ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾರ್ಚ್ 31ರಿಂದ ಎಪ್ರಿಲ್ 4ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಚೆಸ್ ಸಂಸ್ಥೆ ಆಯೋಜಿಸಿದ ಕರ್ನಾಟಕ ರಾಜ್ಯ ಮುಕ್ತ ಫಿಡೆ ರೇಟಿಂಗ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕುಂದಾಪುರದ ಕಶ್ವಿ ಚೆಸ್ ಸ್ಕೂಲ್‌ನ ವಿದ್ಯಾರ್ಥಿ ಗಳಾದ ನಿಶಾಂತ್ ಡಿಸೋಜಾ ಹಂಗಳೂರು, ಮನನ್ ಶೆಟ್ಟಿ ಕೋಟೇಶ್ವರ, ಸನಾ ಶೆಟ್ಟಿ ಕೋಟೇಶ್ವರ, ಧನ್ವಿ ಪೈ ಕುಂದಾಪುರ ಹಾಗೂ ದಾವಣಗೆರೆಯ ನಿಶ್ಚಲ್.ಜಿ.ಎಸ್ ಭಾಗವಹಿಸಿದ್ದರು. ನಿಶಾಂತ್ ಡಿಸೋಜಾ ತಮ್ಮ ರೇಟಿಂಗ್ ವಿಭಾಗದಲ್ಲಿ ನಾಲ್ಕನೇ ಸ್ಥಾನ ಪಡೆದು ಇದರೊಂದಿಗೆ ಫಿಡೆ ರೇಟಿಂಗ್ ಅನ್ನು 30.8 ಹೆಚ್ಚಿಸಿಕೊಂಡರು, ಸನಾ ಶೆಟ್ಟಿ ವಯೋಮಾನದ(U 9)ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದರು. ಇತರ ಆಟಗಾರರು ಶ್ರೇಯಾಂಕಿತ ಆಟಗಾರರನ್ನು ಮಣಿಸುವುದರ ಮೂಲಕ ಉತ್ತಮ ಪ್ರದರ್ಶನ ನೀಡಿದರು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಕಶ್ವಿ ಚೆಸ್ ಸ್ಕೂಲ್ ಸಂಸ್ಥೆಯ ಪರವಾಗಿ ಅಭಿನಂದಿಸಲಾಯಿತು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆರೋಗ್ಯ ಇಲಾಖೆಯ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ನಿಮಿತ್ತ ಕೊಡಮಾಡಿದ ರಾಜ್ಯಮಟ್ಟದ ಅತ್ಯುತ್ತಮ ಪ್ರಯೋಗಶಾಲಾ ತಂತ್ರಜ್ಞ ಪ್ರಶಸ್ತಿಯನ್ನು ಉಡುಪಿ ಜಿಲ್ಲೆಗೆ ಕುಂದಾಪುರ ಉಪ ವಿಭಾಗೀಯ ಮಟ್ಟದ ತಾಲೂಕು ಆಸ್ಪತ್ರೆಯ ಪ್ರಯೋಗಶಾಲಾ ತಂತ್ರಜ್ಞೆ ಸ್ವರ್ಣಲತಾ ಅವರು ಪಡೆದುಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಸ್ಥಾನಕ್ಕೆ ಪ್ರಣಯ್ ಕುಮಾರ್ ಶೆಟ್ಟಿ ರಾಜಿನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ ರಾಜ್ಯ ಸರಕಾರದ ಅಧೀನ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು ವೈಯಕ್ತಿಕ ಕಾರಣಗಳಿಂದ ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. 