ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಉಡುಪಿಗೊಂದು ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯತೆಯನ್ನು ಮನಗೊಂಡ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಳೆದ ಹಲವು ವರ್ಷಗಳಿಂದ ಕಾಲೇಜು ತೆರೆಯಬೇಕೆಂದು ಒತ್ತಾಯಿಸುತ್ತಾ ಬಂದಿದೆ. ಕಳೆದ ಬಾರಿ ಸಂಸದರಿಂದ ಉತ್ತಮ ಪ್ರತಿಕ್ರಿಯೆ ಬಂದಿತ್ತಾದರೂ ಭರವಸೆ ಈಡೇರಲಿಲ್ಲ. ಶೀಘ್ರವೇ ಸರ್ಕಾರಿ ವೈದ್ಯಕೀಯ ಕಾಲೇಜು ತೆರೆಯುವಂತೆ ಶಾಸಕರ ಬಳಿ ಎಬಿವಿಪಿ ಕಾರ್ಯಕರ್ತರು ಮನವಿ ಸಲ್ಲಿಸಿದರು. ಮನವಿಗೆ ಉತ್ತಮವಾಗಿ ಸ್ಪಂದಿಸಿದ ಶಾಸಕರು ಪಿಪಿಪಿ ಮಾಡೆಲ್ ನ ಅಡಿಯಲ್ಲಿ ವೈದ್ಯಕೀಯ ಕಾಲೇಜು ತೆರೆಯಲು ಅವಕಾಶವಿದ್ದು , ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಹಾಗೆಯೆ ಸರ್ಕಾರಿ ನರ್ಸಿಂಗ್ ಕಾಲೇಜನ್ನೂ ಉಡುಪಿಯಲ್ಲಿ ತೆರೆಯುವುದಕ್ಕೆ ತಮ್ಮ ಪ್ರಾಮಾಣಿಕ ಪ್ರಯತ್ನಪಡುವುದಾಗಿ ಶಾಸಕರು ಆಶ್ವಾಸನೆ ನೀಡಿದರು. ಈ ಸಂದರ್ಭದಲ್ಲಿ ಎಬಿವಿಪಿ ಹಿರಿಯ ಕಾರ್ಯಕರ್ತರಾದ ಡಾ. ಶಿವಾನಂದ ನಾಯಕ್ , ನಗರ ಕಾರ್ಯದರ್ಶಿ ಸುಮುಖ ಭಟ್ ಸಹಕಾರ್ಯದರ್ಶಿ ಆಕಾಶ್ ವಿದ್ಯಾರ್ಥಿ ಪ್ರಮುಖರಾದ ವಿಕಾಸ್, ಚಿನ್ಮಯ ಹೆಗ್ಡೆ, ಗಿರೀಶ್ ಉಪಸ್ಥಿತರಿದ್ದರು. ಇದನ್ನೂ ಓದಿ:…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಖಂಬದಕೋಣೆ ಗ್ರಾಮದ ಹಳಗೇರಿಯ ಸರ್ವೆ ನಂಬ್ರ 166/ಪಿ1ರಲ್ಲಿ ಸುಮಾರು 53 ಎಕ್ರೆ ದಟ್ಟಾರಣ್ಯ ಪ್ರದೇಶವನ್ನು ಪೊರಂಬೂಕು ಶೀರ್ಷಿಕೆಯಿಂದ ವಿರಹಿತಗೊಳಿಸಿ ಕೈಗಾರಿಕಾ ಉದ್ದೇಶಕ್ಕೆ ಬಳಸಲು ಈಗ ಇರುವ ಅರಣ್ಯ ನಾಶಕ್ಕೆ ಅವಕಾಶ ಕೊಡಬಾರದಾಗಿ ಹಳಗೇರಿ, ತೆಂಕಬೆಟ್ಟು, ಗುಮ್ಮಿತೋಟ, ಖಂಬದಕೋಣೆ, ನಾಗೂರು ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆ ಸದಸ್ಯರು ಖಂಬದಕೋಣೆ ಗ್ರಾಪಂ ಎದುರು ಶನಿವಾರ ಶಾಂತಿಯುತ ಪ್ರತಿಭಟನೆ ನಡೆಸಿದರು. ಈ ಪ್ರದೇಶವು 75ರಿಂದ 100ಮೀ ವರೆಗೆ ಎತ್ತರವಿರುವ ಕಿರು ಪರ್ವತವಾಗಿದ್ದು, ದಟ್ಟವಾದ ಅರಣ್ಯವಾಗಿದೆ. ಅನೇಕ ವನ್ಯಪ್ರಾಣಿ, ಪಕ್ಷಿಗಳಿಗೆ ಆಶ್ರಯತಾಣವಾಗಿದೆ. ಕೈಗಾರಿಕೆಗಾಗಿ ಈ ಸ್ಥಳದಲ್ಲಿರುವ ಎಲ್ಲಾ ಮರಗಳನ್ನು ಕಟಾವು ಮಾಡಿದರೆ ಇದರಿಂದ ಅವಲಂಬಿತವಾದ ಕೃಷಿ ಕುಟುಂಬಗಳಿಗೆ ತೊಂದರೆಯಾಗಲಿದೆ. ಅಲ್ಲದೇ ಪ್ರಕೃತಿದತ್ತವಾದ ಈ ಗುಡ್ಡವನ್ನು ಸಮತಟ್ಟು ಮಾಡುವುದರಿಂದ ಭೂಕುಸಿತದಂತಹ ನೈಸರ್ಗಿಕ ವಿಕೋಪದ ಸಾಧ್ಯತೆಗಳಿವೆ. ಈ ಭಾಗದ ಜನರ ಜೀವನಾಡಿಯಾಗಿರುವ ಗುಡ್ಡವು ಈ ಭಾಗದ ಜನರ ದೈನಂದಿನ ಜೀವನಕ್ಕೆ ತುಂಬಾ ಉಪಯುಕ್ತವಾಗಿದೆ. ಜೀವರಕ್ಷಕ ಗುಡ್ಡದ ಅರಣ್ಯ ನಾಶಮಾಡಿ ಕೈಗಾರಿಕಾ ಕೇಂದ್ರಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಣದ ವಿಷಯದಲ್ಲಿ ರಾಜ್ಯದಲ್ಲೇ ಸುಪ್ರಸಿದ್ಧವಾದ ನಮ್ಮ ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಡೆಸಿದ ಹೋರಾಟದ ಪರಿಣಾಮವಾಗಿ ಸರಕಾರದ ಮೇಲೆ ಉಂಟಾದ ಒತ್ತಡದಿಂದಾಗಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಈ ವರ್ಷದ ವೇಳೆಗೆ ಪ್ರಾರಂಭವಾಗಲಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಡಾ. ಸುಧಾಕರ್ ಅವರು ಪರಿಪೂರ್ಣವಾಗಿ ಸರ್ಕಾರದ ಅಧೀನದಲ್ಲಿ ಕಾಲೇಜು ಸ್ಥಾಪಿಸುವ ಬದಲಾಗಿ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸುವ ಕುರಿತು ಹೇಳಿದ್ದಾರೆ ಆದರೆ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ಸ್ವೀಕೃತವಲ್ಲ ಎಂದು ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ಆಗ್ರಹಿಸಿದೆ. ಜಿಲ್ಲೆಯ ಜನರ ಬೇಡಿಕೆಯ ಅನುಸಾರವಾಗಿ ಪರಿಪೂರ್ಣವಾದ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಒತ್ತಾಯಿಸುತ್ತೇವೆ. ನಮ್ಮ ಬೇಡಿಕೆ ಈಡೇರಿಸುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಮತ್ತು ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜನ್ನು ನಾವು ಸ್ವೀಕರಿಸುವುದಿಲ್ಲ. ಜಿಲ್ಲೆಯ ಜನರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಮಾಹಿತಿ ನೀಡಿ ಮಾತನಾಡಿದ ಗಂಗೊಳ್ಳಿ ಕ್ಲಸ್ಟರ್ನ ಸಮೂಹ ಸಂಪನ್ಮೂಲ ವ್ಯಕ್ತಿ ಸೌಪರ್ಣಿಕಾ, ಕೋವಿಡ್-19 ಹಿನ್ನಲೆಯಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಅತ್ಯಂತ ಜಾಗರೂಕತೆಯಿಂದ ಯಶಸ್ವಿಯಾಗಿ ನಡೆಸಬೇಕಾದ ಜವಾಬಾರಿ, ಹೊಣೆಗಾರಿಕೆ ಎಲ್ಲಾ ಶಿಕ್ಷಕರ ಮೇಲಿದೆ. ಪರೀಕ್ಷೆ ಸಮಯದಲ್ಲಿ ಕೈಗೊಳ್ಳಬೇಕಾದ ಸುರಕ್ಷತೆಗಳ ಬಗ್ಗೆ ಮಾಹಿತಿ ನೀಡಿದ ಅವರು ಪರೀಕ್ಷೆ ಸಮಯದಲ್ಲಿ ಮಕ್ಕಳಲ್ಲಿ ಧೈರ್ಯ, ಆತ್ಮವಿಶ್ವಾಸ ತುಂಬಬೇಕು ಎಂದರು. ಪ್ರಶ್ನೆ ಪತ್ರಿಕೆ ವಿತರಣೆ, ಸಂಗ್ರಹ ಹಾಗೂ ಪರೀಕ್ಷೆ ಸಿದ್ಧತೆಗಳ ಬಗ್ಗೆ ಕಾಲೇಜಿನ ಗುಮಾಸ್ತ ಶ್ರೀಧರ ಗಾಣಿಗ ಮಾಹಿತಿ ನೀಡಿದರು. ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಉಮೇಶ ಕರ್ಣಿಕ, ಎಸ್ಸೆಸ್ಸೆಲ್ಸಿ ಪರೀಕ್ಷೆಯ ಯಶಸ್ಸಿಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿ, ಪರೀಕ್ಷೆಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಸಹಕರಿಸುವಂತೆ ಮನವಿ ಮಾಡಿದರು. ಕೊಠಡಿ ಮೇಲ್ವಿಚಾರಕರು, ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಸನತ್ ಬಳಗಾರ ಕೊಲ್ಲೂರು ಪುನರಾಯ್ಕೆಯಾಗಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯನವರ ಆದೇಶದ ಮೇರೆಗೆ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಚ್. ಎಮ್ ಜ್ಯೋತಿಷ್ ಅನುಮತಿಯ ಮೇರೆಗೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್ ಅವರು ಸನತ್ ಬಳಗಾರ ಕೊಲ್ಲೂರು ಅವರನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೇಂದ್ರ ಸರ್ಕಾರದ ಮಟ್ಟದಲ್ಲಿ ಮಂಜೂರಾತಿಗೆ ಬಾಕಿ ಇರುವ ಜಿಲ್ಲೆಯ ವಿವಿಧ ಯೋಜನೆ ಮತ್ತು ಕಾಮಗಾರಿಗಳ ಪಟ್ಟಿಯನ್ನು ಕೂಡಲೇ ಸಲ್ಲಿಸಿ. ಈ ಬಗ್ಗೆ ಕೇಂದ್ರದ ಸಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ, ಈ ಬಗ್ಗೆ ಶೀಘ್ರದಲ್ಲಿ ಮಂಜೂರುಗೊಳಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ವೀಡಿಯೋ ಸಭೆಯ ಮೂಲಕ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾನ್ಸೂನ್ ಹಾನಿಯ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಜಿಲ್ಲೆಯಲ್ಲಿ ಸಾಗರ ಮಾಲಾ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳ ಬಗ್ಗೆ ವಿವರವಾದ ಮಾಹಿತಿ ನೀಡಿ.ಉಪ್ಪುಂದದಲ್ಲಿ 130 ಕೋಟಿರೂ.ವೆಚ್ಚದಲ್ಲಿ ಬಂದರು ನಿರ್ಮಾಣ ಕುರಿತಂತೆ ಕೇಂದ್ರ ಸಚಿವರೊಂದಿಗೆಚರ್ಚಿಸಲಾಗಿದೆ. ಕೇಂದ್ರದಲ್ಲಿ ಹೊಸ ಮೀನುಗಾರಿಕಾ ಮಸೂದೆ ಸಿದ್ಧವಾಗುತ್ತಿದ್ದು, ಈ ಬಗ್ಗೆ ಸಲಹೆ ಮತ್ತು ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸಲ್ಲಿಸಿ ಎಂದು ಸಚಿವೆ ಶೋಭಾಕರಂದ್ಲಾಜೆ ಹೇಳಿದರು. ಜಿಲ್ಲೆಯಲ್ಲಿಕೋವಿಡ್ 3ನೇ ಅಲೆ ಎದುರಿಸುವ ನಿಟ್ಟಿನಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಪಾಲನೆ ಕುರಿತು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾ.ಪಂ.ನ ನೂತನ ಕಟ್ಟಡ ಹಾಗೂ ಹೊಳೆತೋಟ ಅಂಗನವಾಡಿ ಕಟ್ಟಡದ ಉದ್ಘಾಟನೆ ಸಮಾರಂಭ ನಡೆಯಿತು. ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಸ್ಥಳೀಯಾಡಳಿತ ಕಾರ್ಯನಿರ್ವಹಿಸಬೇಕು. ಬಿಜೂರು ಶಾಲೆ ರಸ್ತೆಗೆ ಅನುದಾನ ಮಂಜೂರಾಗಿದ್ದು ಶೀಘ್ರದಲ್ಲಿ ಕಾಮಗಾರಿ ನಡೆಯಲಿದೆ. ಈ ಭಾಗದಲ್ಲಿ ಬಾಕಿ ಇರುವ 94ಸಿ ಸಮಸ್ಯೆಯನ್ನು ಪರಿಹರಿಸುವ ಪ್ರಯತ್ನ ನಡೆಯುತ್ತಿದೆ. ಬಿಜೂರು ಗ್ರಾ.ಪಂ.ನ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಹೆಚ್ಚು ಮನೆಗಳನ್ನು ನೀಡುವ ಭರವಸೆ ನೀಡಿದರು. ಗ್ರಾ.ಪಂ.ಅಧ್ಯಕ್ಷ ರಮೇಶ ವಿ.ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ಹೆರಿಯಣ್ಣ ರಾವ್ ಹೊಸ್ಕೋಟೆ, ಉದ್ಯಮಿ ಗೋವಿಂದಬಾಬು ಪೂಜಾರಿ ಬಿಜೂರು, ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ ಕುಮಾರ್ ಶೆಟ್ಟಿ, ರಾಜ್ಯ ಯೋಜನಾ ಆಯೋಗದ ಸದಸ್ಯೆ ಪ್ರಿಯದರ್ಶಿನಿ ದೇವಾಡಿಗ, ಜಿ.ಪಂ.ಮಾಜಿ ಸದಸ್ಯೆ ಗೌರಿ ದೇವಾಡಿಗ, ಖಂಬದಕೋಣೆ ರೈತರ ಸೇ.ಸ. ಸಂಘದ ನಿರ್ದೇಶಕರಾದ ರಘರಾಮ ಶೆಟ್ಟಿ, ಮಂಜು ದೇವಾಡಿಗ, ಕಂಚಿಕಾನ್ ಪುಂಡಲೀಕ ಕಿಣಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯಾರೋ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ, ತಾನು ಮಾಡದ ತಪ್ಪಿಗೆ ಸೌದಿ ಅರೇಬಿಯಾದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕುಂದಾಪುರ ಸಮೀಪದ ಬೀಜಾಡಿ ನಿವಾಸಿ ಹರೀಶ್ ಬಂಗೇರ ಶ್ರೀಘ್ರವೇ ಬಿಡುಗಡೆಗೊಂಡು ತಾಯ್ನಾಡಿಗೆ ಮರಳಲಿದ್ದಾರೆ ಎಂದು ಮಂಗಳೂರು ಅಸೋಸಿಯೆಶನ್ ಸೌದಿ ಅರೇಬಿಯಾ (ಎಂಎಸ್ಎ) ಅಶ್ಯಕ್ಷ ಸತೀಶ್ ಕುಮಾರ್ ತಿಳಿಸಿದ್ದಾರೆ. ಹರೀಶ್ ಬಂಗೇರ ಬಿಡುಗಡೆ ಭಾರತೀಯ ರಾಯಭಾರ ಕಚೇರಿ, ಇಂಡಿಯನ್ ಓವರ್ಸೀಸ್ ಪೋರಂ ಸಹಕರಿಸಿದೆ. ಪ್ರತ್ಯಕ್ಷ, ಪರೋಕ್ಷವಾಗಿ ಸಹಕರಿಸಿದ ಪ್ರತಿಯೊಬ್ಬರಿಗೂ ಅಸೋಸಿಯೆಶನ್ ಕೃತಜ್ಞತೆ ಸಲ್ಲಿಸುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹರೀಶ್ ಬಂಗೇರ ಅವರ ಬಿಡುಗಡೆಯ ನಿರೀಕ್ಷೆಯಲ್ಲಿದ್ದೇವೆ ಎಂದು ಅವರ ಬಂಧನವಾಂದಿನಿಂದ ಈವರೆಗೆ ಬಿಡುಗಡೆಯಾಗಿ ಸಾಕಷ್ಟು ಹೋರಾಟ ನಡೆಸಿಕೊಂಡು ಬಂದಿರುವ ಕೋಟೇಶ್ವರ ಗ್ರಾಪಂ ಸದಸ್ಯ ಅಂಕದಕಟ್ಟೆ ತಿಳಿಸಿದ್ದಾರೆ. ಬಿಜಾಡಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಅವರು ಬದುಕಿನ ತುತ್ತಿಗಾಗಿ ಹೊರ ದೇಶಕ್ಕೆ ಹೋದವರು. ಜೈಲು ಸೇರಿದ ಸಂಗತಿ ತಿಳಿದು ಅವರ ಊರಿನಲ್ಲಿರುವ ಪತ್ನಿ ಪುಟ್ಟ ಮಕ್ಕಳು ಸಂಕಷ್ಟಕ್ಕೆ ತುತ್ತಾಗಿದ್ದರು. ಮಾನವೀಯ ನೆಲೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಂಡ್ಸೆಯ ವಾತ್ಸಲ್ಯ ಕಾಂಪ್ಲೆಕ್ಸ್ನ ಪ್ರಥಮ ಮಹಡಿಯಲ್ಲಿ ಶ್ರೀಬ್ರಹ್ಮಶ್ರೀ ಸೌಹಾರ್ದ ಸಹಕಾರಿ ಶುಭಾರಂಭಗೊಂಡಿತು. ಜ್ಯೋತಿಷ್ಯ ವಿದ್ವಾನ್ ವೇ.ಮೂ. ರಾಮಕೃಷ್ಣ ಭಟ್ ಶಾರ್ಕೆ ಉದ್ಘಾಟಿಸಿದರು. ಶ್ರೀಬ್ರಹ್ಮಶ್ರೀ ಸೌಹಾರ್ದ ಸಹಕಾರಿ ಅಧ್ಯಕ್ಷ ಕೆ.