Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ ದಾಖಲಿಸುವ ಮೂಲಕ ಉತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಹಾಜರಾದ ಒಟ್ಟು 48 ವಿದ್ಯಾರ್ಥಿಗಳ ಪೈಕಿ 16 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಭಾರ್ಗವ ಮಧ್ಯಸ್ಥ 617 ಅಂಕ ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮಾನ್ಯತಾ ವಿ.ಶೇಟ್ (608), ವೈಷ್ಣವಿ ಕೋಟೆಗಾರ್ (607), ಪ್ರಿಯಾಂಕ ಕೆ.ಬೈಂದೂರು (606), ಕೀರ್ತಿ ಭಟ್ (604), ಅಮೀಕ್ಷಾ ಡಿ.ನಾಯ್ಕ್ (603) ಮತ್ತು ಬಿ.ಸಾಹೀಲ್ (602) ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಲ್ಯಾಕ್ ಫಂಗಸ್‌ಗೆ ಔಷಧಿಯನ್ನು ಸಂಶೋಧಿಸಿದ ಗಂಗೊಳ್ಳಿ ಮೂಲದ ಬಿ.ಶ್ರೀಕಾಂತ ಪೈ ಮುಂಬೈ ಅವರನ್ನು ಕುಂದಾಪುರ ತಾಲೂಕಿನ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಪರವಾಗಿ ಗೌರವಿಸಿ ಅಭಿನಂದಿಸಲಾಯಿತು. ದೇವಸ್ಥಾನಕ್ಕೆ ಭೇಟಿ ನೀಡಿದ ಬಿ.ಶ್ರೀಕಾಂತ ಪೈ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕಾಶೀನಾಥ ಪೈ ಹಾಗೂ ಕೆ.ಗಣೇಶ ಪ್ರಭು ಅವರಿಗೆ ಶ್ರೀದೇವರ ಪ್ರಸಾದ ನೀಡಿ ಸನ್ಮಾನಿಸಿ ಗೌರವಿಸಿದರು. ಬಿ. ಗೋವಿಂದ್ರಾಯ ಪೈ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಎಸ್.ದಿನಕರ ಶೆಣೈ, ಎಸ್.ಗೋಪಾಲಕೃಷ್ಣ ಪೈ, ಎಸ್. ಗೋಪಾಲಕೃಷ್ಣ ಪೈ, ಎಂ.ವಿಶ್ವನಾಥ ಪೈ, ಎಸ್.ಪ್ರಭಾಕರ ಪೈ, ಎಂ.ಅನಂತ ಪೈ, ಬಿ.ಗಣೇಶ ಪೈ, ಯು.ಕಮಲಾಕ್ಷ ಪೈ, ಅರುಣ್ ಶೆಣೈ, ಪತ್ರಕರ್ತ ಬಿ. ರಾಘವೇಂದ್ರ ಪೈ, ಬಿ. ರಾಜೇಶ ಪೈ, ದೇವಸ್ಥಾನದ ಅರ್ಚಕರು ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ರಾಜ್ಯದ ಕ್ರೀಡಾ ಪೋಷಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಕಳೆದ ಮೂರು ವರ್ಷಗಳಿಂದ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈದ ಕ್ರೀಡಾ ಪೋಷಕರು ಆಗಸ್ಟ್ 25 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 0820-2521324, 94808-86467 ನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2020ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ 2020ನೇ ಸಾಲಿನ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಕ್ರೀಡಾ ಪಟುಗಳು ಅರ್ಜಿ ನಮೂನೆಯನ್ನು ಆಗಸ್ಟ್ 25 ರೊಳಗೆ ಸಲ್ಲಿಸುವಂತೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುಮಾರು ಹದಿನೈದು ವರ್ಷಗಳಿಂದ ಮುಚ್ಚಿರುವ ಹಾಗೂ ನೈಪಥ್ಯಕ್ಕೆ ಸರಿಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಉಳಿಸಿಕೊಳ್ಳುವ ಹೋರಾಟ ಸಾಕಷ್ಟು ಬಾರಿ ನಡೆದಿದ್ದು ಇದೀಗ ಹೊಸ ಆಡಳಿತದ ಮಂಡಳಿ ಈ ನಿಟ್ಟಿನಲ್ಲಿ ಒಂದಷ್ಟು ಪೂರಕ ಚಟುವಟಿಕೆಯಲ್ಲಿ ತೊಡಗಿದೆ. ಹೀಗಾಗಿ ಸಕ್ಕರೆ ಕಾರ್ಖಾನೆಯ ಅಳಿವು-ಉಳಿವಿನ ಸಾಧ್ಯತೆಗಳ ಕುರಿತು ಚರ್ಚೆ ನಡೆಸುವ ಸಲುವಾಗಿ ಬ್ರಹ್ಮಾವರ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಮಾಧ್ಯಮ ಸಂವಾದ ಕಾರ್ಯಕ್ರಮ ಬ್ರಹ್ಮಾವರದ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ಜರಗಿತು. ಕಾರ್ಖಾನೆ ಆಡಳಿತ ಮಂಡಳಿಯ ಅಧ್ಯಕ್ಷ ಬಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ 152 ಸಂಸ್ಥೆಗಳು ಎಥೆನಾಲ್ ಘಟಕ ಸ್ಥಾಪನೆಗೆ ಹೆಸರು ನೊಂದಾಯಿಸಿಕೊಂಡಿದ್ದು ಇದರಲ್ಲಿ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯೂ ಒಂದು. ಎಥೆನಾಲ್ ಘಟಕ ಸ್ಥಾಪನೆಗೆ ಸರಕಾರದಿಂದ ದೊಡ್ಡ ಮಟ್ಟದ ಸಹಕಾರ ದೊರೆಯುತ್ತದೆ ಹಾಗೂ ಅರ್ಥಿಕ ಸಂಸ್ಥೆಗಳು ನೆರವು ನೀಡಬೇಕೆಂಬ ಸೂಚನೆ ಇದೆ. ಘಟಕಕ್ಕೆ ಅಗತ್ಯವಿರುವ ಜಾಗ ಹಾಗೂ ಮೂಲಸೌಕರ‍್ಯಗಳು ನಮ್ಮಲ್ಲಿ ಇದೆ. ಹೀಗಾಗಿ ಸಕ್ಕರೆ ಉತ್ಪಾದನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಶ್ರೀ ಇಂದುಧರ ದೇವಸ್ಥಾನದ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸಂದೇಶ ಜಿ.ಟಿ. ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಶಿಧರ ಜಿ.ಟಿ., ಕಾರ್ಯದರ್ಶಿಯಾಗಿ ಸುದೀಪ ಜಿ.ಎನ್., ಜತೆ ಕಾರ್ಯದರ್ಶಿಯಾಗಿ ಸಂದೇಶ ಎಸ್.ಎಸ್., ಖಜಾಂಚಿಯಾಗಿ ರಾಘವೇಂದ್ರ ಜಿ.ಟಿ., ಕಾರ್ಯಕಾರಿ ಸಮಿತಿ ಸದಸ್ಯರಾಗಿ ಚಂದ್ರ ಜಿ.ಬಿ., ಶ್ರೀನಿವಾಸ ಬಿ., ಮಿಥುನ್, ಚೆನ್ನ ಜಿ.ಟಿ., ಜಗದೀಶ ಜಿ.ಟಿ., ಚೇತನ್, ಮಹೇಶ್, ಸುಂದರ ಬಿ., ಶಿವ ಜಿ.ಟಿ., ಅಣ್ಣಯ್ಯ ಎಂ.ಜಿ., ನರಸಿಂಹ ಎಂ.ಜಿ. ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಟೀಮ್ ಕುಂದಾಪುರಿಯನ್ಸ್ ತಂಡದಿಂದ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕುಂದಾಪ್ರ ಕನ್ನಡ ದಿನಾಚರಣೆಯಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕುಂದಾಪುರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪರಿಶ್ರಮದಿಂದಲೇ ಬದುಕು ಕಟ್ಟಿಕೊಂಡ ಉದ್ಯಮಿ ಗೋವಿಂದ ಬಾಬು ಪೂಜಾರಿ ಶೆಫ್ಟಾಕ್ ಪುಡ್ & ಹಾಸ್ಪಿಟಾಲಿಟಿ ಸಂಸ್ಥೆಯಿಂದ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಕರೋನಾ ಸಂದರ್ಭದಲ್ಲಿ ಸಾವಿರಾರು ಬಡ ಕುಟುಂಬಗಳಿಗೆಪುಡ್ ಕಿಟ್ ವಿತರಿಸಿದ್ದಾರೆ. ಹೂಟ್ಟೂರಿನಲ್ಲಿ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಸೂರಿಲ್ಲದವರಿಗೆ ಮನೆ ನಿರ್ಮಿಸಿಕೊಟ್ಟು ಬಡಕುಟುಂಬಗಳಿಗೆ ನೆರಳಾಗಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಕುಡಿಯುವ ನೀರಿನ ದಾಹ ತೀರಿಸಿದ್ದು ಸೇರಿದಂತೆ ಹತ್ತಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರಶಸ್ತಿ ಪ್ರದಾನದ ವೇಳೆ ಗಣ್ಯರು, ಟೀಮ್ ಕುಂದಾಪುರಿಯನ್ಸ್ ತಂಡದ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಡುಕೇರಿ ಒಂಭತ್ತು ದಂಡಿಗೆ ಶ್ರೀ ಚಿಕ್ಕಮ್ಮದೇವಿ ದೇವಸ್ಥಾನದ ಮಹಿಳಾ ಮಂಡಳಿಯ 2021-22ನೇ ನೂತನ ಅಧ್ಯಕ್ಷೆಯಾಗಿ ಸುನಂದ ಸುರೇಶ್ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷೆಯಾಗಿ ಸೆಲ್ವಿ, ಕಾರ್ಯದರ್ಶಿಯಾಗಿ ನೂತನ ನಾಗರಾಜ್, ಖಜಾಂಚಿಯಾಗಿ ಗಾಯತ್ರಿ ಪ್ರಶಾಂತ್ ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ರಾಜೇಶ್ವರಿ, ಸುಜಾತ, ವಿಜಯ, ಶುಭಾ, ಸುನೀತ, ಮಂಜುಳಾ, ಅಶ್ವಿನಿ, ಜ್ಯೋತಿ, ವಸಂತಿ, ಕಾವೇರಿ, ಕನಕಮಾಲಿನಿ, ಜ್ಯೋತಿ ಕೆ., ನಾಗರತ್ನ, ರಮಾ ಬೋಳಾರ್, ನಿರ್ಮಲಾ, ಪೂರ್ಣಿಮಾ, ಗೀತಾ, ವೀಣಾ, ಶ್ಯಾಮಲ, ಪದ್ಮಕ್ಕ, ಲಲಿತಾ, ಗೀತಾ, ಪ್ರಮೀಳಾ, ಪ್ರಭಾವತಿ, ಮಾಲಿನಿ, ಸವಿತಾ, ಶಾಲಿನಿ, ಅನ್ನಪೂರ್ಣ, ಚಂದ್ರಕಲಾ, ವಿದ್ಯಾ, ಗೀತಾ, ರಾಜೀವಿ, ಪದ್ಮ, ಗೀತಾ, ಪ್ರೇಮಾ, ಜಮುನ, ಕಲ್ಯಾಣಿ, ಜ್ಯೋತಿ, ಪರಿಮಳ, ವಸಂತಿ, ಶಾಂತಿ, ವಿಶಾಲಾಕ್ಷಿ, ಶ್ಯಾಮಲ, ವಾರೀಜಾ, ಲಕ್ಷ್ಮೀ, ಗೌರಿ, ರಮಾ, ಚೇತನಾ, ಕಾಂಚನ, ಸುನೀತಾ, ಚಂದ್ರಕಲಾ, ಕಲ್ಯಾಣಿ, ಮಂಜುಳಾ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಆಯೋಜಿಸಿರುವ ಡಾ. ಹೆಚ್. ಶಾಂತರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅ.13ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಆರ್.ಎನ್ ಶೆಟ್ಟಿ ಹಾಲ್‌ನಲ್ಲಿ ನಡೆಯಲಿದೆ. ಈ ವರ್ಷದ ಡಾ. ಎಚ್. ಶಾಂತರಾಮ್ ಸಾಹಿತ್ಯ ಪ್ರಶಸ್ತಿಯು ಅನುಪಮಾ ಪ್ರಸಾದ್ ಅವರ ಪಕ್ಕಿ ಹಳ್ಳದ ಹಾದಿಗುಂಟ ಕಾದಂಬರಿಗೆ ನೀಡಲಾಗುತ್ತಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥರಾದ ಕೆ. ಶಾಂತರಾಮ ಪ್ರಭು ವಹಿಸಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ದ್ರವ್ಯಗುಣ ವಿಜ್ಞಾನ ಸ್ನಾತಕೋತ್ತರ ವಿಭಾಗದ ವತಿಯಿಂದ ಆಟಿ ಅಮವಾಸ್ಯೆಯ ಪಾರಂಪರಿಕ ರೋಗ ನಿರೋಧಕ ಔಷಧ ಆಟಿ ಕಷಾಯ ವಿತರಣಾ ಕಾರ್ಯಕ್ರಮ ನಡೆಯಿತು. ಮೂಡುಬಿದಿರೆಯ ಶ್ರೀರಾಮ್ ಮೆಡಿಕಲ್ಸ್‌ನ ಮಾಲಕ ನವೀನ್ ಟಿ. ಎಸ್ ದೀಪ ಬೆಳಗಿಸಿ ಕಷಾಯ ಕುಡಿಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಸ್ಪತ್ರೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಸುಮಾರು 3,000 ಜನರಿಗೆ ಕಷಾಯ ತಯಾರಿಸಿ ವಿತರಿಸಲಾಯಿತು. ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಸಜಿತ್ ಎಂ., ದ್ರವ್ಯಗುಣ ವಿಜ್ಞಾನ ಮುಖ್ಯಸ್ಥ ಡಾ. ಸುಬ್ರಹ್ಮಣ್ಯ ಪದ್ಯಾಣ, ದ್ರವ್ಯಗುಣ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು, ವೈದ್ಯರು, ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Read More

ಕುದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೆರ್ಗಾಲ್ ಗ್ರಾಮದ ಮಟ್ನಕಟ್ಟೆಯಲ್ಲಿ ದೇವಾಲಯದ ವರಾಂಡ ಹಾಗೂ ಮುಖ್ಯ ರಸ್ತೆಯನ್ನು ಸ್ವಚ್ಛಗೊಳಿಸುವ ಮೂಲಕ ಪರಿಸರ ಸ್ನೇಹಿ ಮಟ್ನಕಟ್ಟೆ ವತಿಯಿಂದ ಹಮ್ಮಿಕೊಂಡ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಊರಿನ ಸಾರ್ವಜನಿಕರು ಪಾಲ್ಗೊಂಡಿದ್ದರು.

Read More