ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಸಾಯಿ ಮಹಿಳಾ ಆರ್ಥಿಕ ಸರಕಾರಿ ಸಂಘ ಮುಳ್ಳಿಕಟ್ಟೆ ಹೊಸಾಡು ಇವರಿಂದ ಕರೋನಾ ರೋಗ ಹರಡುವಿಕೆ ತಡೆಗಟ್ಟುವ ನೆಲೆಯಲ್ಲಿ ಲಾಕ್ಡೌನ್ ಘೋಷಣೆಯಾದ ಸಮಯದಿಂದ ತನ್ನ ಸದಸ್ಯರಿಗೆ ಬ್ಯಾಂಕಿಂಗ್ ಸೇವೆಯನ್ನು ಮನೆ ಬಾಗಿಲಿಗೆ ನೀಡುತ್ತಿದೆ. ಸದಸ್ಯರು ಕರೆಮಾಡಿ ತಿಳಿಸಿದಾಗ ಅವರ ಮನೆಗೆ ಸಂಸ್ಥೆಯ ಸಿಬ್ಬಂದಿಗಳು ಭೇಟಿ ನೀಡಿ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದಾರೆ. ಮತ್ತು ಇದೇ ಸಂದರ್ಭದಲ್ಲಿ ಸದಸ್ಯರಿಗೆ ಸಾಮಾಜಿಕ ಅಂತರ, ಪರಿಸರ ಸ್ವಚ್ಚತೆ, ಆದಷ್ಟು ಅನಗತ್ಯ ಸಂಚಾರ ಮಾಡದೇ ಇರುವ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಂಸ್ಥೆಯ ಸಿಬ್ಬಂದಿಗಳಾದ ಮುಖ್ಯಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಬಿಲ್ಲವ, ರೇಖಾ, ಪ್ರತಿಭಾ, ಗಿರೀಶ್, ಮಂಜುನಾಥ್ ಈ ಸೇವೆ ಸಲ್ಲಿಸುತ್ತಿದ್ದಾರೆ. ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳ ಈ ಕಾರ್ಯವೈಖರಿಯು ಅಂತ್ಯಂತ ಸಮಯೋಚಿತ ಮತ್ತು ಉಪಯುಕ್ತವಾಗಿದ್ದು ಎಂದು ಸದಸ್ಯರೆಲ್ಲರೂ ಶ್ಲಾಘಿಸುತ್ತಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಲಾಕ್ಡೌನ್ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ವಿವಿಧ ದುಡಿಯುವ ವರ್ಗಗಳಿಗೆ ಮುಖ್ಯ ಮಂತ್ರಿಗಳು ನೆರವಿನ ಪ್ಯಾಕೇಜ್ ಘೋಷಿಸಿದ್ದಾರೆ. ಈ ವೇಳೆ ದುಡಿಮೆ ಕಳೆದುಕೊಂಡು, ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಅಸಂಘಟಿತ ವಲಯಕ್ಕೆ ಸೇರಿರುವ ಕರಾವಳಿ ಮೀನುಗಾರರಿಗೂ ನೆರವು ನೀಡಬೇಕು ಎಂದು ಬೈಂದೂರು ಬ್ಲಾಕ್ ಕಾಂಗ್ರೆಸ್ ಮೀನುಗಾರಿಕಾ ಘಟಕದ ಅಧ್ಯಕ್ಷ ನಾಗೇಶ ಖಾರ್ವಿ ಅಳ್ವೆಕೋಡಿ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ. ಲಾಕ್ಡೌನ್ನಿಂದ ಮೀನುಗಾರರು ದುಡಿಮೆ ಕಳೆದುಕೊಂಡಿದ್ದಾರೆ. ಅದಕ್ಕಿಂತ ಹಿಂದಿನ ನಾಲ್ಕು ತಿಂಗಳ ಕಾಲ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುವ ಮೀನುಗಾರರು ಮತ್ಸ್ಯಕ್ಷಾಮದಿಂದ ಕಂಗೆಟ್ಟಿದ್ದಾರೆ. ಈಚಿಗಿನ ತೌಕ್ತೆ ಚಂಡಮಾರುತದಿಂದ ಮೀನುಗಾರಿಕಾ ಸಲಕರಣೆಗಳಿಗೂ ಹಾನಿಯಾಗಿದೆ. ಅವರ ವಸತಿ ಪ್ರದೇಶಗಳು ಕಡಲ್ಕೊರೆತದಿಂದ ನಲುಗಿವೆ. ಮೀನುಗಾರಿಕೆಯನ್ನೇ ಅವಲಂಬಿಸಿರುವ ಅವರಿಗೆ ಇವೆಲ್ಲದರಿಂದ ದೊಡ್ಡ ಹೊಡೆತ ಬಿದ್ದಿದೆ. ದೋಣಿ, ಬಲೆ, ಎಂಜಿನ್, ಇತರ ಸಲಕರಣೆಗಳನ್ನು ಖರೀದಿಸಲು ಬ್ಯಾಂಕ್ ಸಾಲ ಪಡೆದವರು ಸಾಲ ಮರುಪಾವತಿ ಮಾಡಲಾರದೆ ಬಡ್ಡಿಯ ಹೊರೆ ಹೊರುವಂತಾಗಿದೆ. ಕೃಷಿಕರಂತೆ ಮೀನುಗಾರರು ಜನರಿಗೆ ಆಹಾರ ಪೂರೈಸುತ್ತಾರೆ. ಅವರ ಸಂಕಷ್ಟ ಕಾಲದಲ್ಲಿ…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಲಾಕ್ಡೌನ್ ಹಾಗೂ ಅಕಾಲಿಕ ಮಳೆಯಿಂದಾಗಿ ಕಲ್ಲಂಗಡಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಸಾಲ ಮಾಡಿ ಬೆಳೆದ ಬೆಳೆಯನ್ನು ಮಾರಾಟ ಮಾಡಲು ಸಾಧ್ಯವಾಗದೇ ಕಲ್ಲಂಗಡಿ ಹಣ್ಣು ಕೊಳೆತು ಹೋಗಿ ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಶಿರೂರಿನಿಂದ ಹೆಮ್ಮಾಡಿಯ ತನಕ ಸುಮಾರು 150 ಹೆಕ್ಟೇರ್ಗೂ ಅಧಿಕ ಕೃಷಿ ಭೂಮಿಯಲ್ಲಿ ಎರಡನೇ ಬೆಳೆಯಾಗಿ ಕಲ್ಲಂಗಡಿ ಬೆಳೆಯುತ್ತಿದ್ದಾರೆ. ಕಿರಿಮಂಜೇಶ್ವರ, ಹೇರೂರು ಕಂಬದಕೋಣೆ ಗ್ರಾಮದಲ್ಲಿ ಬಹುತೇಕ ಕೃಷಿಕರು ಎರಡನೇಯ ಬೆಳೆಯಾಗಿ ಕಲ್ಲಂಗಡಿ ಬೆಳೆಯುತ್ತಿದ್ದಾರೆ. ಈ ಭಾರಿ ಕಟಾವಿನ ಸಂದರ್ಭದಲ್ಲಿಯೇ ಲಾಕ್ಡೌನ್ ಘೋಷಣೆಯಾದ್ದರಿಂದ ಕಲ್ಲಂಗಡಿಗೆ ಮಾರುಕಟ್ಟೆ ಸಮಸ್ಯೆ ಎದುರಾಗಿದೆ. ಹೊರ ರಾಜ್ಯ ವಹಿವಾಟಿಗೆ ಹೊಡೆತ ಬಿದ್ದಿರುವುದರಿಂದ ಎಲ್ಲಾ ಬೆಳೆಯನ್ನು ಸ್ಥಳೀಯವಾಗಿ ಮಾರಾಟ ಮಾಡಬೇಕಿದೆ. ಆದರೆ ಲಾಕ್ಡೌನ್ನಿಂದಾಗಿ ಹೋಟೆಲ್ ಹಾಗೂ ಜ್ಯೂಸ್ ಅಂಗಡಿಗಳಿಗೆ ಬೀಗ ಬಿದ್ದಿರುವುದರಿಂದ ಕಲ್ಲಂಗಡಿ ಬೆಳೆ ಕೇಳುವವರಿಲ್ಲದಂತಾಗಿದೆ. ಪರಿಣಾಮ ದರ ಕುಸಿದಿದೆ. ಸ್ಥಳೀಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲೊಂದಾದ ಕಲ್ಲಂಗಡಿಗೆ ಮಾರುಕಟ್ಟೆ ಸಮಸ್ಯೆಯಿಂದಾಗಿ ರೈತರಿಗೆ ಸೂಕ್ತ ಬೆಲೆ ಸಿಗದೇ ಮಧ್ಯವರ್ತಿಗಳ ಪಾಲಾಗುತ್ತಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರ್ಕಾರ ಜನರಿಗೆ ಆರೋಗ್ಯ ಸೇವೆ ಒದಗಿಸಲು ಗಣನೀಯ ಪ್ರಮಾಣದ ವೆಚ್ಚ ಮಾಡುತ್ತಿದೆ. ಆದರೆ ಅದಕ್ಕೆ ಬೇಕಾಗಿರುವ ಎಲ್ಲ ಅಗತ್ಯಗಳನ್ನು ಪೂರೈಸಲು ಸರ್ಕಾರಕ್ಕೆ ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ಸಾರ್ವಜನಿಕರು ಮತ್ತು ಸಂಘಟನೆಗಳು ಮುಂದೆ ಬಂದರೆ ಆರೋಗ್ಯ ಸೇವೆಯನ್ನು ಇನ್ನಷ್ಟು ವಿಸ್ತರಿಸಲು ಸಾಧ್ಯವಾಗುತ್ತದೆ ಎಂದು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಹೇಳಿದರು. ಮರವಂತೆ-ನಾವುಂದ ವ್ಯಾಪ್ತಿಯ ‘ನಮ್ಮ ಗ್ರಾಮ ನಮ್ಮ ಆರೋಗ್ಯ’ ತಂಡ ಗುರುವಾರ ಕೇಂದ್ರಕ್ಕೆ ಒದಗಿಸಿದ 30 ಪಲ್ಸ್ ಒಕ್ಸಿಮೀಟರ್ ಮತ್ತು ಒಂದು ನೆಬ್ಯುಲೈಸರ್ ಸ್ವೀಕರಿಸಿ ಅವರು ಮಾತನಾಡಿದರು. ತಂಡದ ಸದಸ್ಯ ವೆಂಕಟೇಶ ನಾವುಂದ ಮಾತನಾಡಿ ಎರಡು ಗ್ರಾಮದ ಸಮಾನ ಮನಸ್ಕರು ಇಲ್ಲಿನ ಆರೋಗ್ಯ ಕುರಿತಾದ ಕಾಳಜಿಯಿಂದ ತಂಡ ರೂಪಿಸಿಕೊಂಡಿದ್ದಾರೆ. ತಂಡದಲ್ಲಿ ದೇಶ ಮತ್ತು ವಿದೇಶದಲ್ಲಿ ಇರುವ ಊರಿನ ಯುವಕರು ಇದ್ದಾರೆ. ಅದು ಇಲ್ಲಿನ ಕೊರತೆ ನೀಗಲು, ಜನರಲ್ಲಿ ಆರೋಗ್ಯ ರಕ್ಷಣೆಯೆಡೆಗೆ ಅರಿವು ಮೂಡಿಸಲು ಆರೋಗ್ಯ ಕೇಂದ್ರ ಕೇಂದ್ರಿತವಾಗಿ ಕೆಲಸ ಮಾಡಲು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಳವಾಗುತ್ತಿದ್ದು, ಕೋವಿಡ್ ಸೋಂಕಿತರುಕೊನೆಯಕ್ಷಣದಲ್ಲಿಆಸ್ಪತ್ರೆಗೆದಾಖಲಾಗುತ್ತಿದ್ದಾರೆ. ಸಾರ್ವಜನಿಕರು ಪ್ರಾರಂಭದಲ್ಲಿ ಸ್ಥಳೀಯ ಕ್ಲಿನಿಕ್/ಡಾಕ್ಟರ್ ಹತ್ತಿರ ಹೋಗಿ ಕೋವಿಡ್ ಸೋಂಕಿನ ಲಕ್ಷಣವಾದಜ್ವರ, ಶೀತ,ಕೆಮ್ಮು, ಮುಂತಾದವುಗಳಿಗೆ ಮದ್ದನ್ನು ವೈದ್ಯರಿಂದ ಪಡೆಯುತ್ತಿದ್ದು, ನಂತರ ರೋಗ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಅಲ್ಲದೆ ಕೆಲವು ರೋಗಿಗಳು ತುಂಬಾ ಉಲ್ಬಣಗೊಂಡ ನಂತರ ದಾಖಲಾಗುವುದರಿಂದ ಮರಣ ಹೊಂದುತ್ತಿದ್ದಾರೆ. ಕೋವಿಡ್ರೋಗ ಲಕ್ಷಣವಾದ ಕೆಮ್ಮು, ಜ್ವರ, ಮೈ ಕೈ ನೋವು ಮುಂತಾದವುಗಳು ಕಂಡು ಬಂದತಕ್ಷಣ ಪರೀಕ್ಷೆ ಮಾಡಿಸಿಕೊಳ್ಳುವುದು ಅತೀಅವಶ್ಯಕವಾಗಿದ್ದು, ಕೋವಿಡ್ ದೃಡಪಟ್ಟಲ್ಲಿ ಅದಕ್ಕೆ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡುವುದು ಸಾಧ್ಯವಾಗುತ್ತದೆ. ಆದರೆ ಪ್ರಾರಂಭದಲ್ಲಿ ಸ್ಥಳೀಯ ವೈದ್ಯರಿಂದ ತಾತ್ಕಾಲಿಕ ಉಪಶಮನ ಪಡೆಯುವುದರಿಂದ ತಾತ್ಕಾಲಿಕವಾಗಿ ಪರಿಹಾರ ಸಿಕ್ಕಿದರೂ, ದಿನ ಕಳೆದಂತೆ ರೋಗ ಲಕ್ಷಣಗಳು ಉಲ್ಬಣಗೊಂಡು ಕೊನೆಯ ಹಂತದಲ್ಲಿ ಆಸ್ಪತ್ರೆಗೆ ದಾಖಲಾಗಲು ತಡವಾಗಿರುತ್ತದೆ. ರೋಗಿಗಳಲ್ಲಿ ಕೋರೋನಾ ಸೋಂಕು ಲಕ್ಷಣಕಂಡು ಬಂದಲ್ಲಿ ವೈದ್ಯರು ತಾತ್ಕಾಲಿಕ ಉಪಶಮನ ಚಿಕಿತ್ಸೆ ನೀಡದೆ, ನೇರವಾಗಿ ಕೊರೋನಾ ಸೋಂಕಿನ ಬಗ್ಗೆ ಪರೀಕ್ಷೆ ಮಾಡಿ ವರದಿ ಪಡೆಯಲು ಕಡ್ಡಾಯವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ ಪಾಸಿಟಿವ್ ಆಗಿ, ಹೋಂ ಐಸೋಲೇಷನ್ನಲ್ಲಿರುವವರು, ಅನಗತ್ಯವಾಗಿ ಮನೆಯಿಂದ ಹೊರಬಂದು , ಸಾರ್ವಜನಿಕವಾಗಿ ಸ್ಥಳಗಳಲ್ಲಿ ತಿರುಗಾಡಿ, ಆರೋಗ್ಯವಂತರಿಗೆ ಕೋವಿಡ್ ಸೋಂಕು ಹರಡುವುದನ್ನು ತಪ್ಪಿಸುವ ಉದ್ದೇಶದಿಂದ, ಹೋಂ ಐಸೋಲೇಷನ್ ನಲ್ಲಿರುವವರನ್ನು ಗುರುತಿಸಲು ಸಾಧ್ಯವಾಗುವಂತೆ, ಅವರ ಕೈಗೆ ಸೀಲ್ ಹಾಕುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ. ರೇಜು ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಆಗಿ , ಹೋಂ ಐಸೋಲೇಶನ್ ನಲ್ಲಿರುವ ವ್ಯಕ್ತಿಗಳು , ಐಸೋಲೇಷನ್ ನಿಯಮಗಳನ್ನು ಉಲ್ಲಂಘಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯವಾಗಿ ತಿರುಗಾಡುತ್ತಿರುವ ಕುರಿತು ದೂರುಗಳು ಬರುತ್ತಿರುವ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಉಸ್ತುವಾರಿ ಕಾರ್ಯದರ್ಶಿಗಳ ಗಮನಕ್ಕ ತಂದರು, ಈ ಕುರಿತಂತೆ ಪ್ರತಿಕ್ರಿಯಿಸಿದ ಡಾ. ಎಂ.ಟಿ.ರೇಜು ಸೋಂಕಿತರ ಕೈಗಳಿಗೆ ಸೀಲ್ ಹಾಕುವ ಮೂಲಕ, ಅವರು ಮನೆಯಿಂದ ಹೊರಬರದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡದಂತೆ ಅಗತ್ಯ ಕ್ರಮ ಕೈಗೊಳ್ಳಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಗುರುವಾರ 812 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 5 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 383, ಕುಂದಾಪುರ, ಬೈಂದೂರು ತಾಲೂಕಿನ 211, ಕಾರ್ಕಳ, ಹೆಬ್ರಿ ತಾಲೂಕಿನ 206 ಮಂದಿಗೆ ಹಾಗೂ ಹೊರ ಜಿಲ್ಲೆಯ 12 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 812 ಪ್ರಕರಣಗಳಲ್ಲಿ 23 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 789 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 77 ವರ್ಷದ ವೃದ್ಧ, 67 ವರ್ಷದ ವೃದ್ಧ, 63 ವರ್ಷದ ವೃದ್ಧ, 66 ವರ್ಷದ ವೃದ್ಧೆ, ಕಾರ್ಕಳದ 70 ವರ್ಷದ ವೃದ್ಧೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 914 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 6335 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2405 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್ 19 ಎರಡನೇ ಅಲೆಯಿಂದ ರಾಜ್ಯಾದ್ಯಂತ ಜನ ತತ್ತರಿಸಿ ಹೋಗಿದ್ದಾರೆ. ಸೊಂಕು ಪೀಡಿತರಿಗೆ ವೈದ್ಯಕೀಯ ಸೌಲಭ್ಯಗಳು, ವೆಂಟಿಲೇಟರ್ ಬೆಡ್, ಆಕ್ಸಿಜನ್ ಮತ್ತು ಸೂಕ್ತ ಚಿಕಿತ್ಸೆ ಸಿಗದೆ ಪ್ರಾಣ ಕಳೆದುಕೊಂಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಪ್ರತಿ ದಿನ ಸಾವಿರಕ್ಕೂ ಹೆಚ್ಚು ಸೋಂಕು ಪೀಡಿತರ ಪ್ರಕರಣಗಳು ದಾಖಲಾಗಿ ಮರಣ ಪ್ರಮಾಣದಲ್ಲೂ ಹೆಚ್ಚಳವಾಗುತ್ತಿದೆ. ಒಂದನೇ ಅಲೆಯಲ್ಲಿ ಇದ್ದಂತ ಹೋಮ್ ಕ್ವಾರಂಟೈನ್ , ಕಂಟೈನ್ಮೆಂಟ್ ಝೋನ್ ನಿರ್ಮಾಣ ಮುಂತಾದ ಕಠಿಣ ಪ್ರಕ್ರಿಯೆಗಳು ಈಗ ಕಾಣೆಯಾಗಿದ್ದು ಪರಿಸ್ಥಿತಿ ನಿರ್ವಹಿಸುವಲ್ಲಿ ಸರಕಾರ ಮತ್ತು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಹೇಳಿದ್ದಾರೆ. ಈಗಾಗಲೇ ವೆಂಟಿಲೇಟರ್ ಬೆಡ್ ಗಳಿಗೆ ಜನರು ಪರದಾಡುತ್ತಿದ್ದಾರೆ. ಹಳ್ಳಿಗಳಲ್ಲಿ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ಸೋಂಕು ಪೀಡಿತರಿಗೆ ಮನೆಯಲ್ಲಿಯೇ ಹೊಂ ಐಸೋಲೇಷನ್ ಪಡೆಯಲು ವ್ಯವಸ್ಥೆ ಮಾಡಿರುವುದರಿಂದ ಕೆಲವು ಸೋಂಕಿತರು ರಾಜಾರೋಷವಾಗಿ ತಿರುಗಾಡಿ, ಮನೆಮಂದಿಯ ಜೊತೆಗೆ ಅಕ್ಕಪಕ್ಕದ ಮನೆಯವರಿಗೂ ಸೋಂಕು ಹರಡಿಸುತ್ತಿರುವುದು ಸೋಂಕಿತರ ಪ್ರಮಾಣ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ, ಸರ್ಕಾರದ ನಿರ್ದೇಶನದಂತೆ ಕೋವಿಡ್ -19ರ ಪ್ರಕರಣಗಳನ್ನು ತಡೆಗಟ್ಟುವುದು, ಪರೀಕ್ಷೆ, ಕ್ವಾರಂಟೈನ್, ನಿಯಂತ್ರಣ, ಚಿಕಿತ್ಸೆ, ಹಾಗೂ ಲಸಿಕಾಕರಣಗಳನ್ನು ಪರಿಣಾಮಕಾರಿಯಾಗಿ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವಾರು ಕೋವಿಡ್ ಕಾರ್ಯಪಡೆಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಹೋಮ್ ಐಸೋಲೇಷನ್ ನಲ್ಲಿರುವ ವ್ಯಕ್ತಿಗಳ ಮನೆಗಳನ್ನು ಭೇಟಿ ಮಾಡಿ, ಹೋಮ್ ಐಸೋಲೇಷನ್ ನ್ನು ಕಡ್ಡಾಯವಾಗಿ ಪಾಲಿಸುತ್ತಿರುವ ಬಗ್ಗೆ, ಪ್ರತ್ಯೇಕ ಕೊಠಡಿ, ಪ್ರತ್ಯೇಕ ಶೌಚಾಲಯ ಹೊಂದಿರುವ ಬಗ್ಗೆ, ಆರೋಗ್ಯದ ಏರುಪೇರುಗಳ ಬಗ್ಗೆ, ಅಗತ್ಯವಿದ್ದಲ್ಲಿ ಸ್ಥಳೀಯವಾಗಿ ವೈದ್ಯಾಧಿಕಾರಿಗಳ ಮೂಲಕ ಔಷಧೋಪಚಾರ ನೀಡುವ, ತಾಲೂಕು ಕೋವಿಡ್ ಕೇರ್ ಸೆಂಟರ್ ಗೆ ಆಥವಾ ಆಸ್ಪತ್ರೆಗೆ ಸ್ಥಳಾಂತರ ಮಾಡುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕ್ರಮಗಳನ್ನು ಹಾಗೂ ಕೋವಿಡ್ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಪ್ರತ್ಯೇಕ ಕೊಠಡಿಯನ್ನು ಹೊಂದಿಲ್ಲದೇ ಇರುವ ಹಾಗೂ ಪ್ರತ್ಯೇಕ ಶೌಚಾಲಯ ಹೊಂದದೇ ಇರುವ ವ್ಯಕ್ತಿಗಳನ್ನು , ಕಾರ್ಯಪಡೆಯ ಸಹಕಾರದಲ್ಲಿ ಕಡ್ಡಾಯವಾಗಿ ಕೋವಿಡ್ ಕೇರ್ಸೆಂ ಟರ್ ಗೆ ಸ್ಥಳಾಂತರಗೊಳ್ಳಲು ಕೋರಲಾಗಿದೆ. ಸದರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19ರ ಎರಡನೇ ಅಲೆಯ ಸಾಂಕ್ರಾಮಿಕ ರೋಗವು ತೀವ್ರ ಸ್ವರೂಪವನ್ನು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಹೊರಡಿಸಲಾದ ಸರ್ಕಾರದ ಆದೇಶದಂತೆ ಈ ಕೆಳಕಂಡ ಸೇರ್ಪಡೆ ಮಾಡಿ , ಜಿಲ್ಲಾಧಿಕಾರಿ ಜಿ .ಜಗದೀಶ್ ಆದೇಶಿಸಿದ್ದಾರೆ. ಕೈಗಾರಿಕೆಗಳು / ಕೈಗಾರಿಕಾ ಸ್ಥಾಪನೆ / ಉತ್ಪಾದನಾ ಘಟಕಗಳ ಕಾರ್ಯಾಚರಣೆಗೆ ಸಂಬಂಧಿಸಿ 11 ನೇ ಷರತ್ತಿಗೆ ಉಪ-ಷರತ್ತುಗಳನ್ನು (ಎಫ್) ಮತ್ತು (ಜಿ) ಸೇರಿಸಲಾಗಿದೆ. ಉಪ-ಷರತ್ತು (ಎಫ್) ಉಕ್ಕಿನ ಉದ್ಯಮದ ನಿರಂತರ ಕಾರ್ಯಾಚರಣೆಗೆ ಅಗತ್ಯವಾದ ಡೊಲೊಮೈಟ್, ಸ್ಫಟಿಕ ಶಿಲೆ ಮತ್ತು ಕಚ್ಚಾ ವಸ್ತುಗಳ ((Dolomite, Quartz and other fluxes)) ಗಣಿಗಾರಿಕೆ ಮತ್ತು ಸಾಗಣೆಗೆ ಅನುಮತಿಸಲಾಗಿದೆ. ಉಪ-ಷರತ್ತು (ಜಿ) ರಸ್ತೆ ಕಾಮಗಾರಿ , ಮಾನ್ಸೂನ್ ಪೂರ್ವದ ಕೆಲಸಗಳು ಮತ್ತು ಕೊರೆತದಿಂದ ಉಂಟಾದ ಹಾನಿಯ ಮರುನಿರ್ಮಾಣ ಕಾಮಗಾರಿಗಳಿಗೆ ಅವಶ್ಯವಿರುವ ನಿರ್ಮಾಣ ಸಾಮಗ್ರಿಗಳಿಗೆ ಸಂಬಂಧಿಸಿದ ಕ್ವಾರಿಗಳ (quarries)ಗಣಿಗಾರಿಕೆ ಅನುಮತಿಸಲಾಗಿದೆ. ನಿರ್ಮಾಣ ಚಟುವಟಿಕೆಗಳಿಗೆ ಸಂಬಂಧಿಸಿದ 12 ನೇ ಷರತ್ತುಗೆ ಈ ಕೆಳಕಂಡ…
