Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಮತ್ತು ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾರವರು ಯುಕ್ತ ಹೊಳ್ಳರವರಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಿದರು. ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಹಳೆ ವಿದ್ಯಾರ್ಥಿಯಾದ ಕಾರ್ತಿಕ್ ಇವರಿಂದ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದೇ ಸಂಧರ್ಭದಲ್ಲಿ ಕಾಲೇಜಿನ ಡೀನ್, ವಿಭಾಗದ ಮುಖ್ಯಸ್ಥರು, ಸಿಬ್ಬಂದಿ ವರ್ಗ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಲಕ್ಷ್ಮೀ ಸ್ವಾಗತಿಸಿ, ಡಿಯೋನ ವಂದಿಸಿದರು, ವರ್ಷ ಮತ್ತು ಸುಪ್ರಿಯ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾಟಕಕಾರ, ಸಾಹಿತಿ, ಶಿಕ್ಷಕ ಕೇಶವ ಶ್ಯಾನುಭಾಗ್ ಅವರು ಬರೆದ ಮಕ್ಕಳ ನಾಟಕಗಳ ಗುಚ್ಚ ‘ಅಮೃತ ಸಂಜೀವಿನಿ’ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಮಾರಣಕಟ್ಟೆಯ ವಾಸುಕಿ ಸಭಾಭವನದಲ್ಲಿ ಜರುಗಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಗೌರವ ಕಾರ್ಯದರ್ಶಿ ಡಾ. ಸುಬ್ರಹ್ಮಣ್ಯ ಭಟ್ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿ, ಮಕ್ಕಳ ಭಾವನೆಗಳನ್ನು ಅರಳಿಸಿ, ಅವರನ್ನು ಸೃಜನಶೀಲರನ್ನಾಗಿಸಲು ನಾಟಕಗಳು ಸಹಕಾರಿಯಾಗಿವೆ. ಒತ್ತಡದೊಂದಿಗೆ ಕೇವಲ ವಿಷಯಗಳ ಅಧ್ಯಯನಕ್ಕಷ್ಟೇ  ಸೀಮಿತಗೊಳ್ಳುತ್ತಿರುವ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳನ್ನು ಪಠ್ಯೇತರ ಚಟುವಟಿಕೆಗಳಲ್ಲೂ ಹೆಚ್ಚೆಚ್ಚು ತೊಡಗಿಸಿಕೊಳ್ಳುವಂತೆ ಮಾಡಬೇಕಿದೆ. ವಿವಿಧ ಕಥಾವಸ್ತುಗಳನ್ನು ಒಳಗೊಂಡಿರುವ ಕಿರುನಾಟಕಗಳನ್ನು ಸೇರಿಸಿ, ಪುಸ್ತಕ ರೂಪದಲ್ಲಿ ಪ್ರಕಟಿಸುತ್ತಿರುವ ಕೃತಿಕಾರರ ಶ್ರಮ ನಿಜವಾಗಲೂ ಶ್ಲಾಘನೀಯ. ಮಕ್ಕಳ ಸಾಹಿತ್ಯವನ್ನು ಮಕ್ಕಳ ಮನಸ್ಸಿನ ಭಾವನೆ ಹಾಗೂ ಪರಿಧಿಯ ಅರಿವಿನಲ್ಲಿ ಬರೆದಾಗ, ಅದು ಅವರಲ್ಲಿ ಹೊಸಚಿಂತನೆ ಬೆಳೆಯಲು ಪ್ರೇರಪಣೆ ನೀಡುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಕಸಾಪ ಘಟಕದ ಅಧ್ಯಕ್ಷ ಡಾ. ಕಿಶೋರ ಕುಮಾರ ಶೆಟ್ಟಿ ವಹಿಸಿದ್ದರು. ಖ್ಯಾತರಂಗ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯಕ್ಷಸಂಕ್ರಾಂತಿಯ ನೇತೃತ್ವದಲ್ಲಿ ಮಾರಣಕಟ್ಟೆಯಲ್ಲಿ ಜಾತ್ರೆ ಪ್ರಯುಕ್ತ ನಡೆದ ಪಾವಂಜೆ ಮೇಳದ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಭಾಗವತ ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಸನ್ಮಾನಿಸಿ ಮಾತನಾಡಿದ ಬೈಂದೂರು  ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಅವಿಭಜಿತ ದ.ಕ ಜಿಲ್ಲೆಯ ಯಕ್ಷಗಾನ ಸ್ಪೂರ್ತಿ ಪಟ್ಲ ಸತೀಶ ಶೆಟ್ಟರು. ಅವರ ಧ್ವನಿಯಲ್ಲಿರುವ ವಿಶೇಷತೆಯ ಸಳೆತದಿಂದ ಪಟ್ಲರ ಅಭಿಮಾನಿಗಳು ಒಂದುಗೂಡುತ್ತಾರೆ ಎಂದು ಹೇಳಿದರು. ಉದ್ಯಮಿ ಗುರ್ಮಿ ಸುರೇಶ ಮಾತನಾಡಿ, ಪಟ್ಲ ಸತೀಶ ಶೆಟ್ಟರು ನಾಡಿನ ಹೆಮ್ಮೆಯ ಯಕ್ಷಗಾಯಕ. ಶ್ರೀಮಂತಿಕೆಗಿಂತ ನೆಮ್ಮದಿಯ ಬದುಕು ಶ್ರೀಮಂತ ಎನ್ನುವುದನ್ನು ತನ್ನ ಗಾಯನದ ಮೂಲಕ ತೋರಿಸಿಕೊಟ್ಟವರು ಎಂದರು. ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಮಾತನಾಡಿ, ಯಕ್ಷಗಾನಕ್ಕೆ 500 ವರ್ಷಗಳ ಇತಿಹಾಸವಿದೆ. ಇನ್ನೂ500 ವರ್ಷವಾದರೂ ಯಕ್ಷಗಾನಕ್ಕೆ ಯಾವುದೇ ಕುಂದು ಬರದು. ಯಕ್ಷಗಾನದ ಶಕ್ತಿ ಅಂತಹದ್ದು ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪಟ್ಲ ಸತೀಶ ಶೆಟ್ಟಿ, ಅಭಿಮಾನಿಗಳ ಪ್ರೀತಿಯ ಮಧ್ಯೆ ಮಾತು ಮೌನವಾಗುತ್ತದೆ. ಕಲಾವಿದರಿಗೆ ಇಂತಹ ಅಭಿಮಾನವೇ ಸಂಪತ್ತು. ನಿಮ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಜಿಕೆಡಿಎಚ್ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರಿಗಾಗಿ ಹಮ್ಮಿಕೊಂಡ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ‘ಫಿಶರ್‌ಮ್ಯಾನ್ ಟ್ರೋಫಿ -2021’ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿತು. ಉಡುಪಿ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಯಶಪಾಲ ಸುವರ್ಣ ಅಧ್ಯಕ್ಷತೆಯಲ್ಲಿ ಕುಂದಾಪುರ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಪೂಜಾರಿ ಪಂದ್ಯಾಟ ಉದ್ಘಾಟಿಸಿದರು. ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಎಚ್.ಮಂಜು ಬಿಲ್ಲವ, ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ವಾಸುದೇವ ಖಾರ್ವಿ, ಗಂಗೊಳ್ಳಿ ಗ್ರಾಪಂ ಸದಸ್ಯ ನಾಗರಾಜ ಖಾರ್ವಿ, ಗಂಗೊಳ್ಳಿ ಜಿಕೆಡಿಎಚ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಹರೀಶ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು. ನಡೆದ ಅಂತಿಮ ಹಣಾಹಣಿಯಲ್ಲಿ ಮುದ್ರಿಮಾರಿಕಾಂಬ ಕಂಚುಗೋಡು ತಂಡವು ಮಂಗಳಗೌರಿ ಕಂಚುಗೋಡು ತಂಡವನ್ನು ಸೋಲಿಸಿ ಫಿಶರ್‌ಮ್ಯಾನ್ ಟ್ರೋಫಿ-2021ನ್ನು ತನ್ನದಾಗಿಸಿಕೊಂಡಿತು. ಅರುಣ್ ಖಾರ್ವಿ ಸರಣಿ ಶ್ರೇಷ್ಠ ಹಾಗೂ ನಿರಂಜನ ಖಾರ್ವಿ ಉತ್ತಮ ಎಸೆತಗಾರ ಪ್ರಶಸ್ತಿ ಪಡೆದುಕೊಂಡರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮ ಮಂದಿರದ ನಿಧಿಸಮರ್ಪಣಾ ಕಾರ್ಯದ ಭಾಗವಾಗಿ ಭಾನುವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕೋಟತಟ್ಟು ಗ್ರಾಮದ ಹಂದಟ್ಟು ಭಾಗದ ಮನೆಗಳಿಗೆ ತೆರಳಿ ದೇಣಿಗೆ ಸಂಗ್ರಹಿಸಿದರು. ಈ ಸಂದರ್ಭ ಅವರು ಮಾತನಾಡಿ ಪ್ರತಿ ಹಿಂದುಗಳ ಮನೆಯಿಂದ ಅವರು ನೀಡಿದಷ್ಟು ಹಣವನ್ನು ದೇಣಿಗೆಯಾಗಿ ಸ್ವೀಕರಿಸಲು ಪ್ರಧಾನಿಗಳು ಕರೆ ನೀಡಿದ್ದು, ಅದರಂತೆ ಎಲ್ಲೆಡೆಯೂ ನಿಧಿ ಸಮರ್ಪಣಾ ಕಾರ್ಯ ನಡೆಯುತ್ತಿದೆ. ಜನರು ಕೂಡ ಇದೊಂದು ಪುಣ್ಯದ ಕಾರ್ಯವೆಂದು ಭಾವಿಸಿ ದೇಣಿಗೆ ನೀಡುತ್ತಿರುವುದು ಸಂತಸದ ಸಂಗತಿ ಎಂದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮತ್ಸ್ಯ ಬಂಧನ ಸಂಸ್ಥೆಯ ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಶಿಲಾನ್ಯಾಸ ಸಮಾರಂಭವು ಬೈಂದೂರು ತಾಲೂಕಿನ ಎಲ್ಲೂರಿನಲ್ಲಿ ದಿನಾಂಕ 19-01-2021ರ ಮಧ್ಯಾಹ್ನ ಗಂಟೆ 1:30ಕ್ಕೆ ಜರುಗಲಿದೆ. ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಶಿಲಾನ್ಯಾಸವನ್ನು ಮುಜರಾಯಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ನೇರವೇರಿಸಲಿದ್ದು, ಈ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಎಸ್. ಅಂಗಾರ ಅವರು ಉಪಸ್ಥಿತರಿರಲಿದ್ದಾರೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ಅವರು ನೆರವೇರಿಸಲಿದ್ದಾರೆ. ಬೈಂದೂರು ಕ್ಷೇತ್ರದ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದು, ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಅವರು ಶುಭಶಂಸನೆಗೈಯಲಿದ್ದಾರೆ. ಕುಂದಾಪ್ರ ಡಾಟ್ ಕಾಂ. ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಡುಪಿ ಶಾಸಕರಾದ ರಘುಪತಿ ಭಟ್ ಕೆ.,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಲವಾರು ವರ್ಷಗಳಿಂದ ನೆನಗುದಿಗೆ ಬಿದ್ದಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂಪೂರ್ಣ ಗೊಳಿಸದಿರಲು ಭಾರತಿಯ ಜನತಾ ಪಕ್ಷದ ಇಚ್ಚಾ ಶಕ್ತಿಯ ಕೊರತೆಯೆ ಕಾರಣ. ತಾವು ಎನೂ ಕೆಲಸ ಮಾಡದಿದ್ದರೂ ಕರಾವಳಿಯ ಮತದಾರರು ತಮ್ಮನ್ನು ಕೈ ಬಿಡುವುದಿಲ್ಲ ಎನ್ನುವ ಬಲವಾದ ನಂಬಿಕೆ ಬಿಜೆಪಿ ಜನಪ್ರತಿನಿಧಿಗಳಿಗಿದೆ.ಈ ಹಿನ್ನೆಲೆಯಲ್ಲಿ ಈ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂಪೂರ್ಣವಾಗಿಲ್ಲ ಮಾರ್ಚ್ ಅಂತ್ಯಕ್ಕೆ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಕಾಮಗಾರಿ ಮುಗಿಸುವುದಾಗಿ ಹೆದ್ದಾರಿ ಅಧಿಕಾರಿಗಳು ಮತ್ತೊಂದು ಗಡವು ನೀಡಿದ್ದು , ಕಾಲ ಮಿತಿಯೊಳಗೆ ಹೆದ್ದಾರಿ ಕಾಮಗಾರಿ ಮುಗಿಸುವ ಲಕ್ಷಣಗಳು ಕಾಣುತ್ತಿಲ್ಲ .ಗದಿತ ಸಮಯಕ್ಕೆ ಕಾಮಗಾರಿ ಪೂರ್ಣ ಗೊಳಿಸಬೇಕು ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬ್ರಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ತಿಳಿಸಿದ್ದಾರೆ. ಕುಂದಾಪುರ ಪಟ್ಟಣದ ಸಮೀಪ ರಸ್ತೆಗಳನ್ನು ಇನ್ನೂ ಕೂಡ ಸರಿಯಾಗಿಮುಚ್ಚಿಲ್ಲ .ಬಸ್ರೂರು ಮೂರಕೈ ಯಿಂದ ವಿನಾಯಕದ ತನಕ ರಸ್ತೆಗೆ ಡಾಂಬಾರು ಹಾಕದಿರುವುದರಿಂದ ಸ್ಥಳೀಯ ಜನರು ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೀವನ್ಮರಣ ಸ್ಥಿತಿಯಲ್ಲಿರುವ ವ್ಯಕ್ತಿಗಳ ಜೀವ ಉಳಿಸಲು ಬೇಕಾಗುವ ರಕ್ತ, ಅದರ ಅಗತ್ಯವಿದ್ದಾಗ ಲಭ್ಯವಾಗಬೇಕಾದರೆ ಅರ್ಹರು ರಕ್ತದಾನ ಮಾಡಬೇಕು ಎಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯದ ಬೆಂಗಳೂರು ವಿಭಾಗದ ಸಹಾಯಕ ಮಹಾ ಪ್ರಬಂಧಕ ಮಹಾಲಿಂಗ ದೇವಾಡಿಗ ಹೇಳಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಕುಂದಾಪುರ ರಕ್ತನಿಧಿ ಕೇಂದ್ರ, ಕುಂದಾಪುರ ದೇವಾಡಿಗ ಮಿತ್ರ ಕದಮ್ ದುಬೈ ಮತ್ತು ವಿವಿಧ ದೇವಾಡಿಗ ಸಂಘಟನೆಗಳು, ಕುಂದಾಪುರಸಿಟಿ ಲಯನ್ಸ್ ಕ್ಲಬ್, ಹೊಸಾಡು ಮುಳ್ಳಿಕಟ್ಟೆ ಸಾಯಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್, ತಲ್ಲೂರು ರೋಟರಿ ಸಮುದಾಯ ದಳ ಹಾಗೂ ಉಪ್ಪಿನಕುದ್ರು ಯಕ್ಷೇಶ್ವರಿ ಫ್ರೆಂಡ್ಸ್ ಇವರ ಆಶ್ರಯದಲ್ಲಿ ತಲ್ಲೂರಿನಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಸಿ ಅವರು ಮಾತನಾಡಿದರು. 