ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಿಯ ಸನ್ನಿ ಧಿಯಲ್ಲಿ ಬಳ್ಳಾರಿಯ ಮುಸ್ಲಿಂ ಕುಟುಂಬವೊಂದು ಕಳೆದ ಹಲವು ವರ್ಷಗಳಿಂದ ವರ್ಷ ಕ್ಕೊಮ್ಮೆ ಚಂಡಿಕಾಹೋಮ ನೆರವೇರಿಸುವ ಮೂಲಕ ಗಮನ ಸೆಳೆದಿದೆಯಲ್ಲದೇ ಭಕ್ತಿ, ಶ್ರದ್ಧೆಯಿಂದ ಈ ಸೇವೆಯನ್ನು ನೀಡುತ್ತಿದೆ. ಬಳ್ಳಾರಿ ಸನಿಹದ ಗ್ರಾಮವೊಂದರ ನಿವಾಸಿ ಗುತ್ತಿಗೆದಾರ ಎಚ್. ಇಬ್ರಾಹಿಂ, ಸಾಜುದ್ದೀನ್ ಹಾಗೂ ಜರೀನಾ ಅವರ ಕುಟುಂಬದವರು ಹಲವು ವರ್ಷಗಳಿಂದ ಕೊಲ್ಲೂರಿಗೆ ಆಗಮಿಸಿ ಶ್ರೀದೇವಿಯ ದರ್ಶನ, ವಿಶೇಷ ಪೂಜೆ ಮತ್ತು ಚಂಡಿಕಾಹೋಮ ನೆರವೇರಿಸುತ್ತಿದ್ದಾರೆ. ಹಿರಿಯರ ಸೇವೆ, ತಾಯಿ ಮೂಕಾಂಬಿಕೆಯ ಅನುಗ್ರಹದಿಂದಾಗಿ ಬದುಕಿನಲ್ಲಿ ಶ್ರೇಯಸ್ಸಾಗಿದೆ ಎಂಬ ನಂಬಿಕೆಯೊಂದಿಗೆ ಇದೀಗ ಈ ಕುಟುಂಬದ ಕಿರಿಯ ಪುತ್ರ ಮನ್ಸೂರ್ ಹಾಗೂ ಅವರ ಪತ್ನಿ ಮಕ್ಕಳು ಕಳೆದ 5 ವರ್ಷಗಳಿಂದ ವರ್ಷಕ್ಕೊಮ್ಮೆ ಇಲ್ಲಿ ಚಂಡಿಕಾಹೋಮ ನಡೆಸುತ್ತಿದ್ದಾರೆ. ಎಲ್ಲಾ ದೇವರು ಕೂಡ ಒಂದೇ. ತಾಯಿ ಮೂಕಾಂಬಿಕೆಯ ಸನ್ನಿಧಿಯಲ್ಲಿ ಚಂಡಿಕಾಹೋಮ ನಡೆಸುವ ಮೂಲಕ ಆತ್ಮಸಂತೃಪ್ತಿ ಹೊಂದಿದ್ದೇವೆ. ಕ್ಷೇತ್ರದಲ್ಲಿ ವಿಶೇಷ ಶಕ್ತಿ ಇದೆ. – ಮನ್ಸೂರ್, ಕೊಲ್ಲೂರು ದೇವಳದ ಭಕ್ತ
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಸಮಾಜ ಸೇವಕ, ಕೊಂಕಣಿ ಖಾರ್ವಿ ಸಮಾಜದ ಹಿರಿಯ ಮುಖಂಡ ಜಿ. ಗಣಪತಿ ಶಿಪಾ (77) ಅಲ್ಪಕಾಲದ ಅಸೌಖ್ಯದಿಂದ ಗಂಗೊಳ್ಳಿಯ ಸ್ವಗೃಹದಲ್ಲಿ ನಿಧನರಾದರು. ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಇವರು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳಲ್ಲಿ ಸುಮಾರು 36 ವರ್ಷ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ್ದರು. ಕೊಂಕಣಿ ಖಾರ್ವಿ ವಿದ್ಯಾ ಪ್ರಸಾರಕ ಸಂಘ ಕುಂದಾಪುರ ಇದರ ಸ್ಥಾಪಕ ಸದಸ್ಯರಾಗಿ, ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದಲ್ಲಿ ಅಧ್ಯಕ್ಷರಾಗಿ, ಅಖಿಲ ಕರ್ನಾಟಕ ಕೊಂಕಣ ಖಾರ್ವಿ ಮಹಾಜನ ಸಂಘದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಅನೇಕ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಇವರು ಕೊಂಕಣಿ ಖಾರ್ವಿ ಸಮಾಜದ ಏಳಿಗೆಗೆ ಶ್ರಮಿಸಿದ್ದರು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಇವರಿಗೆ ಕೊಂಕಣಿ ನಕ್ಷತ್ರ ಪ್ರಶಸ್ತಿ ಮತ್ತು ಕುಂದಾಪುರದ ವಿದ್ಯಾರಂಗ ಮಿತ್ರಮಂಡಳಿ ಸಮಾಜ ಸೇವಕ ಪ್ರಶಸ್ತಿ ನೀಡಿ ಗೌರವಿಸಿತ್ತು. ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಜನಾನುರಾಗಿದ್ದರು. ಮೃತರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯದ ವತಿಯಿಂದ ಈ ವರ್ಷದ ಚಾಂದ್ರಮಾನ ಯುಗಾದಿ ಆಚರಣೆಯನ್ನು ಬಿಜೂರು ಗ್ರಾಮದ ಮಕ್ಕಿದೇವಸ್ಥಾನದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಚರಿಸಲಾಯಿತು. ನಿವೃತ್ತ ಶಿಕ್ಷಕ ವಿದ್ವಾನ್ ಶಂಕರನಾರಾಯಣ ಭಟ್ ಅವರು ಪಂಚಾಂಗ ಶೃವಣ ಮಾಡಿ ಯುಗಾದಿ ಆಚರಣೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ವಲಯಾಧ್ಯಕ್ಷ ಯು. ಸಂದೇಶ್ ಭಟ್ ಅಧ್ಯಕ್ಷತೆ ವಹಿಸಿದ್ದರು. ವಿದ್ವಾನ್ ಶಂಕರನಾರಾಯಣ ಭಟ್ಟರಿಗೆ ವಿದ್ವತ್ ಸನ್ಮಾನ ಮಾಡಲಾಯಿತು. ಕೊಲ್ಲೂರು ಮುಕಾಂಬಿಕಾ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಮ್. ನಾಗರಾಜ ಭಟ್, ಗೌರವಾಧ್ಯಕ್ಷ ಬಿ. ವಿಶ್ವೇಶ್ವರ ಅಡಿಗ ಉಪಸ್ಥಿತರಿದ್ದರು. ವಲಯ ಮಹಿಳಾ ವೇದಿಕೆಯ ಸದಸ್ಯರಿಂದ ವಿಷ್ಣು ಸಹಸ್ರನಾಮ ಪಠಣ ಪಠಿಸಲಾಯಿತು. ಕಾರ್ಯದರ್ಶಿ ಕೆ. ಅರುಣ್ ಕುಮಾರ್ ಶ್ಯಾನಭಾಗ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, ಕೋಶಾಧ್ಯಕ್ಷ ಜಗದೀಶ್ ರಾವ್ ವಂದಿಸಿದರು, ಕೊನೆಯಲ್ಲಿ ಶಾಂತಿ ಮಂತ್ರ ಪಠಿಸಲಾಯಿತು
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಎಲ್ಲರೊಳಗೂ ಅನನ್ಯವಾದ ಪ್ರತಿಭೆ ನಲೆಸಿದ್ದು, ಅದನ್ನು ಅನಾವರಣಗೊಳಿಸುವ ಪ್ರಯತ್ನ ನಡೆಯಬೇಕು ಎಂದು ಆಳ್ವಾಸ್ ಪದವಿಪೂರ್ವ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥೆ ಝಾನ್ಸಿ ಹೇಳಿದರು. ಶಿವರಾಮ ಕಾರಂತ ಸಭಾಂಗಣದಲ್ಲಿ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ನಡೆದ ಬಹುಭಾಷಾ ಕವಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ಕವಿತೆಗೊಂದು ಲಯವಿದ್ದು, ಹಾಡಲು