ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ, ಉಡುಪಿ ಜಿಲ್ಲೆ ಹಾಗೂ ಶಾರದಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಸ್ರೂರು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ 2026-27ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ವಲಯ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ದಶಮಿ ಶೆಟ್ಟಿ ಹಾಗೂ 17ರ ವಯೋಮಾನದ ಹುಡುಗರ ವಿಭಾಗದಲ್ಲಿ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಡಿಯೋನ್ ಸುಜಿತ್ ಜೋನ್ ಮತ್ತು 9ನೇ ತರಗತಿ ವಿದ್ಯಾರ್ಥಿ ಕೃತನ್ ಕಿರಣ್ ಕುಂದಾಪುರ ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೇ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶರ್ವಾಣಿ ಹಾಗೂ 8ನೇ ತರಗತಿ ವಿಮರ್ಶ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಶಾಂತ್ ಮಡಿವಾಳ್,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನೈಜ ಪ್ರಪಂಚದ ನಾಯಕತ್ವವನ್ನು ಅನುಭವಿಸುವ ಜೊತೆಗೆ ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣ ಸಮಾಜಸೇವೆ ವ್ಯಕ್ತಿತ್ವ ವಿಕಸನ ಬೆಳೆಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಭಾವಿ ಯುವಜನತೆಯಲ್ಲಿ ಪರಸ್ಪರ ಸಹಕಾರ ಜಾಗತಿಕ ಮೌಲ್ಯ ಸ್ವಯಂ ಪ್ರೇರಿತವಾಗಿರುತ್ತದೆ . ಯುವಶಕ್ತಿ ದೇಶದ ಅಮೂಲ್ಯ ಸಂಪತ್ತು ಎಂದು ರೋಟರಿ ಜಿಲ್ಲಾ ಕ್ಯಾನ್ಸರ್ ಜಾಗೃತಿ ವಿಭಾಗದ ಚೇರ್ಮನ್ ನಾಗಭೂಷಣ ಉಡುಪ ತಿಳಿಸಿದರು. ಅವರು ಇಲ್ಲಿನ ಮಣೂರು ಪಡುಕರೆ ಇಂಟರ್ಯಾಕ್ಟ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು. ಸಮಾರಂಭದಲ್ಲಿ ರೋಟರಿ ಜಿಲ್ಲಾ ಇಂಟರ್ಯಾಕ್ಟ್ ಚೇರ್ಮನ್ ಗಣೇಶಟ್ಟಿ ಮೊಳಹಳ್ಳಿ ಮಾತನಾಡಿ, ಶಾಲಾ ಮಕ್ಕಳಿಗೆ ಪಠ್ಯ ಶಿಕ್ಷಣದೊಂದಿಗೆ ಶೈಕ್ಷಣಿಕ ಕ್ಲಬ್ ಗಳ ಕಾರ್ಯಕ್ರಮ ವಿಶೇಷ ಜ್ಞಾನ ನೀಡುವುದು ಎಂದು ತಿಳಿಸಿದರು . ರಾಧಾಕೃಷ್ಣ ಬ್ರಹ್ಮಾವರ ಅಧ್ಯಕ್ಷರು ರೋಟರಿ ಕ್ಲಬ್ ಕೋಟ ಸಿಟಿ ಇವರು ನೂತನ ಇಂಟರ್ಯಾಕ್ಟರ್ ಅಧ್ಯಕ್ಷರಾದ ಗಾನವಿ ಹಾಗೂ ನೂತನ ಕಾರ್ಯದರ್ಶಿಯಾದ ಶ್ರಾವಣಿಗೆ ಅಧಿಕಾರ ಹಸ್ತಾಂತರಿಸಿದರು. ಸಮಾರಂಭದಲ್ಲಿ ರೇವತಿ ಶ್ಯಾಮಸುಂದರ ನಾಯರಿ ಇಂಟರ್ಯಾಕ್ಟ ಕ್ಲಬ್ ಚೇರ್ಮನ್, ರೋಟರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪದವಿ ಶಿಕ್ಷಣದಿಂದ ವಂಚಿತರಾಗಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಂದ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ವೆಬ್ಸೈಟ್ https://minority.ksouportal.com ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 10 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ https://dom.karnataka.gov.in ಅಥವಾ ಸಹಾಯವಾಣಿ ಸಂ: 9900667916, 9113512565, 9611418726, 9900509959, 9035395137 ಹಾಗೂ 9900509959 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಮತ್ತು ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಇಡೀ ದಿನಸಿ ಅಂಗಡಿ ಬೆಂಕಿಗಾಹುತಿಯಾದ ಘಟನೆ ತೆಕ್ಕೆಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಶ್ರೀ ಬ್ರಹ್ಮಸ್ಥಾನ ಸಮೀಪದ ‘ಗುರು ಬ್ರಹ್ಮ ಜನರಲ್ ಸ್ಟೋರ್’ನಲ್ಲಿ ಸೋಮವಾರ ತಡರಾತ್ರಿ ಸುಮಾರು 1.30ಕ್ಕೆ ಸಂಭವಿಸಿದೆ. ಅಂಗಡಿ ಮಾಲೀಕರಾದ ಸಂತೋಷ್ ಅವರು ಎಂದಿನಂತೆ ವ್ಯಾಪಾರ ಮುಗಿಸಿ ಮನೆಗೆ ತೆರಳಿದ ಬಳಿಕ, ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಮಾತ್ರದಲ್ಲಿ ಇಡೀ ಅಂಗಡಿಗೆ ಹರಡಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ಸಾಮಗ್ರಿಗಳು, ಫ್ರಿಡ್ಜ್ ಹಾಗೂ ಪೀಠೋಪಕರಣಗಳು ಬೆಂಕಿಗೆ ಭಸ್ಮವಾಗಿವೆ. ಫ್ರಿಡ್ಜ್ ಶಾರ್ಟ್ ಸರ್ಕ್ಯೂಟ್ ಶಂಕೆ:ಅಂಗಡಿಯಲ್ಲಿದ್ದ ಮೂರಕ್ಕೂ ಹೆಚ್ಚು ಫ್ರಿಡ್ಜ್ ಗಳ ಪೈಕಿ ಒಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಈ ಅಗ್ನಿ ಅವಘಡದಿಂದ ಸುಮಾರು 40 ಲಕ್ಷಕ್ಕೂ ಅಧಿಕ ರೂಪಾಯಿ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕ್ರೆಡಿಟ್ ಕಾರ್ಡ್ನ ಪ್ರೊಟೆಕ್ಷನ್ ಪ್ಲಾನ್ ನವೀಕರಿಸುವುದಾಗಿ ನಂಬಿಸಿ ಸೈಬರ್ ವಂಚಕರು ಮಹಿಳೆಯೊಬ್ಬರ ಕ್ರೆಡಿಟ್ ಕಾರ್ಡ್ನಿಂದ ಸುಮಾರು ₹1,99,696.06/ ಲಕ್ಷ ಹಣವನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿರುವ ಘಟನೆ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೋಟ ನಿವಾಸಿ ಐಶ್ವರ್ಯ ಅವರು ನೀಡಿದ ದೂರಿನ ಪ್ರಕಾರ, ಜುಲೈ 27ರಂದು ಅವರ ಕ್ರೆಡಿಟ್ ಕಾರ್ಡ್ಗೆ ಸಂಬಂಧಿಸಿದ ಕಾರ್ಡ್ ಪ್ರೊಟೆಕ್ಷನ್ ಪ್ಲಾನ್ ಅನ್ನು ಅಪ್ಡೇಟ್ ಮಾಡಬೇಕಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ತಿಳಿಸಿದ್ದಾನೆ. ಬಳಿಕ ಗೂಗಲ್ ಮೂಲಕ icici.helpsuseronline ಎಂಬ ಲಿಂಕ್ ಕಳುಹಿಸಿದ್ದು, ಅದನ್ನು ನಂಬಿ ಮಹಿಳೆ ಕ್ಲಿಕ್ ಮಾಡಿದ ತಕ್ಷಣ ಅವರ ಕ್ರೆಡಿಟ್ ಕಾರ್ಡ್ನಿಂದ ಒಟ್ಟು ₹1,99,696.06 ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ ಇದರ 21ನೇ ವಾರ್ಷಿಕ ಮಹಾಸಭೆ ಹಾಗೂ ವನಮೋತ್ಸವ ಕಾರ್ಯಕ್ರಮವು ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಅಧ್ಯಕ್ಷರಾದ ರವೀಶ್ ಎಸ್. ಕೊರವಡಿ ಸಮಾರಂಭವನ್ನು ಉದ್ಘಾಟಿಸಿ, ಮೊಗವೀರ ಯುವ ಸಂಘಟನೆಯ ಕೋಟೇಶ್ವರ ಘಟಕವು ಜಿಲ್ಲೆಯಲ್ಲೇ ಬಲಿಷ್ಠವಾದ ಘಟಕವಾಗಿದ್ದು, ಪ್ರತೀ ವರ್ಷವೂ ಅಗಸ್ಟ್ ತಿಂಗಳ ಮೊದಲ ವಾರದಲ್ಲಿ ತನ್ನ ವಾರ್ಷಿಕ ಮಹಾಸಭೆಯನ್ನು ನಡೆಸಿ ಎಲ್ಲರಿಗೂ ಮಾದರಿಯಾಗುವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಪ್ರಶಂಸೆಯ ಮಾತನ್ನಾಡಿದರು. ಕೋಟೇಶ್ವರ ಘಟಕದ ನಿಕಟಪೂರ್ವ ಅಧ್ಯಕ್ಷರಾದ ನಾಗರಾಜ್ ಬೀಜಾಡಿ ಎಲ್ಲರನ್ನೂ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಮೊಗವೀರ ಯುವ ಸಂಘಟನೆಯ ಕೋಟೇಶ್ವರ ಘಟಕದ ಕಾರ್ಯದರ್ಶಿ ನಾಗರಾಜ್ ತೆಕ್ಕಟ್ಟೆ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ರಾಜೇಶ್ ಕಾಂಚನ್ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ವರದಿ ಮತ್ತು ಲೆಕ್ಕಪತ್ರಗಳಿಗೆ ಸರ್ವ ಸದಸ್ಯರ ಅನುಮೋದನೆ ಪಡೆಯಲಾಯಿತು. ಘಕಟ ವ್ಯಾಪ್ತಿಯ ಪ್ರತಿಭಾವಂತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ಮಹಾಲಿಂಗೇಶ್ವರ ಶ್ರೀ ಹೇರಂಬ ಮಹಾಗಣಪತಿ ದೇವಸ್ಥಾನಕ್ಕೆ ಆಗಮಿಸುವ ಸದ್ಭಕ್ತರ ಅನುಕೂಲಕ್ಕಾಗಿ ನಾಗರಾಜ ಮೈಯ್ಯ ದಂಪತಿಗಳು ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಅನ್ನು ಭಾನುವಾರ ವಿದ್ಯುಕ್ತವಾಗಿ ಲೋಕಾರ್ಪಣೆಗೊಳಿಸಲಾಯಿತು. ಆರಂಭದಲ್ಲಿ ಶ್ರೀ ದೇವಳದ ಪ್ರಧಾನ ಅರ್ಚಕ ರವಿ ಐತಾಳ್ ನೂತನ ನೀರಿನ ಫಿಲ್ಟರ್ಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ತದನಂತರ ನಿವೃತ್ತ ಪ್ರಾಂಶುಪಾಲ ಪಾರಂಪಳ್ಳಿ ರಾಘವೇಂದ್ರ ಭಟ್ ಅವರು ರಿಬ್ಬನ್ ಕತ್ತರಿಸುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಿದರು. ಈ ಸಂದಭರ್ದದಲ್ಲಿ ದೇಗುಲದ ಅಧ್ಯಕ್ಷ ಸತೀಶ್ ಎಚ್. ಕುಂದರ್, ವ್ಯವಸ್ಥಾನಾ ಸಮಿತಿ ಸದಸ್ಯರು, ಗ್ರಾಮಸ್ಥರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗುಜ್ಜಾಡಿ-ಕೊಡಪಾಡಿ ರಸ್ತೆಯಲ್ಲಿ ರವಿವಾರ ಎರಡು ಬೈಕ್ಗಳು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಕರಾವಳಿ ಕಾವಲು ಪಡೆ ಪೊಲೀಸ್ ಸಿಬ್ಬಂದಿ ಚೇತನ್ ಮತ್ತು ಕೊಡಪಾಡಿ ನಿವಾಸಿ ಮಂಜಾಯ್ ಪ್ರಸಾದ್ ಗಾಯಗೊಂಡ ಸವಾರರು. ಚೇತನ್ ಅವರು ಗುಹೇಶ್ವರ ದೇವಸ್ಥಾನದ ಕಡೆಯಿಂದ ಕೊಡಪಾಡಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ, ಎದುರಿನಿಂದ ಬರುತ್ತಿದ್ದ ಮಂಜಾಯ್ ಪ್ರಸಾದ್ ಅವರು ಸ್ಕೂಟರ್ ಅನ್ನು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆ ತನ್ನ ಸಮಾಜ ಸೇವಾ ಕಾರ್ಯಕ್ರಮದ ಅಂಗವಾಗಿ ಬೇಳೂರು ಗ್ರಾಮದ ಮೊಗೆಬೆಟ್ಟು ಅಂಗನವಾಡಿಗೆ ಕಚೇರಿ ಬಳಕೆಗೆ ಅಗತ್ಯವಿದ್ದ ಒಂದು ಮೇಜನ್ನು ದಾನವಾಗಿ ನೀಡಿದರು. ಸುಮಾರು ₹5,000 ಮೌಲ್ಯದ ಈ ಕಚೇರಿ ಮೇಜನ್ನು ರೋಟರಿ ವಲಯ–2ರ ಲರ್ನಿಂಗ್ ಫೆಸಿಲಿಟೇಟರ್ ಹಾಗೂ ರೋಟರಿ ಕ್ಲಬ್ ತೆಕ್ಕಟ್ಟೆಯ ಸದಸ್ಯರಾದ ರೋಟೇರಿಯನ್ ಸುರೇಶ್ ಬೇಳೂರು ಅವರು ಪ್ರಾಯೋಜಿಸಿದ್ದರು. ಸಮಾರಂಭದಲ್ಲಿ ಕ್ಲಬ್ ಅಧ್ಯಕ್ಷ ಟಿ. ರಾಜೀವ್ ಶೆಟ್ಟಿ, ವಲಯ–2ರ ಸಹಾಯಕ ಗವರ್ನರ್ ಟಿ. ಸುಧಾಕರ್ ಶೆಟ್ಟಿ, ವಿಜಯಕುಮಾರ್ ಶೆಟ್ಟಿ, ವಲಯ–2ರ ಇಂಟರ್ಯಾಕ್ಟ್ ಸಂಯೋಜಕರಾದ ಗಣಪತಿ ಶ್ರೀಯಾನ್, ವಿಠ್ಠಲ್ ರಾವ್ ಹಾಗೂ ಕ್ಲಬ್ ಜಂಟಿ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಮೇಜನ್ನು ಅಂಗನವಾಡಿಗೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿಯ ಶಿಕ್ಷಕಿಯರು ಹಾಗೂ ಪುಟಾಣಿಗಳು ಭಾಗವಹಿಸಿದ್ದರು. ನಂತರ ಎಲ್ಲರಿಗೂ ಸಿಹಿ ವಿತರಿಸಲಾಯಿತು. ಈ ಕಚೇರಿ ಮೇಜಿನ ಅವಶ್ಯಕತೆ ಅಂಗನವಾಡಿಗೆ ಬಹಳ ದಿನಗಳಿಂದ ಇದ್ದುದರಿಂದ, ಈ ಅಮೂಲ್ಯ ಸಹಾಯಕ್ಕಾಗಿ ಅಂಗನವಾಡಿಯ ಶಿಕ್ಷಕಿಯರು ರೋಟರಿ ಕ್ಲಬ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೀರ್ಘಕಾಲದಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ದಿಢೀರ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಮೃತಪಟ್ಟಿರುವ ಘಟನೆ ಉಪ್ಪುಂದದಲ್ಲಿ ಸಂಭವಿಸಿದೆ. ಉಪ್ಪುಂದ ಗ್ರಾಮದ ಅಂಬಾಗಿಲು ನಿವಾಸಿ ಗಣೇಶ (41) ಮೃತಪಟ್ಟ ವ್ಯಕ್ತಿ. ಅವರು ಕಳೆದ 15 ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಕುಂದಾಪುರ ಹಾಗೂ ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ.1 ರಂದು ರಾತ್ರಿ ಮನೆಯಲ್ಲಿದ್ದಾಗ ಅವರಿಗೆ ದಿಢೀರ್ ವಾಂತಿ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ತುರ್ತು ಚಿಕಿತ್ಸೆಗಾಗಿ ಬೈಂದೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
