Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಎಲ್ಲಡೆ ಲಾಕ್‌ಡೌನ್ ಜಾರಿಯಾಗಿ ಕೊರೋನಾ ವಿರುದ್ಧ ಹೋರಾಟಕ್ಕಿಳಿದ ಸಂದರ್ಭ ವಂಡ್ಸೆ ಗ್ರಾಮ ಪಂಚಾಯತಿಯ ಸ್ವಾವಲಂಬನಾ ಕೇಂದ್ರದ ಮಹಿಳೆಯರೂ ಇದಕ್ಕೆ ಸಾಥ್ ನೀಡಿದ್ದಲ್ಲದೇ ಸಾವಿರಾರು ಬಟ್ಟೆಯ ಮಾಸ್ಕ್‌ಗಳನ್ನು ತಯಾರಿಸಿ ಆದಾಯಕ್ಕೊಂದು ದಾರಿ ಕಂಡುಕೊಂಡಿದ್ದರು. ಲಾಕ್‌ಡೌನ್ ಘೊಷಣೆಯ ಬಳಿಕ ದೇವಸ್ಥಾನಗಳಿಗೆ ಸಾರ್ವಜನಿಕ ದರ್ಶನ ರದ್ದಾಗಿದ್ದರಿಂದ ವಂಡ್ಸೆ ಸ್ವಾವಲಂಭನಾ ಕೇಂದ್ರದಲ್ಲಿ ತಯಾರಾಗುತ್ತಿದ್ದ ಬಟ್ಟೆ ಚೀಲದ ಬೇಡಿಕೆ ಕುಸಿದಿತ್ತು. ಮಹಿಳೆಯರು ಕೆಲಸವಿಲ್ಲದೆ ಖಾಲಿ ಕೂತಿದ್ದರು. ಮಾಸ್ಕ್ ಸಿದ್ಧಪಡಿಸಿವುದು ಸೂಕ್ತ ಆಯ್ಕೆ ಎಂಬುದನ್ನು ಅರಿತ ಮಹಿಳೆಯರು ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಗಮನ ಸೆಳೆದಿದ್ದರು. ಅವರು ಜಿಲ್ಲಾಡಳಿತದ ಜೊತೆ ಮಾತನಾಡಿ ಮಾಸ್ಕ್ ಸಿದ್ದಪಡಿಸುವ ಜವಾಬ್ದಾರಿ ಪಡೆದಿದ್ದು, ಇದೂವರೆಗೆ  15,000ಕ್ಕೂ ಹೆಚ್ಚು ಕಾಟನ್ ಮಾಸ್ಕ್‌ಗಳನ್ನು ಸಿದ್ದಪಡಿಸಿ ಅಗತ್ಯವಿರುವೆಡೆಗೆ ನೀಡಿದ್ದಾರೆ. ಮಹಿಳೆಯರು ಸಾಮಾಜಿಕ ಅಂತರ ಪಾಲಿಸಿಕೊಂಡು ಸ್ವಾವಲಂಬನಾ ಕೇಂದ್ರದಲ್ಲಿ ಹಾಗೂ ತಮ್ಮ ಮನೆಯಲ್ಲಿಯೇ ಮಾಸ್ಕ್‌ನ ತಯಾರಿಸಿದ್ದರು. ಮಾಸ್ಕ್ ಸಿದ್ದ ಪಡಿಸುವ ಮೂಲಕ ಕರೋನಾ ವಾರಿಯರ‍್ಸ್ ಕೆಲಸ ನಿಭಾಯಿಸುವ ಜೊತೆ ತಮ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕ್ವಾರಂಟೈನ್ ಮಾಹಿತಿಗೆಇಲ್ಲಿನ ಪುರಸಭೆ ಕಟ್ಟಡದ ಮೊದಲ ಮಹಡಿಯಲ್ಲಿ ಬುಧವಾರದಿಂದ ಕಂಟ್ರೋಲ್ ರೂಂ ಆರಂಭಿಸಲಾಗಿದೆ. ಕಂಟ್ರೋಲ್ ರೂಂಗೆ ಕರೆ ಮಾಡಿ ಕ್ವಾರಂಟೈನ್ ಕೇಂದ್ರಗಳಿಗೆ ಸಂಬಂಧಿಸಿದ ಮಾಹಿತಿ, ದೂರು, ಸಮಸ್ಯೆಗಳಿದ್ದರೆ ಹೇಳಿಕೊಳ್ಳಬಹುದು. ಇಲ್ಲಿನ ಸಿಬ್ಬಂದಿಗಳು ಲಭ್ಯವಿರುವ ಮಾಹಿತಿ ಒದಗಿಸುವುದಲ್ಲದೇ ಆಯಾ ಕ್ವಾರಂಟೈನ್ ಕೇಂದ್ರಗಳ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆಹರಿಸಲಿದ್ದಾರೆ. ಹೊರರಾಜ್ಯಗಳಿಂದ ಬರುವವರಿಗೆ ಕ್ವಾರಂಟೈನ್ ಕೇಂದ್ರದಲ್ಲಿ ಅನೇಕ ಸಮಸ್ಯೆಗಳಾಗುತ್ತಿದ್ದವು. ಆಹಾರ ತಡವಾಗಿ ತಲುಪುತ್ತಿತ್ತು. ನೀರಿನ ವ್ಯವಸ್ಥೆ, ವಿದ್ಯುತ್, ಊಟ ಶುಚಿತ್ವದ ವ್ಯವಸ್ಥೆ ಕುರಿತು ದೂರುಗಳಿದ್ದವು. ಹಾಗಾಗಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಕೇಂದ್ರ ತೆರೆಯಲು ಸೂಚಿಸಿದ್ದು ಅದರಂತೆ ಪುರಸಭೆ ಕೊಠಡಿಯೊಂದನ್ನು ಸಜ್ಜುಗೊಳಿಸಿ ನೀಡಿದೆ. ಇಲ್ಲಿ ಶಾಸಕರೇ ಸಿಬಂದಿಗಳನ್ನು ನೇಮಿಸಿ ಇರಿಸಿದ್ದಾರೆ. ಶಾಸಕರು ಬುಧವಾರ ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೊರರಾಜ್ಯಗಳಿಂದ ಬರುವವರು ಮಾಹಿತಿಗೆ, ಕ್ವಾರಂಟೈನ್ ಕೇಂದ್ರಗಳಲ್ಲಿ ಇರುವವರು ದೂರುಗಳಿಗೆ ಈ ಕೇಂದ್ರವನ್ನು ಸಂಪರ್ಕಿಸಬಹುದು. ಪ್ರಸ್ತುತ ಸೇವಾಸಿಂಧು ಆ್ಯಪ್ ಮೂಲಕ ಹೊರರಾಜ್ಯಗಳಿಂದ ಬರುವ…

Read More

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಇಲ್ಲಿನ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಲಕ್ಷ್ಮೀಸೋಮ ಬಂಗೇರ ಸ್ಮಾರಕ ಹೆರಿಗೆ ವಾರ್ಡ್‌ನ್ನು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದ್ದು, 120 ರೋಗಿಗಳಿಗೆ ಚಿಕಿತ್ಸೆ ನೀಡಲು ಸಜ್ಜುಗೊಳಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ಸಿಂಟಮೆಟಿಕ್ ಟ್ರಿಟ್‌ಮೆಂಟ್ ಅಗತ್ಯವಿಲ್ಲದ ಪ್ರಕರಣಗಳಿಗೆ ತಾಲೂಕಿನ ಕೋವಿಡ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲು ಉದ್ದೇಶಿಸಲಾಗಿದೆ. ಈ ಸಂಬಂಧ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಸಜ್ಜುಗೊಳಿಸಲಾಗುತ್ತಿದ್ದು, ಆಸ್ಪತ್ರೆಗೆ ಅಗತ್ಯವಿರುವ ಹೆಚ್ಚುವರಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿಗಳನ್ನು ನೇಮಿಸುವ ಬಗ್ಗೆಯೂ ಜಿಲ್ಲಾಡಳಿತ ಭರವಸೆ ನೀಡಿದೆ. ಬೈಂದೂರು ಹಾಗೂ ಕುಂದಾಪುರ ಭಾಗದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾದಲ್ಲಿ ಇಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ. ರೋಗಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯ ಕಂಡುಬಂದರೆ ಉಡುಪಿಯ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ಕೊಂಡಯ್ಯಲಾಗುತ್ತದೆ. ಪ್ರಸ್ತುತ ಹೆರಿಗೆ ವಾರ್ಡಿನಲ್ಲಿದ್ದವರನ್ನು ಆಸ್ಪತ್ರೆಗೆ ಹಳೆಯ ಹೆರಿಗೆ ವಾರ್ಡ್‌ಗಳಿಗೆ ಸ್ಥಳಾಂತರಿಸಲಾಗಿದೆ. ಗುರುವಾರ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 20ನೇ ಶತಮಾನದ ಆಧುನಿಕ ಭಾರತದ ಕುರಿತು ಮಹಾನ್ ಕನಸು ಹೊತ್ತಿದ್ದ ಮತ್ತು ಕಂಪ್ಯೂಟರ್ ಕ್ರಾಂತಿಯ ಮೂಲಕ ಅದಕ್ಕೆ ಅಡಿಪಾಯ ಹಾಕಿದ್ದ ಹಾಗೂ ಶ್ರೀಲಂಕಾದಲ್ಲಿರುವ ತಮಿಳಿಗರ ಸಮಸ್ಯೆಗಳಿಗೆ ಒಂದು ಪರಿಹಾರ ಹುಡುಕಲು ಹೋಗಿದ್ದ ನಾಯಕನೊಬ್ಬ ಇಂದಿಗೆ 29ವರ್ಷಗಳ ಹಿಂದೆ  ಭೀಕರವಾಗಿ ಹತ್ಯೆಯಾಗಿಹೋಗಿದ್ದರು ಅದು ಆಧುನಿಕ ಭಾರತಕ್ಕಾದ ಮಹಾನ್ ನಷ್ಟ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಹೇಳಿದ್ದಾರೆ. ಇಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ರಾಜೀವ್ ಗಾಂಧಿಯವರ 29ನೇ ಪುಣ್ಯತಿಥಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಸಂಧರ್ಭದಲ್ಲಿ ನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷ , ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಕಾಸ್ ಹೆಗ್ಡೆ , ಕೆಪಿಸಿಸಿ ಐ‌.ಟಿ ಸೆಲ್ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಪುರಸಭಾ ಸದಸ್ಯರಾದ ಚಂದ್ರಶೇಖರ ಖಾರ್ವಿ, ಯುವ ಮುಖಂಡರಾದ ದಿನೇಶ್ ಖಾರ್ವಿ, ನಾಗರಾಜ ಕೋಟೇಶ್ವರ, ರಾಜಾ ಖಾರ್ವಿ ಮುಂತಾದವರು ಉಪಸ್ಥಿತರಿದ್ದರು. ಬ್ಲಾಕ್‌ ಕಾಂಗ್ರೆಸ್ ಪ್ರಧಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊರರಾಜ್ಯಗಳಿಂದ ಬಂದಿರುವವರನ್ನು ದೇವಳದ ವಿವಿಧ ಅತಿಥಿಗೃಹಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಇಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಜನರಿರುವುದರಿಂದ ಸಾಮಾಜಿಕ ಅಂತರ ಹಾಗೂ ಸುರಕ್ಷತೆಯನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದರ ಬದಲಿಗೆ ವಿಶಾಲ ಪ್ರದೇಶದಲ್ಲಿರುವ ಕೊಲ್ಲೂರು ದೇವಳದ ಪ್ರೌಢಶಾಲೆಗಳಲ್ಲಿ ಕ್ವಾರಂಟೈನ್ ಮಾಡುವುದು ಉತ್ತಮ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ನರಸಿಂಹ ಹಳಗೇರಿ ಹೇಳಿದ್ದಾರೆ. ಈ ಬಗ್ಗೆ ಮುಜರಾಯಿ ಸಚಿವರು, ಸಂಸದರು ಹಾಗೂ ಶಾಸಕರಿಗೆ ಪತ್ರ ಬರೆದಿರುವ ಅವರು, ಕೋರೋನಾ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಆದರೆ ದೇವಳದ ಅತಿಥಿಗೃಹಗಳಲ್ಲಿ ಹೆಚ್ಚಿನ ಜನರಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಮಸ್ಯೆಯಾಗುತ್ತಿದೆ. ಅಲ್ಲದೇ ದೇವಳದ ಅತಿಥಿ ಗೃಹವನ್ನು ಧೀರ್ಘಕಾಲದ ತನಕ ಕ್ವಾರಂಟೈನ್ ಕೇಂದ್ರವನ್ನಾಗಿಸುವುದರಿಂದ ಮುಂದೆ ಬರುವ ಯಾತ್ರಾರ್ಥಿಗಳಿಗೆ ಖಾಸಗಿ ಲಾಡ್ಜುಗಳ ಮಾಲಿಕರು ದಿಕ್ಕುತಪ್ಪಿಸಿ ಅಲ್ಲಿಗೆ ತೆರಳದಂತೆ ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ. ದೇವಳದ ಸಿಬ್ಬಂದಿಗಳನ್ನು ಆಹಾರ ವಿತರಣೆ ಸೇರಿದಂತೆ ವಿವಿಧ ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಆದರೆ ಅವರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಒಂದೇ ದಿನ 27 ಕೋರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಎಲ್ಲರೂ ವಿವಿಧ ರಾಜ್ಯಗಳಿಂದ ಆಗಮಿಸಿದ ಹಿನ್ನೆಲೆಯುಳ್ಳವರಾಗಿದ್ದಾರೆ. ಮುಂಬೈನಿಂದ ಆಗಮಿಸಿದ 23, ತೆಲಂಗಾಣದ 3, ಕೇರಳದಿಂದ ಚಿಕಿತ್ಸೆಗೆ ಬಂದ ಓರ್ವರಿಗೆ ಪಾಸಿಟಿವ್ ಬಂದಿದೆ. ಈ ಪೈಕಿ 6 ಪುರುಷರು, 5 ಮಹಿಳೆಯರು ಹಾಗೂ 16 ಮಕ್ಕಳು ಸೇರಿದ್ದಾರೆ. ಕೇರಳದಿಂದ ಚಿಕಿತ್ಸೆಗೆ ಬಂದ ಓರ್ವ ವ್ಯಕ್ತಿ ಹೊರತುಪಡಿಸಿ ಉಳಿದವರೆಲ್ಲರೂ ಕ್ವಾರಂಟೈನ್‌ನಲ್ಲಿದ್ದು ಈಗ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 48 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 44 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೊನಾ ಹರಡುವಿಕೆಯ ಅಪಾಯದ ಬಗೆಗೆ ಮತ್ತು ಆ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಗ್ರಾಮೀಣ ಜನರು ಎಚ್ಚೆತ್ತಿದ್ದಾರೆ ಎನ್ನುವುದಕ್ಕೆ ಮರವಂತೆಯಲ್ಲಿ ಬುಧವಾರ ನಡೆದ ಘಟನೆಯೊಂದು ಸಾಕ್ಷಿಯಾಗಿದೆ. ಶಿರೂರು ಚೆಕ್‌ಪೋಸ್ಟ್ ಬಳಿಯ ತಪಾಸಣಾ ಕೇಂದ್ರದ ಅಧಿಕಾರಿಗಳ ಕಣ್ತಪ್ಪಿಸಿಕೊಂಡು ಹೊರ ರಾಜ್ಯದಿಂದ ಬಂದು ಮನೆ ಸೇರಲು ಯತ್ನಿಸಿದ ಮರವಂತೆ ನಡುಬೆಟ್ಟು ಪ್ರದೇಶದ ವ್ಯಕ್ತಿಯನ್ನು ಮನೆಯವರು ಮತ್ತು ನೆರೆಹೊರೆಯವರು ಸೇರಿ ಕ್ವಾರಂಟೈನ್‌ಗೆ ಕಳುಹಿಸುವ ಮೂಲಕ ಎಚ್ಚರ ಪ್ರದರ್ಶಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಮಹಾರಾಷ್ಟ್ರದ ನಾಸಿಕದಲ್ಲಿ ವೃತ್ತಿ ನಡೆಸುತ್ತಿದ್ದ ಆತ ವಾಹನಗಳನ್ನು ಬದಲಿಸುತ್ತ ಜಿಲ್ಲೆಯ ಉತ್ತರ ಗಡಿಯ ಶಿರೂರು ಚೆಕ್‌ಪೋಸ್ಟ್‌ಗಿಂತ ಹಿಂದೆಯೇ ಇಳಿದುಕೊಂಡಿದ್ದಾನೆ. ಸ್ನೇಹಿತನಿಗೆ ಕರೆಮಾಡಿ ಬೈಕ್ ತರಿಸಿಕೊಂಡು ಚೆಕ್‌ಪೋಸ್ಟ್‌ನ ತಪಾಸಣೆಗೆ ಒಳಗಾಗದೆ ಅವನ ಜತೆ ಮನೆಗೆ ಬಂದಿದ್ದಾನೆ. ಹೊರರಾಜ್ಯದಿಂದ ನೇರವಾಗಿ ಊರಿಗೆ ಹಿಂತಿರುಗಲು ಅವಕಾಶ ಇಲ್ಲ ಎನ್ನುವುದನ್ನು ಅರಿತಿರುವ ಮನೆಯವರು ಮತ್ತು ಅಕ್ಕಪಕ್ಕದವರು ಅವನನ್ನು ಮತ್ತು ಅವನ ಗಂಟುಮೂಟೆಗಳನ್ನು ಮನೆಗೆ ಸೇರಿಸಿಕೊಳ್ಳಲಿಲ್ಲ. ಅವನು ಹಾಗೆ ಬಂದಿರುವ ವಿಷಯವನ್ನು ಅವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಬೈಂದೂರು ಕ್ಷೇತ್ರದ ಶಾಸಕರಾದ ಬಿ. ಎಂ ಸುಕುಮಾರ್ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯೆ ಗ್ರೀಷ್ಮಾ ಗಿರಿಧರ ಭಿಡೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರೇಮ, ಸದಸ್ಯರಾದ ಜಯಪ್ರಕಾಶ್ ಶೆಟ್ಟಿ, ವಿಶ್ವನಾಥ್ ಅಡಿಗ, ಎಸ್. ಕುಮಾರ್, ನೇತ್ರಾವತಿ ಆಚಾರ್ಯ, ದುರ್ಗಿ, ಗಿರಿಜಾ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾದ ರಮೇಶ್ ಗಾಣಿಗ, ಕೊಲ್ಲೂರು ಉದ್ಯಮಿ ಸಂತೋಷ್ ಭಟ್, ಕೊಲ್ಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸಂದೀಪ್ ಆರ್, ಸದಸ್ಯರಾದ ಚಂದ್ರಶೇಖರ್ ಅಡಿಗ, ಅರುಣ್ ಕುಮಾರ್ ಶೆಟ್ಟಿ, ನಾಗೇಶ್ ದಳಿ, ಅರುಣ್ ಕುಮಾರ್ ಶೆಟ್ಟಿ ಮಾವಿನಕಾರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ಬುಧವಾರ 6 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 21 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 17 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಉಡುಪಿ ಜಿಲ್ಲೆಯಲ್ಲಿಂದು 6 ಕೊರೋನಾ ಪಾಸಿಟಿವ್. ಒಟ್ಟು 17ಕ್ಕೆ ಏರಿಕೆ – https://kundapraa.com/?p=37716 . ► ಸರಕಾರಿ ಕ್ವಾರಂಟೈನ್ ಕೇಂದ್ರಕ್ಕೆ ನೋಡೆಲ್ ಅಧಿಕಾರಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ – https://kundapraa.com/?p=37710 . ► ಕರ್ನಾಟಕದ ಕರಾವಳಿಯಲ್ಲಿ ಜೂನ್ 1ರಿಂದ ಮೀನುಗಾರಿಕೆ ನಿಷೇಧ – https://kundapraa.com/?p=37707 . ► ಉಡುಪಿ: ಕ್ಯಾನ್ಸರ್ ಚಿಕಿತ್ಸೆಗೆ ಬಂದಿದ್ದ ಯುವತಿಗೆ ಕೊರೋನಾ ಪಾಸಿಟಿವ್ – https://kundapraa.com/?p=37700 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಕಾರಿ ಕ್ವಾರಂಟೈನ್ ಕೇಂದ್ರಗಳಲ್ಲಿನ ವ್ಯವಸ್ಥೆಗಳು ಸರಿಯಾಗಿ ನಡೆಯಲು ಪ್ರತಿ ಕೇಂದ್ರಗಳಿಗೂ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು. ಕಂದಾಯ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆಯಾದಲ್ಲಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಇತರ ಇಲಾಖೆಗಳಿಂದ ಸಿಬ್ಬಂದಿಗಳ ನಿಯೋಜನೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ರಾಜ್ಯ ರಾಜ್ಯ ಮುಜರಾಯಿ ಹಾಗೂ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕುಂದಾಪುರ ತಾಲೂಕು ಪಂಚಾಯಿತಿಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಮಂಗಳವಾರ ಕೋವಿಡ್-೧೯ ಗೆ ಸಂಬಂಧಿಸಿದಂತೆ ಪ್ರಾರಂಭಿಸಲಾದ ಕ್ವಾರಂಟೈನ್ ಕೇಂದ್ರಗಳ ನಿರ್ವಹಣೆಯ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಕ್ವಾರಂಟೈನ್ ವಾಸಿಗಳಿಗೆ ಆಹಾರ ನೀಡುವಲ್ಲಿ ಲೋಪ ಆಗಿಲ್ಲ, ಆದರೆ ಸರಬರಾಜು ಮಾಡುವಲ್ಲಿ ಲೋಪ ಆಗಿದೆ. ಕ್ವಾರಂಟೈನ್ ಕೇಂದ್ರಗಳಿಗೆ ಬಂದವರ ಗಂಟಲು ದ್ರವಗಳನ್ನು ಕೂಡಲೇ ತೆಗೆದು ಪರೀಕ್ಷೆ ಕಳುಹಿಸುತ್ತಿಲ್ಲ ಎನ್ನುವ ಕುರಿತು ದೂರುಗಳಿವೆ. ಸರ್ಕಾರಿ ಕ್ವಾರಂಟೈನ್ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರು ಕೇಂದ್ರಗಳಿಗೆ ಭೇಟಿ ನೀಡಿ ಸಲಹೆ ಸೂಚನೆ ನೀಡುವುದರಿಂದ…

Read More