Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಯಾವುದೇ ರೀತಿಯ ಪಕ್ಷಿಗಳಲ್ಲಿ ಇದುವರೆಗೆ ಹಕ್ಕಿಜ್ವರದ ಸೋಂಕು ಕಂಡು ಬಂದಿರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಹಕ್ಕಿಜ್ವರದ ಕುರಿತು ಆತಂಕ ಪಡುವ ಅಗತ್ಯವಿಲ್ಲ. ಆದರೆ ಹಕ್ಕಿ ಜ್ವರ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಕ್ಕಿ ಜ್ವರದ ಕುರಿತು ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಯಲ್ಲಿ ಮಾತನಾಡಿದರು. ಹಕ್ಕಿ ಜ್ವರವು ಕೇರಳ, ಗುಜರಾತ್ ಮುಂತಾದ ರಾಜ್ಯಗಳಲ್ಲಿ ಕಂಡುಬಂದಿದೆ ಎಂದು ವರದಿಯಾದ ಹಿನ್ನಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಬೇಕು. ಪಶುಪಾಲನೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಕೋಳಿ ಫಾರಂಗಳಿಗೆ ಭೇಟಿ ನೀಡಿ ಕೋಳಿಗಳ ಆರೋಗ್ಯದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಡಿಸಿ ಸೂಚಿಸಿದರು. ಹಕ್ಕಿ ಜ್ವರವು ವೈರಾಣುವಿನಿಂದ ಕಾಣಿಸಿಕೊಳ್ಳಲಿದ್ದು, ಈ ಸೋಂಕುಗಳಿಗೆ ಮಕ್ಕಳು ಹಾಗೂ ವಯಸ್ಕರು ಹೆಚ್ಚಾಗಿ ಒಳಗಾಗುತ್ತಾರೆ. ಸೋಂಕಿನಿಂದ ಜ್ವರ, ಶೀತ, ತಲೆನೋವು, ಮೈಕೈನೋವು, ಗಂಟಲು ನೋವು, ಕೆಮ್ಮು, ಉಸಿರಾಟದ ತೊಂದರೆಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ವಿಧಾನಪರಿಷತ್ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಹಿರಿಯ ಸಹೋದರ ನಿವೃತ್ತ ವಿಜಯಾ ಬ್ಯಾಂಕ್ ಡಿಜಿಎಂ ಕೆ. ಸುಧಾಕರ ಶೆಟ್ಟಿ (81) ಅಲ್ಪಕಾಲದ ಅಸೌಖ್ಯದಿಂದಾಗಿ ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶುಕ್ರವಾರ ರಾತ್ರಿ ಹೈಕಾಡಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಿತು. ಮೃತರು ಪತ್ನಿ ಸುಜಯಾ ಎಸ್.ಶೆಟ್ಟಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಗತಿಪರ ಕೃಷಿಕ ಉದ್ಯಮಿ ಅಮಾಸೆಬೈಲು ಕಿರಣ್ ಕೊಡ್ಗಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷಗಾಗಿ ನೇಮಕಗೊಂಡಿದ್ದಾರೆ. ರಾಜ್ಯ ಮೂರನೇ ಹಣಕಾಸು ಅನುಷ್ಠಾನ ಸಮಿತಿ ಮಾಜಿ ಅಧ್ಯಕ್ಷ ಎ.ಜಿ.ಕೊಡ್ಗಿ ಪುತ್ರರಾಗಿದ್ದು, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಶಿಪಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಿರಣ್ ಕೊಡ್ಗಿ ಅವರನ್ನು ನೇಮಕ ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ಲಸಿಕೆಯನ್ನು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕಿದ್ದು, ಈ ಕುರಿತಂತೆ ಜಿಲ್ಲೆಯಲ್ಲಿ ಸಂಪೂರ್ಣ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು ಶುಕ್ರವಾರ ಉಡುಪಿಯ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪ÷ತ್ರೆಯಲ್ಲಿ ನಡೆದ ಕೋವಿಡ್-19 ಲಸಿಕಾ ಕಾರ್ಯಕ್ರಮದ ಡ್ರೈರನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೋವಿಡ್ ಲಸಿಕೆಯನ್ನು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ನೀಢಬೇಕಿದ್ದು, ಇದಕ್ಕಾಗಿ ಜಿಲ್ಲೆಯ 105 ಸರಕಾರಿ ಮತ್ತು 762 ಖಾಸಗಿ ಆರೋಗ್ಯ ಸಂಸ್ಥೆಗಳ, 5688 ಸರಕಾರಿ ಮತ್ತು 13874 ಖಾಸಗಿ ಆರೋಗ್ಯ ಸಿಬ್ಬಂದಿ ಸೇರಿದಂತೆ ಒಟ್ಟು 19562 ಫಲಾನುಭವಿಗಳನ್ನು ನೊಂದಣಿ ಮಾಡಿದ್ದು, ಇವರಿಗೆ ಲಸಿಕೆ ನೀಡಲು ಸಂಪೂರ್ಣ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಲಸಿಕೆ ನೀಡುವ ಸಿಬ್ಬಂದಿಗಳಿಗೆ ತರಬೇತಿ ಹಾಗೂ ಅಗತ್ಯ ಕೊಠಡಿಗಳ ನಿರ್ಮಾಣ ಮಾಡಿಕೊಂಡಿದ್ದು, ಲಸಿಕೆ ಸಾಗಾಟ, ವಿತರಣೆಗೆ ಅಗತ್ಯ ಯೋಜನೆಗಳನ್ನೂ ಸಹ ರೂಪಿಸಲಾಗಿದೆ ಎಂದು ಜಿ.ಜಗದೀಶ್ ಹೇಳಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಫೈವ್ ಕರ್ನಾಟಕ ಎನ್‌ಸಿಸಿ ನೇವಲ್ ಯುನಿಟ್ ಮಂಗಳೂರು ಹಾಗೂ ಆಳ್ವಾಸ್ ಕಾಲೇಜಿನ ಎನ್‌ಸಿಸಿ ನೇವಲ್ ವಿಂಗ್‌ನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಐದು ದಿನದ ಕೆಡೆಟ್ ಕ್ಯಾಂಪ್‌ನ ಸಮಾರೋಪ ಸಮಾರಂಭ ಜರುಗಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಶಿಸ್ತಿನ ವಾತಾವರಣ ಕಠಿಣ ಸನ್ನಿವೇಶವೆಂದು ಭಾವಿಸದೆ, ಅದು ನಮ್ಮ ಭವಿಷ್ಯವನ್ನು ಸತ್ಪತದಲ್ಲಿ ಕೊಂಡೊಯ್ಯಲು ಇರುವ ಉತ್ತಮ ಮಾರ್ಗವೆಂದು ತಿಳಿಯಿರಿ ಎಂದು ತಿಳಿಸಿದರು. ಸಾವಧಾನ್ ಎನ್ನುವ ಪೇರೆಡ್ ಕಾಷನ್ ಅಲ್ಪಕಾಲಿಕವಾಗಿರಬಾರದು. ಅದು ದೀರ್ಘ ಕಾಲದವರೆಗೆ ನಮ್ಮ ಮನದಲ್ಲಿರಬೇಕು. ಜೀವನದಲ್ಲಿ ಯಾವುದನ್ನು ಕಡೆಗಣಿಸದೆ, ಸಿಕ್ಕಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದರು. ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಬಾಲಕೃಷ್ಣ ಮಾತನಾಡಿ ವಿದ್ಯಾರ್ಥಿಗಳು ನಮ್ಮ ದೇಶದ ಆಸ್ತಿ ನಿಮ್ಮ ವಿಚಾರಗಳನ್ನ ಇನ್ನು ಎತ್ತರಕ್ಕೆ ಬೆಳೆಸಿಕೊಳ್ಳುವಂತರಾಗಿ. ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎನ್‌ಸಿಸಿ ನೇವಲ್ ವಿಂಗ್‌ನ ವಾರ್ಷಿಕ ನಿಯತಕಾಲಿಕೆ ನಾವಿಕ 2020ಬಿಡುಗಡೆ ಮಾಡಲಾಯಿತು. ಎನ್‌ಸಿಸಿ ನೇವಲ್ ವಿಂಗ್‌ನಲ್ಲಿ ಉತ್ತಮ ಕಾರ‍್ಯಕ್ಷಮತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಯಕ್ಷ ಕಲೆಯ ಸಂಪ್ರದಾಯ ಬಿಟ್ಟು, ಯಕ್ಷಗಾನದ ಮೂಲಕ್ಕೆ ಯಾವುದೇ ಧಕ್ಕೆ ಬಾರದಂತೆ ನೋಡಿಕೊಳ್ಳುವ ಜವಾಬ್ದಾರಿ ಕಲಾವಿದ ಹಾಗೂ ಪ್ರೇಕ್ಷಕರ ಕೈಯಲ್ಲಿದೆ ಎಂದು ಸಾಲಿಗ್ರಾಮ ಯಕ್ಷಗಾನ ಮೇಳದ ಸಂಚಾಲಕ ಎಚ್.ಶ್ರೀಧರ್ ಹಂದೆ ಹೇಳಿದರು. ಕೋಟ ಕದ್ರಿಕಟ್ಟು ರಂಗ ಚಾವಡಿಯಲ್ಲಿ ಕೋಟ ಯಕ್ಷಾತರಂಗ ವ್ಯವಸಾಯಿ ಯಕ್ಷ ತಂಡದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಸಹಕಾರದಲ್ಲಿ ನಡೆದ ಯಕ್ಷೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಕ್ಷಗಾನ ಕಲಾವಿದರ ಶಾಲೆ, ಇನ್ನೊಂದು ವಿದ್ಯೆ ಕಲಿವ ಶಾಲೆ. ಇವೆರಡೂ ಜೀವನದ ಮೌಲ್ಯಗಳನ್ನು ತಿಳಿಸುವ ಶಾಲೆ. ಹಿಂದೆ ವಿದ್ಯೆ ಕಡಿಮೆ ಸಿಕ್ಕರೂ ಯಕ್ಷಗಾನದ ಮೂಲಕ ತಮ್ಮ ಬೆಳವಣಿಗೆ ಕಂಡಿದ್ದಾರೆ.ಆದರೆ, ಇಂದು ಅದು ಕಾಣಸಿಗುತ್ತಿಲ್ಲ. ಯಕ್ಷಕಲೆಯ ಸಂಪ್ರದಾಯ ಬದ್ಧ ಅಳಿದು ಹಾಕುವ ಸ್ಥಿತಿಗೆ ತಂದೊಡ್ಡಿದ್ದಾರೆ. ಕಲಾವಿದ ತಪ್ಪು ಮಾಡಿದಾಗ ಅದನ್ನು ತಿದ್ದುವ ಕಾರ್ಯವಾಗಬೇಕು ಎಂದರು. ಯಕ್ಷಗಾನದ ಸಂಪ್ರದಾಯ ಬಿಟ್ಟು ಹೊಸ ರೂಪದ ಕಡೆ ಮುಖ ಮಾಡುತ್ತಿರುವುದು ವಿಪರ್ಯಾಸವೇ ಸರಿ. ಯುವ ಮನಸ್ಸುಗಳಿಗೆ ಸಂಪ್ರದಾಯದಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ನಿಯಮದಂತೆ ಆಹಾರ ಧಾನ್ಯ ಪಡೆಯುತ್ತಿರುವ (ಬಿಪಿಎಲ್, ಎಎವೈ & ಎಪಿಎಲ್) ಕಾರ್ಡುದಾರರು ಹೊಸದಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಕಾರ್ಡಿನಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿಯನ್ನು ಅಪ್ಲೋಡ್ ಮಾಡುವ ಕಾರ್ಯ ಜನವರಿ 1 ರಿಂದ ಪ್ರಾರಂಭಿಸಲಾಗಿದೆ. ತಂತ್ರಾಂಶದಲ್ಲಿ ಮಾಹಿತಿ ಅಪ್‌ಲೋಡ್ ಮಾಡುವಾಗ ಪಡಿತರ ಕಾರ್ಡಿನ ಕುಟುಂಬದ ಹಿರಿಯ ಮಹಿಳಾ ಸದಸ್ಯರನ್ನು ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಬೇಕು ಮತ್ತು ಹೊಸ ಕುಟುಂಬದ ಮುಖ್ಯಸ್ಥರೊಂದಿಗೆ (ಹಿರಿಯ ಮಹಿಳಾ ಸದಸ್ಯ) ಇತರೆ ಸದಸ್ಯರ ಸಂಬಂಧದ ವಿವರಗಳನ್ನು ಹಾಗೂ ಪಡಿತರ ಚೀಟಿದಾರರ ಜಾತಿಯ ವಿವರವನ್ನು (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಇತರೆ) ಜಾತಿ ಪ್ರಮಾಣ ಪತ್ರ ವಿವರಗಳನ್ನು ಸಹ ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಜಾತಿಯವರಾಗಿದ್ದಲ್ಲಿ ಸದ್ರಿ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರದ ಪ್ರತಿಯೊಂದಿಗೆ ನ್ಯಾಯಬೆಲೆ ಅಂಗಡಿಗೆ ಬರಬೇಕಾಗುವುದು. ನ್ಯಾಯಬೆಲೆ ಅಂಗಡಿ ಮಾಲಿಕರು ಸದ್ರಿ ಜಾತಿ ಪ್ರಮಾಣ ಪತ್ರದ ಸಂಖ್ಯೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕ.ರಾ.ರ.ಸಾ.