ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು : ಇಲ್ಲಿನ ರೋಟರಿ ಕ್ಲಬ್ ವತಿಯಿಂದ ತಿಂಗಳ ಕುಟುಂಬ ಸಮ್ಮಿಲನ ಹಾಗೂ ರಾಷ್ಟ್ರಪತಿಯಿಂದ ಪೊಲೀಸ್ ಸೇವಾ ಪದಕ ವಿಜೇತ ಉಡುಪಿಯ ಎ.ಸಿ.ಬಿ ಅಧಿಕಾರಿ ಸತೀಶ್ ಬಿ.ಎಸ್ ಹಾಗೂ ಇತ್ತೀಚಿಗಷ್ಟೆ ಹಾಡು ಕರ್ನಾಟಕದಲ್ಲಿ ಭಾಗವಹಿಸಿದ ಗೀತಾ ಬೈಂದೂರು ಇವರಿಗೆ ಅಭಿನಂದನಾ ಕಾರ್ಯಕ್ರಮ ಬುಧವಾರ ಸಂಜೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆಯಿತು. ರೋಟರಿ ಕ್ಲಬ್‍ನ ಅಧ್ಯಕ್ಷ ರೋ. ಯು ಪ್ರಕಾಶ್ ಭಟ್ ರೋಟರಿ ತಿಂಗಳ ಕುಟುಂಬ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ರಾಷ್ಟ್ರಪತಿಯಿಂದ ಪೊಲೀಸ್ ಸೇವಾ ಪದಕ ವಿಜೇತ ಉಡುಪಿಯ ಎ.ಸಿ.ಬಿ ಅಧಿಕಾರಿ ಸತೀಶ್ ಬಿ.ಎಸ್ ಇವರಿಗೆ ಬೈಂದೂರು ರೋಟರಿ ಕ್ಲಬ್ ವತಿಯಿಂದ ಅಭಿನಂದಿಸಲಾಯಿತು. ಪೊಲೀಸ್ ಸೇವಾ ಪದಕ ವಿಜೇತ ಉಡುಪಿಯ ಎ.ಸಿ.ಬಿ ಅಧಿಕಾರಿ ಸತೀಶ್ ಬಿ.ಎಸ್ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಸಾಧನೆ ಮಾಡಲು ನಮ್ಮಲ್ಲಿ ಶ್ರದ್ಧೆ, ಕಠಿಣ ಪರಿಶ್ರಮ, ಪ್ರಾಮಾಣಿಕತೆ, ಪ್ರಯತ್ನ ಇದ್ದು ಇದ್ದರೆ ಯಾರು ಏನನ್ನೂ ಬೇಕಾದರು ಮಾಡಬಹುದು. ಸಾಧನೆ ಮಾಡಲು ಸಾಕಷ್ಟು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ರಂಗಭೂಮಿ ರೀತಿಯ ಕಲಾಪ್ರಕಾರಗಳು ಸಮಾಜಕ್ಕೆ ಬಹುಮುಖ್ಯದುದು. ಮನುಷ್ಯ, ಸಮುದಾಯ, ಭಾಷೆ ಮುಂತಾದವುಗಳ ನಡುವಿನ ಅರ್ಥೈಸುವಿಕೆಗೆ ನಾಟಕ ಪ್ರಮುಖ ಮಾಧ್ಯಮವಾಗಿದೆ. ನಾಟಕ ಕೇವಲ ನಟನೆ ಮಾತ್ರವೇ ಆಗಿ ಉಳಿಯದೇ ನಟನೊಬ್ಬ ತನ್ನನ್ನು ತಾನು ಅರಿತುಕೊಳ್ಳುವ ಸಮಾಜವನ್ನು ಹಾಗೂ ಸುತ್ತಲಿನ ಭೌದಿಕ ಸ್ಥಿತಿಯನ್ನು ಅರಿಯುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಎಂದು ಉಡುಪಿ ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಇಲ್ಲಿನ ಶ್ರೀ ಶಾರದಾ ವೇದಿಕೆಯಲ್ಲಿ ಶನಿವಾರ ಆರಂಭವಾದ ’ರಂಗ ಲಾವಣ್ಯ-2020’ ಹಾಗೂ ಬಿ. ಮಾಧವ ರಾವ್ ಸ್ಮರಣೆಯ ಮೂರು ದಿನಗಳ ’ರಂಗಮಾಧವ’ ನಾಟಕೋತ್ಸವದ ಎರಡನೇ ದಿನದ ಮುಖ್ಯ ಅತಿಥಿಯಾಗಿ ಮಾತನಾಡಿದರು. ರಂಗಭೂಮಿ ಶ್ರಮಜೀವಿಗಳ ಲೋಕ. ವೇದನೆಯನ್ನು ಹಾಡಾಗಿಸಿ, ಸಮುದಾಯವನ್ನು ತಲುಪುವ ಪ್ರಕ್ರಿಯೆಯಲ್ಲಿ ಅದು ನಿರತವಾಗಿದೆ. ಸುಖ-ದು:ಖವನ್ನು ಚಂದವಾಗಿ ಅಭಿವ್ಯಕ್ತಿಗೊಳಿಸಲು ರಂಗಭೂಮಿಯಿಂದ ಸಾಧ್ಯ. ಇಂದು ಆರ್ಥಿಕ ಸಂಕಷ್ಟಗಳಿಂದ ಹಲವು ನಾಟಕ ಕಲಾ ಸಂಸ್ಥೆಗಳು ಮುಚ್ಚಲ್ಪಟ್ಟಿದೆ, ಆದರೆ ಬೈಂದೂರಿನ ಲಾವಣ್ಯ ಸಂಸ್ಥೆ ಇದಕ್ಕೆ ಅಪವಾದವಾಗಿದ್ದು, ನಾಲ್ಕು ದಶಕಗಳಿಂದ ನಿರಂತರವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾಲಂಪ್ರತಿ ಜರಗುವ ಬ್ರಹ್ಮರಥೋತ್ಸವದ ಸೋಮವಾರ ವಿಜೃಂಭಣೆಯಿಂದ ಜರಗಿತು. ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಮತ್ತು ಅವರ ಪಟ್ಟಶಿಷ್ಯ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿಯವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ರಥೋತ್ಸವದ ಧಾರ್ಮಿಕ ಅನುಷ್ಠಾನಗಳು ಶಾಸ್ತ್ರೋಕ್ತವಾಗಿ ನಡೆಯಿತು. ಬೆಳಿಗ್ಗೆ ಶ್ರೀದೇವರಿಗೆ ಪಂಚಾಮೃತ ಅಭಿಷೇಕ, ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ ಮಹಾಪ್ರಾರ್ಥನೆ ಬಳಿಕ ಬಲಿಪೂಜೆ, ಮಾರ್ಗ ಬಲಿ ಜರಗಿತು. ಸಂಜೆ ರಥಾರೋಹಣ, ಮಹಾಮಂಗಳಾರತಿ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಎಸ್.ವೆಂಕಟರಮಣ ಆಚಾರ್ಯ ಮತ್ತು ದೇವಳದ ತಾಂತ್ರಿಕ ವೇದಮೂರ್ತಿ ಜಿ.ವಸಂತ ಭಟ್ ನೇತೃತ್ವದಲ್ಲಿ ರಥೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅನುಷ್ಠಾನಗಳು ನಡೆಯಿತು. ದೇವಳದ ಆಡಳಿತ ಮಂಡಳಿ ಸದಸ್ಯರು, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಭಜಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯ ಬೈಂದೂರು, ಕುಂದಾಪುರ, ಕಾರ್ಕಳ, ಬ್ರಹ್ಮಾವರ ಶೈಕ್ಷಣಿಕ ವಲಯಗಳಲ್ಲಿ ತಲಾ 2 ರಂತೆ ಪ್ರೌಢಶಾಲಾ ಗ್ರೇಡ್ 2 ಶ್ರೇಣಿಯ ಮತ್ತು ಉಡುಪಿ ವಲಯದಲ್ಲಿ 1 ಹುದ್ದೆ ಒಟ್ಟು 9 ಹುದ್ದೆಗಳು ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಶ್ರೇಣಿಯ ತಲಾ 1 ರಂತೆ ಬೈಂದೂರು ಮತ್ತು ಉಡುಪಿ ಶೈಕ್ಷಣಿಕ ವಲಯಗಳಲ್ಲಿ ಒಟ್ಟು 2 ಹುದ್ದೆಗಳನ್ನು ಬಾಹ್ಯ ಸಂಪನ್ಮೂಲದಿಂದ ನೇರಗುತ್ತಿಗೆ ಆಧಾರದಲ್ಲಿ ವಿಶೇಷ ಸಂಪನ್ಮೂಲ ಶಿಕ್ಷಕ (ಬಿ.