28ನೇ ಬಾರಿ ರಕ್ತದಾನ ಮಾಡಿದ ಹಾಗೂ ಲಾಕ್‌ಡೌನ್ ಸಮಯದಲ್ಲಿ ಭಿಕ್ಷುಕರಿಗೆ ಅನ್ನದಾನ ಮಾಡಿದ ಸಮಾಜ ಸೇವಕ ರಾಜೇಶ ದೇವಾಡಿಗ ಕುಂದಾಪುರ ಇವರನ್ನು ಕುಂದಾಪುರ ದೇವಾಡಿಗ ಮಿತ್ರ ಕದಂ ದುಬೈ ವತಿಯಿಂದ ಸನ್ಮಾನಿಸಲಾಯಿತು. ವಾಸುದೇವ ಬೈಂದೂರು ಅಧ್ಯಕ್ಷತೆ ವಹಿಸಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಖಾಸಗಿ ವಾಣಿಜ್ಯ ವಾಹನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಅನ್ವಯಿಸಿವಂತೆ “ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ” ಪರಿಷ್ಕೃತ ಯೋಜನೆಯನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಜಾರಿಗೊಳಿಸಲಾಗಿರುತ್ತದೆ. ಸಂಬಂಧಪಟ್ಟ ಅಸಂಘಟಿತ ವಲಯದ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್‌ಗಳು, ಕಾರ್ಮಿಕ ಅಧಿಕಾರಿಗಳ ಕಛೇರಿ, ಉಡುಪಿ ಉಪ ವಿಭಾಗ, ‘ಎ’ ಬ್ಲಾಕ್, ಮೊದಲನೇ ಮಹಡಿ, ಕೊಠಡಿ ಸಂಖ್ಯೆ:201, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿ ನೋಂದಾಯಿಸಿಂಕೊಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಹಾಡಿಗರಡಿ ದೈವಸ್ಥಾನ ನಾಡ ಇಲ್ಲಿ ವಾರ್ಷಿಕ ಹಾಲು ಹಬ್ಬ, ಗೆಂಡಸೇವೆಯ ಪ್ರಯುಕ್ತ ಕೊರೋನಾ ವಾರಿಯರ್ಸ್‌ಗೆ ಗೌರವಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಪ್ರದೀಪ್ ಎಂ.ಚಂದನ್ ಕುಂದಬಾರಂದಡಿ, ಮುಂಬೈ ಇವರು ಉದ್ಘಾಟಿಸಿದರು. ಶ್ರೀ ಹಾಡಿಗರಡಿ ದೈವಸ್ಥಾನ ಸಮಿತಿಯ ಅಧ್ಯಕ್ಷರಾದ ನಾಗೇಶ ಪಿ.ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಡಾ. ಪ್ರೇಮಾನಂದ, ಡಾ.ಸುರೇಶ ಕುಮಾರ ಶೆಟ್ಟಿ ಸಹಿತ ಕೊರೋನಾ ವಾರಿಯರ್ಸ್ ಆರೋಗ್ಯ ಕಾರ್ಯಕರ್ತರನ್ನು ಗೌರವಿಸಲಾಯಿತು. ಕೊರೋನಾ ಫ್ರಂಟ್‌ಲೈನ್ ವಾರಿಯರ್ರ‍್ಸ್ ಆಗಿ ಸೇವೆ ಸಲ್ಲಿಸಿದ ರಮೇಶ ಟಿ.ಟಿ. ರಾಘವೇಂದ್ರ ನೆಂಪು ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ತಾ.ಪಂ.ಸದಸ್ಯ ಪ್ರವೀಣ್ ಶೆಟ್ಟಿ ಕಡ್ಕೆ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾಧ್ಯಕ್ಷ ಕೆ.ಎಂ.ಶಿವರಾಮ ಕೋಟ ಭಾಗವಹಿಸಿದ್ದರು. ವೈದ್ಯರಾದ ಡಾ. ಪ್ರೇಮಾನಂದ, ಡಾ.ಸುರೇಶ ಕುಮಾರ ಶೆಟ್ಟಿ, ಗ್ರಾಮ ಲೆಕ್ಕಿಗರಾದ ಸಂದೀಪ ಭಂಡಾರ್ಕಾರ್, ಅನ್ನದಾನದ ಸೇವಾಕರ್ತರಾದ ಮಾಧವ ಮೊಗವೀರ ಉಪಸ್ಥಿತರಿದ್ದರು. ಹಾಡಿಗರಡಿ ದೈವಸ್ಥಾನ ದೈವಸ್ಥಾನ ಸಮಿತಿಯ ಕಾರ್ಯದರ್ಶಿ…

Read More