ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತ್ ಗ್ಯಾಸ್ ತನ್ನ ಗ್ರಾಹಕರಿಗಾಗಿ ಆಯೋಜಿಸಲಾಗಿರುವ ಅಡುಗೆ ಸ್ಪರ್ಧೆ ‘ಕಿಚನ್ ಚಾಂಪ್’ನಲ್ಲಿ ಭಾಗವಹಿಸಲು ಮೇ.31 ಕೊನೆಯ ದಿನವಾಗಿದೆ. ರಾಷ್ಟಮಟ್ಟದ ವಿಜೇತರಿಗೆ ರೂ. 51,000, ರನ್ನರ್ ಅಪ್ಗೆ ರೂ.25,000 ಹಾಗೂ 5 ಮಂದಿಗೆ ರೂ.10,000 ಬಹುಮಾನವಿದೆ. ರಾಜ್ಯಮಟ್ಟದಲ್ಲಿ ವಿಜೇತರಾಗುವವರಿಗೂ ಬಹುಮಾನವಿದ್ದು ಇದರೊಂದಿಗೆ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವ ಬೈಂದೂರಿನ ಶಾತೇರಿ ಕಾಮಾಕ್ಷಿ ಎಂಟರ್ಪ್ರೈಸಸ್ನ ಗ್ರಾಹಕರಿಗೆ ಪ್ರತ್ಯೇಕವಾಗಿ ತಲಾ ರೂ.10,000 ಬಹುಮಾನವನ್ನು ಘೋಷಿಸಲಾಗಿದೆ. ಸ್ವರ್ಧೆಯ ನಿಯಮಗಳು: ಸ್ವರ್ಧೆಯಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶವಿದೆ. ನೀವು ತಯಾರಿಸುವ ಅಡುಗೆಗೆ ಬೇಕಾದ ಪದಾರ್ಥ, ಮಾಡುವ ವಿಧಾನ, ನಿಮ್ಮ ಹೆಸರು, ವಿಳಾಸ, ರಾಜ್ಯ ಹಾಗೂ ಸಂಪರ್ಕ ವಿವರಗಳನ್ನು ಲಿಖಿತ ರೂಪದಲ್ಲಿಯೇ ಸಲ್ಲಿಸಬೇಕು. ಇದರೊಂದಿಗೆ ಮೊಬೈಲ್ ಪೋನ್ ಅಡ್ಡಲಾಗಿ ಇರಿಸಿ ಎಂಪಿ-4 ಪಾರ್ಮ್ಯಾಟಿನಲ್ಲಿ 2 ನಿಮಿಷ ಮೀರದಂತೆ ಅಡುಗೆ ತಯಾರಿಯ ಸಣ್ಣ ವೀಡಿಯೋ ಮಾಡಿ ಕಳುಹಿಸಬೇಕು. ಸ್ವರ್ಧೆಯಲ್ಲಿ ಭಾಗವಹಿಸಲು ಮೇ.31 ಕೊನೆಯ ದಿನವಾಗಿದೆ. ಅಡಗೆಯ ವೀಡಿಯೋ ಹಾಗೂ ಲಿಖಿತ ರೂಪದ ಮಾಹಿತಿಯನ್ನು…
Author: ನ್ಯೂಸ್ ಬ್ಯೂರೋ
ಮಹಿಳೆಯರು ಯಾವಾಗಲೂ ಚೂಸಿ ಅಂದರೆ ತಪ್ಪಾಗಲಾರದು, ತುಂಬಾ ಯೋಚನೆ ಮಾಡಿ ಎಲ್ಲವನ್ನೂ ಆಯ್ಕೆ ಮಾಡಿಕೊಳ್ಳುತ್ತಾರೆ. ಯಾರ ಮೇಲೂ ಬೇಗನೆ ನಂಬಿಕೆ ಬರುವುದಿಲ್ಲ ತುಂಬಾ ಸಮಯದ ನಂತರ ಆಲೋಚನೆ ಮಾಡಿ ಪ್ರತಿಯೊಂದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಎಲ್ಲವೂ ಇಷ್ಟೊಂದು ಚೂಸಿ ಆಗಿರುವ ಮಹಿಳೆಯರು ಇನ್ನು ತಮ್ಮ ಸಂಗಾತಿಯ ಆಯ್ಕೆಯ ವಿಚಾರದಲ್ಲಿ ಸುಮ್ಮನಿರುವುದಿಲ್ಲ ಎಲ್ಲವೂ ಅಳೆದು ತೂಗಿ ಸಂಬಂಧವನ್ನು ಗಟ್ಟಿಮಾಡಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ಹುಡುಗರು ಮಾಡುವ ಕೆಲವೊಂದು ವಿಚಾರಗಳು ಹುಡುಗಿಯರಿಗೆ ನೋವುಂಟಾಗುವುದು. ನೀವು ಮಾಡುವ ಕೆಲವೊಂದು ವಿಚಾರಗಳು ಹುಡುಗಿಯರಿಗೆ ಹಿಡಿಸದೇ ಹೋಗಬಹುದು. ಇಂತಹ ಸಮಯದಲ್ಲಿ ನೀವು ಯಾವುದು ಆಕೆಗೆ ಇಷ್ಟವಲ್ಲ ಎಂಬುದನ್ನು ಅರಿಯುವುದು ತುಂಬಾ ಮುಖ್ಯ. ಅದಕ್ಕಾಗಿ ಈ ಲೇಖನ ನಿಮಗಾಗಿ ಹಲವು ವಿಚಾರಗಳನ್ನು ತಿಳಿಸಿದ್ದೇವೆ. ನಕಾರಾತ್ಮಕ ಯೋಚನೆ:ಯಾವುದೇ ವಿಚಾರದಲ್ಲಿ ನಕಾರಾತ್ಮಕ ಮಾತು ಅವರಲ್ಲಿನ ಆತ್ಮವಿಶ್ವಾಸದ ಕೊರತೆಯನ್ನು ಸೂಚಿಸುತ್ತದೆ. ಅದಲ್ಲದೇ ಹುಡುಗಿಯರು ಯಾವಾಗಲೂ ಗಮನಿಸುವಂತಹ ವಿಚಾರವೆಂದರೆ ತಮ್ಮ ಬಗ್ಗೆ, ಕುಟುಂಬದ ಬಗ್ಗೆ, ಸ್ನೇಹಿತರು, ಕಚೇರಿ ಇತ್ಯಾದಿಗಳ ಬಗ್ಗೆ ತಮ್ಮ ಸಂಗಾತಿ ಯಾವ ರೀತಿ ಮಾತನಾಡುವರು ಎಂದು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಕಟ್ಟೆ ಗೋಪಾಲಕೃಷ್ಣ ರಾವ್ (ಕಟ್ಟೆ ಭೋಜಣ್ಣ) ಅವರು ಬರೆದಿಟ್ಟ ಡೆಟ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ಈರ್ವರ ಹೆಸರನ್ನು ಉಲ್ಲೇಖಿಸಲಾಗಿದೆ. ಕುಂದಾಪುರ ಪೊಲೀಸ್ ಎಸ್‌ಹೆಚ್‌ಓ ಅವರಿಗೆ ತಮ್ಮ ಕಚೇರಿಯ ಲೆಟರ್‌ಹೆಡ್‌ನಲ್ಲಿ ಡೆತ್‌ನೋಟ್ ಬರೆದಿದ್ದು ಹಣಕಾಸಿನ ವ್ಯವಹಾರದಲ್ಲಿ ತನಗೆ ಅನ್ಯಾಯವಾಗಿರುವ ಬಗ್ಗೆ ಬರೆದಿಟ್ಟಿದ್ದಾರೆ. ಗೋಪಾಲಕೃಷ್ಣ ರಾವ್ ಅವರು ಡೆತ್‌ನೋಟ್‌ನಲ್ಲಿ ಮೊಳಹಳ್ಳಿ ಗಣೇಶ್ ಶೆಟ್ಟಿ, ಇಸ್ಮಾಯಿಲ್ ಹಂಗಳೂರು ಹೆಸರು ಪ್ರಸ್ತಾಪ ಮಾಡಿದ್ದು, ಇವರಿಬ್ಬರೂ ಗೋಲ್ಡ್ ಜ್ಯುವೆಲ್ಲರಿ ಹೆಸರಿನಲ್ಲಿ ಹೆಚ್ಚಿನ ಬಡ್ಡಿಯ ಆಸೆ ತೋರಿಸಿ 2012 ಫೆಬ್ರವರಿ 3ರಂದು 3 ಕೋಟಿ 34 ಲಕ್ಷ ನಗದು, 5 ಕೆ.ಜಿ ಚಿನ್ನ ಪಡೆದುಕೊಂಡಿದ್ದರು. ಆ ಬಳಿಕ ನಗ-ನಗದು, ಅದಕ್ಕೆ ಸಲ್ಲಬೇಕಾದ ಬಡ್ಡಿಯನ್ನೂ ವಾಪಾಸ್ ಮರಳಿಸಿರಲಿಲ್ಲ. ಈ ವಿಚಾರದಲ್ಲಿ ಹಲವು ಬಾರಿ ಜನಪ್ರತಿನಿಧಿಗಳ ನೇತೃತ್ವದಲ್ಲಿ ಪಂಚಾಯತಿ ಮಾಡಿದ್ದು, ವಾಯಿದೆ ಪಡೆದಿದ್ದರು. ಈವರೆಗೆ 9 ಕೋಟಿ ಮೊತ್ತದ ಹಣ, ಚಿನ್ನ ವಾಪಾಸ್ ನೀಡದೆ ಮೋಸ ಮಾಡಿದ್ದಾರೆ. ಗಣೇಶ್ ಶೆಟ್ಟಿ ಮೊಳಹಳ್ಳಿ ಮನೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಪ್ರಸಿದ್ಧ ಉದ್ಯಮಿ, ಖಾಸಗಿ ಆಸ್ಪತ್ರೆಯ ಮಾಲಕ ಗೋಪಾಲಕೃಷ್ಣ ರಾವ್ (ಕಟ್ಟೆ ಭೋಜಣ್ಣ) (80 ಪ್ರಾಯ) ತಮ್ಮ ಚಾರ್ಟೆಡ್ ಅಕೌಟೆಂಟ್ ಮನೆಯ ಸಿಟೌಟ್‌ನಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಕೋಟೇಶ್ವರ ಬಳಿ ಪುರಾಣಿಕ ರಸ್ತೆಯಲ್ಲಿರುವ ಸಿಎ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬವರ ಮನೆಯ ಸಿಟೌಟ್ನಲ್ಲಿ ಗುರುವಾರ ಬೆಳಗ್ಗೆ 6 ಗಂಟೆಯ ಸುಮಾರಿಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಮೇಲ್ನೋಟಕ್ಕೆ ತಿಳಿದುಬಂದಿದೆ. ಜಮೀನು ಮತ್ತು ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂಬ ಮಾತುಗಳು ಕೇಳಿಬರುತ್ತಿದ್ದು, ಸಿಎ ಮನೆಗೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವುದರ ಹಿಂದಿನ ಉದ್ದೇಶವೇನು ಎಂಬುದು ತಿಳಿದುಬಂದಿಲ್ಲ. ತನಿಕೆ ಬಳಿಕ ಸತ್ಯ ತಿಳಿಯಲಿದೆ. ಕಟ್ಟೆ ಭೋಜಣ್ಣ ಬೆಂಗಳೂರಿನಲ್ಲಿ ಹೋಟೆಲ್, ಬಟ್ಟೆ ಅಂಗಡಿಗಳನ್ನು ನಡೆಸುತ್ತಿದ್ದರು. ಕುಂದಾಪುರದ ಚಿನ್ಮಯಿ ಆಸ್ಪತ್ರೆ ನಡೆಸುತ್ತಿದ್ದರು. ಭೋಜಣ್ಣ ಅವರು ಪತ್ನಿ ಭಾಗೀರಥಿ, ಇಬ್ಬರು ಗಂಡು ಮಕ್ಕಳು, ಓರ್ವ ಮಗಳು ಹಾಗೂ ಬಂಧುಗಳನ್ನು ಅಗಲಿದ್ದಾರೆ. ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿಯೂ ಪುರುಷರಷ್ಟೆ ಸಮಾನರಾಗಿ ಸಮಾಜದಲ್ಲಿ ಗುರುತಿಸಿಕೊಳ್ಳುತ್ತಿದ್ದಾಳೆ, ಅದರಲ್ಲಿಯೂ ಆರ್ಥಿಕ ವ್ಯವಹಾರದಲ್ಲಿ ಅತ್ಯಂತ ಶಿಸ್ತನ್ನು ಪ್ರದರ್ಶಿಸುವ ಅವರ ಕೈಯಲ್ಲಿ ಸಹಕಾರಿ ಸಂಸ್ಥೆಗಳ ಜವಾಬ್ದಾರಿ ನೀಡಿದರೆ ಅದನ್ನು ಯಶಸ್ವಿಯಾಗಿ ನಿಭಾಯಿಸುತ್ತಾರೆ ಎಂದು ಮಾಜಿ ಶಾಸಕ ಹಾಗೂ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಳದ ಆಡಳಿತ ಮೋಕ್ತೇಸರ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು. ಬಸ್ರೂರು