ಸಹಕಾರಿಯಾಗಿರಬೇಕು. ಕವನಗಳು ಸನ್ನಿವೇಷಗಳಿಗೆ ಅನುಗುಣವಾಗಿ ಸೃಷ್ಟಿಯಾಗುವ ಸಾಹಿತ್ಯವಾಗಿದೆ ಎಂದರು. ಕವಿಗೋಷ್ಠಿಯ ಸಮನ್ವಯಕಾರರಾಗಿ ಭಾಗವಹಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ರೋಶನ್ ಫ್ರಾನ್ಸಿಸ್, ಮನಸ್ಸಿಗೆ ಮುದ ನೀಡುವ ಕ್ಷಣಗಳನ್ನು ಕವನಗಳಲ್ಲಿ ಪ್ರಸ್ತುತ ಪಡಿಸಲಾಗುತ್ತದೆ. ಆಳವಾದ ಆಧ್ಯಯನ ಮತ್ತು ಅಲೋಚನಾ ಶಕ್ತಿಯಿಂದ ಕವನ ಬರೆಯಲು ಸಾಧ್ಯ. ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ವಿದ್ಯಾರ್ಥಿನಿ ನಂದಿತ ಸ್ವಾಗತಿಸಿ, ದಿಯಾ ವಂದಿಸಿದರು. ವಿದ್ಯಾರ್ಥಿ ಶಶಾಂಕ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಕಾಲೇಜಿನ ಸಾಹಿತ್ಯ ಸಂಘದ ಸಂಯೋಜಕಿ ಡಾ ಸುಲತಾ ಉಪಸ್ಥಿತರಿದ್ದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಯಶ್, ಶ್ರೀಧರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೋವಿಡ್ 2 ಅಲೆ ಯನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತಂತೆ ಜಿಲ್ಲಾ ತಜ್ಞರ ಸಮಿತಿ ಸಭೆಯು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ಜಿಲ್ಲಾದಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ರಾಜ್ಯದೆಲ್ಲಡೆ ಕೋವಿಡ್ 2 ಅಲೆ ವ್ಯಾಪಕವಾಗಿದ್ದು, ಜಿಲ್ಲೆಯಲ್ಲಿಯೂ ಸಹ ಹರಡುತ್ತಿದೆ, ಇದನ್ನು ನಿಯಂತ್ರಿಸುವ ಕುರಿತಂತೆ ಜಿಲ್ಲೆಯಲ್ಲಿ , ಹೆಚ್ಚಿನ ಸಂಖ್ಯೆಯಲ್ಲಿ ತಪಾಸಣೆ, ಪತ್ತೆ ಹಚ್ಚುವಿಕೆ , ಚಿಕಿತ್ಸೆ ನೀಡುವುದನ್ನು ಶೀಘ್ರವಾಗಿ ಕೈಗೊಳ್ಳಬೇಕು, ಹೈದಯ ಸಂಬAದಿ ರೋಗಿಗಳು, ಕಿಡ್ನಿ ಸಮಸ್ಯೆಯಿರುವವರು, ಕ್ಯಾನ್ಸರ್ ರೋಗಿಗಳು ಕೋವಿಡ್ ನಿಂದ ಮರಣ ಹೊಂದುವುದು ಅಧಿಕವಾಗಿದ್ದು, ಇಂತಹ ರೋಗಿಗಳನ್ನು 15 ದಿನಗಳಿಗೊಮ್ಮೆ ನಿಯಮಿತವಾಗಿ ತಪಾಸಣೆ ಮಾಡುವುದರ ಮೂಲಕ ಬೇಗ ರೋಗ ಪತ್ತೆ ಹಚ್ಚಿ ಚಕಿತ್ಸೆ ನೀಡುವುದರಿಂದ ಸಾವು ಸಂಭವಿಸುವುದನ್ನು ತಪ್ಪಿಸಬಹುದಾಗಿದೆ, ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ಕೋವಿಡ್ ಸೊಂಕಿಗೆ ಒಳಗಾಗದಂತೆ ಆಸ್ಪತ್ರೆಗಳಲ್ಲಿ ಇನ್ಫೆಕ್ಷನ್ ಕಂಟ್ರೋಲ್ ಮಾಡುವ ಕುರಿತು ತರಬೇತಿ ನೀಡಬೇಕು