Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ಕ್ಷೇತ್ರದಿಂದ ಬಡಗುತಿಟ್ಟಿನ ನೂತನ ಮೇಳ ತಿರುಗಾಟಕ್ಕೆ ಸಿದ್ಧವಾಗಿದೆ. ಶ್ರೀ ಮಹಾಸತಿ ಅಮ್ಮನವರ ಕೃಪಾಪೋಷಿತ ಯಕ್ಷಗಾನ ಮಂಡಳಿ ನ.26ರ ಗುರುವಾರದಿಂದ ತಿರುಗಾಟ ಆರಂಭಿಸಲಿದ್ದು, ಪ್ರಥಮ ಶ್ರೀ ದೇವರ ಸೇವೆಯಾಟ ಕ್ಷೇತ್ರದ ಆವರಣದಲ್ಲಿ ಜರುಗಲಿದೆ. ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ನೂತನವಾಗಿ ತಿರುಗಾಟ ಆರಂಭಿಸಲಿರುವ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ಕೃಪಾಪೋಷಿತ ಯಕ್ಷಗಾನ ಮಂಡಳಿಯನ್ನು ಪ್ರೋತ್ಸಾಹಿಸುವಂತೆ ಶ್ರೀ ದೇಗುಲದ ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷ ಎಸ್. ರಾಜು ಪೂಜಾರಿ, ಅಧ್ಯಕ್ಷ ನಾಗರಾಜ ಶೆಟ್ಟಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕರಾದ ಕೃಷ್ಣಮೂರ್ತಿ ನಾವಡ, ಪಾತ್ರಿಗಳಾದ ಅಣ್ಣಪ್ಪ ಪೂಜಾರಿ, ಮೇಳದ ವ್ಯವಸ್ಥಾಪಕ ಗುಂಡುಕಾಂಚನ್, ಸಂಚಾಲಕ ಕಿರಣ್ ಆಚಾರ್ಯ ಹಾಗೂ ಸಮಿತಿ ಸದಸ್ಯರು ಕೋರಿಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿರಿಯಾರ ಗ್ರಾಮ ಪಂಚಾಯತ್‌ನಲ್ಲಿ ನಡೆದ ಪ್ರಜಾ ಸೇವಾ ಆಂದೋಲನದ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿ, ಪ್ರಜಾ ಸೇವಾ ಕಾರ್ಯಕ್ರಮ ಆರಂಭಗೊಂಡು ಎರಡು ತಿಂಗಳು ಕಳೆದರೂ, ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನರ ಯಾವುದೇ ಸಮಸ್ಯೆಗಳು ಬಗೆಹರಿದಿಲ್ಲ ಎಂದು ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾರ್ಯಕ್ರಮ ಕೇವಲ ಘೋಷಣೆಗೆ ಸೀಮಿತವಾಗಬಾರದು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನರು ಎದುರಿಸುತ್ತಿರುವ ಕುಡಿಯುವ ನೀರು, ರಸ್ತೆ, ವಿದ್ಯುತ್, ಪಡಿತರ, ಪಿಂಚಣಿ, ಆಸ್ತಿ ದಾಖಲೆ ಸೇರಿದಂತೆ ಮೂಲಭೂತ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಸಿಗಬೇಕು. ಆದರೆ ಇದುವರೆಗೆ ಯಾವುದೇ ಗ್ರಾಮ ಪಂಚಾಯತ್‌ನಲ್ಲಿಯೂ ಗಮನಾರ್ಹ ಪ್ರಗತಿ ಕಂಡುಬಂದಿಲ್ಲ ಎಂದು ಹೇಳಿದರು. ಜನರಿಗೆ ಸ್ಪಂದಿಸದಿದ್ದರೆ ಇಂತಹ ಕಾರ್ಯಕ್ರಮಗಳಿಗೆ ಅರ್ಥವಿಲ್ಲ. ಪ್ರತಿ ಗ್ರಾಮ ಪಂಚಾಯತ್‌ನಲ್ಲಿ ಬಗೆಹರಿದ ಸಮಸ್ಯೆಗಳ ಕುರಿತು ಸ್ಪಷ್ಟ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಧಾರವಾಡದ  ಜೆಎಸ್‌ಎಸ್ ವಿದ್ಯಾಸಂಸ್ಥೆ ವಿದ್ಯಾಗಿರಿಯಲ್ಲಿ  ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ನಡೆದ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಕೋಟದ ವಿವೇಕ ಪ.ಪೂ. ಕಾಲೇಜಿನ ವಿದ್ಯಾರ್ಥಿ ದೃಶ್ಯ ಆರ್., 97 ಕೆ.ಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದರು. ವಿದ್ಯಾರ್ಥಿಯ ಸಾಧನೆಗೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲ ಉಪನ್ಯಾಸಕ ವೃಂದ ಅಭಿನಂದಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ,(ಪದವಿಪೂರ್ವ)ದ.ಕ. ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ  ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಒಟ್ಟು 25 ಚಿನ್ನ, 16 ಬೆಳ್ಳಿ ಮತ್ತು 18 ಕಂಚಿನ ಪದಕಗಳೊಂದಿಗೆ 59 ಪದಕಗಳನ್ನು ಪಡೆದು ಬಾಲಕರ ವಿಭಾಗದಲ್ಲಿ 104 ಅಂಕ ಮತ್ತು ಬಾಲಕಿಯರ ವಿಭಾಗದಲ್ಲಿ 85 ಅಂಕ ಒಟ್ಟು 189 ಅಂಕದೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.   ಸಮಾರೋಪ ಸಮಾರಂಭದಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್, ಆಳ್ವಾಸ್ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಮಧು ಜಿ ಆರ್, ಬೆಳ್ತಂಗಡಿ ಸರಕಾರಿ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಧಾಕೃಷ್ಣ, ಉಪನ್ಯಾಸಕರಾದ ಕುಮಾರ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನವೀನ್ ರೈ ಹಾಗೂ ಹರ್ಷಿತಾ ಶೆಟ್ಟಿ ಉಪಸ್ಥಿತರಿದ್ದರು. ಶಾಂತರಾಮ ರೈ ಕಾರ್ಯಕ್ರಮವನ್ನು ನಿರೂಪಿಸಿದರು. 

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ಸಂಘಟನೆ ಪ್ರತಿ ಭಾನುವಾರ ಪರಿಸರಕ್ಕಾಗಿ ಸಮರ್ಪಿಸಿಕೊಂಡ ರೀತಿ ಅತ್ಯಂತ ಪ್ರಶಂಸನೀಯ ಎಂದು ಶ್ರೀ ಕೃಷ್ಣಪ್ರಸಾದ್ ಗ್ರೂಪ್ಸ್ ಮುಖ್ಯಸ್ಥ ಸಂಪತ್ ಕುಮಾರ್ ಶೆಟ್ಟಿ ಹೇಳಿದರು. ಅವರು ಭಾನುವಾರ ಪಂಚವರ್ಣ ಯುವಕ ಮಂಡಲ ಮತ್ತು ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಕೋಟತಟ್ಟು ಗ್ರಾಮಪಂಚಾಯತ್, ಸಿಂಧೂರ ಸಂಜೀವಿನಿ ಒಕ್ಕೂಟ ಇವರುಗಳ ಸಹಯೋಗದೊಂದಿಗೆ ಕೋಟತಟ್ಟು ಪಡುಕರೆ ಬೀಚ್ ನಲ್ಲಿ 325ನೇ ವಾರದ ಪರಿಸರಸ್ನೇಹಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಭಾನುವಾರ ಬಂತ್ತೆಂದರೆ ನಾವುಗಳು ಬಿಡುವು ಮಾಡಿಕೊಳ್ಳವ ವಾರವಾಗಿ ಪರಿಣಮಿಸಿದರೆ ಪಂಚವರ್ಣ ಸಂಘಟನೆ ನಿತ್ಯನಿರಂತರವಾಗಿ‌ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜಕ್ಕೆ ಮಾದರಿ ಸಂಘಟನೆಯಾಗಿ ರೂಪುಗೊಂಡಿದೆ ಎಂದರು. ಕೆ.ಎಂ‌.ಎಫ್ ನಿರ್ದೇಶಕ ಶಿವಮೂರ್ತಿ ಉಪಾಧ್ಯಾ ಮಾತನಾಡಿ, ಮುಂದಿನ ತಲೆಮಾರಿಗಾಗಿ ಪ್ರಕೃತಿಯನ್ನು ಉಳಿಸಿ ಬೆಳೆಸುವ ಕಾಯಕ ನಮ್ಮಿಂದಾಗಲಿ ಪ್ರಕೃತಿ ಮಲಿನಗೊಳಿಸುವ ಕಾರ್ಯ ಇನ್ನಾದರೂ ನಿಲ್ಲಲ್ಲಿ ಎಂದರು. ಈ ಸಂದರ್ಭದಲ್ಲಿ ಸಮುದ್ರತಟದಿಂದ ಸುಮಾರು ಪ್ಲಾಸ್ಟಿಕ್ ತ್ಯಾಜ್ಯ,ಮದ್ಯದ ಬಾಟಲಿ ಸೇರಿದಂತೆ ಅನೇಕ ರೀತಿಯ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಗರದ ಶ್ರೀ ಸಾಯಿ ಸೆಂಟರ್‌ನ ಮೊದಲ ಮಹಡಿಯಲ್ಲಿ ‘ರೋಷನ್ ಹೋಮಿಯೋಪತಿ’ ನೂತನ ಕ್ಲಿನಿಕ್‌ ಉದ್ಘಾಟನೆ ಹಾಗೂ ಆಶೀರ್ವಚನ ಸಮಾರಂಭ ಭಾನುವಾರ ಜರುಗಿತು. ಡಾ. ರೋಷನ್ ಪಾಯಸ್ ಅವರ ತಾಯಿ ಐ.ವಿ ಪಾಯಸ್ ಅವರು ನೂತನ ಕ್ಲಿನಿಕ್‌ನ್ನು ಉದ್ಘಾಟಿಸಿದರು. ಕುಂದಾಪುರದ ಸಮೂಹ ಚರ್ಚುಗಳ ಧರ್ಮಗುರು ​ಫಾ. ಪೌಲ್ ರೇಗೊ ಅವರು ಆಶೀರ್ವಚನ ನೀಡಿ, “ಮನುಷ್ಯನ ಆರೋಗ್ಯದ ದೃಷ್ಟಿಯಿಂದ ಹೋಮಿಯೋಪತಿ ವೈದ್ಯಕೀಯ ಪದ್ಧತಿ ಅತೀ ಶ್ರೇಷ್ಠವಾದುದು. ಹೋಮಿಯೋಪತಿ ನಿಧಾನವಾದರೂ ಅತೀ ಪರಿಣಾಮಕಾರಿ ವೈದ್ಯಕೀಯ ಪದ್ಧತಿಯಾಗಿದ್ದು, ಡಾ. ನೇಹಾ ಪಾಯಸ್ ಮೂಲಕ ಕುಂದಾಪುರದ ಜನತೆಗೆ ಉತ್ತಮ ಸೇವೆ ದೊರೆಯಲಿದೆ. ಡಾ. ರೋಷನ್ ಕುಟುಂಬ ಹೋಮಿಯೋಪತಿ ಮೂಲಕ ಜನರ ಆರೋಗ್ಯ ಸುಧಾರಿಸುವಲ್ಲಿ ಯಶಸ್ವಿಯಾಗಲಿ” ಎಂದು ಶುಭ ಹಾರೈಸಿದರು. ಈ ವೇಳೆ ಕುಂದಾಪುರ ಖ್ಯಾತ ವೈದ್ಯ ಡಾ. ಉತ್ತಮ್ ಕುಮಾರ್ ಶೆಟ್ಟಿ ಮಾತನಾಡಿ, ಹೋಮಿಯೋಪತಿ ವೈದ್ಯಕೀಯ ಪದ್ಧತಿ ಬೆಳೆದು ಬಂದ ದಾರಿ, ಕುಂದಾಪುರದಲ್ಲಿ ಆರಂಭದ ದಿನಗಳ ಅನುಭವಗಳು ಹಾಗೂ ವೈದ್ಯ ಮತ್ತು ರೋಗಿಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕ್ರೀಡೆಗಳು ಕೇವಲ ಮನರಂಜನೆಗೆ ಸೀಮಿತವಾಗದೆ, ಶಿಸ್ತು, ಆತ್ಮವಿಶ್ವಾಸ, ಪರಸ್ಪರ ಸಹಕಾರ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಗ್ರಾಮೀಣ ಜನರಲ್ಲಿ ಇಂತಹ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ರೀಡೋತ್ಸವ ಮಹತ್ವದ ವೇದಿಕೆಯಾಗಿದೆ. ಇಂತಹ ಕ್ರೀಡಾಕೂಟಗಳು ಗ್ರಾಮೀಣ ಜನರ ನಡುವೆ ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಬಲಪಡಿಸುವುದರ ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಯೋಜನಾಧಿಕಾರಿ ಸಂಜಯ ನಾಯ್ಕ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತ್ರಾಸಿ ವಲಯ ಇದರ ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಭಾನುವಾರ ಜರಗಿದ ತ್ರಾಸಿ ವಲಯದ ಸ್ವಸಹಾಯ ಸಂಘಗಳ ಒಕ್ಕೂಟಗಳ ಕ್ರೀಡೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಸುಧಾಕರ ಆಚಾರ್ಯ ತ್ರಾಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಮೂಹಿಕ ಶ್ರೀ ಸತ್ಯನಾರಾಯಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಗೆಳೆಯರ ಬಳಗ ಕಾರ್ಕಡ – ಸಾಲಿಗ್ರಾಮ ಇವರ ನೇತೃತ್ವದಲ್ಲಿ  ಹಾಗೂ ಕಾರ್ಕಡ ಗ್ರಾಮಸ್ಥರಿಂದ ಸಂಗ್ರಹಿಸಿದ ಎರಡು ಲೋಡು ಒಣಮೇವುನ್ನು ಆರೂರು ಬೆಳ್ಮಾರಿನಲ್ಲಿರುವ ಪುಣ್ಯಕೋಟಿ ಗೋ ಸೇವಾ ಕೇಂದ್ರಕ್ಕೆ ತೆರಳಿ ಗೋ ಪೂಜೆ ನೆರವೇರಿಸಿ ಗೋಗ್ರಾಸ ನೀಡಿ, ಹಸ್ತಾಂತರಿಸಲಾಯಿತು. ಇದೇ ವೇಳೆ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಗೋಶಾಲೆಗೆ ಒಣ ಮೇವು ನೀಡಲಾಯಿತು. ಕೊಡುಗೆಯನ್ನು ಸ್ವೀಕರಿಸಿ, ಕೃತಜ್ಞತೆ ಸಲ್ಲಿಸಿದ ಗೋಶಾಲೆಯ ನಿರ್ದೇಶಕರಾದ ಶ್ರೀನಿವಾಸ ಇವರು ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳರ ಸಮಾಜ ಸೇವೆ ಹಾಗೂ ಗೆಳೆಯರ ಬಳಗದ ಸದಸ್ಯರಿಗೆ ಗೋವಿನ ಮೇಲಿರುವ ಪ್ರೀತಿ – ಭಕ್ತಿ ಅವರ ಈ ಸೇವೆಗೆ ಸಾಕ್ಷಿ. ಹುಲ್ಲು ನೀಡಿದ ಹಾಗೂ ಈ ಬಗ್ಗೆ ಕಾರ್ಯಾಚರಿಸಿದ ಗೆಳೆಯರ ಬಳಗದ ಎಲ್ಲ ಸದಸ್ಯರಿಗೂ ಗೋಮಾತೆ ಅನುಗ್ರಹಿಸಲಿ ಎಂದು ಹರಸಿದರು. ಈ ಸಂದರ್ಭದಲ್ಲಿ ಗೆಳೆಯರ ಬಳಗದ ಉಪಾಧ್ಯಕ್ಷ ಕೆ. ಶಶಿಧರ ಮಯ್ಯ, ಜತೆ ಕಾರ್ಯದರ್ಶಿ ಕೆ. ಜಗದೀಶ ಆಚಾರ್ಯ, ಕೆ. ಶ್ರೀಪತಿ ಆಚಾರ್ಯ, ಕೆ.