ಮಾರ್ಗೋಳಿಯಲ್ಲಿ ಶ್ರೀ ಶನೇಶ್ವರ ಮಹಿಳಾ ಸೌಹಾರ್ದ ಸಹಕಾರಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಉಳಿತಾಯದ ವಿಷಯದಲ್ಲಿ ಸಮರ್ಥರಾಗಿದ್ದು, ಇಂದು ತಮ್ಮ ಉಳಿತಾಯದ ಹಣವನ್ನು ಸಹಕಾರಿ ಸಂಘಗಳಲ್ಲಿ ಠೇವಣೆಯಿಟ್ಟು ಆರ್ಥಿಕ ವಹಿವಾಟು ನಡೆಸಿ ಸ್ವಾವಲಂಬಿ ಜೀವನ ನಡೆಸುತ್ತಿರುವುದು ಉತ್ತಮ ಬೆಳವಣೆಯಾಗಿದೆ ಎಂದರು. ಉಡುಪಿ ಜಿಲ್ಲಾ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಭಾಸ್ಕರ ಕಾಮತ್ ಷೇರುಪತ್ರ ಬಿಡುಗಡೆ ಮಾಡಿ ಮಾತನಾಡಿ, ರಾಜ್ಯದಲ್ಲಿ ೫ಸಾವಿರಕ್ಕೂ ಅಧಿಕ ಸೌಹಾರ್ದ ಸಹಕಾರಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಬಹುತೇಕ ಸಂಘಗಳು ಲಾಭದಲ್ಲಿದೆ. ನಮ್ಮ ಸಂಘಗಳು ಸದಸ್ಯರಿಗೆ ತ್ವರಿತ ಸೇವೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.25: ಮೈಸೂರು ರಂಗಾಯಣದ ರಂಗ ತರಬೇತಿ ಸಂಸ್ಥೆಯಲ್ಲಿ ಒಂದು ವರ್ಷದ ರಂಗಶಿಕ್ಷಣ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ, 18 ರಿಂದ 28 ವರ್ಷದೊಳಗಿನ ಅಭ್ಯರ್ಥಿಗಳು ಜೂನ್ 17 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ http://www.rangayana.org/ ಅಥವಾ ಉಪ ನಿರ್ದೇಶಕರು, ರಂಗಾಯಣ, ಕಲಾಮಂದಿರ ಆವರಣ, ಮೈಸೂರು ದೂ.ಸಂಖ್ಯೆ: 0821-2512639, ಮೊ. ನಂ: 9448938661 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.25: ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲಾಗಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಶೈಕ್ಷಣಿಕ ಸಾಲಿಗಾಗಿ ವಿದ್ಯಾರ್ಥಿಗಳು ಬಸ್ ಪಾಸ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಕಲೆ ಮತ್ತು ಸಾಹಿತ್ಯಗಳು ಇಂದಿಗೂ ತಮ್ಮ ಅಸ್ತಿತ್ವವನ್ನು ಕಾಯ್ದುಕೊಳ್ಳುವಂತಹ ಗಟ್ಟಿ ಬೇರನ್ನು ಹೊಂದಿದೆ. ಭಾಷೆ, ಉಚ್ಚಾರವನ್ನು ತಿದ್ದುವ, ಮಾತನಾಡುವ ಅವಕಾಶ ಇರುವುದು ರಂಗಭೂಮಿಯಲ್ಲಿ. ಹಾಗಾಗಿ ನಮ್ಮ ಕುಂದಾಪುರ ಕನ್ನಡ ಭಾಷೆಯಲ್ಲಿಯೂ ರಂಗಭೂಮಿ ನಿರ್ಮಾಣಗೊಳ್ಳೂವ ಅಗತ್ಯತೆ ಇದೆ ಎಂದು ಭಗವದ್ಗೀತಾ ಅಭಿಯಾನದ ಜಿಲ್ಲಾ ಸಂಚಾಲಕ, ಶಿಬಿರದ ಪ್ರಾಯೋಜಕ ಬಿಜೂರು ರಾಮಕೃಷ್ಣ ಶೇರುಗಾರ್ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಶನಿವಾರ ಲಾವಣ್ಯ ವತಿಯಿಂದ ನಡೆದ 20ನೇ ವರ್ಷದ ಮಕ್ಕಳ ಬೇಸಿಗೆ ಶಿಬಿರದಲ್ಲಿ ತರಬೇತುಗೊಂಡ ಮಕ್ಕಳ ನಾಟಕ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಮಕ್ಕಳಲ್ಲಿ ಸಂಸ್ಕಾರ ಹಾಗೂ ಸ್ವಾಭಿಮಾನವನ್ನು ಬೆಳೆಸುತ್ತದೆ. ಶಿಕ್ಷಣದ ಜೊತೆಗೆ ಕಲಾಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಅವರು ಬಾಲ್ಯದಿಂದಲೇ ಮತ್ತಷ್ಟು ಕ್ರೀಯಾಶೀಲರಾಗುತ್ತಾರೆ. ಹೊಸ ಪ್ರತಿಭೆಗಳಿಗೂ ಪ್ರೋತ್ಸಾಹಿಸುವುದು ಬಹುಮುಖ್ಯ. ಈ ನಿಟ್ಟಿನಲ್ಲಿ ಹಿರಿಯ ಕಲಾವಿದರು ತಾವು ಬೆಳೆಯುವುದರೊಂದಿಗೆ ತಮ್ಮೊಂದಿಗೆ ಪ್ರತಿಭೆ ಇರುವ ಮಕ್ಕಳನ್ನು ಗುರುತಿಸಿ ಅವರ ಬೆನ್ನು ತಟ್ಟುವ ಕೆಲಸ ಮಾಡಿದರೆ ಅವರೂ ಬೆಳೆಯುತ್ತಾರೆ ಎಂದರು. ಲಾವಣ್ಯದ ಸನ್ಮಾನ ಸ್ವೀಕರಿಸಿ…
ಮಹಿಳೆಯೋರ್ವಳಿಗೆ ಗರ್ಭಾವಸ್ಥೆಯಲ್ಲಿ ಆರೈಕೆ ಮಾಡಿದಂತೆಯೇ ಮಗುವಿನ ಹೆರಿಯಾದ ಬಳಿಕವೂ ನಿಯಮಿತವಾಗಿ ಆರೈಕೆ ಮಾಡುವುದು ಅತಿಮುಖ್ಯ. ಬಾಣಂತಿ ಮೈ ಹಸಿ ಮೈ ಎಂಬುದಾಗಿ ಕೂಡ ಹೇಳುವುದರಿಂದ ಈ ಸಮಯದಲ್ಲಿ ಆಕೆ ಶಕ್ತಿಯನ್ನು ಕಳೆದುಕೊಂಡಿರುತ್ತಾರೆ. ಹೆಚ್ಚುವರಿ ಪ್ರೋಟೀನ್ ವಿಟಮಿನ್ಗಳು ಆಕೆಗೆ ಬೇಕಾಗುತ್ತದೆ. ಹೆರಿಗೆಯ ಬಳಿಕ ಯಾವ ಪಾನೀಯ, ಪೇಯಗಳ ಸೇವನೆಯಿಂದ ಬಾಣಂತಿಯ ಆರೋಗ್ಯ ಸುಧಾರಿಸಲಿದೆ ಎಂಬುದರ ಮಾಹಿತಿ ಈ ಲೇಖನದಲ್ಲಿದೆ. ಓಟ್ಸ್:ಮಲಬದ್ಧತೆ ಸಮಸ್ಯೆಯನ್ನು ತಡೆಗಟ್ಟಲು ಓಟ್ಸ್ ಸಹಾಯ ಮಾಡಲಿದೆ. ಇದು ಕಾರ್ಬೋಹೈಡ್ರೇಟ್‌ಗಳ ಹೆಚ್ಚುವರಿ ಅಂಶವನ್ನು ಒಳಗೊಂಡಿದ್ದು, ಫೈಬರ್, ಐರನ್ ಮತ್ತು ಪ್ರೋಟೀನ್ಗಳನ್ನು