ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ವಿಟ್ಲದಲ್ಲಿ ನಡೆದ ಜೆಸಿಐ ಭಾರತ ವಲಯ 15ರ ಬೆಳವಣಿಗೆ ಮತ್ತು ಅಭಿವೃದ್ಧಿ ವಿಭಾಗದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಉಪ್ಪುಂದ ಜೇಸಿ ಘಟಕ ಈ ವರ್ಷ ಜೇಸಿಐ ಭಾರತ ಫೌಂಡೇಶನ್ ಗೆ ನೀಡಿದ ದೇಣಿಗೆ ಹಾಗೂ ಸದಸ್ಯತ್ವ ವಿಭಾಗದಲ್ಲಿ ತೋರಿದ ಬೆಳವಣಿಗೆಯನ್ನು ಜೆಸಿಐ ಪರಿಗಣಿಸಿ ವಲಯ 15ರ ಔಟ್ ಸ್ಟ್ಯಾಂಡಿಂಗ್ ಘಟಕ ಪ್ರಶಸ್ತಿ ಹಾಗೂ ಚಾಂಪಿಯನ್ ಅಪ್ ಚಾಂಪಿಯನ್ ಪ್ರಶಸ್ತಿ ದೊರಕಿದೆ. ರಾಷ್ಟ್ರೀಯ ಅಧ್ಯಕ್ಷರಾದ ಜೆಸಿಐ ಸೆನೆಟರ್ ರಾಕಿ ಜೈನ್ ಪ್ರಧಾನಿಸಿ ಗೌರವಿಸಿದರು . ಈ ಸಂಧರ್ಭ ವಲಯ 15ರ ಅಧ್ಯಕ್ಷರಾದ ಸೌಜನ್ಯ ಹೆಗ್ಡೆ, ರಾಷ್ಟ್ರೀಯ ನಿರ್ದೇಶಕರಾದ ಕಾರ್ತಿಕೇಯ, ಮಧ್ಯಸ್ಥ ಹಾಗೂ ವಲಯ ಉಪಾಧ್ಯಕ್ಷರಾದ ದೇವರಾಯ ದೇವಾಡಿಗ, ಜೆಸಿಐ ಉಪ್ಪುಂದದ ಸೆನೆಟರ್ ಯು. ಪ್ರಕಾಶ್ ಭಟ್, ವಲಯಾಧಿಕಾರಿಯಾದ ಸುಬ್ರಹ್ಮಣ್ಯ ಜಿ . ಉಪ್ಪುಂದ, ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ನಾಗಾರಾಜ್ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಿಫಾ ವೈರಸ್ ಬಗ್ಗೆ ಜನರು ಆತಂಕಗೊಳ್ಳದೆ ಆರೋಗ್ಯ ಇಲಾಖೆ ಸೂಚಿಸುವ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್. ಎಂ ಹೇಳಿದರು. ಅವರು ತಮ್ಮ ಕಛೇರಿಯ ಸಭಾಂಗಣದಲ್ಲಿ ನಿಫಾ ವೈರಸ್ ನಿಯಂತ್ರಣ ಹಾಗೂ ಜಿಲ್ಲಾ ಮಟ್ಟದ ಕೋವಿಡ್ ನಿಯಂತ್ರಣ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿದರು. ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೋಂಕು ಕಂಡು ಬಂದಿದ್ದು, ಅಲ್ಲಿನ ಜನರು ನಾನಾ ಕಾರಣಗಳಿಂದ ಜಿಲ್ಲೆಗೆ ಬಂದು ಹೋಗುತ್ತಾರೆ, ಸರ್ಕಾರ ಕೇರಳ ರಾಜ್ಯದಿಂದ ಜನರು ಬರುವುದನ್ನು ಹಾಗೂ ಹೋಗುವುದನ್ನು ನಿರ್ಬಂದಿಸಿದೆ, ಆದರೂ ಸಹ ಎಚ್ಚರಿಕೆ ವಹಿಸುವುದು ಅಗತ್ಯ ಎಂದರು. ಜ್ವರ, ಕೀಲುನೋವು, ದೇಹದ ಆಯಾಸ, ತಲೆನೋವು, ತಲೆ ಸುತ್ತುವಿಕೆ, ಮಾನಸಿಕ ಗೊಂದಲ, ಜ್ಞಾನ ತಪ್ಪುವುದು, ನಿಫಾ ವೈರಾಣು ಜ್ವರದ ಲಕ್ಷಣಗಳಾಗಿವೆ ಎಂದರು. ಸಾಮಾನ್ಯವಾಗಿ ಸೋಂಕಿತ ಬಾವಲಿಗಳ ನೇರ ಸಂಪರ್ಕದಿಂದ ಅಥಾವ ಬಾವಲಿಗಳು ಸೇವಿಸಿ ಬಿಸಾಡಿದ ಹಣ್ಣು-ಹಂಪಲುಗಳನ್ನು ಸೇವಿಸುವುದರಿಂದ ಇತರೆ ಪ್ರಾಣಿಗಳಿಗೂ ಹರಡುವ ಸಾದ್ಯತೆ ಇದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ವಿಧಿಸಲಾಗಿದ್ದ ವಾರಾಂತ್ಯ ಕರ್ಪ್ಯೂವನ್ನು ರದ್ದುಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ರಾತ್ರಿ 9 ರಿಂದ ಬೆಳಿಗ್ಗೆ 5ರ ತನಕ ಎಂದಿನಂತೆ ನೈಟ್ ಕರ್ಪ್ಯೂ ಇರಲಿದೆ. ಹಿಂದಿನ ಆದೇಶದಲ್ಲಿರುವ ನಿರ್ಬಂಧಿತ ಚಟುವಟಿಕೆಗಳು ಹಾಗೆಯೇ ಮುಂದುವರಿಯಲಿದ್ದು, ಕೇರಳ ಹಾಗೂ ಕರ್ನಾಟಕ ಪ್ರಯಾಣಿಸುವ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಅಕ್ಟೋಬರ್ ತನಕ ಮುಂದೂಡುವಂತೆ ತಿಳಿಸಿದ್ದಾರೆ. ಹೊಸ ಮಾರ್ಗಸೂಚಿಯಲ್ಲಿ ಏನಿದೆ ?ಕೋವಿಡ್-19 ಸೂಕ್ತ ನಡವಳಿಕೆಯನ್ನು ಹಾಗೂ ಸಂಬಂಧಪಟ್ಟ ಇಲಾಖೆಯವರು ಹೊರಡಿಸುವ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಸ್ಪರ್ಧಾತ್ಮಕ ತರಬೇತಿಗಳಿಗೆ ಮಾತ್ರ ಈಜು ಕೊಳಗಳನ್ನು ತೆರೆಯಲು ಅನುಮತಿಸಿದೆ. ಕೋವಿಡ್-19 ಸೂಕ್ತ ಶಿಷ್ಟಾಚಾರವನ್ನು ಅನುಸರಿಸುವ ಷರತ್ತುಗಳೊಂದಿಗೆ ಕ್ರೀಡಾಪಟುಗಳ ಅಭ್ಯಾಸಕ್ಕೆ ಮಾತ್ರ ಕ್ರೀಡಾ ಸಂಕೀರ್ಣಗಳನ್ನು/ ಸ್ಟೇಡಿಯಂಗಳನ್ನು ತೆರೆಯಲು ಅನುಮತಿಸಿದೆ. ಆದರೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ. ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನಾ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಇತರೆ ಸಭೆಗಳು ಹಾಗೂ ಸಮಾರಂಭಗಳು ಮತ್ತು ಸಾರ್ವಜನಿಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕಿನ ಕಾವ್ರಾಡಿ ಹಾಗೂ ಬಳ್ಕೂರು ಗ್ರಾಮಗಳಲ್ಲಿ ಪ್ರತಿಶತ ನೂರರಷ್ಟ ಕೊರೊನಾ ನಿರೋಧಕ ಚುಚ್ಚುಮದ್ದು ಪೂರ್ಣಗೊಳಿಸಿ ಸಾಧಿಸಿದ ಹಿನ್ನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಕಂಡ್ಲೂರು ವೈದ್ಯಾಧಿಕಾರಿ ಡಾ ಲತಾ ನಾಯಕ್ ಅವರಿಗೆ ಪ್ರಶಂಸನಾ ಪತ್ರಗಳನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್ರವರು ವಿತರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ. ಕೂರ್ಮಾ ರಾವ್, ಉಡುಪಿ ಶಾಸಕ ಕೆ. ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಮಕ್ಕಿ ಮಹಾಲಿಂಗೇಶ್ವರ ಸಂಸ್ಕೃತ ಪಾಠಶಾಲೆ ಬಹುಳಪುರ, ಈ ಶಿಕ್ಷಣ ಸಂಸ್ಥೆಯ ಸಂಸ್ಕೃತ ಸಂಭಾಷಣಾ ಸಪ್ತಾಹ ಶಿಬಿರ ಸಮಾರೋಪ ಸಮಾರಂಭವು ಬವಳಾಡಿ ಸ.ಹಿ.ಪ್ರಾ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವ ಶಾಲಾ ಮುಖ್ಯ ಶಿಕ್ಷಕ ಎನ್.ಕೆ ಬಿಲ್ಲವ ಅವರು ಮಾತನಾಡಿ ಭಾರತದ ಅತ್ಯಂತ ಪ್ರಾಚೀನ ಮತ್ತು ಶ್ರೀಮಂತ ಭಾಷೆಯಾದ ಸಂಸ್ಕೃತವನ್ನು ಅಧ್ಯಯನ ಮಾಡುವ ಅವಕಾಶ ಸಿಕ್ಕಿರುವುದು ನಮ್ಮ ಶಾಲಾ ವಿದ್ಯಾರ್ಥಿಗಳ ಸೌಭಾಗ್ಯ ಎಂದರು. ಮುಖ್ಯ ಅತಿಥಿಗಳಾಗಿ ಶಾಲಾ ಎಸ್.ಡಿ.ಎಂ.ಸಿ ನಿಕಟಪೂರ್ವ ಅಧ್ಯಕ್ಷ ಶ್ರೀ ಚನ್ನಯ್ಯ ಪೂಜಾರಿ, ಶಾಲಾ ಶಿಕ್ಷಕರುಗಳಾದ ಕಮಲ, ಶೇಖರ ಶೆಟ್ಟಿ, ರಾಘವೇಂದ್ರ ಕೆ, ಎಸ್.ಡಿ.ಎಂ.ಸಿ ಸದಸ್ಯರು ವೇದಿಕೆಯಲ್ಲಿದ್ದರು. ಸಂಸ್ಕೃತ ಪಾಠಶಾಲಾ ಮುಖ್ಯಗುರುಗಳಾದ ತಿರುಮಲೇಶ ಭಟ್ ಎಲ್ಲರನ್ನೂ ಸ್ವಾಗತಿಸಿದರು. ಸಂಸ್ಕೃತ ಪಾಠಶಾಲಾ ಶಿಕ್ಷಕಿ ಮಹಾಲಕ್ಷ್ಮಿ ಧನ್ಯವಾದಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಸೆ.09: ಸೆಕ್ಯೂರ್ ಇನ್ ಡೆಲಿವರಿ ಸರ್ವಿಸ್ ಸೇವೆಯು ಬೈಂದೂರಿನಲ್ಲಿ ಇತ್ತಿಚಿಗೆ ಶುಭಾರಂಭಗೊಂಡಿತು. ಕೋರಿಯರ್, ಕಾರ್ಗೋ, ಪಾರ್ಸೆಲ್, ಲಾಜಿಸ್ಟಿಕ್, ಪ್ಯಾಕರ್ಸ್ & ಮೂವರ್ಸ್ ಸರ್ವಿಸಸ್, ಟ್ರಾವೆಲ್ & ಟೂರಿಸಂ ಸೇವೆಗಳು ಸೆಕ್ಯೂರ್ ಇನ್ ಸಂಸ್ಥೆಯಲ್ಲಿ ಇರಲಿದ್ದು, ವಾರದ ಎಲ್ಲಾ ದಿನವೂ ಗ್ರಾಹಕರಿಗೆ ಇದರ ಸೇವೆ ದೊರೆಯಲಿದೆ. ಉದ್ಯಮಿ ಬಾಬು ಅವರು ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ಈ ಸಂದರ್ಭ ಸಂಸ್ಥೆಯ ಮಾಲಿಕ ಆದರ್ಶ ಎ. ಕೃಷ್ಣಾಪುರ, ಸೆಕ್ಯೂರ್ ಡಾಟ್ ಇನ್ ಸಿಸಿ ಟಿವಿ ಡೀಲರ್ ಓಂಕಾರ್ ಡಿ. ಉಪ್ಪುಂದ ಸೇರಿದಂತ ಇನ್ನಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಗಣಿತಶಾಸ್ತ್ರ ವಿಭಾಗದ ವತಿಯಿಂದ ‘ವೇದ ಗಣಿತ – ಈಜಿ ಟ್ರಿಕ್ಸ್’ ಕಾರ್ಯಾಗಾರ ಗುರುವಾರ ನಡೆಯಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಹೈದರಾಬಾದಿನ ಸಿಗ್ಮಾ ಐಎಎಸ್ ಅಕಾಡೆಮಿಯ ನಿರ್ದೇಶಕ ಬಿ. ರಾಮ್‌ಪಾಲ್ ರೆಡ್ಡಿ ಮಾತನಾಡಿ, ಗಣಿತದಲ್ಲಿ ಎ? ಪರಿಣತಿಯನ್ನು ಹೊಂದಿದ್ದರೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಣಿತ ಜ್ಞಾನಕ್ಕಿಂತ ನಿಗದಿತ ಸಮಯದಲ್ಲಿ ಉತ್ತರವನ್ನು ಕಂಡುಹಿಡಿಯುವ ಕೌಶಲ್ಯ ಮುಖ್ಯವಾಗುತ್ತದೆ ಎಂದರು. ಸ್ನಾತಕೋತ್ತರ ಗಣಿತ ವಿಭಾಗದ ಮುಖ್ಯಸ್ಥ ದೀಪಕ್ ಕೆ. ಎಸ್ ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭ, ಸ್ನಾತಕೋತ್ತರ ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕರಾದ ಗಣೇಶ್ ಎಚ್. ಎನ್., ಸಿಡ್ನಾ ರೀಮಾ ಸೆರೆವೋ, ಧನ್ಯಶ್ರೀ ಅಧಿಕಾರಿ, ಪದವಿ ಗಣಿತ ಉಪನ್ಯಾಸಕರಾದ ಕಿಶೋರ್, ವೀರ ಕ್ರಾಸ್ತ, ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಹಾಗೂ ಯುಪಿಎಸ್ಸಿ ತರಬೇತಿ ಕೇಂದ್ರದ ಸಂಯೋಜಕ ಡಾ ಅಶೋಕ್ ಡಿಸೋಜಾ, ಸ್ನಾತಕೋತ್ತರ ಗಣಿತ ಹಾಗೂ ಪದವಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ವೇದಮೂರ್ತಿ ಎಚ್. ಎಂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯಕ್ಷಗಾನ ಕಲಾವಿದರು ಸಂಘಟಿತ ಹೊಸ ಟ್ರಸ್ ಹುಟ್ಟುಹಾಕಿದ್ದು, ಟ್ರಸ್ಟ್ ಯಕ್ಷಗಾನ ಕಲಾವಿದರು ಮಾತ್ರ ಒಳಗೊಳ್ಳದೆ ಕಾರ್ಮಿಕರು ಸೇರಿಸಿಕೊಂಡಿರುವುದು ಧನಾತ್ಮಕ ಬೆಳವಣಿಗೆ. ಯಾವುದೇ ಸಂಘಟನೆ ಅಥವಾ ಟ್ರಸ್ಟ್ ಹುಟ್ಟು ಸಂಘರ್ಷಕ್ಕಲ್ಲಾ ಬದಲಾಗಿ ಸಮಾಜದೊಟ್ಟಿಗೆ ಸೇರಿ ಸೌಹಾರ್ಧತೆಗೆ ದಾರಿಯಾಗಬೇಕು. ಟ್ರಸ್ಟ್ ಮೂಲಕ ಕಲಾವಿದರಿಗೆ, ಕಾರ್ಮಿಕರಿಗೆ ನ್ಯಾಯ, ಅವರ ಕಷ್ಟಸುಖದಲ್ಲಿ ಭಾಗಯಾಗಬೇಕು ಎಂದು ಹೋಟೆಲ್ ಉದ್ಯಮಿ ಕೃಷ್ಣಮೂರ್ತಿ ಮಂಜ ಹೇಳಿದರು. ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ಬ್ರಹ್ಮಲಿಂಗೇಶ್ವರ ಕಲಾವಿದರ ಕಾರ್ಮಿಕರ ಹಿತರಕ್ಷಣಾ ಯಕ್ಷಕಲಾ ಟ್ರಸ್ಟ್ ಉದ್ಘಾಟಿಸಿ ಮಾತನಾಡಿ, ಟ್ರಸ್ಟ್ ಕಲಾವಿದರ ಶ್ರೇಯಸ್ಸಿನ ಜೊತೆ ಯಕ್ಷಗಾನ ಸಂಪ್ರದಾಯಕ್ಕೆ ಧಕ್ಕೆ ಬಾರದಂತೆ ಮುಂದುವರಿಸುವ ಹೊಣೆ ಕೂಡಾ ಹೊರಬೇಕು ಎಂದು ಸಲಹೆ ಮಾಡಿದರು. ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಅನುವಂಶೀಯ ಮೊಕ್ತೇಸರ ಸದಾಶಿವ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಸದಸ್ಯ ಡಾ.ಅತುಲ್ ಕುಮಾರ್ ಶೆಟ್ಟಿ, ಮಾಜಿ ಸದಸ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನೇಷನ್ ಲವರ್ಸ್ ಬೈಂದೂರು ಸಂಸ್ಥೆಯ ಗೌರವಧ್ಯಕ್ಷರಾಗಿ ಗೋವಿಂದ ಬಾಬು ಪೂಜಾರಿ ಹಾಗೂ ಗೌರವ ಸಲಹೆಗಾರರಾಗಿ ಪ್ರಸಾದ್ ಬೈಂದೂರು ಅವರನ್ನು ಆಯ್ಕೆ ಮಾಡಲಾಗಿದೆ. ಯುವ ಸೈನಿಕ ಪ್ರಶಾಂತ್ ದೇವಾಡಿಗ ನೇತೃತ್ವದ ಆರಂಭಿಸಲಾಗಿರುವ ನೇಷನ್ ಲವರ್ಸ್ ಬೈಂದೂರು ಸಂಘಟನೆಯು ಯುವ ಮನಸ್ಸುಗಳಲ್ಲಿ ದೇಶಪ್ರೇಮದ ಭಾವನೆ ಹೆಚ್ಚಿಸಿ ಭಾರತೀಯ ಸೈನ್ಯ ಸೇರಲು ಅಗತ್ಯವಿರುವ ತರಬೇತಿಗಳನ್ನು ಉಚಿತವಾಗಿ ನೀಡುವ ಉದ್ದೇಶ ಹೊಂದಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ವಿಕಲಚೇತನರ ಇಲಾಖೆ ಹಾಗೂ ಎಪಿಡಿ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಹಾಗೂ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಸಭಾಂಗಣದಲ್ಲಿ ಆಯೋಜಿಸಿದ್ದ ಒಂದು ತಿಂಗಳ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಎಪಿಡಿ ಸಂಸ್ಥೆಯ ಜಿಲ್ಲಾ ನೋಡಲ್ ಅಧಿಕಾರಿಗಳಾದ ಹರೀಶ ಶೆಟ್ಟಿಯವರ ಮಾತನಾಡಿ, ವಿಶೇಷ ಚೇತನರಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ, ನಮ್ಮ ಸಂಸ್ಥೆಯೂ 1959 ರಲ್ಲಿ ಸ್ಥಾಪನೆಯಾಗಿ, ಸುಮಾರು 62 ವರ್ಷಗಳಿಂದ ಅತ್ಯಂತ ಹಿಂದುಳಿದ ಗ್ರಾಮೀಣ ಮಟ್ಟದಲ್ಲಿ ಯುವ ವಿಶೇಷ ಚೇತನರನ್ನ ಗುರುತಿಸಿ ಅವರ ಸ್ವಾವಲಂಬಿ ಜೀವನಕ್ಕೆ ಎಪಿಡಿ ಸಂಸ್ಥೆ ಸಹಕಾರಿಯಾಗಿದೆ ಎಂದು ಪ್ರೋತ್ಸಾಹಿಸಿದರು ಹಾಗೇ ಕೋರನಾ ಸಂದರ್ಭದಲ್ಲಿ ವಿಶೇಷ ಚೇತನರಾಗಿ ಗ್ರಾಮೀಣ ಮಟ್ಟದಲ್ಲಿ ಲಸಿಕೆ, ವೈದ್ಯಕೀಯ ಸೌಲಭ್ಯ, ಸಾಂತ್ವನ ಧೈರ್ಯ ತುಂಬಿದ ಕುಂದಾಪುರ…
