ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇಲ್ಲಿನ ಮಿಷನ್ ಕಾಂಪೌಂಡ್ ಬಳಿ 10 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ 56 ಮನೆಗಳನ್ನು ಒಳಗೊಂಡ ನೂತನ ಪೊಲೀಸ್ ವಸತಿ ಸಮುಚ್ಛಯವನ್ನು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಇಂದು ಉದ್ಘಾಟಿಸಿದರು. ರಾಜ್ಯದಲ್ಲಿ ಗೃಹ ಇಲಾಖೆವತಿಯಿಂದ 2025 ರೊಳಗೆ 10000 ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾರ್ಯ ನಡೆಯುತ್ತಿದ್ದು, 200 ಕೋಟಿ ರೂ ವೆಚ್ಚದಲ್ಲಿ 100 ನೂತನ ಪೊಲೀಸ್ ಠಾಣೆಗಳ ನಿರ್ಮಾಣ ಹಾಗೂ 140 ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಪೊಲೀಸ್ ಇಲಾಖೆಯ ಬಲವರ್ಧನೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಕ್ರೈಮ್ ಸೀನ್ ಅಧಿಕಾರಿಗಳ ನೇಮಕಾತಿ ನಡೆಯುತ್ತಿದೆ. ಆಧುನಿಕ ತಂತ್ರಜ್ಞಾನಗಳನ್ನು ಇಲಾಖೆಯಲ್ಲಿ ಅಳವಡಿಸಿದ್ದು, ಸೈಬರ್ ಅಪರಾಧಗಳನ್ನು ಪತ್ತೆ ಮಾಡಲು ಬ್ಯಾಂಕ್ ಗಳೊಂದಿಗೆ ಒಪ್ಪಂದ ಆಗಿದ್ದು,ಹಣ ಕಳೆದುಕೊಂಡು ವ್ಯಕ್ತಿ 1-2 ಗಂಟೆಯೊಳಗೆ ದೂರು ನೀಡಬೇಕು , ತಕ್ಷಣದಲ್ಲಿ ಲಿಖಿತ ದೂರು ನೀಡಲು ಸಾಧ್ಯವಾಗದಿದ್ದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಿ ದೂರು ಸಲ್ಲಿಸಬಹುದು,ಸಾರ್ವಜನಿಕರು ಪೊಲೀಸ್ ಇಲಾಖೆಯ ನೆರವು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತರು ಸಮುದ್ರದಂತೆ ಅಗೆದಷ್ಟು ಮುತ್ತು ಕಾಣಿಸುವಂತ ವ್ಯಕ್ತಿತ್ವ, ನಮ್ಮ ಊಹೆಗೆ ನಿಲುಕದಂತವರು. ಪರಿಸರವನ್ನೇ ಶಾಲೆ ಎಂದು ಪರಿಸರದ ಮಹತ್ವವನ್ನು ಸಮಾಜಕ್ಕೆ ತಿಳಿಸಿದ ಕಾರಂತರು , ಕೋಟ ಅಂತಹ ಚಿಕ್ಕ ಊರನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಿ ನಮ್ಮೂರಿಗೆ ಹೆಮ್ಮೆ ತಂದ ಕಾರಂತರ ನೆನಪಿನಲ್ಲಿ ಸಾಹಿತ್ಯಿಕ-ಸಾಂಸ್ಕೃತಿಕ ಚಟುವಟಿಕೆಯ ಕೇಂದ್ರವಾಗಿ ಕಾರಂತ ಥೀಮ್ ನಿರ್ಮಾಣ ಮಾಡಿರುವುದು ಶ್ಲಾಘನೀಯ ಕೆಲಸ ಎಂದು ಕಾರಂತ ಪ್ರತಿಷ್ಠಾನದ ಟ್ರಸ್ಟಿ ಪ್ರಕಾಶ್ ಭಟ್ ಹೇಳಿದರು. ಅವರು ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ)ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್(ರಿ)ಉಡುಪಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ 17ನೇ ವರುಷದ ಸಂಭ್ರಮದ ಸಾಹ್ಯಿತ್ಯಿಕ -ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿತ-2021(ಎಣೆಯಿಲ್ಲದ ಚಕಿತ) ಕಾರ್ಯಕ್ರಮದ ಏಳನೇ ದಿನದ ಕಾರಂತ ಚಿಂತನ ಹಾಗೂ ಗಮ್ಜಲ್ ಕುಂದಾಪ್ರ ಕನ್ನಡ ಹರಟೆ ತಂಡದವರಿಂದ ಹರಟೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೋಟತಟ್ಟು ಗ್ರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪ್ರಧಾನ ಅಂಚೆ ಕಛೇರಿಯಲ್ಲಿ ವಿಶ್ವ ಅಂಚೆ ದಿನಾಚರಣೆಯನ್ನು ಆಚರಿಸಲಾಯಿತು. ಅಂಚೆ ಇಲಾಖೆಯ 167 ವರ್ಷಾಚರಣೆಯನ್ನು ಅಕ್ಟೋಬರ್ 9ರಿಂದ 15ರವರೆಗೆ ‘ಅಂಚೆ ಸಪ್ತಾಹ’ದ ಮೂಲಕ ಆಚರಿಸಲಾಗುತ್ತಿದೆ. ಈ ಸಂದರ್ಭ ಅಂಚೆ ಉಪ ಅಧೀಕ್ಷಕರಾದ ಪಿ ಏನ್ ಸತೀಶ, ಅಂಚೆ ನಿರೀಕ್ಷಿಕರಾದ ಡಿ ಎಮ್ ರಾಮಚಂದ್ರ, ಅಂಚೆಪಾಲಕರಾದ ಮಂಜುನಾಥ್ ಎಚ್ ಹಾಗೂ ಅಂಚೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನ ಅಮೃತಧಾರೆ/ಅಮೃತಸಿರಿ ಯೋಜನೆಯಡಿ ಕೊಯಿಲಾ ಜಾನುವಾರು ಸಂವರ್ಧನಾ ಕೇಂದ್ರ ಪುತ್ತೂರು ತಾಲೂಕಿನಿಂದ ಇಲಾಖಾ ಯೋಜನೆಯಡಿ ಮಲೆನಾಡು ಗಿಡ್ಡ ಜಾತಿಗೆ ಸೇರಿದ ಗಂಡು ಕರು ಮತ್ತು ಹೆಣ್ಣು ಕರುಗಳನ್ನು ಸಾಕಣಿಕೆಗಾಗಿ ಗರಿಷ್ಠ ರಿಯಾಯಿತಿ ದರದಲ್ಲಿ ಪಡೆಯಲು ರೈತರಿಗೆ ಅವಕಾಶವಿದ್ದು, ಆಸಕ್ತರು ದಿ. ಅಕ್ಟೋಬರ್ 15ರೊಳಗೆ ತಾಲೂಕು ಪಶು ಆಸ್ಪತ್ರೆಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿ, (ಆಡಳಿತ) ಪಶು ಆಸ್ಪತ್ರೆ, ಉಡುಪಿ(9448134852), ಕಾಪು(9448163237) ಬ್ರಹ್ಮಾವರ( 9448409855), ಕುಂದಾಪುರ(9448850501), ಬೈಂದೂರು(9741638203), ಕಾರ್ಕಳ(9448177345) ಮತ್ತು ಹೆಬ್ರಿ (9986764615) ರವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆಂದು ಪಶು ಪಾಲನಾ ಇಲಾಖೆಯ ಉಪ ನಿದೇರ್ಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುತ್ತಿದೆ. ಆಸಕ್ತ ವಿದ್ಯಾರ್ಥಿಗಳು ಅಕ್ಟೋಬರ್ 16 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://www.bcwd.karnataka.gov.in/ ಅಥವಾ ಜಿಲ್ಲಾ ಅಧಿಕಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಕಛೇರಿ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆವರ್ಸೆ ಗ್ರಾಮ ಪಂಚಾಯತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು 2ಎ- ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಗ್ರಾಮದಲ್ಲಿ 2ಎ-ಮಾಜಿ ಸೈನಿಕ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಅದೇ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇರಿದ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾದ 2ಎ ಇತರೆ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆವರ್ಸೆ ಗ್ರಾಮ ಪಂಚಾಯತ್ ದೂ.ಸಂ: 0820-2567909 ಅಥವಾ ಜಿಲ್ಲಾ ಕೇಂದ್ರ ಗ್ರಂಥಾಲಯ ದೂ.ಸಂ: 0820-2523438 ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕಡಲತೀರದಲ್ಲಿ ಜನಸ್ನೇಹಿ ಪರಿಸರ ನಿರ್ಮಾಣ ಮಾಡಿ ಪ್ರವಾಸಿಗರನ್ನು ಸೆಳೆಯುವುದರ ಜೊತೆಗೆ ಜಿಲ್ಲೆಯಲ್ಲಿರುವ ಬೀಚ್‌ಗಳನ್ನು ರಾಷ್ಟ್ರಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶ್ವದರ್ಜೆಗೇರಿಸುವ ಕೆಲಸವಾಗಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಉಡುಪಿ ಜಿಲ್ಲೆ ಪರಿಸರ ಮಂತ್ರಾಲಯ ಅರಣ್ಯ ಮತ್ತು ಹವಾಮಾನ ಬದಲಾವಣೆ ಭಾರತ ಸರಕಾರ ಸೊಸೈಟಿ ಆಫ್ ಇಂಟರ್ನೆಟ್ ಕೋಸ್ಟಲ್ ಮ್ಯಾನೇಜ್ಮೆಂಟ್ ಹಾಗೂ ಮ್ಯಾನೇಜ್ಮೆಂಟ್ ಕಮಿಟಿ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಾನ್ಯತೆ ಪಡೆದಿರುವ ಜಿಲ್ಲೆಯ ಪಡುಬಿದ್ರಿ ಕಡಲತೀರದಲ್ಲಿ ಭಾರತದ 75ನೇ ಆಜಾದಿ ಕಾ ಅಮೃತ ಮಹೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪ್ರಸ್ತುತ ರಾಜ್ಯದಲ್ಲಿ 2 ಬ್ಲೂ ಫ್ಲಾಗ್ ಬೀಚ್‌ಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿದ್ದು, ಇನ್ನೂ 16 ಬೀಚ್ಗಳ ಪಟ್ಟಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ. ಡೆನ್ಮಾರ್ಕ್ನಲ್ಲಿ ಎಫ್ಇಇ ಸಂಸ್ಥೆಯು ನಿಗಧಿಪಡಿಸಿದ ಸರಾಸರಿ (33)ಅಂಕ ಪಡೆದಲ್ಲಿ ರಾಜ್ಯದಲ್ಲಿ ಇನ್ನೂ ಹೆಚ್ಚು ಪ್ರವಾಸಿ ಆಕರ್ಷಿತ ಬೀಚ್ಗಳು ನೀಲಿಧ್ವಜ ಸಂಕೇತವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಹೆಬ್ರಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2022ನೇ ಸಾಲಿಗೆ 6 ಮತ್ತು 9 ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ. 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30 ಹಾಗೂ 9ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಜವಾಹರ ನವೋದಯ ವಿದ್ಯಾಲಯದಲ್ಲಿ ಉಚಿತವಾಗಿ ಮಕ್ಕಳಿಗೆ ಆಧುನಿಕ ಶಿಕ್ಷಣದ ಜೊತೆಗೆ ಕಂಪ್ಯೂಟರ್ ಶಿಕ್ಷಣ, ಯೋಗ, ವಾಚನಾಲಯದ ಸೌಲಭ್ಯ ಸಂಗೀತ, ನೃತ್ಯ, ಕರಾಟೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅವಕಾಶವಿದ್ದು, ವಿಶಾಲವಾದ ಪ್ರಯೋಗ ಶಾಲೆಗಳನ್ನು ಸುಂದರವಾದ ಕಟ್ಟಡವನ್ನು ಹೊಂದಿದೆ. ಪ್ರಸುತ್ತ ಉಡುಪಿ ಜಿಲ್ಲೆಯಲ್ಲಿ 5 ಹಾಗೂ 8ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳು ಅರ್ಜಿ ಸಲ್ಲಿಸಲು ವೆಬ್‌ಸೈಟ್ https://navodaya.gov.in/nvs/en/Home1 ಅಥವಾ ಹೆಚ್ಚಿನ ಮಾಹಿತಿಗಾಗಿ 9880588736/08253-251260 ನ್ನು ಸಂಪರ್ಕಿಸುವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯದಲ್ಲಿ ದಸರಾ ಮುಗಿದ ಕೂಡಲೇ ಅಂದರೆ ಅ.16ರಿಂದಲೇ ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಣೆ ಮಾಡಿದ್ದಾರೆ. ಕುಂದಾಪುರ ಬೋರ್ಡ್ ಹೈಸ್ಕೂಲು ಹಾಗೂ ಉಡುಪಿಯ ಒಳಕಾಡು ನಾರ್ತ್ ಶಾಲೆಗೆ ಬಂದು ಶಾಲೆಯ ವೀಕ್ಷಣೆ ಮಾಡಿದ ಬಳಿಕ ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದರು. ಭಗವಂತನ ಅನುಗ್ರಹದಿಂದ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಹಲವಾರು ಜಿಲ್ಲೆಯಲ್ಲಿ ಪಾಸಿಟಿವಿಟಿ ಝೀರೋ ಇದೆ. ಶಾಲೆ ಆರಂಭಿಸಬಹುದು ಎಂದು ತಜ್ಞರು ಅಭಿಪ್ರಾಯ ಕೊಟ್ಟಿದ್ದಾರೆ. ದಸರಾ ಮುಗಿದ ತಕ್ಷಣವೇ ಶಾಲೆಗಳು ಆರಂಭವಾಗುತ್ತದೆ. ಜೊತೆಗೆ ದಸರಾ ಮುಗಿದ ತಕ್ಷಣ ಬಿಸಿಊಟ ಕೂಡ ಆರಂಭವಾಗಲಿದೆ. ಸಿಎಂ ಬೊಮ್ಮಾಯಿ ಕೂಡ ಶೀಘ್ರ ಶಾಲೆ ಆರಂಭಿಸಲು ಆಸಕ್ತಿ ತೋರಿದ್ದಾರೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಈ ಬಗ್ಗೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಟಾಸ್ಕ್ ಫೋರ್ಸ್ ಸಭೆ ಕರೆಯುತ್ತಾರೆ. ಆಯಾ ಜಿಲ್ಲೆಯ ಅಧಿಕಾರಿಗಳು ಎಲ್ಲಾ ವ್ಯವಸ್ಥೆಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ಕ್ವಿಜ್‌ನಲ್ಲಿ ಭಾಗವಹಿಸಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮಂಜುಳಾ ಮೈಸೂರು ವಿಭಾಗ ಮಟ್ಟದ ಐಟಿ ಕ್ವಿಜ್‌ಗೆ ಆಯ್ಕೆಯಾಗಿದ್ದಾಳೆ.
