Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇಂದು 471 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಈ ಪೈಕಿ ಉಡುಪಿ 267, ಕುಂದಾಪುರ 154, ಕಾರ್ಕಳ ತಾಲೂಕಿನ 44 ಹಾಗೂ ಹೊರ ಜಿಲ್ಲೆಯಿಂದ ಬಂದ 6 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು ಪ್ರಕರಣಗಳಲ್ಲಿ 154 ಸಿಂಟಮಿಕ್ ಹಾಗೂ 317 ಅಸಿಂಟಮಿಕ್ ಪ್ರಕರಣಗಳಾಗಿದ್ದು, ಈವರೆಗೆ ಜಿಲ್ಲೆಯಲ್ಲಿ ಒಟ್ಟು 1084 ಸಕ್ರಿಯ ಪ್ರಕರಣಗಳಿವೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಸಂಘ ಸಂಸ್ಥೆಗಳು ನಿರಂತರ ಚಟುವಟಿಕೆ ನಡೆಸುತ್ತಾ ಸಮಾಜದ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಸಮಾಜದ ಕಟ್ಟಕಡೆಯ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು. ಮೀನುಗಾರಿಕೆಯನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿರುವ ಮೀನುಗಾರ ಕುಟುಂಬದ ಅಭಿವೃದ್ಧಿ ಹಾಗೂ ಸಮಾಜದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿ ಪರಿಸರದಲ್ಲಿ ಉತ್ತಮ ಕಾರ್ಯಚಟುವಟಿಕೆ ನಡೆಸುತ್ತಿರುವ ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್ ಇತರ ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ. ಸಂಸ್ಥೆಯು ಅತ್ಯುತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುವಂತಾಗಲಿ ಎಂದು ಬಿಜೆಪಿ ಬೈಂದೂರು ಮಂಡಲ ಉಪಾಧ್ಯಕ್ಷ ವಿನೋದ ಕುಮಾರ್ ಗುಜ್ಜಾಡಿ ಹೇಳಿದರು. ಅವರು ಗಂಗೊಳ್ಳಿಯ ಲೈಟ್‌ಹೌಸ್ ಸಮೀಪದ ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿದ ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್‌ನ 30ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚುಗೋಡು ಅಧ್ಯಕ್ಷತೆ ವಹಿಸಿದ್ದರು. ಜಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ ವನಜಾಕ್ಷಿ ಎಸ್.