ನಿಗಮದ ವತಿಯಿಂದ ಮಂಗಳೂರಿನಿಂದ ಕುಮಟ ಮಾರ್ಗದಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವೋಲ್ವೋ ಸಾರಿಗೆ ಸೌಲಭ್ಯವನ್ನು ಜನವರಿ 4 ರಿಂದ ಪ್ರಾರಂಭಿಸಲಾಗಿದೆ. ಮಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಟು ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಹೊನ್ನಾವರ ಮಾರ್ಗವಾಗಿ ರಾತ್ರಿ 9.30 ಕ್ಕೆ ಕುಮಟಾ ತಲುಪಲಿದೆ. ಕುಮಟಾದಿಂದ ಮುಂಜಾನೆ 5.30 ಕ್ಕೆ ಹೊರಟು ಹೊನ್ನಾವರ, ಭಟ್ಕಳ, ಬೈಂದೂರು, ಕುಂದಾಪುರ, ಉಡುಪಿ ಮಾರ್ಗವಾಗಿ ಬೆಳಗ್ಗೆ 9.30 ಕ್ಕೆ ಮಂಗಳೂರು ತಲುಪಲಿದೆ. ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್‌ಒಪಿರಲ್ಲಿಯ ನಿರ್ದೇಶನಗಳಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗ್ರೌಂಡ್ ರೈಡರ್ಸ್ ಗಂಗೊಳ್ಳಿ ಆಶ್ರಯದಲ್ಲಿ ಇಲ್ಲಿನ ಸ.ವಿ.ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ಬೈಂದೂರು ವಲಯ ಮಟ್ಟದ ಲೀಗ್ ಮಾದರಿಯ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ನಡೆಯಿತು. ತಾಲೂಕು ಗಾಣಿಗ ಸಂಘದ ಉಪಾಧ್ಯಕ್ಷ ಪ್ರಮೋದ ಗಾಣಿಗ ಪಂದ್ಯಾಟವನ್ನು ಉದ್ಘಾಟಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯ ಸುರೇಂದ್ರ ಖಾರ್ವಿ, ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಹರೀಶ ಖಾರ್ವಿ, ಗ್ರಾಪಂ ಸದಸ್ಯೆ ಶಾಂತಿ ಖಾರ್ವಿ, ಸತೀಶ್ ಜಿ., ಗೋಪಾಲ ಚಂದನ ಮತ್ತಿತರರು ಉಪಸ್ಥಿತರಿದ್ದರು. ಗಂಗೊಳ್ಳಿಯ ವಿಶ್ವಾಸ ಗಂಗೊಳ್ಳಿ ತಂಡ ಎವರ್‌ಗ್ರೀನ್ ವಿಶ್ವಸಾಗರ ಗಂಗೊಳ್ಳಿ ತಂಡವನ್ನು ಸೋಲಿಸಿ ಗ್ರೌಂಡ್ ರೈಡರ್ಸ್ ಟ್ರೋಫಿ – 2021ನ್ನು ಗೆದ್ದುಕೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾದ್ಯಕ್ಷೆ ಪ್ರೇಮಾ ಸಿ.ಪೂಜಾರಿ ಮತ್ತುಉಡುಪಿ ಜಿಲ್ಲಾ ಆಯುಷ್ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷೆ ಡಾ.ವೀಣಾ ಕಾರಂತ ವಿಜೇತ ತಂಡಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಬ್ಯಾಂಕ್ ಹಂಗಳೂರು ಶಾಖೆಯಲ್ಲಿ ಸೇವಾ ನಿವೃತ್ತಿ ಹೊಂದಿದ ನಾಗರಾಜ ಹೊಳ್ಳ ಇವರನ್ನು ಶಾಖೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡೆಗೆ ನೀಡಲಾಯಿತು. ಈ ಸಂದರ್ಭದಲ್ಲಿ ಮ್ಯಾನೇಜರ್ ರವೀಂದ್ರ ಅಧ್ಯಕ್ಷತೆ ವಹಿಸಿದ್ದರು, ನಾಗರಾರಾಜ ಹೊಳ್ಳ, ಜಯಂತಿ, ಗೀತಾ ಸುಷ್ಮಾ, ಕಲ್ಪನ, ಉಷಾ, ಕೃಷ್ಣ ನಾಯಕ್ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅಸಿಸ್ಟೆಂಟ್ ಮ್ಯಾನೇಜರ್ ಪ್ರಜ್ವಲ್ ಸ್ವಾಗತ ಹಾಗೂ ವಂದನೆಗೈದರು.

Read More