Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಮರವಂತೆ ಬ್ರೇಕ್ ವಾಟರ್ ಎರಡನೇ ಹಂತದ ಕಾಮಗಾರಿ, ಗಂಗೊಳ್ಳಿ ಮೀನುಗಾರಿಕಾ ಬಂದರು ದುರಸ್ತಿ ಹಾಗೂ ಕೊಡೇರಿ ಮೀನುಗಾರಿಕಾ ಬಂದರು ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಒಟ್ಟು 93.8 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ. ಮರವಂತೆ ಬ್ರೇಕ್ ವಾಟರ್ ಎರಡನೇ ಹಂತದ ಕಾಮಗಾರಿಗೆ 85 ಕೋಟಿ ರೂ. ಅನುದಾನ, ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಡಯಾಫ್ರಾಮ್ ಗೋಡೆ ಹಾಗೂ ಜೆಟ್ಟಿಯನ್ನು ಮರುನಿರ್ಮಿಸುವ ಕಾಮಗಾರಿಗಾಗಿ 4 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಕೊಡೇರಿ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಕಾಮಗಾರಿಗಾಗಿ ರೂ. 2 ಕೋಟಿ ಅನುದಾನ ಮತ್ತು ಕೊಡೇರಿ ನದಿದಂಡೆ ಸಂರಕ್ಷಣೆ ಹಾಗೂ ನೇವಿಗೇಷನ್ ಚಾನೆಲ್ ಕಾಮಗಾರಿಗಾಗಿ 2.80 ಕೋಟಿ ರೂ. ಅನುದಾನ ಮಂಜೂರು ಮಾಡಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಮೀನುಗಾರರು ಹಾಗೂ ನಾಗರಿಕರ ಮನವಿಯಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಹಾಗೂ ಬೈಂದೂರು ವಿಧಾನಸಭಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೇಂದ್ರ ಸರಕಾರದ ತೆರವು ಮಾರ್ಗಸೂಚಿ ಅಗಸ್ಟ್ 31ರ ತನಕ ಜಾರಿಯಲ್ಲಿದ್ದು, ಯಾವುದೇ ಧಾರ್ಮಿಕ ಆಚರಣೆಗಳಿಗೆ ಅನುಮತಿ ಇಲ್ಲದಿರುವುದರಿಂದ ಗಣೇಶ ಚತುರ್ಥಿ ಹಬ್ಬವನ್ನು ಸಾರ್ವಜನಿಕವಾಗಿ ನಡೆಸುವಂತಿಲ್ಲ. ಮನೆಯಲ್ಲೇ ಅಥವಾ ದೇವಸ್ಥಾನದಲ್ಲಿ ಸರಳವಾಗಿ ಸರಕಾರದ ಮಾರ್ಗಸೂಚಿ ಅನ್ವಯ ಆಚರಿಸಲು ಅವಕಾಶ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ರಾಜ್ಯ ಸರಕಾರದ ಮಾರ್ಗಸೂಚಿ: ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸುವುದು. ಕುಂದಾಪ್ರ ಡಾಟ್ ಕಾಂ ಸುದ್ದಿ. ಗಣೇಶೋತ್ಸವ ಹಬ್ಬವನ್ನು ಸಾರ್ವಜನಿಕ ಸ್ಥಳ (ಉದಾ-ರಸ್ತೆ, ಗಲ್ಲಿ, ಓಣಿ, ಮೈದಾನ ಇತ್ಯಾದಿ) ಗಳಲ್ಲಿ ಪ್ರತಿಷ್ಠಾಪಿಸಬಾರದು. ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡತಕ್ಕದ್ದಲ್ಲ. ಗಣೇಶ ಮೂರ್ತಿ ತರುವಾಗ ಹಾಗೂ ವಿಸರ್ಜಿಸುವಾಗ ಅಥವಾ ಯಾವುದೇ ಸಂದರ್ಭಗಳಲ್ಲಿ ಮೆರವಣಿಗೆಯನ್ನು ಹೊರಡಿಸತಕ್ಕದ್ದಲ್ಲ/ಮಾಡತಕ್ಕದ್ದಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡುವುದು. ಗಣೇಶ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.14ರ ಶುಕ್ರವಾರ 322 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 95, ಉಡುಪಿ ತಾಲೂಕಿನ 186 ಹಾಗೂ ಕಾರ್ಕಳ ತಾಲೂಕಿನ 36ಮಂದಿಗೆ ಪಾಸಿಟಿವ್ ಬಂದಿದೆ. 