ಶೆಟ್ಟಿ, ಗಂಗೊಳ್ಳಿ ರಾಮಕ್ಷತ್ರೀಯ ಯುವಕ ಮಂಡಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ನಾರಾಯಣ ವಿಶೇಷ ಶಾಲೆಯ ಮಕ್ಕಳ ಷೋಷಕರಿಗಾಗಿ ವಿಶೇಷ ಮಾಹಿತಿ ಅರಿವು ಕಾರ್ಯಕ್ರಮವನ್ನು ಪಾಲಕರ ಸಭೆಯಲ್ಲಿ ನಡೆಸಲಾಯಿತು. ಡಾ. ಪಿ.ವಿ.ಭಂಡಾರಿ, ವೈದ್ಯಕೀಯ ನಿರ್ದೇಶಕರು,ಡಾ ಎ.ವಿ ಬಾಳಿಗ ಆಸ್ಪತ್ರೆ ದೂಡ್ಡಣಗುಡ್ಡೆ ಇವರು ಮಾಹಿತಿಯನ್ನು ನೀಡಿದರು. ಪ್ರಮುಖವಾಗಿ ಅಂಗವಿಕಲತೆ ಮತ್ತು ಅದರ ವಿಧಗಳು, ಬುದ್ಧಿಮಾಂಧ್ಯತೆ ಎಂದರೇನು ಮತ್ತು ಅದಕ್ಕೆ ಕಾರಣಗಳು ಹಾಗೂ ವಿಶೇಷ ಮಕ್ಕಳ ಪಾಲನೆ ಮಾಡುವಲ್ಲಿ ಪೋಷಕರಲ್ಲಿ ಇರಬೇಕಾದ ಕೌಶಲ್ಯಗಳೂಂದಿಗೆ ವಿಕಲತೆಯನ್ನು ಶೀಘ್ರ ಗುರುತಿಸುವಿಕೆ ಮತ್ತು ಪರಿಹಾರ ಕಂಡುಕೊಳ್ಳುವಿಕೆ ಮತ್ತು ವಿಶೇಷವಾಗಿ ಆಟಿಸಂನ ಕುರಿತು ಮಾಹಿತಿಯನ್ನು ನೀಡಿದರು. ಅಲ್ಲದೇ ಪೋಷಕರ ವಿವಿಧ ಪ್ರಶ್ನೆಗಳಿಗೆ ಸೂಕ್ತವಾದ ಉತ್ತರವನ್ನು ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಹಿತೈಷಿಗಳಾದ ಹಟ್ಟಿಯಂಗಡಿ ಸಿದ್ದಿವಿನಾಯಕ ದೇವಸ್ಥಾನದ ಧರ್ಮದರ್ಶಿ ಬಾಲಚಂದ್ರ ಭಟ್ ರವರು ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದರು. ಇನ್ನೋರ್ವ ಅತಿಥಿ ಪ್ಲಸಂಟ್ ಕುಂದಾಪುರ ಇದರ ಮಾಲಕರಾದ ಅಬ್ದುಲ್ ಬಶೀರ್ ಉಪಸ್ಥಿತರಿದ್ದರು. ಸುರೇಶ್ ತಲ್ಲೂರು ಸ್ವಾಗತಿಸಿದರು, ಟ್ರಸ್ಟೀ ವಸಂತ ಶಾನುಭಾಗ ವಂದಿಸಿದರು. ಮುಖ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಚಿತ್ತೂರು ಗ್ರಾಮದ ನೈಕಂಬ್ಳಿಯಲ್ಲಿ ಪ್ರೇರಣಾ ಯುವ ವೇದಿಕೆ ನೈಕಂಬ್ಳಿ ಹಮ್ಮಿಕೊಂಡಿರುವ ಪ್ರೇರಣೋತ್ಸವ-2021 ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶಿಷ್ಟವಾಗಿ ಜರುಗಿತು. ವಿಭಿನ್ನವಾಗಿ ವಿಳ್ಯದೆಲೆ ಹಾಗೂ ಶಲ್ಯದೊಂದಿಗೆ ವೇದಿಕೆಗೆ ಗಣ್ಯರನ್ನು ಸ್ವಾಗತಿಸಿಲಾಯಿತು. ತೆಂಗಿನ ಗಿಡಕ್ಕೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಮ್ ಎಸ್ ಮಂಜ ಚಾರಿಟಬಲ್ ಟ್ರಸ್ಟ್ ನ ಪ್ರವರ್ತಕರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ವಹಿಸಿದ್ದರು. ಸ್ಮರಣಿಕೆಯಾಗಿ ಸಮರ ಭೈರವಿ ಎಂಬ ಸೈನ್ಯದ ಕುರಿತಾದ ಪುಸ್ತಕವನ್ನು ಅತಿಥಿಗಳಿಗೆ ನೀಡಲಾಯಿತು. ಪ್ರೇರಣಾ ಪುರಸ್ಕಾರವನ್ನು ನಿವೃತ್ತ ಶಿಕ್ಷಕರಾದ ನಾರಾಯಣ ಶೆಟ್ಟಿ ಕುಂಜ್ಞಾಡಿ ಮೇಲ್ಮನೆ ಅವರಿಗೆ ಪ್ರದಾನಿಸಲಾಯಿತು. ಕೃಷಿ ಋಷಿ ಪ್ರಶಸ್ತಿಯನ್ನು ರಘುರಾಮ ಶೆಟ್ಟಿ ಬೆಟ್ಟಿನಮನೆ ಅವರಿಗೂ ಹಾಗೂ ಚಪ್ಪಾಳೆಯನ್ನು ಸಿ.ಎ.ಗುರುರಾಜ್ ಶೆಟ್ಟಿ ಅವರಿಗೆ ಸಮ್ಮಾನಿಸಿ ಗೌರವಿಸಲಾಯಿತು. ಅಗಲಿದ ದಂಪತಿಗಳ ನೆನಪಿನ ‘ವಿದ್ಯಾಚೇತನ’ ಪುರಸ್ಕಾರವನ್ನು ಸಮೀಕ್ಷಾ ಮತ್ತು ಮಿಥುನ್ ಪುಟಾಣಿಗಳಿಗೆ ನೀಡಿ ಗೌರವಿಸಲಾಯಿತು. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನೈಕಂಬ್ಳಿಯ ಹತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ಪ್ರೋತ್ಸಾಹಿಸುವುದು ಮತ್ತು ಅದರಲ್ಲಿ ಸಕ್ರೀಯವಾಗಿ ಭಾಗವಹಿಸುವುದರಿಂದ ಮಾನವನ ಬೌದ್ಧಿಕ ಸ್ವಾಸ್ಥ್ಯ ಹೆಚ್ಚುತ್ತದೆ ಎಂದು ನಿವೃತ್ತ ಬ್ಯಾಂಕ್ ಅಧಿಕಾರಿ ವಸಂತ ಹೆಗ್ಡೆ ಹೇಳಿದರು. ಮಂಗಳವಾರ ಇಲ್ಲಿನ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ಮೂರು ದಿನಗಳ ಸುರಭಿ ಜೈಸಿರಿ ಸಮಾರೋಪ ಹಾಗೂ ಬಿಂದಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು. ತುಳುನಾಡಿನ ಪಾಡ್ದನ ಕವಿ ಹಾಗೂ ಗಾಯಕಿ ಗಿಡಿಗೆರೆ ರಾಮಕ್ಕ ಮೊಗ್ಗೇರ್ತಿ ಅವರಿಗೆ ಬಿಂದುಶ್ರೀ ಪ್ರಶಸ್ತಿ ಪ್ರದಾನಿಸಲಾಯಿತು. ಭರತನಾಟ್ಯ ಗುರು ವಿದ್ವಾನ್ ಚಂದ್ರಶೇಖರ ನಾವಡ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಭ್ರಮರ ಉಡುಪ ಅವರನ್ನು ಗೌರವಿಸಲಾಯಿತು. ಭಾರತೀಯ ಜೀವವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಆರ್. ಸೋಮನಾಥನ್ ಅಧ್ಯಕ್ಷತೆ ವಹಿಸಿದ್ದರು. ಗಿಡಿಗೆರೆ ರಾಮಕ್ಕ ಅವರ ಪುತ್ರ ಲಕ್ಷ್ಮಣ ಉಪಸ್ಥಿತರಿದ್ದರು. ಸುರಭಿಯ ಉಪಾಧ್ಯಕ್ಷ ಅಬ್ದುಲ್ ರವೂಫ್ ಪ್ರಶಸ್ತಿ ಪುರಸ್ಕೃತರ ಪರಿಚಯ ಮಾಡಿದರು. ಸುರಭಿ ಸಂಸ್ಥೆಯ ವ್ಯವಸ್ಥಾಪಕರಾದ ಕೃಷ್ಣಮೂರ್ತಿ ಉಡುಪ ಸ್ವಾಗತಿಸಿದರು. ಕಾರ್ಯದರ್ಶಿ ಭಾಸ್ಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊಲ್ಲೂರಿನ ಸೌಪರ್ಣಿಕಾ ನದಿ ಹಾಗೂ ಅದಕ್ಕೆ ಸೇರುವ ಅಗ್ನಿತೀರ್ಥ ಸಂಪೂರ್ಣ ಮಲಿನಗೊಂಡಿದ್ದು ಜಲಚರಗಳು, ಕಾಡುಪ್ರಾಣಿಗಳು ಹಾಗೂ ಜನರ ಆಪತ್ತು ಎದುರಾಗಿದೆ. ಸಾಂಕ್ರಾಮಿಕ ರೋಗದ ಭೀತಿ ಹಾಗೂ ಧಾರ್ಮಿಕ ಪಾವಿತ್ರ್ಯತೆಗೆ ಧಕ್ಕೆಯುಂಟಾಗಿದೆ. ಈ ಬಗ್ಗೆ ಎಲ್ಲಾ ಹಂತದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೂ ಹಲವು ಭಾರಿ ಮನವಿ ಮಾಡಿದ್ದರೂ ಯಾವುದೇ ಸ್ಪಂದನವಿಲ್ಲ. ಈ ಭಾರಿಯೂ ಮತ್ತೆ ಮನವಿ ಮಾಡಿದ್ದು ಒಂದು ವಾರದೊಳಕ್ಕೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದರೆ ಜಿಲ್ಲಾಡಳಿತದ ವಿರುದ್ಧ ಹಸಿರು ಪೀಠದಲ್ಲಿ ದಾವೆ ಹೂಡಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ ಕೋಟ ಹೇಳಿದ್ದಾರೆ. ಕುಂದಾಪುರದ ಪ್ರೆಸ್ ಕ್ಲಬ್‌ನಲ್ಲಿ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ಮೂಕಾಂಬಿಕೆಯ ಕ್ಷೇತ್ರಕ್ಕೆ ಬರುವ ಕೋಟ್ಯಾಂತರ ಭಕ್ತರು ಈ ಪುಣ್ಯತೀರ್ಥದಲ್ಲಿ ಪವಿತ್ರ ಸ್ನಾನವನ್ನು ಮಾಡುವ ಧಾರ್ಮಿಕ ಆಚರಣೆಗಳಿವೆ. ಪ್ರತಿ ವರ್ಷದ ಶ್ರೀ ಕ್ಷೇತ್ರದ ಜಾತ್ರಾ ಮಹೋತ್ಸವ ಆಚರಣೆಯ ವೇಳೆ ದೇವರಿಗೆ ಇದೆ ಪುಣ್ಯತಿರ್ಥದಲ್ಲಿ ತೆಪ್ಪೋತ್ಸವ ಮತ್ತು ಅವಭೃತ ಸ್ನಾನ ಮಾಡುವ ಆಚಣೆಯೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕ್ರೀಡಾಪಟುಗಳು ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡಲು, ಅವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಸಾಧನೆಗೆ ಪ್ರೇರೆಪಣೆ ನೀಡಬೇಕು ಎಂದು ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು. ಅವರು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 22.316 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಛಾವಣಿ ನಿರ್ಮಾಣ ಕಾಮಗಾರಿಯ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳಿಗೆ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಅಗತ್ಯ ಸೌಲಭ್ಯಗಳನ್ನು ಒದಗಿಸಿ, ಅವರನ್ನು ಉತ್ತಮ ಕ್ರೀಡಾಪಟುಗಳನ್ನಾಗಿ ರೂಪಿಸಬೇಕು ಎಂದು ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಮಾತನಾಡಿ, ಈ ಕ್ರೀಡಾಂಗಣದಲ್ಲಿನ ಸೌಲಭ್ಯಗಳನ್ನು ಬಳಸಿಕೊಂಡು, ಜಿಲ್ಲೆಯಲ್ಲಿ ಇನ್ನಷ್ಟು ಮಂದಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಮೂಡಿ ಬರಲಿ ಎಂದು ಹಾರೈಸಿದರು. ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಉಪಸ್ಥಿತರಿದ್ದರು ಯುವ ಸಬಲೀಕರಣ ಮತ್ತು ಕ್ರೀಡಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಟ್ರಸ್ಟ್ ರಿ. ನಾವುಂದ ಇದರ ಆಡಳಿತ ಮೊಕ್ತೇಸರ ಹಾಗೂ ಕಾರ್ಯದರ್ಶಿ ಶೇಖರ ಎಮ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜರಗಿದ ಗರಡಿಯ ಆಡಳಿತ ಸಮಿತಿಯ ಸಭೆಯಲ್ಲಿ ಗರಡಿಯ ಟ್ರಸ್ಟಿಯಾದ ಮುತ್ತ ಬಿಲ್ಲವ ಅವರನ್ನು ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಗರಡಿ ಮನೆಯ ನಾಗೇಶ್ ಪಿ ಪೂಜಾರಿ ಅವರನ್ನು ಆಯ್ಕೆ ಮಾಡಲಾಯಿತು, ಈ ಸಂದರ್ಭದಲ್ಲಿ ಗರಡಿಯ ಬಲ್ಲಾಳರಾಗಿರುವ ಚಂದ್ರಶೇಖರ ಶೆಟ್ಟಿ, ಕೆಳಗಿನ ಮನೆ ನಿವೃತ್ತ ಶಿಕ್ಷಕ ಸೀತಾರಾಮ ಪೂಜಾರಿ, ಆರ್ ಕೆ ಬಿಲ್ಲವ, ರಘು ಪೂಜಾರಿ ಬಿಇಎಸ್‌ಟಿ ಮುಂಬೈ, ವಸಂತ ಪೂಜಾರಿ, ಸತೀಶ್ ಪೂಜಾರಿ, ಅಶೋಕ ಪೂಜಾರಿ, ಸಂತೋಷ ಪೂಜಾರಿ, ಸತ್ಯವತಿ ಬಿಲ್ಲವ, ಸುಧಾಕರ ಪೂಜಾರಿ ಮತ್ತಿತರು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಡಾ. ಎನ್ ಕೆ ಬಿಲ್ಲವ ಅವರನ್ನು ಗೌರವಿಸಲಾಯಿತು. ತಾಲೂಕು ಪಂಚಾಯತಿ ಸದಸ್ಯ ಹಕ್ಕಾಡಿ ಜಗದೀಶ ಪೂಜಾರಿ, ರಾಜೀವ ಶೆಟ್ಟಿ ನೂತನ ಅಧ್ಯಕ್ಷರಿಗೆ ಅಭಿನಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ವಿದ್ಯಾರ್ಥಿಗಳಿಗೆ ಸಾಧಿಸುವ ಛಲವಿರಬೇಕು. ಆ ಸಾಧನೆಗೆ ಯಾವುದೇ ವಿಷಯಗಳು ಅಡ್ಡಿಯಾಗಬಾರದು. ಎಂಥದ್ದೇ ಸಂದರ್ಭದಲ್ಲಿಯೂ ಅದನ್ನು ಎದುರಿಸುವ ಸಾಮರ್ಥ್ಯ ಇರಬೇಕು ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ವಿದ್ಯಾಗಿರಿಯ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಆಳ್ವಾಸ್ ಪದವಿ ಪೂರ್ವ ವಿದ್ಯಾರ್ಥಿಗಳ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಕಾಂಕ್ಷೆಗಳ ಜತೆಗೆ ಕಷ್ಟಗಳನ್ನು ಎದುರಿಸಲು ತಯಾರಿ ಇರಬೇಕು. ವಿದ್ಯಾರ್ಥಿಗಳು ಸೋಲಿಗೆ ನೀಡುವ ಕಾರಣಗಳು ಸಾಧನೆಗಳಿಗೆ ತಡೆಯಾಗಬಾರದು. ಎಲ್ಲ ಬಗೆಯ ಆಕರ್ಷಣೆಗಳು, ಬಂಧನಗಳಿಂದ ಹೊರಬಂದು ತಮ್ಮ ಗುರಿ, ಸಾಧನೆಯತ್ತ ಮನಸ್ಸನ್ನು ಕೇಂದ್ರೀಕರಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ರಮೇಶ್ ಶೆಟ್ಟಿ ಮಾತನಾಡಿ, ಕೊರೊನ ಸೋಂಕಿನ ನಡುವೆ ಸವಾಲಿನ ರೀತಿಯಲ್ಲಿ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳು ಇದರ ಮಹತ್ವವನ್ನು ಅರಿತು ಯಾವುದೇ ಗೊಂದಲಕ್ಕೊಳಗಾಗದೆ ಶೈಕ್ಷಣಿಕ ಸಾಧನೆಯತ್ತ ಗಮನ ನೀಡಬೇಕೆಂದರು. ಪ್ರಸ್ತುತ ಎಲ್ಲ ಕಡೆಯೂ ಕೊರೊನಾತಂಕ ಇದ್ದು ಶಿಕ್ಷಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಪುಣ್ಯ ನದಿ ಸೌಪರ್ಣಿಕೆಯ ಒಡಲು ಬತ್ತುತ್ತಿದ್ದು, ಕಳೆದ 2-3 ದಿನಗಳಿಂದ ಸ್ನಾನಘಟ್ಟ ಭಾಗದಲ್ಲಿ ಮೀನು ಹಾಗೂ ಜಲಚರಗಳು ಹೆಚ್ಚಿನ ಸಂಖ್ಯೆಯಲ್ಲಿ ಸತ್ತು ಪರಿಸರದಲ್ಲಿ ವಾಸನೆ ಬೀರುತ್ತಿದೆ. ಪ್ರತಿ ವರ್ಷವೂ ಮಾರ್ಚ್-ಎಪ್ರಿಲ್ ತಿಂಗಳಿನಲ್ಲಿ ಸುಡುವ ಬಿಸಿಲ ಬೇಗೆಯಿಂದಾಗಿ ನದಿಯ ನೀರು ಖಾಲಿಯಾಗುವುದರಿಂದಾಗಿ ನೀರನ್ನೆ ನಂಬಿಕೊಂಡಿರುವ ಜಲಚರಗಳ ಜೀವಕ್ಕೆ ಕುತ್ತು ಬರುವುದು ಮಾಮೂಲಿಯಾಗಿದೆ. ಹೆಮ್ಮಾಲ, ಕರ್ಸೆ, ಕಲ್ಮೊಗ ಮುಂತಾದ ಜಾತಿಯ ರಾಶಿ ರಾಶಿ ಮೀನುಗಳು ಸಾವನ್ನಪ್ಪುತ್ತಿದ್ದು, ಸತ್ತು ಬೀಳುತ್ತಿರುವ ಮೀನಿನಿಂದಾಗಿ ಪರಿಸರದಲ್ಲಿ ಗಬ್ಬು ವಾಸನೆ ಹರಡುತ್ತಿದೆ. ಇದರಿಂದಾಗಿ ಸ್ಥಳೀಯರು ಸಾಂಕ್ರಾಮಿಕ ರೋಗ ಬರಬಹುದೆನ್ನುವ ಆತಂಕದಲ್ಲಿದ್ದಾರೆ. ಬಿಸಿಲಿನ ತಾಪದಿಂದಾಗಿ ನದಿಯ ನೀರುಗಳು ಖಾಲಿಯಾಗುತ್ತಿದ್ದು, ಸ್ನಾನ ಮಾಡಿದ ನೀರುಗಳು ಸುಗಮವಾಗಿ ಹರಿದು ಹೋಗದೆ ಗುಂಡಿಗಳಲ್ಲಿ ನಿಲ್ಲುತ್ತಿದೆ. ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿರುವುದರಿಂದ ಹಾಗೂ ಸೌಪರ್ಣಿಕೆಯ ಸ್ನಾನ ಘಟ್ಟದ ಬಳಿಯಲ್ಲಿ ನೀರಿನ ಸಂಗ್ರಹಕ್ಕಾಗಿ ಡ್ಯಾಂ ನಿರ್ಮಾಣ ಮಾಡಿರುವುದರಿಂದಾಗಿ ಗುಂಡಿಯಲ್ಲಿ ಸಂಗ್ರಹವಾಗುವ ನೀರುಗಳಲ್ಲಿ ಸೇರಿಕೊಳ್ಳುವ ಮೀನುಗಳು, ಬಿಸಲಿನ…

Read More