ಎಂದು ತಜ್ಞರ ಸಮಿತಿ ತಿಳಿಸಿತು. ಇದನ್ನೂ ಓದಿ: ►…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಕರ್ನಾಟಕದಲ್ಲಿ ದಾಖಲೆ ಪ್ರಮಾಣದಲ್ಲಿ ಕೊರೊನಾ ಸೋಂಕು ವರದಿಯಾಗುತ್ತಿರುವ ಹಿನ್ನೆಲೆಯುಲ್ಲಿ ಸಾರ್ವಜನಿಕ ಸಮಾರಂಭ/ ಆಚರಣೆ/ ಮನರಂಜನೆ ಕಾರ್ಯಕ್ರಮಗಳಿಗೆ ಮಾರ್ಗಸೂಚಿ ಪ್ರಕಟಗೊಂಡಿದೆ. ಧಾರ್ಮಿಕ ಆಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು ಕರ್ನಾಟಕ ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಆದೇಶ ಪ್ರಕಟಿಸಿದ್ದಾರೆ. ಈ ಆದೇಶವನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51 ರಿಂದ 60 ಹಾಗೂ ಐಪಿಸಿ ಸೆಕ್ಷನ್ ಮತ್ತು ಇತರ ಕಾನೂನು ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಯಾವುದಕ್ಕೆ ಎಷ್ಟು ಜನ? ಮದುವೆ: ತೆರೆದ ಪ್ರದೇಶದಲ್ಲಿ ಗರಿಷ್ಠ 200 ಮಂದಿಗೆ ಅನುಮತಿ. ಕಲ್ಯಾಣ ಮಂಟಪ/ ಸಭಾಂಗಣ/ ಹಾಲ್ ಇತ್ಯಾದಿ ಮುಚ್ಚಿದ ಪ್ರದೇಶದಲ್ಲಿ ಗರಿಷ್ಟ 100 ಮಂದಿಗೆ ಮಾತ್ರ ಅವಕಾಶ. ಜನ್ಮದಿನ ಇತರೇ ಆಚರಣೆ: ತೆರೆದ ಪ್ರದೇಶದಲ್ಲಿ 50 ಮಂದಿಗೆ ಅನುಮತಿ. ಸಭಾಂಗಣ, ಹಾಲ್, ಇತ್ಯಾದಿ ಮುಚ್ಚಿದ ಪ್ರದೇಶದಲ್ಲಿ 25 ಮಂದಿಗೆ ಅನುಮತಿ. ನಿಧನ/ ಶವಸಂಸ್ಕಾರ: ತೆರೆದ ಪ್ರದೇಶದಲ್ಲಿ 50…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇವರನ್ನು ಯಾವುದೇ ರೂಪದಲ್ಲಿ ಆರಾಧಿಸಿದರೂ ಪರಮಾತ್ಮನೊಬ್ಬನೇ ಎಂಬ ಸತ್ಯ ಪ್ರತಿಯೊಬ್ಬರಿಗೂ ಅರಿವಿರಬೇಕು. ನಾವು ಬೇಡಿದ ರೂಪದಲ್ಲಿ ಕಾಣಿಸುವ ಭಗವಂತನಿಗೆ ತೋರಿಕೆ ಭಕ್ತಿಯ ಬದಲಿಗೆ ಶ್ರದ್ಧಾಭಕ್ತಿಯಿಂದ ಪೂಜಿಸುವುದು ಬಹುಮುಖ್ಯವಾಗುತ್ತದೆ. ನಮ್ಮ ಹೃದಯದಲ್ಲಿ ಜ್ಞಾನದೀಪ ಬೆಳಗದಿದ್ದರೆ ಭಕ್ತಿಯು ಕೂಡ ಮೂಢನಂಬಿಕೆಯ ಕಡೆಗೆ ತಿರುಗುತ್ತದೆ ಎಂದು ಎಳಜಿತ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಹೇಳಿದರು.ಅವರು ಗುಜ್ಜಾಡಿ ಬೆಣ್ಗೇರಿ ಶ್ರೀ ನಾಗ ದೇವಸ್ಥಾನದಲ್ಲಿ ಜರುಗಿದ 46ನೇ ನಾಗಮಂಡಲೋತ್ಸವ ಹಾಗೂ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮದ ಬಳಿಕ ಬುಧವಾರ ನಡೆದ ಶ್ರೀ ಸುಬ್ರಹ್ಮಣ್ಯ ಯುತ್ ಕ್ಲಬ್’ನ 46ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿ ಭಾರತದ ಸುವರ್ಣಯುಗ ಎಂಬ ಕಾಲದಲ್ಲಿ ನಾಗರಾಧನೆಗೆ ವಿಶೇಷ ಪ್ರಾಮುಖ್ಯತೆ ಇತ್ತು. ಹಾಗಾಗಿ ವಿಕ್ರಮಾದಿತ್ಯ ಬಿರುದಾಂಕಿತ ರಾಜರು ಬಹುಕಾಲ ತಮ್ಮ ಸಾಮ್ರಾಜ್ಯವನ್ನು ಮುನ್ನಡೆಸಿದರು ಎಂದ ಅವರು ಮುಂದಿನ ಪೀಳಿಗೆಯಲ್ಲಿ ಭಕ್ತಿಯ ಜೊತೆಗೆ ಸಂಸ್ಕಾರವನ್ನು ಕಲಿಸುವ ಕಾರ್ಯವಾಗಬೇಕಿದೆ ಎಂದರು. ಉಡುಪಿ ಜಿಲ್ಲಾ ಶ್ರೀ ಭಗವದ್ಗೀತಾ ಆಚರಣಾ ಸಮಿತಿ ಸಂಚಾಲಕರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನೈಸರ್ಗಿಕ ಉತ್ಪನ್ನ ಮತ್ತು ಉತ್ತಮ ಪೋಷಕಾಂಶಗಳನ್ನು ಒಳಗೊಂಡಿರುವ ಪೋಷಕ್ ಹಾಗೂ ರಿಲ್ಯಾಕ್ಸ್ ಟೀ ಮನೆ ಮನೆ ಮನೆಗಳನ್ನು ತಲುಪಲಿ ಎಂದು ಬೈಂದೂರು ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಆಲೂರು-ಕಳಿಯ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದಲ್ಲಿ ಶುಕ್ರವಾರ “ಚಿತ್ರಕೂಟ ಪೋಷಕ್” ಉತ್ಪನ್ನವನ್ನು ಬಿಡುಗಡೆಗೊಳಿಸಿ ಮಾತನಾಡಿ ಕೊರೋನಾ ಬಳಿಕ ಆಯುರ್ವೇದ ಉತ್ಪನ್ನಗಳಿಗೆ ಮಹತ್ವ ಜನರಿಗೆ ಅರಿವಾಗಿದೆ. ಚಿತ್ರಕೂಟವೂ ಉತ್ತಮ ಚಿಕಿತ್ಸೆಗೆ ಹೆಸರಾಗಿದೆ. ಉತ್ತಮ ಮಾರುಕಟ್ಟೆ ಸೌಲಭ್ಯವನ್ನು ಬಳಸಿಕೊಂಡರೆ ಬಹುಬೇಗ ಎಲ್ಲೆಡೆಯೂ ತಲುಪಲು ಸಾಧ್ಯವಿದೆ ಎಂದರು. ರಿಲ್ಯಾಕ್ಸ್ ಟೀ ಉತ್ಪನ್ನ ಬಿಡುಗಡೆಗೊಳಿಸಿದ ಎಂ.ಎಸ್. ಮಂಜ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರು ಮಾತನಾಡಿ ಇಂದು ಮಾರುಕಟ್ಟೆಯಲ್ಲಿ ದೊರೆಯುವ ಬಹುಪಾಲು ವಸ್ತುಗಳು ಕಲಬೆರಕೆಯಿಂದ ಕೂಡಿದೆ. ಅವುಗಳು ನಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತಿದೆ. ಇದರ ನಡುವೆ ಉದ್ಯಮ ಮುನ್ನಡೆಸುವುದರ ಜೊತೆಗೆ ಜನರಿಗೆ ಉತ್ತಮ ಆರೋಗ್ಯ ದೊರೆಯುವಂತಾಗಬೇಕು ಎಂಬ ಸದುದ್ದೇಶದೊಂದಿಗೆ ಚಿತ್ರಕೂಟ ಸಂಸ್ಥೆಯು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ರಿ.ಕೋಟ, ಡಾ. ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆಯುವ ಉಡುಪಿ ಜಿಲ್ಲಾ ಮಹಿಳಾ ಸಾಹಿತ್ಯ-ಸಂಸ್ಕೃತಿ ಸಮ್ಮೇಳನಾಧ್ಯಕ್ಷೆಯಾಗಿ ಶಿಕ್ಷಕಿ-ಸಾಹಿತಿ ಸುಮಿತ್ರಾ ಡಿ. ಐತಾಳ್ ಅವರನ್ನು ಆಯ್ಕೆ ಮಾಡಲಾಗಿದೆ. ಸುಮಿತ್ರಾ ಡಿ ಐತಾಳ್ ಅವರು ಬಿ.