ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ , ಉಡುಪಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ನಡೆಯಿತು. ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಸಮಾಜ ಕಾರ್ಯಕರ್ತೆ ಶೈಲಾ ಶ್ಯಾಮನೂರು ಮಾತನಾಡಿ, ಜೊತೆಗೆ ವಿದ್ಯಾರ್ಥಿಗಳಿಗೆ ಕೋಟ್ಪಾ-2003 ಕಾಯ್ದೆಯ ಕುರಿತು ಮಾಹಿತಿ ನೀಡಿ ತಂಬಾಕು ವರ್ಜನೆಯತ್ತ ವಿದ್ಯಾರ್ಥಿಗಳು ಹೆಜ್ಜೆಯನ್ನಿಡುವುದರ ಮೂಲಕ ತಂಬಾಕು ಮುಕ್ತ ಶೈಕ್ಷಣಿಕ ಆವರಣ ನಿಮ್ಮದಾಗಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳ ಉಪಯೋಗದಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಭಜನೆಯಿಂದ ದೇವರ ಪ್ರೀತಿಗಳಿಸಲು ಸಾಧ್ಯವಿದೆ. ಭಜನೆ ಮೂಲಕ ಭಕ್ತಿ ಶ್ರದ್ಧೆಗೆ ಪ್ರಾಮಾಣಿಕತೆಗೆ ದೇವರು ಒಲಿಯುತ್ತಾನೆ. ಚಿಕ್ಕಂದಿನಿಂದಲೇ ಮಕ್ಕಳಿಗೆ ಧಾರ್ಮಿಕ ಭಾವನೆಗಳನ್ನು ಮೂಡಿಸುವ ಪ್ರಯತ್ನ ಹಿರಿಯರಿಂದ ನಡೆಯಬೇಕು. ಧಾರ್ಮಿಕ ಚಿಂತನೆಗಳಿಂದ ಮನುಷ್ಯ ಸತ್ಪ್ರಜೆಯಾಗಿ ಬೆಳೆಯುತ್ತಾನೆ ಎಂದು ನೇತ್ರಾವತಿ ಶಿರೂರು ಹೇಳಿದರು. ಅವರು ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಬಾಲಕ-ಬಾಲಕಿಯರ ಕುಣಿತ ಭಜನೆ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಗೌರಿ ಜಿ.ಬಿ., ಕುಸುಮ ಜಿ.ಟಿ., ಶಕುಂತಲಾ ಜಿ.ಟಿ., ಕಸ್ತೂರಿ, ಸುಗಂಧಿ ಜಿ.ಎನ್., ಜಯಂತಿ, ವಸಂತಿ ಜಿ.ಎನ್., ಸುಮಿತ್ರಾ ಜಿ., ರುದ್ರಮ್ಮ, ಸರೋಜ, ಗೌರಿ ಬಿ. ಮತ್ತಿತರರು ಉಪಸ್ಥಿತರಿದ್ದರು. ಅಧ್ಯಕ್ಷೆ ಸುಶೀಲಾ ಸ್ವಾಗತಿಸಿದರು. ವಸಂತಿ ಪಿ. ಕಾರ್ಯಕ್ರಮ ನಿರ್ವಹಿಸಿದರು. ನಾಗಿಣಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಹಾಸತಿ ಫ್ರೆಂಡ್ಸ್ ಮಯ್ಯಾಡಿ ಇವರ ಆಶ್ರಯದಲ್ಲಿ 12ನೇ ವರ್ಷದ ಹೊನಲು ಬೆಳಕಿನ ಪುರುಷರ ಕಬ್ಬಡಿ ಪಂದ್ಯಾಟವು ಫೆ. 27ರ ಶನಿವಾರ ರಾತ್ರಿ 8 ಘಂಟೆಗೆ ಮಯ್ಯಾಡಿ ಮಹಾಸತಿ ಅಮ್ಮನವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಈ ಪಂದ್ಯಾಟವು ಪ್ರೋ ಮಾದರಿಯ ಮ್ಯಾಟ್ ಅಂಕಣದಲ್ಲಿ ನಡೆಯಲಿದ್ದು, ಕುಂದಾಪುರ, ಬೈಂದೂರು ಹಾಗೂ ಭಟ್ಕಳ ತಾಲೂಕಿನ ಆಟಗಾರರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ಪ್ರಥಮ ಬಹುಮಾನ 15,555 