Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಅವರು 84ನೇ ಹುಟ್ಟುಹಬ್ಬವನ್ನು ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಿರೂರಿನಲ್ಲಿ ಪ್ರತ್ಯೇಕವಾಗಿ ಮಂಗಳವಾರ ಅವರ ಅಭಿಮಾನಿಗಳು ಆಚರಿಸಿದರು. ಮಾದರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಸಿಹಿತಿಂಡಿ ಹಾಗೂ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಕಲಿಕಾ ಉಪಕರಣಗಳನ್ನು ವಿತರಿಸಿ ಮಾತನಾಡಿದ ಅವರು, ಮಕ್ಕಳಿಗೆ ಸುಂದರ ಜೀವನ ರೂಪಿಸಿಕೊಳ್ಳುವುದಕ್ಕೆ ವಿದ್ಯಾರ್ಥಿ ಜೀವನ ಅಮೂಲ್ಯ ಅವಕಾಶ. ಉತ್ತಮ ನಡವಳಿಕೆ ಮೂಲಕ ಅದರ ಸದುಪಯೋಗಪಡಿಸಿಕೊಳ್ಳಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಸದಾಶಿವ ಡಿ. ಪಡುವರಿ, ಶಾಲಾ ಅಭಿವೃದ್ಧಿ ಹಾಗೂ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸಂಜಯ್ ದೇವಾಡಿಗ, ಸಿಟಿ ಜೆಸಿಐನ ಪೂರ್ವಾಧ್ಯಕ್ಷರಾದ ಶ್ರೀಧರ ಆಚಾರ್ಯ, ಶಾಲಾ ಅಭಿವೃದ್ಧಿ ಸಮಿತಿಯ ಭಾಸ್ಕರ್ ದೇವಾಡಿಗ, ದಯಾನಂದ ಉಪಸ್ಥಿತರಿದ್ದರು. ಸಹ ಶಿಕ್ಷಕಿ ಸರಸ್ವತಿ ಸ್ವಾಗತಿಸಿದರು. ಶಾಲಾ ಪದವೀಧರ ಮುಖ್ಯೋಪಾಧ್ಯಾಯರಾದ ಜನಾರ್ದನ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ವೀಣಾ ಹೆಗಡೆ ವಂದನಾರ್ಪಣೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ಯಾನ ಬಾಡಬೆಟ್ಟು ಶ್ರೀ ಶನೀಶ್ವರ ಮತ್ತು ಶ್ರೀ ಚೌಡೇಶ್ವರಿ ಟ್ರಸ್ಟ್ ನೇತೃತ್ವದಲ್ಲಿ ಮಣಿಪಾಲ ಕೆಎಂಸಿ ರಕ್ತನಿಧಿ ವಿಭಾಗ ಹಾಗೂ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ತಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.21ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಕುಂದಾಪುರ ಮನೀಶ್ ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀ ತಜ್ಞೆ ಡಾ. ಪ್ರಮೀಳಾ ನಾಯಕ್ ಉದ್ಘಾಟಿಸಿದರು. ವಕೀಲರಾದ ಟಿ.ಬಿ. ಶೆಟ್ಟಿ, ಶ್ರಿ ಶನಿಶ್ವರ ಮತ್ತು ಚೌಡೇಶ್ವರಿ ದೇವಸ್ಥಾನ ಬಾಡಬೆಟ್ಟು ಕನ್ಯಾನದ ಧರ್ಮದರ್ಶಿಗಳಾದ ಜಯರಾಮ, ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಡಾ.ರಂಗನಾಥ್ ವೈ ಪಿ., ತಲ್ಲೂರು ಗ್ರಾಪಂ ಅಧ್ಯಕ್ಷೆ ಭೀಮವ್ವ, ಸದಸ್ಯರಾದ ಉದಯಕುಮಾರ್ ತಲ್ಲೂರು, ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್, ರಕ್ತದಾನ ಶಿಬಿರದ ಆಯೋಜಕರಾದ ಪ್ರಶಾಂತ್ ತಲ್ಲೂರು ಹಾಗೂ ಅರವಿಂದ್ ಉಪ್ಪಿನಕುದ್ರು ಉಪಸ್ಥಿತ್ತರಿದ್ದರು. ಈ ಸಂದರ್ಭದಲ್ಲಿ ರಕ್ತದಾನಿಗಾದ ವಿಜಯ್ ಕುಂದಾಪುರ, ಚೇತನ್ ಖಾರ್ವಿ ಹಾಗೂ ಕರಣ ಉಪ್ಪಿನಕುದ್ರು ಅವರನ್ನು ಸನ್ಮಾನಿಸಲಾಯಿತು. ಅರುಣ್ ಉಪ್ಪಿನಕುದ್ರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಿಶ್ವನಾಥ್ ಉಪ್ಪಿನಕುದ್ರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಹಕಾರಿ ಸಂಸ್ಥೆಯ ಲಾಭ ಗಳಿಸುವ ಜೊತೆಗೆ ಸಾಮಾಜಿಕ ಕಾರ್ಯಗಳಿಗೆ ಅದನ್ನು ವಿನಿಯೋಗಿಸುವ ಮೂಲಕ ತನ್ನ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸುತ್ತಿರುವುದು ಶ್ಲಾಘನಾರ್ಹ ಎಂದು ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಹೇಳಿದರು. ಅವರು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ವತಿಯಿಂದ ಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯಿಂದ ಪ್ರೋತ್ಸಾಹ ಪಡೆದವರು ಅದನ್ನು ನೆನಪಿಸಿರಿಸಿಕೊಂಡು ಹೆಚ್ಚಿನ ಸಾಧನೆ ಮಾಡುವಂತಾಗಬೇಕು ಮತ್ತು ಅದು ಮತ್ತೊಬ್ಬರಿಗೆ ಸ್ಪೂರ್ತಿಯಾಗಬೇಕು ಎಂದ ಅವರು ಶ್ರೀ ರಾಮ ಸೌಹಾರ್ದ ಸಂಸ್ಥೆ ಕಳೆದ ಒಂದು ದಶಕದಿಂದ ಜನಮಾನಸದಲ್ಲಿ ಗುರುತಿಸುವಂತ ಕಾರ್ಯ ಮಾಡುತ್ತಿದೆ ಎಂದರು. ಈ ವೇಳೆಯಲ್ಲಿ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಸಾಧಕ ಗುರುರಾಜ ಪೂಜಾರಿ ಹಾಗೂ ಸೈನ್ಯಕ್ಕೆ ಸೇರ್ಪಡೆಗೊಂಡ ಉಡುಪಿ ಜಿಲ್ಲೆಯ ಪ್ರಥಮ ಯುವತಿ ವಿದ್ಯಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ನೂತನ ಪಿಎಸ್ಐ ಆಗಿ ಪವನ್ ನಾಯಕ್ ಅವರು ಅಧಿಕಾರ ಸ್ವೀಕರಿದ್ದಾರೆ. 2016 ಬ್ಯಾಚಿನ ಅಧಿಕಾರಿಯಾಗಿರುವ ಪವನ್ ನಾಯಕ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲದವರು. ಈ ಹಿಂದೆ ಉಪ್ಪಿನಂಗಡಿಯಲ್ಲಿ ಪ್ರೊಬೇಷನರಿ ಅವಧಿ ಮುಗಿಸಿ ಧರ್ಮಸ್ಥಳ ಹಾಗೂ ಬೈಂದೂರಿನಲ್ಲಿ ತಲಾ ಒಂದೂವರೆ ವರ್ಷಗಳ ಕಾಲ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದರು. ಗ್ರಾಮಾಂತರ ಠಾಣೆಯ ಪಿಎಸ್ಐ ಆಗಿದ್ದ ನಿರಂಜನ್ ಗೌಡ ಅವರನ್ನು ಬೈಂದೂರು ಠಾಣೆಗೆ ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಪವನ್ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ಆದೇಶಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತಲ್ಲೂರು ಹೊಯ್ಸಳ ಸ್ಟುಡಿಯೋ ಮಾಲಿಕ ಶ್ರೀಧರ ಉಪ್ಪಿನಕುದ್ರು ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತಲ್ಲೂರಿನಲ್ಲಿ ಸ್ಟೂಡಿಯೋ ಹೊಂದಿದ್ದ ಅವರು ತನ್ನ ವೃತ್ತಿಯ ಮೂಲಕ ಈ ಭಾಗದಲ್ಲಿ ಪ್ರಸಿದ್ಧಿ ಪಡೆದಿದ್ದರು. ಮೃತರು ಪತ್ನಿ, ಮಗು ಹಾಗೂ ಕುಟುಂಬಿಕರನ್ನು ಅಗಲಿದ್ದಾರೆ.

Read More

ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ದೊರಕದ ಪ್ರವೇಶಾತಿ – ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ಉಡುಪಿ ಜಿಲ್ಲೆಗೆ 300 ಮಕ್ಕಳ ಹಾಸ್ಟೆಲ್ ಮಂಜೂರು – ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲೆಯ ೫ ವಿಧಾನಸಭಾ ಕ್ಷೇತ್ರಕ್ಕೆ ಕನಕದಾಸ ಹಾಸ್ಟೆಲ್ ಮಂಜೂರು ಕುಂದಾಪುರದಲ್ಲಿ 100 ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗಿದೆ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಟೇಲ್ ಸೀಟು ಸಿಗದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಕೋಟ ಬೈಂದೂರಿನಲ್ಲಿ ಬಿಜೆಪಿ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವರು ಹಿಂದೂಳಿದ ವರ್ಗಗಳ ಇಲಾಖೆಯ ವಿವಿಧ ಯೋಜನೆಗಳ ಮಾಹಿತಿ ನೀಡಿದ ಸಚಿವ ಕೋಟ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬೈಂದೂರು ಘಟಕದ ಸಹಯೋಗದೊಂದಿಗೆ ಕಾಲೇಜು ಸಭಾಂಗಣದಲ್ಲಿ ಸೋಮವಾರ ‘ಮಾದಕ ವ್ಯಸನದ ದುಷ್ಪರಿಣಾಮಗಳು ಮತ್ತು ಅಪರಾಧ ಮುಕ್ತ ಸಮಾಜ’ ಎಂಬ ಕಾರ್ಯಾಗಾರ ಆಯೋಜಿಸಲಾಗಿತ್ತು. ಭ್ರಷ್ಟಾಚಾರ ನಿಗ್ರಹ ದಳದ ವೃತ್ತ ನಿರೀಕ್ಷಕರಾದ ವಿನಾಯಕ ಬಿಲ್ಲವ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಸಮಾಜದಲ್ಲಿ ಯುವಜನತೆ ವ್ಯಸನಮುಕ್ತ ಸಮಾಜ ಕಂಡುಕೊಳ್ಳುವ ಬಗೆ, ವಿವಿಧ ರೀತಿಯ ಮಾದಕ ವ್ಯಸನಗಳು, ವ್ಯಸನದಿಂದಾಗಿ ದುಶ್ಚಟಗಳಿಂದಾಗಿ ವ್ಯಕ್ತಿಯೋರ್ವ ಹೇಗೆ ಅಪರಾಧಗಳಿಗೆ ಬಲಿಯಾಗುತ್ತಾನೆ, ಅಲ್ಲದೆ ವ್ಯಸನಗಳಿಗಾಗಿ ಅಪರಾಧಗಳು ನಡೆಯುವ ಬಗೆ, ಡ್ರಗ್ಸ್ ಗಳಿಂದಾಗಿ ಮನುಷ್ಯನ ಮೇಲೆ ಪ್ರಭಾವ ಬೀರುವ ಅಂಶಗಳು, ಅದರಿಂದಾಗುವ ದುಷ್ಪರಿಣಾಮಗಳ ಕುರಿತು ರಾಜ್ಯದ ಮೂಲೆ ಗಳಲ್ಲಿ ದಾಖಲಾಗಿರುವ ಕೇಸ್ ಸಹಿತ ಉದಾಹರಣೆಗಳ ಮೂಲಕ ವಿದ್ಯಾರ್ಥಿಗಳಿಗೆ ಅಪರಾಧಮುಕ್ತ ಸಮಾಜ ನಿರ್ಮಾಣ ಮತ್ತು ಮಾದಕ ವ್ಯಸನಗಳ ಅರಿವಿನ ಕುರಿತು ಮಾಹಿತಿ ನೀಡಿದರು. ಬೈಂದೂರು ವೃತ್ತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಶ್ರೀ ಸೀತಾರಾಮಚಂದ್ರ ದೇವಸ್ಥಾನ, ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ 36ನೇ ವರ್ಷದ ಅಧ್ಯಕ್ಷರಾಗಿ ರಾಘವೇಂದ್ರ ದಡ್ಡು, ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಡಿ. ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ದಿನಕರ ಪಟವಾಲ್, ಕಾರ್ಯದರ್ಶಿಯಾಗಿ ಗಿರೀಶ್ ಕಲ್ಲುಕಂಟ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಗ್ಗರ್ಸೆ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಸಾರ್ವಜನಿಕ ಗಣೇಶೋತ್ಸವ 33ನೇ ವರ್ಷದ ಅಧ್ಯಕ್ಷರಾಗಿ ಸೂಲ್ಯಣ್ಣ ಗಾಣಿಗ ಹಾಗೂ ಕಾರ್ಯದರ್ಶಿಯಾಗಿ ಸುಧಾಕರ ಮೊಗವೀರ ಆಯ್ಕೆಯಾಗಿದ್ದಾರೆ. ಸಮಿತಿಯ ಗೌರವಾಧ್ಯಕ್ಷರಾಗಿ ಟಿ. ನಾರಾಯಣ ಹೆಗ್ಡೆ, ಉಪಾಧ್ಯಕ್ಷರಾಗಿ ಗುರುದತ್ತ ಎಮ್. ಎಚ್., ವೆಂಕಟರಮಣ ದೇವಾಡಿಗ, ನಾಗರಾಜ ಎಚ್, ದಿವಾಕರ ಶೆಟ್ಟಿ , ಕೆ.ವಿ ಸತೀಶ್, ಜೊತೆ ಕಾರ್ಯದರ್ಶಿಯಾಗಿ ಮಂಜುನಾಥ ಪೂಜಾರಿ, ವಸಂತ ಬಿ, ರಾಘವೇಂದ್ರ ಗಾಣಿಗ, ಕೃಷ್ಣ ಗಾಣಿಗ, ಮಂಜುನಾಥ ದೇವಾಡಿಗ, ಗಣೇಶ ಗಾಣಿಗ, ರಾಜು ಹುಳುವಾಡಿ, ನಾಗರಾಜ ಶೆಟ್ಟಿ, ಸಂತೋಷ ಬಿಲ್ಲವ ಆಯ್ಕೆಯಾಗಿದ್ದಾರೆ. ಸಂಘಟನಾ ಕಾರ್ಯದರ್ಶಿ ಸುಭಾಷ್ ಪೂಜಾರಿ, ಸುಧಾಕರ ಶೆಟ್ಟಿ, ನೆಲ್ಯಾಡಿ ಪ್ರಭಾಕರ ಮೊಗವೀರ, ನಾಗರಾಜ ದೇವಾಡಿಗ, ಸುಧೀರ ಶೆಟ್ಟಿ, ಮಹೇಶ ಗಾಣಿಗ, ರಾಘವೇಂದ್ರ ಮೋಗವೀರ, ಗಣೇಶ ದೇವಾಡಿಗ, ನೀಲಕಂಠ ಹುದಾರ್, ಚಂದ್ರ ಪೂಜಾರಿ, ಅಕ್ಷಯ ಶೆಟ್ಟಿ, ಜಯರಾಜ ಹುದಾರ್, ಸಾಂಸ್ಕೃತಿಕ ಕಾರ್ಯದರ್ಶಿ ತಿಮ್ಮಪ್ಪ ಗಾಣಿಗ, ಚಂದ್ರ ಶೆಟ್ಟಿ, ನಾಗಪ್ಪ ಬಿಲ್ಲವ, ಆನಂದ ಟೈಲರ್, ಮಾಧವ ಬಿಲ್ಲವ, ಸುಬ್ರಹ್ಮಣ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪತ್ನಿಯನ್ನು ಕೊಲೆಗೈದ ಪತಿ, ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವಲ್ಕುಂದ ಶಾಲೆ ಸಮೀಪದಲ್ಲಿ ಭಾನುವಾರ ನಡೆದಿದೆ. ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಸೊರಬದ ತಾಯಿಯ ಮನೆಯಲ್ಲಿ ವಾಸವಿದ್ದ ಪೂರ್ಣಿಮಾ, ಭಾನುವಾರ ಹೆಮ್ಮಾಡಿ ಸಮೀಪದ ಸಂಬಂಧಿಕರ ಸೀಮಂತ ಕಾರ್ಯಕ್ರಮಕ್ಕಾಗಿ ದೇವಲ್ಕುಂದಕ್ಕೆ ಬಂದಿದ್ದರು. ಪತಿ ಕರೆ ಮಾಡಿ ಮನೆಗೆ ಬರುವಂತೆ ಕೇಳಿಕೊಂಡಿದ್ದು, ಪೂರ್ಣಿಮಾ ಕಾರ್ಯಕ್ರಮ ಮುಗಿದ ಬಳಿಕ ಪತಿ ನೆಲೆಸಿದ್ದ ಬಾಡಿಗೆ ಮನೆಗೆ ತೆರಳಿ ತಮ್ಮತಾಯಿಗೆ ಮಾಹಿತಿ ನೀಡಿದ್ದರು. ರಾತ್ರಿ ಪತಿ ಪತ್ನಿ ಮಧ್ಯೆ ಜಗಳವಾಗಿ ಈ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಅವರು ಕಳೆದ ಹದಿನಾರು ವರ್ಷಗಳ ಹಿಂದೆ ಕೋಗಾರ್ ಮೂಲದ ರವಿ ಆಚಾರ್ಯ ಪೂರ್ಣಿಮಾರೊಂದಿಗೆ ವಿವಾಹವಾಗಿದ್ದರು. ಹೆಮ್ಮಾಡಿ ಸಮೀಪದ ಬಗ್ವಾಡಿಯಲ್ಲಿ ರವಿ ಆಚಾರ್ಯ ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ…

Read More