ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಮಾರ್ಚ್ 02 : ಇಲ್ಲಿನ ಮಿನಿವಿಧಾನಸೌಧದಲ್ಲಿ ವ್ಯಕ್ತಿಯೋರ್ವ ಏಕಾಏಕಿ ಪಾಕಿಸ್ತಾನ ಪರ ಘೋಷಣೆ ಕೂಗಿ ಬಂಧಿತನಾದ ಘಟನೆ ನಡೆದಿದೆ. ಬಂಧಿತನನ್ನು ತಾಲೂಕಿನ ಕೋಡಿ ನಿವಾಸಿ ರಾಘವೇಂದ್ರ ಗಾಣಿಗ (42) ಎಂದು ತಿಳಿದುಬಂದಿದ್ದು, ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಬೆಳಿಗ್ಗೆ ತಾಲೂಕು ಕಛೇರಿಗೆ ಆಗಮಿಸಿದ ಆತ ಪಾಕಿಸ್ತಾನ್ ಜಿಂದಾಬಾದ್, ಜಿಹಾದಿ ಜಿಂದಾಬಾದ್ ಎಂದು ಘೋಷಣೆ ಕೂಗಲು ಆರಂಭಿಸಿದ್ದಾನೆ. ಅಲ್ಲಿದ್ದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕುಂದಾಪುರ ಪೊಲೀಸ್ ಪಿಎಸೈ ಹರೀಶ್ ಆರ್. ಹಾಗೂ ಸಿಬ್ಬಂಧಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಆಪಾದಿತನ್ನು ಬಂಧಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ರಾಘವೇಂದ್ರ ಗಾಣಿಗ ಪದವೀಧರನಾಗಿದ್ದು ಖಾಸಗಿ ಶಾಲೆಯಲ್ಲಿ ಹಿಂದಿ ಶಿಕ್ಷಕನಾಗಿದ್ದ. ಆದರೆ ಎಂಟು ವರ್ಷಗಳ ಹಿಂದೆ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದ. ಮದುವೆಯಾಗಿದ್ದು ಪತ್ನಿ, ಪುತ್ರಿಯನ್ನು ತೊರೆದು ತಂದೆ ತಾಯಿಯೊಂದಿಗೆ ವಾಸವಾಗಿದ್ದ ಎನ್ನಲಾಗಿದೆ. ರಾಘವೇಂದ್ರ ಮಾನಸಿಕ ಅವಸ್ಥನಾಗಿದ್ದು, ಕಳೆದ ಎಂಟು ವರ್ಷಗಳಿಂದ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಕೂಡ ತಂದೆ ತಾಯಿಯೊಂದಿಗೆ ಕುಂದಾಪುರದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಉಪವಿಭಾಗದ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೆಡೆಗಳಲ್ಲಿ ನಡೆಸಲಾಗುತ್ತಿದ್ದ ರಿಕ್ರಿಯೇಶನ್ ಕ್ಲಬ್‌ಗಳ ಮೇಲೆ ಭಾನುವಾರ ಸಂಜೆ ದಾಳಿ ನಡೆಸಿರುವ ಪೊಲೀಸರು ಜುಗಾರಿ ಆಟದಲ್ಲಿ (ಗ್ಯಾಂಬ್ಲಿಂಗ್) ತೊಡಗಿದ್ದ ೩೫ಕ್ಕೂ ಅಧಿಕ ಜುಗಾರಿಕೋರರನ್ನು ವಶಕ್ಕೆ ಪಡೆದು, ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ನಗದು, ಮೊಬೈಲ್, ಕಾರು, ಬೈಕುಗಳನ್ನು ವಶಕ್ಕೆ ಪಡೆದಿದ್ದಾರೆ. ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೇಶ್ವರ ಗ್ರಾಮದ ಕಾಗೇರಿಯಲ್ಲಿರುವ ರಿಕ್ರಿಯೇಶನ್ ಕ್ಲಬ್‌ನಲ್ಲಿ ಜುಗಾರಿ ಆಡುತ್ತಿದ್ದ ಹದಿಮೂರು ಮಂದಿ, ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀ ಲಕ್ಷ್ಮೀ ಕ್ಲಬ್‌ನಲ್ಲಿ ಇಸ್ಪೀಟ್ ಆಡುತ್ತಿದ್ದ ಹನ್ನೊಂದು ಮಂದಿ, ಸಿದ್ದಾಪುರ ಗ್ರಾಮ ದೊಟ್ಟಿನಬೇರು ಶಾಂತ ರಿಕ್ರಿಯೇಷನ್ ಕ್ಲಬ್‌ನಲ್ಲಿ ಜುಗಾರಿ ಆಡುತ್ತಿದ್ದ ಏಳು ಮಂದಿ ಹಾಗೂ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಯಡ್ತರೆ ಗ್ರಾಮದ ಎಂಜಿ ರಿಕ್ರಿಯೇಷನ್ ಕ್ಲಬ್‌ನಲ್ಲಿ ಜುಗಾರಿ ಆಡುತ್ತಿದ್ದ ಹನ್ನೊಂದು ಮಂದಿಯನ್ನು ದಾಳಿಯ ವೇಳೆ ವಶಕ್ಕೆ ಪಡೆಯಲಾಗಿತ್ತು. ಕುಂದಾಪುರ ತಾಲೂಕಿನ ಗೋಳಿಯಂಗಡಿ, ಸಿದ್ದಾಪುರ, ಕೋಟೇಶ್ವರ ಕಾಗೇರಿ, ಬೈಂದೂರು ತಾಲೂಕಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಿಬಿದಿರೆ: ಮಾಧ್ಯಮಗಳು ದೇಶಕ್ಕಾಗಿ ಕಾರ್ಯ ನಿರ್ವಹಿಸಬೇಕು ಹೊರತು ಪಕ್ಷ ಮತ್ತು ಸಿದ್ಧಾಂತಗಳಿಗಲ್ಲ ಎಂದು ಸುವರ್ಣ ನ್ಯೂಸ್ ಸುದ್ದಿ ವಾಹಿನಿಯ ಪ್ರಚಲಿತ ವಿದ್ಯಮಾನಗಳ ಸಂಪಾದಕ ಜಯಪ್ರಕಾಶ್ ಶೆಟ್ಟಿ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಭಾಗ ಮತ್ತು ಪದವಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ‘ಮಾಧ್ಯಮ ಮತ್ತು ಹವಮಾನಕ್ರಮ’ ಎಂಬ ವಿಚಾರದ ಕುರಿತು ನಡೆದ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ‘ಮೀಡಿಯಾ ಬಝ್- 2020’ ಮಾಧ್ಯಮೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಸಕಾರಾತ್ಮಕವಾಗಿ ಸಮಾಜದ ತೊಡಕುಗಳನ್ನು ಹೋಗಲಾಡಿಸಲು ಮಾಧ್ಯಮವನ್ನು ಅಸ್ತ್ರವಾಗಿ ಬಳಸಬೇಕು. ಮಾಧ್ಯಮಗಳಿಗೆ ಯುವಕರು ಪತ್ರಕರ್ತರಾಗಿ ಬರಬೇಕು ಹೊರತಾಗಿ ಕಾರ್ಯಕರ್ತರಾಗಿ ಅಲ್ಲ. ಪತ್ರಕರ್ತರು ಸಮಾಜದ ಬಗೆಗಿನ ಕಳಕಳಿಯನ್ನು ಹೊಂದಿರಬೇಕು. ಆಗ ಮಾಧ್ಯಮದ ಮೂಲಕ ಸಮಾಜವನ್ನು ಪರಿವರ್ತಿಸಬಹುದು ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಮಂಗಳೂರಿನ ಆಶಾ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಆಶಾ ಜ್ಯೋತಿ ರೈ, ಮಾಧ್ಯಮಗಳು ಸಮಾಜವನ್ನು ಎಲ್ಲಾ ಕ್ಷೇತ್ರಗಳಲ್ಲಿಯೂ ಉನ್ನತೀಕರಿಸುವ ಕಾರ್ಯವನ್ನು ಮಾಡಬೇಕು. ಪರಿಸರ ಸಂಬಂಧಿ ಕಾರ್ಯಗಳ ಕುರಿತಾದ ಅರಿವನ್ನು ಮೂಡಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಒಡಿಶಾದ ಭುವನೇಶ್ವರದಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ್ ವಿ.ವಿ ಖೇಲೋ ಇಂಡಿಯ ಕ್ರೀಡಾಕೂಟದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಪುರುಷ ತಂಡ 64 ಅಂಕಗಳೊಂದಿಗೆ ಹಾಗೂ ಮಹಿಳಾ ತಂಡ 51 ಅಂಕಗಳೊಂದಿಗೆ ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಮಂಗಳೂರು ವಿವಿ ಒಟ್ಟು 115 ಅಂಕಗಳೊಂದಿಗೆ ಸಮಗ್ರ ಚಾಂಪಿಯನ್ನಾಗಿ ಹೊರಹೊಮ್ಮಿತು. ಮಂಗಳೂರು ವಿವಿಯ ಒಟ್ಟು 7 ಚಿನ್ನ, 6 ಬೆಳ್ಳಿ ಹಾಗೂ 5 ಕಂಚಿನ ಪದಕದೊಂದಿಗೆ ಚಾಂಪಿಯನ್ನ ಪಟ್ಟವನ್ನು ತನ್ನಾದಾಗಿಸಿಕೊಂಡಿತು. ಮಂಗಳೂರು ವಿವಿಯನ್ನು ಪ್ರತಿನಿಧಿಸಿದ 32 ವಿದ್ಯಾರ್ಥಿಗಳ ತಂಡದಲ್ಲಿ 30 ವಿದ್ಯಾರ್ಥಿಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿದ್ದರು. ಗಳಿಸಿದ ಒಟ್ಟು 18 ಪದಕಗಳಲ್ಲಿ 17 ಪದಕಗಳು ಆಳ್ವಾಸ್ ವಿದ್ಯಾರ್ಥಿಗಳ ಪಾಲಾಗಿದ್ದವು. ಬೆಳ್ಳಿ ಪದಕ ಪಡೆದ 4*100 ರಿಲೇಯ 4 ಜನರ ತಂಡದಲ್ಲಿ ಇಬ್ಬರು ಆಳ್ವಾಸ್‌ನ ವಿದ್ಯಾರ್ಥಿಗಳಾಗಿದ್ದು, ಉಳಿದಿಬ್ಬರೂ ಉಡುಪಿಯ ಎಂಜಿಎಂ ಕಾಲೇಜು ಹಾಗೂ ಗೋಣಿಕೊಪ್ಪದ ಕಾವೇರಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಮಂಗಳೂರು ವಿವಿಯ ಪುರುಷರ ಪದಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬದುಕನ್ನು ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಡುವವರು ಹಲವು ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಅವರು ಸುಖ, ಸಂಪತ್ತಿನಿಂದ ವಂಚಿತರಾಗುವುದು ಅನಿವಾರ್ಯ. ಆದರೆ ಜನರು ಆ ಕಾರಣಕ್ಕಾಗಿ ಅವರಿಗೆ ನೀಡುವ ಗೌರವ ಮತ್ತು ಮಾಡುವ ಅವರ ಸ್ಮರಣೆ ಅವರು ತ್ಯಾಗಮಾಡಿದ ಸುಖ, ಸಂಪತ್ತಿಗಿಂತ ಅಧಿಕ ಮೌಲ್ಯ ಹೊಂದಿರುತ್ತದೆ ಹಾಗೂ ಹೆಚ್ಚು ಕಾಲ ಬಾಳುತ್ತದೆ ಎಂದು ಬಾರ್ಕೂರು ಶ್ರೀ ಏಕನಾಥೇಶ್ವರಿ ದೇವಸ್ಥಾನದ ಅಧ್ಯಕ್ಷ ಎ. ಬಿ. ಶೇರೆಗಾರ್ ಹೇಳಿದರು. ಇಲ್ಲಿನ ಶಾರದಾ ಮಂಟಪದಲ್ಲಿ ಶನಿವಾರ ಆರಂಭವಾದ ಲಾವಣ್ಯ ಬೈಂದೂರು ಇದರ 43ನೆ ವಾರ್ಷಿಕೋತ್ಸವ ‘ರಂಗ ಲಾವಣ್ಯ-2020’ ಹಾಗೂ ಬಿ. ಮಾಧವ ರಾವ್ ಸ್ಮರಣೆಯ ಮೂರು ದಿನಗಳ ರಂಗಮಾಧವ ನಾಟಕೋತ್ಸವ ಉದ್ಘಾಟಿಸಿ ಮಾತನಾಡಿದರು. ಮಾಧವ ರಾವ್ ಲಾವಣ್ಯದ ಸದಸ್ಯರಾಗಿ, ಕಲಾವಿದರಾಗಿ, ಬೆಂಬಲಿಗರಾಗಿ ದೀರ್ಘಕಾಲ ಅದರ ಯಶಸ್ಸಿಗೆ ದುಡಿದವರು. ವಿವಿಧ ಸಾರ್ವಜನಿಕ, ಧಾರ್ಮಿಕ ಕ್ಷೇತ್ರಗಳಲ್ಲೂ ಕೆಲಸ ಮಾಡಿದವರು. ಅವರನ್ನು ನಾಟಕೋತ್ಸವದ ಮೂಲಕ ಸ್ಮರಿಸುತ್ತಿರುವುದು ಅವರಿಗೆ ಸಲ್ಲಿಸಿದ ಅರ್ಥಪೂರ್ಣ ಗೌರವ ಎಂದು ಅವರು ಹೇಳಿದರು. ಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಫೆಬ್ರವರಿ 6 ರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಆಟೋರಿಕ್ಷಾಗಳಿಗೆ ಏಪ್ರಿಲ್ 1 ರಿಂದ 1.5 ಕಿ.ಮೀಟರ್‌ವರೆಗೆ ಕನಿಷ್ಟ ದರ ರೂ.30.00, ನಂತರದ ಪ್ರತಿ ಕಿ.ಮೀಟರ್‌ಗೆ ದರ ರೂ.17.00 ರಂತೆ ದರ ಪರಿಷ್ಕರಿಸಿ ಪ್ರಯಾಣಕ್ಕೆ ತಕ್ಕಂತೆ ಪರಿಷ್ಕೃತ ಮೀಟರ್ ದರವನ್ನು ಪ್ರಯಾಣಿಕರಿಂದ ಪಡೆಯುವಂತೆ ಆದೇಶ ಹೊರಡಿಸಲಾಗಿರುತ್ತದೆ. ಆದರೆ ಜಿಲ್ಲೆಯಲ್ಲಿ ಕೆಲವು ಆಟೋ ಚಾಲಕರು ಈಗಿನಿಂದಲೇ ಹೊಸ ದರ ಪಡೆಯುತ್ತಿರುವುದಾಗಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಪ್ರಾಧಿಕಾರಕ್ಕೆ ಬರುತ್ತಿವೆ. ಆದುದರಿಮದ ಉಡುಪಿ ಜಿಲ್ಲೆಯ ಎಲ್ಲಾ ಆಟೋರಿಕ್ಷಾ ಚಾಲಕ/ ಮಾಲಕರು ಏಪ್ರಿಲ್ 1 ರ ವರೆಗೆ ಕಡ್ಡಾಯವಾಗಿ ಈ ಹಿಂದೆ ನಿಗಧಿಪಡಿಸಿದ ದರವನ್ನು ಪ್ರಯಾಣಿಕರಿಂದ ಪಡೆಯುವಂತೆ ಸೂಚಿಸಲಾಗಿದ್ದು, ತಪ್ಪಿದಲ್ಲಿ ಅಂತಹ ಚಾಲಕ/ ಮಾಲಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ವಿವಿಧ ಕ್ಷೇತ್ರಗಳಲ್ಲಿ ಪುರಸ್ಕೃತರಾದ ಗೃಹರಕ್ಷಕ ಅಧಿಕಾರಿಗಳು ಹಾಗೂ ಗೃಹರಕ್ಷಕರಿಗೆ ಜಿಲ್ಲಾ ಸಮಾದೇಷ್ಟ ಡಾ. ಪ್ರಶಾಂತ್ ಶೆಟ್ಟಿ ಅಧ್ಯಕ್ಷತೆಯಲ್ಲಿ, ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಬುಧವಾರ ಸನ್ಮಾನ ಸಮಾರಂಭ ನಡೆಯಿತು. ಅಧ್ಯಕ್ಷತೆ ವಹಿಸಿದ ಡಾ.