ್ಜುಗೊಳಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕ್ರೀಡಾಕೂಟಕ್ಕೆ ರಾಜ್ಯದಿಂದ 5 ಲಕ್ಷ ನೀಡುವುದಾಗಿ ಘೋಷಿಸಿದರು. ಕಾರ್ಯಕ್ರಮದಲ್ಲಿ ಒಲಿಂಪಿಯನ್ ಎಂ. ಆರ್ ಪೂವಮ್ಮ ಅವರನ್ನು ಸನ್ಮಾನಿಸಲಾಯಿತು. ಮೊದಲ ದಿನದ ಕ್ರೀಡಾಕೂಟದ 10,000ಮೀ ಓಟದ ವಿಜೇತರನ್ನು ಅಭಿನಂದಿಸಲಾಯಿತು. ಮಂಗಳೂರು ವಿವಿ ಉಪಕುಲಪತಿ ಡಾ. ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಮತ್ತು ರಾಜ್ಯ ಸರಕಾರಗಳ ಮಹತ್ತರ ಗುರಿಯಾದ 15-18 ವಯೋಮಾನದವರಿಗೆ ಕನಿಷ್ಠ ಅವಧಿಯಲ್ಲಿ ಗರಿಷ್ಠ ಪ್ರಮಾಣದ ಲಸಿಕೆ ನೀಡುವಿಕೆ, ಆ ಮೂಲಕ ಕೋವಿಡ್ ಮತ್ತು ಓಮಿಕ್ರಾನ್ ಸಾಂಕ್ರಾಮಿಕಗಳ ತಡೆಯಲ್ಲಿ ರಕ್ಷಾಕವಚವಾಗುವ ವ್ಯಾಕ್ಸಿನೇಶನ್ ಅಭಿಯಾನದ ಅಂಗವಾಗಿ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಕೋವಾಕ್ಸಿನ್ ಲಸಿಕಾ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಲಯನ್ಸ್ ಕ್ಲಬ್, ಕುಂದಾಪುರ, ಇದರ ಅಧ್ಯಕ್ಷರಾದ ಲಯನ್ ರಾಧಾಕೃಷ್ಣ ನಾಯಕ್ ರವರು ಕಾಲೇಜಿನ ಲಸಿಕಾ ಅಭಿಯಾನಕ್ಕೆ ದೀಪ ಬೆಳಗುವುದರ ಮೂಲಕ ವಿಧ್ಯುಕ್ತ ಚಾಲನೆ ನೀಡಿದರು. ತಾಲೂಕು ಸಾರ್ವಜನಿಕ ಉಪವಿಭಾಗೀಯ ಆಸ್ಪತ್ರೆ, ಕುಂದಾಪುರ, ಇಲ್ಲಿಯ ವೈದ್ಯಾಧಿಕಾರಿ ಡಾ. ಕವಿತಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ. ಬಿ ಯವರು ಧನ್ಯವಾದ ಸಲ್ಲಿಸಿದರು. ಹಿಂದಿ ವಿಭಾಗ ಮುಖ್ಯಸ್ಥೆ ಜಯಶೀಲಾ ಪೈಯವರು ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.04: ಮೀನುಗಾರಿಕಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ತಾಜಾ ಮೀನನ್ನು ಮನೆ ಬಾಗಿಲಿಗೆ ತಲುಪಿಸಲು ಸೋಲಾರ್ ಆಧಾರಿತ ಶೈತೀಕೃತ/ ಶೀಥಲೀಕೃತ ತ್ರಿಚಕ್ರ ವಾಹನ ಖರೀದಿಗೆ, ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಮೀನುಗಾರಿಕೆ ಉಪನಿರ್ದೇಶಕರ ಕಚೇರಿ, ಉಡುಪಿ ದೂರವಾಣಿ ಸಂಖ್ಯೆ: 0820-2530444 ಅನ್ನು ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾಗಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಕಠಿಣ ಪರಿಶ್ರಮ ಪಡಬೇಕು. ಆತ್ಮವಿಶ್ವಾಸದಿಂದ ಯಶಸ್ಸಿನ ಕಡೆಗೆ ಗಮನಹರಿಸಿ ಉತ್ತಮ ಸಾಧನೆ ಮಾಡುವ ಗುರಿ ಹೊಂದಬೇಕು ಎಂದು ಮುಂಬೈನ ಉದ್ಯಮಿ ಹೊಸ್ಮನೆ ದೇವರಾಯ ಶೇರುಗಾರ್ ಹೇಳಿದರು. ಗಂಗೊಳ್ಳಿಯ ಜಿಎಸ್ವಿಎಸ್ ಅಸೋಸಿಯೇಶನ್ ವತಿಯಿಂದ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರಗಿದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ ನಮಗೆ ಶಿಕ್ಷಣ ನೀಡಿದ ವಿದ್ಯಾಸಂಸ್ಥೆ ಹಾಗೂ ಗುರುಗಳಿಗೆ ಗೌರವ ನೀಡುತ್ತಾ, ವಿದ್ಯಾಸಂಸ್ಥೆಯ ಪ್ರಗತಿಗೆ ಸಹಕರಿಸಬೇಕು. ವಿದ್ಯಾರ್ಥಿವೇತನ ಪಡೆದುಕೊಂಡ ವಿದ್ಯಾರ್ಥಿಗಳು ಸಂಸ್ಥೆಗೆ ಚಿರಋಣಿಗಳಾಗಿ ಮುಂದಿನ ದಿನಗಳಲ್ಲಿ ಶಾಲೆಯ ಮೇಲಿನ ಋಣವನ್ನು ತೀರಿಸುವ ಪ್ರಯತ್ನ ನಡೆಸಬೇಕು ಎಂದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಆಯ್ದ ಅರ್ಹ 56 ವಿದ್ಯಾರ್ಥಿಗಳಿಗೆ ಸುಮಾರು 3.81 ಲಕ್ಷ ರೂ. ವಿದ್ಯಾರ್ಥಿವೇತನವನ್ನು ಅವರು ವಿತರಿಸಿದರು. 2021ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಪ್ರಸನ್ನಾ ಪೈ ಅವರಿಗೆ ಬಾಂಡ್ಯ ರಾಮರಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪದಲ್ಲಿ ಕುಂದಾಪುರ ಪೊಲೀಸರು ಇಬ್ಬರು ಅಂತರ್ ರಾಜ್ಯ ಕುಖ್ಯಾತ ಕಳ್ಳರನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆಯ ಧನರಾಜ್ ವಿಜಯ ಪರ್ಮಾರ್ (42) ಮತ್ತು ಅಜಯ್ ಸಿಂಗ್ ಕಿಶೋರ್ ಸಾಲುಂಕ್ (23) ಬಂಧಿತ ಆರೋಪಿಗಳು. ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ರೂ 1 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ. 29 ರಂದು ಓರಾ ಫೈನ್ ಜುವೆಲ್ಲರಿ ಸಂಸ್ಥೆಯು ಕೊಟೇಶ್ವರ ಯುವ ಮೆರೀಡಿಯನ್ ಬ್ಯಾಕ್ವೆಟ್ ಹಾಲಿನಲ್ಲಿ ಆಯೋಜಿಸಿದ್ದ ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಮಧ್ಯಾಹ್ನದ ವೇಳೆ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷನು ಗ್ರಾಹಕರ ಸೋಗಿನಲ್ಲಿ ಬಂದು 2 ಚಿನ್ನದ ಬಳೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿರೂರು ಪ್ರಭು ಕಾಂಪ್ಲೇಕ್ಸ್ನಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ೧೦೭ನೇ ನೂತನ ಶಿರೂರು ಶಾಖೆಯನ್ನು ಸ್ಥಳೀಯ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ನಂತರ ಪೇಟೆ ಶ್ರೀ ವೆಂಕಟರಮಣ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿರೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಪಟ್ಟಣ ವ್ಯಾಪ್ತಿಯ ಜೊತೆಗೆ ಗ್ರಾಮೀಣ ಭಾಗದಲ್ಲಿ ಸಹಕಾರಿ ಕ್ಷೇತ್ರದ ಸಹಕಾರದಿಂದ ಸ್ವಾವಲಂಬನೆಯ ಬದುಕು ಕಾಣುವಂತಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ನವೋದಯ ಸ್ವ-ಸಹಾಯ ಸಂಘಗಳು ಅನೇಕ ಕುಟುಂಬಗಳು ಸ್ವಾವಲಂಬಿ ಬದುಕಿನ ಭರವಸೆಯಾಗಿದೆ ಎಂದ ಶಾಸಕರು, ರಾಷ್ಟ್ರೀಕೃತ ಬ್ಯಾಂಕ್ಗಳಿಗೂ ಪೈಪೋಟಿ ನೀಡುವಷ್ಟರ ಮಟ್ಟಿಗೆ ಬೆಳೆದು ನಿಂತ ಈ ಸಂಸ್ಥೆಯ ಇನ್ನಷ್ಟು ಹೊಸ ಶಾಖೆಗಳು ಆರಂಭಗೊಳ್ಳಲಿ ಎಂದರು. ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಸ್ವಾವಲಂಬಿ ಜೀವನಕ್ಕೆ ಸಹಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮದ್ದೋಡಿ ಸ.ಹಿ.ಪ್ರಾ.ಶಾಲೆಯಿಂದ ಯಳೂರತೊಪ್ಲು ಶಾಲೆಗೆ ವರ್ಗಾವಣೆಗೊಂಡ ನಾಗೇಶ್ ಆಚಾರ್ಯ ಮತ್ತು ತಾರಾಪತಿ ಸ.ಹಿ.ಪ್ರಾ.ಶಾಲೆಗೆ ವರ್ಗಾವಣೆಗೊಂಡ ಸುಬ್ರಹ್ಮಣ್ಯ ಗಾಣಿಗರಿಗೆ ಮದ್ದೋಡಿ ಶಾಲೆಯಲ್ಲಿ ಎಸ್.ಡಿ.ಎಮ್.ಸಿ , ಶಿಕ್ಷಕ ವೃಂದ, ಪೋಷಕರು, ಹಳೆವಿದ್ಯಾರ್ಥಿ ಸಂಘ ಮತ್ತು ಊರವರ ವತಿಯಿಂದ ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ಜರಗಿತು. ಸಮಾರಂಭದಲ್ಲಿ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಮಂಜುನಾಥ ಮರಾಠಿ, ಮತ್ತು ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಮತ್ತು ಸದಸ್ಯರು, ಶಾಲೆಯನ್ನು ದತ್ತು ಸ್ವೀಕಾರ ಪಡೆದ ಜೈಸನ್.ಎಮ್.ಡಿ , ಹಿರಿಯರಾದ ಚಿಕ್ಕಯ್ಯ ಶೆಟ್ಟಿ, ಕೃಷ್ಣಪ್ಪ ಶೆಟ್ಟಿ, ಗ್ರಾಮ ಪಂ ಸದಸ್ಯೆ ಮುತ್ತು, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸುಧಾಕರ ದೇವಾಡಿಗ ಮತ್ತು ಸಿ.ಎನ್.ಬಿಲ್ಲವ, ನಿವೃತ್ತ ಶಿಕ್ಷಕ ನಾರಾಯಣ ಹೋಬಳಿದಾರ್, ಕಂಚಿಕಾನು ಶಾಲೆಯ ಮುಖ್ಯ ಶಿಕ್ಷಕ ತಿಮ್ಮಪ್ಪ ಗಾಣಿಗ, ಶಾಲೆಯ ಶಿಕ್ಷಕರಾದ ವಿಠಲ ದೇವಾಡಿಗ, ನೀಲಾ, ಮತ್ತು ಸುನಂದಾ ಮಯ್ಯ, ನಾಗಮಣಿ ಮತ್ತು ಅಡುಗೆ ಸಿಬ್ಬಂದಿ ಮುತ್ತು ಮತ್ತು ಸುಜಾತ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂರೂರು ಶ್ರೀ ಮಹಾಲಿಂಗೇಶ್ವರ ಸಾಂಸ್ಕೃತಿಕ ಸಂಘ ಗೌರವ ಅಧ್ಯಕ್ಷರಾಗಿ ಸುಬ್ಬಣ್ಣ ಕೋಣಿ ಅವರನ್ನು ಆಯ್ಕೆ ಮಾಡಲಾಗಿದೆ. ಬಸ್ರೂರು ನಿವೇದಿತಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾಗಿರುವ ಸುಬ್ಬಣ್ಣ ಕೋಣಿ ಅವರು ಉಡುಪಿ ಜಿಲ್ಲಾ ರಾಜ್ಯೋತ್ಸವ, ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರರೂ ಆಗಿದ್ದು ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಭಾನುವಾರ ನಡೆದ ಸಭೆಯಲ್ಲಿ ಸಂಘದ ಅಧ್ಯಕ್ಷರಾದ ಕೃಷ್ಣಾನಂದ ಶಾನುಭಾಗ್, ಕಾರ್ಯದರ್ಶಿ ವಸಂತ ಎಸ್ ಬಂಗೇರ, ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು
