ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಹೆಸರನ್ನೇ ಹೋಲುವ ಇನ್ನೊಂದು ಸಂಘಟನೆಯ ಹೆಸರಿನಲ್ಲಿ ‘ಪ್ರೆಸ್ ಕ್ಲಬ್’ ಉದ್ಘಾಟನಾ ಕಾರ್ಯಕ್ರಮ ಎಂಬ ಆಹ್ವಾನ ಪತ್ರಿಕೆಯೊಂದು ಸೊಷಿಯಲ್ ಮೀಡಿಯಾದಲ್ಲಿ ಕಂಡುಬಂದಿದ್ದು ಈ ಕುರಿತು ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದು ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ. ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಮಾನ್ಯತೆ ಹೊಂದಿರುವ ಅಧಿಕೃತ ಪತ್ರಕರ್ತರ ಸಂಘಟನೆಯಾಗಿದೆ. ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ವಾಣಿಜ್ಯ ಸಂಕೀರ್ಣದಲ್ಲಿ ಸಂಘದ ಕಛೇರಿ ಮತ್ತು ಪ್ರೆಸ್ ಕ್ಲಬ್ ಇದ್ದು ಸಂಸ್ಥೆಗೆ ಮೂವತ್ತಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಮಾನ್ಯತೆ ಪಡೆದಿರುವ ನಮ್ಮ ಸಂಘಕ್ಕೂ ಮತ್ತು ನಮ್ಮ ಸಂಘದ ಹೆಸರನ್ನೇ ಹೋಲುವ ಇನ್ನೊಂದು ಸಂಘಟನೆಯ ಪ್ರೆಸ್ ಕ್ಲಬ್ ಅಥವಾ ಇತರ ಯಾವುದೇ ಚಟುವಟಿಕೆಗಳಿಗೂ ಸಂಬಂಧವಿಲ್ಲ ಮತ್ತು ಈ ಕುರಿತು ಸಾರ್ವಜನಿಕರು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕುಂದಾಪುರ ತಾಲೂಕಿನ ರಮಣೀಯ, ಸುಂದರವಾದ ಪಂಚಗಂಗಾವಳಿ ನದಿಯ ಅದ್ಭುತವಾದ ಹಿನ್ನೀರು. ಈ ಹಿನ್ನೀರಿನಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಿರ್ಮಿಸಲಾಗಿರುವ ಗಂಗೋತ್ರಿ ಕ್ರೂಸ್ ಬೋಟ್ನ್ನು ನೋಡಿದಾಗ ಹೊಸ ಜಗತ್ತನ್ನೇ ನೋಡಿದ ಅನುಭವ ಉಂಟಾಗುತ್ತಿದೆ. ಕೇರಳ ರಾಜ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಇಂತಹ ಕ್ರೋಸ್ ಬೋಟ್ಗಳು ನಮ್ಮ ರಾಜ್ಯಕ್ಕೆ ಬರುವ ಪ್ರವಾಸಿಗರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ ಎಂದು ಮೀನುಗಾರಿಕಾ ಮತ್ತು ಬಂದರು ಸಚಿವ ಎಸ್. ಅಂಗಾರ ಹೇಳಿದರು. ಗುಜ್ಜಾಡಿ ಗ್ರಾಮದ ಮಂಕಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗಂಗೋತ್ರಿ ಕ್ರೂಸ್ ಬೋಟ್ನ್ನು ವೀಕ್ಷಿಸಿ ಮಾತನಾಡಿದರು. ಈ ವಿನೂತನ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಗಂಗೊಳ್ಳಿಯ ಟಿ.ವಾಸುದೇವ ದೇವಾಡಿಗ ಹಾಗೂ ಪಾಲುದಾರರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಅಂಗಾರ, ಈ ಉದ್ಯಮ ಯಶಸ್ವಿಯಾಗಿ ಮುನ್ನಡೆಯಲು ಸರಕಾರದ ಮೂಲಕ ದೊರೆಯುವ ಸೌಲಭ್ಯವನ್ನು ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಕುಂದಾಪುರ ತಾಪಂ ಅಧ್ಯಕ್ಷೆ ಇಂದಿರಾ ಶೆಟ್ಟಿ, ತಾಪಂ ಸದಸ್ಯರಾದ ಸುರೇಂದ್ರ ಖಾರ್ವಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಸಾಹಿತಿ ಡಾ. ನಾ. ಮೊಗಸಾಲೆ ಕೃತಿಗಳು ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿವೆ. ಇವರ ಬರಹಗಳು ವೈಚಾರಿಕ ದೃಷ್ಟಿಕೋನದಲ್ಲಿ ರಚನೆಗೊಳ್ಳುತ್ತವೆ ಎಂದು ಸಾಹಿತಿ ಬೆಳಗೋಡು ರಮೇಶ್ ಭಟ್ ಹೇಳಿದರು. ಕೋಟದ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಸಾಲಿಗ್ರಾಮ ಲೇಖಕರ ಹಿತರಕ್ಷಣಾ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಘಟಕ, ಕೋಟ ಮಿತ್ರ ಮಂಡಳಿ ಆಶ್ರಯದಲ್ಲಿ ನಡೆದ ಮೊಗಸಾಲೆ ಅವರ ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೊಗಸಾಲೆ ಅವರ ‘ನೀಲ ಆಕಾಶ’ ಸಮಗ್ರ ಕವನ ಸಂಕಲನ ಬಿಡುಗಡೆ ಹಾಗೂ ‘ಮೊದಲ ಓದಿನ ಸುಖ’ ಮುನ್ನುಡಿಗಳ ಗುಚ್ಛವನ್ನು ಸಾಹಿತಿ ಡಾ.ಬಿ.ಜನಾನ ಭಟ್ ಮತ್ತು ಕ.ಸಾ.ಪ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕೃತಿ ಬಿಡುಗಡೆಗೊಳಿಸಿದರು. ಕಾರ್ಯಕ್ರಮ ಸಂಘಟಕರು ಮೊಗಸಾಲೆ ಅವರನ್ನು ಸನ್ಮಾನಿಸಿ ಗೌರವಿಸಿದರು. ಮೊಗಸಾಲೆ ಅವರ ಗದ್ಯ ಸಾಹಿತ್ಯದ ಕುರಿತು ಡಾ.ರಾಜಶೇಖರ್ ಹಳೆಮನೆ ಮಾತನಾಡಿದರು. ಲೇಖಕರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಚಿತ್ರಪಾಡಿ ಪ್ರೊ.ಉಪೇಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕನ್ನಡದ ಸ್ತ್ರೀವಾದಿ ಚಿಂತಕಿ, ಜಾನಪದ ವಿದ್ವಾಂಸೆ ಡಾ. ಗಾಯತ್ರೀ ನಾವಡ ಅವರಿಗೆ ಕರ್ನಾಟಕ ಜಾನಪದ ಅಕಾಡೆಮಿಯ ‘ಡಾ. ಜೀಶಂಪ ಜಾನಪದ ತಜ್ಞ ರಾಜ್ಯ ಪ್ರಶಸ್ತಿ’ ಸಂದಿದೆ. ಚಾಮರಾಜನಗರದಲ್ಲಿ ಕರ್ನಾಟಕ ಅರಣ್ಯ ಮತ್ತು ಕನ್ನಡ ಸಂಸ್ಕ್ರತಿ ಖಾತೆಯ ಸಚಿವರಾದ ಅರವಿಂದ ಲಿಂಬಾಳಿಯವರು ಡಾ. ಗಾಯತ್ರೀ ನಾವಡ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಪ್ರಶಸ್ತಿಯು ಫಲಕ, ಗೌರವ ಪತ್ರ ಮತ್ತು ಐವತ್ತು ಸಾವಿರ ರೂಪಾಯಿಯನ್ನು ಒಳಗೊಂಡಿದೆ. ಈ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಪ್ರಾಥಮಿಕ ಮತ್ತು ಪೌಢಶಾಲಾ ಶಿಕ್ಷಣ ಖಾತೆ ಹಾಗೂ ಗ್ರಂಥಾಲಯ ಸಚಿವರಾದ ಸುರೇಶ್ ಕುಮಾರ್, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಪದ್ಮಶ್ರೀ ಪುರಸ್ಕ್ರತ ಮಂಜಮ್ಮ ಜೋಗತಿ ಹಾಗೂ ಜಿಲ್ಲಾಧಿಕಾರಿ ಡಾ. ರವಿ ಪಾಲ್ಗೊಂಡಿದ್ದರು. ಡಾ. ಗಾಯತ್ರಿ ನಾವುಡ ಅವರು ಕನ್ನಡ ಸಾಹಿತ್ಯ ಸಂದರ್ಭದಲ್ಲಿ ಒಬ್ಬ ಸ್ತ್ರೀವಾದಿ ಚಿಂತಕಿಯಾಗಿ, ಸಂಸ್ಕ್ರತಿ ವಿಮರ್ಶಕಿಯಾಗಿ, ಜಾನಪದ ವಿದ್ವಾಂಸರಾಗಿ ಗುರುತಿಸಿಕೊಂಡವರು. ಕಾಡ್ಯನಾಟ, ಭಾರತೀಯ ಸ್ತ್ರೀವಾದ, ಸಾಂಸ್ಕ್ರತಿಕ ಸಬಲೀಕರಣ, ಸ್ತ್ರೀವಾದಿ ಜಾನಪದದಂತಹ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಇತ್ತೀಚೆಗೆ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನಿಂದ ಮೂಡ್ಲಕಟ್ಟೆ ಜನಾರ್ದನ ದೇವಸ್ಥಾನದ ತನಕ ರಸ್ತೆ ಅಕ್ಕಪಕ್ಕದ ಪ್ಲಾಸ್ಟಿಕ್ ಇನ್ನಿತರ ತ್ಯಾಜ್ಯ ವಸ್ತುಗಳನ್ನು ವಿಲೇವಾರಿ ಮಾಡಿದ್ದಲ್ಲದೆ, ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆ, ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಧಿಕಾರಿ ಪ್ರೊ. ಬಾಲನಾಗೇಶ್ವರ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಡೀನ್, ಸಿಬಂದಿ ವರ್ಗ ಹಾಗೂ ಪ್ರಥಮ ವರ್ಷದ ವಿಧ್ಯಾರ್ಥಿ ಸ್ವಯಂಸೇವಕರು ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ಚರ್ಚ್ ರಸ್ತೆಯ ಬಳಿ ಕಾರು ಹಾಗೂ ಬುಲೆಟ್ ಬೈಕ್ ನಡುವಿನ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ನೇರಳೆಕಟ್ಟೆಯ ಕಿರಣ್ ಮೇಸ್ತ(24) ಹಾಗೂ ಕರ್ಕುಂಜೆಯ ರವೀಂದ್ರ ಕುಮಾರ್ (25) ಎಂದು ಗುರುತಿಸಲಾಗಿದೆ. ಮದ್ದುಗುಡ್ಡೆ ಕಡೆಯಿಂದ ಕುಂದಾಪುರ ಕಡೆಗೆ ಮಹಿಳೆಯೊಬ್ಬರು ಮಾರುತಿ ಅಲ್ಟೋ ಕಾರನ್ನು ವೇಗವಾಗಿ ಚಾಲನೆ ಮಾಡಿಕೊಂಡು ಬಂದಿದ್ದು ಕುಂದಾಪುರ ಕಡೆಯಿಂದ ಮದ್ದುಗುಡ್ಡೆ ಕಡೆಗೆ ಬರುತ್ತಿದ್ದ ಬುಲೆಟ್ಗೆ ಢಿಕ್ಕಿ ಕಾರು ಹೊಡೆದಿದ್ದಾರೆ. ಇದರಿಂದ ಸವಾರರಿಬ್ಬರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಇಬ್ಬರು ಕೂಡ ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಲಾಯಿಸುತ್ತಿದ್ದ ಮಹಿಳೆಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯು ಫೆಬ್ರವರಿ 12 ಮತ್ತು 13ರಂದು ಉಡುಪಿ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾಕೂಟವನ್ನು ಫೆಬ್ರವರಿ 12ರಂದು ಬೆಳಗ್ಗೆ 10 ಗಂಟೆಗೆ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಶೆಟ್ಟಿ ಹಾಗೂ ಆಯಾ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರನ್ನು ಸಂಪರ್ಕಿಸುವಂತೆ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಬಿದಿರೆ: ಆಳ್ವಾಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮಹಿಳೆಯರ ರಕ್ಷಣೆ ಮತ್ತು ಸಮಾನತೆಯ ಕುರಿತು ವಿದ್ಯಾಗಿರಿ ಕ್ಯಾಂಪಸ್ನಲ್ಲಿ ಬೀದಿನಾಟಕ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ತುಳು ಪೋರಂ, ಕಾಮರ್ಸ್ ಪೋರಂನ ಎರಡು ತಂಡಗಳು, ಎನ್ಸಿಸಿ ಆರ್ಮಿ ವಿಂಗ್, ಎನ್ಸಿಸಿ ನೇವಿ ಪೋರಂ, ಕನ್ನಡ ಪೋರಂ, ಆರು ತಂಡಗಳು ಭಾಗವಹಿಸಿದ್ದವು. ಪ್ರಥಮ ಬಹುಮಾನ ಎನ್ಸಿಸಿ ಆರ್ಮಿ ತಂಡ ಪಡೆದರೆ, ದ್ವಿತೀಯ ಬಹುಮಾನವನ್ನು ಎನ್ಸಿಸಿ ನೇವಿ ತಂಡ ಹಾಗೂ ತೃತೀಯ ಬಹುಮಾನವನ್ನು ತುಳು ಪೋರಂ ಪಡೆಯಿತು. ವಾಣಿಜ್ಯ ಪ್ರೋಫೆಶನಲ್ ವಿಭಾಗದ ಸಂಯೋಜಕರಾದ ಅಶೋಕ್ ಕೆ. ಜಿ ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯೋಜಕರಾದ ಪ್ರಸಾದ್ ಶೆಟ್ಟಿ ತೀರ್ಪುಗಾರಾಗಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕರಾದ ವಸಂತ್ ಹಾಗೂ ವಿನೋದ್ ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ಸುದೀಕ್ಷಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಮಲ್ಪೆ ಸೇರಿದಂತೆ ವಿವಿಧ ಮೀನುಗಾರಿಕಾ ಬಂದರುಗಳ ಒಳಗೆ ಬಾಲ ಕಾರ್ಮಿಕರ ಪ್ರಕರಣಗಳು ಕಂಡುಬಂದ ನಿಟ್ಟಿನಲ್ಲಿ ಬಂದರಿನ ಪ್ರವೇಶ ದ್ವಾರದಲ್ಲೇ ಮಕ್ಕಳನ್ನು ತಡೆಯಬೇಕು. ಒಂದು ವೇಳೆ ಮಕ್ಕಳು ಬಂದರಿನ ಒಳಗೆ ಕಂಡು ಬಂದಲ್ಲಿ ಸಂಬಂಧಪಟ್ಟ ಬಂದರಿನ ಪ್ರವೇಶ ದ್ವಾರದವರಿಗೆ ನೋಟೀಸ್ ನೀಡಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸಲಹಾ ಸಮಿತಿ ಮತ್ತು ಕಾರ್ಯಕಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೀನುಗಾರಿಕಾ ಬಂದರಲ್ಲಿ ಪದೇ ಪದೇ ಬಾಲ ಕಾರ್ಮಿಕರು ಪತ್ತೆಯಾಗುವುದು, ಮೀನು ಹೆಕ್ಕುವುದು ಮುಂತಾದ ಘಟನೆಗಳು ನಡೆಯುತ್ತಿದ್ದು, ಇದನ್ನು ಸಂಪೂರ್ಣವಾಗಿ ತಡೆಯುವ ನಿಟ್ಟಿನಲ್ಲಿ ಪ್ರವೇಶ ದ್ವಾರದಲ್ಲೇ ಮಕ್ಕಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೊರ ರಾಜ್ಯ, ಜಿಲ್ಲೆಗಳಿಂದ ವಲಸೆ ಬಂದಿರುವ ಕೂಲಿ ಕಾರ್ಮಿಕರು ಕೆಲಸ ಮಾಡುವ ಕ್ವಾರಿ, ಕ್ರಷರ್ಗಳಲ್ಲಿ ಬಾಲ ಕಾರ್ಮಿಕರು ದುಡಿಯುತ್ತಿರುವ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ರಾಜ್ಯ ಮೀನುಗಾರಿಕೆ ಹಾಗೂ ಬಂದರು ಸಚಿವರಾಗಿ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಪ್ರಥಮ ಬಾರಿ ಆಗಮಿಸಿದ ಎಸ್. ಅಂಗಾರ ಇವರಿಗೆ ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘ ಉಪ್ಪುಂದ ಇವರ ವತಿಯಿಂದ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವ ಮೀನುಗಾರಿಕೆ ಸಚಿವ ಎಸ್. ಅಂಗಾರ,ನಾನು ಸಾಮಾನ್ಯ ಕುಟುಂಬದಲ್ಲಿ ಜನಿಸಿ, ಕಷ್ಟಗಳನ್ನು ನೋಡಿ ಈ ಸ್ಥಾನಕ್ಕೇರಿದ್ದೇನೆ. ಸಾಮಾನ್ಯ ಜನರ ಕಷ್ಟಗಳು, ನೋವುಗಳ ಅರಿವು ನನಗಿದೆ. ಸಮಾಜ ಋಣ ತೀರಿಸಲು ನನ್ನ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸುತ್ತೇನೆ. ಮೀನುಗಾರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಎ. ಆನಂದ ಖಾರ್ವಿ ಮಾತನಾಡಿ, ಕಳೆದ ಎರಡು ತಿಂಗಳಿಂದ ಸೀಮೆಎಣ್ಣೆ ಸಿಗುತ್ತಿಲ್ಲ, 300ಲೀ ನೀಡುವಲ್ಲಿ 170ಲೀ ಮಾತ್ರ ಸಿಗುತ್ತಿದೆ, 400ಲೀ ಸೀಮೆಎಣ್ಣೆ ಬೇಡಿಕೆ ಇದೆ. ಸೀಮಿತ ಮೀನುಗಾರರಿಗೆ ಮಾತ್ರ ಇಂಜಿನ್ ಸಬ್ಸಿಡಿ ನೀಡಲಾಗಿದೆ.…