ಇಡ್, ಎಂ.ಎ ವ್ಯಾಸಂಗ ಪೂರೈಸಿ, ಸಾಹಿತ್ಯಿಕ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಕವನ ಸಂಕಲನ ಭಾವಗಾನ, ಅಂತರಗಂಗೆ, ಗಡಿಯಾರ, ಹಣತೆ, ಮೌನರತಿ ರಚಿಸಿದ್ದು, ಕಥಾಸಂಕಲನದಲ್ಲಿ ಫಲಿತಾಂಶ ರಚಿಸಿದ್ದಾರೆ.ಅಲ್ಲದೇ ಸುದ್ದಿಮನೆ, ವಿಜಯಕರ್ನಾಟಕ, ಕುಂದಾಪುರ ಮಿತ್ರ, ಕುಂದಪ್ರಭಾ ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟಗೊಂಡಿದೆ. ’ಬಾ ಗೆಳತಿ’ ಮಹಿಳಾ ಸ್ಪಂದನ ಕಾರ್ಯಕ್ರಮ ಸ್ಪಂದನ ದೂರದರ್ಶನದಲ್ಲಿ ಸಾಹಿತ್ಯದ ನುಡಿಯಲ್ಲಿ ಕೂಡಾ ಭಾಗವಹಿಸಿರುತ್ತಾರೆ. ಎಪ್ರಿ 25 ರಂದು ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಕಾರ್ಯಕ್ರಮ ಬೆಳಿಗ್ಗೆ10ರಿಂದ ಸಂಜೆ 4ಗಂಟೆ ತನಕ ಕಾರ್ಯಕ್ರಮ ನಡೆಯಲಿದ್ದು ಬಹುವಿಧಗೋಷ್ಠಿ, ಸಂವಾದ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದಲ್ಲಿ 46ನೇ ನಾಗಮಂಡಲೋತ್ಸವ ಹಾಗೂ ಅಷ್ಟಬಂಧ ಪ್ರತಿಷ್ಢಾಪನಾ ವರ್ಧಂತ್ಯುತ್ಸವ ವಿಜೃಂಭಣೆಯಿಂದ ನಡೆಯಿತು. ಎ.12ರಂದು ಸಾಮೂಹಿಕ ಪ್ರಾರ್ಥನೆಯೊಂದಿಗೆ ಧಾರ್ಮಿಕ ಅನುಷ್ಠಾನಗಳು ಆರಂಭಗೊಂಡು ವಿವಿಧ ಧಾರ್ಮಿಕ ಅನುಷ್ಠಾನಗಳು ಶಾಸ್ತ್ರೋಕ್ತವಾಗಿ ಜರಗಿತು. ಬೆಳಿಗ್ಗೆ ಸಂಹಿತಾ ಕಲಶ ಸ್ಥಾಪನೆ, ಪಾರಾಯಣ, ಅಧಿವಾಸ ಹೋಮ, ಕಲಶಾಭಿಷೇಕ, ಮಹಾಮಂಗಳಾರತಿ, ದರ್ಶನ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ನಾಗದರ್ಶನ ಬಳಿಕ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನಡೆಯಿತು. ಸಂಜೆ 5ಗಂಟೆಗೆ ರಂಗಪೂಜೆ, ಹಾಲಿಟ್ಟು ಸೇವೆ, ವೈ.ವಾಸುದೇವ ವೈದ್ಯ ಮತ್ತು ಬಳಗದವರಿಂದ ಮಂಡಲ ಸೇವೆ ಜರಗಿತು. ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಜಿಪಂ ಸದಸ್ಯೆ ಶೋಭಾ ಜಿ.ಪುತ್ರನ್, ದೇವಸ್ಥಾನದ ಅಧ್ಯಕ್ಷ ಉಮೇಶ ಮೇಸ್ತ, ಕಾರ್ಯದರ್ಶಿ ಶ್ರೀಧರ ಪಿ.ಮೇಸ್ತ, ಯುತ್ ಕ್ಲಬ್ ಪ್ರವೀಣ್ ಮೇಸ್ತ, ಕಾರ್ಯದರ್ಶಿ ಶ್ರೀನಾಥ ಮೇಸ್ತ, ಮಹಿಳಾ ಮಂಡಳಿ ಅಧ್ಯಕ್ಷೆ ರಾಧಾ ರಾಮಕೃಷ್ಣ ಮೇಸ್ತ, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಹರೀಶ ಮೇಸ್ತ,…
