Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೊರೊನಾ ನಿಯಂತ್ರಣ ಕುರಿತಂತೆ, ರಾಜ್ಯ ಸರ್ಕಾರ ಸೂಚಿಸಿರುವ ನಿರ್ಬಂಧಗಳನ್ನು ಉಡುಪಿ ಜಿಲ್ಲೆಯ ನಾಗರೀಕರು ಕಡ್ಡಾಯವಾಗಿ ಪಾಲನೆ ಮಾಡುವಂತೆ ಹಾಗೂ ಈ ನಿರ್ಬಂಧಗಳನ್ನು ಉಲ್ಲಂಘಿಸುವವರ ವಿರುದ್ದ ಕಾನೂನು ರೀತಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಮಂಗಳವಾರ, ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಗೆ ವಿದೇಶದಿಂದ ಬಂದಿರುವ ೯೦೦ ಜನರನ್ನು ಗುರುತಿಸಲಾಗಿದ್ದು, ಈ ಎಲ್ಲರ ಮನೆಗಳಿಗೆ ನೋಟೀಸ್ ಅಂಟಿಸಲಾಗಿದ್ದು, ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಪಾಲಿಸಲು ಸೂಚಿಸಲಾಗಿದ್ದು, ಪ್ರತಿದಿನ ದಿನಕ್ಕೆ 2 ಬಾರಿ ಗಸ್ತು ಪೊಲೀಸರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ತೆರಳಿ ಪರಿಶೀಲಿಸಲಿದ್ದಾರೆ ಅಲ್ಲದೇ ಈ ಮನೆಗಳ ಪಕ್ಕದವರಿಗೂ ಇವರ ಬಗ್ಗೆ ಮಾಹಿತಿ ನೀಡಿದ್ದು, ಮನೆಯಿಂದ ಹೊರಬಂದಲ್ಲಿ ಕೂಡಲೇ ಜಿಲ್ಲಾಡಳಿತದ ಉಚಿತ ಟೋಲ್ ಫ್ರೀ ನಂ.1077ಹಾಗೂ ಪೊಲೀಸ್ ಕಂಟ್ರೋಲ್ ರೂಮ್ 100 ಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ, ಈ ನಿರ್ಬಂದ ಪಾಲಿಸದಿದ್ದಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯಾದ್ಯಂತ ಲಾಕ್‌ಡೌನ್ ಮಾಡಲು ಸರಕಾರ ಆದೇಶಿಸಿದೆ. ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಕರ್ಫ್ಯೂ ಜಾರಿಯಲ್ಲಿದೆ.  ಸರಕಾರದ ಆದೇಶವನ್ನು ‌ನಾಗರಿಕರು ಪಾಲಿಸುವಂತೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಕೋರಿಕೊಂಡಿದ್ದಾರೆ.  ಉಡುಪಿ ಜಿಲ್ಲೆಯಲ್ಲಿ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವ ಸಲುವಾಗಿ ಮಾರ್ಚ್ 23ರ ಮಧ್ಯರಾತ್ರಿಯಿಂದ ಲಾಕ್‌ಡೌನ್ ಮಾಡಲಾಗುತ್ತಿದೆ. ಅನಗತ್ಯವಾಗಿ ಮನೆಯಿಂದ ಹೊರಕ್ಕೆ ಬಂದರೆ ಕಾನೂನು‌ ಕ್ರಮ ಜರುಗಿಸಲಾಗುವುದು. ನಾಗರಿಕರು ಮನೆಯಲ್ಲೇ ಇದ್ದು ಕರೋನಾ ವೈರಸ್ ತಡೆಗೆ ಸಹಕರಿಸಬೇಕಾಗಿ ಅವರು ತಿಳಿಸಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ಜನರಿಗೆ ತುರ್ತು ಸೇವೆಗಳಷ್ಟೇ ಲಭ್ಯವಿರಲಿದೆ. ಮೆಡಿಕಲ್, ಆಹಾರ ಸಾಮಾಗ್ರಿ, ಹಣ್ಣು, ತರಕಾರಿ, ಮೀನು-ಮಾಂಸ ಲಭ್ಯವಿರಲಿದೆ. ಉಳಿದಂತೆ ಯಾವುದೇ ಸರಕಾರಿ, ಖಾಸಗಿ ಸಾರಿಗೆ ಸೇವೆಗಳು ಲಭ್ಯವಿರುವುದಿಲ್ಲ. ಅನಗತ್ಯವಾಗಿ ಖಾಸಗಿ ವಾಹನಗಳು ತಿರುಗಲು ಬಿಡುವುದಿಲ್ಲ ಎಂದಿರುವ ಅವರು, ತುರ್ತು ಸಂದರ್ಭದಲ್ಲಿ ಸರಕಾರ, ಪೊಲೀಸ್ ಇಲಾಖೆ ಸ್ಪಂದಿಸಲಿದೆ ಎಂದಿದ್ದಾರೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಕ್ವಾಡಿಯವರಾದ ಉದ್ಯಮಿ, ಸಿನೆಮಾ ವಿತರಕ  ವಿ. ಕೆ. ಮೋಹನ್(60) ಪೀಣ್ಯ ಬಸವೇಶ್ವರ ಬಸ್ ನಿಲ್ದಾಣದ ಬಳಿ‌ ಇರುವ ಹೋಟೆಲ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೋಟೆಲ್ ಉದ್ಯಮದಲ್ಲಿ ತೊಡಗಿಕೊಡಿದ್ದ ಮೋಹನ್ ಅವರು ಸಿನೆಮಾ ನಿರ್ಮಾಣ, ಸಿನೆಮಾ ವಿತರಕರಾಗಿಯೂ ಗುರುತಿಸಿಕೊಂಡಿದ್ದರು. ಡಾ. ರಾಜ್ ಕುಟುಂಬದವರೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದ ಅವರು ಕೆಲ ಸಿನೆಮಾಗಳಲ್ಲಿಯೂ ಕಾಣಿಸಿಕೊಂಡಿದ್ದರು. ಕುಂದಾಪುರಕ್ಕೆ ವಿವಿಧ ಸಂದರ್ಭಗಳಲ್ಲಿ ಸಿನೆಮಾ ನಟ-ನಟಿಯರನ್ನು ಕರೆತಂದು ಸ್ಥಳೀಯ ಕಾರ್ಯಕ್ರಮಗಳಿಗೆ ಮೆರಗು ನೀಡುತ್ತಿದ್ದರು. ಕೆಲ ದಿನಗಳ‌ ಹಿಂದೆ ಮೋಹನ್ ಅವರಿಗೆ ಸೇರಿದ‌ ಕ್ಲಬ್ ಮೇಲೆ ದಾಳಿ‌ ನಡೆದಿತ್ತು. ಆ ಬಳಿಕವೂ ಉದ್ಯಮದಲ್ಲಿ ಆರ್ಥಿಕ ಹಿಂಜರಿತ ಅನುಭವಿಸಿದ್ದರು. ಇದೆಲ್ಲವೂ ಅವರನ್ನು ಮಾನಸಿಕವಾಗಿ ಕುಗ್ಗಿಸಿದೆ ಎನ್ನಲಾಗಿದೆ. ನಿನ್ನೆ ಹೋಟೇಲ್ ಬಂದಿದ್ದ ಅವರು ಇಂದು ಬೆಳಿಗ್ಗೆ ರೂಮ್ ಬಾಗಿಲು ತೆರೆಯದೇ ಇದ್ದುದರಿಂದ ಅನುಮಾನಗೊಂಡು ಕಿಟಕಿ ತೆರೆದು ನೋಡಿದಾಗ ಅವರು ನೇಣಿಗೆ ಶರಣಾಗಿರುವುದು ತಿಳಿದುಬಂದಿತ್ತು. /ಕುಂದಾಪ್ರ ಡಾಟ್ ಕಾಂ ಸುದ್ದಿ./

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ದಿ ಕನ್ಸರ‍್ನ್ಡ್ ಫಾರ್ ವರ್ಕಿಂಗ್ ಚಿಲ್ಡ್ರನ್ ಸಂಸ್ಥೆಯ ಪ್ರಾದೇಶಿಕ ಸಂಪನ್ಮೂಲ ಕೇಂದ್ರ ನಮ್ಮಭೂಮಿ ಇಲ್ಲಿನ ವೃತ್ತಿ ತರಬೇತಿಯ ಮಕ್ಕಳು ಅವರ ಪಠ್ಯಕ್ರಮದ ಒಂದು ಭಾಗವಾಗಿ ಸಮೀಪದ ಹಟ್ಟಿಯಂಗಡಿಯಲ್ಲಿರುವ ಅಂಚೆ ಕಛೇರಿಗೆ ಭೇಟಿ ನೀಡಿ ಸಂದರ್ಶನ ನಡೆಸಿದರು. ಅಲ್ಲಿನ ಪೋಸ್ಟ್ ಮಾಸ್ಟರ್ ಲವ ಪೂಜಾರಿ ಅವರು ನಮ್ಮಭೂಮಿಯ ಮಕ್ಕಳಿಗೆ ಅಂಚೆ ಕಛೇರಿಯ 150 ವರ್ಷಗಳ ಹಿಂದಿನ ಇತಿಹಾಸವನ್ನು ಪರಿಚಯಿಸಿದರು. ವಿವಿಧ ಸೇವೆಗಳಾದ ಸ್ಪೀಡ್ ಪೋಸ್ಟ್, ಸಾಮಾನ್ಯ ಪೋಸ್ಟ್, ರಿಜಿಸ್ಟರ್ ಪೋಸ್ಟ್, ಅಂಚೆ ಚೀಟಿಗಳು, ವಿದ್ಯುನ್ಮಾನ ಹಣ ವರ್ಗಾವಣೆ (ಇ-ಎಂ.ಓ) ವ್ಯವಸ್ಥೆಗಳು ಹಾಗೂ ಪೋಸ್ಟ್ ಆಫೀಸ್ ಉಳಿತಾಯ ಖಾತೆ, ಹಿರಿಯ ನಾಗರಿಕರಿಗಾಗಿ, ಹೆಣ್ಣು ಮಕ್ಕಳಿಗಾಗಿ ಪೋಸ್ಟ್ ಆಫೀಸ್ ಉಳಿತಾಯ ಯೋಜನೆ(ಸುಕನ್ಯಾ ಸಮೃದ್ಧಿ ಯೋಜನೆ) ಮುಂತಾದ ಉಳಿತಾಯ ಯೋಜನೆಗಳ ಬಗ್ಗೆ ಹಾಗೂ ದಿನ ನಿತ್ಯದ ಕಾರ್ಯವೈಖರಿಯ ಬಗ್ಗೆ ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಸರಳವಾದ ಉತ್ತರದ ಮೂಲಕ ಅಂಚೆ ಕಛೇರಿಯ ಕಾರ್ಯನಿರ್ವಹಣಾ ವ್ಯವಸ್ಥೆಯ ಮಾಹಿತಿಗಳನ್ನು ನೀಡಿದರು. ಈ ಕ್ಷೇತ್ರ ಭೇಟಿಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕೋವಿಡ್ -19 ವೈರಾಣು ಹರಡುವುದನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಬಗ್ಗೆ ಕೈಗೊಳ್ಳಬೇಕಾದ ಅವಶ್ಯಕ ಕ್ರಮಗಳನ್ನು ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟವು ಕಾರ್ಯ ಪಡೆಯನ್ನು ರಚಿಸಿದ್ದು, ಸದರಿ ಕಾರ್ಯಪಡೆಯು ಮಾ. 19 ರಂದು ಸಭೆ ಸೇರಿ ಈ ಹಿಂದೆ ಪ್ರಕಟಿಸಲಾದ ಆದೇಶವನ್ನು ಮಾರ್ಚ್ 31 ರ ವರೆಗೆ ಕೆಲವು ಪರಿಷ್ಕರಣೆಯೊಂದಿಗೆ ವಿಸ್ತರಿಸಲು ತೀರ್ಮಾನಿಸಿರುತ್ತದೆ. ಜೊತೆಗೆ ಪರಿಷ್ಕೃತ ಆದೇಶದಲ್ಲಿ ಕೆಲವು ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದ್ದು / ಸಂಸ್ಥೆಗಳನ್ನು ಕೂಡ ಸಂಪೂರ್ಣವಾಗಿ ಬಂದ್ ಮಾಡಲು ತೀರ್ಮಾನಿಸಿರುತ್ತದೆ. ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ಪರಿಷ್ಕೃತ ನಿಯಮಗಳು ಅವಶ್ಯವೆಂದು ಮನಗಂಡು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಈ ಕೆಳಗಿನಂತೆ ಆದೇಶ ಹೊರಡಿಸಿರುತ್ತಾರೆ. ಈ ಆದೇಶ ಮಾರ್ಪಾಡಾಗದ ಹೊರತಾಗಿ, ಈ ಹಿಂದಿನ ಆದೇಶವನ್ನು ಮುಂದುವರೆಸಿದ್ದು, ಆದೇಶದಲ್ಲಿ ತಿಳಿಸಲಾದಂತೆ ಏಪ್ರಿಲ್ 1 ರ ವರೆಗೆ ಎಲ್ಲಾ ನಿರ್ಬಂಧಿತ ಚಟುವಟಿಕೆ ಹಾಗೂ ಸಂಸ್ಥೆಗಳನ್ನು ಮುಚ್ಚಲು ಆದೇಶಿಸಲಾಗಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕರೆ ಮೇರೆಗೆ ಕರೋನಾ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ಯೋಧರು, ಪೌರ ಕಾರ್ಮಿಕರು, ಮಾಧ್ಯಮದವರನ್ನು ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕರು ಜಾತಿ, ಮತ ಬೇಧವಿಲ್ಲದೆ ಚಪ್ಪಾಳೆ, ಜಾಗಂಟೆ, ಶಂಖ, ಗಂಟೆ ನಾದದ ಮೂಲಕ ಪ್ರೋತ್ಸಾಹಿಸಿ ಗೌರವ ಸೂಚಿಸಿದರು.