ದ್ವಿತೀಯ ಬಹುಮಾನ 10,011, ತೃತೀಯ ಬಹುಮಾನ 5555, ಚತುರ್ಥ ಬಹುಮಾನ 3333 ಹಾಗೂ ಶಾಶ್ವತ ಫಲಕಗಳೊಂದಿಗೆ ಉತ್ತಮ ದಾಳಿಗಾರ, ಉತ್ತಮ ಹಿಡಿತಗಾರ ಮತ್ತು ಸವ್ಯಸಾಚಿ ಪ್ರಶಸ್ತಿಯನ್ನು ನೀಡಲಾಗುತ್ತದೆ. ಆಸಕ್ತ ತಂಡಗಳು ಫೆ.22ರ ಒಳಗೆ ತಂಡದ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ 98448270140, 8884146952 ಸಂಪರ್ಕಿಸುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಸಿಎ ಫೌಂಡೇಶನ್, ಸಿಎ ಇಂಟರ್ಮೀಡಿಯೇಟ್ ಹಾಗೂ ಸಿಎ ಫೈನಲ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳು ವಿಶಿಷ್ಟ ಸಾಧನೆ ಮಾಡಿದ್ದಾರೆ. ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಮರ್ಸ್ ಪ್ರೊಫೆಶನಲ್ ವಿಭಾಗದ ಒಲ್ವಿಟಾ ಆನ್ಸಿಲಾ ಡಿಸೋಜ ಅಖಿಲ ಭಾರತ ಮಟ್ಟದ ಟಾಪ್ 50 ಸ್ಥಾನಗಳಲ್ಲಿ 19ನೇ ರ್ಯಾಂಕ್ ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಒಲ್ವಿಟಾ ಆಳ್ವಾಸ್ನ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆಯಡಿ ಪಿಯುಸಿ ಶಿಕ್ಷಣ ಪೂರೈಸಿದ್ದು, ಪ್ರಸ್ತುತ ದ್ವಿತೀಯ ಬಿಕಾಂ ಪದವಿ ಓದುತ್ತಿದ್ದಾರೆ. ಆಳ್ವಾಸ್ನಲ್ಲಿ ಪಿಯುಸಿ ಮಾಡಿರುವ ಈಕೆ, ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದರು. ಗ್ರೂಪ್1 ಮತ್ತು ಗ್ರೂಪ್2 ಎರಡೂ ಪರೀಕ್ಷೆಗಳನ್ನು ಒಂದೇ ಪ್ರಯತ್ನದಲಿ ಉತ್ತೀರ್ಣರಾಗಿದ್ದು,800ರಲ್ಲಿ 655 ಅಂಕಗಳನ್ನು ಪಡೆದಿದ್ದಾರೆ. ಸಿಎ – ಇಂಟರ್ ಇಂಟರ್ಮೀಡಿಯೇಟ್ ಫಲಿತಾಂಶ: ಸಿಎ-ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜು ಗ್ರೂಪ್-1 ಮತ್ತು ಗ್ರೂಪ್-22ವಿಭಾಗದಲ್ಲಿ ಶೇ.23.052 ಫಲಿತಾಂಶವನ್ನು ಪಡೆದುಕೊಂಡಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಪ್ರತಿಷ್ಟಿತ ಕಂಪೆನಿಯಾದ ಸಿನೋಪಿಕ್ ಸಿಸ್ಟಮ್ಸ್ ನ ಮಾನವ ಸಂಪನ್ಮೂಲ ಅಧಿಕಾರಿ ಸೌಜನ್ಯ ಕೆ ಆಗಮಿಸಿದ್ದರು. ‘ಕ್ಯಾಂಪಸ್ ಟು ಕಾರ್ಪೊರೇಟ್ ‘ ಈ ವಿಷಯದ ಬಗ್ಗೆ ತಮ್ಮ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ವಿದ್ಯಾರ್ಥಿಗಳಿಗೆ ಕಂಪೆನಿಯಲ್ಲಿನ ವೃತ್ತಿ ಜೀವನದ ಕುರಿತು ವಿವರಿಸಿ, ಉದ್ಯೋಗ ಸಂದರ್ಶನಕ್ಕೆ ಹೇಗೆ ತಯಾರಾಗಬೇಕು ಎಂಬುದರ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆ ಮಾತನಾಡಿ, ಜೀವನದಲ್ಲಿ ಸೋಲು ಗೆಲುವು ಸಾಮಾನ್ಯ, ಸೋತಾಗ ಹೆದರದೆ ಅದನ್ನೇ ಗೆಲುವಿನ ಮೆಟ್ಟಿಲು ಎಂದು ತಿಳಿದು ಪರಿಶ್ರಮ ವಹಿಸಿ ಗೆಲುವಿನತ್ತ ಹೆಜ್ಜೆ ಹಾಕಬೇಕು ಎಂದು ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನು ಹೇಳಿದರು. ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿಸೋಜಾ ಮಾತನಾಡಿ, ವಿಧ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆ ಕಾಣಲು ಪೋಷಕರ ಪಾತ್ರ ಶಿಕ್ಷಕರಷ್ಟೇ ಮಹತ್ವದ್ದಾಗಿದೆ ಈ ದಿಸೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವುದು, ನಿವಾರಿಸುವಿಕೆ) ಅಧಿನಿಯಮ 2019ರಂತೆ ಎಲ್ಲಾ ಕಚೇರಿ, ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಮತ್ತು ವಾರ್ಷಿಕ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಹೇಳಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಉಡುಪಿ ತಾಲೂಕಿನ ವಿವಿಧ ಖಾಸಗಿ ಸಂಸ್ಥೆಗಳಿಗೆ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಅಧಿನಿಯಮ 2019 ಕುರಿತು ಏರ್ಪಡಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಾವುದೇ ಕಚೇರಿ /ಸಂಸ್ಥೆಯಲ್ಲಿ 10 ಕ್ಕಿಂತ ಹೆಚ್ಚು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಲ್ಲಿ ಆಂತರಿಕ ದೂರು ಸಮಿತಿ ರಚನೆ ಕಡ್ಡಾಯವಾಗಿದ್ದು, ಜಿಲ್ಲೆಯಲ್ಲಿ ಬಹುತೇಕ ಕಾರ್ಖಾನೆಗಳು/ ಆಸ್ಪತ್ರೆ/ ವಾಣಿಜ್ಯ ಸಂಸ್ಥೆಗಳಲ್ಲಿ ಸಮಿತಿ ರಚನೆ ಮಾಡದೇ ಇರುವುದು ಮತ್ತು ವಾರ್ಷಿಕ ವರದಿಯನ್ನು ಸಂಬಂದಪಟ್ಟ ಅಧಿಕಾರಿಗೆ ಸಲ್ಲಿಸದೇ ಇರುವುದು ಗಮನಕ್ಕೆ ಬಂದಿದ್ದು, ಸರ್ಕಾರಿ ಸೇರಿದಂತೆ ಎಲ್ಲಾ ಖಾಸಗಿ ಉದ್ಯೋಗದಾತರು ತಮ್ಮ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಸಮಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೋಬಳಿಗೆ ಸಂಬಂಧಿಸಿದಂತೆ ಕಂದಾಯ ಅದಾಲತ್/ ಪೌತಿ/ಪಿಂಚಣಿ ಅದಾಲತ್ ಕಾರ್ಯಕ್ರಮವು ಹಾಲಾಡಿ ಶಾಲಿನಿ ಜಿ ಶಂಕರ ಕನ್ವೆಂಷನ್ ಸೆಂಟರ್ನಲ್ಲಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಯಕ್ರಮದಲ್ಲಿ ಕಂದಾಯ ಇಲಾಖೆಯ 94ಸಿ ಯೋಜನೆಯಡಿ 42 ಫಲಾನುಭವಿಗಳಿಗೆ ಹಕ್ಕುಪತ್ರ, ಸಾಮಾಜಿಕ ಭದ್ರತೆ ಯೋಜನೆಯಡಿ 108 ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶವನ್ನು ವಿತರಿಸಲಾಯಿತು. 