ಶೇಖರ, ಕೆ. ಉದಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪುರಸಭೆಯಲ್ಲಿ ಕಳೆದ ಐದು ದಿನಗಳಿಂದ ಕುಡಿಯುವ ನೀರು ಸರಬರಾಜಾಗದೆ ಜನ ತೀವ್ರ ತೊಂದರೆ ಅನುಭವಿಸುತ್ತಿದ್ದರೆ ಜನರ ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕಾದ ಕುಂದಾಪುರ ಪುರಸಭೆ ಮಾತ್ರ ಗಾಡ ನಿದ್ರೆಗೆ ಜಾರಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುರಸಭೆಗಳಲ್ಲಿ ಚುನಾಯಿತ ಜನಪ್ರತಿನಿದಿನಗಳು ಇಲ್ಲದೆ ಇರುವ ಕಾರಣ ಪುರಸಭಾ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ. ಕುಂದಾಪುರ ಪುರಸಭೆಯಲ್ಲಿ ಕಳೆದ ಐದು ದಿನಗಳಿಂದ ಕುಡಿಯುವ ನೀರು ಸರಬರಾಜಾಗದೆ ಜನ ಸಮಸ್ಯೆಗೆ ಸಿಲುಕಿದ್ದರೂ ಕೂಡ ಇದನ್ನು ಪರಿಹರಿಸಬೇಕಾದ ಪುರಸಭೆ ಅಧಿಕಾರಿಗಳು ಬೇರೆ ಬೇರೆ ಸಬೂಬು ಹೇಳಿ ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಬಿಟ್ಟರೆ ಇಲ್ಲಿಯ ತನಕ ಸಮಸ್ಯೆ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಈ ಭಾರಿ ಮಳೆಗಾಲ ಕೈಕೊಟ್ಟ ಕಾರಣ ಹೆಚ್ಚಿನ ಬಾವಿಗಳಲ್ಲಿ ಈಗಾಗಲೇ ನೀರಿನ ಕೊರತೆ ಏರ್ಪಟ್ಟಿದೆ. ಕುಂದಾಪುರ ಪುರಸಭೆಯ ನೀರನ್ನು ನಂಬಿರುವ ಗ್ರಾಮ ಪಂಚಾಯತುಗಳು ಕೂಡ ನೀರಿನ ಸರಬರಾಜು ವ್ಯತ್ಯಯದಿಂದ ಸಮಸ್ಯೆಗೆ ಈಡಾಗಿವೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿಟ್ಟೆ ಎನ್.ಎಮ್.ಎ.ಎಮ್ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಕೆ. ಕೀರ್ತಿ ಶೆಟ್ಟಿ ಅವರು  ಕ್ರೀಡಾಪಟುಗಳಿಂದ ಗೌರವ ವಂದನೆ ಸ್ವೀಕರಿಸಿ, ಕ್ರೀಡಾಜ್ಯೋತಿಯನ್ನು ಬೆಳಗಿಸುತ್ತಾ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವಿರಬೇಕು, ಸೋಲೇ ಗೆಲುವಿನ ಸೋಪಾನ ಎಂಬ ನುಡಿಯಂತೆ ಪ್ರತಿಯೊಬ್ಬರು ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ನುಡಿಯುತ್ತಾ ವಿದ್ಯಾರ್ಥಿಗಳಿಗೆ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರೆರೇಪಿಸಿದರು. ಶ್ರೀ ವೆಂಕಟರಮಣ ಪದವಿಪೂರ್ವಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾರಂಭದಲ್ಲಿ ಶಾಲೆಯ ವಿದ್ಯಾರ್ಥಿಗಳು, ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಭಾಗವಹಿಸಿದ್ದರು.…

Read More