Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನರೇಂದ್ರ ಮೋದಿಯವರು ಪ್ರಧಾನಿಯಾಗಿ 7 ವರ್ಷಗಳಾಗುತ್ತಿರುವ ಅಂಗವಾಗಿ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾ ಕೊರೋನಾ ಪ್ರಂಟ್‌ಲೈನ್  ವಾರಿಯರ್ಸ್‍ಗೆ 8.5ಲಕ್ಷ ಮೌಲ್ಯದ ಕೋವಿಡ್ ಕಿಟ್ ನೀಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾ ಉಡುಪಿ ಜಿಲ್ಲಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಬಿಜೆಪಿ ಯುವ ಮೋರ್ಚಾ ಕೊರೋನಾ ಸಂಕಷ್ಟ ಸಮಯದಲ್ಲಿ ಸ್ಪಂದಿಸುತ್ತಾ ಬಂದಿದೆ. ಈಗಾಗಲೇ 328 ಯೂನಿಟ್ ರಕ್ತವನ್ನು ಜಿಲ್ಲಾ ಆಸ್ಪತ್ರೆಗೆ ನೀಡಿದೆ. ಸಹಾಯವಾಣಿ ಕೇಂದ್ರಗಳ ಮೂಲಕ ಮಾರ್ಗದರ್ಶನ ನೀಡುತ್ತಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಭಾರತದ ಪ್ರಧಾನಿಯಾಗಿ 7 ವರ್ಷಗಳಾಗುತ್ತಿರುವ ಸಂದರ್ಭದಲ್ಲಿ ವಿಭಿನ್ನವಾಗಿ ಆಚರಿಸಲು ಬೂತ್ ಮಟ್ಟಕ್ಕೆ ಇಳಿದಿದೆ. ಸುಮಾರು 8.5 ಲಕ್ಷ ವೆಚ್ಚದಲ್ಲಿ ಕೊರೋನಾ ಫ್ರಂಟ್ ಲೈನ್  ವಾರಿಯರ್ಸ್‍ಗೆ ವಿವಿಧ ಸಲಕರಣೆಗಳನ್ನು ನೀಡುತ್ತಿದೆ. 10 ಸಾವಿರ ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್, ಶವಹೊದಿಕೆ, ಹ್ಯಾಂಡ್ವಾಸ್, ಅಕ್ಸಿಮೀಟರ್ಗಳನ್ನು ನೀಡುತ್ತಿದೆ. ಕೋವಿಡ್ ಕೇರ್ ಸೆಂಟರ್ಗಳಿಗೆ ಹಣ್ಣುಹಂಪಲು, ಅಕ್ಸಿಮೀಟರ್, ಸ್ಯಾನಿಟೈಸರ್ ಇತ್ಯಾದಿ ಅವಶ್ಯಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ನಿರ್ಲಕ್ಷಯತೆಗೆ ಒಳಗಾದ, ಪರಿತ್ಯಜಿಸಲ್ಪಟ್ಟ, ದೌರ್ಜನ್ಯಕ್ಕೊಳಗಾದ, ಶೋಷಣೆಗೊಳಗಾದ, ಕುಟುಂಬದಿಂದ ಬೇರ್ಪಟ್ಟ, ಮಕ್ಕಳು ಮತ್ತು ವಿಶೇಷವಾಗಿ ಕೋವಿಡ್-19 ನಿಂದ ಬಳಲುತ್ತಿರುವ ಮಕ್ಕಳು ಮತ್ತು ಪೋಷಕರಿಗೆ ಆಪ್ತ ಸಮಾಲೋಚನೆಗಾಗಿ ನೀಡಲಾಗಿದ್ದ , ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಾಯವಾಣಿ ಸಂಖ್ಯೆಯಲ್ಲಿ ಬದಲಾವಣೆಯಾಗಿದ್ದು, ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಕೋವಿಡ್ ಸಹಾಯವಾಣಿ ಸಂಖ್ಯೆ: 0820-2574937, ಮಕ್ಕಳ ಸಹಾಯವಾಣಿ ಸಂಖ್ಯೆ: 1098/ 0820-2592229, ಉಚಿತ ಟೆಲಿ ಕೌನ್ಸೆಲಿಂಗ್ ಸಹಾಯವಾಣಿ: 14499 ಗೆ ಬೆಳಿಗ್ಗೆ 8 ರಿಂದ ರಾತ್ರಿ 8 ತನಕ ಕರೆ ಮಾಡಿ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಏಳು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗಂಗೊಳ್ಳಿಯಲ್ಲಿ ಬಿಜೆಪಿ ವತಿಯಿಂದ ಕೋವಿಡ್ ಸೋಂಕಿತ ಬಡ ಕುಟುಂಬಗಳಿಗೆ ದಿನಸಿ ಸಾಮಗ್ರಿಗಳ ಕಿಟ್‌ನ್ನು ವಿತರಿಸಲಾಯಿತು. ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಮಂಡಲದ ಉಪಾಧ್ಯಕ್ಷ ವಿನೋದ್ ಭಂಡಾರಿಯವರು ಕೊಡಮಾಡಿದ ದಿನಸಿ ಸಾಮಗ್ರಿಗಳ ಕಿಟ್‌ಗಳನ್ನು ಕೋವಿಡ ಸೋಂಕಿತ ಮೂರು ಬಡ ಕುಟುಂಬಗಳಿಗೆ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಹಸ್ತಾಂತರಿಸಿದರು. ಈ ಸಂದರ್ಭ ಬಿಜೆಪಿ ತ್ರಾಸಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅಶೋಕ್ ಎನ್. ಡಿ., ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಬಿ. ರಾಘವೇಂದ್ರ ಪೈ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ. ಬೈಂದೂರು: ಆಯುಷ್ ಇಲಾಖೆ, ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಹೋಮ್ ಐಸೋಲೇಶನ್ ಕೋವಿಡ್ ಸೋಂಕಿತರಿಗೆ ರೋಗ ನಿರೋಧಕ ಶಕ್ತಿ ವೃದ್ಧಿಸುವ ಆಯುಷ್ ಔಷಧಿಗಳನ್ನು ಕಾಲ್ತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿತರಿಸಲಾಯಿತು. ಕಾಲ್ತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಪ್ಪಾಡಿ-ಗುಡಿಕೇರಿ, ಕಂಪ, ಮಣ್ಮನೆ, ಮಧುಕೋಡ್ಲು, ಮೈನಮಕ್ಕಿ ಮೊದಲಾದ ಪ್ರದೇಶಗಳಲ್ಲಿ ಸೋಂಕಿತರ ಮನೆಗೆ ತೆರಳಿ ಆಯುಷ್ ಔಷಧಿಗಳಾದ ಸಂಶಮನ ವಟಿ, ಆರ್ಕ್-ಇ-ಅಜೀಬ್, ಚ್ಯವನ ಪ್ರಾಶ, ಶರಬತ್-ಉ-ಉನಾಬ್, ಅಶ್ವಗಂಧ ಚೂರ್ಣ, ಆಯುಷ್-೬೪ ಮಾತ್ರೆಗಳನ್ನೊಳಗೊಂಡ ಕಿಟ್‌ಗಳನ್ನು ವಿತರಿಸಲಾಯಿತು. ಕಾಲ್ತೋಡು ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ವೀಣಾ ಕಾರಂತ ಅವರು ಔಷಧ ಸೇವನೆ ರೀತಿ, ಹೋಮ್ ಐಸೋಲೇಶನ್‌ನಲ್ಲಿರುವವರಿಗೆ ಆಹಾರ-ವಿಹಾರದ ಬಗ್ಗೆ ಮಾಹಿತಿ ನೀಡಿದರು. ಆಯುಷ್ ಇಲಾಖೆ, ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಹೋಮ್ ಐಸೋಲೇಶನ್ ಕೋವಿಡ್ ಸೋಂಕಿತರಿಗೆ ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆಯುಷ್ ಇಲಾಖೆ ಉಡುಪಿ ಮುಖಾಂತರ ಜಿಲ್ಲೆಯ ಎಲ್ಲಾ ತಾಲೂಕಿನ ಕಾರ್ಯನಿರ್ವಹಣಾಧಿಕಾರಿಯವರಿಗೆ ವಿತರಿಸಲಾಗಿದ್ದು, ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ಮೂಲಕ ಹೋಮ್ ಐಸೋಲೇಶನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕೇಂದ್ರ ಸರ್ಕಾರದಿಂದ 4 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು ಈ ಬಗ್ಗೆ ಅರ್ಜಿಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ದೊರೆಯುತ್ತದೆ ಎಂಬ ಸಂದೇಶವೊಂದು ಒಂದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಸ್ಪಷ್ಟನೆ ನೀಡಿದ್ದಾರೆ. ಕೋವಿಡ್‌ನಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ಕೇಂದ್ರ ಸರಕಾರದಿಂದ ಪರಿಹಾರ ದೊರೆಯುವ ಯಾವುದೇ ಯೋಜನೆ ಸದ್ಯಕ್ಕಿಲ್ಲ. ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನೆಯಾಗಿದೆ ಎಂದವರು ಸ್ಪಷ್ಟಪಡಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶನಿವಾರ 684 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 3 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 290, ಕುಂದಾಪುರ, ಬೈಂದೂರು ತಾಲೂಕಿನ 267, ಕಾರ್ಕಳ, ಹೆಬ್ರಿ ತಾಲೂಕಿನ 123 ಮಂದಿಗೆ ಹಾಗೂ ಹೊರ ಜಿಲ್ಲೆಯ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 684 ಪ್ರಕರಣಗಳಲ್ಲಿ 23 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 661 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿಯ 73 ವರ್ಷದ ವೃದ್ಧೆ, 68 ವರ್ಷದ ವೃದ್ಧೆ, ಕುಂದಾಪುರದ 62 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 848 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5775 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3611 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 6981 ಮಂದಿಗೆ ಮೊದಲನೇ ಡೋಸ್, 623 ಮಂದಿಗೆ…

Read More

ಸಮಸ್ಯೆ ಯಾರಿಗಿಲ್ಲ ಹೇಳಿ. ಹಾಗಂತ ತಲೆಯ ಮೇಲೆ ಕೈ ಹೊತ್ತು ಕುಳಿತರೆ ಬದುಕು ಸಾಗುವುದಿಲ್ಲ. ನಾವು ನಮಗಿಂತ ಮೇಲಿನವರನ್ನು ನೋಡಿ ನೊಂದುಕೊಳ್ಳುವುದಕ್ಕಿಂತ ನಮಗಿಂತ ಸಂಕಷ್ಟದಲ್ಲಿರುವ ಇತರರನ್ನು ನೋಡಿದರೆ ಸಾಕು. ನಮಗೆ ಭಗವಂತ ಇಷ್ಟನ್ನಾದರೂ ಕರುಣಿಸಿದ್ದಾನಲ್ಲ ಎಂಬ ತೃಪ್ತ ಭಾವ ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ನೀವು ಜೀವನದಲ್ಲಿ ಎಲ್ಲವನ್ನೂ ಕಳೆದುಕೊಂಡಿದ್ದಿರಿ ಅಂತ ನಿಮ್ಮ ಮನಸಿಗೆ ಅನಿಸಿದಾಗ ಒಮ್ಮೆ ಮರಗಳನ್ನು ನೋಡಿ. ಒಂದು ಸಮಯದಲ್ಲಿ ಅವು ತನ್ನೆಲ್ಲಾ ಎಲೆಗಳನ್ನು ಕಳೆದುಕೊಂಡರು ಎಂದಿಗೂ ಅವು ಕುಗ್ಗುವುದಿಲ್ಲ ಅವು ತಮ್ಮ ಸಮಯಕ್ಕಾಗಿ ಕಾಯುತ್ತವೆ. ಹಾಗೆ ನಾವು ಕೊಡ ಸಮಸ್ಯೆಗಳಿಗೆ ಹತಾಶರಾಗದೆ ಅವಮಾನಗಳಿಗೆ ಕುಗ್ಗದೆ ಬದುಕೋಣ. ಯುನಿವರ್ಸಿಟಿಗಳಿಂದ ಕಲಿಯುವ ಪಾಠಕಿಂತ ಬದುಕು ಕಲಿಸುವ ಪಾಠವೇ ದೊಡ್ಡದು. ನಾವು ಎಷ್ಟೋ ಜನರ ಸಮಸ್ಯೆಗಳಿಗೆ ದ್ವನಿಯಾಗುತ್ತೇವೆ. ಆದರೆ ನಮಗೆ ಸಮಸ್ಯೆ ಅಂತ ಬಂದಾಗ ತುಂಬಾ ಕಷ್ಟಪಡುತ್ತೇವೆ. ಕೆಲವರು ಹೇಳುವುದುಂಟು ನೀವು ಪತ್ರಕರ್ತರು, ಬರಹಗಾರರಿಗೆ ಏನು ಎಲ್ಲರ ಪರಿಚಯ ಉಂಟು ನಿಮಗೆ ಬೇಕಾದ ಕೆಲಸ ಕೊಡಲೆ ಮಾಡಿಸಿಕೊಳ್ಳಬಹುದು. ಆದರೆ ನೈಜತೆಯೇ ಬೇರೆ. ಬೇರೆಯವರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮೇ 29ರಿಂದ ಜೂನ್ 07ರ ವರೆಗೆ ಸೆಲ್ಪ್ ಲಾಕ್‌ಡೌನ್ ಮಾಡಿ ಕೇವಲ ಸೋಮವಾರ ಮತ್ತು ಗುರುವಾರ ಬೆಳಿಗ್ಗೆ 6ರಿಂದ 10ಗಂಟೆ ವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡುವ ಬಗ್ಗೆ ಗ್ರಾಮ ಪಂಚಾಯತ್ ಟಾಸ್ಕ್‌ಪೋರ್ಸ್ ಸಭೆಯಲ್ಲಿ ನಿರ್ಣಯಿಸಲಾಯಿತು. ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಟಾರ್ಸ್ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಲವು ಮಹತ್ವದ ನಿರ್ಣಯಗಳನ್ನು ಅಂಗೀಕರಿಸಲಾಯಿತು. ವಾರದಲ್ಲಿ ಐದು ದಿನ ದಿನಗಳಲ್ಲಿ ಅಂಗಡಿ ತೆರೆಯದೆ ಅಂಗಡಿ ಮಾಲಕರೇ ಹೋಂ ಡೆಲಿವರಿ ನೀಡಲು ಅವಕಾಶ ಮಾಡಿಕೊಡುವುದು, ಹೋಟೆಲ್‌ಗಳಲ್ಲಿ ಪಾರ್ಸಲ್‌ಗೆ ಅವಕಾಶ ನೀಡುವುದು. ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸುವುದು, ಹೊರ ಜಿಲ್ಲೆಯಿಂದ ಬಂದವರ ಬಗ್ಗೆ ನಿಗಾ ಇರಿಸಿ ಕೊರೋನಾ ಪರೀಕ್ಷೆ ಮಾಡಿಸುವುದು, ಲಸಿಕೆ ಪ್ರಮಾಣ ಹೆಚ್ಚಳ ಮಾಡುವುದು, ಆಸ್ಪತ್ರೆಯಲ್ಲಿ ಸ್ಥಳದ ಅಭಾವ ಇರುವುದರಿಂದ ಸ್ಥಳೀಯ ಶಾಲೆಯಲ್ಲಿ ಲಸಿಕೆ ನೀಡುವುದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್‌ನಿಂದ ಶನಿವಾರ ಬೈಂದೂರು ಸಾರ್ವಜನಿಕ ಆಸ್ಪತ್ರೆಗೆ ಮಾಸ್ಕ್, ಸ್ಯಾನಿಟೈಸರ್‌ನ್ನು ವಿತರಿಸಲಾಯಿತು. ಶ್ರೀ ರಾಮ ಸೌಹಾರ್ದ ಕೋ- ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಬೈಂದೂರು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ. ನಂದಿನಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಡಾ. ಮಹೇಂದ್ರ ಶೆಟ್ಟಿ, ಸಂಘದ ಉಪಾದ್ಯಕ್ಷ ಎಂ. ವಿನಾಯಕ ರಾವ್, ನಿರ್ದೇಶಕರಾದ ರಾಮಕೃಷ್ಣ ಖಾರ್ವಿ, ಶಿವರಾಮ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ರಾಜ್ಯಾದ್ಯಂತ ಕೋವಿಡ್-19 2ನೇ ಅಲೆಯ ಲಾಕ್ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ತಲಾ ರೂ.3,000 ಗಳ ಆರ್ಥಿಕ ನೆರವನ್ನು ಮಾನ್ಯ ಮುಖ್ಯಮಂತ್ರಿಗಳು ಮೇ 19 ರಂದು ಘೋಷಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ತಲಾ ರೂ.3,000 ಗಳ ಆರ್ಥಿಕ ನೆರವನ್ನು ನೀಡಲು ನಿರ್ಧರಿಸಲಾಗಿದೆ. ಈ ಯೋಜನೆಯಡಿ ಆರ್ಥಿಕ ಸಂಕಷ್ಟದಲ್ಲಿರುವ ಎಲ್ಲಾ ಪ್ರಕಾರದ ಕಲಾವಿದರು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಕಲಾವಿದರು ವೃತ್ತಿನಿರತರಾಗಿದ್ದು, 35 ವರ್ಷ ಮೇಲ್ಪಟ್ಟವರಾಗಿರಬೇಕು ಹಾಗೂ ಕನಿಷ್ಠ 10 ವರ್ಷಗಳ ಕಲಾಸೇವೆ ಮಾಡಿರಬೇಕು. (ಕಲಾವಿದರು ಕಲಾಸೇವೆ ಮಾಡಿರುವಕನಿಷ್ಠ ಒಂದು ಪೋಟೋ ಲಗತ್ತಿಸುವುದು).ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರಬಾರದು ಹಾಗೂ ಯಾವುದೇ ಸರ್ಕಾರಿ ನೌಕರರಾಗಿರಬಾರದು (ರಾಜ್ಯ/ ಕೇಂದ್ರ/ ನಿಗಮ ಮಂಡಳಿ/ ಸರ್ಕಾರಿಅನುದಾನಿತ ಸಂಸ್ಥೆಗಳು/ ಅರೆ ಸರ್ಕಾರಿ ಸಂಸ್ಥೆಗಳು). 2020-21ನೇ ಸಾಲಿನ ಸಾಮಾನ್ಯ /ವಿಶೇಷಘಟಕ/ ಗಿರಿಜನಉಪಯೋಜನೆಯಡಿ ಸಾಂಸ್ಕೃತಿಕ ಸಂಘಸಂಸ್ಥೆಗಳ ಚಟುವಟಿಕೆಗಳಿಗೆ ಧನಸಹಾಯ ಪಡೆದವರು / ವಾದ್ಯ ಪರಿಕರ/ ವೇಷಭೂಷಣ ಖರೀದಿ/…

Read More