Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ 35ನೇ ವರ್ಷದ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ದಿನಕರ ಪಟ್ವಾಲ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ದಡ್ಡು ಆಯ್ಕೆಯಾಗಿದ್ದಾರೆ. ಸಮಿತಿಯ ಗೌರವ ಅಧ್ಯಕ್ಷರಾಗಿ ಗುರುರಾಜ ಹೋಬಳಿದಾರ್, ಕಾರ್ಯದರ್ಶಿಯಾಗಿ ರಾಘವೇಂದ್ರ ಎನ್. ತಗ್ಗರ್ಸೆ, ಉಪಾಧ್ಯಕ್ಷರಾಗಿ ಗುರುದಾಸ್ ಹೆಚ್, ಸುಬ್ರಹ್ಮಣ್ಯ ಮದ್ದೋಡಿ(ಶಮ್ಮೀ), ಸುರೇಶ ಬಿಜೂರು, ಕೆ.ವಿ ಸತೀಶ, ವೆಂಕಟರಮಣ ಟಿ., ಕೆ.ಟಿ ರಾಜೇಶ್, ರಾಜೇಶ್ ಕಲ್ಲುಕಂಠ, ಜೊತೆ ಕಾರ್ಯದರ್ಶಿಯಾಗಿ ದಿನಕರ ಜಿ., ಸುರೇಶ ನಾಯ್ಕ, ಮಾಣಿಕ್ಯ ಹೋಬಳಿದಾರ್, ವಿಠಲ ರೊಕ್ಕನ್ ಗಿರೀಶ ಕೆ., ಸುಬ್ರಹ್ಮಣ್ಯ ಹೋಬಳಿದಾರ್, ರಾಮಚಂದ್ರ ಆರ್.ವಿ., ಪವನ ಡಿ., ರಿತೇಶ್ ಪಟ್ವಾಲ್, ರಾಜೇಶ ಬಟ್ವಾಡಿ, ಗಣೇಶ ಕೆ., ಸುಬ್ರಹ್ಮಣ್ಯ ಬಿಜೂರು, ಕೋಶಾಧಿಕಾರಿಯಾಗಿ ರಾಜೇಶ ನೀಲಪ್ಪನಮನೆ, ಗೌರವ ಲೆಕ್ಕ ಪರಿಶೋಧಕರಾಗಿ ಸತೀಶ್ ಹೋಬಳಿದಾರ್ ಆಯ್ಕೆಯಾಗಿದ್ದಾರೆ. ಅ.12ರಿಂದ ಶಾರದೋತ್ಸವ:ಅ.12ರಿಂದ 15ರ ತನಕ ಬೈಂದೂರು ಶ್ರೀ ಸಿತಾರಾಮಚಂದ್ರ ದೇವಸ್ಥಾನದಲ್ಲಿ 35ನೇ ವರ್ಷದ ಶಾರದೋತ್ಸವ ಸಮಾರಂಭ ನಡೆಯಲಿದ್ದು, ಅ.12ರಂದು ಶಾರದ ದೇವಿಯ ವಿಗ್ರಹ ಪ್ರತಿಷ್ಠಾಪನೆ,…

Read More

ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಕುಂದಾಪುರ ಪುರಸಭೆ ವ್ಯಾಪ್ತಿಯ ನಗರದ ಎಲ್ಲ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ರಿಂಗ್ ರೋಡ್ ಅಭಿವೃದ್ದಿಗೆ 20 ಕೋಟಿ ರೂ. ಅನುದಾನ ಮಂಜೂರಾಗಿದೆ. ಮಹತ್ವಾಕಾಂಕ್ಷೆಯ ಯೋಜನೆ:2006-07ನೇ ಸಾಲಿನಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ದೂರದೃಷ್ಟಿತ್ವದಲ್ಲಿ ಸಾಕಾರಗೊಂಡ ಈ ಮಹತ್ವಾಕಾಂಕ್ಷೆಯ ಯೋಜನೆ ನಿರ್ವಹಣೆ ಇಲ್ಲದೆ ಸೊರಗುತ್ತಿತ್ತು. ಆರಂಭದಲ್ಲಿ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ರಿಂಗ್‌ರೋಡ್ ಆನಂತರ ದಿನಗಳಲ್ಲಿ ನಿರ್ವಹಣೆ ಕಾಣದೆ ವರ್ಷಗಳೇ ಸಂದುಹೋಗಿವೆ. ಪೂರ್ಣ ಪ್ರಮಾಣದಲ್ಲಿ ರಿಂಗ್‌ರೋಡ್ ನಿರ್ಮಾಣದ ಅವಶ್ಯವನ್ನು ಶಾಸಕರು ಮನಗಂಡಿದ್ದರು. ಆದರೆ ನಾನಾ ಕಾರಣಗಳಿಂದ ಅನೇಕ ಬಾರಿ ಪ್ರಸ್ತಾವ ಸಲ್ಲಿಸಿದ್ದರೂ ಮಂಜೂರಾತಿ ವಿಳಂಬವಾಗುತ್ತಿತ್ತು. ಕುಂದಾಪುರದ ಸಂಗಮ್‌ನಿಂದ ಮೊದಲ್ಗೊಂಡು ಪಂಚಗಂಗಾವಳಿ ನದಿ ಪಾತ್ರದಲ್ಲಿ ಹಾದು ಹೋಗುವ ರಿಂಗ್ ರೋಡ್ ಚರ್ಚ್ ರಸ್ತೆಯನ್ನು ಸಂಧಿಸುತ್ತದೆ. ಸಂಚಾರ ದಟ್ಟಣ ತಗ್ಗಲಿದೆ:ರಿಂಗ್‌ರೋಡ್ ನಿರ್ಮಾಣವಾದರೆ ನಗರದ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ನಗರದೊಳಗೆ ಪ್ರವೇಶ ಪಡೆಯದೇ ಕೋಡಿ ಮೊದಲಾದ ಭಾಗಗಳಿಗೆ ಪುರಸಭೆ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಹೆದ್ದಾರಿಯಿಂದ ರಿಂಗ್ ರೋಡ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಪರಿಚಯ ದೃಶ್ಯಿಕೆಯನ್ನು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ. ಸಿ. ನಾಗೇಶ್ ಬಿಡುಗಡೆಗೊಳಿಸಿದರು. ಬಿಡುಗಡೆಗೊಳಿಸಿದ ನಂತರ ಸಂಸ್ಥೆಯ ವತಿಯಿಂದ ಸಚಿವರನ್ನು ಗೌರವಿಸಿ ಸಮ್ಮಾನಿಸಲಾಯಿತು. ಈ ಸಂದರ್ಭ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ, ಬೈಂದೂರು ಶಾಸಕರಾದ ಬಿ.ಎಮ್. ಸುಕುಮಾರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಉಪನ್ಯಾಸಕರಾದ ರಕ್ಷಿತ್ ರಾವ್, ಶಿವರಾಜ್ ಸಿ., ಪ್ರವೀಣ್ ಗಂಗೊಳ್ಳಿ, ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ನೈಕಂಬ್ಳಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.06: ರೈತರು ಸರಕಾರದ ಸೌಲಭ್ಯಗಳಿಂದ ವಂಚಿತರಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ Former Registration unified Beneficiary Information System (FRUITS) ಎಂಬ ತಂತ್ರಾಂಶದಲ್ಲಿ ರೈತರ ಮಾಹಿತಿಯನ್ನು ತಕ್ಷಣ ದಾಖಲಿಸುವ ಅಗತ್ಯವಿದ್ದು, ಅದಕ್ಕಾಗಿ ರೈತರು ತಮ್ಮ ಆಧಾರ್ ನಂಬರ್, ಬ್ಯಾಂಕ್ ಖಾತೆಯ ನಂಬರ್ ಹಾಗೂ ರೈತರಿಗೆ ಸಂಬಂಧಪಟ್ಟ ಎಲ್ಲಾ ಕೃಷಿ ಜಮೀನುಗಳ ಸರ್ವೆ ನಂಬರ್ ಅಗತ್ಯವಿದೆ. ಆದುದರಿಂದ ಬೈಂದೂರು ತಾಲೂಕಿನ ಸಮಸ್ತ ರೈತರು ತಮ್ಮ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ ಮತ್ತು ಎಲ್ಲಾ ಕೃಷಿ ಜಮೀನುಗಳ ಮಾಹಿತಿಯನ್ನು ಎರಡು ದಿನಗಳ ಒಳಗೆ ತಮ್ಮ ತಮ್ಮ ವ್ಯಾಪ್ತಿಯ ಗ್ರಾಮ ಲೆಕ್ಕಿಗರ ಕಛೇರಿಗೆ ತಲುಪಿಸುವಂತೆ ಬೈಂದೂರು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕಾರ್ಗಿಲ್ ಯುದ್ಧದಲ್ಲಿ ಪಾಲುಗೊಂಡ ನಿವೃತ್ತ ಯೋಧ ಎಳಜಿತ ಗಣಪತಿ ಗೌಡ ಅವರನ್ನು ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಎದುರು ಉಡುಪಿ ಉಡುಪಿ ಜಿಲ್ಲಾ ಯುವಮೋರ್ಚಾ ನೇತೃತ್ವದಲ್ಲಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಸನ್ಮಾನಿಸಿದರು. ಈ ಸಮದರ್ಭ ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಜಯಾನಂದ ಹೋಬಳಿದಾರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ವಿಕ್ಯಾತ್ ಶೆಟ್ಟಿ, ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಅಭಿರಾಜ್ ಸುವರ್ಣ, ಅಕ್ಷಿತ್ ಶೆಟ್ಟಿ ಹೆರ್ಗ, ಮಂಡಲ ಬಿಜೆಪಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಯು.ಮೋ ಪ್ರಧಾನ ಕಾರ್ಯದರ್ಶಿ ಆಕಾಶ್ ಪೂಜಾರಿ, ಕೊಲ್ಲೂರು ಪಂಚಾಯತ್ ಉಪಾಧ್ಯಕ್ಷರಾದ ಹರೀಶ್ ಶೆಟ್ಟಿ, ಸಂದೀಪ್ ಕೊಲ್ಲೂರು, ಉಮೇಶ್ ಶೆಟ್ಟಿ ಕಲ್ಗದ್ದೆ, ಅನುರ್ ಮೆಂಡನ್ ಪಕ್ಷದ ಕಾರ್ಯಕರ್ತರು ಈ ವೇಳೆ ಇದ್ದರು. ► ಕೊಲ್ಲೂರು ಶ್ರೀ ಮೂಕಾಂಬಿಕೆಗೆ ತುಲಾಭಾರ ಸೇವೆ ಸಲ್ಲಿಸಿದ ಸಚಿವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆಯಾದರೆ, ಇನ್ನು ಕೆಲವು ಭಾಗಗಳಲ್ಲಿ ಮಕ್ಕಳ ಕೊರತೆ ಇದೆ. ಇಲಾಖೆಗೆ ಇದೊಂದು ವಿಚಿತ್ರ ಅಗ್ನಿಪರೀಕ್ಷೆ. ಇವೆರಡನ್ನೂ ಸಮತೋಲನಗೊಳಿಸಲು ಇರುವ ಉಪಾಯಗಳ ಬಗ್ಗೆ ಇಲಾಖೆ ಹಲವಾರು ರೀತಿಯ ಯೋಚನೆ ಮಾಡುತ್ತಿದೆ. ಗ್ರಾಮ ಪಂಚಾಯತಿಗೊಂದು ಮಾದರಿ ಶಾಲೆಯ ಚಿಂತನೆ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ ಹೇಳಿದರು. ನಾವುಂದ ಪದವಿ ಪೂರ್ವ ಕಾಲೇಜಿನಲ್ಲಿ 1.20 ಕೋಟಿ ವೆಚ್ಚದಲ್ಲಿ ನೂತನ ನಿರ್ಮಾಣಗೊಂಡ ಆರು ತರಗತಿ ಕೋಣೆಗಳ ಸುಸಜ್ಜಿತ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರ್ಕಾರ ಪ್ರಸ್ತುತ ಶೈಕ್ಷಣಿಕ ಕ್ಷೇತ್ರದಲ್ಲಿ ಕಟ್ಟ ಕಡೆಯ ಮಗುವಿಗೂ ಗುಣಾತ್ಮಕ ಶಿಕ್ಷಣ ದೊರೆಯ ಬೇಕೇಂಬ ನೆಲೆಯಲ್ಲಿ ಇಲಾಖೆಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಸ್ಪಂದಿಸುತ್ತಿದೆ. ಕೋವಿಡ್ ನಂತರ ಹಣಕಾಸಿನ ಸ್ಥಿತಿ ಸ್ವಲ್ಪಮಟ್ಟಿನ ಸುಧಾರಣೆ ಇರುವುದರಿಂದ ಸರ್ಕಾರ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲಾಗುತ್ತಿದೆ ಎಂದರು. ಉತ್ತಮ ಶಿಕ್ಷಣ ಪಡೆದ ವ್ಯಕ್ತಿ ತನ್ನ ಬಗ್ಗೆ ಮಾತ್ರ ಯೋಚಿಸುವುದನ್ನು ಕೆಲವು ಕಡೆಗಳಲ್ಲಿ ಕಾಣಬಹುದಾಗಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವ್ಯಕ್ತಿಗಿಂತ ಸಂಘಟನೆ ದೊಡ್ಡದು ಎಂಬ ಸಿದ್ಧಾಂತ ಹೊಂದಿದ ಭಾರತೀಯ ಜನತಾ ಪಕ್ಷ, ಸಂಘಟನೆಯ ಉದ್ದೇಶವಿರಿಸಿಕೊಂಡು ಪರಿಶುದ್ಧ ರಾಜಕೀಯದ ಮೂಲಕ ಸಮಾಜದ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಸಂಘಟನೆ ಬಲಿಷ್ಠವಾದರೆ ಇತಿಹಾಸ ಬದಲಿಸಲು ಸಾಧ್ಯ ಎಂಬ ಕಾರಣಕ್ಕೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಎಲ್ಲ ಸೌಕರ‍್ಯಗಳನ್ನು ತಲುಪಿಸುವ ಜವಾಬ್ದಾರಿ ಸಂಘಟನೆಯದ್ದಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದರು. ಉಪ್ಪುಂದ ಮಾತೃಶ್ರಿ ಸಭಾಭವನದಲ್ಲಿ ಬುಧವಾರ ಬಿಜೆಪಿ ಬಂದೂರು ಮಂಡಲದ ವತಿಯಿಂದ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ನರೇಂದ್ರ ಮೋದಿ ಅವರು ಶ್ರೇಷ್ಠ ನಾಯಕರಾಗಿದ್ದು, ಅವರ ಜನ್ಮದಿನದ ಅಂಗವಾಗಿ ದೇಶಾದ್ಯಂತ ಒಂದು ವಾರಗಳ ಕಾಲ ಪಂಡಿತ ದೀನ್‌ದಯಾಳ್ ಅವರ ’ಅಂತ್ಯೋದಯವೇ ನಮ್ಮೆಲ್ಲರ ಜೀವನದ ಪರಮಗುರಿ’ ಎನ್ನುವ ಮಾತಿನಂತೆ ಸಂಘಟನೆಯು ಸಮಾಜಮುಖಿ ಕಾರ್ಯ ಚಟುವಟಿಕೆಗಳನ್ನು ಆಯೋಜಿಸುತ್ತಿದೆ. ಈ ಧ್ಯೇಯವನ್ನಾಧರಿಸಿ ಬಂದೂರು ಮಂಡಲದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಮರ್ಪಣಾ ಭಾವದಿಂದ ವಿವಿಧ ಸೇವಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಮಹಾಲಯ ಅಮಾವಾಸ್ಯೆಯ ಪರ್ವದಿನವಾದ ಬುಧವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕುಟುಂಬ ಸಮೇತ ಆಗಮಿಸಿ ದೇವಿಗೆ ತುಲಾಭಾರ ಸೇವೆ ಸಲ್ಲಿಸಿದರು. ತುಲಾಭಾರದಲ್ಲಿ ತೂಗಿದ ತಮ್ಮ ತೂಕದ ಜೇನನ್ನು ದೇವಿಗೆ ಅರ್ಪಿಸಿದರು. ದೇವಾಲಯದ ಮುಂದೆ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಕಾರ್ಯದರ್ಶಿ ಶರತ್‌ಕುಮಾರ ಶೆಟ್ಟಿ, ಬೈಂದೂರು ವಲಯಾಧ್ಯಕ್ಷ ನೆಲ್ಯಾಡಿ ದೀಪಕ್‌ಕುಮಾರ ಶೆಟ್ಟಿ ಮತ್ತು ಕಾರ್ಯಕರ್ತರ ಜತೆ ಸೇರಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ನಿಮಿತ್ತ ಅವರಿಗೆ ಮತ್ತು ದೇಶಕ್ಕೆ ಒಳಿತಾಗಲೆಂದು ದೇವಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ನಿವೃತ್ತ ಯೋಧ ಯಳಜಿತ ಗಣಪತಿ ಗೌಡ ಅವರನ್ನು ಗೌರವಿಸಿದರು. ಯುವ ಮೋರ್ಚಾ ಹಮ್ಮಿಕೊಂಡಿದ್ದ ಅಗ್ನಿತೀರ್ಥ ನದಿಯ ಸ್ವಚ್ಛತಾ ಅಭಿಯಾನಕ್ಕ ಚಾಲನೆ ನೀಡಿದರು. ದೇವಾಲಯದ ಮೂರ್ತಿ ಕಾಳಿದಾಸ ಭಟ್ಟ ಆಶೀರ್ವಚನಗೈದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಇಲ್ಲಿನ ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದಲ್ಲಿ 32ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಾರಂಭ ಅ.12ರಿಂದ ಅ.14ರ ತನಕ ನಡೆಯಲಿದೆ. ಅ.12ರ ಮಂಗಳವಾರ ಬೆಳಿಗ್ಗೆ ಶ್ರೀ ಶಾರದಾಂಬೆಯ ಮೂರ್ತಿ ಪ್ರತಿಷ್ಠಾಪನೆ, ಮಧ್ಯಾಹ್ನ ದುರ್ಗಾ ಹೋಮ, ಪೂಜೆ, ರಾತ್ರಿ ಶ್ರೀ ತಿರುಮಲ ವೆಂಕಟರಮಣ ಭಜನಾ ಮಂಡಳಿ ನೇತೃತ್ವದಲ್ಲಿ ಆಹ್ವಾನಿತ ಭಜನಾ ತಂಡಗಳಿಂದ ಅಹೋರಾತ್ರಿ ಭಜನಾ ಕಾರ್ಯಕ್ರಮ ನಡೆಯಲಿದ. ಅ.13ರ ಬುಧವಾರ ವಿವಿಧ ಪೂಜಾ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ರಾತ್ರಿ 8.30ಕ್ಕೆ ಶ್ರೀ ಲಕ್ಷ್ಮೀ ವೆಂಕಟರಮಣ ಮಹಿಳಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಅ.14ರ ಗುರುವಾರ ಮಧ್ಯಾಹ್ನ 12ರಿಂದ ಮಹಾ ಅನ್ನಸಂತರ್ಪಣೆ ಹಾಗೂ ಸಂಜೆ ಶ್ರೀ ಶಾರದಾಂಬೆ ವಿಗ್ರಹ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ ಎಂದು ಅಧ್ಯಕ್ಷ ಮಂಜುನಾಥ ಆಚಾರ್ಯ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರ್ಕಾರ ಯಾವುದೇ ಕೆಲಸಕ್ಕೆ ನಿರ್ಬಂಧನೆ ಮಾಡಿದ್ದು, ನಿರ್ಬಂಧನೆ ಮೀರಿ ಕೆಲವು ಅಧಿಕಾರಿಗಳು ಕೆಲವೊಂದು ರಾಜಕೀಯ ಒತ್ತಡಕ್ಕೆ ಮಣಿದು ಹಣವನ್ನು ತೆಗೆದುಕೊಳ್ಳುತ್ತಿರುವುದಲ್ಲದೆ ಸಾರ್ವಜನಿಕರಿಗೆ ಕೆಲಸವನ್ನು ಮಾಡಿಕೊಡಲು ಕಚೇರಿಗೆ ಅಲೆದಾಡಿಸುತ್ತಾರೆ. ಈ ವ್ಯವಸ್ಥೆಯನ್ನು ಮಹಿಳೆಯರು ತಮ್ಮ ಒಕ್ಕೂಟದ ಮೂಲಕ ಖಂಡಿಸಬೇಕು. ಎಲ್ಲರೂ ಕಾನೂನನ್ನು ಗೌರವಿಸಬೇಕಿದೆ. ಸರಕಾರದ ಸೌಲಭ್ಯ ಪಡೆಯಲು ಮೊಬೈಲ್ ಮೂಲಕ ಅಂತರ್ಜಾಲದಲ್ಲಿರುವ ಎಲ್ಲ ಮಾಹಿತಿಯನ್ನು ಪಡೆದುಕೊಳ್ಳಬೇಕು. ಅವರವರ ಕೆಲಸವನ್ನು ಅವರೇ ಮಾಡಿಕೊಂಡರೆ ದಲ್ಲಾಳಿಗಳ ಕಾಟವನ್ನು ತಪ್ಪಿಸಿಬಹುದು ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸತೀಶ್ ಬಿ.ಎಸ್. ಹೇಳಿದರು. ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ರೋಟರಿ ಕ್ಲಬ್ ಗಂಗೊಳ್ಳಿ, ಯುವ ಸ್ಪಂದನ ಕೇಂದ್ರ ಉಡುಪಿ, ಸಂಗಮ ಸಂಜೀವಿನಿ ಸ್ವಸಹಾಯ ಸಂಘ ಒಕ್ಕೂಟ, ನಾವುಂದ ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ನಾವುಂದಲ್ಲಿ ನಡೆದ ಭ್ರಷ್ಟಾಚಾರ ನಿರ್ಮೂಲನ ಜಾಗೃತಿ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್…

Read More