ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಎಂಬುದು ಬೆಳಕು. ಆ ಬೆಳಕು ಹಂಚಿದಷ್ಟು ಅದು ಬೆಳೆಗುತ್ತದೆ. ಆ ಕೆಲಸವನ್ನು ಈ ಸಂಸ್ಥೆ ನಿರಂತರವಾಗಿ ಮಾಡುತ್ತಾ ಬಂದಿದೆ. ಗೆದ್ದರೆ ಖುಷಿ ಪಡಿ, ಸೋತರೆ ಅನುಭವದ ಕಿಡಿ ಪ್ರಜ್ವಲಿಸಲಿ ಎಂದು ರಾಷ್ಟ್ರೀಯ ಈಜುಪಟು ಗಿನ್ನಿಸ್ ದಾಖಲೆ ಖ್ಯಾತಿಯ ನಾಗರಾಜ್ ಖಾರ್ವಿ ಕಂಚಗೋಡು ಹೇಳಿದರು. ಅವರು ಇಲ್ಲಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಉಡುಪಿ ಇವರ ಆಸರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟದ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ಜನತಾ ಪಿಯು ಕಾಲೇಜು ಹಲವಾರು ಕ್ರೀಡಾ ಪಟುಗಳ ಬಾಳಿಗೆ ಬೆಳಕಾಗಿದೆ ಎಂದರು. ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಉಪನಿರ್ದೇಶಕರಾದ ಮಾರುತಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ರೀಡೆಯನ್ನು ಕ್ರೀಡಾ ಸ್ಫೂರ್ತಿಯಿಂದ ಆಡಿದರೆ ಅದರ ಸಂತೋಷ ಕ್ರೀಡಾಪಟುವಿಗೆ ಸಿಗುತ್ತದೆ. ಕ್ರೀಡೆಯಿಂದ ಪ್ರಾಮಾಣಿಕತೆ, ಶಿಸ್ತು, ಹೊಂದಾಣಿಕೆ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಬೆಂಗಳೂರು ಮೂಲದ ವಿವಾಹಿತ ಮಹಿಳೆಯೋರ್ವರು ಕೊಲ್ಲೂರಿಗೆ ಆಗಮಿಸಿದ್ದು ಏಕಾಏಕಿ ಸೌಪರ್ಣಿಕಾ ನದಿಯ ಬಳಿ ನಿಗೂಢವಾಗಿ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಮಹಿಳೆ ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ತಿಳಿದುಬಂದಿದೆ. ಕಾರಿನಲ್ಲಿ ಮೊಬೈಲ್ ಹಾಗೂ ಇನ್ನಿತರ ವಸ್ತುಗಳು ಕಂಡುಬಂದ ಹಿನ್ನೆಲೆಯಲ್ಲಿ ಮೊಬೈಲ್ ಮೂಲಕ ಸಂಪರ್ಕಿಸಿದಾಗ ಈಕೆಯ ವಿಳಾಸ ಪತ್ತೆಯಾಗಿದೆ. ಅವರು ಆ. 28ರಂದು ಕೊಲ್ಲೂರಿಗೆ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯ ಗರ್ಭಗುಡಿಯಲ್ಲಿ ಕೆಲ ಕಾಲ ಕಳೆದು ವಿವಿಧ ಕಡೆಗಳಿಗೆ ಸಾಗಿ ಸೌಪರ್ಣಿಕಾ ನದಿಯತ್ತ ಆಗಮಿಸಿದ್ದರು. ಸೌಪರ್ಣಿಕಾ ನದಿ ಬಳಿ ಅಳವಡಿಸಲಾದ ಸಿ.ಸಿ.ಕೆಮರಾದಲ್ಲಿ ಈಕೆ ಈಜಿಕೊಂಡು ಹೋಗುತ್ತಿರುವುದು ಸೆರೆಯಾಗಿದೆ. ಮುಳುಗುತಜ್ಞ ಈಶ್ವರ ಮಲ್ಪೆ ಹಾಗೂ ಅಗ್ನಿಶಾಮಕ ದಳದವರು ನದಿಯ ವಿವಿಧ ಕಡೆ ನಾಪತ್ತೆಯಾದ ಮಹಿಳೆಯ ಶೋಧ ಕಾರ್ಯ ನಡೆಸಿದರೂ ಶುಕ್ರವಾರ ಸಂಜೆಯ ತನಕ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ. ನಾಪತ್ತೆಯಾದ ಮಹಿಳೆಯ ಪೋಷಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಐ.ಎ.ಎಸ್ / ಕೆ.ಎ.ಎಸ್ ಗೆಜೆಟೆಡ್ ಪ್ರೋಬೇಷನರ್ ಮತ್ತು ಗ್ರೂಪ್ ಸಿ ಆರ್.ಆರ್.ಬಿ & ಎಸ್.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಸೇವಾಸಿಂಧು ತಂತ್ರಾಂಶ https://sevasindhu.karnataka.gov.in ಮತ್ತು https://dom.