Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಕ್ರಮವಾಗಿ ಗೋಸಾಗಾಟ ಮಾಡಲಾಗುತ್ತಿದ್ದ ಇನ್ಸುಲೆಟರ್ ಬೆನ್ನತ್ತಿದ ಬೈಂದೂರು ಪೊಲೀಸರು ೧೪ ಜಾನುವಾರು ಹಾಗೂ ವಾಹನವನ್ನು ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ. ನಾವುಂದದಿಂದ ಭಟ್ಕಳ ಕಡೆಗೆ ಇನ್ಸುಲೆಟರ್ ವಾಹನದಲ್ಲಿ ಜಾನುವಾರುಗಳ ಸಾಗಾಟ ಮಾಡುತ್ತಿದ್ದಾರೆ ಎಂಬ ಹಿಂದೂಪರ ಸಂಘಟನೆಯ ಮಾಹಿತಿ ಆಧರಿಸಿ ಶಿರೂರು ಟೋಲ್ ಗೇಟಿನಲ್ಲಿ ವಾಹನದ ಮಾಹಿತಿ ಕಲೆಹಾಕಿದ ಬೈಂದೂರು ಪೊಲೀಸರು ಇನ್ಸುಲೆಟರ್ ಬೆನ್ನತ್ತಿ ಭಟ್ಕಳದಲ್ಲಿ ೧೪ ಜಾನುವಾರು ಸಹಿತ ವಾಹನ ವಶಕ್ಕೆ ಪಡೆದಿದ್ದಾರೆ. ಜಲೀಲ್ ಎಂಬಾತ ಈ ಅಕ್ರಮ ಗೋ ಸಾಗಾಟಕ್ಕೆ ಬೈಕ್ ಮೂಲಕ ಎಸ್ಕಾರ್ಟ್ ಮಾಡುತ್ತಿದ್ದ ಎನ್ನಲಾಗಿದೆ. ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ ಮಾರ್ಗದರ್ಶನದಲ್ಲಿ ಬೈಂದೂರು ಪಿಎಸ್‌ಐ ಸಂಗೀತಾ, ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ಕೊಲ್ಲೂರಿನಲ್ಲಿಯೂ ಗೋಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆಯಲಾಗಿದೆ. ಶಾಜು ಎಂಬಾತ ಬೈಕಿನಲ್ಲಿ ಗೋ ಮಾಂಸ ಕೊಂಡೊಯ್ಯುವಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದು ಮಾಂಸ ಕಂಡ ಸ್ಥಳಿಯರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ 44ನೇ ವಾರ್ಷಿಕ ಮಹಾಸಭೆಯು ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಶುಕ್ರವಾರ ಜರುಗಿತು ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 43 ವರ್ಷಗಳುದ್ದಕ್ಕೆ ಏರುಗತಿಯ ಪ್ರಗತಿಯನ್ನು ದಾಖಲಿಸುತ್ತ ಬಂದಿದೆ. ವರದಿ ವರ್ಷದಲ್ಲಿ ರೂ 635.32 ಕೋಟಿ ವ್ಯವಹಾರ ನಡೆಸಿ, ರೂ 3.45 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 15 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ ಎಂದು ಹೇಳಿದರು. ಸಂಘವು ವರ್ಷದಲ್ಲಿ ರೂ. 141 ಕೋಟಿ ಠೇವಣಿ ಸಂಗ್ರಹಿಸಿ, ರೂ. 126 ಕೋಟಿ ಸಾಲ ನೀಡಿದೆ. ವಿವಿಧ ಸಂಸ್ಥೆಗಳಲ್ಲಿ ರೂ. 62.19 ಕೋಟಿ ಹೂಡಿಕೆ ಮಾಡಿದೆ. ಸಂಘದ ಬಳಿ ರೂ. 24 ಕೋಟಿ ನಿಧಿ ಇದೆ. ಮುಂದಿನ ವರ್ಷ ವ್ಯವಹಾರವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪೇಟೆ ವೆಂಕಟರಮಣ ದೇವಸ್ಥಾನದ ಭಜನಾ ಸಪ್ತಾಹ ಕಾರ್ಯಕ್ರಮ ನಡೆಯಿತು. ಗುರುಕೃಪಾ ಮಹಿಳಾ ಮಂಡಳಿ ಅಧ್ಯಕ್ಷೆ ಹಾಲಾಡಿ ಲಕ್ಷ್ಮೀದೇವಿ ವಾಸುದೇವ್ ಕಾಮತ್‌ರವರ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮ ಹಾಗೂ ದೀಪದ ಸುತ್ತಾ ಕುಣಿತ ಭಜನೆ ನಡೆಯಿತು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಉನ್ನತ ವ್ಯಾಸಂಗ ಮಾಡುತ್ತಿರುವ ಶೇ.40 ಮತ್ತು ಅದಕ್ಕಿಂತ ಹೆಚ್ಚಿನ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಡಿಸೆಂಬರ್ 31ರ ಒಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574810/811 ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಸಕಾಲ ಸಂಬಂಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ಬಸ್ಸುಪಾಸುನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ನಿರ್ವಹಿಸಲಾಗುತ್ತದೆ. ವಿಕಲಚೇತನರ ಪ್ರಯಾಣಿಕರಿಗೆ ತಮ್ಮ ವಾಸಸ್ಥಳದಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ ಬಸ್ಸು ಪಾಸುಗಳನ್ನು ವಿತರಿಸಿದ್ದು, 2020 ನೇ ಸಾಲಿನಲ್ಲಿ ವಿತರಿಸಿರುವ ಸದ್ರಿ ರಿಯಾಯಿತಿ ಬಸ್ಸು ಪಾಸುಗಳ ಅವಧಿಯು ಡಿಸೆಂಬರ್ 31 ಕ್ಕೆ ಮುಕ್ತಾಯಗೊಳ್ಳಲಿದ್ದು, 2021 ನೇ ಸಾಲಿಗಾಗಿ ಬಸ್ಸು ಪಾಸುಗಳನ್ನು ಜನವರಿ 15 ರಿಂದ ನವೀಕರಿಸಲು ಕ್ರಮಕೈಗೊಂಡು ಹೊಸ ಪಾಸುಗಳನ್ನು ನೀಡಲಾಗುತ್ತದೆ. ವಿಕಲಚೇತನರ ರಿಯಾಯಿತಿ ಬಸ್ಸು ಪಾಸುಗಳನ್ನು ಫಲಾನುಭವಿಗಳು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ ಸಾಕಷ್ಟು ಕಾಲಮಿತಿ ನೀಡುವ ಉದ್ದೇಶದಿಂದ 2020 ನೇ ಸಾಲಿನಲ್ಲಿ ವಿತರಿಸಿದ ಪಾಸುಗಳನ್ನು ಫೆಬ್ರವರಿ 28 ರವರೆಗೆ ಮಾನ್ಯ ಮಾಡಲಾಗುವುದು. ವಿಕಲಚೇತನರ ರಿಯಾಯಿತಿ ಪಾಸುಗಳನ್ನು ಪಡೆಯಲು ಸೇವಾಸಿಂಧು ಪೋರ್ಟಲ್https://serviceonline.gov.in/karnataka/ ನಲ್ಲಿ ಅರ್ಜಿ ಸಲ್ಲಿಸುವಂತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಆದರೆ ಈವರೆಗೆ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರ ಪಾಲ್ಗೊಳ್ಳುವಿಕೆ ತೀರಾ ಕಡಿಮೆಯಾಗಿರುತ್ತದೆ. ಆದುದರಿಂದ ರೈತರು ಸ್ವತಃ ಬೆಳೆ ಸಮೀಕ್ಷೆಯನ್ನು ಕೈಗೊಳ್ಳುವ ಅವಧಿಯನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದ್ದು, ರೈತರು ಗೂಗಲ್ ಪ್ಲೇಸ್ಟೋರ್‌ನಿಂದ ಅಥವಾ https://play.google.com/store/apps/details?%20id=com.csk.RabiTPKfarmer.cropsurvey ಲಿಂಕ್ ಬಳಸಿ, ಹಿಂಗಾರು ರೈತರ ಬೆಳೆ ಸಮೀಕ್ಷೆ 2020-21 ಆ್ಯಪ್‌ನ್ನು ಡೌನ್‌ಲೋಡ್ ಮಾಡಿ, ಆರ್ಥಿಕ ವರ್ಷ ಹಾಗೂ ಋತುವನ್ನು ದಾಖಲಿಸಬೇಕು. ನಂತರ ಆಧಾರ್ ಕ್ಯೂಆರ್ ಕೋಡ್‌ನ್ನು ಸ್ಕಾನ್‍ ಮಾಡಿ ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದರಿಂದ ಮೊಬೈಲ್ ಸಂಖ್ಯೆಗೆ ಓ.ಟಿ.ಪಿ ಬರಲಿದ್ದು, ಓ.ಟಿ.ಪಿ ಯನ್ನು ದಾಖಲಿಸಿ ಸಲ್ಲಿಸಬೇಕು. ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್, ಹಿಸ್ಸಾ, ಮಾಲೀಕನ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಿ, ಸರ್ವೆ ನಂಬರ್‌ಗಳಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು. ಬೆಳೆ ಸಮೀಕ್ಷೆ ಮಾಹಿತಿಯನ್ನು ಪೃಕೃತಿ ವಿಕೋಪಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ತಾಲೂಕಿನ ಕುಂದಾಪುರ ಹೊಲಿಕ್ರಾಸ್ ಚರ್ಚ್, ಬಸ್ರೂರು ಫಿಲೀಪ್ ನೇರಿ ಚರ್ಚ್, ತ್ರಾಸಿ ಕ್ರಿಸ್ಟ್ಕಿಂಗ್ ಚರ್ಚ್, ಗಂಗೊಳ್ಳಿ ಅವರ್ ಲೇಡಿ ಆಫ್ ಇಮ್ಯಾಕ್ಯೂಲೇಟ್ ಚರ್ಚ್, ತಲ್ಲೂರು, ಬೆಳ್ವೆ ಜೊಸೆಫ್ ಚರ್ಚ್, ಫ್ರಾನ್ಸಿಸ್ ಆಸಿಸಿ ಚರ್ಚ್, ಬೈಂದೂರು ಹೊಲಿಕ್ರಾಸ್ ಚರ್ಚ್ ಸೇರಿದಂತೆ ವಿವಿಧ ಚರ್ಚುಗಳು ಹಾಗೂ ಕ್ರೈಸ್ತ ಸಮುದಾಯ ಕ್ರಿಸ್ಮಸ್ ಹಬ್ಬವನ್ನು ಸರಳವಾಗಿ ಆಚರಿಸಿ ಸಂಭ್ರಮಿಸಿದರು. ಚರ್ಚ್ಗಳಿಗೆ ಕುಟುಂಬ ಸಮೇತ ತೆರಳಿದ ಕ್ರೈಸ್ತರು, ಯೇಸು ಕ್ರಿಸ್ತನ ಶೀಲುಬೆ ಮುಂದೆ ನಿಂತು ಶ್ರದ್ದಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಚರ್ಚ್ನ ಆವರಣದಲ್ಲಿ ನಿರ್ಮಿಸಿರುವ ಕಣ್ಮನ ಸೆಳೆಯುವ ಗೋದಲಿಗಳು ವಿದ್ಯುತ್ ದೀಪಾಲಂಕಾರ ಗಮನ ಸೆಳೆಯುತ್ತಿದ್ದವು. ಕ್ರೈಸ್ತರ ಮನೆಗಳಲ್ಲಿ ಸಂಭ್ರಮ ಮನೆಮಾಡಿದ್ದು, ಗೋದಲಿ, ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ. ಬೈಂದೂರು ಹೊಲಿಕ್ರಾಸ್ ಚರ್ಚ್‌ನಲ್ಲಿ ರೆ.ಪಾ ಲಿಯೋ ಲಸ್ರಾದೊ, ರೆ.ಪಾ ಸ್ಟ್ಯಾನಿ ಮಣಕ್ಕಲ್, ರೆ.ಪಾ ವಿನ್ಸೆಂಟ್ ಕುವೆಲ್ಲೊ, ಬ್ರದರ್ ಲಿವನ್ ಮಥಾಯಸ್ ಇವರ ನೇತ್ರತ್ವದಲ್ಲಿ ಸರಳವಾಗಿ ಕ್ರಿಸ್‌ಮಸ್ ಹಬ್ಬವನ್ನು ಆಚರಿಸಲಾಯಿತು. ಇದನ್ನೂ ಓದಿ: ► ಸಡಗರ, ಸಂಭ್ರಮದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಂತರಾಷ್ರ್ಟೀಯ ಮಹಿಳಾ ದಿನಾಚರಣೆಯಂದು ಇಲಾಖಾ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ. ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥ್ಯರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ಗುರುತಿಸಿ ಮಹಿಳಾ ದಿನಾಚರಣೆಯಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪ್ರಸಕ್ತ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿ-ಪ್ರತಿಯಲ್ಲಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ ಇವರಿಗೆ ಜನವರಿ 20ರ ಒಳಗೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರೈತರು ಇಂದಿನ ದಿನಗಳಲ್ಲಿ ಹಲವಾರು ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಇದಕ್ಕೆ ಹಲವು ಕಾರಣಗಳು ಇವೆ. ಸಮಸ್ಯೆಗಳನ್ನು