Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ರೋವರ್ ಸ್ಕೌಟ್ಸ್ ಮತ್ತು ರೇಂಜರ್ ಗೈಡ್ಸ್ ಘಟಕದ ವತಿಯಿಂದ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಉಡುಪಿ ಮತ್ತು ಶಿವಮೊಗ್ಗ ಇವರ ಸಹಯೋಗದೊಂದಿಗೆ ಕುಂದಾಪುರ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಇಂದ್ರಾಳಿ ಜಯಕರ್ ಶೆಟ್ಟಿ ಅವರ ಸೂಚನೆ ಹಾಗೂ ರೈಲ್ವೆ ಇಲಾಖೆಯ ಮಾರ್ಗದರ್ಶನದಂತೆ ಗುರುವಾರ ಬೆಳಿಗ್ಗೆ, ಈ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉಡುಪಿ ವಿಭಾಗದ ರೈಲ್ವೆ ಅಧಿಕಾರಿ ಶಾಲಿನಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಆನಂದ್ ಬಿ. ಆಡಿಗ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್, ಐಎಂಜೆ ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಯೋಗೇಶ್ ಡಿ. ಮೇಸ್ತ ಹಾಗೂ ರೇಂಜರ್ ಲೀಡರ್ ಪ್ರಶೀಮಾ ಪಿ. ಉಪಸ್ಥಿತರಿದ್ದರು. ಐಎಂಜೆ ಕಾಲೇಜಿನ 40ಕ್ಕೂ ಅಧಿಕ ರೋವರ್ ಮತ್ತು ರೇಂಜರ್ ವಿದ್ಯಾರ್ಥಿಗಳು ರೈಲ್ವೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆಯ ವಿಶ್ವ ವಿನಾಯಕ ನ್ಯಾಷನಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ 9ನೇ ತರಗತಿಯ ವಿದ್ಯಾರ್ಥಿನಿ ಯುಕ್ತಿ ಶೆಟ್ಟಿ ಅವರು, 21ನೇ ಕರ್ನಾಟಕ ರಾಜ್ಯ ಮಟ್ಟದ ಅಬಾಕಸ್ ಮತ್ತು ಮಾನಸಿಕ ಅಂಕಗಣಿತ ಸ್ಪರ್ಧೆ – 2026ರಲ್ಲಿ ಪ್ರಥಮ ಬಹುಮಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸ್ಪರ್ಧೆಯನ್ನು ಐಡಿಯಲ್ ಪ್ಲೇ ಅಬ್ಯಾಕಸ್ ಇಂಡಿಯಾ ಪ್ರೈ. ಲಿ. ಸಂಸ್ಥೆಯು ಆಯೋಜಿಸಲಾಗಿತ್ತು. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಸಾಹಿತ್ಯ ಸಂಘದ ಆಶ್ರಯದಲ್ಲಿ, ಗಿಳಿವಿಂಡು ರಿ. ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ, ಮಂಗಳೂರು ವಿಶ್ವವಿದ್ಯಾಲಯ ಇದರ ಸಂಯೋಜನೆಯಲ್ಲಿ “ಬಾರಿಸು ಕನ್ನಡ ಡಿಂಡಿಮವ – ಗಿಳಿವಿಂಡು ಯಾನ ಮರಳಿ ಮನೆಗೆ” ಉಪನ್ಯಾಸ ಸರಣಿ ಕಾರ್ಯಕ್ರಮವು ಸೋಮವಾರ ಜರುಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಿವೃತ್ತ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅವರು ‘ನಿಮ್ಮ ಸಮಯ ನಿಮ್ಮ ಭವಿಷ್ಯ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಸಮಯದ ಸದ್ಬಳಕೆ, ಹೊಸ ಕೌಶಲ್ಯಗಳ ಅಭಿವೃದ್ಧಿ, ಮೊಬೈಲ್‌ನ ಸರಿಯಾದ ಬಳಕೆ ಮತ್ತು ಜ್ಞಾನಾರ್ಜನೆಯ ಪ್ರವೃತ್ತಿಯ ಕುರಿತು ಅವರು ಕಥೆಯ ಮೂಲಕ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸುರತ್ಕಲ್ ಗೋವಿಂದದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೃಷ್ಣಮೂರ್ತಿ ಅವರು ಗಿಳಿವಿಂಡು ಸಂಸ್ಥೆಯ ಸ್ಥಾಪನೆಯ ಹಿನ್ನೆಲೆ ಮತ್ತು ಉದ್ದೇಶಗಳನ್ನು ತಿಳಿಸಿದರು. ಗಿಳಿವಿಂಡು ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ, ಮಂಗಳೂರು ಇದರ ಅಧ್ಯಕ್ಷರಾದ ಡಾ. ಬಿ. ಶಿವರಾಮ ಶೆಟ್ಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬ್ರಹ್ಮಾವರ ತಾಲೂಕು ಬ್ರಾಹ್ಮಣ ಮಹಾಸಭಾ ವತಿಯಿಂದ ಇದೇ ಬರುವ ನ.22ರಂದು ಸೀತಾ ಕಲ್ಯಾಣ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀರಾಮಮಂದಿರ, ಬಾಳೆಕುದ್ರು ಹಂಗಾರಕಟ್ಟೆ ಇಲ್ಲಿ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕು ಬ್ರಾಹ್ಮಣ ಮಹಾಸಭಾದ ಗೌರವಾಧ್ಯಕ್ಷ ಅಶೋಕ ಭಟ್, ಅಧ್ಯಕ್ಷ ಎ. ರಾಮನಾಥ ಅಲ್ಸೆ, ಕಾರ್ಯದರ್ಶಿ ರಾಘವೇಂದ್ರ ಸಾಮಗ, ಕೋಶಾಧಿಕಾರಿ ಪ್ರಶಾಂತ ಅಡಿಗ, ಮಹಿಳಾ ಅಧ್ಯಕ್ಷೆ ಮಂಜುಳಾ ಅಡಿಗ, ವಿಪ್ರ ವೇದಿಕೆ ಐರೋಡಿ ಬಾಳ್ಕುದ್ರು ಅಧ್ಯಕ್ಷ ರಮೇಶ ಕಾರಂತ, ರಾಮ ಮಂದಿರದ ಅರ್ಚಕ ಸುರೇಶ ಅಡಿಗ, ವಿಶ್ವೇಶ್ವರ ಅಡಿಗ, ಗೀತಾ ಅಧಿಕಾರಿ, ಕಲಾ ಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್, ಸುರೇಶ ಮಂಜ, ಶ್ರೀಮತಿ ಮಂಜ, ರಾಜೇಶ್ ಮಧ್ಯಸ್ಥ ,ವಿಮಲಾ ಅಡಿಗ, ಹರೀಶ್ ಮೈಯ್ಯ, ಚಂದ್ರ ಶೇಖರ ಮ್ಯೆಯ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ವಿವೇಕ ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗಾಗಿ ‘Adolescent Mental Health – Why and How?’ ಎಂಬ ವಿಷಯದ ಕುರಿತು ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವೈಕುಂಠ ಬಾಳಿಗ ಆಸ್ಪತ್ರೆಯ ಕೌನ್ಸೆಲಿಂಗ್ ಸೈಕಾಲಜಿಸ್ಟ್ ಗಿರೀಶ್ ಎಂ. ಎನ್. ಭಾಗವಹಿಸಿ, ಹದಿಹರೆಯದ ವಿದ್ಯಾರ್ಥಿನಿಯರ ಮಾನಸಿಕ ಆರೋಗ್ಯ, ಸ್ವಯಂ ಅರಿವು, ಒತ್ತಡ ನಿರ್ವಹಣೆ ಹಾಗೂ ಆತ್ಮವಿಶ್ವಾಸ ವೃದ್ಧಿಯ ಕುರಿತು ಮಾರ್ಗದರ್ಶನ ನೀಡಿದರು. ಉತ್ತಮ ಮಾನಸಿಕ ಆರೋಗ್ಯವು ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಅತ್ಯಗತ್ಯವಾಗಿದ್ದು, ವಿದ್ಯಾರ್ಥಿನಿಯರು ತಮ್ಮ ಭಾವನೆಗಳನ್ನು ಅರ್ಥಮಾಡಿಕೊಂಡು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಶಾಲಾ ಗುರುತಿನ ಚೀಟಿ (ಐಡಿ ಕಾರ್ಡ್)ಗಳನ್ನು ವಿತರಿಸಲಾಯಿತು. ಶಾಲಾ ಐಡಿ ಕಾರ್ಡ್‌ಗಳ ಮಹತ್ವ ಹಾಗೂ ವಿದ್ಯಾರ್ಥಿನಿಯರ ಗುರುತು ಮತ್ತು ಸುರಕ್ಷತೆಯಲ್ಲಿ ಅವುಗಳ ಪಾತ್ರದ ಕುರಿತು ತಿಳಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕೋಟ ಬ್ರಿಗೇಡ್ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಾನವ ಹಕ್ಕುಗಳ ಘಟಕದ ವತಿಯಿಂದ ಮಾನವ ಹಕ್ಕುಗಳು ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕುಂದಾಪುರ ಬಾರ್ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ವಕೀಲರಾದ ಪಿ. ಜಯಚಂದ್ರ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಮಾನವ ಹಕ್ಕುಗಳ ಮಹತ್ವ, ಸಂವಿಧಾನವು ನಾಗರಿಕರಿಗೆ ನೀಡಿರುವ ಹಕ್ಕುಗಳು ಹಾಗೂ ಕರ್ತವ್ಯಗಳು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಂವಿಧಾನಿಕ ಮೌಲ್ಯಗಳ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ಸಂದರ್ಭ ಅವರು ವಿದ್ಯಾರ್ಥಿಗಳು ಪ್ರತಿಯೊಬ್ಬರಿಗೂ ಗೌರವಿಸುವ ಮೂಲಕ ಸಂವೇದನಾಶೀಲ ಮಾನವೀಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ ಎಂದರು. ಸಂಸ್ಥೆಯ ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಮಾನವ ಹಕ್ಕುಗಳ ಘಟಕದ ಸಂಯೋಜಕರಾದ ಸುಧೀರ್ ಕುಮಾರ್ ಹಾಗೂ ರೋಹಿತ್ ಕುಮಾರ್ ಶೆಟ್ಟಿ, ಬೋಧಕ-ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಇಂಜಿನಿಯರ್ಸ್  ದಿನಾಚರಣೆ ಪ್ರಯುಕ್ತ ಸ್ಥಳೀಯ ಐರ್ವರು ಇಂಜಿನಿಯರ್ಸ್‌ಗಳನ್ನು ಕೋಟ ಎಂ. ಆರ್. ಕನ್ಸ್ಟ್ರಕ್ಷನ್ಸ್ ಅಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ಎಂ. ಆರ್. ಕನ್ಸ್ಟ್ರಕ್ಷನ್ಸ್ನ ಮಿಥಿಲೇಶ್ ಮಣೂರು, ಉಡುಪಿ ಜಿಲ್ಲಾಸ್ಪತ್ರೆ ಇಂಜಿನಿಯರ್ ಪ್ರಕಾಶ್ ಪೂಜಾರಿ ಬನ್ನಾಡಿ, ಪಾಂಚಜನ್ಯ ಸಮೂಹ ಸಂಸ್ಥೆಯ ನಿತೇಶ್ ಶೆಟ್ಟಿ, ಎನ್. ಡಿ. ಕ್ರಾಫ್ಟ್ನ ನಿಕೇಶ್ ಶೆಟ್ಟಿ, ನ್ಯೂಸ್ ನೆಕ್ಸ್ಟ್ ಪ್ರಣೂತ್ ಆರ್. ಜಿ. ಅವರನ್ನು ಗೌರವಿಸಲಾಯಿತು. ಈ ಸಂದರ್ಭ ರೋಟರಿ ವಲಯ 2ರ ಸಹಾಯಕ ಗವರ್ನರ್ ಸುಧಾಕರ್ ಶೆಟ್ಟಿ, ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್, ಜೋನಲ್ ಲೆಫ್ಟಿನೆಂಟ್ ದಯಾನಂದ ಆಚಾರ್, ಮಾಜಿ ಅಧ್ಯಕ್ಷರಾದ ಸುರೇಶ್ ಆಚಾರ್, ಶಾನಾಡಿ ಉದಯ ಕುಮಾರ್ ಹೆಗ್ಡೆ, ಸದಸ್ಯರಾದ ರವಿನಾಥ್ ಪೂಜಾರಿ, ಅರುಣ್ ಬಿ.ಕೆ.ಎಸ್ ಗುಂಡ್ಮಿ, ಸಂತೋಷ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ, ಸೆ.23: ತಾಲೂಕಿನ ಕೋಟೇಶ್ವರದ ಪ್ರಸಿದ್ಧ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಕೋಟೇಶ್ವರ ಸಮೀಪದ ಹೊದ್ರಾಳಿ ಕೊಳನಕಟ್ಟೆ ನಿವಾಸಿ ಮಹಾಬಲ ಆಚಾರ್ಯ ಅವರ ಪುತ್ರ ಪದ್ಮನಾಭ ಆಚಾರ್ಯ (37) ಆತ್ಮಹತ್ಯೆ ಮಾಡಿಕೊಂಡ ಯುವಕ. ಕುಂದಾಪುರದ ಹೆಂಚಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪದ್ಮನಾಭ ಅವರು, ಕಳೆದ ನಾಲ್ಕು ತಿಂಗಳಿಂದ ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮಂಗಳವಾರ ಬೆಳಿಗ್ಗೆ ಮನೆಯಿಂದ ಹೊರಟಿದ್ದ ಅವರು ರಾತ್ರಿಯಾದರೂ ಮನೆಗೆ ಹಿಂತಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದಾಗ, ದೇವಸ್ಥಾನದ ಸಮೀಪ ಅವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಬಳಿಕ ಕೋಟಿತೀರ್ಥ ಪುಷ್ಕರಣಿಯ ಪೂರ್ವ ಭಾಗದ ಮೆಟ್ಟಿಲ ಮೇಲೆ ಅವರ ಚಪ್ಪಲಿ ಹಾಗೂ ಟೋಪಿ ಪತ್ತೆಯಾಗಿದ್ದರಿಂದ, ಅವರು ಕೆರೆಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು. ಬುಧವಾರ ಬೆಳಿಗ್ಗೆಯಿಂದಲೇ ಕೆರೆಯಲ್ಲಿ ಶೋಧ ನಡೆಸಲಾಯಿತು. ನಿತ್ಯ ಕೆರೆಯಲ್ಲಿ ಈಜಾಡುವ ಸ್ಥಳೀಯರಾದ ಸುಧೀ‌ರ್ ಕುಮಾ‌ರ್ ಶೆಟ್ಟಿ, ಪ್ರಭಾಕ‌ರ್ ಶೆಟ್ಟಿ ಹಾಗೂ ಸತ್ಯನಾರಾಯಣ ಮಂಜ ಮೊದಲಾದವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಗರದ ಹೊನ್ನನಕೇರಿ ನಿವಾಸಿ ಶಾರ್ಜಾದಲ್ಲಿ ಉದ್ಯೋಗದಲ್ಲಿದ್ದ ಆಲ್ವಿನ್ ಪ್ರಕಾಶ್ ಕುಂದರ್ (50) ಕೊಲೆಯಾಗಿರುವುದು ತಿಳಿದುಬಂದಿದೆ. ಪ್ರಕರಣದ ಬಳಿಕ ನಾಪತ್ತೆಯಾಗಿರುವ ಮೃತರ ಪತ್ನಿ ಹಾಗೂ ಪುತ್ರನಿಗಾಗಿ ಶೋಧ ಮುಂದುವರಿದಿದೆ. ಕಳೆದ 14 ವರ್ಷಗಳಿಂದ ಶಾರ್ಜಾದ ಖಾಸಗಿ ವಿಮಾನ ಕಂಪೆನಿಯ ಟರ್ಮಿನಲ್ ಎರಡರಲ್ಲಿ ಸೀನಿಯರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ದುಷ್ಕರ್ಮಿಗಳು ಆಲ್ವಿನ್ ಪ್ರಕಾಶ್ ಕುಂದರ್ ಅವರ ಎದೆಗೆ ಚೂರಿ ಇರಿದು 9 ತುಂಡುಗಳಾಗಿ ಕತ್ತರಿಸಿ ಒಮನ್‌ಗೆ ತೆರಳುವ ದಾರಿಯಲ್ಲಿ ಅವರದ್ದೇ ಕಾರಿನ ಢಿಕ್ಕಿಯಲ್ಲಿ ಎರಡು ಬ್ಯಾಗ್‌ಗಳಲ್ಲಿ ತುಂಬಿಸಿಟ್ಟಿದ್ದರು ಎನ್ನಲಾಗಿದೆ. ಪ್ರಕರಣ ಜುಲೈ 20ರ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ದೂರು ದಾಖಲಿಸಲಾಗಿತ್ತು. ಸದ್ಯ ಸೆ.21ರಂದು ಕುಟುಂಬಕ್ಕೆ ಡೆತ್ ಸರ್ಟಿಫಿಕೆಟ್ ಬಂದಿದ್ದು, ಎಫ್‌ಐಆ‌ರ್ ಇನ್ನೂ ಕೈ ಸೇರಿಲ್ಲ. ಶಾರ್ಜಾದಲ್ಲಿ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಪ್ರಕಾಶ್ ಅವರ ಮೃತದೇಹವನ್ನು ತಾಯ್ನಾಡಿಗೆ ತರಲು ಕುಟುಂಬದವರು ಕಾಯುತ್ತಿದ್ದಾರೆ. ಆಲ್ವಿನ್ ಪ್ರಕಾಶ್ ಕುಂದರ್ ತನ್ನ ಹಿರಿಯ ಸಹೋದರ ಕುಂದಾಪುರದ ಅನಿಲ್ ಪ್ರಶಾಂತ್ ಕುಂದರ್‌…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಆನಂದ ತೀರ್ಥ ಪದವಿ ಪೂರ್ವ ಕಾಲೇಜು, ಪಾಜಕ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ  ಬಾಲಕ – ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸಾಕ್ಷಿ, ಪ್ರೀತಿ, ಶಿವಮಣಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದಲ್ಲಿ ನಡೆಯುವ ಪಂದ್ಯಾಟಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿನ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ. ಕ್ರೀಡಾ ಕೌಶಲ್ಯ ಮೆರೆದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ  – ಬೋಧಕೇತರ ಸಿಬ್ಬಂದಿ  ಶುಭ ಹಾರೈಸಿದ್ದಾರೆ.

Read More