Read More

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ/ಬೈಂದೂರು: ಕರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದ ಜನತಾ ಕರ್ಪ್ಯೂಗೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಉಭಯ ತಾಲೂಕುಗಳಲ್ಲಿ ಜನಜೀವನ ಸಂಪೂರ್ಣ ಸ್ಥಭ್ತವಾಗಿತ್ತು. ಜನರು ಮನೆಯಲ್ಲಿಯೇ ಉಳಿದು ಸ್ವಯಂಪ್ರೇರಣೆಯಿಂದ ತಮ್ಮ ಬೆಂಬಲ ಸೂಚಿಸಿದರು. ಬಿಕೋ ಎನ್ನುತ್ತಿದ್ದ ಅಂಗಡಿ ಮುಂಗಟ್ಟು, ಬಸ್ ನಿಲ್ದಾಣ: ಸದಾ ಜನರಿಂದ ಗಿಜುಗುಡುತ್ತಿದ್ದ ಕುಂದಾಪುರ ನಗರದ ಅಂಗಡಿ ಮುಂಗಟ್ಟುಗಳು, ಬಸ್ ನಿಲ್ದಾಣಗಳು ಜನರಿಲ್ಲದೇ ಬಿಕೋ ಎನ್ನುತ್ತಿದ್ದವು. ರಾಷ್ಟ್ರೀಯ ಹೆದ್ದಾರಿ- 66 ಸೇರಿದಂತೆ ಉಳಿದೆಲ್ಲಾ ರಸ್ತೆಗಳಲ್ಲಿಯೂ ವಾಹನ ಸಂಚಾರ ಅತಿ ವಿರಳವಾಗಿತ್ತು. ಸರಕಾರಿ ವಾಹನಗಳು, ಅಂಬುಲೆನ್ಸ್, ಅಲ್ಲೊಂದು ಇಲ್ಲೊಂದು ಎಂಬಂತೆ ಖಾಸಗಿ ವಾಹನಗಳು ಮಾತ್ರವೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವುದು ಕಂಡುಬಂತು. ಬೈಂದೂರು ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿಯೂ ಪರಿಸ್ಥಿತಿ ಭಿನ್ನವಾಗಿರಲಿಲ್ಲ. ಕುಂದಾಪ್ರ ಡಾಟ್ ಕಾಂ ವರದಿ. ಮುಚ್ಚಿದ ಚರ್ಚು, ದೇವಾಲಯ, ಮಸೀದಿ: ಕರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸರಕಾರದ ಆದೇಶವನ್ನು ಪಾಲಿಸುತ್ತಿರುವ ಶ್ರದ್ಧಾಕೇಂದ್ರಗಳು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪಾಲುದಾರಿಕೆಯಲ್ಲಿ ಮೀನು ಮಾರಾಟ ವ್ಯವಹಾರ ನಡೆಸುತ್ತಿದ್ದ ಉದ್ಯಮಿಯೋರ್ವರ ಕೊಲೆಗೆ ಯತ್ನಿಸಿದ ನಾಲ್ವರು ಆರೋಪಿಗಳನ್ನು ಕುಂದಾಪುರ ಪೊಲೀಸರ ತಂಡ ತ್ವರಿತ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಆರೋಪಿಗಳಿಂದ ಮಾರಕಾಯುಧ ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಮಹಾರಾಷ್ಟ್ರ ರತ್ನಗಿರಿ ಮೂಲದ ದಾನೀಶ್ ಪಾಟೀಲ್ (34) ಹಾಗೂ ಆತನ ಸಹಚರರಾದ ಆಸೀಮ್ ಖಾಜಿ (39, ಮುಕದ್ದರ್ ಜಮಾದರ್ (34), ಪ್ರಸಾದ್ (47) ಎಂದು ಗುರುತಿಸಲಾಗಿದೆ. ಘಟನೆಯ ವಿವರ: ಹಂಗಳೂರಿನ ಫ್ಲ್ಯಾಟ್ ಒಂದರಲ್ಲಿ ವಾಸವಿರುವ ಮರವಂತೆಯ ಮೊಹಮ್ಮದ್ ಶಾಕೀರ್ ಎಂಬುವವರು ಸುಮಾರು ಎರಡು ವರ್ಷಗಳಿಂದ ಮಹಾರಾಷ್ಟ್ರ ರತ್ನಗಿರಿಯ ದಾನೀಶ್ ಪಾಟೀಲ್ ಎಂಬುವವರೊಂದಿಗೆ ಮೀನು ಖರೀದಿ ವ್ಯವಹಾರ ನಡೆಸುತ್ತಿದ್ದರು. ಹಣದ ಲೆಕ್ಕಾಚಾರ ಸರಿಯಾಗಿದ್ದಾಗ್ಯೂ ದಾನೀಶ್ ಪಾಟೀಲ್ ಎಂಬಾತ, ಶಾಕೀರ್ ಹಾಗೂ ಅವರ ತಂದೆಗೆ ಆಗಾಗ್ಗೆ ಕರೆ ಮಾಡಿ ನೀವು 50ಲಕ್ಷ ರೂ. ಕೊಡುವುದು ಬಾಕಿ ಇದೆ. ಅದನ್ನು ಕೊಡುವಂತೆ ಬೆದರಿಕೆ ಹಾಕುತ್ತಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ರತ್ನಗಿರಿಯಿಂದ ಕುಂದಾಪುರಕ್ಕೆ ಬಂದು ಲಾಡ್ಜ್ ಒಂದರಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಗಂಗೊಳ್ಳಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮಸಭೆ, ಯುಡಿಐಡಿ ಕಾರ್ಡ್ ವಿತರಣೆ ಹಾಗೂ 2016ರ ಕಾಯ್ದೆ ಕುರಿತ ಕಾರ್ಯಾಗಾರ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಮಂಗಳವಾರ ಜರಗಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬೆಂಗಳೂರು ಡಿಎನ್‌ಎ ರೂಪಲಕ್ಷ್ಮೀ ಅವರು 2016ರ ಕಾಯ್ದೆ ಕುರಿತು ಹಾಗೂ ಸರಕಾರದಿಂದ ವಿಕಲಚೇತನರಿಗೆ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ತಾಲೂಕು ಸಂಯೋಜಕ ಮಂಜುನಾಥ ಹೆಬ್ಬಾರ್ ಮಾಹಿತಿ ನೀಡಿದರು. ಯುಡಿಐಡಿ ಕಾರ್ಡ್ ವಿತರಣೆ ಮಾಡಲಾಯಿತು. ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗ್ರಾಪಂ ಸದಸ್ಯರಾದ ಬಿ.ಗಣೇಶ ಶೆಣೈ, ದೇವು ಸಿಪಾಯಿ, ಶಾಂತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಅವರು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಗಂಗೊಳ್ಳಿಯ ಪ್ರಧಾನ ಕಛೇರಿಗೆ ಮಂಗಳವಾರ ಭೇಟಿ ನೀಡಿದರು. ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಅವರು ಯಶಪಾಲ ಸುವರ್ಣ ಅವರನ್ನು ಸ್ವಾಗತಿಸಿ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಕಾರ್ಯಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು. ಸಂಘದ ಆಡಳಿತ ಮಂಡಳಿಯ ನೂತನ ನಿರ್ದೇಶಕರೊಂದಿಗೆ ಸಂಸ್ಥೆಯ ಕಾರ್ಯಯೋಜನೆ ಬಗ್ಗೆ ಚರ್ಚೆ ನಡೆಸಿದ ಯಶಪಾಲ ಸುವರ್ಣ ಅವರು ಸಂಸ್ಥೆಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸದಾಶಿವ ಖಾರ್ವಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಸಂಘದ ನಿರ್ದೇಶಕರಾದ ಹರೀಶ ಖಾರ್ವಿ, ಚಂದ್ರ ಖಾರ್ವಿ, ಮೋಹನ ಖಾರ್ವಿ, ಗುರುರಾಜ್ ಖಾರ್ವಿ, ರಾಜೇಶ ಸಾರಂಗ್, ಜ್ಯೋತಿ ಆರ್. ಹಾಗೂ ಸಂಘದ ವ್ಯವಸ್ಥಾಪಕ ಮೋಹನ…

Read More