ನಿವಾರಿಸಿಕೊಂಡು ಸಂಘಟಿತರಾದಲ್ಲಿ ಯಶಸ್ಸು ಖಚಿತ ಎಂದು ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮಾ ಹೇಳಿದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ, ರೈತಸಿರಿ ಹಾಗೂ ರೈತ ಸೇವಾ ಒಕ್ಕೂಟದ ಸಹಭಾಗಿತ್ವದಲ್ಲಿ ಸಂಘದ ರೈತಸಿರಿ ಸಭಾಂಗಣದಲ್ಲಿ ನಡೆದ ವಿಶ್ವ ರೈತ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ವೈಜ್ಞಾನಿಕ ಕೃಷಿ ವಿಧಾನಕ್ಕೆ ಹೊಂದಿಕೊಳ್ಳದೆ ಇರುವುದು, ಕೃಷಿಯಿಂದ ಉತ್ತಮ ಇಳುವರಿ ಸಿಗದೇ ಇರುವುದು, ಹೆಚ್ಚು ರಾಸಾಯನಿಕ ಗೊಬ್ಬರ ಬಳಸದೆ ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕು. ಸಮಗ್ರ ಕೃಷಿಯಿಂದಾಗುವ ಅನುಕೂಲ ಹಾಗೂ ಲಾಭವು ಜಗತ್ತಿನ ಯಾವುದೇ ವೃತ್ತಿಯಿಂದ ಸಿಗುವುದಿಲ್ಲ. ಯುವ ಪೀಳಿಗೆಯನ್ನು ಕೃಷಿಯ ಕಡೆಗೆ ಆಕರ್ಷಿಸಲು ಹಿರಿಯರು ಪ್ರಯತ್ನಿಸಬೇಕು ಎಂದು ಹೇಳಿದರು. ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್. ಪೈ ಸ್ವಾಗತಿಸಿ. ಹಿರಿಯ ವ್ಯವಸ್ಥಾಪಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊಸ ವರ್ಷದ ಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹಾನಿಯನ್ನು ತಡೆಯುವ ದೃಷ್ಟಿಯಿಂದ 108 ಆರೋಗ್ಯ ಕವಚ ಅಂಬುಲೆನ್ಸ್ ಕರ್ನಾಟಕ ರಾಜ್ಯಾದ್ಯಂತ ಸುಸಜ್ಜಿತಗೊಂಡಿದೆ. ಸಾಮಾನ್ಯ ದಿನಗಳಿಗಿಂತ ಹೊಸವರ್ಷ ಆಚರಣೆಗಳಲ್ಲಿ ಶೇ.30ರಿಂದ 35 ಅಪಘಾತ ಪ್ರಕರಣಗಳು ವರದಿಯಾಗುತ್ತಿದೆ. ಹೀಗಾಗಿ ಹೆಚ್ಚಿನ ತುರ್ತುಪರಿಸ್ಥಿತಿಯನ್ನು ನಿರೀಕ್ಷಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಆರೋಗ್ಯ ಕವಚ 108 ಅಂಬುಲೆನ್ಸ್‌ನ್ನು ನಿಯೋಜಿಸಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ 8 ಆರೋಗ್ಯ ಕವಚ 108ಅಂಬುಲೆನ್ಸ್‌ಗಳನ್ನು ತಜ್ಞ ಸಿಬ್ಬಂದಿಗಳೊಂದಿಗೆ ನಿಯೋಜಿಸಲಾಗಿದೆ. ಹೆಚ್ಚುವರಿ ಸೇವೆಗಾಗಿ ಆಂಬುಲೆನ್ಸ್ ಸಿಬ್ಬಂದಿಗಳ ಸಾಪ್ತಾಯಿಕ ರಜೆಯನ್ನು ರದ್ದುಗೊಳಿಸಲಾಗಿದೆ. ಮುಂಜಾಗೃತವಾಗಿಯೇ ಎಲ್ಲಾ ಆಂಬುಲೆನ್ಸ್‌ನಲ್ಲಿ ಇಂಧನ, ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ಸಜ್ಜುಗೊಳಿಸಲಾಗಿದೆ. 108 ಅಂಬುಲೆನ್ಸ್ ಸೇವೆಯು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಹಕಾರವನ್ನು ಹೊಂದಿದ್ದು, ಸಾವು – ನೋವುಗಳು ಅನಾಹುತಗಳ ಮಾಹಿತಿಗಳನ್ನು ಪೊಲೀಸ್, ಅಗ್ನಿಶಾಮಕ ಸೇವೆ ಮತ್ತು ಆರೋಗ್ಯ ಇಲಾಖೆಗಳೊಂದಿಗೆ ಹಂಚಿಕೊಳ್ಳಲಾಗುವುದು. ಹೊಸ ವರ್ಷದ ತುರ್ತು ಪ್ರತಿಸ್ಪಂದನೆಗೆ ಆರೋಗ್ಯ ಕವಚ 108 ಅಂಬುಲೆನ್ಸ್‌ಗಳು ಸಜ್ಜುಗೊಂಡಿದ್ದು, ತುರ್ತು…

Read More