2020ರ ಅಗಸ್ಟ್ 20ರಂದು ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ ರಚಿಸಿ ಆದೇಶ ಹೊರಡಿಸಲಾಗಿತ್ತು. ಪ್ರಣಯ ಕುಮಾರ್ ಶೆಟ್ಟಿ ಅವರು ಈ ಹಿಂದೆ ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ಬ್ರಹ್ಮಲಿಂಗೇಶ್ವರ ಫ್ರೆಂಡ್ಸ್ ತಗ್ಗರ್ಸೆ ಇವರ ಆಶ್ರಯದಲ್ಲಿ 5ನೇ ವರ್ಷದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ವಹಿಸಿ ಮಾತನಾಡಿ, ಯುವಕರ ಕ್ರೀಡಾ ಮನೋಭಾವನೆಯನ್ನು ಹೆಚ್ಚಿಸುವಂತ ಕಾರ್ಯ ಇದಾಗಿದ್ದು ಗ್ರಾಮೀಣ ಮಟ್ಟದಲ್ಲಿ ಈ ಒಂದು ಪಂದ್ಯಾಟವನ್ನು ಎರ್ಪಡಿಸಿರುವುದು ಬಹಳ ಉತ್ತಮವಾದ ಕೆಲಸ. ಮುಂದಿನ ದಿನಗಳಲ್ಲಿ ಯುವಕರ ಸಂಘಟನೆ ಈ ಭಾಗದಲ್ಲಿ ಬೆಳೆಯುವುದಕ್ಕೆ ದಾರಿ ದೀಪವಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನಿವೃತ್ತ ಫ್ರೌಡಶಾಲಾ ಶಿಕ್ಷಕರಾದ ಗೋವಿಂದ ಬಿಲ್ಲವ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಅನುಷ್ಕಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಸ್ಥಳೀಯ ಪ್ರಗತಿಪರ ಕೃಷಿಕ ರಾಜು ಗಾಣಿಗ ಹುಳುವಾಡಿ, ಮುಖ್ಯೋಪಧ್ಯಾಯರಾದ ತಿಮ್ಮಪ್ಪ ಗಾಣಿಗ, ಸ್ಥಳೀಯ ಉದ್ಯಮಿಗಳಾದ ಮುಕಾಂಬು ಶೆಟ್ಟಿ ನೆಲ್ಯಾಡಿ, ಗಣೇಶ್ ಬಿಲ್ಲವ, ಮಾಧವ ಬಿಲ್ಲವ, ಪ್ರಮೋದ್ ಆಚಾರ್ಯ ಉಪಸ್ಥಿತರಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ಸುಮಾರು 1300ಕೋಟಿ ರೂ. ಅನುದಾನ ಬಂದಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಅನುದಾನ ಬಂದ ಕ್ಷೇತ್ರಗಳ ಪೈಕಿ ಬೈಂದೂರು ಕೂಡ ಒಂದಾಗಿದೆ. ರಾಜ್ಯದಲ್ಲಿನ ಬಿಜೆಪಿ ಸರಕಾರ ಸಮಾಜದ ಕಟ್ಟಕಡೆಯ ಮತ್ತು ಸಾಮಾನ್ಯ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಬೈಂದೂರಿನಲ್ಲಿ ಬಿಜೆಪಿ ಬಲಿಷ್ಠವಾಗಿದ್ದು, ಬೈಂದೂರು ಬಿಜೆಪಿ ಭದ್ರಕೋಟೆ ಎಂಬುದು ಕಳೆದ ಪಂಚಾಯತ್ ಚುನಾವಣೆಯಲ್ಲಿ ಸಾಬೀತಾಗಿದೆ. ಮುಂಬರು ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ಕಾಂಗ್ರೆಸ್ ಮುಕ್ತ ಜಿಪಂ., ತಾಪಂ ಮಾಡಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು. ಬಿಜೆಪಿ ಬೈಂದೂರು ಮಂಡಲದ ವತಿಯಿಂದ ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ಜರಗಿದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮತ್ತು ಬೂತ್ ಅಧ್ಯಕ್ಷರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಬೈಂದೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ಇಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೇಳಿಕೊಳ್ಳುವ ಯಾವುದೇ ಸಾಧನೆ ಇಲ್ಲ. ಹೀಗಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸುವ, ಕಲಿಕೆಯಲ್ಲಿ ಹಿಂದಿರುವ ವಿದ್ಯಾರ್ಥಿಗಳ ಸಾಮರ್ಥ್ಯವೃದ್ಧಿಗೆ ಬೈಂದೂರು ವಲಯದಲ್ಲಿ ವಿಶೇಷ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಶಾಲೆಗಳ ಅಂತಹ ವಿದ್ಯಾರ್ಥಿಗಳಿಗೆ ವಿಶೇಷ ಪರಿಣತಿ ಹೊಂದಿದ ಮತ್ತು ಬೋಧನಾ ಸಾಧನೆ ಮಾಡಿರುವ ಶಿಕ್ಷಕರಿಂದ ಭಾನುವಾರ ತರಗತಿಗಳನ್ನು ಏರ್ಪಡಿಸಲಾಗುತ್ತಿದೆ. ಅಂತಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ನಾವುಂದ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲೆ ಶಶಿಕಲಾ ವಿ. ನಾಯಕ್ ಹೇಳಿದರು. ಅವರು ನಾವುಂದ ಕಾಲೇಜಿನಲ್ಲಿ ಕೋಟೇಶ್ವರ ರೋಟರಿ ಕ್ಲಬ್ ಸಹಯೋಗದಲ್ಲಿ ವಲಯ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವೃದ್ಧಿ ವಿಶೇಷ ತರಗತಿ-ಉತ್ತೇಜನ-2021ಕಾರ್ಯಕ್ರಮ ಉದ್ಘಾಟನೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಕಲಿಕೆಯಲ್ಲಿ ಹಿಂದಿರುವ ವಿದ್ಯಾರ್ಥಿಗಳು ಪರಿಣತ ಶಿಕ್ಷಕರು ನೀಡುತ್ತಿರುವ ಉಚಿತ ಮಾರ್ಗದರ್ಶನದ ಸಂಪೂರ್ಣ ಲಾಭ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು. ವಲಯದ ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಕರುಣಾಕರ ಶೆಟ್ಟಿ ಸ್ವಾಗತಿಸಿದರು. ವಲಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊಟೇಲೊಂದರ ಪಾರ್ಕಿಂಗ್ ಸ್ಥಳದಲ್ಲಿ ಬಿದ್ದಿದ್ದ ಸುಮಾರು 40 ಸಾವಿರ ಹಣವನ್ನು ಸಂಬಂಧಪಟ್ಟವರಿಗೆ ಮರಳಿಸುವ ಮೂಲಕ ಶಾಲಾ ವಿದ್ಯಾರ್ಥಿಯೋರ್ವ ಪ್ರಾಮಾಣಿಕತೆ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಕುಂದಾಪುರ ಹೊಟೇಲ್ ಶೆರೋನ್‌ನ ಪಾರ್ಕಿಂಗ್ ಸ್ಥಳದಲ್ಲಿ ಬಿದ್ದಿದ್ದ 40 ಸಾವಿರ ರೂ. ನಗದನ್ನು ನೋಡಿದ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ, ದಿನೇಶ ಗೋಡೆ ಅವರ ಪುತ್ರ ದಿಶನ್ ಗೋಡೆ, ಆ ಹಣವನ್ನು ಹೋಟೆಲ್ ಮಾಲೀಕರಿಗೆ ತಲುಪಿಸಿ ಸಂಬಂಧಪಟ್ಟವರಿಗೆ ಹಿಂದಿರುಗಿಸುವಂತೆ ಮನವಿ ಮಾಡಿದ್ದರು. ಇದೇ ಸಂದರ್ಭ ಕಳೆದು ಹೋದ ಹಣಕ್ಕಾಗಿ ಹುಡುಕಾಡುತ್ತ ಹೊಟೇಲ್‌ಗೆ ಬಂದ ಮೂಲತ: ಗಂಗೊಳ್ಳಿ ನಿವಾಸಿ ಬಿ. ನಾಗರಾಜ ಶೆಣೈ ಎಂಬುವರು ಕಳೆದು ಹೋದ ಹಣದ ಬಗ್ಗೆ ಹೊಟೇಲ್ ಮಾಲೀಕರಲ್ಲಿ ವಿಚಾರಿಸಿದಾಗ ಹಣವನ್ನು ಶಾಲಾ ವಿದ್ಯಾರ್ಥಿಯೋರ್ವ ವಾಪಾಸು ನೀಡಿರುವುದು ತಿಳಿದು ಬಂದಿತು. ಹಣವನ್ನು ಮರುಕಳಿಸುವ ಮೂಲಕ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿ ದಿಶನ್ ಗೋಡೆ ಅವರಿಗೆ ನಾಗರಾಜ ಶೆಣೈ ಬಹುಮಾನ ನೀಡಿ ಪ್ರಶಂಸಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜನತಾ ಪಾರ್ಟಿ ವಂಡ್ಸೆ ಮಹಾಶಕ್ತಿ ಕೇಂದ್ರದ ಮಹಿಳಾ ಮೋರ್ಚಾ ಸಭೆ ಚಿತ್ತೂರಿನ ಮೂಕಾಂಬಿಕಾ ಸಭಾಗೃಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಅದ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯ್ಷಕ್ಷೆ ವೀಣಾ ಎಸ್. ಶೆಟ್ಟಿ, ಮಹಿಳೆಯರು ಸಂಘಟಿತರಾದಲ್ಲಿ ಮಾತ್ರ ಸಬಲೀಕರಣ ಸಾಧ್ಯ. ಆದ್ದರಿಂದ ಮಹಿಳೆಯರು ಪಕ್ಷ ಸಂಘಟನೆಗೆ ಹೆಚ್ಚು ಗಮನ ಕೊಡಬೇಕು ಎಂದು ಹೇಳಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಮಾಹಿತಿ ನೀಡಿದರು. ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರ ನೂತನ ಅಧ್ಯಕ್ಷರು ಹಾಗೂ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರನ್ನು ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಘೋಷಿಸಿದರು. ಭಾರತೀಯ ಜನತಾ ಪಾರ್ಟಿ ಬೆಂಬಲಿತವಾಗಿ ಸ್ಪರ್ಧಿಸಿದ ವಂಡ್ಸೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಎಲ್ಲಾ ಮಹಿಳಾ ಸದಸ್ಯರನ್ನು ಅಭಿನಂದಿಸಲಾಯಿತು. ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಮಾಲತಿ ನಾಯ್ಕ್, ಕುಂದಾಪುರ ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಇಂದಿರಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶೀ ತಳಿ ಗೋಮೂತ್ರ ಪೌಡರ್ ಕ್ಯಾಪ್ಸೂಲ್ಸ್ ‘ಸುರಭಿ ಸಾರ’ ಉತ್ಪನ್ನಕ್ಕೆ 2021ನೇ ಸಾಲಿನ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ ದೊರೆತಿದೆ. ಗಜಾನನ ಅಗ್ರೊ ಫುಡ್ ಇಂಡಸ್ಟ್ರೀಸ್ ಸಂಸ್ಥೆಯ ಉತ್ಪನ್ನವಾದ ‘ಸುರಭಿ ಸಾರ’ಕ್ಕೆ ಎಕ್ಸಲೆಂಟ್ ಹೆಲ್ತ್ ಸಪ್ಲಿಮೆಂಟ್ – ಕನ್ಸೂಮರ್ ಚಾಯ್ಸ್ ಅವಾರ್ಡ್ ವಿಭಾಗದಲ್ಲಿ ಈ ಗೌರವ ದೊರೆತಿದೆ. ಮಂಗಳೂರಿನ ಹೋಟೆಲ್ ಓಶಿಯನ್ ಪರ್ಲ್ ಸಭಾಂಗಣದಲ್ಲಿ ದಿ ಟೈಮ್ಸ್ ಗ್ರೂಪ್ ಸಂಸ್ಥೆಯ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಬಾಲಿವುಡ್ ನಟ ಸುನಿಲ್ ಶೆಟ್ಟಿ ಅವರು ಸುರಭಿಸಾರ ಉತ್ಪನ್ನದ ತಯಾರಕರಾದ ಬಿ. ರಾಘವೇಂದ್ರ ಹೆಮ್ಮಣ್ಣ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಪ್ರಶಸ್ತಿ ದೊರೆತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಹೆಮ್ಮಣ್ಣ ದಂಪತಿಗಳು, “ಮಾನವ ಕುಲಕ್ಕೆ ವರದಾನವಾದ ಈ ಉತ್ಪನ್ನದ ಆವಿಷ್ಕಾರಕ್ಕೆ ಕಾರಣಿಕರ್ತರಾಗಿರುವ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಗೆ ಈ ಗೌರವವನ್ನು ಸಮರ್ಪಿಸುತ್ತಿದ್ದೇವೆ. ನಮ್ಮೆಲ್ಲಾ ಗ್ರಾಹಕರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇವೆ” ಎಂದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪಟ್ಟಣ ಪಂಚಾಯತ್ ವ್ಯಾಪ್ತಿಯ ಖಾಸಗಿ ನಳಗಳ ನೀರಿನ ಬಳಕೆದಾರರು/ ನೀರಿನ ಕಂದಾಯ/ ನೀರಿನ ಸಂಪರ್ಕ ಶುಲ್ಕ / ಜಾಹೀರಾತುದಾರರು / ಉದ್ದಿಮೆ ಪರವಾನಿಗೆದಾರರು / ಕಟ್ಟಡ ನಿರ್ಮಾಣ ಮತ್ತು ದುರಸ್ಥಿ ನವೀಕರಣದಾರರು/ ಘನತ್ಯಾಜ್ಯ ವಸ್ತು ನಿರ್ವಹಣೆಯ ಬಳಕೆದಾರರು ಹಾಗೂ ಇತರೆ ಶುಲ್ಕದ ದರಗಳ ಉಪವಿಧಿಯನ್ನು ಸಿದ್ಧಪಡಿಸಿದ್ದು, ಪಟ್ಟಣ ಪಂಚಾಯತಿಯ ಆರ್ಥಿಕ ಹಿತದೃಷ್ಟಿಯಿಂದ ಹಾಗೂ ಸರ್ಕಾರದ ಸುತ್ತೋಲೆಯನ್ವಯ, ಪಟ್ಟಣ ಪಂಚಾಯತ್ ಆಡಳಿತಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯ ನಿರ್ಣಯದಂತೆ ದರ ಪರಿಷ್ಕರಿಸಿ ಪಟ್ಟಣ ಪಂಚಾಯತ್ ಕಚೇರಿಯ ಸೂಚನಾಫಲಕದಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆ ಪ್ರಕಟಗೊಂಡ 15 ದಿನಗಳ ಒಳಗೆ ಸೂಕ್ತ ಕಾರಣಗಳೊಂದಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆಗಳನ್ನು ಕಚೇರಿಗೆ ಸಲ್ಲಿಸಬೇಕು. ತಪ್ಪಿದ್ದಲ್ಲಿ ಯಾವುದೇ ಆಕ್ಷೇಪಣೆ ಇಲ್ಲವೆಂದು ಪರಿಗಣಿಸಿ ನಿಯಮಾನುಸಾರ ಪರಿಷ್ಕೃತ ದರವನ್ನು ಜಾರಿಗೆ ತರಲು ಕ್ರಮವಹಿಸಲಾಗುವುದು ಎಂದು ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