ಐ.ಇ.ಆರ್.ಟಿ) ರನ್ನು ನೇಮಕಮಾಡಿಕೊಳ್ಳುವರೇ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರೌಢಶಾಲಾ ವಿಭಾಗಕ್ಕೆ ರೆಗ್ಯುಲರ್ ಬಿ.ಇಡಿ ಜೊತೆಗೆ ವಿಶೇಷ ಬಿ.ಇಡಿ ಹಾಗೂ ಪ್ರಾಥಮಿಕ ವಿಭಾಗಕ್ಕೆ ವಿಶೇಷ ಡಿ.ಇಡಿ ತರಬೇತಿ ಪಡೆದ ಶಿಕ್ಷಕರು ಆರ್‌ಸಿಐ ನೋಂದಣಿ ಮಾಡಿದವರು, ಮಾರ್ಚ್ 5 ರ ಮಧ್ಯಾಹ್ನ 1.30 ರ ಒಳಗೆ ಪೂರ್ಣ ವಿವರಗಳು ಹಾಗೂ ದಾಖಲೆಗಳೊಂದಿಗೆ ತಮ್ಮ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಲಿಖಿತ ಅರ್ಜಿಯನ್ನು ಸಲ್ಲಿಸುವಂತೆ ಜಿಲ್ಲಾ ಸಮಗ್ರ ಶಿಕ್ಷಣ ಅಭಿಯಾನ ಸಾ. ಶಿ. ಇಲಾಖೆಯ ಉಪನಿರ್ದೇಶಕರು,…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಹಂಗಾರಕಟ್ಟೆಯ ಚೇತನಾ ಪ್ರೌಢಶಾಲೆಯಲ್ಲಿ ಮಾರ್ಚ್ 14 ಮತ್ತು 15 ರಂದು ನಡೆಯುವ, ಉಡುಪಿ ಜಿಲ್ಲಾ 14 ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಪೂರ್ವಭಾವಿ ಸಭೆಯು ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ಅವರ ಅಧ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯವಿರುವ ಪೊಲೀಸ್, ಅಗ್ನಿಶಾಮಕ ಹಾಗೂ ಆರೋಗ್ಯ ವ್ಯವಸ್ಥೆ ಕುರಿತಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂದಪಟ್ಟ ಇಲಾಖೆಗಳಿಗೆ ಸೂಚಿಸಿದ ಅಪರ ಜಿಲ್ಲಾಧಿಕಾರಿ, ಸಮ್ಮೇಳನದಲ್ಲಿ ಭಾಗವಹಿಸುವ ಶಿಕ್ಷಕರಿಗೆ ಓಓಡಿ ಸೌಲಭ್ಯ ನೀಡುವ ಕುರಿತಂತೆ ಹಾಗೂ ಸಮ್ಮೇಳನಕ್ಕೆ ಆಸಕ್ತ ಶಾಲಾ ಮಕ್ಕಳನ್ನು ಕರೆತರುವ ಕುರಿತಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಸಮ್ಮೇಳನದಲ್ಲಿ ಸುಮಾರು 2000 ಮಂದಿ ಭಾಗವಹಿಸಲಿದ್ದು, ಅವರ ಊಟೋಪಚಾರದ ಕುರಿತಂತೆ ಜಿಲ್ಲೆಯ ದೇವಾಲಯಗಳಿಂದ ಅಗತ್ಯ ನೆರವು ನೀಡಲಾಗುವುದು ಎಂದ ಅಪರ ಜಿಲ್ಲಾಧಿಕಾರಿ, ಸಮ್ಮೇಳನದಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯ ಕ್ರಮ ವಹಿಸುವಂತೆ ಸಂಘಟಕರಿಗೆ ಸೂಚಿಸಿದರು. ಜಿಲ್ಲಾ ಕನ್ನಡ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಭಾರತೀಯ ಸೇನೆಯಲ್ಲಿ ಸೇರ್ಪಡೆಯಾಗುವ ಜಿಲ್ಲೆಯ ಅಭ್ಯರ್ಥಿಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು, ಜಿಲ್ಲೆಯಿಂದ ಸೇನೆಗೆ ಸೇರಲು ಆಸಕ್ತರಿರುವ ಅಭ್ಯರ್ಥಿಗಳಿಗೆ ಅಗತ್ಯ ಮಾಹಿತಿ ಮತ್ತು ತರಬೇತಿಯನ್ನು ಜಿಲ್ಲಾಡಳಿತದ ವತಿಯಿಂದ ಉಚಿತವಾಗಿ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ. ಉಡುಪಿ ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಏಪ್ರಿಲ್ 4 ರಿಂದ 14 ರ ವರೆಗೆ ನಡೆಯಲಿರುವ ಸೇನಾ ನೇಮಕಾತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿರುವ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ, ಮಾರ್ಚ್ 15 ರಿಂದ 31 ರವರೆಗೆ ಉಚಿತ ತರಬೇತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 12 ರ ಒಳಗೆ ಬೆಳಗ್ಗೆ 9.00 ರಿಂದ ಸಂಜೆ 5 ರ ವರೆಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಮೊ.ಸಂಖ್ಯೆ. 9480886467 ಅವರನ್ನು ಫೋನ್ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರು…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸಂವೇದನಾ ಪ್ರಥಮ ದರ್ಜೆ ಕಾಲೇಜಿನ ಮೂರನೆಯ ವಾರ್ಷಿಕೋತ್ಸವ ಹಾಗೂ ಕುವೆಂಪು ವಿಶ್ವವಿದ್ಯಾನಿಲಯದ ದೂರಶಿಕ್ಷಣ ಕೇಂದ್ರದ ಉದ್ಘಾಟನಾ ಸಮಾರಂಭ ಮಾರ್ಚ್ ಒಂದು, ರವಿವಾರ ಜರುಗಿತು. ಉದ್ಘಾಟಕರಾಗಿ ಕುಂದಾಪುರ ತಾಲೂಕು ಕಸಾಪ ಅಧ್ಯಕ್ಷರಾದ ಡಾ. ಕಿಶೋರಕುಮಾರ ಶೆಟ್ಟಿ ಆಗಮಿಸಿ ಶುಭಾಶಯ ಕೋರಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ಬೈಂದೂರು ಶಾಖೆಯ ಪ್ರಬಂಧಕರಾದ ಪರಮೇಶ್ವರ ಪೂಜಾರಿ, ವಿಶ್ರಾಂತ ಉಪನ್ಯಾಸಕರಾದ ಪಿ. ಶೇಷಪ್ಪಯ್ಯ ಹೆಬ್ಬಾರ್, ಸಂಸ್ಥೆಯ ಉಪಾಧ್ಯಕ್ಷರಾದ ಡಾ. ಅನಿಲ ಶೆಟ್ಟಿ, ಕಾರ್ಯದರ್ಶಿ ರವೀಂದ್ರ ಎಚ್, ಪ್ರಾಂಶುಪಾಲರಾದ ಸಂಧ್ಯಾ ಭಟ್ ಭಾಗವಹಿಸಿದ್ದರು. ವಾಗ್ಜೋತಿ ಶ್ರವಣದೋಷವುಳ್ಳ ಮಕ್ಕಳ ಶಾಲೆಯ ಮುಖ್ಯ ಶಿಕ್ಷಕರಾದ ರವೀಂದ್ರ ಎಚ್ ಅವರನ್ನು ಸನ್ಮಾನಿಸಲಾಯಿತು. ಸಂವೇದನಾ ಕಾಲೇಜಿನ ಅಧ್ಯಕ್ಷರಾದ ಡಾ. ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಅಶ್ವಿನಿ ಆರ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ವಿನಯಾ ವರದಿ ವಾಚಿಸಿದರು. ಸಂಧ್ಯಾ ಭಟ್ ಸ್ವಾಗತಿಸಿ, ಉಪನ್ಯಾಸಕಿ ದಿವ್ಯಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ನಾಕಟ್ಟೆ ಶ್ರೀ ಕೋಟಿ ಚೆನ್ನಯ ಪಂಜುರ್ಲಿ ಗರಡಿಯಲ್ಲಿ ಪರಿವಾರ ಶಕ್ತಿಗಳ ನೂತನ ಬಾಲಾಲಯದಲ್ಲಿ ನಿಧಿ ಕುಂಭ ಸ್ಥಾಪನೆಯ ಧಾರ್ಮಿಕ ಕಾರ್ಯಕ್ರಮಗಳು ಆಗಮ ಪಂಡಿತರಾದ ಕೇಂಜ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ ಜರುಗಿತು. ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ, ಶಿರೂರು ಬಿಲ್ಲವ ಸಂಘದ ಅಧ್ಯಕ್ಷ ಚಿಕ್ಕು ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ಆನಂದ ಶೆಟ್ಟಿ ನಾಕಟ್ಟೆ, ನಾಗರಾಜ ಗಾಣಿಗ ಬಂಕೇಶ್ವರ, ವಿನಾಯಕ ರಾವ್ ಮರವಂತೆ, ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ ಕುಟುಂಬದ ಮಂಜುನಾಥ ಮೇಲ್ಹಿತ್ಲು, ಮುತ್ತಯ್ಯ ಪೂಜಾರಿ, ಅಣ್ಣಪ್ಪ ಪೂಜಾರಿ ಯಡ್ತರೆ, ಚಂದ್ರ ಪೂಜಾರಿ, ವಾಸ್ತುಶಿಲ್ಪಿಗಳು ಮೊದಲಾದವರು ಇದ್ದರು. ಭಕ್ತಾಧಿಗಳು ಚಿನ್ನ, ಬೆಳ್ಳಿ, ಪಂಚಲೋಹ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಂಸತ್ತು ಈಚೆಗೆ ಸ್ವೀಕರಿಸಿದ ಪೌರತ್ವ ತಿದ್ದುಪಡಿ ಕಾಯಿದೆಯ ಕುರಿತು ದೇಶದ ನಿರ್ದಿಷ್ಟ ವರ್ಗದ ಹಿತಾಸಕ್ತಿಯ ರಕ್ಷಣೆಗಾಗಿ ಮತ್ತು ರಾಜಕೀಯ ಕಾರಣಗಳಿಗಾಗಿ ಜನರಲ್ಲಿ ತಪ್ಪು ಕಲ್ಪನೆಯನ್ನು ಬಿತ್ತಲಾಗುತ್ತಿದೆ. ಜನರು ಅದರ ಕುರಿತಾದ ಸತ್ಯವನ್ನು ತಿಳಿದುಕೊಳ್ಳಬೇಕು ಮತ್ತು ಅಂತಹ ಹುನ್ನಾರದ ವಿರುದ್ಧ ಜಾಗೃತರಾಗಬೇಕು ಎಂದು ವಿಕ್ರಮ ಪತ್ರಿಕೆಯ ಸಂಪಾದಕ ವೃಷಾಂಕ್ ಭಟ್ ಹೇಳಿದರು. ಹಿಂದು ಸಂಘಟನೆಗಳ ಆಶ್ರಯದಲ್ಲಿ ಭಾನುವಾರ ನಾವುಂದದಲ್ಲಿ ನಡೆದ ಸಿಎಎ ಮತ್ತು ಎನ್‌ಆರ್‌ಸಿ ಸಮರ್ಥನಾ ಸಮಾವೇಶದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಪಾಕಿಸ್ತಾನ, ಬಾಂಗ್ಲಾ, ಅಪಘಾನಿಸ್ತಾನದಲ್ಲಿ ಧಾರ್ಮಿಕ ಕಾರಣಗಳಿಗಾಗಿ ದೌರ್ಜನ್ಯಕ್ಕೊಳಗಾಗಿ 2014ರ ಡಿಸೆಂಬರ್ 21ರ ಮೊದಲು ಭಾರತಕ್ಕೆ ಬಂದಿರುವ ಮುಸ್ಲಿಮೇತರ 6 ಧರ್ಮಗಳ ಅಲ್ಪಸಂಖ್ಯಾತರಿಗೆ ದೇಶದ ಪೌರತ್ವ ನೀಡಲು ಅವಕಾಶ ಕಲ್ಪಿಸುವ ಕಾಯಿದೆ ಇದಾಗಿದೆ. ಅಕ್ರಮವಾಗಿ ಭಾರತಕ್ಕೆ ಬಂದಿರುವ ಅಂತಹ ವಲಸಿಗರಿಗೆ ಮಾತ್ರ ಇದು ಅನ್ವಯವಾಗುವುದೇ ಹೊರತು ಯಾವುದೇ ಕಾರಣಕ್ಕೂ ಭಾರತೀಯ ಪ್ರಜೆಗಳಿಗೆ ಇದು ಅನ್ವಯವಾಗದು ಎಂದು ಅವರು ಹೇಳಿದರು. ಆ ದೇಶಗಳಲ್ಲಿ ಇಸ್ಲಾಂ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಸ್ಪರ್ಧಾತ್ಮಕ ಪರೀಕ್ಷೆಗೆ ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿದಾಗ ಸಾಧನೆ ಮಾಡಲು ಸಾಧ್ಯ.ಆದ್ದರಿಂದ ವಿದ್ಯಾರ್ಥಿಗಳು ಸಮಯ ಹಾಳು ಮಾಡದೆ ನಮ್ಮ ಗುರಿ ಕಡೆಗೆ ಮನಸ್ಸು ಕೇಂದ್ರಿಕರಿಸಿಕೊಂಡು ಹೆಚ್ಚಿನ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕೆಂದು ಮಡಿಕೇರಿಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಗೌರವ್ ಶೆಟ್ಟಿ ಹೇಳಿದರು ಅವರು ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್,ಕೋಟದಲ್ಲಿ ವಿ-ಶೈನ್ ತರಬೇತಿ ಸಂಸ್ಥೆ ಆಸರೆಯಲ್ಲಿ ನಡೆಯುತ್ತಿರುವ ಕರ್ನಾಟಕ ಲೋಕಸೇವಾ ಆಯೋಗವು ಕರೆದಿರುವ 2000 ಕ್ಕೂ ಮಿಕ್ಕಿ ಪ್ರಥಮ ದರ್ಜೆ ಸಹಾಯಕರು ಮತ್ತು ದ್ವೀತಿಯ ದರ್ಜೆ ಸಹಾಯಕ ಹುದ್ದೆಯ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡುತ್ತಿದ್ದರು. ವಿ-ಶೈನ್ ಸಂಸ್ಥೆಯ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿಯೇ ಓದಿನಲ್ಲಿ ಹೆಚ್ಚಿನ ಕಡೆ ಗಮನ ಹರಿಸಿ ಅಲ್ಲದೇ ಜ್ಞಾನ ಹೆಚ್ಚಿಸುವ ಪುಸ್ತಕವನ್ನು ಹೆಚ್ಚಾಗಿ ಓದಬೇಕು ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ತಿಳಿಸಿದರು. ಈ ಸಂದರ್ಭದಲ್ಲಿ ವಿ-ಶೈನ್ ನ ಗಿರೀಶ್…
