ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮೇ13ರಂದು ದುಬೈನಿಂದ ಉಡುಪಿಗೆ ಆಗಮಿಸಿದ್ದ 5 ಮಂದಿಗೆ ಕೊರೋನಾ ಪಾಸಿಟಿವ್ ಇರುವ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ದೃಢಪಡಿಸಿದ್ದಾರೆ. ದುಬೈನಿಂದ ಆಗಮಿಸಿದ ಉಡುಪಿಯ 46 ಮಂದಿಯನ್ನುಉಡುಪಿಯ ಹೋಟೆಲ್‌ನಲ್ಲಿ ಕ್ವಾರಂಟೈನಲ್ಲಿರಿಸಿ ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿ ದೊರೆತಿದ್ದು, ಐದು ಮಂದಿಗೆ ಪಾಸಿಟಿವ್ ದೃಢವಾಗಿದೆ. ಅವರನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊರ ರಾಜ್ಯಗಳಿಂದ ಮರಳುತ್ತಿರುವವರನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೆಡೆ ಗುರುತಿಸಲಾಗಿರುವ ಸ್ಥಳಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದ್ದು, ಕಳೆದ ಸೋಮವಾರದಿಂದ ಇಲ್ಲಿಯ ತನಕ ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ ಒಟ್ಟು 2,199 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಬೈಂದೂರು ತಾಲೂಕಿಗೆ ಮೇ.4ರಿಂದ ಮಹಾರಾಷ್ಟ್ರದಿಂದ 1,299, ತೆಲಂಗಾಣದಿಂದ 146, ಆಂಧ್ರಪ್ರದೇಶದಿಂದ 12, ಗೋವಾದಿಂದ 11, ಗುಜರಾತ್‌ನಿಂದ 3 ಮತ್ತು ಕೇರಳದಿಂದ ಇಬ್ಬರು ಬಂದಿದ್ದಾರೆ. ಕುಂದಾಪುರ ತಾಲೂಕಿಗೆ ಮಹಾರಾಷ್ಟ್ರದಿಂದ 322, ತೆಲಂಗಾಣದಿಂದ 194, ಕೇರಳದಿಂದ 1, ಗುಜರಾತ್‌ನಿಂದ 8, ಗೋವಾದಿಂದ 1 ಹಾಗೂ ತಮಿಳುನಾಡಿನಿಂದ 7 ಮಂದಿ ಬಂದಿದ್ದಾರೆ. ಇವರೆಲ್ಲರೂ ಬೈಂದೂರು ತಾಲ್ಲೂಕಿನ ಶಿರೂರು, ಕೊಲ್ಲೂರು ಹಾಗೂ ಕುಂದಾಪುರ ತಾಲ್ಲೂಕಿನ ಹೊಸಂಗಡಿ ಮೂಲಕ ಜಿಲ್ಲೆ ಪ್ರವೇಶಿಸಿದ್ದಾರೆ. ಅಲ್ಲಿನ ಚೆಕ್‌ಪೋಸ್ಟ್‌ಗಳಲ್ಲಿ ಪ್ರಾಥಮಿಕ ಆರೋಗ್ಯ ತಪಾಸಣೆಗೆ ಒಳಪಡಿಸಿ ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಲಭೂತ ಸೌಕರ್ಯದ ಬಗ್ಗೆ ಅಸಮಾಧಾನ: ಸರಕಾರಿ ಕ್ವಾರಂಟೈನ್ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ ಎದ್ದು ಕಾಣುತ್ತಿತ್ತು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಂಬೈ ಹಾಗೂ ಇತರೆ ರಾಜ್ಯಗಳಿಂದ ಉಡುಪಿ ಜಿಲ್ಲೆಯ ಗಡಿ ಪ್ರವೇಶಿಸುತ್ತಿರುವ ನಾಗರಿಕರಿಗೆ ಕೋವಿಡ್-19 ತಪಾಸಣಾ ಕೇಂದ್ರದಲ್ಲಿ ವಿಳಂಬ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಗುರುವಾರ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹಾಗೂ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿದರು. ಹೊರ ರಾಜ್ಯಗಳಿಂದ ಬಂದವರಿಗೆ ಶೀಘ್ರ ತಪಾಸಣೆ ಹಾಗೂ ಮಾಹಿತಿಯನ್ನು ದಾಖಲಿಸಿಕೊಂಡು ಕ್ವಾರೈಂಟನ್ ಕೇಂದ್ರ ತಲುಪಲು ಅನುವು ಮಾಡಿಕೊಡಿ ಮತ್ತು ಅಗತ್ಯ ಮೂಲಭೂತ ಸೌಕರ್ಯ ಒದಗಿಸಿ ಎಂದು ಶಾಸಕರು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಮುಂಬೈನಲ್ಲಿರುವ ಶಿರೂರು ಹೊಸ್ಮನೆ ಶ್ರೀನಿವಾಸ ಶೆಟ್ಟಿಯವರು ಮುಂಬೈನಿಂದ ಬರುವರಿಗಾಗಿ ಬಿಸ್ಕೆಟ್ ಹಾಗೂ ನೀರಿನ ಬಾಟೆಲ್ ವ್ಯವಸ್ಥೆ ಮಾಡಲು ನೀಡಿರುವ ಚೆಕ್ಕನ್ನು ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಇದನ್ನೂ ಓದಿ: ► ದುಬೈನಿಂದ ಬಂದಿದ್ದ ಉಡುಪಿ ಜಿಲ್ಲೆಯ 5 ಮಂದಿಗೆ ಕೊರೋನಾ ಪಾಸಿಟಿವ್ – https://kundapraa.com/?p=37564 . ► ಶಿರೂರು ತಪಾಸಣಾ ಕೇಂದ್ರಕ್ಕೆ ಮಾಜಿ ಶಾಸಕ ಕೆ. ಗೋಪಾಲ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಜಿಲ್ಲೆ 3182, ಝೋನ್-01 ರ ವತಿಯಿಂದ ಸುಮಾರು 1.2 ಲಕ್ಷ ರೂ. ಮೌಲ್ಯದ ಪಿಪಿಇ ಕಿಟ್, ಎನ್-95 ಮಾಸ್ಕ್ ಹಾಗೂ ಟ್ರಬಲ್ ಲೇಯರ್ ಮಾಸ್ಕ್‌ಗಳನ್ನು ಮಾಜಿ ಜಿಲ್ಲಾ ಗವರ್ನರ್ ಅಭಿನಂದನ್ ಎ ಶೆಟ್ಟಿ ಮತ್ತು ಝೋನ್ 01 ಸಹಾಯಕ ಗವರ್ನರ್ ರವಿರಾಜ್ ಶೆಟ್ಟಿ ಇವರು ತಾಲೂಕು ಆರೋಗ್ಯ ಅಧಿಕಾರಿಯಾದ ಡಾ| ನಾಗಭೂಷಣ ಉಡುಪ ಹೆಚ್ ಇವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಝೋನ್-01 ರ ವಲಯ ಸೇನಾನಿಗಳಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಚಂದ್ರಶೇಖರ್ ಬಿ. ಎಮ್, ನಾರಾಯಣ ನಾಯ್ಕ್ ಮತ್ತು ವಿವಿಧ ರೋಟರಿ ಕ್ಲಬ್‌ನ ಅಧ್ಯಕ್ಷರುಗಳಾದ ಡಾ| ರಾಜರಾಮ ಶೆಟ್ಟಿ (ಕುಂದಾಪುರ), ದೇವಾರಾಜ (ದಕ್ಷಿಣ), ಶಶಿಧರ ಶೆಟ್ಟಿ (ಮಿಡ್‌ಟೌನ್), ಭಾಸ್ಕರ್ ಕೆ (ಸನ್‌ರೈಸ್), ರಾಜು ಪೂಜಾರಿ ಎಮ್ (ರಿವರ್ ಸೈಡ್), ಶಿವಾನಂದ ಪೂಜಾರಿ (ಗಂಗೊಳ್ಳಿ), ಪ್ರಕಾಶ್ ಭಟ್ (ಬೈಂದೂರು), ಉದಯ ಕನ್ನಂತ (ಸಿದ್ದಾಪುರ), ಡಾ| ಉತ್ತಮ್‌ಕುಮಾರ್ ಶೆಟ್ಟಿ ಮತ್ತು ಸಂತೋಷ್ ಕೋಣಿ ಇವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: 2020-21ನೇ ಸಾಲಿಗೆ ತೋಟಗಾರಿಕೆ ಇಲಾಖೆಯ ಮುಖಾಂತರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉಡುಪಿ ಜಿಲ್ಲೆಯ ೧೫೮ ಗ್ರಾಮಪಂಚಾಯತ್ ಮಟ್ಟದಲ್ಲಿ, ಗೇರು, ಅಡಿಕೆ, ಕಾಳು ಮೆಣಸು, ಕೊಕೋ, ನುಗ್ಗೆ ಬೆಳೆ ಪ್ರದೇಶಗಳ ವಿಸ್ತರಣೆ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿರುತ್ತದೆ. ಕಳೆದ ವ?ದಿಂದ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಉಡುಪಿ ಮಲ್ಲಿಗೆ ಬೆಳೆ ಪ್ರದೇಶ ವಿಸ್ತರಣೆ ಕಾಮಗಾರಿಯನ್ನು ಸೇರ್ಪಡೆ ಮಾಡಿದ್ದು 5 ಸೆಂಟ್ ಪ್ರದೇಶದಲ್ಲಿಯೂ, ಮಲ್ಲಿಗೆ ಬೆಳೆ ಪ್ರದೇಶ ವಿಸ್ತರಣೆ ಕಾರ್ಯಕ್ರಮವನ್ನು ಕೈಗೊಳ್ಳಲು ಅವಕಾಶವಿದ್ದು, ಸಣ್ಣ., ಅತೀ ಸಣ್ಣ ರೈತರು, ಮಹಿಳಾ ಫಲಾನುಭವಿಗಳೂ ಸಹಾ ತಮ್ಮ ಕೃಷಿ ಜಮೀನಿನಲ್ಲಿ ಹೊಸದಾಗಿ ಮಲ್ಲಿಗೆ ಗಿಡ ನಾಟಿ ಕಾರ್ಯವನ್ನು ಕೈಗೊಳ್ಳಲು ಅವಕಾಶವಿರುತ್ತದೆ, ಅಡಿಕೆ, ತೆಂಗು, ಕಾಳುಮೆಣಸು ತೋಟ ಪುನಶ್ಚೇತನ ಕಾರ್ಯಗಳಿಗೆ ಸಹಾ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಅವಕಾಶವಿದ್ದು ಆಸಕ್ತರು ಪ್ರಯೋಜನ ಪಡೆದುಕೊಳ್ಳಲು ಕೋರಿದೆ. ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳ ಅನುಷ್ಠಾನಕ್ಕಾಗಿ ಉದ್ಯೋಗ ಚೀಟಿ ಕಡ್ಡಾಯವಾಗಿದ್ದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ರ ಕಾರಣ ದೇಶದಲ್ಲಿ ವಿಧಿಸಿರುವ ಲಾಕ್ ಡೌನ್ ನಿಂದ , ಹೂವಿನ ಬೆಳೆಗಾರರಿಗೆ ಉಂಟಾದ ನ?ಕ್ಕೆ ರೂ. ೨೫,೦೦೦ ಪರಿಹಾರವನ್ನು ಗರಿಷ್ಟ ಹೆಕ್ಟೇರ್ ವಿಸ್ತೀರ್ಣಕ್ಕೆ ಮುಖ್ಯಮಂತ್ರಿಯವರು ಘೋಷಿಸಿದ್ದು, ಪ್ರಸ್ತುತ ಸದರಿ ಘೋಷಿಸಿರುವ ಪರಿಹಾರವನ್ನು ರೈತರಿಗೆ ಪಾವತಿಸುವ ಬಗ್ಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಪರಿಹಾರವನ್ನು 2019-20ನೇ ಸಾಲಿನಲ್ಲಿ ಬೆಳೆ ಸಮೀಕ್ಷೆಯ ಮಾಹಿತಿಯ ಆಧಾರದಲ್ಲಿ ಪಾವತಿಸಲಾಗುವುದು. ರೈತರು ತಾವು ಬೆಳೆದಿರುವ ಬಹು ವಾರ್ಷಿಕ ಪುಪ್ಪ ಬೆಳೆಯು 2019-20 ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ಬಗ್ಗೆ ಹಾಗೂ ವಾರ್ಷಿಕ ಪು? ಬೆಳೆಗಳು 2019-20ನೆ ಸಾಲಿನ ಹಿಂಗಾರು ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ಬಗ್ಗೆ ಸಂಬಂದಿಸಿದ ತಾಲೂಕು ತೋಟಗಾರಿಕೆ ಇಲಾಖೆಯ ಕಛೇರಿಗಳಲ್ಲಿ ಪರಿಶೀಲಿಸಿಕೊಳ್ಳುವುದು. ರೈತರು ಈಗಾಗಲೇ ಇಲಾಖೆಯ FRUITS ತಂತ್ರಾಂಶದಲ್ಲಿ ನೋಂದಣಿಯಾಗಿದ್ದರೆ ಪರಿಹಾರವನ್ನು ನೇರವಾಗಿ ಪಾವತಿಸಲಾಗುವುದು, ಬೆಳೆ ಸಮೀಕ್ಷೆಯಲ್ಲಿ ಪು? ಬೆಳೆ ದಾಖಲಾಗದ ರೈತರು ಅರ್ಜಿ, ಪಹಣಿ, ಆಧಾರ್ ನ ಪ್ರತಿ , ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಹಲವೆಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮಿತಿಮೀರಿದ್ದು ಇದುವೆರೆಗೆ ತಾಲೂಕು ಪಂಚಾಯತ್ ಅಥವಾ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈ ಬಗ್ಗೆ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡು ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ ಆಗ್ರಹಿಸಿದ್ದಾರೆ. ಬುಧವಾರ ಬೈಂದೂರು ತಹಸೀಲ್ದಾರರ ಮೂಲಕ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಬೈಂದೂರು ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಭಾವ ತಲೆ ದೋರಿದೆ. ಪ್ರತೀ ವರ್ಷ ಮಾರ್ಚ್ ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತೋರುತ್ತಿದ್ದು, ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಡಳಿತ ಸ್ಪಂದಿಸುತ್ತಿತ್ತು. ಆದರೆ ಈ ವರ್ಷ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಾಗಿದ್ದು, ಮೇ ತಿಂಗಳು ಅರ್ದ ಕಳೆದರೂ ಕುಡಿಯುವ ನೀರಿನ ಪೂರೈಕೆ ಮಾಡುವಲ್ಲಿ ಸ್ಥಳೀಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯವಹಿಸಿದೆ ಎಂದವರು ಆರೋಪಿಸಿದ್ದಾರೆ. ಕೊರೊನಾ ಮಾಹಾಮಾರಿಯಿಂದಾಗಿ ಜನರೂ ಹೊರ ಹೋಗಲು ಭಯಪಡುತ್ತಿದ್ದಾರೆ. ಇಂತಹ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಂಡಿಯನ್ ಸೈಕೆಯಾಟ್ರಿಸ್ಟ್ಸ್ ಸೊಸೈಟಿ ಮತ್ತು ಶಿವಮೊಗ್ಗದ ಕ್ಷೇಮ ಟ್ರಸ್ಟ್ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಳೆದ ತಿಂಗಳು ಅಂತರ್ಜಾಲ ಮೂಲಕ ನಡೆಸಿದ್ದ ರಾಷ್ಟ್ರೀಯ ಮಟ್ಟದ ’Minding Our Minds During Lockdown’ ವಿಷಯದ ಕುರಿತಾದ ಪ್ರಬಂಧ ಸ್ಪರ್ಧೆಯಲ್ಲಿ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಕೇಂದ್ರದ ಹತ್ತನೆ ತರಗತಿಯ ವಿದ್ಯಾರ್ಥಿ ಮೊಗೇರಿ ಚಿನ್ಮಯ ಅಡಿಗ ಪ್ರಥಮ ಸ್ಥಾನ ಪಡೆದಿರುವನು. ಅವನು ಬೈಂದೂರು ತಾಲ್ಲೂಕು ಕೆರ್ಗಾಲು ಗ್ರಾಮದ ಮೊಗೇರಿ ಜನಾರ್ದನ ಅಡಿಗ-ಅನುಪಮಾ ಕೋಟ ದಂಪತಿಯ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜನತೆ ಕೋರೋನಾ – ಲಾಕ್‌ಡೌನ್‌ನಿಂದ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಏಕಾಏಕಿ ವಿದ್ಯುತ್ ನಿಗಮಗಳು ದರ ಹೆಚ್ಚಿಸಿ ಹಾಗೂ ಹಿಂದಿನ ಮೂರು ತಿಂಗಳ ಎವರೇಜ್ ಆಧಾರದಲ್ಲಿ ಬಿಲ್ ನೀಡಿರುವುದು ಜನಸಾಮಾನ್ಯರಿಗೆ ಹೊರೆಯಾಗಿದ್ದು, ಕೂಡಲೇ ಇದನ್ನು ಸರಿಪಡಿಸಿ ಇಲ್ಲವೇ ಮೂರು ತಿಂಗಳ ಬಿಲ್ ಮನ್ನಾ ಮಾಡಿ ಎಂದು ಬೈಂದೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಮುಖ್ಯಮಂತ್ರಿಗಳನ್ನು ಆಗ್ರಹಿಸಿದೆ. ಕಳೆದ ಹಲವು ದಿನಗಳಿಂದ ಜನರಿಗೆ ಕೆಲಸ ಕಾರ್ಯವಿಲ್ಲದೇ ಪರದಾಡುತ್ತಿರುವ ಸಂದರ್ಭದಲ್ಲಿ ಏಕಾಏಕಿ ಮೂರು ನಾಲ್ಕು ಪಟ್ಟು ಹೆಚ್ಚಿನ ಬಿಲ್ ನೀಡಿರುವುದು ಜನಸಾಮಾನ್ಯರಿಗೆ ಹೊರೆಯಾಗಿದೆ. ಈ ಬಗ್ಗೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವಾರು ದೂರುಗಳು ಬಂದಿವೆ. ನಿರ್ದಿಷ್ಟ ಬಿಲ್ ನೀಡಿ, ಇಲ್ಲವೇ ಮೂರು ತಿಂಗಳುಗಳ ಬಿಲ್ ಮನ್ನಾ ಮಾಡಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವಂತೆ ಯುವ ಕಾಂಗ್ರೆಸ್ ಮನವಿಯಲ್ಲಿ ತಿಳಿಸಿದೆ. ಬೈಂದೂರು ಉಪ ತಹಶೀಲ್ದಾರರ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಬೈಂದೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮೇ.13ರಿಂದ ಬಸ್ ಸಂಚಾರ ಪುನರಾರಂಭಿಸಲಾಗುತ್ತಿದ್ದು, ಕೆಲವು ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳು ರಸ್ತೆಗಿಳಿಯಲಿವೆ. ಬಸ್‌ನಲ್ಲಿ 50 ಪ್ರತಿಶತಕ್ಕಿಂತ ಹೆಚ್ಚಿನ ಜನರನ್ನು ಕರೆದೊಯ್ಯುವಂತಿಲ್ಲ. ಸಾರ್ವಜನಿಕರು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದ್ದು, ತಪ್ಪಿದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಕೋವಿಡ್ 19 ಲಾಕ್‌ಡೌನ್ ಪ್ರಯುಕ್ತ ಸ್ಥಗಿತಗೊಂಡಿದ್ದ ಬಸ್ ಸಂಚಾರವನ್ನು ಪುನರಾರಂಭಿಸುವ ಬಗ್ಗೆ ಘಟಕ ವ್ಯವಸ್ಥಾಪಕರು, ಕೆಎಸ್‌ಆರ್‌ಟಿಸಿ ಉಡುಪಿ ಮತ್ತು ಮಾಲಕರು, ಭಾರತಿ ಮೋಟಾರ್ಸ್, ಉಡುಪಿ ಇವರು ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ಮಾರ್ಗಗಳಲ್ಲಿ ಬಸ್ಸು ಸಂಚಾರ ಪ್ರಾರಂಭಿಸುವ ಕುರಿತು , ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ ಇವರ ಮೂಲಕ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ. ಈ ಬಗ್ಗೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಂದ ಕಛೇರಿಗಳಿಗೆ ಬರಲು ಬಸ್ಸಿನ ವ್ಯವಸ್ಥೆ ಮಾಡುವಂತೆ ಮನವಿಗಳು ಸ್ವೀಕೃತವಾಗಿರುತ್ತವೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಉಡುಪಿ ಇವರ ಕಛೇರಿಗೆ ಸಾರ್ವಜನಿಕರಿಂದ ಮನವಿಗಳು ಬರುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಓಡಾಟ…