ಬಸವರಾಜ್ ರಾಯಪ್ನಾಡಿ ಅಧ್ಯಕ್ಷತೆ ವಹಿಸಿದ್ದರು. ವಾತ್ಸಲ್ಯ ಕಾಂಪ್ಲೆಕ್ಸ್ ಮಾಲೀಕ ಆನಂದ ಶೆಟ್ಟಿ ಠೇವಣಿ ಪತ್ರ ಬಿಡುಗಡೆಗೊಳಿಸಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಆಡಳಿತ ಧರ್ಮದರ್ಶಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಇ-ಬ್ಯಾಂಕ್ ಸಾಫ್ಟ್ವೇರ್ಗೆ ಚಾಲನೆ ನೀಡಿದರು. ಭದ್ರತಾ ಕೋಶವನ್ನು ನ್ಯಾಯವಾದಿ ಉಮೇಶ್ ಶೆಟ್ಟಿ ಶಾನ್ಕಟ್ಟು ಉದ್ಘಾಟಿಸಿದರು. ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ವಂಡ್ಸೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧಕ್ಷ ಎನ್. ಮಂಜಯ್ಯ ಶೆಟ್ಟಿ ಸಬ್ಲಾಡಿ, ಮುಂಬಯಿ ಉಸ್ಯಮಿ ಚಂದ್ರಶೇಖರ ಹೆರಿಯಣ್ಣ ನಾಯ್ಕ್ ವಂಡ್ಸೆ, ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ವಿ. ಸುಧೀರ್ ಕುಮಾರ್ ಶೆಟ್ಟಿ, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ಆಲೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬ್ಯಾಂಕಿಂಗ್ ಸೌಲಭ್ಯವನ್ನು ಕೃಷಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ಮೂಲಕ ನೀಡಲಾಗುತ್ತಿದೆ. ಕೃಷಿಕರಿಗೆ ಆರ್ಥಿಕ ಸಹಕಾರದ ಜೊತೆಗೆ ಸರಳ ಬ್ಯಾಂಕಿಂಗ್ ವಿಧಾನ ಇನ್ನಷ್ಟು ಅನುಕೂಲವಾಗುತ್ತದೆ ಎಂದು ಕುಂದಾಪುರ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಹೇಳಿದರು ಅವರು ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ಮಿತ ಬೈಂದೂರು ಶಾಖೆಯ ನವೀಕೃತ ಕಛೇರಿಯನ್ನು ಉದ್ಘಾಟಿಸಿ ಈ ಮಾತುಗಳನ್ನಾಡಿದರು. ಈ ಸಂದರ್ಭ ಸಂಘದ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ,ಉಪಾಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಆಡಳಿತ ಮಂಡಳಿ ನಿರ್ದೇಶಕರಾದ ಎಂ. ಮೋಹನ್ ದಾಸ್ ಶೆಟ್ಟಿ, ಎಸ್. ರಾಜು ಪೂಜಾರಿ, ಕೆ.ಸುಧಾಕರ ಶೆಟ್ಟಿ, ಕೆ. ಭುಜಂಗ ಶೆಟ್ಟಿ, ಕೆ. ಮೋಹನ ಪೂಜಾರಿ, ಆನಂದ ಬಿಲ್ಲವ, ರವಿ ಗಾಣಿಗ, ಪ್ರಭಾಕರ ಶೆಟ್ಟಿ, ಎಸ್. ಜಯರಾಮ ಶೆಟ್ಟಿ, ಎಚ್. ದೀನಪಾಲ್ ಶೆಟ್ಟಿ, ಎಚ್. ಚಂದ್ರಶೇಖರ ಶೆಟ್ಟಿ, ಎಂ. ಮಹೇಶ್ ಹೆಗ್ಡೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಶೋಭಾ,…