ಪ್ರಶಾಂತ್ ಶೆಟ್ಟಿ ಮಾತನಾಡಿ, ತಮ್ಮ ಉತ್ತಮ ಸೇವೆ ಹಾಗೂ ಪರಿಶ್ರಮ ತಮಗೆ ಕೀರ್ತಿಯನ್ನು ತಂದುಕೊಡುವುದರೊಂದಿಗೆ ಇಲಾಖೆಗೆ ಹಾಗೂ ಉಡುಪಿ ಜಿಲ್ಲೆಗೆ ಕೀರ್ತಿಯನ್ನು ತಂದುಕೊಟ್ಟಿದೆ. ಇನ್ನು ಮುಂದೆಯೂ ತಮ್ಮಿಂದ ಉತ್ತಮ ರೀತಿಯ ಸೇವೆಯನ್ನು ಇಲಾಖೆ ಬಯಸುತ್ತದೆ ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಉತ್ತಮ ಸೇವೆಗಾಗಿ ರಾಷ್ಟ್ರಪತಿಗಳ ಪದಕ ಪಡೆದಿರುವ ಬ್ರಹ್ಮಾವರ ಘಟಕದ ಘಟಕಾಧಿಕಾರಿ ಮಂಜುನಾಥ್ ಶೆಟ್ಟಿಗಾರ್, ಮಾನ್ಯ ಮುಖ್ಯಮಂತ್ರಿಗಳ ಪದಕ ಪಡೆದಿರುವ ಕಾಪು ಘಟಕದ ಘಟಕಾಧಿಕಾರಿ ಲಕ್ಷ್ಮಿನಾರಾಯಣ್ ರಾವ್ ಹಾಗೂ ಜನವರಿ ೭ ರಿಂದ ೧೮ ರ ವರೆಗೆ ಬೆಂಗಳೂರಿನ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ನಡೆದ ರಾಜ್ಯ ಮಟ್ಟದ ಗೃಹರಕ್ಷಕರ ಪ್ರಥಮ ಚಿಕಿತ್ಸೆ ಚಿಕಿತ್ಸೆ ತರಬೇತಿಯಲ್ಲಿ ಚಿನ್ನದ ಪದಕ ಪಡೆದ…
ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು : ನಾವುಂದ ಗ್ರಾಮದ ಸೌಪರ್ಣಿಕಾ ತಟದ ಅರೆಹೊಳೆ ಶ್ರೀ ಮಹಾಲಿಂಗೇಶ್ವರ-ಮಹಾಗಣಪತಿ ದೇವಸ್ಥಾನದಲ್ಲಿ ಮಾಘ ಪೌರ್ಣಿಮೆಯಂದು ನಡೆಯುವ ಶ್ರಿ ಮನ್ಮಾಹಾರಥೋತ್ಸವದ ವೇಳೆ ಎಂಟು ದಿನ ಗ್ರಾಮದ ವಿವಿಧೆಡೆ ನಡೆಯುವ ಕಟ್ಟಳೆಯ ವಸಂತ ಪೂಜೆಗೆ ದೇವರ ಉತ್ಸವ ಮೂರ್ತಿಯನ್ನು ಪಲ್ಕಕ್ಕಿಯಲ್ಲಿ ಕೊಂಡೊಯ್ಯುವುದು ಅನೂಚಾನವಾಗಿ ಬಂದ ಸಂಪ್ರದಾಯ. ೨೫ ವರ್ಷಗಳ ಹಿಂದೆ ಪಲ್ಲಕ್ಕಿ ಹೊರಲು ಸಿಬ್ಬಂದಿ ಹಿಂದೆ ಸರಿದಾಗ ಅಸ್ತಿತ್ವಕ್ಕೆ ಬಂದುದು ’ಪಲ್ಲಕ್ಕಿ ಫ್ರೆಂಡ್ಸ್’ ಎಂಬ ಯುವಪಡೆ. ಸಂಪ್ರದಾಯಕ್ಕೆ ಚ್ಯುತಿ ಬರುವುದೆಂದು ಚಿಂತಿತರಾದ ಅಂದಿನ ಆಡಳಿತ ಮೊಕ್ತೇಸರ ಯಜ್ಞನಾರಾಯಣ ಮಂಜ, ದೇವರ ಸೇವೆಯ ಹೊಣೆ ಹೊರಬೇಕು ಎಂದು ಊರಿನ ವಿಪ್ರ ಯುವಕರ ಮನ ಒಲಿಸಿದರು. ಮೊದಲ ವರ್ಷದಿಂದಲೇ ಯುವಕರು ಈ ಕಾಯಕದಲ್ಲಿ ಧನ್ಯತೆ ಕಂಡುಕೊಂಡರು. ತಮ್ಮನ್ನು ’ಅರೆಹೊಳೆ ಪಲ್ಲಕ್ಕಿ ಫ್ರೆಂಡ್ಸ್’ ಎಂದು ಗುರುತಿಸಿಕೊಂಡು ಸಂಘಟನೆಯ ರೂಪ ಪಡೆದರು. ಅಲ್ಲಿಂದ ಇಂದಿನ ವರೆಗೆ ದೇವರ ಈ ವಿಶಿಷ್ಟ ಗ್ರಾಮಸಂಚಾರಕ್ಕೆ ಚ್ಯುತಿ ಬಂದಿಲ್ಲ. ಮುಂದೆ ವರು ತಮ್ಮ ಸೇವೆಯನ್ನು ಊರಿನ ಅನ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2019-20 ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ಆನ್‌ಲೈನ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ www.kacdc.karnataka.gov.in ನಲ್ಲಿ ಮಾರ್ಚ್ 12 ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಮಾತ್ರ ಸ್ವೀಕರಿಸಲಾಗುವುದು. ನಿಗಮದ ಯೋಜನೆಗಳಿಗೆ ಅವಶ್ಯವಿರುವ ಸಾಮಾನ್ಯ ಅರ್ಹತೆಗಳು: ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು, ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು. ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು: ಈ ಯೋಜನೆಯಲ್ಲಿ ಸಣ್ಣ ವ್ಯಾಪಾರ, ಸ್ವಯಂ ಉದ್ಯೋಗ ಇತ್ಯಾದಿ ವ್ಯಾಪಾರ ಚಟುವಟಿಕೆಗಳಿಗೆ ಸಾಲ ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 3 ಲಕ್ಷ ರೂ.ಗಳ ಮಿತಿಯ ಒಳಗಿರಬೇಕು. ಅರ್ಜಿದಾರರು 18 ವರ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಉಡುಪಿ ಜಿಲ್ಲೆಯ ಕೃಷಿ ಇಲಾಖೆಯ ಮಣ್ಣು ಆರೋಗ್ಯ ಕೇಂದ್ರಕ್ಕೆ ಬೇಕಾದ ಪ್ರಯೋಗಶಾಲಾ ವಿಶ್ಲೇಷಕರು, ಪ್ರಯೋಗಾಲಯ ಸಹಾಯಕರು, ಪ್ರಯೋಗಶಾಲಾ ಪರಿಚಾರಕರು ಹಾಗೂ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯುವ ಬಗ್ಗೆ ಇ-ಪ್ರೊಕ್ಯೂರ್‌ಮೆಂಟ್ ಟೆಂಡರ್ ದಸ್ತಾವೇಜಿನಲ್ಲಿ ತಿಳಿಸಿರುವ ನಿಬಂಧನೆಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಟೆಂಡರ್‌ನ್ನು ಆಹ್ವಾನಿಸಲಾಗಿದೆ. ಇಚ್ಛೆಯುಳ್ಳ ಸಂಸ್ಥೆಯವರು ಟೆಂಡರ್ ಅರ್ಜಿಯನ್ನು ಇ-ಪೇಮೆಂಟ್ ಮುಖಾಂತರ ಸಲ್ಲಿಸಬೇಕು. ಭರ್ತಿ ಮಾಡಿದ ಇ-ಟೆಂಡರ್‌ಗಳನ್ನು ಮಾರ್ಚ್ 19 ರ ಸಂಜೆ 4 ಗಂಟೆ ಮುಂಚಿತವಾಗಿ www.karnataka public procurement portal ನಲ್ಲಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಇ-ಟೆಂಡರ್‌ನ್ನು ಮಾರ್ಚ್ 20 ರ ಸಂಜೆ 4 ಗಂಟೆಗೆ ತೆರೆಯಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