ಒಳಗೊಂಡಿದೆ. ಪೋರಿಡ್ಜ್, ಕಿಚಡಿ ಅಥವಾ ಉಪ್ಮಾದಂತೆ ಮಾಡಿಕೊಂಡು ಓಟ್ಸ್ ಅನ್ನು ಸೇವಿಸಬಹುದಾಗಿದೆ. ಹಣ್ಣುಗಳು ಮತ್ತು ಒಣ ಹಣ್ಣುಗಳನ್ನು ನೀವು ಓಟ್ಸ್ನೊಂದಿಗೆ ಸೇರಿಸಿಕೊಳ್ಳಬಹುದು. ಅರಿಶಿನ:ಅರಶಿನವನ್ನು ಅನಾದಿ ಕಾಲದಿಂದಲೂ ಔಷಧವಾಗಿ ಬಳಸಲಾಗುತ್ತಿದೆ. ಇದು ಗಾಯವನ್ನು ಒಣಗಿಸಲು ನೆರವಾಗುತ್ತದೆ ಮತ್ತು ಉರಿಯೂತ ಅಲರ್ಜಿಯನ್ನು ನಿವಾರಣೆ ಮಾಡಲಿದೆ. ಬಿಸಿ ಹಾಲಿಗೆ ಅರಿಶಿನವನ್ನು ಬೆರೆಸಿ ಕುಡಿಯುವುದರಿಂದ ನಿಮಗೆ ಹೆಚ್ಚು ಪ್ರಯೋಜನ ಉಂಟಾಗಲಿದೆ. ಬೇಕಿದ್ದರೆ ಸಕ್ಕರೆ ಇಲ್ಲವೇ ಜೇನನ್ನು ನಿಮಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.23: ಉಡುಪಿ ಜಿಲ್ಲಾ ಕರಾವಳಿ ನಿಯಂತ್ರಣ ವಲಯದ ನದಿ ಪಾತ್ರಗಳಲ್ಲಿನ ಮರಳು ದಿಬ್ಬ ತೆರವುಗೊಳಿಸುವ ಸಂಬಂಧ ಒಟ್ಟು 161 ತಾತ್ಕಾಲಿಕ ಮರಳು ಪರವಾನಿಗೆಯನ್ನು ವಿತರಿಸಲಾಗಿರುತ್ತದೆ. ಅವುಗಳಲ್ಲಿ ಕುಂದಾಪುರ ತಾಲ್ಲೂಕು ವ್ಯಾಪ್ತಿಯ 04 ಮರಳು ದಿಬ್ಬಗಳನ್ನು ತೆರವುಗೊಳಿಸಲು ವಿತರಿಸಲಾದ ಒಟ್ಟು 39 ತಾತ್ಕಾಲಿಕ ಮರಳು ಪರವಾನಿಗೆಗಳಿಗೆ ಸಂಬAಧಿಸಿದಂತೆ KSCZMA ಯಿಂದ ನೀಡಲಾದ ನಿರಾಕ್ಷೇಪಣಾ ಪತ್ರದ ಅವಧಿಯು ಮೇ.29 ರಂದು ಮುಕ್ತಾಯಗೊಂಡಿದ್ದು, ಸದರಿ ಪರವಾನಿಗೆಗಳನ್ನು ಈಗಾಗಲೇ ತಡೆಹಿಡಿಯಲಾಗಿರುತ್ತದೆ ಹಾಗೂ ಸ್ಥಗಿತಗೊಳಿಸಲಾಗಿರುತ್ತದೆ. ಉಡುಪಿ ಮತ್ತು ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯ ಒಟ್ಟು 19 ಮರಳು ದಿಬ್ಬಗಳನ್ನು ತೆರವುಗೊಳಿಸುವ ಸಂಬಂಧ ವಿತರಿಸಲಾದ ಒಟ್ಟು 122 ತಾತ್ಕಾಲಿಕ ಮರಳು ಪರವಾನಿಗೆಗಳಿಗೆ ಸಂಬಂಧದಿಸಿದಂತೆ ನೀಡಲಾದ ನಿರಾಕ್ಷೇಪಣಾ ಪತ್ರದ ಅವಧಿಯು ಅಗಷ್ಟ್ 22ರವರೆಗೆ ಇರುವುದಾಗ್ಯೂ ಪ್ರಸ್ತುತ ಮಾನ್ಯ ಹಸಿರು ಪೀಠ ನ್ಯಾಯಾಲಯ, ದಕ್ಷಿಣ ವಲಯ ಚೆನೈ ನ ಆದೇಶದನುಸಾರ ಉಡುಪಿ ಜಿಲ್ಲಾ 07 ಸದಸ್ಯರ ಸಮಿತಿಯು ಜಿಲ್ಲಾ ವ್ಯಾಪ್ತಿಯಲ್ಲಿ ಮಾನ್ಯ ನ್ಯಾಯಾಲಯದ ಆದೇಶದನ್ವಯ ಕ್ರಮ ಕೈಗೊಂಡಿದ್ದು, ಕರಾವಳಿ ನಿಯಂತ್ರಣ…