67 ಪ್ರಕರಣಗಳಲ್ಲಿ ಪಿಂಚಣಿ ಅದಾಲತ್ ನಡೆಸಿ ಸ್ಥಳದಲ್ಲಿ ಪಿಂಚಣಿ ಮಂಜೂರಾತಿ ಮಾಡಲಾಯಿತು. 2268 ಪ್ರಕರಣಗಳಲ್ಲಿ ಪಹಣಿ ತಿದ್ದುಪಡಿಗೆ ಕ್ರಮವಹಿಸಲಾಯಿತು. 191 ಜಮೀನಿಗೆ ಸಂಬಂಧಪಟ್ಟಂತೆ ಪೌತಿ ಅದಾಲತ್ ಕಾರ್ಯಕ್ರಮದಲ್ಲಿ ಪೌತಿ ಖಾತಾ ಬದಲಾವಣೆಗೆ ಅರ್ಜಿ ಸ್ವೀಕರಿಸಲಾಯಿತು. 63 11ಇ ಪ್ರಕರಣಗಳ ಆಕಾರಬಂದ್ ಆರ್ಟಿಸಿ ಹೊಂದಾಣಿಕೆ ಮಾಡಿ ತಿದ್ದುಪಡಿಗೆ ಕ್ರಮ ವಹಿಸಲಾಯಿತು. ಕಾರ್ಯಕ್ರಮದಲ್ಲಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಸಹಾಯಕ ಕಮೀಷನರ್ ಕೆ.ರಾಜು, ತಹಶೀಲ್ದಾರ್ ಆನಂದಪ್ಪ ನಾಯಕ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪಟ್ಟಣಗಳ ಶಾಲಾ ಕಾಲೇಜು ಮಾತ್ರವಲ್ಲದೇ ಗ್ರಾಮ ಮಟ್ಟದ ಶಾಲಾ ಕಾಲೇಜು, ವಿದ್ಯಾರ್ಥಿ ವಸತಿ ನಿಲಯ, ಸಂಘ ಸಂಸ್ಥೆಗಳ ಯುವ ಜನರಿಗೆ, ಯುವ ಸ್ಪಂದನ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಿ ಸದೃಢ ಸಮಾಜ ನಿರ್ಮಾಣಕ್ಕೆ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸರಕಾರದ ಯೋಜನೆಯಾದ ಯುವಸ್ಪಂದನ ಕಾರ್ಯಕ್ರಮದ ಸಲಹಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ವೃತ್ತಿಪರ ಮಾರ್ಗದರ್ಶನದ ಪೋಸ್ಟರ್ಗಳನ್ನು ಶಾಲಾ ಕಾಲೇಜು, ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಹಚ್ಚಬೇಕೆಂದು ಸೂಚಿಸಿದರು. ನೆಹರೂ ಯುವ ಕೇಂದ್ರ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸರಕಾರೇತರ ಸಂಸ್ಥೆಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಕಾರ್ಯಕ್ರಮ ಮಾಡುವಂತೆ ಸೂಚಿಸಿದರು. ಯುವ ಸ್ಪಂದನ ಕೇಂದ್ರದ ಕ್ಷೇತ್ರ ಸಂಪರ್ಕಾಧಿಕಾರಿ ಸುಜನ್, 15 ರಿಂದ 35 ವರ್ಷ ವಯೋಮಿತಿಗಳ ಯುವ ಜನರಿಗೆ ಆರೋಗ್ಯ ಮತ್ತು ಜೀವನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಹೆಸರನ್ನೇ ಹೋಲುವ ಇನ್ನೊಂದು ಸಂಘಟನೆಯ ಹೆಸರಿನಲ್ಲಿ ‘ಪ್ರೆಸ್ ಕ್ಲಬ್’ ಉದ್ಘಾಟನಾ ಕಾರ್ಯಕ್ರಮ ಎಂಬ ಆಹ್ವಾನ ಪತ್ರಿಕೆಯೊಂದು ಸೊಷಿಯಲ್ ಮೀಡಿಯಾದಲ್ಲಿ ಕಂಡುಬಂದಿದ್ದು ಈ ಕುರಿತು ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದು ಎಂದು ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ. ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಮಾನ್ಯತೆ ಹೊಂದಿರುವ ಅಧಿಕೃತ ಪತ್ರಕರ್ತರ ಸಂಘಟನೆಯಾಗಿದೆ. ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ವಾಣಿಜ್ಯ ಸಂಕೀರ್ಣದಲ್ಲಿ ಸಂಘದ ಕಛೇರಿ ಮತ್ತು ಪ್ರೆಸ್ ಕ್ಲಬ್ ಇದ್ದು ಸಂಸ್ಥೆಗೆ ಮೂವತ್ತಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ. ಮಾನ್ಯತೆ ಪಡೆದಿರುವ ನಮ್ಮ ಸಂಘಕ್ಕೂ ಮತ್ತು ನಮ್ಮ ಸಂಘದ ಹೆಸರನ್ನೇ ಹೋಲುವ ಇನ್ನೊಂದು ಸಂಘಟನೆಯ ಪ್ರೆಸ್ ಕ್ಲಬ್ ಅಥವಾ ಇತರ ಯಾವುದೇ ಚಟುವಟಿಕೆಗಳಿಗೂ ಸಂಬಂಧವಿಲ್ಲ ಮತ್ತು ಈ ಕುರಿತು ಸಾರ್ವಜನಿಕರು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕುಂದಾಪುರ ತಾಲೂಕಿನ ರಮಣೀಯ, ಸುಂದರವಾದ ಪಂಚಗಂಗಾವಳಿ ನದಿಯ ಅದ್ಭುತವಾದ ಹಿನ್ನೀರು. ಈ ಹಿನ್ನೀರಿನಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಿರ್ಮಿಸಲಾಗಿರುವ ಗಂಗೋತ್ರಿ ಕ್ರೂಸ್ ಬೋಟ್ನ್ನು ನೋಡಿದಾಗ ಹೊಸ ಜಗತ್ತನ್ನೇ ನೋಡಿದ ಅನುಭವ ಉಂಟಾಗುತ್ತಿದೆ. ಕೇರಳ ರಾಜ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಇಂತಹ ಕ್ರೋಸ್ ಬೋಟ್ಗಳು ನಮ್ಮ ರಾಜ್ಯಕ್ಕೆ ಬರುವ ಪ್ರವಾಸಿಗರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ ಎಂದು ಮೀನುಗಾರಿಕಾ ಮತ್ತು ಬಂದರು ಸಚಿವ ಎಸ್. ಅಂಗಾರ ಹೇಳಿದರು. ಗುಜ್ಜಾಡಿ ಗ್ರಾಮದ ಮಂಕಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗಂಗೋತ್ರಿ ಕ್ರೂಸ್ ಬೋಟ್ನ್ನು ವೀಕ್ಷಿಸಿ ಮಾತನಾಡಿದರು. ಈ ವಿನೂತನ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಗಂಗೊಳ್ಳಿಯ ಟಿ.ವಾಸುದೇವ ದೇವಾಡಿಗ ಹಾಗೂ ಪಾಲುದಾರರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವ ಅಂಗಾರ, ಈ ಉದ್ಯಮ ಯಶಸ್ವಿಯಾಗಿ ಮುನ್ನಡೆಯಲು ಸರಕಾರದ ಮೂಲಕ ದೊರೆಯುವ ಸೌಲಭ್ಯವನ್ನು ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಕುಂದಾಪುರ ತಾಪಂ ಅಧ್ಯಕ್ಷೆ ಇಂದಿರಾ ಶೆಟ್ಟಿ, ತಾಪಂ ಸದಸ್ಯರಾದ ಸುರೇಂದ್ರ ಖಾರ್ವಿ,…
