ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಹಾಗೂ ಮಂಗಳೂರಿನ ವಿ ಅಂಡ್ ಜಿ ಇಂಡಸ್ಟ್ರೀಸ್ ಟೆಸ್ಟಿಂಗ್ ಲ್ಯಾಬೊರೋಟರಿಸ್ ಪ್ರೈ.ಲಿನ ನಡುವೆ ಒಡಂಬಡಿಕೆಗೆ ಸಹಿ ಹಾಕಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ ಪೀಟರ್ ಫೆರ್ನಾಂಡೀಸ್ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಗಿರೀಶ್ ಬಾಬು ಒಡಂಬಡಿಕೆಗೆ ಸಹಿ ಹಾಕಿದರು. ಈ ಒಡಂಬಡಿಕೆಯ ಪ್ರಕಾರ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಟ್ರೈನಿಂಗ್ ಮತ್ತು ಸರ್ಟಿಫಿಕೇಶನ್ ಕೋರ್ಸುಗಳನ್ನು ಕಾಲೇಜಿನಲ್ಲಿ ಆರಂಭಿಸಿಲಾಗುತ್ತದೆ. ಜತೆಗೆ ಎನ್.ಡಿ.ಟಿ ತಂತ್ರಜ್ಞಾನದ ಟ್ರೈನಿಂಗ್ ಮತ್ತು ಸರ್ಟಿಫಿಕೇಶನ್ ಕೋರ್ಸು ಆರಂಭಿಸಲಾಗುತ್ತದೆ. ಸಂಶೋಧನಾ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಹೆಚ್ಚಿನ ಮನ್ನಣೆಯನ್ನು ನೀಡಲಾಗುವುದು. ಈ ಸಂದರ್ಭದಲ್ಲಿ ಕಾಲೇಜಿನ ಡೀನ್ ಡಾ. ಪ್ರವೀಣ್ ಜೆ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಸತ್ಯನಾರಾಯಣ್, ಪ್ರಾಧ್ಯಪಕ ಕೆ.ವಿ ಸುರೇಶ್ ಮತ್ತು ವಿ ಅಂಡ್ ಜಿ ಯ ವೆಂಕಟ ಸುಬ್ರಮಣಿಯನ್ ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಶಿಕ್ಷಣದ ದ್ಯೇಯ ಉದ್ದೇಶ ಬಗೆಗಿನ ಅಲ್ಪ ಜ್ಞಾನವೇ ವಿದ್ಯಾರ್ಥಿಗಳನ್ನ ನಿರುತ್ಸಾಹರನ್ನಾಗಿ ಮಾಡುತ್ತದೆಯೆ ಹೊರತು ಶಿಕ್ಷಣವಲ್ಲ ಎಂದು ಆಳ್ವಾಸ್ ಕಾಲೇಜಿನ ಮ್ಯಾನೆಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಆಳ್ವಾಸ್ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಮನೋಜ್, ನವೀನ್ ಮತ್ತು ಸಮರ್ಥ್ ರೂಪಿಸಿದ ವಿಸ್ಠಿ ಆಪ್‌ನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಶಿಕ್ಷಣ ಸಂಸ್ಥೆಗಳು ಕೇವಲ ಒಂದೇ ಉದ್ದೇಶದಿಂದ ಸಂಘಟಿತವಾದವಲ್ಲ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲೆಂದು ವಿವಿಧ ಬಗೆಯ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತವೆ. ಆ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಪಡೆದ ಶಿಕ್ಷಣ ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಒಂದು ಕಂಪನಿಯನ್ನು ಪ್ರಾರಂಭಿಸುವುದು ಸುಲಭದ ಮಾತಲ್ಲ, ಆದರೆ ನಮ್ಮ ವಿದ್ಯಾರ್ಥಿಗಳು ಆದರತ್ತ ಹೆಜ್ಜೆ ಇಟ್ಟಿದ್ದಾರೆ. ಮೊದಲ ಹಂತದಲ್ಲಿ ಸುಲಭವೆನಿಸುವ ವಿಷಯಗಳು ಮುಂದಿನ ದಿನಗಳಲ್ಲಿ ಅನೇಕ ಸವಾಲುಗಳನ್ನ ತಂದೊಡ್ಡುತ್ತವೆ. ಅವೆಲ್ಲವನ್ನು ದಾಟಿ ಮುಂದೆ ಸಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿಸ್ಠಿ ಕಂಪನಿ ಪ್ರತಿಯೊಬ್ಬರನ್ನು ತಲುಪಿ, ದೊಡ್ಡ ಮಟ್ಟದಲ್ಲಿ ಸಾಧನೆ ಮಾಡಲಿ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ಬ್ರಹ್ಮರಥೋತ್ಸವದ ಕೊನೆಯ ದಿನವಾದ ಮಂಗಳವಾರ ಸಂಜೆ ಅವಭೃತ ಉತ್ಸವ ವಿಜೃಂಭಣೆಯಿಂದ ಜರಗಿತು. ಮಂಗಳವಾರ ಸಂಜೆ ಅವಭೃತ ಉತ್ಸವ, ಧ್ವಜ ಅವರೋಹಣ, ಮಹಾಪೂಜೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನುಷ್ಠಾನಗಳು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಮತ್ತು ಅವರ ಪಟ್ಟಶಿಷ್ಯ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿಯವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ಮತ್ತು ದೇವಳದ ತಾಂತ್ರಿಕ ವೇದಮೂರ್ತಿ ಜಿ.ವಸಂತ ಭಟ್ ನೇತೃತ್ವದಲ್ಲಿ ನಡೆಯಿತು. ದೇವಳದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಭಜಕರು ಉತ್ಸವದಲ್ಲಿ ಪಾಲ್ಗೊಂಡು ಮೊದಲಾದವರು ಶ್ರೀದೇವರ ಪ್ರಸಾದ ಸ್ವೀಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಸೇನೆಯಲ್ಲಿ ಸೇರ್ಪಡೆಗೊಳ್ಳಲು ನೇಮಕಾತಿ ರ‍್ಯಾಲಿಯನ್ನು ಸೇನಾ ನೇಮಕಾತಿ ಕಚೇರಿಯಿಂದ ಏಪ್ರಿಲ್ 4 ರಿಂದ 14 ರ ವರೆಗೆ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ. ಬಾಗಲಕೋಟೆ, ವಿಜಯಪುರ, ಧಾರವಾಡ, ಚಿಕ್ಕಮಗಳೂರು, ದಾವಣಗೆರೆ, ಉಡುಪಿ, ಗದಗ, ಹಾವೇರಿ, ಶಿವಮೊಗ್ಗ ಮತ್ತು ಉತ್ತರ ಕನ್ನಡದ ಅಭ್ಯರ್ಥಿಗಳು ಮಾತ್ರ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ಆನ್‌ಲೈನ್ www.JoinIndianarmy.nic.in ನಲ್ಲಿ ನೋಂದಣಿ ಮಾಡಬೇಕು. ಆನ್‌ಲೈನ್‌ನಲ್ಲಿ ಅರ್ಜಿಯನ್ನು ನೊಂದಾಯಿಸಲು ಮಾರ್ಚ್ 20 ರ ವರೆಗೆ ಅವಕಾಶವಿರುತ್ತದೆ. ಆನ್‌ಲೈನ್ ಮೂಲಕ ನೊಂದಾಯಿಸಿದ ಅಭ್ಯರ್ಥಿಗಳು ಮಾತ್ರ ರ‍್ಯಾಲಿಯಲ್ಲಿ ಭಾಗವಹಿಸಲು ಅನುಮತಿಸಲಾಗುತ್ತದೆ. ಸೋಲ್ಜರ್ ಟೆಕ್ನಿಕಲ್, ಸೋಲ್ಜರ್ ಟೆಕ್ ನರ್ಸಿಂಗ್ ಅಸಿಸ್ಟೆಂಟ್ (ಎಎಂಸಿ) / ನರ್ಸಿಂಗ್ ಸಹಾಯಕ ಪಶುವೈದ್ಯ, ಸೋಲ್ಜರ್ ಕ್ಲರ್ಕ್/ ಸ್ಟೋರ್ ಕೀಪರ್ ಟೆಕ್ನಿಕಲ್ (ಆಲ್ ಆರ್ಮ್ಸ್), ಸೋಲ್ಜರ್ ಟ್ರೇಡ್ಸ್‌ಮೆನ್ (ಆಲ್ ಆರ್ಮ್ಸ್), ಸೋಲ್ಜರ್ ಜನರಲ್ ಡ್ಯೂಟಿ (ಆಲ್ ಆರ್ಮ್ಸ್) 10 ನೇ ತರಗತಿ ಪಾಸ್ ಮತ್ತು ಸೋಲ್ಜರ್ ಟ್ರೇಡ್ಸ್‌ಮೆನ್ (ಆಲ್ ಆರ್ಮ್ಸ್) 8 ನೇ ತರಗತಿ ಪಾಸ್ ಆದವರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತನಿಖೆಯಲ್ಲಿ ವೈಜ್ಞಾನಿಕತೆಯನ್ನು ಅಳವಡಿಸುವ ಕುರಿತು ನಡೆದ ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯಕೂಟದಲ್ಲಿ ನಗರದ ಜಿಲ್ಲಾ ಮಹಿಳಾ ಠಾಣೆಯ ಇನ್‌ಸ್ಪೆಕ್ಟರ್ ವಿನಾಯಕ ಬಿಲ್ಲವ ಅವರಿಗೆ ಎರಡು ಚಿನ್ನದ ಪದಕಗಳು ಲಭಿಸಿವೆ. ಬೆಂಗಳೂರಿನ ಯಲಹಂಕದಲ್ಲಿ ನಡೆದ ಪೊಲೀಸ್ ಕರ್ತವ್ಯ ಕೂಟದಲ್ಲಿ ವಿನಾಯಕ ಬಿಲ್ಲವ ವಿಧಿ ವಿಜ್ಞಾನ ಫೋಟೋಗ್ರಫಿ ಹಾಗೂ ಹ್ಯಾಂಡಿಂಗ್ ಲಿಫ್ಟಿಂಗ್ ಪ್ಯಾಕಿಂಗ್ (ಎಚ್.ಸಿ.ಪಿ) ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಹಿರಿಯ ಐಪಿಸಿ ಅಧಿಕಾರಿ ಪ್ರವೀಣ್ ಸೂದ್ ಪ್ರಶಸ್ತಿ ವಿತರಣೆ ಮಾಡಿದ್ದು, ರಾಜ್ಯ ಮಟ್ಟದಲ್ಲಿ ಚಿನ್ನದ ಪದಕವನ್ನು ಪಡೆಯುವ ಮೂಲಕ ವಿನಾಯಕ ಬಿಲ್ಲವ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬಿಜೂರು ಮೂರ‍್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದ ವಾರ್ಷಿಕ ಭಜನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ರವಿವಾರ ನಡೆಯಿತು. ಬಿಜೂರು ಪ್ರಮೋದ್ ಭಟ್ ನೇತೃತ್ವದಲ್ಲಿ ಧಾರ್ಮಿಕ ಪೂಜೆ ಕಾರ್ಯ ನೆರವೇರಿತು. ಪುರಾಣ ಪ್ರಸಿದ್ಧ ಶ್ರೀ ನಂದಿಕೇಶ್ವರ ದೈವಸ್ಥಾನದ ವಾರ್ಷಿಕೋತ್ಸವ, ಏಕಾಹ ಅಖಂಡ ಭಜನೆ ಹಾಗೂ ಗೆಂಡ ಸೇವೆ ಕಾರ್ಯಕ್ರಮಗಳು ಎ.14ರಿಂದ 16ರ ವರೆಗೆ ನಡೆಯಲಿದೆ. ಎ.14ರಂದು ವೇದಮೂರ್ತಿ ಮಹಾಬಲ ಭಟ್ ಸಹಭಾಗಿತ್ವದಲ್ಲಿ ಶ್ರೀ ನಂದಿಕೇಶ್ವರ ಪರಿವಾರ ದೈವಗಳ ಹಾಗೂ ಶ್ರೀ ನಾಗದೇವರ ವಾರ್ಷಿಕ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಎ.15ರಂದು ಬೆಳಗ್ಗೆ ಗಂಟೆ 9.15ಕ್ಕೆ ಏಕಾಹ ಅಖಂಡ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡು ಎ.16ರಂದು 11.15ಕ್ಕೆ ಪ್ರದೀಪ ವಿಸರ್ಜನೆಯೊಂದಿಗೆ ಭಜನಾ ಮಂಗಲೋತ್ಸವ ನಡೆಯಲಿದೆ. ಎ.15ರಂದು ರಾತ್ರಿ 8ಗಂಟೆಗೆ ಹಿಂದೂಸ್ತಾನಿಯ ಯುವ ಗಾಯಕ ರಜತ್ ಕುಲಕರ್ಣಿ ಇವರಿಂದ ಭಜನ್ ಸಂಧ್ಯಾ ಕಾರ್ಯಕ್ರಮ ನಡೆಯಲಿದ್ದು, ಎ.16ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರು ಯಕ್ಷಾರಾಧನ ಕಲಾ ಕೇಂದ್ರದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕಿರಿಮಂಜೇಶ್ವರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಕೃತಿ ಇಕೋ ಕ್ಲಬ್ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ಪರಿಸರ ಮಾಹಿತಿ ಕಾರ್ಯಾಗಾರ ನಡೆಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಈಶ್ವರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಜಗದೀಶ್ ಕೊಡೇರಿ ಪರಿಸರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶೇಖರ ಖಾರ್ವಿ ಶಾಲೆಗೆ ಅಗತ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಶಾಲಾ ಮಕ್ಕಳಿಗಾಗಿ ಬೆಂಕಿ ರಹಿತ ಅಡುಗೆ ತಯಾರಿ, ಸ್ಥಳೀಯ ಹಣ್ಣುಗಳ ಪ್ರದರ್ಶನ, ಚಿತ್ರ ಪ್ರದರ್ಶನ ಮುಂತಾದ ಕಾರ‍್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣ, ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಬಂಗ್ಲೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನ್ಯಾರಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನಾಣು.ಡಿ.ಚಂದನ್, ಎಸ್.ಡಿ.ಎಮ್.ಸಿ ಉಪಾಧ್ಯಕ್ಷ, ಸರ್ವಸದಸ್ಯರು, ಪೋಷಕರು, ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಪುಷ್ಪಾ ಎನ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಅತ್ಯುತ್ತಮ ಗ್ರಾಮಾಂತರ ವರದಿಗೆ ಕೊಡಮಾಡುವ ಜಿ. ನಾರಾಯಣಸ್ವಾಮಿ ಪ್ರಶಸ್ತಿಗೆ ಪತ್ರಕರ್ತ ಅರುಣ್ ಕುಮಾರ್ ಶಿರೂರು ಅವರು ಭಾಜನರಾಗಿದ್ದಾರೆ. ಕಾಲೇಜು ದಿನಗಳಲ್ಲಿಯೇ ಸಾಹಿತ್ಯ ಹಾಗೂ ಸಂಘಟನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಅರುಣ್ ಕುಮಾರ್ ಶಿರೂರು ಅವರು ಉಷಾಕಿರಣ ಪತ್ರಿಕೆಯ ಮೂಲಕ ತಮ್ಮ ವೃತ್ತಿ ಬದುಕನ್ನು ಆರಂಭಿಸಿದರು. ಮಂದೆ ನಮ್ಮ ಟಿ.ವಿ, ಕರಾವಳಿ ನ್ಯೂಸ್ ಚಾನೆಲ್‌ಗಳಲ್ಲಿ ಸುದ್ದಿ ನಿರೂಪಕರಾಗಿ ಸೇವೆ ಸಲ್ಲಿಸಿದ್ದರು. ಉದಯವಾಣಿ ಪತ್ರಿಕೆಯ ಬೈಂದೂರು ಭಾಗದ ವರದಿಗಾರರಾಗಿ ಕಳೆದ ಹನ್ನೆರಡು ವರ್ಷಗಳಿಂದ ಪತ್ರಿಕಾರಂಗದಲ್ಲಿ ತೊಡಗಿಸಿಕೊಂಡಿರುವ ಅವರು, ಬೈಂದೂರಿನ ಗ್ರಾಮೀಣ ಪ್ರದೇಶಗಳ ವರದಿಗಾರಿಕೆಯಲ್ಲಿ ಆಸಕ್ತಿಯಿಂದಲೇ ತೊಡಗಿಕೊಂಡವರು. ಗೋಳಿಬೇರಿನ ಗೋಳಿನ ಕಥೆ, ದೇವರಗದ್ದೆ ಜನರ ಪರಿಸ್ಥಿತಿ ದೇವರೇ ಕಾಯಬೇಕು, ಹೇನುಬೇರು ಜಾನುವಾರು ಮರಣ ವರದಿ ಸೇರಿದಂತೆ ಅವರು ಹಲವು ವರದಿಗಳು ಆಳುವವರ್ಗದ ಗಮನಸೆಳೆದು ಸಮಸ್ಯೆಗಳಿಗೆ ಪರಿಹಾರ ದೊರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಪತ್ರಿಕೋದ್ಯಮದ ಜೊತೆ ಜೊತೆಗೆ ಸಂಘಟನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೋಟಿ ಚೆನ್ನಯರು ಕರಾವಳಿಯ ವೀರ ಪುರುಷರಾಗಿದ್ದು ಅವರು ನೆಲೆಸಿ, ನಡೆದಾಡಿದ ಸಾನಿಧ್ಯವೆಲ್ಲವೂ ಇಂದು ಶಕ್ತಿಸ್ಥಳವಾಗಿ ಮಾರ್ಪಟ್ಟಿದೆ. ಅವರ ಕೊನೆಯ ಗರಡಿಯಾಗಿರುವ ನಾಕಟ್ಟೆ ಗರಡಿಯೂ ಕೂಡ ಜೀರ್ಣೋದ್ಧಾರಗೊಳ್ಳುತ್ತಿದ್ದಂತೆ ಇಡಿ ಊರಿಗೆ ಚೈತನ್ಯ ತಂದುಕೊಡಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರಿ ರತ್ನ ಡಾ. ಎಂ. ಎನ್. ರಾಜೇಂದ್ರಕುಮಾರ್ ಅವರು ಹೇಳಿದರು. ಅವರು ಬೈಂದೂರು ತಾಲೂಕು ಯಡ್ತರೆ ನಾಕಟ್ಟೆಯಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಭೇಟಿ ನೀಡಿ ಬಳಿಕ ಮಾತನಾಡಿ ಬಹಳ ವರ್ಷಗಳ ಬಳಿಕ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿರುವುದು ಖುಷಿಯ ಸಂಗತಿಯಾಗಿದ್ದು, ಸಾರ್ವಜನಿಕರ ಸಹಕಾರದಿಂದ ದೇವತಾ ಕಾರ್ಯಗಳೆಲ್ಲವೂ ಯಶಸ್ವಿಯಾಗಿ ನಡೆಯಲಿದೆ ಎಂದರು. ಈ ಸಂದರ್ಭ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮೋನಪ್ಪ ಶೆಟ್ಟಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ರತ್ನಾಕರ ಶೆಟ್ಟಿ, ರಾಘವ ಶೆಟ್ಟಿ ಕಾರ್ಕಳ, ವೃಷಭದೇವ ಅಧಿಕಾರಿ ಕಾರ್ಕಳ, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ಮದನಕುಮಾರ್ ಉಪ್ಪುಂದ, ನಾಗರಾಜ ಗಾಣಿಗ ಬಂಕೇಶ್ವರ, ತಿಮ್ಮಪ್ಪ ಪೂಜಾರಿ, ಯಡ್ತರೆ ಬಿಲ್ಲವ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ವ್ಯಂಗ್ಯಚಿತ್ರ ಕಲಾವಿದ ಪಂಜು ಗಂಗೊಳ್ಳಿಯವರು ಕುಂದಾಪ್ರ ಕನ್ನಡಕ್ಕೆ ನೀಡಿದ ಸೇವೆಯನ್ನು ಪರಿಗಣಿಸಿ ಟೀಮ್ ಅಭಿಮತ ಮತ್ತು ಜನಸೇವಾ ಟ್ರಸ್ಟ್ ವತಿಯಿಂದ ಅವರ ನಿವಾಸದಲ್ಲಿ ಗೌರವಿಸಲಾಯಿತು. ಕುಂದಾಪ್ರ ಕನ್ನಡದ ಕುರಿತಾದ ಅಂದಾಜು ಎಂಟುನೂರು ಪುಟಗಳಾಗುವಷ್ಟು ಶಬ್ದಕೋಶವನ್ನ ಸಂಗ್ರಹಿಸಿರುವ ಪಂಜು ಗಂಗೊಳ್ಳಿಯವರ ಮತ್ತು ಅವರ ಬಳಗದ ಈ ಕೆಲಸ ನಿಜಕ್ಕೂ ಅರ್ಥಪೂರ್ಣವಾಗಿದ್ದು, ಪ್ರಾದೇಶಿಕ ಭಾಷೆಯೊಂದರ ಉಳಿವಿಗಾಗಿ ನೀಡಿದ ಬಹುಮುಖ್ಯ ಕೊಡುಗೆ ಎಂದು ಸಾಂಸ್ಕೃತಿಕ ಚಿಂತಕ ಉದಯ್ ಶೆಟ್ಟಿ ಕೋಟ ಅಭಿಪ್ರಾಯ ಪಟ್ಟರು ಹೊರನಾಡ ಕನ್ನಡಿಗರಾದರೂ ತನ್ನ ಹುಟ್ಟು ನೆಲದ ಬಗ್ಗೆ ಅತೀವ ಪ್ರೀತಿ, ಕಾಳಜಿ ಇರಿಸಿಕೊಂಡಿರುವ ಗಂಗೊಳ್ಳಿಯ ತನ್ನ ಮನೆಯ ಪರಿಸರದಲ್ಲಿ ಸಾವಯವ ಕೃಷಿಯನ್ನು ಮಾಡುತ್ತಾ, ಗಂಗಾವಳಿ ನದಿಯ ಬದುವಲ್ಲಿ ಸಂಜೆ ಸೂರ್ಯನನ್ನು ದಿಟ್ಟಿಸುತ್ತಾ ಮನಸ ಕ್ಯಾನ್ವಾಸಿನಲ್ಲಿ ಭಾವನೆಯ ಚಿತ್ತಾರ ಮೂಡಿಸುವ ಪಂಜು ಗಂಗೊಳ್ಳಿ ಸಮಾಜವಾದಿ ನಿಲುವಿನೊಂದಿಗೆ ಬದುಕಿದವರು. ನಾಡು ಕಂಡ ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟರ ಗರಡಿಯಲ್ಲಿ ಬೆಳೆದು ನಂತರ ಮುಂಬೈ ನಗರದಲ್ಲಿ ಸಾಹಿತ್ಯ…