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 6 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಜಿಲ್ಲೆಯ ಪ್ರವಾಸಿ ತಾಣಗಳ ಸೌಂದರ್ಯವನ್ನು ಸವಿಯಲು ಅನುಕೂಲವಾಗುವಂತೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಈಗಾಗಲೇ ಜಾಗಗಳನ್ನು ಗುರುತಿಸಿರುವ ಕೋಡಿ ಕುಂದಾಪುರ ಬೀಚ್, ಕೋಡಿ ಕನ್ಯಾಣ ಬೀಚ್ ಹಾಗೂ ತ್ರಾಸಿ-ಮರವಂತೆ ಬೀಚ್ ಮಾಸ್ಟರ್ ಪ್ಲ್ಯಾನ್ ಅನ್ನು ಆಧುನಿಕ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ತಯಾರಿಸಬೇಕು. ಮಟ್ಟುವಿನಿಂದ ಪಡುಬಿದ್ರೆ ಕಡಲ ತೀರದವರೆಗೆ 10 ಕೋಟಿ ವೆಚ್ಚದಲ್ಲಿ ಸೈಕಲ್ಟ್ರಂಯಕ್ ನಿರ್ಮಾಣ ಮಾಡುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದ ಅವರು, ಜಿಲ್ಲೆಯ ಪ್ರವಾಸೋದ್ಯಮ ಉತ್ತೇಜನದಿಂದ ಸ್ಥಳೀಯರಿಗೆ ಉದ್ಯೋಗಾವಕಾಶಗಳು ಹೆಚ್ಚುತ್ತವೆ. ಇದಕ್ಕೆ ಒತ್ತು ನೀಡಬೇಕು ಎಂದರು. ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಪ್ರವಾಸಿಗರಿಗೆ ಕ್ಷಿಪ್ರಗತಿಯಲ್ಲಿ ಮಾಹಿತಿ ದೊರೆಯಲು ಅನುಕೂಲವಾಗುವಂತೆ ಪ್ರವಾಸೋದ್ಯಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ಸಮಾಜ ಸೇವೆಯಲ್ಲಿ ಸಾಕಷ್ಟು ವರ್ಷಗಳಿಂದ ಶ್ರಮಿಸುತ್ತಿರುವ ಕೆ. ತಾರಾನಾಥ ಹೊಳ್ಳ ದಂಪತಿಗಳನ್ನು ಕಾರ್ಕಡ ನೆಲ್ಲಿಬೆಟ್ಟು ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಗುರುತಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕೋಟ ಅಮೃತೇಶ್ವರೀ ದೇಗುಲದ ಟ್ರಸ್ಟಿ ಗಣೇಶ್ ನೆಲ್ಲಿಬೆಟ್ಟು, ಸಮಿತಿಯ ಪ್ರಮುಖರಾದ ನರಸಿಂಹ ದೇವಾಡಿಗ, ಅಯ್ಯಪ್ಪ ದೇವಾಡಿಗ, ಗೋಪಾಲ ದೇವಾಡಿಗ, ತಮ್ಮಯ್ಯ, ಚಂದ್ರ ಆಚಾರ್ ಮತ್ತಿತರ ಸಮಿತಿಯ ಪದಾಧಿಕಾರಿಗಳು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮನುಷ್ಯನ ದೇಹ ದೈಹಿಕವಾಗಿ ಮತ್ತು ಮಾನಸಿಕವಾಗಿ ಕ್ರಿಯಾಶೀಲರಾಗಿರುವುದರೊಂದಿಗೆ ಸದೃಢ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ. ಯುವ ಜನರು ಕ್ರೀಡೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ, ಸದೃಢ ಆರೋಗ್ಯ ಹೊಂದಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು. ಅವರು ಅಂದು ತೆಂಕನಿಡಿಯೂರು ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ – ಕುಂದಾಪುರ ಇವರ ಸಹಯೋಗದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ನಡೆದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ, ಮೇಜರ್ ಧ್ಯಾನ್ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮಾತನಾಡಿದರು. ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ಚಂದ್ ಅವರ ಹುಟ್ಟಿದ ದಿನವಾದ ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ್ನನ್ನಾಗಿ ಆಚರಿಸಲಾಗುತ್ತಿದೆ. ಯುವಜನತೆ ದೈಹಿಕವಾಗಿ ಸದೃಢವಾಗಿದ್ದಾಗ ಮಾತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 48ರ ಸರಣಿಯ ಕಾರ್ಯಕ್ರಮದ ಅಂಗವಾಗಿ ಸಾಧಕ ಕೃಷಿಕರ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಆ.30ರ ಭಾನುವಾರ ಪೂರ್ವಾಹ್ನ 9.30ಕ್ಕೆ ನಡೆಯಲಿದೆ. ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರದ ಹಿರಿಯ ಸಾಧಕಿ ಕೊಯ್ಕೂರು ಶಾರದ ಶೆಟ್ಟಿ ಅವರನ್ನು ಗೌರವಿಸುವ ಕಾರ್ಯಕ್ರಮ ಜರಗಲಿದೆ ಎಂದು ಸಂಘದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ಸಿ.ಬಿ.ಎಸ್.ಇ. ಹಾಗೂ ಐ.ಸಿ.ಎಸ್.ಇ. ಶಾಲೆಗಳ ಜಂಟಿ ಆಶ್ರಯದಲ್ಲಿ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿಯಲ್ಲಿ ನಡೆದ ರಾಗ್-ರಂಗ್ 2025 ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ “ಟ್ರಾಶ್ ಟು ಟ್ರೆಜರ್ ಫ್ಯಾನ್ಸಿ ಡ್ರೆಸ್” ಸ್ಪರ್ಧೆಯಲ್ಲಿ ತೆಕ್ಕೆಟ್ಟೆಯ ವಿಶ್ವವಿನಾಯಕ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಹರ್ಷಿಣಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಅವರಿಗೆ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ್ ಶೆಟ್ಟಿ ಅವರು ಬಹುಮಾನ ವಿತರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ’ ಆಲ್ಮೇಡಾ, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಆಯೋಜಿಸಲಾಗಿರುವ 15ನೇ ವರ್ಷದ ವಿದ್ಯಾಗಣಪತಿ ಉತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ದೇವರ ಆಶೀರ್ವಾದವನ್ನು ಪಡೆದರು. ಸಂಘದ ಪದಾಧಿಕಾರಿಗಳು ಶಾಸಕರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ., ಪ್ರಧಾನ ಕಾರ್ಯದರ್ಶಿ ಕರಣ್ ಪೂಜಾರಿ, ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ಅಧ್ಯಕ್ಷ ಗೋಪಾಲ ಬಿಲ್ಲವ, ಬಿಲ್ಲವರ ಯುವಕ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ, ಬಿಲ್ಲವರ ಮಹಿಳಾ ಘಟಕದ ಅಧ್ಯಕ್ಷೆ ಇಂದಿರಾ ಪೂಜಾರಿ, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಮತ್ತು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಕಮ್ಯುನಿಟಿ ಸರ್ವಿಸ್ ಕ್ಲಬ್ ಹಾಗೂ ಯೋಗ ಮತ್ತು ಆಧ್ಯಾತ್ಮಿಕ ಸಂಘದ ಅಡಿಯಲ್ಲಿ ನಶಾ ಮುಕ್ತ ಭಾರತ ಅಭಿಯಾನವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ, ಕಂಡ್ಲೂರು ಇದರ ಪೊಲೀಸ್ ಉಪನಿರೀಕ್ಷಕರಾದ ಭೀಮಾಶಂಕರ್ ಸಿನ್ನೂರ ಅವರನ್ನು ವಿದ್ಯಾರ್ಥಿಗಳು ಮಾನವ ಸರಪಳಿಯ ಮೂಲಕ ರಚಿಸಿದ ‘ಇಂಡಿಯಾ’ ಮೂಲಕ ಬರಮಾಡಿಕೊಂಡು ಪುಷ್ಪ ನೀಡಿ ಸ್ವಾಗತಿಸಿದರು. ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಶಾ ಮುಕ್ತ ಭಾರತ ಅಭಿಯಾನದ ಉದ್ದೇಶ, ಪ್ರತಿಯೊಬ್ಬ ನಾಗರಿಕನಿಗೂ ಇರಬೇಕಾದ ಕಾನೂನಿನ ಅರಿವಿನ ಮಹತ್ವ, ಮಾದಕ ಸೇವನೆಯ ದುಷ್ಪರಿಣಾಮ ಹಾಗೂ ಅದಕ್ಕೆ ಸಂಬಂಧಿಸಿದ ಕಾನೂನಾತ್ಮಕ ಕಠಿಣ ಶಿಕ್ಷೆಗಳನ್ನು ವಿವರಿಸಿದರು. ಸಂಸ್ಕಾರಯುತ ಶಿಕ್ಷಣವು, ವ್ಯಸನದಿಂದ ಮುಕ್ತರಾಗಲು ಇರುವ ಸರಿಯಾದ ಮಾರ್ಗವೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ವಿದ್ಯಾರ್ಥಿಗಳಿಂದ…