5 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 88 ಸಿಂಥಮೇಟಿವ್ ಹಾಗೂ 234 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 175 ಪುರುಷರು, 147 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 110, ILI 88 ಪ್ರಕರಣ, ಸಾರಿ 4 ಪ್ರಕರಣವಿದ್ದು, 117 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 3 ಪ್ರಕರಣ ಬೇರೆ ರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 333 ಮಂದಿ ಆಸ್ಪತ್ರೆಯಿಂದ ಹಾಗೂ 281 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 86, 48, 48, 55 ವರ್ಷದ ಕುಂದಾಪುರದ ತಾಲೂಕಿನ ನಾಲ್ವರು ಪುರಷರು, 63 ವರ್ಷದ ಉಡುಪಿ ತಾಲೂಕು ಪುರುಷ ಇಂದು ಮೃತಪಟ್ಟಿದ್ದಾರೆ. 2,262 ನೆಗೆಟಿವ್: ಈ ತನಕ ಒಟ್ಟು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು, ಯಡ್ತರೆ ಮತ್ತು ಪಡುವರಿ ಗ್ರಾಮ ಪಂಚಾಯಿತಿಗಳನ್ನು ಒಗ್ಗೂಡಿಸಿ ಬೈಂದೂರು ಪಟ್ಟಣ ಪಂಚಾಯಿತಿ ಅಸ್ತಿತ್ವಕ್ಕೆ ತರುವ ಅಧಿಸೂಚನೆ ಬುಧವಾರದ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟವಾಗಿದೆ. ಅದರೊಂದಿಗೆ ಬೈಂದೂರು ಪಟ್ಟಣ ಪಂಚಾಯಿತಿ ಅಸ್ತಿತ್ವಕ್ಕೆ ಬಂದಿದೆ. ಕಳೆದ ವರ್ಷ ಡಿ. 31ರಂದು ಸಚಿವಾಲಯವು ಪಟ್ಟಣ ಪಂಚಾಯಿತಿ ರಚನೆ ಪ್ರಸ್ತಾವನೆಯನ್ನು ಪ್ರಕಟಿಸಿ ಬಾಧಿತರಾಗುವವರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ಈಗ ಏಳು ತಿಂಗಳ ಬಳಿಕ ಅಂತಿಮ ಅಧಿಸೂಚನೆ ಹೊರಡಿಸಿದೆ. ಸರ್ಕಾರದ ಇಂದಿನ ನಡೆಯಿಂದ ತಾಲ್ಲೂಕು ಕೇಂದ್ರವಾಗಿರುವ ಬೈಂದೂರು ಪ್ರದೇಶದ ಅಭಿವೃದ್ಧಿಗೆ ವೇಗ ಸಿಗುತ್ತದೆ ಎಂದು ಕನಸು ಕಂಡವರಿಗೆ ಸಂತಸವಾಗಿದೆ. 1971ರಲ್ಲಿ ಬೈಂದೂರು, ಯಡ್ತರೆ ಗ್ರಾಮ ಪಂಚಾಯಿತಿಗಳು ಸೇರಿ ಪುರಸಭೆಯಾಯಿತು. ಅದರ ಮೂಲಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳೂ ನಡೆದಿದ್ದುವು. ಆದರೆ ಗ್ರಾಮೀಣ ಪ್ರದೇಶಕ್ಕೆ ಸಿಗುವ ಹಲವು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದೇವೆ ಎಂದು ಭಾವಿಸಿದ ಇಲ್ಲಿನ ಜನರ ಆಗ್ರಹಕ್ಕೆ ಮಣಿದ ಸರ್ಕಾರ ಅವುಗಳನ್ನು 1997ರಲ್ಲಿ ಪೂರ್ವ ಸ್ಥಿತಿಗೆ ಮರಳಿಸಿತು. ಈಚಿನ ದಿನಗಳಲ್ಲಿ ಪ್ರದೇಶದ ಅಭಿವೃದ್ಧಿಗೆ ಪಟ್ಟಣ ಪಂಚಾಯಿತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಅ.13: ಪ್ರಸ್ತುತ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ(ಐ.ಎಸ್.ಬಿ.), ಭೂ ಒಡೆತನ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಯೋಜನೆ ಹಾಗೂ ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಿಂದ ಸ್ವಯಂ ಉದ್ಯೋಗ ನೇರಸಾಲ, ಉದ್ಯಮಶೀಲತಾ ಅಭಿವೃದ್ಧಿ(ಐ.ಎಸ್.ಬಿ.), ಮೈಕ್ರೋ ಕ್ರೆಡಿಟ್ ಸಾಲ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಿದೆ. ಈಗಾಗಲೇ ನಿಗಮದಿಂದ ಯಾವುದೇ ಸೌಲಭ್ಯ ಪಡೆಯದವರು ಆಗಸ್ಟ್ 31 ರೊಳಗೆ ಅರ್ಜಿ ಸಲ್ಲಿಸಬಹುದು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶದಡಿ ಅರ್ಜಿ ನಮೂನೆಯನ್ನು ನಿಗಮದ http://adcl.karnataka.gov.in ನಲ್ಲಿ ಹಾಗೂ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಡಿ http://adijambava.karnataka.gov.in ವೆಬ್‌ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮೈಸೂರಿನ ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಸಂಸ್ಥೆಯಿಂದ ಪ್ರಸ್ತುತ ಸಾಲಿನ ಡಿಪ್ಲೊಮ ಕೋರ್ಸುಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 12 ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗಾಗಿ www.jsspda.org ವೆಬ್‌ಸೈಟ್‌ನ್ನು ವೀಕ್ಷಿಸಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆ: 0821-2548315ಗೆ ಸಂಪರ್ಕಿಸಬಹುದು. ಎಂದು ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ► ವಿಕಲಚೇತನರ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ – https://kundapraa.com/?p=40280 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಲು 6 ತಿಂಗಳ ಅವಧಿಗಾಗಿ ಪ್ರಯೋಗಶಾಲಾ ತಂತ್ರಜ್ಞರ (20 ಹುದ್ದೆ) ದತ್ತಾಂಶ ನಮೂದಕರ (20 ಹುದ್ದೆ) ಗಳಿಗೆ ಆಗಸ್ಟ್ 14 ರಿಂದ 17 ರ ವರೆಗೆ ನೇರ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ಮತ್ತು ದೃಡೀಕೃತ ದಾಖಲಾತಿಗಳೊಂದಿಗೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಅಜ್ಜರಕಾಡು ಇಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಪ್ರಯೋಗಶಾಲಾ ತಂತ್ರಜ್ಞ ಹುದ್ದೆಗೆ , ಡಿಎಂಎಲ್‌ಟಿ/ಬಿಎಂಎಲ್‌ಟಿ ಯವರಿಗೆ ಪ್ರಥಮ ಆದ್ಯತೆ ಅಥವಾ ಎಂ.ಎಸ್ಸಿ ನರ್ಸಿಂಗ್ /ಬಿ.ಎಸ್ಸಿ ನರ್ಸಿಂಗ್/ಜಿಎನ್‌ಎಂ:ಪ್ಯಾರಾ ಮೆಡಿಕಲ್ ಬೋರ್ಡ್ ನಲ್ಲಿ ನೊಂದಣಿ, ಅಥವಾ ನರ್ಸಿಂಗ್ ಕೌನ್ಸಿಲ್ ನಲ್ಲಿ ನೊಂದಣಿ ಮಾಡಿದವರು ಹಾಗೂ ದತ್ತಾಂಶ ನಮೂದಕರ ಹುದ್ದೆಗೆ ,ಯಾವುದೇ ಪದವಿ ಮತ್ತು ಡಿಸಿಎ ಡಿಪ್ಲೋಮಾ ಕಂಪ್ಯೂಟರ್ ಅಪ್ಲಿಕೇಷನ್ ಮತ್ತು 2 ವರ್ಷದ ಅನುಭವ ಹೊಂದಿದ ಬಗ್ಗೆ ಪ್ರಮಾಣ ಪತ್ರ ಹೊಂದಿದವರು ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.13ರ ಗುರುವಾರ 402 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7174 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 4138 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2966 ಸಕ್ರಿಯ ಪ್ರಕರಣಗಳಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಹಾಗೂ 1290 ಮಂದಿ ಹೋಮ್ ಐಸೋಲೇಶನ್ ಮೂಲಕ ನಿಗಾ ಇರಿಸಲಾಗಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 70 ಮಂದಿ ಮೃತಪಟ್ಟಿದ್ದಾರೆ. ಇಂದು ಒಟ್ಟು 290 ಮಂದಿ ಬಿಡುಗಡೆಗೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಪಂಗಡದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ, ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯದ ಜನಾಂಗಕ್ಕೆ ಸ್ವಯಂ ಉದ್ಯೋಗ, ನೇರಸಾಲ ಉದ್ಯಮಶೀಲತಾ, ಭೂ ಒಡೆತನ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಮದಿಂದ ಯಾವುದೇ ಸೌಲಭ್ಯ ಪಡೆಯದ ೧೮ರಿಂದ ೬೦ ವರ್ಷದ ಒಳಗಿನವರು. ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ನಿಗಮದ ವೆಬ್‌ಸೈಟ್ https://kmvstdcl.karnataka.gov.in ನಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಬಿ ಬ್ಲಾಕ್, ಕೊಠಡಿ ಸಂಖ್ಯೆ 302, ರಜತಾದ್ರಿ ಮಣಿಪಾಲ-576104, ದೂರವಾಣಿ ಸಂಖ್ಯೆ – 0820-2574884 ಗೆ ಸಂಪರ್ಕಿಸಬಹುದೆಂದು ಪ್ರಕಟಣೆಯ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, ಆ.13: ಪ್ರಸ್ತುತ ಸಾಲಿನ ವಿಕಲಚೇತನಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಕೇಂದ್ರ ಸರ್ಕಾರದಿಂದ ನೀಡುವ ರಾಷ್ಟ್ರ ಪ್ರಶಸ್ತಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಸಾಧನೆಗಳ ಮತ್ತು ದಾಖಲೆಗಳ ಬಗ್ಗೆ ಸಂಕ್ಷೀಪ್ತ ಮಾಹಿತಿಯೊಂದಿಗೆ ಆಸಕ್ತರು ಆಗಸ್ಟ್ 18ರ ಒಳಗೆ ವಿಕಲಚೇತನರ ಸಬಲೀಕರಣ ಅಧಿಕಾರಿ ಕಛೇರಿ, ತಳ ಅಂತಸ್ತು, ಕೊಠಡಿ ಸಂಖ್ಯೆ 4, 5 ರಜತಾದ್ರಿ ಮಣಿಪಾಲ ಉಡುಪಿ ಕಛೇರಿಗೆ ಸಲ್ಲಿಸಬಹುದಾಗಿದೆ. ಅರ್ಜಿಯನ್ನು www.disabilityaffairs.gov.in ವೆಬ್‌ಸೈಟ್‌ನಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿಯನ್ನು ಅಥವಾ ದೂರವಾಣಿ ಸಂಖ್ಯೆ 0820-2574810 ಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ► ವಿಶೇಷಚೇತನರಿಗೆ ಡಿಪ್ಲೊಮ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ – https://kundapraa.com/?p=40286 .

Read More